7. ಆದರೆ ಇಸ್ರಾಯೇಲನ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿ ಹೊಂದಿ ಹೆಚ್ಚಿ ಹರಡಿಕೊಂಡು ಬಲಗೊಂಡರು. ಆ ದೇಶವು ಅವರಿಂದ ತುಂಬಿತು.
|
10. ಬನ್ನಿ, ಅವರು ಹೆಚ್ಚಾಗದ ಹಾಗೆಯೂ ನಮಗೆ ಯುದ್ಧ ಸಂಭವಿಸಿದರೆ ಅವರು ನಮ್ಮ ಶತ್ರುಗಳ ಸಂಗಡ ಕೂಡಿಕೊಂಡು ನಮಗೆ ವಿರೋಧವಾಗಿ ಯುದ್ಧಮಾಡಿ ದೇಶವನ್ನು ಬಿಟ್ಟು ಹೋಗದ ಹಾಗೆಯೂ ಅವ ರೊಂದಿಗೆ ಬುದ್ಧಿವಂತಿಕೆಯಿಂದ ವರ್ತಿಸೋಣ ಎಂದು ಹೇಳಿದನು.
|
11. ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.
|
12. ಆದರೆ ಇವರು ಅವರನ್ನು ಎಷ್ಟು ಶ್ರಮೆಪಡಿಸಿದರೋ ಅಷ್ಟು ಅಧಿಕ ವಾಗಿ ಅವರು ಹೆಚ್ಚಿ ಹರಡಿಕೊಂಡರು. ಐಗುಪ್ತ್ಯರು ಇಸ್ರಾಯೇಲ್ ಮಕ್ಕಳಿಗಾಗಿ ಸಂತಾಪಪಟ್ಟರು.
|
14. ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು.
|
16. ಅವನು ಅವರಿಗೆ--ನೀವು ಇಬ್ರಿಯ ಸ್ತ್ರೀಯರಿಗೆ ಸೂಲಗಿತ್ತಿಯ ಕೆಲಸ ಮಾಡುವದಕ್ಕೆ ಹೆರಿಗೆಯ ಪೀಠದಲ್ಲಿ ಅವರನ್ನು ಪರಾಂಬ ರಿಸುವಾಗ ಗಂಡು ಮಗುವಾದರೆ ಅದನ್ನು ಕೊಂದು ಹಾಕಿರಿ, ಹೆಣ್ಣಾದರೆ ಬದುಕಲಿ ಎಂದು ಹೇಳಿದನು.
|
18. ಆಗ ಐಗು ಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿಯಾಕೆ ಇಂಥ ಕೆಲಸವನ್ನು ಮಾಡಿ ಗಂಡು ಮಕ್ಕಳನ್ನು ಬದುಕಿ ಸಿದ್ದೀರಿ ಅಂದನು.
|
19. ಅದಕ್ಕೆ ಅವರು--ಇಬ್ರಿಯರ ಸ್ತ್ರೀಯರು ಐಗುಪ್ತದ ಸ್ತ್ರೀಯರಂತೆ ಅಲ್ಲ, ಅವರು ಚುರುಕಾಗಿದ್ದಾರೆ. ಸೂಲಗಿತ್ತಿಯು ಅವರ ಹತ್ತಿರ ಬರುವದಕ್ಕೆ ಮುಂಚೆಯೇ ಹೆರುತ್ತಾರೆ ಅಂದರು.
|
21. ಸೂಲಗಿತ್ತಿಯರು ದೇವರಿಗೆ ಭಯ ಪಟ್ಟದ್ದರಿಂದ ಆತನು ಅವರಿಗೆ ವಂಶಾಭಿವೃದ್ಧಿಯ ನ್ನುಂಟುಮಾಡಿದನು.ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.
|
22. ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.
|