ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
1 ಪೂರ್ವಕಾಲವೃತ್ತಾ
1. {ದೇವಾಲಯ ಕಟ್ಟಲು ಕೊಟ್ಟ ಕಾಣಿಕೆ} [PS] ನೆರೆದುಬಂದಿದ್ದ ಇಸ್ರೇಲರೆಲ್ಲರಿಗೆ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನು ಆರಿಸಿಕೊಂಡಿರುತ್ತಾನೆ. ಅವನು ಇನ್ನೂ ಎಳೆಪ್ರಾಯದವನಾಗಿರುವದರಿಂದ ಈ ಕಾರ್ಯವನ್ನು ಮಾಡಿಸಬೇಕಾದ ಜ್ಞಾನವು ಅವನಲ್ಲಿಲ್ಲ. ಆದರೆ ಕೆಲಸವು ಅತಿ ಘನವಾದದ್ದು. ಕಟ್ಟುವ ಆಲಯವು ಮನುಷ್ಯರಿಗಾಗಿಯಲ್ಲ. ದೇವರಾದ ಯೆಹೋವನಿಗಾಗಿಯಷ್ಟೇ.
2. ದೇವಾಲಯವನ್ನು ಕಟ್ಟಲು ಅದಕ್ಕೆ ಬೇಕಾದ ಬೆಳ್ಳಿ, ಬಂಗಾರ, ತಾಮ್ರ ಮುಂತಾದವುಗಳನ್ನು ಬಹು ಪ್ರಯಾಸದಿಂದ ಶೇಖರಿಸಿದ್ದೇನೆ. ಬಂಗಾರದಿಂದ ಮಾಡಬೇಕಾದ ಸಾಮಗ್ರಿಗಳಿಗೆ ಬೇಕಾದ ಬಂಗಾರವನ್ನು ಕೊಟ್ಟಿರುತ್ತೇನೆ. ಬೆಳ್ಳಿಯಿಂದ ತಯಾರಿಸಬೇಕಾದ ಸಾಮಗ್ರಿಗಳಿಗೆ ತಗಲುವ ಬೆಳ್ಳಿಯನ್ನು ಕೊಟ್ಟಿರುತ್ತೇನೆ. ಹಾಗೆಯೇ ತಾಮ್ರದ ವಸ್ತುಗಳಿಗೆ ಬೇಕಾಗುವ ತಾಮ್ರವನ್ನು ಕೊಟ್ಟಿದ್ದೇನೆ; ಕಬ್ಬಿಣದ ವಸ್ತುಗಳಿಗೆ ಬೇಕಾಗುವ ಕಬ್ಬಿಣವನ್ನು ಕೊಟ್ಟಿದ್ದೇನೆ; ಮರದಿಂದ ಮಾಡುವ ಸಾಮಗ್ರಿಗಳಿಗೆ ಬೇಕಾಗುವ ಮರವನ್ನು ಕೊಟ್ಟಿದ್ದೇನೆ; ನೀಲಿ ಬಣ್ಣದ ರತ್ನಗಳನ್ನು, ಚೌಕಟ್ಟಿಗೆ ಬೇಕಾದ ರತ್ನಗಳನ್ನು, ಹೊಳೆಯುವ ನಾನಾಬಣ್ಣದ ಹರಳುಗಳನ್ನು, ಬಿಳಿಬಣ್ಣದ ಹಾಲುಗಲ್ಲುಗಳನ್ನು ಬೇಕಾದಷ್ಟು ಸಂಗ್ರಹಿಸಿಟ್ಟಿದ್ದೇನೆ.
3. ಅಲ್ಲದೆ ದೇವಾಲಯಕ್ಕೆ ಬೇಕಾದ ಬೆಳ್ಳಿಬಂಗಾರಗಳ ಸಾಮಾನುಗಳನ್ನು ನಾನು ಕಾಣಿಕೆಯಾಗಿ ಕೊಟ್ಟಿರುತ್ತೇನೆ. ಯಾಕೆಂದರೆ ನನ್ನ ದೇವರ ಪರಿಶುದ್ಧಾಲಯವು ಕಟ್ಟಲ್ಪಡಬೇಕೆಂಬುದು ನಿಜವಾಗಿಯೂ ನನ್ನ ಬಯಕೆಯಾಗಿದೆ. ಈ ಪವಿತ್ರ ದೇವಾಲಯವನ್ನು ಕಟ್ಟಲು ನಾನು ಈ ವಸ್ತುಗಳನ್ನೆಲ್ಲಾ ಕೊಡುತ್ತಿದ್ದೇನೆ.
