1. ಅರಸನ ಸೈನ್ಯದಲ್ಲಿ ಸೇವೆಮಾಡಿದವರ ಪಟ್ಟಿ. ಒಂದೊಂದು ತಂಡದವರು, ಇಸ್ರೇಲಿನ ಸೈನ್ಯಾಧಿಕಾರಿಗಳು, ಸಹಸ್ರಾಧಿಪತಿಗಳು ಮತ್ತು ಇತರ ಅಧಿಕಾರಿಗಳು ವರ್ಷದ ಆಯಾ ತಿಂಗಳಲ್ಲಿ ತಮ್ಮ ತಂಡದ ಸರದಿಯ ಪ್ರಕಾರ ಅರಸನ ವಿವಿಧ ಸೇವೆಮಾಡುತ್ತಿದ್ದರು. ಸೈನ್ಯದ ಪ್ರತಿಯೊಂದು ತಂಡದಲ್ಲಿ ಇಪ್ಪತ್ನಾಲ್ಕು ಸಾವಿರ ಪುರುಷರಿದ್ದರು.
|
2. ಮೊದಲನೆಯ ತಿಂಗಳಲ್ಲಿ ಕಾರ್ಯಾಚರಣೆಯಲ್ಲಿರಬೇಕಾದ ತಂಡಕ್ಕೆ ಯಾಷೊಬ್ಬಾಮನು ಮುಖ್ಯಸ್ತನಾಗಿದ್ದನು. ಇವನು ಜಬ್ದೀಯೇಲನ ಮಗನಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಇದ್ದರು.
|
3. ಯಾಷೊಬ್ಬಾಮನು ಪೆರೆಚನ ಸಂತತಿಯವನಾಗಿದ್ದನು. ಇವನು ವರ್ಷದ ಮೊದಲನೆಯ ತಿಂಗಳಲ್ಲಿ ಸೇವೆಮಾಡುವ ಸೈನ್ಯಾಧಿಕಾರಿಯಾಗಿದ್ದನು.
|
4. ಎರಡನೆಯ ತಿಂಗಳಿನ ಸೈನ್ಯಾಧಿಕಾರಿ ಅಹೋಹೀಯನಾದ ದೋದೈ. ಮಿಕ್ಲೋತ್ ಎಂಬವನು ಈ ತಂಡದ ನಾಯಕನಾಗಿದ್ದನು. ಒಟ್ಟು ಇಪ್ಪತ್ತನಾಲ್ಕು ಸಾವಿರ ಮಂದಿ ದೋದೈನ ತಂಡದಲ್ಲಿದ್ದರು.
|
5. ಮೂರನೆಯ ಸೈನ್ಯಾಧಿಪತಿಯು ಬೆನಾಯ. ಇವನು ಯೆಹೋಯಾದನ ಮಗನಾಗಿದ್ದನು. ಇವನು ಮಹಾಯಾಜಕನಾಗಿದ್ದನು. ಇವನೊಂದಿಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಕಾಲಾಳುಗಳು ಇದ್ದರು.
|
6. ಮೂವತ್ತು ವೀರರಲ್ಲಿ ಒಬ್ಬನಾದ ಬೆನಾಯನೇ ಇವನು. ಬೆನಾಯನು ಅವರ ನಾಯಕನಾಗಿದ್ದನು. ಬೆನಾಯನ ಮಗ ಅಮ್ಮೀಜಾಬಾದನು ಬೆನಾಯನ ತಂಡದ ಅಧಿಪತಿಯಾಗಿದ್ದನು.
