Kannada ಬೈಬಲ್
ಇಬ್ರಿಯರಿಗೆ ಒಟ್ಟು 13 ಅಧ್ಯಾಯಗಳು
ಇಬ್ರಿಯರಿಗೆ
ಇಬ್ರಿಯರಿಗೆ ಅಧ್ಯಾಯ 13
ಇಬ್ರಿಯರಿಗೆ ಅಧ್ಯಾಯ 13
ಮುಕ್ತಾಯದ ಪ್ರಬೋಧನೆಗಳು 1 ಪ್ರಿಯರೇ, ಒಬ್ಬರಿಗೊಬ್ಬರು ಪ್ರೀತಿಯಲ್ಲಿ ಮುಂದುವರೆಯಿರಿ.
2 ಪರಕೀಯರಿಗೆ ಸತ್ಕಾರ ಮಾಡುವುದನ್ನು ಅಲಕ್ಷ್ಯ ಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರ ಮೂಲಕ, ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.
3 ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂಬಂತೆ ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ಕಷ್ಟ ಅನುಭವಿಸುವವರ ಸಂಗಡ ನೀವು ಸಹ ಕಷ್ಟ ಅನುಭವಿಸುವವರೆಂಬಂತೆ ನೆನೆಸಿರಿ.
ಇಬ್ರಿಯರಿಗೆ ಅಧ್ಯಾಯ 13
4 ಎಲ್ಲರೂ ವಿವಾಹವನ್ನು ಗೌರವಿಸಬೇಕು ಮತ್ತು ದಾಂಪತ್ಯ ಜೀವನವು ಪರಿಶುದ್ಧವಾದದ್ದಾಗಿರಬೇಕು. ಏಕೆಂದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವರು.
5 ಹಣದಾಶೆಯಿಂದ ನಿಮ್ಮ ಜೀವನ ದೂರವಾಗಿರಲಿ, ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಏಕೆಂದರೆ ದೇವರು ಹೀಗೆ ಹೇಳಿದ್ದಾರೆ, “ನಾನು ನಿನ್ನನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ!”* ಧರ್ಮೋ 31:6
ಇಬ್ರಿಯರಿಗೆ ಅಧ್ಯಾಯ 13
6 ಆದ್ದರಿಂದ, “ಕರ್ತದೇವರು ನನ್ನ ಸಹಾಯಕರು, ನಾನು ಭಯಪಡೆನು. ಮನುಷ್ಯನು ನನಗೆ ಏನು ಮಾಡಬಲ್ಲನು?”† ಕೀರ್ತನೆ 118:6,7 ಎಂದು ನಾವು ಧೈರ್ಯವಾಗಿ ಹೇಳುವೆವು.
7 ನಿಮಗೆ ದೇವರ ವಾಕ್ಯವನ್ನು ತಿಳಿಸಿ, ನಿಮ್ಮನ್ನು ನಡೆಸಿದ ನಿಮ್ಮ ಪಾಲಕರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರು ಜೀವಿಸಿದ ದಾರಿಯ ಅಂತ್ಯ ಫಲವನ್ನು ಆಲೋಚಿಸಿ, ಅವರ ನಂಬಿಕೆಯನ್ನು ಅನುಸರಿಸಿರಿ.
ಇಬ್ರಿಯರಿಗೆ ಅಧ್ಯಾಯ 13
8 ಕ್ರಿಸ್ತ ಯೇಸುವು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾರೆ, ನಿರಂತರವೂ ಹಾಗೆಯೇ ಇರುವರು.
9 ವಿಚಿತ್ರವಾದ ವಿವಿಧ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ಏಕೆಂದರೆ ಕೃಪೆಯ ಮೂಲಕ ಹೃದಯವನ್ನು ಬಲಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳಲ್ಲಿ ಮಗ್ನರಾದವರು, ಅವುಗಳಿಂದ ಏನೂ ಪ್ರಯೋಜನ ಹೊಂದಲಿಲ್ಲ.
10 ನಮಗೊಂದು ಬಲಿಪೀಠ ಉಂಟು. ಅದರ ಪದಾರ್ಥವನ್ನು ತಿನ್ನುವುದಕ್ಕೆ ಗುಡಾರದ ಸೇವೆ ಮಾಡುವವರಿಗೆ ಹಕ್ಕಿಲ್ಲ.
ಇಬ್ರಿಯರಿಗೆ ಅಧ್ಯಾಯ 13
11 ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಮಹಾ ಪವಿತ್ರ ಸ್ಥಳದೊಳಗೆ ಹೋದ ಮೇಲೆ, ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಟ್ಟು ಬಿಡಲಾಗುತ್ತವಲ್ಲಾ.
12 ಅದರಂತೆ ಯೇಸು ಸಹ ತಮ್ಮ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವುದಕ್ಕೋಸ್ಕರ ಊರ ಹೊರಗೆ ಬಾಧೆಪಟ್ಟರು.