4. ನಾನು ನೂರಹತ್ತು ಟನ್ ತೂಕದ ಓಫೀರಿನ ಅಪ್ಪಟ ಬಂಗಾರವನ್ನೂ ದೇವಾಲಯದ ಗೋಡೆಗಳನ್ನು ಮುಚ್ಚಲು ಬೇಕಾದ ಇನ್ನೂರರವತ್ತು ಟನ್ ತೂಕದ ಬೆಳ್ಳಿಯನ್ನೂ
5. ಬೆಳ್ಳಿಬಂಗಾರಗಳಿಂದ ತಯಾರಿಸಬೇಕಾದ ಎಲ್ಲಾ ವಸ್ತುಗಳಿಗೆ ಬೇಕಾದ ಬೆಳ್ಳಿಬಂಗಾರಗಳನ್ನೂ ಇದರ ನಾಜೂಕು ಕೆಲಸ ಮಾಡುವ ಕುಶಲಕರ್ಮಿಗಳನ್ನೂ ಕೊಟ್ಟಿರುತ್ತೇನೆ. ಈಗ ನಿಮ್ಮಲ್ಲಿ ಎಷ್ಟು ಮಂದಿ ನಿಮ್ಮನ್ನೇ ಯೆಹೋವನಿಗಾಗಿ ಪ್ರತಿಷ್ಠಿಸಿಕೊಳ್ಳುವಿರಿ?” ಎಂದು ಹೇಳಿದನು. [PE][PS]
6. ಆಗ ಇಸ್ರೇಲರ ಕುಲಪ್ರಧಾನರು, ಕುಟುಂಬಗಳ ನಾಯಕರು, ಪ್ರಧಾನಸೇನಾಧಿಪತಿಗಳು, ಸೇನಾಧಿಪತಿಗಳು, ರಾಜನ ಕೆಲಸಕ್ಕಾಗಿ ನೇಮಕಗೊಂಡಿದ್ದ ಅಧಿಕಾರಿಗಳು, ತಮ್ಮಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಕೊಟ್ಟರು.
7. ದೇವಾಲಯಕ್ಕಾಗಿ ಅವರು ಒಟ್ಟು ನೂರತೊಂಭತ್ತು ಟನ್ ತೂಕದ ಬಂಗಾರ, ಮುನ್ನೂರ ಎಪ್ಪತ್ತೈದು ಟನ್ ತೂಕದ ಬೆಳ್ಳಿ, ಆರನೂರ ಎಪ್ಪತ್ತೈದು ಟನ್ ತೂಕದ ತಾಮ್ರ ಮತ್ತು ಮೂರು ಸಾವಿರದ ಏಳುನೂರೈವತ್ತು ಟನ್ ತೂಕದ ಕಬ್ಬಿಣವನ್ನು ಕೊಟ್ಟರು.
8. ಯಾರ ಬಳಿಯಲ್ಲಿ ಬೆಲೆಬಾಳುವ ರತ್ನಗಳಿದ್ದವೋ ಅವುಗಳನ್ನು ದೇವರ ಆಲಯಕ್ಕಾಗಿ ಸಮರ್ಪಿಸಿದರು. ಗೇರ್ಷೋನ್ ಸಂತತಿಯವನಾದ ಯೆಹೀಯೇಲನು ಅವುಗಳನ್ನು ತನ್ನ ವಶಕ್ಕೆ ತೆಗೆದುಕೊಂಡನು.
9. ಇಸ್ರೇಲರ ನಾಯಕರುಗಳು ಪೂರ್ಣಹೃದಯದಿಂದಲೂ ಸ್ವಇಚ್ಛೆಯಿಂದಲೂ ಇಷ್ಟೆಲ್ಲಾ ಕಾಣಿಕೆಗಳನ್ನು ಕೊಟ್ಟಿದ್ದರಿಂದ ಇಸ್ರೇಲರು ಸಂತೋಷಗೊಂಡರು; ಅರಸನಾದ ದಾವೀದನೂ ತುಂಬ ಸಂತೋಷಗೊಂಡನು. [PS]
10. {ದಾವೀದನ ವಿಶೇಷ ಪ್ರಾರ್ಥನೆ} [PS] ನೆರೆದುಬಂದಿದ್ದ ಎಲ್ಲಾ ಜನರ ಮುಂದೆ ದಾವೀದನು ದೇವರಾದ ಯೆಹೋವನನ್ನು ಸ್ತುತಿಸಿ ಹೀಗೆ ಪ್ರಾರ್ಥಿಸಿದನು: “ಇಸ್ರೇಲರ ದೇವರಾದ ಯೆಹೋವನೇ, ನಮ್ಮ ತಂದೆಯೇ, [QBR2] ನಿನಗೆ ನಿರಂತರವಾಗಿ ಕೊಂಡಾಟವಾಗಲಿ. [QBR]
11. ಯೆಹೋವನೇ, ಮಹತ್ವ, ಸಾಮರ್ಥ್ಯ, ಮಹಿಮೆ, ಜಯ ಮತ್ತು ಗೌರವಗಳು ನಿನ್ನವೇ ಆಗಿವೆ. [QBR2] ಭೂಮ್ಯಾಕಾಶಗಳಲ್ಲಿರುವುದೆಲ್ಲಾ ನಿನ್ನವೇ. [QBR] ಯೆಹೋವನೇ, ರಾಜ್ಯವು ನಿನ್ನದೇ. [QBR2] ನೀನೇ ಅದರ ಶಿರಸ್ಸು; ಅದನ್ನಾಳುವಾತನೂ ನೀನೇ. [QBR]
