3. ಅವನು ಮೂವತ್ತು ವರ್ಷದ ಮತ್ತು ಅದಕ್ಕಿಂತ ಮೇಲ್ಪಟ್ಟ ಲೇವಿಯರನ್ನು ಲೆಕ್ಕಿಸಿದಾಗ ಒಟ್ಟು ಮೂವತ್ತೆಂಟು ಸಾವಿರ ಮಂದಿ ಪುರುಷರಿದ್ದರು.
|
4. ದಾವೀದನು, “ಇವರಲ್ಲಿ ಇಪ್ಪತ್ನಾಲ್ಕು ಸಾವಿರ ಮಂದಿ ಲೇವಿಯರು ದೇವಾಲಯದ ಕಟ್ಟಡದ ಮೇಲ್ವಿಚಾರಕರಾಗಿಯೂ ಆರು ಸಾವಿರ ಮಂದಿ ಲೇವಿಯರು ನ್ಯಾಯಾಧೀಶರಾಗಿಯೂ ಕಾನೂನು ಪಾಲಕರಾಗಿಯೂ
|
5. ನಾಲ್ಕು ಸಾವಿರ ಮಂದಿ ಲೇವಿಯರು ದ್ವಾರಪಾಲಕರಾಗಿಯೂ ನಾಲ್ಕು ಸಾವಿರ ಮಂದಿ ಲೇವಿಯರು ಗಾಯಕರಾಗಿಯೂ ಸೇವೆ ಮಾಡಬೇಕು. ನಾನು ಅವರಿಗಾಗಿ ವಿಶೇಷ ವಾದ್ಯಗಳನ್ನು ತಯಾರಿಸಿಟ್ಟಿರುತ್ತೇನೆ. ಅವರು ಅವುಗಳನ್ನು ನುಡಿಸುತ್ತಾ ದೇವರಿಗೆ ಸ್ತೋತ್ರ ಮಾಡಬೇಕು” ಅಂದನು.
|
9. ಶಿಮ್ಮೀಯನ ಗಂಡುಮಕ್ಕಳು ಯಾರೆಂದರೆ: ಶೆಲೋಮೋತ್, ಹಜೀಯೇಲ್ ಮತ್ತು ಹಾರಾನ್. ಈ ಮೂವರು ಲದ್ದಾನನ ಸಂತತಿಯವರ ಮುಖಂಡರಾಗಿದ್ದರು.
|
11. ಯಹತನು ಚೊಚ್ಚಲಮಗನು. ಜೀಜನು ಎರಡನೆಯವನು. ಯೆಯೂಷನಿಗೂ ಬೆರೀಯನಿಗೂ ಹೆಚ್ಚು ಮಕ್ಕಳಿರಲಿಲ್ಲ. ಆದುದರಿಂದ ಅವರಿಬ್ಬರನ್ನು ಒಂದೇ ಕುಟುಂಬವೆಂದು ಲೆಕ್ಕಿಸಲಾಯಿತು.
|
13. ಅಮ್ರಾಮನ ಗಂಡುಮಕ್ಕಳು ಯಾರೆಂದರೆ: ಆರೋನ್ ಮತ್ತು ಮೋಶೆ. ಆರೋನನು ಮತ್ತು ಅವನ ಸಂತತಿಯವರು ಮಹಾಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟರು; ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪ ಸುಡುವುದಕ್ಕಾಗಿಯೂ ಆತನ ಸೇವೆಮಾಡುವುದಕ್ಕಾಗಿಯೂ ಯೆಹೋವನ ಹೆಸರಿನಲ್ಲಿ ಜನರನ್ನು ಸದಾಕಾಲ ಆಶೀರ್ವದಿಸುವುದಕ್ಕಾಗಿಯೂ ಆರಿಸಲ್ಪಟ್ಟರು.
|
22. ಎಲ್ಲಾಜಾರನು ಗಂಡುಮಕ್ಕಳಿಲ್ಲದೆ ಸತ್ತನು. ಅವನಿಗೆ ಹೆಣ್ಣುಮಕ್ಕಳು ಮಾತ್ರವೇ ಇದ್ದರು. ಇವರು ತಮ್ಮ ಸಂಬಂಧಿಕರಲ್ಲಿಯೇ ಮದುವೆಯಾದರು. ಕೀಷನ ಗಂಡುಮಕ್ಕಳು ಅವರ ಸಂಬಂಧಿಕರಾಗಿದ್ದರು.
