1. ಇಸಾಕನು ಮುದುಕನಾಗಿ ನೋಡುವದ ಕ್ಕಾಗದಷ್ಟು ಅವನ ಕಣ್ಣುಗಳು ಮೊಬ್ಬಾ ದಾಗ ಅವನು ತನ್ನ ಹಿರೀ ಮಗನಾದ ಏಸಾವನನ್ನು ಕರೆದು ಅವನಿಗೆ--ನನ್ನ ಮಗನೇ ಅಂದಾಗ ಅವನು ಇಸಾಕನಿಗೆ--ಇಗೋ, ಇದ್ದೇನೆ ಅಂದನು.
|
3. ಆದದರಿಂದ ಈಗ ನೀನು ನಿನ್ನ ಆಯುಧಗಳನ್ನೂ ಬತ್ತಳಿಕೆಯನ್ನೂ ಬಿಲ್ಲನ್ನೂ ತೆಗೆದುಕೊಂಡು ಅಡವಿಗೆ ಹೋಗಿ ನನಗೋಸ್ಕರ ಬೇಟೆಯ ಮಾಂಸವನ್ನೂ
|
4. ನಾನು ಪ್ರೀತಿಮಾಡುವ ರುಚಿಯಾದ ಊಟವನ್ನೂ ಸಿದ್ಧ ಮಾಡಿ ತಕ್ಕೊಂಡು ಬಾ. ಆಗ ನಾನು ಸಾಯುವದಕ್ಕಿಂತ ಮುಂಚೆ ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ಅದನ್ನು ಊಟಮಾಡುವೆನು ಅಂದನು.
|
5. ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ್ದನ್ನು ರೆಬೆಕ್ಕಳು ಕೇಳಿಸಿಕೊಂಡಳು. ಏಸಾವನು ಬೇಟೆಯಾಡಿ ಅದನ್ನು ತರುವದಕ್ಕಾಗಿ ಅಡವಿಗೆ ಹೋದನು.
|
7. ನನಗೋಸ್ಕರ ಬೇಟೆಯ ಮಾಂಸವನ್ನು ತಕ್ಕೊಂಡು ಬಂದು ರುಚಿಯಾದ ಅಡಿಗೆಯನ್ನು ಮಾಡಿಕೊಂಡು ಬಾ; ಆಗ ನಾನು ಸಾಯುವದಕ್ಕಿಂತ ಮುಂಚೆ ಊಟ ಮಾಡಿ ಕರ್ತನ ಸನ್ನಿಧಿಯಲ್ಲಿ ನಿನ್ನನ್ನು ಆಶೀರ್ವದಿಸು ವೆನು ಎಂದು ಹೇಳಿದ್ದನ್ನು ನಾನು ಕೇಳಿದ್ದೇನೆ;
|
9. ಈಗ ನೀನು ಮಂದೆಯ ಬಳಿಗೆ ಹೋಗಿ ಅಲ್ಲಿಂದ ಎರಡು ಒಳ್ಳೇ ಮೇಕೆಯ ಮರಿಗಳನ್ನು ತಕ್ಕೊಂಡು ಬಾ; ನಿನ್ನ ತಂದೆಗೋಸ್ಕರ ನಾನು ಅವುಗಳನ್ನೂ ಅವನು ಪ್ರೀತಿ ಸುವ ರುಚಿಯಾದ ಅಡಿಗೆಯನ್ನೂ ಸಿದ್ಧಮಾಡುವೆನು.
|
10. ನೀನು ಅದನ್ನು ನಿನ್ನ ತಂದೆಯ ಬಳಿಗೆ ತಕ್ಕೊಂಡು ಹೋಗಬೇಕು. ಅವನು ಸಾಯುವದಕ್ಕಿಂತ ಮೊದಲು ನಿನ್ನನ್ನು ಆಶೀರ್ವದಿಸುವಂತೆ ಊಟಮಾಡಲಿ ಅಂದಳು.
|
11. ಅದಕ್ಕೆ ಯಾಕೋಬನು ತನ್ನ ತಾಯಿಯಾದ ರೆಬೆಕ್ಕ ಳಿಗೆ--ಇಗೋ, ನನ್ನ ಸಹೋದರನಾದ ಏಸಾವನು ರೋಮವುಳ್ಳ ಮನುಷ್ಯನಾಗಿದ್ದಾನೆ. ನಾನು ನುಣು ಪಾದ ಮನುಷ್ಯನಾಗಿದ್ದೇನೆ.