12. ಗೌರವವೂ ಐಶ್ವರ್ಯವೂ ನಿನ್ನಿಂದಲೇ ಹೊರಡುವವು. [QBR2] ಎಲ್ಲವನ್ನು ಆಳುವಾತನು ನೀನೇ. [QBR] ನಿನ್ನ ಬಾಹುಗಳಲ್ಲಿ ಶಕ್ತಿಸಾಮರ್ಥ್ಯವು ತುಂಬಿವೆ. [QBR2] ಯಾರನ್ನೇ ಆಗಲಿ ಮಹಾಪುರುಷರನ್ನಾಗಿಯೂ ಪ್ರಬಲರನ್ನಾಗಿಯೂ ಮಾಡುವ ಶಕ್ತಿಯಿರುವುದು ನಿನ್ನ ಕೈಗಳಲ್ಲಿಯೇ. [QBR]
13. ನಮ್ಮ ದೇವರೇ, ನಿನಗೆ ನಾವು ಕೃತಜ್ಞತೆಯನ್ನು ಸಲ್ಲಿಸುತ್ತೇವೆ. [QBR2] ನಿನ್ನ ಪ್ರಭಾವವುಳ್ಳ ನಾಮವನ್ನು ಸ್ತುತಿಸುತ್ತೇವೆ. [QBR]
14. ನಾವು ಕಾಣಿಕೆಯಾಗಿ ಕೊಟ್ಟಿರುವ ವಸ್ತುಗಳು ನನ್ನಿಂದಾಗಲಿ ಮತ್ತು ನನ್ನ ಜನರಿಂದಾಗಲಿ ಬರಲಿಲ್ಲ. [QBR2] ಇವೆಲ್ಲವೂ ನಿನ್ನಿಂದಲೇ ಬಂದವುಗಳು. [QBR2] ನಿನ್ನಿಂದ ನಾವು ಹೊಂದಿದವುಗಳನ್ನೇ ನಿನಗೆ ಕೊಟ್ಟಿದ್ದೇವೆ. [QBR]
15. ನಾವು ನಮ್ಮ ಪೂರ್ವಿಕರಂತೆ [QBR2] ಈ ಲೋಕದಲ್ಲಿ ಪ್ರವಾಸಿಗಳಾಗಿದ್ದೇವೆ; [QBR] ದಾಟಿಹೋಗುವ ನೆರಳಿನಂತೆ ನಾವು ಈ ಲೋಕದಲ್ಲಿರುತ್ತೇವೆ. [QBR2] ಅದನ್ನು ನಿಲ್ಲಿಸಲು ನಮಗೆ ಸಾಧ್ಯವಿಲ್ಲ. [QBR]
16. ನಮ್ಮ ದೇವರಾದ ಯೆಹೋವನೇ, ನಿನ್ನ ಆಲಯವನ್ನು ಕಟ್ಟುವುದಕ್ಕಾಗಿ ನಾವು ಇವೆಲ್ಲವನ್ನೂ ಒಟ್ಟುಗೂಡಿಸಿದ್ದೇವೆ. [QBR2] ನಿನ್ನ ಪವಿತ್ರ ಹೆಸರನ್ನು ಪ್ರಸಿದ್ಧಿಪಡಿಸಲು ನಾವು ಆಲಯವನ್ನು ಕಟ್ಟುತ್ತೇವೆ. [QBR] ಆದರೆ ಇವೆಲ್ಲಾ ನಿನ್ನಿಂದಲೇ ಬಂದವುಗಳು; [QBR2] ಇವೆಲ್ಲಾ ನಿನಗೇ ಸಂಬಂಧಪಟ್ಟವುಗಳು. [QBR]
17. ನನ್ನ ದೇವರೇ, ಜನರ ಹೃದಯಗಳನ್ನು ಪರೀಕ್ಷಿಸುವೆ. [QBR2] ಜನರು ಒಳ್ಳೆಯ ಕಾರ್ಯವನ್ನು ಯಥಾರ್ಥವಾದ ಹೃದಯದಿಂದ ಮಾಡುವಾಗ ನೀನು ಸಂತೋಷಪಡುವೆ. [QBR] ಈ ವಸ್ತುಗಳನ್ನೆಲ್ಲಾ [QBR2] ನಾನು ಶುದ್ಧಹೃದಯದಿಂದ ಕೊಡುತ್ತಿದ್ದೇನೆ. [QBR] ಇಲ್ಲಿ ನೆರೆದುಬಂದಿರುವವರೆಲ್ಲರೂ [QBR2] ನಿನಗೆ ಕಾಣಿಕೆಯನ್ನು ಸ್ವಯಿಚ್ಛೆಯಿಂದ ಕೊಟ್ಟಿದ್ದಾರೆ. [QBR]
18. ಯೆಹೋವನೇ, ನಮ್ಮ ಪೂರ್ವಿಕರಾದ ಅಬ್ರಹಾಮ, [QBR2] ಇಸಾಕ ಮತ್ತು ಯಾಕೋಬರ ದೇವರು ನೀನೇ. [QBR] ನಿನ್ನ ಜನರು ಸರಿಯಾಗಿ ಯೋಜನೆ ಹಾಕುವಂತೆ ಸಹಾಯಿಸು. [QBR2] ನಿನ್ನನ್ನು ನಿಷ್ಠೆಯಿಂದಲೂ ಸತ್ಯದಿಂದಲೂ ಸೇವೆಮಾಡುವಂತೆ ಸಹಾಯಿಸು. [QBR]
