Kannada ಬೈಬಲ್

ಯೆಶಾಯ ಒಟ್ಟು 66 ಅಧ್ಯಾಯಗಳು

ಯೆಶಾಯ

ಯೆಶಾಯ ಅಧ್ಯಾಯ 4
ಯೆಶಾಯ ಅಧ್ಯಾಯ 4

1 ಆ ದಿವಸದಲ್ಲಿ ಏಳುಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು, “ನಾವು ಸ್ವಂತವಾಗಿ ದುಡಿದು ಉಣ್ಣುವೆವು, ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು, ನಮ್ಮ ನಿಂದೆಯನ್ನು ನೀಗಿಸುವುದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು,” ಎಂದು ಕೇಳಿಕೊಳ್ಳುವರು.

ಯೆಶಾಯ ಅಧ್ಯಾಯ 4

ಯೆಹೋವ ದೇವರ ಕೊಂಬೆ 2 ಆ ದಿನದಲ್ಲಿ ಯೆಹೋವ ದೇವರ ಕೊಂಬೆಯು ಸುಂದರವಾಗಿಯೂ, ಮಹಿಮೆಯುಳ್ಳದ್ದಾಗಿಯೂ ಇರುವುದು. ಭೂಮಿಯ ಫಲವು ಇಸ್ರಾಯೇಲರಲ್ಲಿ ಉಳಿದವರಿಗೆ ಅಭಿಮಾನವೂ, ರಮ್ಯವಾಗಿಯೂ ಇರುವುದು.

3 ಹೀಗಿರುವಲ್ಲಿ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಹಾಗೂ ಯೆರೂಸಲೇಮಿನಲ್ಲಿ ವಾಸಿಸುವವರೆಂದೂ ದಾಖಲೆಗೊಂಡ ಪ್ರತಿಯೊಬ್ಬರೂ ಪವಿತ್ರರು ಎಂದು ಕರೆಯಲಾಗುವರು.

4 ಯೆಹೋವ ದೇವರು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಪುತ್ರಿಯರ ಕಲ್ಮಷವನ್ನು ತೊಳೆದು, ಯೆರೂಸಲೇಮಿನ ಮೇಲಿನ ರಕ್ತದ ಕಲೆಗಳನ್ನು ತೆಗೆದುಹಾಕುವರು.

ಯೆಶಾಯ ಅಧ್ಯಾಯ 4

5 ಆಗ ಯೆಹೋವ ದೇವರು ಚೀಯೋನ್ ಪರ್ವತದ ಪ್ರತಿಯೊಂದು ನಿವಾಸದ ಮೇಲೂ, ಅದರ ಸಭೆಗಳ ಮೇಲೂ, ಹಗಲಿನಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಿನಲ್ಲಿ ಪ್ರಜ್ವಲಿಸುವ ಅಗ್ನಿಪ್ರಕಾಶವನ್ನು ಉಂಟುಮಾಡುವರು. ಏಕೆಂದರೆ ದೇವರ ಮಹಿಮೆ ಎಲ್ಲದರ ಮೇಲೆ ಚಪ್ಪರದಂತೆಯೂ ಆವರಿಸುವುದು.

6 ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ, ಬಿರುಗಾಳಿಗೂ, ಮಳೆಗೂ ಆಶ್ರಯವನ್ನು ಕೊಡುವ ಮಂಟಪವಾಗಿ ಇರುವುದು.