ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ವಿಮೋಚನಕಾಂಡ
1. ಆಗ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ.
2. ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು.
3. ಕರ್ತನು ಯುದ್ಧ ಶೂರನು; ಕರ್ತನು ಎಂಬದೇ ಆತನ ಹೆಸರು.
4. ಆತನು ಫರೋಹನ ರಥಗಳನ್ನೂ ಅವನ ಸೈನ್ಯವನ್ನೂ ಸಮುದ್ರ ದಲ್ಲಿ ನೂಕಿದ್ದಾನೆ; ಆಯಲ್ಪಟ್ಟ ಅವನ ಅಧಿಪತಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿಹೋದರು.
5. ಅಗಾಧಗಳು ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ (ಸಮುದ್ರದ) ತಳಕ್ಕೆ ಮುಳುಗಿದರು.
6. ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು.
7. ನಿನ್ನ ಮಹತ್ತಾದ ಘನತೆಯಲ್ಲಿ ನಿನಗೆ ವಿರೋಧವಾಗಿ ಎದ್ದವರನ್ನು ಕೆಡವಿ ಬಿಟ್ಟಿರುವಿ. ನಿನ್ನ ರೌದ್ರವು ಹೊರಟು ಅವರನ್ನು ಹುಲ್ಲಿನಂತೆ ದಹಿಸಿಬಿಟ್ಟಿತು.
8. ನಿನ್ನ ಮೂಗಿನ ಬಿರುಸಾದ ಗಾಳಿ ಯಿಂದ ನೀರುಗಳು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು; ಸಮುದ್ರದ ಅಗಾಧಗಳ ನೀರು ಗಟ್ಟಿಯಾದವು.
9. ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.
10. ನೀನು ನಿನ್ನ ಗಾಳಿಯನ್ನು ಊದಿದಾಗ ಸಮುದ್ರವು ಅವರನ್ನು ಮುಚ್ಚಿಕೊಂಡಿತು. ಅವರು ಸೀಸದಂತೆ ಮಹಾಜಲಗಳಲ್ಲಿ ಮುಳುಗಿ ಹೊದರು.
11. ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
12. ನೀನು ನಿನ್ನ ಬಲಗೈಯನ್ನು ಚಾಚಲು ಭೂಮಿಯು ಅವರನ್ನು ನುಂಗಿತು.
13. ನೀನು ವಿಮೋಚಿ ಸಿದ ಜನರನ್ನು ಕರುಣೆಯಿಂದ ನಡಿಸಿದಿ; ನೀನು ಅವ ರನ್ನು ನಿನ್ನ ಬಲದಿಂದ ನಿನ್ನ ಪರಿಶುದ್ಧ ನಿವಾಸಕ್ಕೆ ನಡಿಸಿದಿ.
14. ಜನರು ಇದನ್ನು ಕೇಳಿ ಭಯಪಡುವರು; ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವದು.
15. ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.
16. ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು.
17. ನೀನು ಅವರನ್ನು ಒಳಗೆ ಬರಮಾಡಿ ಓ ಕರ್ತನೇ, ನಿನ್ನ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ (ಓ ಕರ್ತನೇ,) ನೀನು ವಾಸಿಸುವದಕ್ಕೆ ಮಾಡಿಕೊಂಡಿರುವ ನಿನ್ನ ಸ್ವಾಸ್ಥ್ಯದ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿ.
18. ಕರ್ತನು ಯುಗಯುಗಾಂತರಗಳ ವರೆಗೆ ಆಳುವನು.
19. ಫರೋ ಹನ ಕುದುರೆಗಳು ಅವನ ರಥಗಳ ಸಂಗಡಲೂ ಸವಾರರ ಸಂಗಡಲೂ ಸಮುದ್ರದೊಳಗೆ ಬಂದಾಗ ಕರ್ತನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರ ಮಾಡಿದನು; ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣನೆಲದ ಮೇಲೆ ಹೋದರು.
20. ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು.
21. ಮಿರ್ಯಾಮಳು ಅವರಿಗೆ ಕೊಟ್ಟ ಉತ್ತರವೇನಂದರೆ--ನೀವು ಕರ್ತನಿಗೆ ಹಾಡಿರಿ, ಆತನು ಮಹಿಮೆಯಿಂದ ಜಯಿಸಿದ್ದಾನೆ; ಕುದುರೆಯನ್ನು ಸವಾರ ನನ್ನು ಸಮುದ್ರದಲ್ಲಿ ಹಾಕಿದ್ದಾನೆ ಎಂಬದು.
22. ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ.
23. ಅವರು ಮಾರಾಗೆ ಬಂದ ಮೇಲೆ ಮಾರಾದ ನೀರನ್ನು ಕುಡಿಯಲಾರದೆ ಇದ್ದರು; ಯಾಕಂದರೆ ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು ಮಾರಾ ಎಂದು ಕರೆಯಲ್ಪಟ್ಟಿತು.
24. ಆದದ ರಿಂದ ಜನರು--ನಾವು ಏನು ಕುಡಿಯೋಣ ಎಂದು ಹೇಳಿ ಮೋಶೆಗೆ ವಿರೋಧವಾಗಿ ಗುಣುಗುಟ್ಟಿದರು.
25. ಅವನು ಕರ್ತನಿಗೆ ಮೊರೆಯಿಟ್ಟನು; ಆಗ ಕರ್ತನು ಅವನಿಗೆ ಒಂದು ಮರವನ್ನು ತೋರಿಸಿದನು; ಅವನು ಅದನ್ನು ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಗಿ ಮಾಡಲ್ಪಟ್ಟಿತು; ಅಲ್ಲಿ ಆತನು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿ, ಅಲ್ಲಿಯೇ ಅವರನ್ನು ಪರೀಕ್ಷಿಸಿದನು.
26. ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.
27. ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.