19. ನನ್ನ ಮಗನಾದ ಸೊಲೊಮೋನನೂ ನಿನಗೆ ನಂಬಿಗಸ್ತನಾಗಿರುವಂತೆ ಸಹಾಯಮಾಡು. [QBR2] ನಿನ್ನ ಆಜ್ಞೆ, ಕಟ್ಟಳೆ ಮತ್ತು ನಿಯಮಗಳನ್ನು ಅನುಸರಿಸಲು ಸಹಾಯಮಾಡು. [QBR] ನಿನ್ನ ಮಂದಿರಕ್ಕಾಗಿ ನಾನು ಇಷ್ಟೆಲ್ಲವನ್ನು ಸಿದ್ಧಮಾಡಿರುವೆನಲ್ಲಾ, [QBR2] ಅವನು ಅದನ್ನು ಕಟ್ಟಿ ಪೂರ್ಣಗೊಳಿಸಲು ಸಹಾಯಮಾಡು.” [PS]
20. ನೆರೆದು ಬಂದವರಿಗೆ ದಾವೀದನು, “ದೇವರಾದ ಯೆಹೋವನಿಗೆ ಸ್ತೋತ್ರಮಾಡಿರಿ” ಎಂದನು. ಆಗ ಎಲ್ಲರೂ ಅವರ ಪೂರ್ವಿಕರ ದೇವರಿಗೆ ಸ್ತುತಿಸುತ್ತಾ ತಲೆಬಾಗಿ ದೇವರನ್ನೂ ಅರಸನನ್ನೂ ನಮಸ್ಕರಿಸಿದರು. [PS]
21. {ಸೊಲೊಮೋನನಿಗೆ ಪಟ್ಟಾಭಿಷೇಕ} [PS] ಮರುದಿವಸ ಜನರು ಯೆಹೋವನಿಗೆ ಯಜ್ಞಗಳನ್ನೂ ಸರ್ವಾಂಗಹೋಮಗಳನ್ನೂ ಅರ್ಪಿಸಿದರು. ಒಂದು ಸಾವಿರ ಹೋರಿಗಳು, ಒಂದುಸಾವಿರ ಟಗರುಗಳು, ಒಂದುಸಾವಿರ ಆಡುಗಳು ಮತ್ತು ಪಾನದ್ರವ್ಯಗಳನ್ನು ಅರ್ಪಿಸಿದರು. ಇಡೀ ಇಸ್ರೇಲ್ ಜನಾಂಗಕ್ಕಾಗಿ ಯಜ್ಞವನ್ನರ್ಪಿಸಿದರು.
22. ಆ ದಿವಸ ಸೇರಿಬಂದ ಜನರು ಯೆಹೋವನ ಸನ್ನಿಧಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಉಲ್ಲಾಸಿಸಿದರು. [PE][PS] ಅವರು ದಾವೀದನ ಮಗನಾದ ಸೊಲೊಮೋನನನ್ನು ತಿರಿಗಿ ಅರಸನನ್ನಾಗಿಯೂ ಚಾದೋಕನನ್ನು ಮಹಾಯಾಜಕನನ್ನಾಗಿಯೂ ಯೆಹೋವನ ಸನ್ನಿಧಿಯಲ್ಲಿ ಅಭಿಷೇಕಿಸಿದರು. [PE][PS]
23. ಆ ಬಳಿಕ ಸೊಲೊಮೋನನು ತನ್ನ ತಂದೆಯ ಬದಲಾಗಿ ರಾಜನಾಗಿ ಪ್ರಭುವಿನ ಸಿಂಹಾಸನದ ಮೇಲೆ ಕುಳಿತುಕೊಂಡನು. ಸೊಲೊಮೋನನನ್ನು ಎಲ್ಲಾ ಇಸ್ರೇಲರು ಗೌರವಿಸಿದರು ಮತ್ತು ವಿಧೇಯರಾದರು.
24. ಎಲ್ಲಾ ನಾಯಕರು, ಸೈನಿಕರು ಮತ್ತು ದಾವೀದನ ಗಂಡುಮಕ್ಕಳು ಸೊಲೊಮೋನನನ್ನು ತಮ್ಮ ಅರಸನನ್ನಾಗಿ ಸ್ವೀಕರಿಸಿ ಅವನಿಗೆ ವಿಧೇಯರಾದರು.
25. ಯೆಹೋವನು ಸೊಲೊಮೋನನನ್ನು ಆಶೀರ್ವದಿಸಿ ಅಭಿವೃದ್ಧಿಪಡಿಸಿದನು. ಇಸ್ರೇಲಿನಲ್ಲಿದ್ದ ಯಾವ ಅರಸನಿಗೂ ಸೊಲೊಮೋನನಿಗಿದ್ದಷ್ಟು ಗೌರವವೂ ವೈಭವವೂ ಇರಲಿಲ್ಲ. [PS]
26. {ದಾವೀದನ ಮರಣ} [PS] (26-27) ಇಷಯನ ಮಗನಾದ ದಾವೀದನು ಇಸ್ರೇಲರನ್ನು ನಲವತ್ತು ವರ್ಷ ಆಳಿದನು. ಅವನು ಹೆಬ್ರೋನಿನಲ್ಲಿ ಏಳು ವರ್ಷ ರಾಜ್ಯಪಾಲನೆ ಮಾಡಿದನು ಮತ್ತು ಜೆರುಸಲೇಮಿನಲ್ಲಿ ಮೂವತ್ತುಮೂರು ವರ್ಷ ಆಳಿದನು.