13 ಆದ್ದರಿಂದ ನಾವು ಯೇಸು ಹೇಗೆ ನಿಂದನೆಯನ್ನು ಹೊತ್ತುಕೊಂಡರೋ ಹಾಗೆ ಹೊತ್ತು ಪಾಳೆಯದ ಆಚೆ ಅವರ ಬಳಿಗೆ ಹೊರಟು ಹೋಗೋಣ.
ಇಬ್ರಿಯರಿಗೆ ಅಧ್ಯಾಯ 13
14 ಏಕೆಂದರೆ ಶಾಶ್ವತವಾದ ಪಟ್ಟಣವು ಇಲ್ಲಿ ನಮಗಿಲ್ಲ. ಮುಂದೆ ಬರುವ ಪಟ್ಟಣವನ್ನು ಹುಡುಕುತ್ತಾ ಇದ್ದೇವೆ.
15 ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಅದು ದೇವರ ಹೆಸರಿಗೆ ಸಲ್ಲಿಸುವ ಕೃತಜ್ಞತೆಯೆಂಬ ತುಟಿಗಳ ಫಲವೇ ಆಗಿದೆ.
16 ಇದಲ್ಲದೆ ಒಳ್ಳೆಯದನ್ನು ಮಾಡುವುದನ್ನೂ ಪರರೊಡನೆ ಹಂಚಿಕೊಳ್ಳುವುದನ್ನೂ ಮರೆಯಬೇಡಿರಿ. ಏಕೆಂದರೆ ಇಂಥಾ ಯಜ್ಞಗಳನ್ನು ದೇವರು ಮೆಚ್ಚುತ್ತಾರೆ.
ಇಬ್ರಿಯರಿಗೆ ಅಧ್ಯಾಯ 13
17
18 ನಿಮ್ಮ ನಾಯಕರಿಗೆ ವಿಧೇಯರಾಗಿದ್ದು, ಅವರಿಗೆ ಅಧೀನರಾಗಿರಿ. ಏಕೆಂದರೆ ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಮನನೊಂದವರಾಗದೆ ಸಂತೋಷದಿಂದ ಇದನ್ನು ಮಾಡುವವರಾಗಲಿ. ಏಕೆಂದರೆ ಅವರು ಮನನೊಂದವರಾಗಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ. ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಶುದ್ಧಮನಸ್ಸಾಕ್ಷಿಯಿಂದ ಪ್ರತಿಯೊಂದರಲ್ಲಿಯೂ ಪ್ರಾಮಾಣಿಕವಾಗಿ ಇರಲು ಬಯಸುತ್ತೇವೆ.
ಇಬ್ರಿಯರಿಗೆ ಅಧ್ಯಾಯ 13
19 ನೀವು ಪ್ರಾರ್ಥನೆ ಮಾಡುವಂತೆ, ನಾನು ನಿಮ್ಮನ್ನು ಬಹು ವಿಶೇಷವಾಗಿ ಬೇಡಿಕೊಳ್ಳುತ್ತೇನೆ. ಇದರ ಮೂಲಕ ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ಪುನಃ ಬರುವೆನು.
ಅಂತ್ಯಾಶೀರ್ವಾದ ಹಾಗೂ ಅಂತಿಮ ವಂದನೆಗಳು 20 ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು.
21 ನೀವು ದೇವರ ಚಿತ್ತಾನುಸಾರವಾಗಿ ಎಲ್ಲವನ್ನೂ ಮಾಡುವಂತೆ ನಿಮ್ಮನ್ನು ಸನ್ನದ್ಧರಾಗಿ ಮಾಡಲಿ. ಕ್ರಿಸ್ತ ಯೇಸುವಿನ ಶಕ್ತಿಯ ಮೂಲಕವಾಗಿ ಪ್ರತಿಯೊಂದು ಸತ್ಕಾರ್ಯಗಳನ್ನು ತಮಗೆ ಮೆಚ್ಚಿಕೆಯಾಗುವಂತೆ ನಿಮ್ಮ ಮೂಲಕವಾಗಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಯೇಸುವಿಗೆ ಮಹಿಮೆ ಉಂಟಾಗಲಿ. ಆಮೆನ್.
ಇಬ್ರಿಯರಿಗೆ ಅಧ್ಯಾಯ 13
22 ಪ್ರಿಯರೇ, ಈ ಪ್ರಬೋಧನೆಗಳನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುವ ಹಾಗೆ ಸಂಕ್ಷೇಪವಾಗಿ ನಾನು ಈ ಪತ್ರವನ್ನು ಬರೆದಿದ್ದೇನೆ.
23 ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬುದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.
24 ನಿಮ್ಮ ಎಲ್ಲಾ ನಾಯಕರಿಗೆ, ದೇವಜನರಿಗೆ ವಂದನೆಗಳು. ಇಟಲಿಯವರು ನಿಮ್ಮನ್ನು ವಂದಿಸುತ್ತಾರೆ.
ಇಬ್ರಿಯರಿಗೆ ಅಧ್ಯಾಯ 13
25 ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ!