2. ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಕಾನಾನ್ ದೇಶದೊಳಗೆ ಬರುವಾಗ ನಿಮಗೆ ಸ್ವಾಸ್ತ್ಯಕ್ಕಾಗಿ ಬರುವ ಕಾನಾನ್ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು.
|
3. ಹೇಗೆ ಅಂದರೆ ನಿಮ್ಮ ದಕ್ಷಿಣ ಕಡೆಯು ಜಿನ್ ಅರಣ್ಯದಿಂದ ಎದೋಮಿಗೆ ಅನುಸಾರವಾಗಿರಬೇಕು; ನಿಮ್ಮ ದಕ್ಷಿಣ ಮೇರೆಯು ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು.
|
4. ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್ ದಿನ್ನೆಗೆ ತಿರುಗಿ ಜಿನ್ಗೆ ಹಾದು ಕಾದೇಶ್ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು ಅಲ್ಲಿಂದ ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು.
|
11. ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ.
|
12. ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರ ವಾಗಿ ಇಳಿದು ಉಪ್ಪಿನ ಸಮುದ್ರದಲ್ಲಿ ಮುಗಿಯುವದು; ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು.
|
13. ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾ ಪಿಸಿ--ನೀವು ಚೀಟಿನಿಂದ ಸ್ವಾಧೀನಪಡಿಸಿಕೊಳ್ಳ ಬೇಕಾದ ದೇಶವು ಒಂಭತ್ತುವರೆ ಗೋತ್ರಗಳಿಗೆ ಕೊಡ ಬೇಕೆಂದು ಕರ್ತನು ಆಜ್ಞಾಪಿಸಿದ ದೇಶವು ಇದೇ.
|
14. ರೂಬೇನನ ಮಕ್ಕಳ ಗೋತ್ರವೂ ಗಾದನ ಮಕ್ಕಳ ಗೋತ್ರವೂ ಮನಸ್ಸೆಯ ಅರ್ಧ ಗೋತ್ರವೂ ತಮ್ಮ ಪಿತೃಗಳ ಮನೆಯ ಪ್ರಕಾರವಾಗಿ ತಮ್ಮ ಸ್ವಾಸ್ತ್ಯವನ್ನು ಪಡೆದುಕೊಂಡಿದ್ದಾರೆ.
|
15. ಎರಡೂವರೆ ಗೋತ್ರಗಳು ತಮ್ಮ ಸ್ವಾಸ್ತ್ಯವನ್ನು ಯೊರ್ದನಿನ ಈಚೆಯಲ್ಲಿ ಯೆರಿ ಕೋವಿಗೆ ಸೂರ್ಯನು ಉದಯಿಸುವ ಪೂರ್ವ ದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ ಎಂದು ಹೇಳಿದನು.
|
28. ನಫ್ತಾಲಿಯ ಮಕ್ಕಳ ಗೋತ್ರದ ಪ್ರಧಾನನು ಅವ್ಮೆಾಹೂದನ ಮಗನಾದ ಪೆದಹೇಲನೂ.ಕಾನಾನ್ ದೇಶದಲ್ಲಿ ಇಸ್ರಾಯೇಲ್ ಮಕ್ಕಳಿಗೆ ಸ್ವಾಸ್ತ್ಯವನ್ನು ಹಂಚುವದಕ್ಕೆ ಕರ್ತನು ನೇಮಿಸಿದ ಮನುಷ್ಯರು ಇವರೇ.
|