ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಮತ್ತಾಯನು
1. ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು.
2. ಆದದರಿಂದ ಕಪಟಿಗಳು ಜನರಿಂದ ಹೊಗಳಿಸಿ ಕೊಳ್ಳಬೇಕೆಂದು ಸಭಾಮಂದಿರಗಳಲ್ಲಿಯೂ ಬೀದಿಗಳ ಲ್ಲಿಯೂ ಮಾಡುವಂತೆ ನೀನು ದಾನ ಮಾಡುವಾಗ ನಿನ್ನ ಮುಂದೆ ತುತ್ತೂರಿಯನ್ನೂದಬೇಡ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿದ್ದಾರೆ.
3. ಆದರೆ ನೀನು ದಾನಮಾಡುವಾಗ ನಿನ್ನ ಬಲಗೈ ಮಾಡುವದು ನಿನ್ನ ಎಡಗೈಗೆ ತಿಳಿಯದಿರಲಿ.
4. ಹೀಗೆ ನಿನ್ನ ದಾನವು ಅಂತರಂಗದಲ್ಲಿರುವದು; ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ತಾನೇ ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
5. ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ.
6. ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
7. ಆದರೆ ನೀವು ಪ್ರಾರ್ಥನೆ ಮಾಡುವಾಗ ಅನ್ಯರು ಮಾಡುವಂತೆ ವ್ಯರ್ಥವಾದದ್ದನ್ನು ಪದೇಪದೇ ಹೇಳ ಬೇಡಿರಿ ಯಾಕಂದರೆ ತಾವು ಬಹಳವಾಗಿ ಮಾತನಾಡು ವದರಿಂದ ತಮ್ಮ ಪ್ರಾರ್ಥನೆಯು ಕೇಳಲ್ಪಡುವದೆಂದು ಅವರು ಯೋಚಿಸುತ್ತಾರೆ.
8. ಆದದರಿಂದ ನೀವು ಅವರಂತೆ ಇರಬೇಡಿರಿ; ನಿಮ್ಮ ತಂದೆಯನ್ನು ಕೇಳುವದಕ್ಕಿಂತ ಮುಂಚೆಯೇ ನಿಮಗೆ ಅಗತ್ಯವಾಗಿ ರುವವುಗಳು ಯಾವವು ಎಂಬದು ಆತನಿಗೆ ತಿಳಿದದೆ.
9. ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
10. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ.
11. ನಮ್ಮ ಅನುದಿನದ ರೊಟ್ಟಿಯನ್ನು ಈ ದಿನವು ನಮಗೆ ದಯಪಾಲಿಸು.
12. ನಮ್ಮ ಸಾಲಗಾರರನ್ನು ನಾವು ಕ್ಷಮಿಸುವಂತೆ ನಮ್ಮ ಸಾಲಗಳನ್ನು ನಮಗೆ ಕ್ಷಮಿಸು.
13. ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
14. ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು.
15. ನೀವು ಮನುಷ್ಯರ ಅಪರಾಧಗಳನ್ನು ಕ್ಷಮಿಸದೆ ಹೋದರೆ ನಿಮ್ಮ ತಂದೆಯೂ ನಿಮ್ಮ ಅಪರಾಧಗಳನ್ನು ಕ್ಷಮಿಸು ವದಿಲ್ಲ.
16. ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ
17. ಆದರೆ ನೀನು ಉಪವಾಸ ಮಾಡುವಾಗ ನಿನ್ನ ತಲೆಗೆ ಎಣ್ಣೆ ಹಚ್ಚಿಕೊಂಡು ನಿನ್ನ ಮುಖವನ್ನು ತೊಳೆದುಕೋ.
18. ಆಗ ನೀನು ಉಪವಾಸಮಾಡುತ್ತೀ ಎಂದು ಜನರಿಗೆ ಕಾಣದಿದ್ದರೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಕಾಣುವದು. ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
19. ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.
20. ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ.
21. ಯಾಕಂದರೆ ನಿಮ್ಮ ಸಂಪತ್ತು ಎಲ್ಲಿ ಇದೆಯೋ ಅಲ್ಲಿ ನಿಮ್ಮ ಹೃದಯವೂ ಇರುವದು.
22. ಕಣ್ಣು ಶರೀರದ ದೀಪವಾಗಿದೆ. ಆದಕಾರಣ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲಾ ಬೆಳಕಾಗಿರುವದು.
23. ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು.
24. ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.
25. ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ
26. ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ?
27. ನಿಮ್ಮಲ್ಲಿ ಯಾವ ನಾದರೂ ಚಿಂತೆಮಾಡಿ ತನ್ನ ನೀಳವನ್ನು ಒಂದು ಮೊಳ ಉದ್ದ ಬೆಳೆಸಿಕೊಳ್ಳಲು ಸಾಧ್ಯವಾದೀತೇ?
28. ಮತ್ತು ಉಡುಪಿಗಾಗಿ ನೀವು ಯಾಕೆ ಚಿಂತೆ ಮಾಡುತ್ತೀರಿ? ಹೊಲದಲ್ಲಿ ತಾವರೆಗಳು ಹೇಗೆ ಬೆಳೆಯುತ್ತವೆ ಎಂಬದನ್ನು ಗಮನಿಸಿರಿ; ಅವು ಕಷ್ಟಪಡು ವದಿಲ್ಲ ಮತ್ತು ನೂಲುವದೂ ಇಲ್ಲ.
29. ಆದರೂ ನಾನು ನಿಮಗೆ ಹೇಳುವದೇನಂದರೆ-- ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿಯೂ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ.
30. ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ?
31. ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ.
32. (ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ.
33. ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.
34. ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
ಒಟ್ಟು 28 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 6 / 28