|
12. ಒಂದು ವೇಳೆ ನನ್ನ ತಂದೆಯು ನನ್ನನ್ನು ಮುಟ್ಟಿದರೆ ಅವನಿಗೆ ನಾನು ಮೋಸಗಾರನಾಗಿ ಕಾಣುವೆನು. ಆಗ ಆಶೀರ್ವಾದ ವಲ್ಲ, ಶಾಪವನ್ನೇ ನನ್ನ ಮೇಲೆ ಬರಮಾಡಿಕೊಳ್ಳು ವೆನು ಅಂದನು.
|
13. ಅದಕ್ಕೆ ಅವನ ತಾಯಿಯು ಅವನಿಗೆ--ನನ್ನ ಮಗನೇ, ನಿನ್ನ ಶಾಪವು ನನ್ನ ಮೇಲೆ ಇರಲಿ; ನೀನು ಮಾತ್ರ ನನ್ನ ಮಾತಿಗೆ ವಿಧೇಯನಾಗಿ ಹೋಗಿ ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು.
|
14. ಆಗ ಅವನು ಹೋಗಿ ಅವುಗಳನ್ನು ತೆಗೆದುಕೊಂಡು ತನ್ನ ತಾಯಿಗೆ ತಂದುಕೊಟ್ಟನು. ಅವನ ತಾಯಿಯು ಅವನ ತಂದೆಯು ಪ್ರೀತಿಸುವ ರುಚಿಯಾದ ಅಡಿಗೆಯನ್ನು ಸಿದ್ಧಮಾಡಿದಳು.
|
15. ತರು ವಾಯ ರೆಬೆಕ್ಕಳು ಮನೆಯಲ್ಲಿ ತನ್ನ ಬಳಿಯಲ್ಲಿದ್ದ ಹಿರೀಮಗನಾದ ಏಸಾವನ ಒಳ್ಳೇ ವಸ್ತ್ರವನ್ನು ತಕ್ಕೊಂಡು ಕಿರೀಮಗನಾದ ಯಾಕೋಬನಿಗೆ ಉಡಿಸಿದಳು.
|
18. ಆಗ ಅವನು ತನ್ನ ತಂದೆಯ ಬಳಿಗೆ ಹೋಗಿ--ನನ್ನ ತಂದೆಯೇ ಅಂದನು. ಅದಕ್ಕೆ ಅವನು--ಇಗೋ ಇದ್ದೇನೆ; ನನ್ನ ಮಗನೇ, ನೀನು ಯಾರು ಅಂದನು.
|
19. ಯಾಕೋಬನು ತನ್ನ ತಂದೆಗೆನಾನು ನಿನ್ನ ಹಿರೀ ಮಗನಾದ ಏಸಾವನು; ನೀನು ನನಗೆ ಹೇಳಿದಂತೆ ಮಾಡಿದ್ದೇನೆ; ಎದ್ದು ಕೂತು ಕೊಂಡು. ನಿನ್ನ ಪ್ರಾಣವು ನನ್ನನ್ನು ಆಶೀರ್ವದಿ ಸುವಂತೆ ನನ್ನ ಬೇಟೆಯ ಮಾಂಸವನ್ನು ಊಟಮಾಡು ಅಂದನು.
|
20. ಇಸಾಕನು ತನ್ನ ಮಗನಿಗೆ--ನನ್ನ ಮಗನೇ, ಇಷ್ಟು ಬೇಗ ಅದು ನಿನಗೆ ಹೇಗೆ ಸಿಕ್ಕಿತು ಅಂದನು. ಅವನು--ನಿನ್ನ ದೇವರಾದ ಕರ್ತನು ನನ್ನೆದುರಿಗೆ ಅದು ಬರುವಂತೆ ಮಾಡಿದನು ಅಂದನು.
|
21. ಆಗ ಇಸಾಕನುನನ್ನ ಮಗನೇ, ನೀನೇ ನನ್ನ ಮಗನಾದ ಏಸಾವನು ಹೌದೋ ಅಲ್ಲವೋ ಎಂದು ನಾನು ನಿನ್ನನ್ನು ಮುಟ್ಟಿ ನೋಡುವಂತೆ ಹತ್ತಿರ ಬಾ ಅಂದನು.
|
22. ಆಗ ಯಾಕೋಬನು ತನ್ನ ತಂದೆಯಾದ ಇಸಾಕನ ಹತ್ತಿರ ಬಂದನು. ಇಸಾಕನು ಅವನನ್ನು ಮುಟ್ಟಿ--ಸ್ವರವು ಯಾಕೋಬನ ಸ್ವರವಾಗಿದೆ, ಆದರೆ ಕೈಗಳು ಏಸಾವನ ಕೈಗಳು ಎಂದು ಹೇಳಿದನು.