|
24. ಇವರೇ ಲೇವಿಯರ ಸಂತತಿಯವರು. ಇವರೇ ಆಯಾ ಕುಟುಂಬಗಳ ಪ್ರಧಾನರು. ಇವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಅದಕ್ಕಿಂತ ಮೇಲ್ಪಟ್ಟವರನ್ನು ಮಾತ್ರ ಲೆಕ್ಕಿಸಲಾಯಿತು. ಅವರು ದೇವಾಲಯದಲ್ಲಿ ಸೇವೆಮಾಡಿದರು.
|
25. ದಾವೀದನು, “ಇಸ್ರೇಲರ ದೇವರಾದ ಯೆಹೋವನು ತನ್ನ ಜನರಿಗೆ ಸಮಾಧಾನವನ್ನು ಅನುಗ್ರಹಿಸಿದ್ದಾನೆ. ದೇವರು ನಿರಂತರವೂ ಜೆರುಸಲೇಮಿನಲ್ಲಿ ವಾಸಿಸಲು ಬಂದಿರುತ್ತಾನೆ.
|
26. ಆದುದರಿಂದ ಇನ್ನು ಮುಂದೆ ಲೇವಿಯರಿಗೆ ದೇವದರ್ಶನ ಗುಡಾರವನ್ನಾಗಲೀ ಅದರ ಸಾಮಾಗ್ರಿಗಳನ್ನಾಗಲೀ ಹೊರುವ ಅವಶ್ಯವಿಲ್ಲ” ಎಂದು ಹೇಳಿದ್ದನು.
|
27. ದಾವೀದನ ಕೊನೇ ಆಜ್ಞೆಯ ಪ್ರಕಾರ ಲೇವಿ ವಂಶದವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಅದಕ್ಕಿಂತ ಮೇಲ್ಪಟ್ಟವರನ್ನು ಲೆಕ್ಕಿಸಲಾಯಿತು.
|
28. ಲೇವಿಯರು ಆರೋನನ ಸಂತತಿಯವರಾದ ಯಾಜಕರಿಗೆ ದೇವಾಲಯದಲ್ಲಿ ಸೇವೆಮಾಡಲು ಸಹಾಯ ಮಾಡುತ್ತಿದ್ದರು. ಇದಲ್ಲದೆ ಅವರು ದೇವಾಲಯದ ಹೊರಗಿನ ಅಂಗಳವನ್ನೂ ದೇವಾಲಯದ ಎಡಬಲಗಡೆಗಳಲ್ಲಿದ್ದ ಕೋಣೆಗಳನ್ನೂ ನೋಡಿಕೊಳ್ಳುತ್ತಿದ್ದರು; ಪರಿಶುದ್ಧ ಸಾಮಾಗ್ರಿಗಳನ್ನು ಯಾವಾಗಲೂ ಶುದ್ಧವಾಗಿಡುತ್ತಿದ್ದರು. ಹೀಗೆ ದೇವಾಲಯದ ಸೇವೆಯನ್ನು ಮಾಡುತ್ತಿದ್ದರು.
|
29. ಮಾತ್ರವಲ್ಲದೆ ಅವರು ಗೋಧಿಹಿಟ್ಟನ್ನು ಅಳೆದು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ದೇವಾಲಯದೊಳಗಿರುವ ಮೇಜಿನ ಮೇಲೆ ಇಡುತ್ತಿದ್ದರು.
|
31. ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಬೇರೆ ವಿಶೇಷ ದಿನಗಳಲ್ಲಿಯೂ ದೇವರಿಗೆ ಸಮರ್ಪಿಸುವ ಸರ್ವಾಂಗ ಹೋಮವನ್ನು ತಯಾರು ಮಾಡುತ್ತಿದ್ದರು. ಪ್ರತಿದಿನ ಎಷ್ಟು ಮಂದಿ ಲೇವಿಯರು ಸೇವೆ ಮಾಡಬೇಕೆಂಬುದನ್ನು ಮೊದಲೇ ಗೊತ್ತುಪಡಿಸಲಾಗಿತ್ತು.
|
32. ಹೀಗೆ ಲೇವಿಯರು ತಾವು ಮಾಡಬೇಕಾದ ಕೆಲಸಗಳನ್ನೆಲ್ಲಾ ಮಾಡಿದರು. ಅವರು ಪವಿತ್ರ ಗುಡಾರವನ್ನು ಮತ್ತು ಪವಿತ್ರಸ್ಥಳವನ್ನು ನೋಡಿಕೊಂಡರು; ತಮ್ಮ ಸಂಬಂಧಿಕರೂ ಆರೋನನ ಕುಲದವರೂ ಆಗಿದ್ದ ಯಾಜಕರಿಗೆ ಸಹಾಯ ಮಾಡಿದರು.
|