1 ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು. 2 ಆದದರಿಂದ ಕಪಟಿಗಳು ಜನರಿಂದ ಹೊಗಳಿಸಿ ಕೊಳ್ಳಬೇಕೆಂದು ಸಭಾಮಂದಿರಗಳಲ್ಲಿಯೂ ಬೀದಿಗಳ ಲ್ಲಿಯೂ ಮಾಡುವಂತೆ ನೀನು ದಾನ ಮಾಡುವಾಗ ನಿನ್ನ ಮುಂದೆ ತುತ್ತೂರಿಯನ್ನೂದಬೇಡ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿದ್ದಾರೆ. 3 ಆದರೆ ನೀನು ದಾನಮಾಡುವಾಗ ನಿನ್ನ ಬಲಗೈ ಮಾಡುವದು ನಿನ್ನ ಎಡಗೈಗೆ ತಿಳಿಯದಿರಲಿ. 4 ಹೀಗೆ ನಿನ್ನ ದಾನವು ಅಂತರಂಗದಲ್ಲಿರುವದು; ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ತಾನೇ ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು. 5 ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ. 6 ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು. 7 ಆದರೆ ನೀವು ಪ್ರಾರ್ಥನೆ ಮಾಡುವಾಗ ಅನ್ಯರು ಮಾಡುವಂತೆ ವ್ಯರ್ಥವಾದದ್ದನ್ನು ಪದೇಪದೇ ಹೇಳ ಬೇಡಿರಿ ಯಾಕಂದರೆ ತಾವು ಬಹಳವಾಗಿ ಮಾತನಾಡು ವದರಿಂದ ತಮ್ಮ ಪ್ರಾರ್ಥನೆಯು ಕೇಳಲ್ಪಡುವದೆಂದು ಅವರು ಯೋಚಿಸುತ್ತಾರೆ.
8 ಆದದರಿಂದ ನೀವು ಅವರಂತೆ ಇರಬೇಡಿರಿ; ನಿಮ್ಮ ತಂದೆಯನ್ನು ಕೇಳುವದಕ್ಕಿಂತ ಮುಂಚೆಯೇ ನಿಮಗೆ ಅಗತ್ಯವಾಗಿ ರುವವುಗಳು ಯಾವವು ಎಂಬದು ಆತನಿಗೆ ತಿಳಿದದೆ.
9 ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ. 10 ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ. 11 ನಮ್ಮ ಅನುದಿನದ ರೊಟ್ಟಿಯನ್ನು ಈ ದಿನವು ನಮಗೆ ದಯಪಾಲಿಸು. 12 ನಮ್ಮ ಸಾಲಗಾರರನ್ನು ನಾವು ಕ್ಷಮಿಸುವಂತೆ ನಮ್ಮ ಸಾಲಗಳನ್ನು ನಮಗೆ ಕ್ಷಮಿಸು. 13 ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್. 14 ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು. 15 ನೀವು ಮನುಷ್ಯರ ಅಪರಾಧಗಳನ್ನು ಕ್ಷಮಿಸದೆ ಹೋದರೆ ನಿಮ್ಮ ತಂದೆಯೂ ನಿಮ್ಮ ಅಪರಾಧಗಳನ್ನು ಕ್ಷಮಿಸು ವದಿಲ್ಲ. 16 ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ 17 ಆದರೆ ನೀನು ಉಪವಾಸ ಮಾಡುವಾಗ ನಿನ್ನ ತಲೆಗೆ ಎಣ್ಣೆ ಹಚ್ಚಿಕೊಂಡು ನಿನ್ನ ಮುಖವನ್ನು ತೊಳೆದುಕೋ. 18 ಆಗ ನೀನು ಉಪವಾಸಮಾಡುತ್ತೀ ಎಂದು ಜನರಿಗೆ ಕಾಣದಿದ್ದರೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಕಾಣುವದು. ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು. 19 ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು. 20 ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ. 21 ಯಾಕಂದರೆ ನಿಮ್ಮ ಸಂಪತ್ತು ಎಲ್ಲಿ ಇದೆಯೋ ಅಲ್ಲಿ ನಿಮ್ಮ ಹೃದಯವೂ ಇರುವದು. 22 ಕಣ್ಣು ಶರೀರದ ದೀಪವಾಗಿದೆ. ಆದಕಾರಣ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲಾ ಬೆಳಕಾಗಿರುವದು. 23 ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು. 24 ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ. 25 ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ 26 ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ? 27 ನಿಮ್ಮಲ್ಲಿ ಯಾವ ನಾದರೂ ಚಿಂತೆಮಾಡಿ ತನ್ನ ನೀಳವನ್ನು ಒಂದು ಮೊಳ ಉದ್ದ ಬೆಳೆಸಿಕೊಳ್ಳಲು ಸಾಧ್ಯವಾದೀತೇ? 28 ಮತ್ತು ಉಡುಪಿಗಾಗಿ ನೀವು ಯಾಕೆ ಚಿಂತೆ ಮಾಡುತ್ತೀರಿ? ಹೊಲದಲ್ಲಿ ತಾವರೆಗಳು ಹೇಗೆ ಬೆಳೆಯುತ್ತವೆ ಎಂಬದನ್ನು ಗಮನಿಸಿರಿ; ಅವು ಕಷ್ಟಪಡು ವದಿಲ್ಲ ಮತ್ತು ನೂಲುವದೂ ಇಲ್ಲ. 29 ಆದರೂ ನಾನು ನಿಮಗೆ ಹೇಳುವದೇನಂದರೆ-- ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿಯೂ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ. 30 ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ? 31 ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ. 32 (ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ. 33 ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು. 34 ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
ಒಟ್ಟು 28 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 6 / 28
×

Alert

×

Kannada Letters Keypad References