27.
28. ಅವನು ಬಹಳ ಮುದುಕನಾಗಿ ಸತ್ತನು. ಅವನ ದೀರ್ಘಾಯುಷ್ಯದಲ್ಲಿ ಹೆಚ್ಚಾದ ಗೌರವ ಸನ್ಮಾನಗಳು ದೊರೆತವು. ಅವನ ನಂತರ ಮಗನಾದ ಸೊಲೊಮೋನನು ಅರಸನಾದನು. [PE][PS]
29. ಪ್ರಾರಂಭದಿಂದ ಹಿಡಿದು ಕೊನೆಯತನಕ ದಾವೀದನು ಮಾಡಿದ ಎಲ್ಲಾ ಕಾರ್ಯಗಳನ್ನು ದರ್ಶಿಯಾದ ಸಮುವೇಲ, ಪ್ರವಾದಿಯಾದ ನಾತಾನ ಮತ್ತು ದರ್ಶಿಯಾದ ಗಾದ್ ಇವರ ಚರಿತ್ರೆಗಳಲ್ಲಿ ಬರೆಯಲ್ಪಟ್ಟಿವೆ.
30. ಇಸ್ರೇಲಿನ ರಾಜನಾಗಿದ್ದಾಗ ದಾವೀದನು ಮಾಡಿದ ಎಲ್ಲಾ ಸಾಹಸಕಾರ್ಯಗಳನ್ನೂ ಅವನ ಪರಾಕ್ರಮ ಮತ್ತು ಅವನಿಗೆ ಸಂಭವಿಸಿದೆಲ್ಲದ್ದರ ಕುರಿತಾಗಿ ಅವುಗಳಲ್ಲಿ ಬರೆಯಲಾಗಿದೆ. ಇಸ್ರೇಲಿನ ಮತ್ತು ಅದರ ಸಮೀಪದಲ್ಲಿ ಅನ್ಯಜನಾಂಗಗಳ ಕುರಿತಾದ ಸಂಗತಿಗಳನ್ನು ಅವುಗಳಲ್ಲಿ ಬರೆಯಲಾಗಿದೆ. [PE]

ಟಿಪ್ಪಣಿಗಳು

No Verse Added

ಒಟ್ಟು 29 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 29 / 29
1 ಪೂರ್ವಕಾಲವೃತ್ತಾ 29:14
ದೇವಾಲಯ ಕಟ್ಟಲು ಕೊಟ್ಟ ಕಾಣಿಕೆ 1 ನೆರೆದುಬಂದಿದ್ದ ಇಸ್ರೇಲರೆಲ್ಲರಿಗೆ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನು ಆರಿಸಿಕೊಂಡಿರುತ್ತಾನೆ. ಅವನು ಇನ್ನೂ ಎಳೆಪ್ರಾಯದವನಾಗಿರುವದರಿಂದ ಈ ಕಾರ್ಯವನ್ನು ಮಾಡಿಸಬೇಕಾದ ಜ್ಞಾನವು ಅವನಲ್ಲಿಲ್ಲ. ಆದರೆ ಕೆಲಸವು ಅತಿ ಘನವಾದದ್ದು. ಕಟ್ಟುವ ಆಲಯವು ಮನುಷ್ಯರಿಗಾಗಿಯಲ್ಲ. ದೇವರಾದ ಯೆಹೋವನಿಗಾಗಿಯಷ್ಟೇ. 2 ದೇವಾಲಯವನ್ನು ಕಟ್ಟಲು ಅದಕ್ಕೆ ಬೇಕಾದ ಬೆಳ್ಳಿ, ಬಂಗಾರ, ತಾಮ್ರ ಮುಂತಾದವುಗಳನ್ನು ಬಹು ಪ್ರಯಾಸದಿಂದ ಶೇಖರಿಸಿದ್ದೇನೆ. ಬಂಗಾರದಿಂದ ಮಾಡಬೇಕಾದ ಸಾಮಗ್ರಿಗಳಿಗೆ ಬೇಕಾದ ಬಂಗಾರವನ್ನು ಕೊಟ್ಟಿರುತ್ತೇನೆ. ಬೆಳ್ಳಿಯಿಂದ ತಯಾರಿಸಬೇಕಾದ ಸಾಮಗ್ರಿಗಳಿಗೆ ತಗಲುವ ಬೆಳ್ಳಿಯನ್ನು ಕೊಟ್ಟಿರುತ್ತೇನೆ. ಹಾಗೆಯೇ ತಾಮ್ರದ ವಸ್ತುಗಳಿಗೆ ಬೇಕಾಗುವ ತಾಮ್ರವನ್ನು ಕೊಟ್ಟಿದ್ದೇನೆ; ಕಬ್ಬಿಣದ ವಸ್ತುಗಳಿಗೆ ಬೇಕಾಗುವ ಕಬ್ಬಿಣವನ್ನು ಕೊಟ್ಟಿದ್ದೇನೆ; ಮರದಿಂದ ಮಾಡುವ ಸಾಮಗ್ರಿಗಳಿಗೆ ಬೇಕಾಗುವ ಮರವನ್ನು ಕೊಟ್ಟಿದ್ದೇನೆ; ನೀಲಿ ಬಣ್ಣದ ರತ್ನಗಳನ್ನು, ಚೌಕಟ್ಟಿಗೆ ಬೇಕಾದ ರತ್ನಗಳನ್ನು, ಹೊಳೆಯುವ ನಾನಾಬಣ್ಣದ ಹರಳುಗಳನ್ನು, ಬಿಳಿಬಣ್ಣದ ಹಾಲುಗಲ್ಲುಗಳನ್ನು ಬೇಕಾದಷ್ಟು ಸಂಗ್ರಹಿಸಿಟ್ಟಿದ್ದೇನೆ. 