|
23. ಅವನ ಕೈಗಳು ಅವನ ಅಣ್ಣನಾದ ಏಸಾವನ ಕೈಗಳಂತೆ ರೋಮಗಳುಳ್ಳವುಗಳಾಗಿದ್ದದರಿಂದ ಅವನು ಯಾರೆಂದು ತಿಳಿಯದೆ ಅವನನ್ನು ಆಶೀರ್ವದಿಸಿದನು.
|
25. ಆಗ ಅವನು--ಅದನ್ನು ನನ್ನ ಹತ್ತಿರ ತಕ್ಕೊಂಡು ಬಾ, ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ನನ್ನ ಮಗನ ಬೇಟೆಯ ಮಾಂಸವನ್ನು ಊಟ ಮಾಡುವೆನು ಅಂದನು; ಆಗ ಯಾಕೋಬನು ಅದನ್ನು ಹತ್ತಿರ ತಕ್ಕೊಂಡು ಬಂದಾಗ ಅವನು ಊಟಮಾಡಿ ದ್ರಾಕ್ಷಾರಸವನ್ನು ತಂದಾಗ ಅವನು ಕುಡಿದನು.
|
27. ಆಗ ಯಾಕೋಬನು ಹತ್ತಿರ ಬಂದು ಮುದ್ದಿಟ್ಟನು. ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ ಅವನನ್ನು ಆಶೀರ್ವದಿಸಿ--ಇಗೋ, ನನ್ನ ಮಗನ ವಾಸನೆಯು ಯೆಹೋವನು ಆಶೀರ್ವದಿಸಿದ ಹೊಲದ ವಾಸನೆಯಂತಿದೆ.
|
29. ಜನಗಳು ನಿನ್ನನ್ನು ಸೇವಿಸಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆ ಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ, ನಿನ್ನನ್ನು ಶಪಿಸುವವರಿಗೆ ಶಾಪವೂ ಆಶೀರ್ವದಿಸುವ ವರಿಗೆ ಆಶೀರ್ವಾದವೂ ಆಗಲಿ ಅಂದನು.
|
30. ಇಸಾ ಕನು ಯಾಕೋಬನನ್ನು ಆಶೀರ್ವದಿಸಿದ ತರುವಾಯ ಯಾಕೋಬನು ತನ್ನ ತಂದೆಯಾದ ಇಸಾಕನ ಸಮ್ಮುಖದಿಂದ ಹೊರಟಾಗ ಅವನ ಸಹೋದರನಾದ ಏಸಾವನು ಬೇಟೆಯಿಂದ ಬಂದನು.
|
31. ಅವನು ಸಹ ರುಚಿಯಾದ ಊಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು--ನನ್ನ ತಂದೆಯು ಎದ್ದು ನಿನ್ನ ಪ್ರಾಣವು ನನ್ನನ್ನು ಆಶೀರ್ವದಿಸುವಂತೆ ತನ್ನ ಮಗನ ಬೇಟೆಯ ಮಾಂಸವನ್ನು ಊಟಮಾಡಲಿ ಅಂದನು.
|
33. ಆಗ ಇಸಾಕನು ಬಹಳವಾಗಿ ನಡುಗುತ್ತಾ ಹೇಳಿದ್ದೇನಂದರೆ--ನೀನು ಬರುವದಕ್ಕಿಂತ ಮೊದಲು ಬೇಟೆಯಾಡಿ ನನಗೆ ತಂದವನು ಯಾರು? ಅವನು ಎಲ್ಲಿದ್ದಾನೆ? ನೀನು ಬರುವದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವ ದಿಸಿದೆನು. ಹೌದು, ಅವನು ಆಶೀರ್ವದಿಸಲ್ಪಟ್ಟಿರಲಿ ಅಂದನು.
|
34. ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿದಾಗ ಅವನು ಅತಿ ವ್ಯಥೆಪಟ್ಟು ಗಟ್ಟಿಯಾದ ಸ್ವರದಿಂದ ಅತ್ತನು. ತನ್ನ ತಂದೆಗೆ--ತಂದೆಯೇ, ನನ್ನನ್ನು ಕೂಡಾ ಆಶೀರ್ವದಿಸು ಅಂದನು.
