Kannada ಬೈಬಲ್

ಅರಣ್ಯಕಾಂಡ ಒಟ್ಟು 36 ಅಧ್ಯಾಯಗಳು

ಅರಣ್ಯಕಾಂಡ

ಅರಣ್ಯಕಾಂಡ ಅಧ್ಯಾಯ 28
ಅರಣ್ಯಕಾಂಡ ಅಧ್ಯಾಯ 28

ನಿತ್ಯ ಬಲಿಗಳು 1 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,

2 “ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುವಾಸನೆಗೋಸ್ಕರ ಅರ್ಪಿಸುವ ಅಂದರೆ, ದಹನಬಲಿಗಾಗಿ ಆಹಾರವನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವಂತೆ ನೀವು ನೋಡಿಕೊಳ್ಳಿರಿ.’

3 ನೀನು ಅವರಿಗೆ ಹೇಳಬೇಕಾದದ್ದು: ‘ನೀವು ಯೆಹೋವ ದೇವರಿಗೆ ಅರ್ಪಿಸಬೇಕಾದ ಅರ್ಪಣೆ ಏನೆಂದರೆ, ನಿಯಮಿತವಾಗಿ ಪ್ರತಿದಿನ ದೋಷರಹಿತ ಒಂದು ವರ್ಷದ ಎರಡು ಕುರಿಮರಿಗಳನ್ನು ದಹನಬಲಿಯಾಗಿ ಅರ್ಪಿಸಬೇಕು.

ಅರಣ್ಯಕಾಂಡ ಅಧ್ಯಾಯ 28

4 ಒಂದು ಕುರಿಮರಿಯನ್ನು ಮುಂಜಾನೆಯಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಸಮರ್ಪಿಸಬೇಕು.

5 ಧಾನ್ಯ ಅರ್ಪಣೆಗಾಗಿ ಸುಮಾರು ಒಂದು ಲೀಟರ್[* ಹೀಬ್ರೂ ಭಾಷೆಯಲ್ಲಿ ಹಿನ್‌ನ ಕಾಲುಭಾಗ, ಅಂದರೆ ಸುಮಾರು 1 ಲೀಟರ್ ] ಕುಟ್ಟಿ ತೆಗೆದ ಓಲಿವ್ ಎಣ್ಣೆಯನ್ನು ಸುಮಾರು ಒಂದುವರೆ ಕಿಲೋಗ್ರಾಂ ಹೀಬ್ರೂ ಭಾಷೆಯಲ್ಲಿ ಎಫಾದ ಹತ್ತನೇ ಒಂದು ಭಾಗ, ಅಂದರೆ ಸುಮಾರು 1.5 ಕಿಲೋಗ್ರಾಂ ಗೋಧಿಹಿಟ್ಟಿಗೆ ಬೆರೆಸಿ ಸಮರ್ಪಿಸಬೇಕು.

ಅರಣ್ಯಕಾಂಡ ಅಧ್ಯಾಯ 28

6 ಇದು ಸೀನಾಯಿ ಪರ್ವತದಲ್ಲಿ ಯೆಹೋವ ದೇವರಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು.

7 ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ಥಳದಲ್ಲಿ ಒಂದು ಲೀಟರ್ ಹುದುಗಿದ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಯೆಹೋವ ದೇವರಿಗೋಸ್ಕರ ಸುರಿಯಬೇಕು.

8 ಎರಡನೆಯ ಕುರಿಮರಿಯನ್ನು ಸಂಜೆಯಲ್ಲಿ ಅರ್ಪಿಸಬೇಕು. ಅದರ ಧಾನ್ಯ ಸಮರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಬೆಳಿಗ್ಗೆ ಮಾಡಿದಂತೆಯೇ, ಯೆಹೋವ ದೇವರಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು.

ಅರಣ್ಯಕಾಂಡ ಅಧ್ಯಾಯ 28

ಸಬ್ಬತ್ ದಿನದ ಸಮರ್ಪಣೆಗಳು 9 “ ‘ಆದರೆ ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ದೋಷರಹಿತ ಒಂದು ವರ್ಷದ ಎರಡು ಕುರಿಮರಿಗಳನ್ನೂ, ಓಲಿವ್ ಎಣ್ಣೆ ಕಲಸಿದ ಎಫಾದ ಹತ್ತನೇ ಎರಡು ಭಾಗ ಸುಮಾರು 3.2 ಕಿಲೋಗ್ರಾಂ ಗೋಧಿಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು.

10 ನಿತ್ಯ ದಹನಬಲಿಯ ಹೊರತು, ಪ್ರತಿ ಸಬ್ಬತ್ ದಿನಕ್ಕೆ ತಕ್ಕ ದಹನಬಲಿಯೂ ಅದರ ಪಾನದ ಅರ್ಪಣೆಯೂ ಇದೇ.

