3. ಅಮ್ರಾಮನ ಮಕ್ಕಳು: ಆರೋನ, ಮೋಶೆ ಮತ್ತು ಮಿರ್ಯಾಮಳು. ಆರೋನನ ಮಕ್ಕಳು: ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್.
|
15. ಯೆಹೂದ ಮತ್ತು ಜೆರುಸಲೇಮಿನ ಜನರು ಸೆರೆ ಒಯ್ಯಲ್ಪಟ್ಟಾಗ ಯೆಹೋಚಾದಾಕನೂ ಅವರೊಂದಿಗೆ ಪರದೇಶಕ್ಕೆ ಹೋಗಬೇಕಾಯಿತು. ಯೆಹೋವನು ಯೆಹೂದ್ಯರನ್ನು ಮತ್ತು ಜೆರುಸಲೇಮಿನವರನ್ನು ಪರದೇಶಕ್ಕೆ ಸೆರೆಯಾಳುಗಳಾಗಿ ಒಯ್ಯಲು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.
|
19. ಮೆರಾರಿಯ ಗಂಡುಮಕ್ಕಳು: ಮಹ್ಲೀ ಮತ್ತು ಮುಷೀ. ಇತರ ಲೇವಿ ಕುಲದ ಕುಟುಂಬಗಳ ಪಟ್ಟಿ ಇಲ್ಲಿದೆ. ಈ ಪಟ್ಟಿಯಲ್ಲಿ ತಂದೆಗಳ ಹೆಸರನ್ನು ಮೊದಲು ತಿಳಿಸಿ, ಅವರ ಗಂಡುಮಕ್ಕಳ ಹೆಸರನ್ನು ನಂತರ ತಿಳಿಸಲಾಗಿದೆ.
|
31. ದೇವದರ್ಶನಗುಡಾರದ ಮಹಾಪವಿತ್ರಸ್ಥಳದಲ್ಲಿ ಒಡಂಬಡಿಕೆಯ ಪೆಟ್ಟಿಗೆಯನ್ನು ಇಟ್ಟ ಬಳಿಕ ಅರಸನಾದ ದಾವೀದನು ಗಾಯಕರನ್ನು ಆರಿಸಿದನು.
|
32. ಪವಿತ್ರ ಗುಡಾರದಲ್ಲಿ ಹಾಡುವುದೇ ಇವರ ದೇವರ ಸೇವೆಯಾಗಿತ್ತು. ಸೊಲೊಮೋನನು ಜೆರುಸಲೇಮಿನಲ್ಲಿ ದೇವಾಲಯವನ್ನು ಕಟ್ಟುವ ತನಕ ಇವರು ಗುಡಾರದಲ್ಲಿ ತಮಗೆ ಹೇಳಿರುವ ಪ್ರಕಾರವೇ ಸೇವೆಮಾಡಿದರು.
|
33. ಗಾಯನದ ಮೂಲಕ ಸೇವೆಮಾಡಿದ ತಂದೆಗಳ ಮತ್ತು ಅವರ ಗಂಡುಮಕ್ಕಳ ಪಟ್ಟಿ; ಕೆಹಾತ್ಯನ ಸಂತತಿಯವರಿಂದ ಗಾಯಕನಾದ ಹೇಮಾನ. ಇವನು ಯೋವೇಲನ ಮಗ. ಯೋವೇಲನು ಸಮುವೇಲನ ಮಗ.
|
39. ಹೇಮಾನನ ಸಂಬಂಧಿಯ ಹೆಸರು ಆಸಾಫ್. ಇವನು ಹೇಮಾನನ ಬಲಗಡೆಯಲ್ಲಿದ್ದುಕೊಂಡು ಸೇವೆಮಾಡಿದನು. ಆಸಾಫನು ಬೆರೆಕ್ಯನ ಮಗನು. ಬೆರೆಕ್ಯನು ಶಿಮ್ಮನ ಮಗ.
|
44. ಮೆರಾರೀಯ ಸಂತತಿಯವರು ಹೇಮಾನ ಮತ್ತು ಅಸಾಫನ ಸಂಬಂಧಿಕರು. ಇವರು ಹೇಮಾನನ ಎಡಗಡೆಯಲ್ಲಿ ನಿಂತು ಹಾಡುವ ಗಾಯಕರು. ಏತಾನನು ಕೀಷೀಯ ಮಗ. ಕೀಷೀಯು ಅಬ್ದೀಯ ಮಗ. ಅಬ್ದೀಯ ಮಲ್ಲೂಕನ ಮಗ.
|
48. ಹೇಮಾನ್ ಮತ್ತು ಆಸಾಫನ ಸಹೋದರರು ಲೇವಿಕುಲದವರು. ಲೇವಿಕುಲದವರನ್ನು ಲೇವಿಯರೆಂದು ಕರೆಯುತ್ತಾರೆ. ಲೇವಿಯರು ಪವಿತ್ರಗುಡಾರದ ಸೇವೆಯನ್ನು ಮಾಡಲು ಆರಿಸಲ್ಪಟ್ಟವರು. ಪವಿತ್ರ ಗುಡಾರವು ದೇವರ ನಿವಾಸವಾಗಿತ್ತು.
