Kannada ಬೈಬಲ್

ನೆಹೆಮಿಯ ಒಟ್ಟು 13 ಅಧ್ಯಾಯಗಳು

ನೆಹೆಮಿಯ

ನೆಹೆಮಿಯ ಅಧ್ಯಾಯ 1
ನೆಹೆಮಿಯ ಅಧ್ಯಾಯ 1

ನೆಹೆಮೀಯನ ಪ್ರಾರ್ಥನೆ 1 ಹಕಲ್ಯನ ಮಗ ನೆಹೆಮೀಯನ ಮಾತುಗಳು: ಇಪ್ಪತ್ತನೆಯ ವರ್ಷದ, ಕಿಸ್ಲೇವ್ ಎಂಬ ಮಾರ್ಗಶಿರ ತಿಂಗಳಲ್ಲಿ ನಾನು ಶೂಷನ್ ಪಟ್ಟಣದ ಅರಮನೆಯಲ್ಲಿದ್ದೆನು.

2 ಆಗ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯನು ಹಾಗೂ ಬೇರೆ ಕೆಲವು ಜನರು ಯೆಹೂದದಿಂದ ನನ್ನ ಬಳಿಗೆ ಬಂದರು. ಸೆರೆ ಹೋದವರಿಂದ ಉಳಿದಿರುವ ಯೆಹೂದ್ಯರ ಮತ್ತು ಯೆರೂಸಲೇಮಿನ ಸಮಾಚಾರವನ್ನು ನಾನು ಅವರಲ್ಲಿ ವಿಚಾರಿಸಿದೆನು.

ನೆಹೆಮಿಯ ಅಧ್ಯಾಯ 1

3

4 ಅವರು ನನಗೆ, “ಸೆರೆಯಿಂದ ತಪ್ಪಿಸಿಕೊಂಡು ಈಗ ಆ ನಾಡಿನಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟ ನಿಂದೆಗಳಿಗೆ ಒಳಗಾಗಿದ್ದಾರೆ. ಯೆರೂಸಲೇಮಿನ ಪೌಳಿಗೋಡೆಯನ್ನು ಕೆಡವಲಾಗಿದೆ. ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ,” ಎಂದು ಹೇಳಿದರು. ನಾನು ಈ ಸಮಾಚಾರವನ್ನು ಕೇಳಿದಾಗ, ನೆಲದ ಮೇಲೆ ಕೂತುಕೊಂಡು ಅತ್ತೆನು. ಹಲವಾರು ದಿನಗಳವರೆಗೆ ಶೋಕಿಸಿದೆ, ಉಪವಾಸವಿದ್ದೆ, ಪರಲೋಕ ದೇವರ ಮುಂದೆ ಪ್ರಾರ್ಥನೆ ಮಾಡುತ್ತಾ ಇದ್ದೆ.

ನೆಹೆಮಿಯ ಅಧ್ಯಾಯ 1

5 ನಾನು ನನ್ನ ಪ್ರಾರ್ಥನೆಯಲ್ಲಿ: “ಪರಲೋಕ ದೇವರಾದ ಯೆಹೋವ ದೇವರೇ, ನೀವು ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿದ್ದೀರಿ. ನಿಮ್ಮನ್ನು ಪ್ರೀತಿಸಿ ನಿಮ್ಮ ಆಜ್ಞೆಗಳಿಗೆ ವಿಧೇಯರಾಗಿರುವವರೊಂದಿಗೆ, ನಿಮ್ಮ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವವರೇ, ಭಯಭಕ್ತಿಗೆ ಪಾತ್ರರಾದ ದೇವರೇ,