ಅರಣ್ಯಕಾಂಡ ಅಧ್ಯಾಯ 28

ತಿಂಗಳಿನ ಸಮರ್ಪಣೆಗಳು 11 “ ‘ತಿಂಗಳುಗಳ ಆರಂಭದಲ್ಲಿ ನೀವು ಯೆಹೋವ ದೇವರಿಗೆ ದಹನಬಲಿಗಾಗಿ ದೋಷರಹಿತ ಎರಡು ಎಳೆಯ ಹೋರಿಗಳನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ,

12 ಒಂದೊಂದು ಹೋರಿಗೆ ಧಾನ್ಯ ಅರ್ಪಣೆಗಾಗಿ ಎಣ್ಣೆ ಕಲಸಿದ ಎಫಾದ ಹತ್ತನೇ ಮೂರು ಭಾಗ§ ಸುಮಾರು ಐದು ಕಿಲೋಗ್ರಾಂ ಹಿಟ್ಟನ್ನೂ, ಟಗರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಎಫಾದ ಹತ್ತನೇ ಎರಡು ಭಾಗ * ಸುಮಾರು 1.3 ಲೀಟರ್ ಹಿಟ್ಟನ್ನೂ,

ಅರಣ್ಯಕಾಂಡ ಅಧ್ಯಾಯ 28

13 ಕುರಿಮರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಎಫಾದ ಹತ್ತನೇ ಒಂದು ಭಾಗ ಹಿಟ್ಟನ್ನೂ, ಯೆಹೋವ ದೇವರಿಗೆ ಸುವಾಸನೆಯ ದಹನಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯೂ ಇದೇ.

14 ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಎಂದರೆ, ಹೋರಿಗೆ ಸುಮಾರು ಎರಡು ಲೀಟರ್ ಹೀಬ್ರೂ ಭಾಷೆಯಲ್ಲಿ ಅರ್ಧ ಹಿನ್, ಅಂದರೆ ಸುಮಾರು 2 ಲೀಟರ್ ದ್ರಾಕ್ಷಾರಸವು, ಟಗರಿಗೆ ಸುಮಾರು ಒಂದುವರೆ ಲೀಟರ್ [‡ ಹೀಬ್ರೂ ಭಾಷೆಯಲ್ಲಿ ಹಿನ್‌ನ ಮೂರನೇ ಒಂದು ಭಾಗ, ಅಂದರೆ ಸುಮಾರು 1.3 ಲೀಟರ್ ] ದ್ರಾಕ್ಷಾರಸವು, ಕುರಿಮರಿಗೆ ಸುಮಾರು ಒಂದು ಲೀಟರ್ [§ ಹೀಬ್ರೂ ಭಾಷೆಯಲ್ಲಿ ಹಿನ್‌ನ ಕಾಲುಭಾಗ, ಅಂದರೆ ಸುಮಾರು ಒಂದು ಲೀಟರ್ ] ದ್ರಾಕ್ಷಾರಸವು ಇರಬೇಕು. ಇದು ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ * ತಿಂಗಳಿನ ಆರಂಭ ಎಂದರೆ ಅಮಾವಾಸ್ಯೆಯಲ್ಲಿ ಹೀಗೆ ದಹನಬಲಿಯನ್ನು ಅರ್ಪಿಸಬೇಕು.

ಅರಣ್ಯಕಾಂಡ ಅಧ್ಯಾಯ 28

15 ಇದಲ್ಲದೆ ನಿತ್ಯ ದಹನಬಲಿಯ ಹೊರತು, ಯೆಹೋವ ದೇವರಿಗೆ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ಸಮರ್ಪಿಸಬೇಕು.

ಪಸ್ಕಹಬ್ಬವು 16 “ ‘ಆದರೆ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನವು ಯೆಹೋವ ದೇವರ ಪಸ್ಕಹಬ್ಬವಾಗಿರಬೇಕು.

17 ಆ ತಿಂಗಳ ಹದಿನೈದನೆಯ ದಿನವು ಹಬ್ಬವಾಗಿದೆ. ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು.

ಅರಣ್ಯಕಾಂಡ ಅಧ್ಯಾಯ 28

18 ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಯಾವ ತರವಾದ ಉದ್ಯೋಗವನ್ನು ನೀವು ಆ ದಿನದಲ್ಲಿ ಮಾಡಬೇಡಿರಿ.

19 ಆದರೆ ನೀವು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ದಹನಬಲಿಯನ್ನು ಅರ್ಪಿಸಬೇಕು. ಯಾವುದೆಂದರೆ: ಎರಡು ಎಳೆಯ ಹೋರಿಗಳು, ಒಂದು ಟಗರು, ಒಂದು ವರ್ಷದ ಏಳು ಕುರಿಮರಿಗಳು. ಇವು ದೋಷವಿಲ್ಲದೆ ಪೂರ್ಣಾಂಗವಾಗಿಯೇ ಇರಬೇಕು.