|
7. ನಾಲ್ಕನೆಯ ಸೇನಾಪತಿಯು ಅಸಾಹೇಲ. ಇವನು ವರುಷದ ನಾಲ್ಕನೆಯ ತಿಂಗಳಿನಲ್ಲಿ ರಾಜ್ಯದ ಸೈನ್ಯದ ಅಧಿಪತಿಯಾಗಿದ್ದನು. ಇವನು ಯೋವಾಬನ ಸೋದರ. ಇವನ ನಂತರ ಅಸಾಹೇಲನ ಮಗನಾದ ಜೆಬದ್ಯನು ಸೈನ್ಯಾಧಿಕಾರಿಯಾದನು. ಅಸಾಹೇಲನ ತಂಡದಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಇದ್ದರು.
|
8. ಐದನೆಯ ಸೈನ್ಯಾಧಿಕಾರಿಯು ಶಮ್ಹೂತ. ಇವನು ಇಜ್ರಾಹ್ಯನ ಸಂತತಿಯವನಾಗಿದ್ದನು. ವರುಷದ ಐದನೆಯ ತಿಂಗಳಿನ ಸೈನ್ಯದ ಮುಖ್ಯಾಧಿಕಾರಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.
|
9. ಆರನೆಯ ಸೈನ್ಯಾಧಿಪತಿಯು ಐರನು. ಇವನು ವರುಷದ ಆರನೆಯ ತಿಂಗಳಲ್ಲಿ ಸೈನ್ಯಾಧಿಕಾರಿಯಾಗಿದ್ದನು. ಇವನು ತೆಕೋವನದ ಇಕ್ಕೇಷನ ಮಗ. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.
|
10. ಹೆಲೆಚನು ಏಳನೆಯ ಸೈನ್ಯಾಧಿಕಾರಿ. ವರುಷದ ಏಳನೆಯ ತಿಂಗಳಲ್ಲಿ ಇವನು ಸೈನ್ಯಾಧಿಕಾರಿಯಾಗಿದ್ದನು. ಇವನು ಎಫ್ರಾಯೀಮ್ ಸಂತತಿಯ ಪೆಲೋನ್ಯನಾಗಿದ್ದನು. ಇವನ ತಂಡದಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.
|
11. ಎಂಟನೆಯ ಸೇನಾಧಿಪತಿಯ ಹೆಸರು ಸಿಬ್ಬಕೈ. ಇವನು ಹುಷ ಊರಿನ ಜೆರಹನ ಸಂತತಿಯವನು. ವರುಷದ ಎಂಟನೆಯ ತಿಂಗಳಿನ ಸೇನಾಧಿಪತಿ. ಇವನ ಕೈ ಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.
|
12. ಒಂಭತ್ತನೆಯ ಸೇನಾಪತಿ ಅಬೀಯೆಜೆರ್. ಇವನು ಅನತೋತ್ ಊರಿನ ಬೆನ್ಯಾಮೀನ್ ಕುಲದವನು. ವರುಷದ ಒಂಭತ್ತನೆಯ ತಿಂಗಳಲ್ಲಿ ಸೈನ್ಯಾಧಿಕಾರಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.
|
13. ಹತ್ತನೆಯ ಸೇನಾಪತಿ ಮಹರೈ. ಇವನು ನೆಟೋಫದ ಜೆರಹನ ಸಂತತಿಯವನು. ವರುಷದ ಹತ್ತನೆಯ ತಿಂಗಳಿಗೆ ಇವನು ಸೈನ್ಯಾಧಿಕಾರಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.
|
14. ಹನ್ನೊಂದನೆಯ ಸೇನಾಪತಿ ಪಿರ್ರಾತೋನ್ಯನಾದ ಬೆನಾಯ. ಇವನು ಎಫ್ರಾಯೀಮ್ ಕುಲದ ಪಿರ್ರಾತೋನ್ ಎಂಬಲ್ಲಿಂದ ಬಂದವನು. ವರುಷದ ಹನ್ನೊಂದನೆಯ ತಿಂಗಳಿಗೆ ಇವನು ಸೇನಾಪತಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಸೈನಿಕರಿದ್ದರು.