3 ಅಲ್ಲದೆ ದೇವಾಲಯಕ್ಕೆ ಬೇಕಾದ ಬೆಳ್ಳಿಬಂಗಾರಗಳ ಸಾಮಾನುಗಳನ್ನು ನಾನು ಕಾಣಿಕೆಯಾಗಿ ಕೊಟ್ಟಿರುತ್ತೇನೆ. ಯಾಕೆಂದರೆ ನನ್ನ ದೇವರ ಪರಿಶುದ್ಧಾಲಯವು ಕಟ್ಟಲ್ಪಡಬೇಕೆಂಬುದು ನಿಜವಾಗಿಯೂ ನನ್ನ ಬಯಕೆಯಾಗಿದೆ. ಈ ಪವಿತ್ರ ದೇವಾಲಯವನ್ನು ಕಟ್ಟಲು ನಾನು ಈ ವಸ್ತುಗಳನ್ನೆಲ್ಲಾ ಕೊಡುತ್ತಿದ್ದೇನೆ. 4 ನಾನು ನೂರಹತ್ತು ಟನ್ ತೂಕದ ಓಫೀರಿನ ಅಪ್ಪಟ ಬಂಗಾರವನ್ನೂ ದೇವಾಲಯದ ಗೋಡೆಗಳನ್ನು ಮುಚ್ಚಲು ಬೇಕಾದ ಇನ್ನೂರರವತ್ತು ಟನ್ ತೂಕದ ಬೆಳ್ಳಿಯನ್ನೂ 5 ಬೆಳ್ಳಿಬಂಗಾರಗಳಿಂದ ತಯಾರಿಸಬೇಕಾದ ಎಲ್ಲಾ ವಸ್ತುಗಳಿಗೆ ಬೇಕಾದ ಬೆಳ್ಳಿಬಂಗಾರಗಳನ್ನೂ ಇದರ ನಾಜೂಕು ಕೆಲಸ ಮಾಡುವ ಕುಶಲಕರ್ಮಿಗಳನ್ನೂ ಕೊಟ್ಟಿರುತ್ತೇನೆ. ಈಗ ನಿಮ್ಮಲ್ಲಿ ಎಷ್ಟು ಮಂದಿ ನಿಮ್ಮನ್ನೇ ಯೆಹೋವನಿಗಾಗಿ ಪ್ರತಿಷ್ಠಿಸಿಕೊಳ್ಳುವಿರಿ?” ಎಂದು ಹೇಳಿದನು. 6 ಆಗ ಇಸ್ರೇಲರ ಕುಲಪ್ರಧಾನರು, ಕುಟುಂಬಗಳ ನಾಯಕರು, ಪ್ರಧಾನಸೇನಾಧಿಪತಿಗಳು, ಸೇನಾಧಿಪತಿಗಳು, ರಾಜನ ಕೆಲಸಕ್ಕಾಗಿ ನೇಮಕಗೊಂಡಿದ್ದ ಅಧಿಕಾರಿಗಳು, ತಮ್ಮಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಕೊಟ್ಟರು. 7 ದೇವಾಲಯಕ್ಕಾಗಿ ಅವರು ಒಟ್ಟು ನೂರತೊಂಭತ್ತು ಟನ್ ತೂಕದ ಬಂಗಾರ, ಮುನ್ನೂರ ಎಪ್ಪತ್ತೈದು ಟನ್ ತೂಕದ ಬೆಳ್ಳಿ, ಆರನೂರ ಎಪ್ಪತ್ತೈದು ಟನ್ ತೂಕದ ತಾಮ್ರ ಮತ್ತು ಮೂರು ಸಾವಿರದ ಏಳುನೂರೈವತ್ತು ಟನ್ ತೂಕದ ಕಬ್ಬಿಣವನ್ನು ಕೊಟ್ಟರು. 8 ಯಾರ ಬಳಿಯಲ್ಲಿ ಬೆಲೆಬಾಳುವ ರತ್ನಗಳಿದ್ದವೋ ಅವುಗಳನ್ನು ದೇವರ ಆಲಯಕ್ಕಾಗಿ ಸಮರ್ಪಿಸಿದರು. ಗೇರ್ಷೋನ್ ಸಂತತಿಯವನಾದ ಯೆಹೀಯೇಲನು ಅವುಗಳನ್ನು ತನ್ನ ವಶಕ್ಕೆ ತೆಗೆದುಕೊಂಡನು. 