2. ಹುಟ್ಟುವದಕ್ಕೆ ಒಂದು ಸಮಯ, ಸಾಯುವದಕ್ಕೆ ಒಂದು ಸಮಯ; ನೆಡುವದಕ್ಕೆ ಒಂದು ಸಮಯ, ನೆಟ್ಟದ್ದನ್ನು ಕಿತ್ತು ಹಾಕು ವದಕ್ಕೆ ಒಂದು ಸಮಯ;
|
3. ಕೊಲ್ಲುವದಕ್ಕೆ ಒಂದು ಸಮಯ, ಸ್ವಸ್ಥಮಾಡುವದಕ್ಕೆ ಒಂದು ಸಮಯ ಕೆಡವಿ ಬಿಡುವದಕ್ಕೆ ಒಂದು ಸಮಯ, ಕಟ್ಟುವದಕ್ಕೆ ಒಂದು ಸಮಯ;
|
5. ಕಲ್ಲುಗಳನ್ನು ಎಸೆಯುವದಕ್ಕೆ ಒಂದು ಸಮಯ, ಕಲ್ಲುಗಳನ್ನು ಕೂಡಿಸು ವದಕ್ಕೆ ಒಂದು ಸಮಯ; ಅಪ್ಪಿಕೊಳ್ಳುವದಕ್ಕೆ ಒಂದು ಸಮಯ, ಅಪ್ಪಿಕೊಳ್ಳುವದರಿಂದ ನಿಗ್ರಹಿಸುವ ಸಮ ಯ;
|
11. ತನ್ನ ಸಮಯದಲ್ಲಿ ಪ್ರತಿಯೊಂದನ್ನು ಆತನು ಸುಂದರವಾಗಿ ಮಾಡಿದ್ದಾನೆ. ಆದಿಯಿಂದ ಅಂತ್ಯದ ವರೆಗೂ ದೇವರು ನಡಿಸುವ ಕೆಲಸವನ್ನು ಯಾವ ಮನುಷ್ಯನೂ ಗ್ರಹಿಸಲಾರದಂತೆ ಅವರ ಹೃದಯದಲ್ಲಿ ಆತನು ಲೋಕವನ್ನು ಇಟ್ಟಿದ್ದಾನೆ.
|
12. ಒಬ್ಬನು ಸಂತೋಷಿಸಿ ತನ್ನ ಜೀವಮಾನದಲ್ಲಿ ಒಳ್ಳೇ ದನ್ನು ಮಾಡುವದೇ ಹೊರತು ಅವುಗಳಲ್ಲಿ ಯಾವ ಮೇಲೂ ಇಲ್ಲವೆಂದು ನಾನು ಬಲ್ಲೆನು.
|
14. ದೇವರು ಮಾಡುವದೆಲ್ಲವು ಶಾಶ್ವತವಾಗಿರುವದೆಂದು ನಾನು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಬಾರದು, ಇಲ್ಲವೆ ಅದರಿಂದ ಯಾವದನ್ನೂ ತೆಗೆಯಬಾರದು; ಮನುಷ್ಯರು ಆತನ ಎದುರಿನಲ್ಲಿ ಭಯಪಡುವಂತೆ ದೇವರು ಅದನ್ನು ಮಾಡುತ್ತಾನೆ.
|
16. ಕೆಟ್ಟದ್ದು ಇತ್ತೆಂದು ಸೂರ್ಯನ ಕೆಳಗೆ ನ್ಯಾಯ ತೀರ್ಪಿನ ಸ್ಥಳವನ್ನು ಮತ್ತು ದುಷ್ಕೃತ್ಯ ಇದೆಯೆಂದು ನೀತಿಯ ಸ್ಥಾನವನ್ನು ನಾನು ಕಂಡೆನು.