20 ಅವುಗಳ ಧಾನ್ಯ ಸಮರ್ಪಣೆಯನ್ನೂ, ಎಣ್ಣೆ ಕಲಸಿದ ಐದು ಕಿಲೋಗ್ರಾಂ ಸುಮಾರು ಎಫಾದ ಹತ್ತನೇ ಮೂರು ಭಾಗ ಹಿಟ್ಟನ್ನು ಒಂದೊಂದು ಹೋರಿಗೆ, ಹತ್ತನೇ ಎರಡು ಭಾಗ ಟಗರಿಗೂ ಅರ್ಪಿಸಬೇಕು.

ಅರಣ್ಯಕಾಂಡ ಅಧ್ಯಾಯ 28

21 ಮತ್ತು ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಸುಮಾರು ಒಂದುವರೆ ಕಿಲೋಗ್ರಾಂ ಸುಮಾರು ಹತ್ತನೇ ಒಂದು ಭಾಗ ಅರ್ಪಿಸಬೇಕು.

22 ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡಲು ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು.

23 ನಿತ್ಯ ದಹನಬಲಿಯಾಗಿರುವ ಮುಂಜಾನೆಯ ದಹನಬಲಿಯ ಹೊರತಾಗಿ ಇವುಗಳನ್ನು ನೀವು ಅರ್ಪಿಸಬೇಕು.

24 ಈ ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೆ ಪ್ರತಿದಿನವೂ ಯೆಹೋವ ದೇವರಿಗೆ ಸುವಾಸನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು. ಅದನ್ನೂ ಅದಕ್ಕೆ ತಕ್ಕ ಪಾನಾರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು.

ಅರಣ್ಯಕಾಂಡ ಅಧ್ಯಾಯ 28

25 ಏಳನೆಯ ದಿವಸದಲ್ಲಿ ಪರಿಶುದ್ಧವಾದ ಸಭೆ ಕೂಡಬೇಕು. ಆ ದಿನದಲ್ಲಿ ನೀವು ದೈನಂದಿನ ಉದ್ಯೋಗವನ್ನೂ ಮಾಡಬೇಡಿರಿ.

ವಾರಗಳ ಹಬ್ಬ 26 “ ‘ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಯೆಹೋವ ದೇವರಿಗೆ ನಿಮ್ಮ ವಾರಗಳಲ್ಲಿ ಹೊಸ ಧಾನ್ಯ ಸಮರ್ಪಣೆಯನ್ನು ಅರ್ಪಿಸುವಾಗ, ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡದೆ ಪವಿತ್ರ ಸಭೆ ಕೂಡಬೇಕು.

27 ನೀವು ಯೆಹೋವ ದೇವರಿಗೆ ಸುವಾಸನೆಯುಳ್ಳ ದಹನಬಲಿಯಾಗಿ ಎರಡು ಎಳೆಯ ಹೋರಿಗಳನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ,

ಅರಣ್ಯಕಾಂಡ ಅಧ್ಯಾಯ 28

28 ಅವುಗಳ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಸುಮಾರು ಐದು ಕಿಲೋಗ್ರಾಂ§ ಸುಮಾರು ಎಫಾದ ಹತ್ತನೇ ಮೂರು ಭಾಗ ಹಿಟ್ಟನ್ನು ಪ್ರತಿಯೊಂದು ಹೋರಿಗೆ, ಸುಮಾರು ಮೂರುವರೆ ಕಿಲೋಗ್ರಾಂ * ಸುಮಾರು ಹತ್ತನೇ ಎರಡು ಭಾಗ ಟಗರಿಗೂ

29 ಏಳು ಕುರಿಮರಿಗಳಲ್ಲಿ ಸುಮಾರು ಒಂದುವರೆ ಕಿಲೋಗ್ರಾಂ ಸುಮಾರು ಹತ್ತನೇ ಒಂದು ಭಾಗ ,

ಅರಣ್ಯಕಾಂಡ ಅಧ್ಯಾಯ 28

30 ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಒಂದು ಹೋತವನ್ನು ಸಮರ್ಪಿಸಬೇಕು.

31 ನಿತ್ಯವಾದ ದಹನಬಲಿಯನ್ನೂ ಅದರ ಧಾನ್ಯ ಸಮರ್ಪಣೆಯನ್ನೂ ಹೊರತಾಗಿ ಇವುಗಳ ಜೊತೆಗೆ ನೀವು ದೋಷವಿಲ್ಲದ ಪ್ರಾಣಿಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಸಮರ್ಪಿಸಬೇಕು.