9 ಇಸ್ರೇಲರ ನಾಯಕರುಗಳು ಪೂರ್ಣಹೃದಯದಿಂದಲೂ ಸ್ವಇಚ್ಛೆಯಿಂದಲೂ ಇಷ್ಟೆಲ್ಲಾ ಕಾಣಿಕೆಗಳನ್ನು ಕೊಟ್ಟಿದ್ದರಿಂದ ಇಸ್ರೇಲರು ಸಂತೋಷಗೊಂಡರು; ಅರಸನಾದ ದಾವೀದನೂ ತುಂಬ ಸಂತೋಷಗೊಂಡನು. ದಾವೀದನ ವಿಶೇಷ ಪ್ರಾರ್ಥನೆ 10 ನೆರೆದುಬಂದಿದ್ದ ಎಲ್ಲಾ ಜನರ ಮುಂದೆ ದಾವೀದನು ದೇವರಾದ ಯೆಹೋವನನ್ನು ಸ್ತುತಿಸಿ ಹೀಗೆ ಪ್ರಾರ್ಥಿಸಿದನು: “ಇಸ್ರೇಲರ ದೇವರಾದ ಯೆಹೋವನೇ, ನಮ್ಮ ತಂದೆಯೇ, ನಿನಗೆ ನಿರಂತರವಾಗಿ ಕೊಂಡಾಟವಾಗಲಿ. 11 ಯೆಹೋವನೇ, ಮಹತ್ವ, ಸಾಮರ್ಥ್ಯ, ಮಹಿಮೆ, ಜಯ ಮತ್ತು ಗೌರವಗಳು ನಿನ್ನವೇ ಆಗಿವೆ. ಭೂಮ್ಯಾಕಾಶಗಳಲ್ಲಿರುವುದೆಲ್ಲಾ ನಿನ್ನವೇ. ಯೆಹೋವನೇ, ರಾಜ್ಯವು ನಿನ್ನದೇ. ನೀನೇ ಅದರ ಶಿರಸ್ಸು; ಅದನ್ನಾಳುವಾತನೂ ನೀನೇ. 12 ಗೌರವವೂ ಐಶ್ವರ್ಯವೂ ನಿನ್ನಿಂದಲೇ ಹೊರಡುವವು. ಎಲ್ಲವನ್ನು ಆಳುವಾತನು ನೀನೇ. ನಿನ್ನ ಬಾಹುಗಳಲ್ಲಿ ಶಕ್ತಿಸಾಮರ್ಥ್ಯವು ತುಂಬಿವೆ. ಯಾರನ್ನೇ ಆಗಲಿ ಮಹಾಪುರುಷರನ್ನಾಗಿಯೂ ಪ್ರಬಲರನ್ನಾಗಿಯೂ ಮಾಡುವ ಶಕ್ತಿಯಿರುವುದು ನಿನ್ನ ಕೈಗಳಲ್ಲಿಯೇ. 13 ನಮ್ಮ ದೇವರೇ, ನಿನಗೆ ನಾವು ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನಿನ್ನ ಪ್ರಭಾವವುಳ್ಳ ನಾಮವನ್ನು ಸ್ತುತಿಸುತ್ತೇವೆ. 14 ನಾವು ಕಾಣಿಕೆಯಾಗಿ ಕೊಟ್ಟಿರುವ ವಸ್ತುಗಳು ನನ್ನಿಂದಾಗಲಿ ಮತ್ತು ನನ್ನ ಜನರಿಂದಾಗಲಿ ಬರಲಿಲ್ಲ. ಇವೆಲ್ಲವೂ ನಿನ್ನಿಂದಲೇ ಬಂದವುಗಳು. ನಿನ್ನಿಂದ ನಾವು ಹೊಂದಿದವುಗಳನ್ನೇ ನಿನಗೆ ಕೊಟ್ಟಿದ್ದೇವೆ. 15 ನಾವು ನಮ್ಮ ಪೂರ್ವಿಕರಂತೆ ಈ ಲೋಕದಲ್ಲಿ ಪ್ರವಾಸಿಗಳಾಗಿದ್ದೇವೆ; ದಾಟಿಹೋಗುವ ನೆರಳಿನಂತೆ ನಾವು ಈ ಲೋಕದಲ್ಲಿರುತ್ತೇವೆ. ಅದನ್ನು ನಿಲ್ಲಿಸಲು ನಮಗೆ ಸಾಧ್ಯವಿಲ್ಲ. 16 ನಮ್ಮ ದೇವರಾದ ಯೆಹೋವನೇ, ನಿನ್ನ ಆಲಯವನ್ನು ಕಟ್ಟುವುದಕ್ಕಾಗಿ ನಾವು ಇವೆಲ್ಲವನ್ನೂ ಒಟ್ಟುಗೂಡಿಸಿದ್ದೇವೆ. ನಿನ್ನ ಪವಿತ್ರ ಹೆಸರನ್ನು ಪ್ರಸಿದ್ಧಿಪಡಿಸಲು ನಾವು ಆಲಯವನ್ನು ಕಟ್ಟುತ್ತೇವೆ. ಆದರೆ ಇವೆಲ್ಲಾ ನಿನ್ನಿಂದಲೇ ಬಂದವುಗಳು; ಇವೆಲ್ಲಾ ನಿನಗೇ ಸಂಬಂಧಪಟ್ಟವುಗಳು. 