|
36. ಅದಕ್ಕೆ ಅವನು--ಅವನಿಗೆ ಯಾಕೋಬನೆಂಬ ಹೆಸರು ಸರಿಯಲ್ಲವೋ. ಈ ಎರಡು ಸಾರಿ ಅವನು ನನ್ನನ್ನು ವಂಚಿಸಿದ್ದಾನೆ; ಅವನು ನನ್ನ ಚೊಚ್ಚಲತನ ವನ್ನು ತಕ್ಕೊಂಡಿದ್ದಾನೆ; ಇಗೋ, ಈಗ ನನ್ನ ಆಶೀರ್ವಾದವನ್ನೂ ತಕ್ಕೊಂಡಿದ್ದಾನೆ. ನೀನು ನನಗೋಸ್ಕರ ಒಂದಾದರೂ ಆಶೀರ್ವಾದವನ್ನು ಉಳಿಸ ಲಿಲ್ಲವೋ ಅಂದನು.
|
37. ಇಸಾಕನು ಪ್ರತ್ಯುತ್ತರವಾಗಿ ಏಸಾವನಿಗೆ--ಇಗೋ, ಅವನನ್ನು ನಿನಗೆ ದೊರೆಯಾಗಿ ಇಟ್ಟು ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕ ರನ್ನಾಗಿ ಕೊಟ್ಟು ಧಾನ್ಯದಿಂದಲೂ ದ್ರಾಕ್ಷಾರಸ ದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ ಅಂದನು.
|
38. ಏಸಾವನು ತನ್ನ ತಂದೆಗೆ--ನನ್ನ ತಂದೆಯೇ, ಆ ಒಂದೇ ಆಶೀರ್ವಾದವು ನಿನಗೆ ಇದೆಯೋ? ತಂದೆಯೇ, ನನ್ನನ್ನೂ ಹೌದು, ನನ್ನನ್ನೂ ಆಶೀರ್ವದಿಸು ಎಂದು ಅವನು ಗಟ್ಟಿಯಾಗಿ ಕೂಗಿ ಅತ್ತನು.
|
39. ಆಗ ಅವನ ತಂದೆಯಾದ ಇಸಾಕನು ಪ್ರತ್ಯುತ್ತರವಾಗಿ ಅವನಿಗೆ--ಇಗೋ, ನಿನ್ನ ನಿವಾಸವು ಭೂಮಿಯಸಾರ ದಿಂದಲೂ ಆಕಾಶದ ಮಂಜಿನಿಂದಲೂ ಇರುವದು.
|
40. ನಿನ್ನ ಕತ್ತಿಯಿಂದಲೇ ನೀನು ಬದುಕುವಿ, ನಿನ್ನ ಸಹೋದರನನ್ನು ಸೇವಿಸುವಿ; ಆದರೆ ನಿನಗೆ ಪ್ರಭುತ್ವವು ಬಂದಾಗ ಆಗುವದೇನಂದರೆ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದು ಹಾಕುವಿ.
|
41. ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು.
|
42. ರೆಬೆಕ್ಕಳಿಗೆ ತನ್ನ ಹಿರೀ ಮಗನಾದ ಏಸಾವನ ಮಾತುಗಳು ತಿಳಿಸಲ್ಪಟ್ಟಾಗ ಆಕೆಯು ತನ್ನ ಕಿರೀ ಮಗನಾದ ಯಾಕೋಬನನ್ನು ಕರೇಕಳುಹಿಸಿ ಅವನಿಗೆ--ಇಗೋ, ನಿನ್ನ ಸಹೋದರ ನಾದ ಏಸಾವನು ನಿನ್ನನ್ನು ಕೊಂದು ತನ್ನನ್ನು ಸಂತೈಸಿಕೊಳ್ಳುವದಕ್ಕಿದ್ದಾನೆ.
|
43. ಆದದರಿಂದ ಈಗ ನನ್ನ ಮಗನೇ, ನನ್ನ ಮಾತಿಗೆ ವಿಧೇಯನಾಗು; ಎದ್ದು ಹಾರಾನಿನಲ್ಲಿರುವ ನನ್ನ ಸಹೋದರನಾದ ಲಾಬಾನನ ಬಳಿಗೆ ಓಡಿಹೋಗು.
|
45. ನಿನ್ನ ಕಡೆಗಿರುವ ನಿನ್ನ ಸಹೋದರನ ಕೋಪವು ತೀರಿಹೋಗಿ ನೀನು ಅವನಿಗೆ ಮಾಡಿದ್ದನ್ನು ಅವನು ಮರೆಯುವ ವರೆಗೆ ಅಲ್ಲೇ ಇರು. ತರುವಾಯ ನಾನು ಕಳುಹಿಸಿ ನಿನ್ನನ್ನು ಅಲ್ಲಿಂದ ಕರೆಯಿಸುವೆನು. ಒಂದೇ ದಿನದಲ್ಲಿ ನಾನು ನಿಮ್ಮಿಬ್ಬರನ್ನು ಕಳಕೊಳ್ಳುವದು ಯಾಕೆ ಅಂದಳು.
|
46. ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
|