ಟಿಪ್ಪಣಿಗಳು

No Verse Added

ಒಟ್ಟು 40 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 15 / 40
ವಿಮೋಚನಕಾಂಡ 15:7
1 ಆಗ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ. 2 ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು. 3 ಕರ್ತನು ಯುದ್ಧ ಶೂರನು; ಕರ್ತನು ಎಂಬದೇ ಆತನ ಹೆಸರು. 4 ಆತನು ಫರೋಹನ ರಥಗಳನ್ನೂ ಅವನ ಸೈನ್ಯವನ್ನೂ ಸಮುದ್ರ ದಲ್ಲಿ ನೂಕಿದ್ದಾನೆ; ಆಯಲ್ಪಟ್ಟ ಅವನ ಅಧಿಪತಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿಹೋದರು. 5 ಅಗಾಧಗಳು ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ (ಸಮುದ್ರದ) ತಳಕ್ಕೆ ಮುಳುಗಿದರು. 6 ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು. 7 ನಿನ್ನ ಮಹತ್ತಾದ ಘನತೆಯಲ್ಲಿ ನಿನಗೆ ವಿರೋಧವಾಗಿ ಎದ್ದವರನ್ನು ಕೆಡವಿ ಬಿಟ್ಟಿರುವಿ. ನಿನ್ನ ರೌದ್ರವು ಹೊರಟು ಅವರನ್ನು ಹುಲ್ಲಿನಂತೆ ದಹಿಸಿಬಿಟ್ಟಿತು. 8 ನಿನ್ನ ಮೂಗಿನ ಬಿರುಸಾದ ಗಾಳಿ ಯಿಂದ ನೀರುಗಳು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು; ಸಮುದ್ರದ ಅಗಾಧಗಳ ನೀರು ಗಟ್ಟಿಯಾದವು. 9 ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು. 10 ನೀನು ನಿನ್ನ ಗಾಳಿಯನ್ನು ಊದಿದಾಗ ಸಮುದ್ರವು ಅವರನ್ನು ಮುಚ್ಚಿಕೊಂಡಿತು. ಅವರು ಸೀಸದಂತೆ ಮಹಾಜಲಗಳಲ್ಲಿ ಮುಳುಗಿ ಹೊದರು. 11 ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ? 12 ನೀನು ನಿನ್ನ ಬಲಗೈಯನ್ನು ಚಾಚಲು ಭೂಮಿಯು ಅವರನ್ನು ನುಂಗಿತು. 13 ನೀನು ವಿಮೋಚಿ ಸಿದ ಜನರನ್ನು ಕರುಣೆಯಿಂದ ನಡಿಸಿದಿ; ನೀನು ಅವ ರನ್ನು ನಿನ್ನ ಬಲದಿಂದ ನಿನ್ನ ಪರಿಶುದ್ಧ ನಿವಾಸಕ್ಕೆ ನಡಿಸಿದಿ. 14 ಜನರು ಇದನ್ನು ಕೇಳಿ ಭಯಪಡುವರು; ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವದು. 15 ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು. 16 ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು. 