|
15. ಹನ್ನೆರಡನೆಯ ಸೇನಾಪತಿ ಹೆಲ್ದೈ. ಇವನು ನೆಟೋಫ ಊರಿನ ಒತ್ನೀಯೇಲನ ಸಂತತಿಯವನು. ವರುಷದ ಹನ್ನೆರಡನೆಯ ತಿಂಗಳಿನಲ್ಲಿ ಇವನು ಸೇನಾಪತಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಸೈನಿಕರಿದ್ದರು.
|
16. ಇಸ್ರೇಲ್ ಕುಲಗಳ ನಾಯಕರು ಯಾರೆಂದರೆ: ರೂಬೇನ್ಯರಲ್ಲಿ ಜಿಕ್ರೀಯ ಮಗ ಎಲೀಯೆಜರ್. ಸಿಮೆಯೋನ್ಯರಲ್ಲಿ ಮಾಕನ ಮಗನಾದ ಶೆಫಟ್ಯ.
|
23. ದೇವರು ಇಸ್ರೇಲರನ್ನು ಆಕಾಶದ ನಕ್ಷತ್ರದಷ್ಟು ಹೆಚ್ಚಿಸುವೆನೆಂದು ವಾಗ್ದಾನ ಮಾಡಿದ್ದ ಪ್ರಕಾರ ಇಸ್ರೇಲರ ಸಂಖ್ಯೆ ಅಪರಿಮಿತವಾಗಿತ್ತು. ಆದುದರಿಂದ ದಾವೀದನು ಇಪ್ಪತ್ತು ವರ್ಷ ಪ್ರಾಯದ ಮೇಲ್ಪಟ್ಟ ಗಂಡಸರನ್ನು ಮಾತ್ರ ಲೆಕ್ಕಿಸುವ ಆಲೋಚನೆ ಮಾಡಿದನು.
|
24. ಚೆರೂಯಳ ಮಗನಾದ ಯೋವಾಬನು ಲೆಕ್ಕಿಸುವ ಕಾರ್ಯ ಪ್ರಾರಂಭಿಸಿದನು. ಆದರೆ ಅವನು ಪೂರ್ಣಗೊಳಿಸಲಿಲ್ಲ. ದೇವರು ಇಸ್ರೇಲರ ಮೇಲೆ ಕೋಪಗೊಂಡನು. ಇದರಿಂದಾಗಿ ಇಸ್ರೇಲರ ಜನಸಂಖ್ಯೆಯನ್ನು ದಾವೀದನ ಚರಿತ್ರಾ ಪುಸ್ತಕದಲ್ಲಿ ದಾಖಲೆ ಮಾಡಲಿಲ್ಲ.
|
25. ಅರಸನ ಆಸ್ತಿಗೆ ಜವಾಬ್ದಾರರಾಗಿದ್ದವರ ಪಟ್ಟಿ: ಅದೀಯೇಲನ ಮಗನಾದ ಅಜ್ಮಾವೆತ್. ಇವನು ರಾಜನ ಉಗ್ರಾಣಗಳ ಅಧಿಕಾರಿಯಾಗಿದ್ದನು. ಉಜ್ಜೀಯನ ಮಗನಾದ ಯೋನಾತಾನ್; ಇವನು ಚಿಕ್ಕ ಊರುಗಳಲ್ಲಿ, ಹಳ್ಳಿಗಳಲ್ಲಿ, ಹೊಲಗಳಲ್ಲಿ ಮತ್ತು ಗೋಪುರಗಳಲ್ಲಿ ಇದ್ದ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು.
|
27. ರಾಮಾದ ಶಿಮ್ಮಾಯು ರಾಜನ ದ್ರಾಕ್ಷಿತೋಟಗಳ ಅಧಿಕಾರಿಯಾಗಿದ್ದನು. ಶಿಷ್ಮೀಯದ ಜಬ್ದೀಯು ರಾಜನ ದ್ರಾಕ್ಷಿತೋಟಗಳಿಂದ ದೊರಕಿದ ದ್ರಾಕ್ಷಾರಸದ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು.
