2. ಕರ್ತನ ಅಂಗಳ ಗಳಿಗಾಗಿ ನನ್ನ ಪ್ರಾಣವು ಬಯಸಿ, ಹೌದು, ಅದು ಕುಂದುತ್ತದೆ; ನನ್ನ ಹೃದಯವೂ ಶರೀರವೂ ಜೀವ ವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ.
|
3. ಸೈನ್ಯಗಳ ಓ ಕರ್ತನೇ, ನನ್ನ ಅರಸನೇ, ನನ್ನ ದೇವರೇ, ಹೌದು ಗುಬ್ಬಿಯು ಮನೆಯನ್ನೂ ಬಾನಕ್ಕೀಯು ತನ್ನ ಮರಿಗ ಳನ್ನಿಡುವ ಗೂಡನ್ನೂ ನಿನ್ನ ಬಲಿಪೀಠಗಳ ಬಳಿಯಲ್ಲಿ ಕಂಡುಕೊಂಡವೆ.
|
10. ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು.
|
11. ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
|