|
49. ಆದರೆ ಸರ್ವಾಂಗಹೋಮ ಅರ್ಪಿಸುವ ಯಜ್ಞವೇದಿಕೆಯ ಮೇಲೆ ಮತ್ತು ಧೂಪಾರ್ಪಣೆಯ ಯಜ್ಞವೇದಿಕೆಯ ಮೇಲೆ ಧೂಪವರ್ಪಿಸಲು ಆರೋನನ ಸಂತತಿಯವರನ್ನು ಮಾತ್ರ ಆರಿಸಿಕೊಳ್ಳಲಾಗಿತ್ತು. ದೇವರ ನಿವಾಸದ ಮಹಾಪವಿತ್ರ ಸ್ಥಳದಲ್ಲಿ ಆರೋನನ ಸಂತತಿಯವರೇ ಎಲ್ಲಾ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದರು. ಅಲ್ಲದೆ ಇಸ್ರೇಲ್ ಜನರನ್ನು ಶುದ್ಧೀಕರಿಸಲು ಶುದ್ಧೀಕರಣ ಆಚಾರವನ್ನು ಅವರೇ ಮಾಡುತ್ತಿದ್ದರು. ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದ ಎಲ್ಲಾ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಅವರು ಅನುಸರಿಸುತ್ತಿದ್ದರು.
|
54. ಈ ಸ್ಥಳಗಳಲ್ಲಿ ಆರೋನನ ಸಂತತಿಯವರು ವಾಸಿಸಿದರು. ಅವರು ತಮಗೆ ಕೊಟ್ಟಿದ್ದ ಪ್ರದೇಶದಲ್ಲಿ ಪಾಳೆಯಗಳಲ್ಲಿ ವಾಸಮಾಡಿದರು. ಲೇವಿಯರಿಗೆ ಕೊಟ್ಟಿರುವ ಪ್ರಾಂತ್ಯದ ಮೊದಲನೆಯ ಪಾಲು ಕೆಹಾತ್ಯರಿಗೆ ಕೊಡಲ್ಪಟ್ಟಿತು.
|
55. ಅವರಿಗೆ ಹೆಬ್ರೋನ್ ಪಟ್ಟಣವೂ ಅದರ ಸುತ್ತಮುತ್ತಲೂ ಇದ್ದ ಹುಲ್ಲುಗಾವಲುಗಳು ಕೊಡಲ್ಪಟ್ಟವು. ಇದು ಯೆಹೂದ ಪ್ರಾಂತ್ಯದ ಸ್ಥಳವಾಗಿದೆ.
|
57. ಆರೋನನ ಸಂತತಿಯವರಿಗೆ ಹೆಬ್ರೋನ್ ಪಟ್ಟಣವನ್ನೇ ಕೊಟ್ಟರು. ಹೆಬ್ರೋನು ಆಶ್ರಯಪಟ್ಟಣಗಳಲ್ಲಿ ಒಂದಾಗಿತ್ತು. ಅವರಿಗೆ ಬೇರೆ ನಗರಗಳೂ ಕೊಡಲ್ಪಟ್ಟವು: ಲಿಬ್ನ, ಯತ್ತೀರ್, ಎಷ್ಟೆಮೋವ, ಹೀಲ್ಲೇನ್, ದೆಬೀರ್,
|
60. ಬೆನ್ಯಾಮೀನ್ ಕುಲದ ಪ್ರಾಂತ್ಯದಿಂದ ಗಿಬೆಯೋನ್, ಗೆಬಾ, ಅಲೆಮೆತ್ ಮತ್ತು ಅನಾತೋತ್ ಪಟ್ಟಣಗಳೂ ಅದರ ಸುತ್ತಮುತ್ತಲಿದ್ದ ಹೊಲಗಳೂ ಅವರಿಗೆ ದೊರೆತವು. ಒಟ್ಟು ಹದಿಮೂರು ಪಟ್ಟಣಗಳನ್ನು ಕೆಹಾತ್ಯನ ಕುಲದವರಿಗೆ ಕೊಡಲ್ಪಟ್ಟಿತು.
|
62. ಗೇರ್ಷೋಮ್ಯನ ಸಂತತಿಯವರಿಗೆ ಹದಿಮೂರು ಪಟ್ಟಣಗಳು ದೊರಕಿದವು. ಇವು ಇಸ್ಸಾಕಾರ್, ಆಶೇರ್, ನಫ್ತಾಲಿ ಮತ್ತು ಬಾಷಾನ್ ಪ್ರದೇಶದಲ್ಲಿ ವಾಸವಾಗಿದ್ದ ಅರ್ಧ ಮನಸ್ಸೆ ಕುಲದವರಿಂದ ಆ ಪಟ್ಟಣಗಳು ದೊರೆತವು.