|
28. ಗೆದೆರಿನ ಬಾಳ್ಹಾನಾನ್ ಪಶ್ಚಿಮದ ಬೆಟ್ಟಪ್ರದೇಶದಲ್ಲಿ ಆಲಿವ್ ಮರಗಳ ಮತ್ತು ಸಿಖಮೊರ್ ಮರಗಳ ತೋಪುಗಳಿಗೆ ಅಧಿಕಾರಿಯಾಗಿದ್ದನು. ಯೋವಾಷನು ಆಲಿವ್ ಎಣ್ಣೆಯ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು.
|
29. ಶಾರೋನಿನ ಶಿಟ್ರೈಯು ಶಾರೋನಿನ ಸುತ್ತಮುತ್ತಲಿದ್ದ ರಾಜನ ಕುರಿದನಗಳ ಹಿಂಡುಗಳ ಅಧಿಕಾರಿಯಾಗಿದ್ದನು. ತಗ್ಗು ಪ್ರದೇಶಗಳಲ್ಲಿದ್ದ ರಾಜನ ಪಶುಗಳ ಹಿಂಡುಗಳಿಗೆ ಅದ್ಲ್ಯೆಯ ಮಗ ಶಾಫಾಟನು ಅಧಿಕಾರಿಯಾಗಿದ್ದನು.
|
30. ಇಷ್ಮಾಯೇಲ್ಯನಾದ ಓಬೀಲನು ಒಂಟೆಗಳ ಮೇಲೆ ಅಧಿಕಾರಿಯಾಗಿದ್ದನು. ಮೇರೊನೋತ್ಯನಾದ ಯೆಹ್ದೆಯು ರಾಜನ ಕತ್ತೆಗಳ ಹಿಂಡಿಗೆ ಅಧಿಕಾರಿಯಾಗಿದ್ದನು.
|
31. ಹಗ್ರೀಯನಾದ ಯಾಜೀಜನು ರಾಜನ ಕುರಿಹಿಂಡುಗಳ ಮೇಲೆ ಅಧಿಕಾರಿಯಾಗಿದ್ದನು. ಇವರೆಲ್ಲರೂ ರಾಜನ ಆಸ್ತಿಪಾಸ್ತಿಗಳ ಮೇಲ್ವಿಚಾರಕರಾಗಿದ್ದರು.
|
32. ದಾವೀದನ ಚಿಕ್ಕಪ್ಪನಾದ ಯೋನಾತಾನನು ಉತ್ತಮ ಸಲಹೆಗಾರನಾಗಿದ್ದನು. ಹಕ್ಮೋನಿಯ ಮಗನಾದ ಯೆಹೀಯೇಲನು ರಾಜನ ಗಂಡುಮಕ್ಕಳನ್ನು ಪಾಲನೆ ಮಾಡುತ್ತಿದ್ದನು. 33ಅಹೀತೋಫೆಲನು ರಾಜನ ಮಂತ್ರಾಲೋಚಕನಾಗಿದ್ದನು. ಹೂಷೈ ರಾಜನ ಮಿತ್ರನಾಗಿದ್ದನು. ಇವನು ಅರ್ಕೀಯ ಜನರಿಗೆ ಸೇರಿದವನಾಗಿದ್ದನು.
|
33. ಬೆನಾಯನ ಮಗನಾದ ಯೆಹೋಯಾದವನೂ ಎಬ್ಯಾತಾರನೂ ಅಹೀತೋಫೆಲನ ತರುವಾಯ ರಾಜನ ಮಂತ್ರಾಲೋಚಕರಾದರು. ರಾಜನ ಸೈನ್ಯಕ್ಕೆ ಯೋವಾಬನು ಪ್ರಧಾನಸೇನಾಪತಿಯಾಗಿದ್ದನು.
|