6 ಕೃಪೆಮಾಡಿ ನನಗೆ ಕಿವಿಗೊಡಿರಿ, ಕಟಾಕ್ಷಿಸಿ ನೋಡಿರಿ, ನಿಮ್ಮ ದಾಸನ ಪ್ರಾರ್ಥನೆಯನ್ನು ಆಲಿಸಿರಿ. ನಾನು ಈಗ ಹಗಲಿರುಳೂ ನಿಮ್ಮ ಸನ್ನಿಧಿಯಲ್ಲಿ ನಿಮ್ಮ ದಾಸರಾದ ಇಸ್ರಾಯೇಲರ ಪರವಾಗಿ ಪ್ರಾರ್ಥಿಸುತ್ತಾ ಇದ್ದೇನೆ. ಅವರು ನಿಮಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ಅರಿಕೆಮಾಡುತ್ತಾ ಇದ್ದೇನೆ. ನಾನೂ, ನನ್ನ ಪೂರ್ವಜರೂ ಆ ಪಾಪಗಳಲ್ಲಿ ಪಾಲುಗಾರರು.

ನೆಹೆಮಿಯ ಅಧ್ಯಾಯ 1

7 ನಾವು ನಿಮಗೆ ದ್ರೋಹಿಗಳಾಗಿ ನಡೆಯುತ್ತಾ ಬಂದೆವು. ನೀವು ನಿಮ್ಮ ದಾಸನಾದ ಮೋಶೆಯ ಮುಖಾಂತರ ಕೊಟ್ಟ ಆಜ್ಞಾವಿಧಿನ್ಯಾಯಗಳನ್ನು ನಾವು ಕೈಗೊಳ್ಳಲಿಲ್ಲ.

8 “ದಯಮಾಡಿ ನಿಮ್ಮ ಸೇವಕನಾದ ಮೋಶೆಗೆ ಹೇಳಿದ ಈ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ. ಮೋಶೆಯ ಮುಖಾಂತರ, ‘ನೀವು ದ್ರೋಹ ಮಾಡಿದರೆ, ನಾನು ನಿಮ್ಮನ್ನು ಜನಾಂಗಗಳ ನಡುವೆ ಚದರಿಸಿಬಿಡುವೆನು.

9 ಆದರೆ ನೀವು ನನ್ನ ಕಡೆಗೆ ತಿರುಗಿಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ, ಅವುಗಳ ಪ್ರಕಾರ ನಡೆದರೆ, ನಿಮ್ಮಲ್ಲಿರುವವರು ಆಕಾಶದ ಅಂತ್ಯದವರೆಗೂ ಸೆರೆಯಾಗಿ ಹೋಗಿದ್ದರೂ, ನಾನು ಅಲ್ಲಿಂದ ಅವರನ್ನು ಕೂಡಿಸಿ, ನನ್ನ ಹೆಸರನ್ನಿಡಲು ಆಯ್ದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು,’ ಎಂದು ಹೇಳಿದ್ದೀರಿ.

ನೆಹೆಮಿಯ ಅಧ್ಯಾಯ 1

10 “ಅವರು ನಿಮ್ಮ ಮಹಾಶಕ್ತಿಯಿಂದಲೂ, ನಿಮ್ಮ ಭುಜಪರಾಕ್ರಮಗಳಿಂದ ನೀವು ವಿಮೋಚಿಸಿದ ನಿಮ್ಮ ಸೇವಕರೂ, ನಿಮ್ಮ ಜನರೂ ಆಗಿರುತ್ತಾರೆ.

11 ದೇವರೇ, ನಿಮ್ಮ ಹೆಸರಲ್ಲಿ ಭಯಭಕ್ತಿಯಿಂದ ಹರ್ಷಿಸುವ ನಿಮ್ಮ ಸೇವಕರ ಪ್ರಾರ್ಥನೆಗೆ ಕಿವಿಗೊಡಿರಿ. ಇಂದು ನಿಮ್ಮ ಸೇವಕನಾದ ನನಗೆ ಯಶಸ್ವಿಯನ್ನು ಕೊಟ್ಟು, ಈ ಅರಸನ ದೃಷ್ಟಿಯಲ್ಲಿ ನನಗೆ ದಯೆ ದೊರಕುವಂತೆ ಮಾಡಿರಿ,” ಎಂದು ಬೇಡಿಕೊಂಡೆನು. ಆ ದಿವಸಗಳಲ್ಲಿ ನಾನು ಅರಸನಿಗೆ ಪಾನ ಸೇವಕನಾಗಿದ್ದೆನು.