|
63. ಮೆರಾರೀ ಸಂತತಿಯವರಿಗೆ ಹನ್ನೆರಡು ಪಟ್ಟಣಗಳು ದೊರೆತವು. ಇವು ರೂಬೇನ್, ಗಾದ್, ಜೆಬುಲೂನ್ ಕುಲದವರ ಸ್ವಾಸ್ತ್ಯದಿಂದ ದೊರೆತವು. ಅವರು ಇದಕ್ಕಾಗಿ ಚೀಟುಹಾಕಿದರು.
|
65. ಅವೆಲ್ಲಾ ಯೆಹೂದ, ಸಿಮೆಯೋನ್ ಮತ್ತು ಬೆನ್ಯಾಮೀನ್ ಕುಲದವರಿಂದ ದೊರಕಿತು. ಯೆಹೂದ ಪಟ್ಟಣಗಳು ಲೇವಿಕುಲದ ಯಾವ ಕುಟುಂಬಗಳಿಗೆ ಸಿಗಬೇಕು ಎಂಬುದನ್ನು ಚೀಟುಹಾಕುವುದರ ಮೂಲಕ ಗೊತ್ತುಪಡಿಸಿಕೊಂಡರು.
|
66. ಎಫ್ರಾಯೀಮ್ ಕುಲದವರು ಕೆಹಾತ್ಯನ ಕುಲದವರಿಗೆ ತಮ್ಮ ಪಾಲಿಗೆ ಬಂದಿದ್ದ ಕೆಲವು ಪಟ್ಟಣಗಳನ್ನು ಬಿಟ್ಟುಕೊಟ್ಟರು. ಈ ಪಟ್ಟಣಗಳನ್ನು ಚೀಟುಹಾಕುವುದರ ಮೂಲಕ ನಿರ್ಧರಿಸಲಾಯಿತು.
|
69. ಅಯ್ಯಾಲೋನ್ ಮತ್ತು ಗತ್ರಿಮ್ಮೋನ್ ಪಟ್ಟಣಗಳೂ ಅವುಗಳ ಸುತ್ತಮುತ್ತಲಿದ್ದ ಹೊಲಗಳೂ ಅವರಿಗೆ ದೊರಕಿದವು. ಇವು ಎಫ್ರಾಯೀಮ್ಯರ ಬೆಟ್ಟಪ್ರದೇಶದಲ್ಲಿ ಇವೆ.
|
70. ಮನಸ್ಸೆಯ ಅರ್ಧಕುಲದವರು ಆನೇರ್ ಮತ್ತು ಬಿಳ್ಳಾಮ್ ಎಂಬ ನಗರಗಳನ್ನು ಕೆಹಾತ್ ಸಂತಾನದ ಉಳಿದವರಿಗೂ ಕೊಟ್ಟರು. ಅವುಗಳೊಡನೆ ಹೊಲಗಳೂ ಅವರಿಗೆ ದೊರಕಿದವು.
|
71. ಗೇರ್ಷೋಮ್ ಕುಟುಂಬದವರಿಗೆ ಮನಸ್ಸೆಯ ಅರ್ಧಕುಲದವರಿಂದ ಬಾಷಾನಿನಲ್ಲಿರುವ ಗೋಲಾನ್ ಮತ್ತು ಅಷ್ಟಾರೋಟ್ ಎಂಬ ಪಟ್ಟಣಗಳೂ ಅದಕ್ಕೆ ಸೇರಿದ ಹೊಲಗಳೂ ದೊರೆತವು.
|
76. ಗೇರ್ಷೋಮ್ ಕುಟುಂಬದವರಿಗೆ ಗಲಿಲಾಯ ಪ್ರಾಂತ್ಯದ ಕಾದೇಶಿನಲ್ಲಿದ್ದ ಪಟ್ಟಣಗಳೂ ಹಮ್ಮೋನ್ ಮತ್ತು ಕಿರ್ಯಾತಯಿಮ್ ಎಂಬ ಪಟ್ಟಣಗಳೂ ಮತ್ತು ಅವುಗಳ ಸಮೀಪದಲ್ಲಿದ್ದ ಹೊಲಗಳೂ ನಫ್ತಾಲಿ ಕುಲದವರಿಂದ ದೊರಕಿದವು.
|
77. ಉಳಿದ ಲೇವಿಯರೆಂದರೆ, ಮೆರಾರೀಕುಲಕ್ಕೆ ಸೇರಿದವರು. ಅವರಿಗೆ ಜೆಬುಲೂನ್ ಕುಲದವರಿಂದ ರಿಮ್ಮೋನೋ ಮತ್ತು ತಾಬೋರ್ ಪಟ್ಟಣಗಳೂ ಅವುಗಳ ಸಮೀಪದಲ್ಲಿದ್ದ ಹೊಲಗಳೂ ದೊರೆತವು.
|