17 ನೀನು ಅವರನ್ನು ಒಳಗೆ ಬರಮಾಡಿ ಓ ಕರ್ತನೇ, ನಿನ್ನ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ (ಓ ಕರ್ತನೇ,) ನೀನು ವಾಸಿಸುವದಕ್ಕೆ ಮಾಡಿಕೊಂಡಿರುವ ನಿನ್ನ ಸ್ವಾಸ್ಥ್ಯದ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿ. 18 ಕರ್ತನು ಯುಗಯುಗಾಂತರಗಳ ವರೆಗೆ ಆಳುವನು. 19 ಫರೋ ಹನ ಕುದುರೆಗಳು ಅವನ ರಥಗಳ ಸಂಗಡಲೂ ಸವಾರರ ಸಂಗಡಲೂ ಸಮುದ್ರದೊಳಗೆ ಬಂದಾಗ ಕರ್ತನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರ ಮಾಡಿದನು; ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣನೆಲದ ಮೇಲೆ ಹೋದರು. 20 ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು. 21 ಮಿರ್ಯಾಮಳು ಅವರಿಗೆ ಕೊಟ್ಟ ಉತ್ತರವೇನಂದರೆ--ನೀವು ಕರ್ತನಿಗೆ ಹಾಡಿರಿ, ಆತನು ಮಹಿಮೆಯಿಂದ ಜಯಿಸಿದ್ದಾನೆ; ಕುದುರೆಯನ್ನು ಸವಾರ ನನ್ನು ಸಮುದ್ರದಲ್ಲಿ ಹಾಕಿದ್ದಾನೆ ಎಂಬದು. 22 ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ. 23 ಅವರು ಮಾರಾಗೆ ಬಂದ ಮೇಲೆ ಮಾರಾದ ನೀರನ್ನು ಕುಡಿಯಲಾರದೆ ಇದ್ದರು; ಯಾಕಂದರೆ ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು ಮಾರಾ ಎಂದು ಕರೆಯಲ್ಪಟ್ಟಿತು. 24 ಆದದ ರಿಂದ ಜನರು--ನಾವು ಏನು ಕುಡಿಯೋಣ ಎಂದು ಹೇಳಿ ಮೋಶೆಗೆ ವಿರೋಧವಾಗಿ ಗುಣುಗುಟ್ಟಿದರು. 25 ಅವನು ಕರ್ತನಿಗೆ ಮೊರೆಯಿಟ್ಟನು; ಆಗ ಕರ್ತನು ಅವನಿಗೆ ಒಂದು ಮರವನ್ನು ತೋರಿಸಿದನು; ಅವನು ಅದನ್ನು ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಗಿ ಮಾಡಲ್ಪಟ್ಟಿತು; ಅಲ್ಲಿ ಆತನು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿ, ಅಲ್ಲಿಯೇ ಅವರನ್ನು ಪರೀಕ್ಷಿಸಿದನು. 26 ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು. 27 ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
ಒಟ್ಟು 40 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 15 / 40
Common Bible Languages
West Indian Languages
×

Alert

×

kannada Letters Keypad References