Kannada ಬೈಬಲ್

ಕೀರ್ತನೆಗಳು ಒಟ್ಟು 150 ಅಧ್ಯಾಯಗಳು

ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 110
ಕೀರ್ತನೆಗಳು ಅಧ್ಯಾಯ 110

1 ಯೆಹೋವ ದೇವರು ನನ್ನ ಕರ್ತ ಆಗಿರುವವರಿಗೆ ಹೇಳಿದ್ದೇನೆಂದರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರಿ.”

2 ನಿಮ್ಮ ಬಲವಾದ ರಾಜದಂಡವನ್ನು ಯೆಹೋವ ದೇವರು ಚೀಯೋನಿನ ಹೊರಗೂ ವಿಸ್ತರಿಸುವರು. “ನಿಮ್ಮ ಶತ್ರುಗಳ ಮಧ್ಯದಲ್ಲಿ ದೊರೆತನ ಮಾಡಿರಿ,” ಎಂದು ಅವರು ನಿಮಗೆ ಹೇಳುವರು.

ಕೀರ್ತನೆಗಳು ಅಧ್ಯಾಯ 110

3 ನೀವು ನಿಮ್ಮ ಸೈನ್ಯವನ್ನು ಒಟ್ಟುಗೂಡಿಸುವ ದಿನದಲ್ಲಿ ನಿಮ್ಮ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಮುಂಜಾನೆಯ ಉದರದಿಂದ ಬರುವ ಇಬ್ಬನಿಯಂತೆ ನಿಮ್ಮ ಯೋಧರು ನಿಮ್ಮ ಕಡೆ ಇಳಿದು ಬರುವರು.

4 “ನೀವು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಯಾಜಕರಾಗಿದ್ದೀರಿ,” ಎಂದು ಯೆಹೋವ ದೇವರು ಆಣೆಯಿಟ್ಟು ಹೇಳಿದ್ದಾರೆ. ಅವರು ತಮ್ಮ ಮನಸ್ಸನ್ನು ಬದಲಾಯಿಸರು.

ಕೀರ್ತನೆಗಳು ಅಧ್ಯಾಯ 110

5 ಯೆಹೋವ ದೇವರು ನಿಮ್ಮ ಬಲಗಡೆಯಲ್ಲಿದ್ದಾರೆ; ಅವರು ತಮ್ಮ ತೀರ್ಪಿನ ದಿನದಲ್ಲಿ ಅರಸರನ್ನು ದಂಡಿಸುವರು.

6 ದೇವರು ಜನಾಂಗಗಳನ್ನು ನ್ಯಾಯತೀರಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳನ್ನು ದಂಡಿಸಿ ಅವರಿಗೆ ಮರಣದಂಡನೆ ವಿಧಿಸುವರು.

7 ಕರ್ತ ಆಗಿರುವವರು ದಾರಿಯುದ್ದಕ್ಕೂ ಹಳ್ಳದಿಂದ ನೀರು ಕುಡಿಯುತ್ತಾ, ಜಯದ ಮಾರ್ಗದಲ್ಲಿ ತಲೆಯೆತ್ತಿ ನಡೆದುಹೋಗುವರು.