|
17. ನಾನು ನನ್ನ ಹೃದಯದಲ್ಲಿ -- ನೀತಿವಂತರನ್ನೂ ದುಷ್ಟರನ್ನೂ ದೇವರು ತೀರ್ಪುಮಾಡುವನು; ಪ್ರತಿಯೊಂದು ಉದ್ದೇ ಶಕ್ಕೂ ಪ್ರತಿಯೊಂದು ಕೆಲಸಕ್ಕೂ ಸಮಯವಿದೆ ಎಂದು ಅಂದುಕೊಂಡೆನು.
|
18. ಮನುಷ್ಯ ಪುತ್ರರ ಸ್ಥಿತಿಯ ವಿಷ ಯವಾಗಿ ದೇವರು ಅವರನ್ನು ಪ್ರತ್ಯಕ್ಷಪಡಿಸುವನೆಂದೂ ಅವರು ತಾವೇ ಮೃಗಗಳೆಂದು ತಾವು ಕಂಡುಕೊಳ್ಳ ಬೇಕೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು.
|
19. ಮೃಗಗಳಿಗೆ ಸಂಭವಿಸುವದು ಮನುಷ್ಯರ ಪುತ್ರರಿಗೂ ಸಂಭವಿಸುತ್ತದೆ; ಅವರಿಗೆ ಒಂದೇ ಸಂಗತಿ ಸಂಭವಿಸು ತ್ತದೆ; ಒಂದು ಸಾಯುವ ಹಾಗೆ ಮತ್ತೊಂದು ಸಾಯು ತ್ತದೆ; ಹೌದು, ಅವರೆಲ್ಲರಿಗೂ ಒಂದೇ ಒಂದು ಉಸಿ ರಾಟ ಇದೆ; ಆದಕಾರಣ ಮೃಗಕ್ಕಿಂತ ಮನುಷ್ಯನಿಗೆ ಯಾವ ಶ್ರೇಷ್ಠತೆಯೂ ಇಲ್ಲ; ಎಲ್ಲವೂ ವ್ಯರ್ಥ.
|
21. ಮನುಷ್ಯನ ಪ್ರಾಣವು ಮೇಲಕ್ಕೆ ಹೋಗುತ್ತದೆ ಎಂದೂ ಮೃಗದ ಪ್ರಾಣವು ಭೂಮಿಯ ಕೆಳಕ್ಕೆ ಹೋಗುತ್ತದೆ ಎಂದೂ ಯಾವನು ತಿಳಿದಾನು?ಆದಕಾರಣ ಮನುಷ್ಯನು ತನ್ನ ಸ್ವಂತ ಕೆಲಸಗಳಲ್ಲಿ ಆನಂದಿಸುವದಕ್ಕಿಂತ ಒಳ್ಳೆಯದು ಯಾವದೂ ಇಲ್ಲ ವೆಂದು ನಾನು ಗ್ರಹಿಸುತ್ತೇನೆ; ಅದೇ ಅವನ ಪಾಲು; ಅದರಿಂದ ತನ್ನ ಜೀವಮಾನದ ನಂತರ ಸಂಭವಿಸುವದನ್ನು ನೋಡುವಂತೆ ಯಾವನು ಅವನನ್ನು ಪುನಃ ಬರಮಾಡುತ್ತಾನೆ.?
|
22. ಆದಕಾರಣ ಮನುಷ್ಯನು ತನ್ನ ಸ್ವಂತ ಕೆಲಸಗಳಲ್ಲಿ ಆನಂದಿಸುವದಕ್ಕಿಂತ ಒಳ್ಳೆಯದು ಯಾವದೂ ಇಲ್ಲ ವೆಂದು ನಾನು ಗ್ರಹಿಸುತ್ತೇನೆ; ಅದೇ ಅವನ ಪಾಲು; ಅದರಿಂದ ತನ್ನ ಜೀವಮಾನದ ನಂತರ ಸಂಭವಿಸುವದನ್ನು ನೋಡುವಂತೆ ಯಾವನು ಅವನನ್ನು ಪುನಃ ಬರಮಾಡುತ್ತಾನೆ.?
|