17 ನನ್ನ ದೇವರೇ, ಜನರ ಹೃದಯಗಳನ್ನು ಪರೀಕ್ಷಿಸುವೆ. ಜನರು ಒಳ್ಳೆಯ ಕಾರ್ಯವನ್ನು ಯಥಾರ್ಥವಾದ ಹೃದಯದಿಂದ ಮಾಡುವಾಗ ನೀನು ಸಂತೋಷಪಡುವೆ. ಈ ವಸ್ತುಗಳನ್ನೆಲ್ಲಾ ನಾನು ಶುದ್ಧಹೃದಯದಿಂದ ಕೊಡುತ್ತಿದ್ದೇನೆ. ಇಲ್ಲಿ ನೆರೆದುಬಂದಿರುವವರೆಲ್ಲರೂ ನಿನಗೆ ಕಾಣಿಕೆಯನ್ನು ಸ್ವಯಿಚ್ಛೆಯಿಂದ ಕೊಟ್ಟಿದ್ದಾರೆ. 18 ಯೆಹೋವನೇ, ನಮ್ಮ ಪೂರ್ವಿಕರಾದ ಅಬ್ರಹಾಮ, ಇಸಾಕ ಮತ್ತು ಯಾಕೋಬರ ದೇವರು ನೀನೇ. ನಿನ್ನ ಜನರು ಸರಿಯಾಗಿ ಯೋಜನೆ ಹಾಕುವಂತೆ ಸಹಾಯಿಸು. ನಿನ್ನನ್ನು ನಿಷ್ಠೆಯಿಂದಲೂ ಸತ್ಯದಿಂದಲೂ ಸೇವೆಮಾಡುವಂತೆ ಸಹಾಯಿಸು. 19 ನನ್ನ ಮಗನಾದ ಸೊಲೊಮೋನನೂ ನಿನಗೆ ನಂಬಿಗಸ್ತನಾಗಿರುವಂತೆ ಸಹಾಯಮಾಡು. ನಿನ್ನ ಆಜ್ಞೆ, ಕಟ್ಟಳೆ ಮತ್ತು ನಿಯಮಗಳನ್ನು ಅನುಸರಿಸಲು ಸಹಾಯಮಾಡು. ನಿನ್ನ ಮಂದಿರಕ್ಕಾಗಿ ನಾನು ಇಷ್ಟೆಲ್ಲವನ್ನು ಸಿದ್ಧಮಾಡಿರುವೆನಲ್ಲಾ, ಅವನು ಅದನ್ನು ಕಟ್ಟಿ ಪೂರ್ಣಗೊಳಿಸಲು ಸಹಾಯಮಾಡು.” 20 ನೆರೆದು ಬಂದವರಿಗೆ ದಾವೀದನು, “ದೇವರಾದ ಯೆಹೋವನಿಗೆ ಸ್ತೋತ್ರಮಾಡಿರಿ” ಎಂದನು. ಆಗ ಎಲ್ಲರೂ ಅವರ ಪೂರ್ವಿಕರ ದೇವರಿಗೆ ಸ್ತುತಿಸುತ್ತಾ ತಲೆಬಾಗಿ ದೇವರನ್ನೂ ಅರಸನನ್ನೂ ನಮಸ್ಕರಿಸಿದರು. ಸೊಲೊಮೋನನಿಗೆ ಪಟ್ಟಾಭಿಷೇಕ 21 ಮರುದಿವಸ ಜನರು ಯೆಹೋವನಿಗೆ ಯಜ್ಞಗಳನ್ನೂ ಸರ್ವಾಂಗಹೋಮಗಳನ್ನೂ ಅರ್ಪಿಸಿದರು. ಒಂದು ಸಾವಿರ ಹೋರಿಗಳು, ಒಂದುಸಾವಿರ ಟಗರುಗಳು, ಒಂದುಸಾವಿರ ಆಡುಗಳು ಮತ್ತು ಪಾನದ್ರವ್ಯಗಳನ್ನು ಅರ್ಪಿಸಿದರು. ಇಡೀ ಇಸ್ರೇಲ್ ಜನಾಂಗಕ್ಕಾಗಿ ಯಜ್ಞವನ್ನರ್ಪಿಸಿದರು. 22 ಆ ದಿವಸ ಸೇರಿಬಂದ ಜನರು ಯೆಹೋವನ ಸನ್ನಿಧಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಉಲ್ಲಾಸಿಸಿದರು. ಅವರು ದಾವೀದನ ಮಗನಾದ ಸೊಲೊಮೋನನನ್ನು ತಿರಿಗಿ ಅರಸನನ್ನಾಗಿಯೂ ಚಾದೋಕನನ್ನು ಮಹಾಯಾಜಕನನ್ನಾಗಿಯೂ ಯೆಹೋವನ ಸನ್ನಿಧಿಯಲ್ಲಿ ಅಭಿಷೇಕಿಸಿದರು. 23 ಆ ಬಳಿಕ ಸೊಲೊಮೋನನು ತನ್ನ ತಂದೆಯ ಬದಲಾಗಿ ರಾಜನಾಗಿ ಪ್ರಭುವಿನ ಸಿಂಹಾಸನದ ಮೇಲೆ ಕುಳಿತುಕೊಂಡನು. ಸೊಲೊಮೋನನನ್ನು ಎಲ್ಲಾ ಇಸ್ರೇಲರು ಗೌರವಿಸಿದರು ಮತ್ತು ವಿಧೇಯರಾದರು. 24 ಎಲ್ಲಾ ನಾಯಕರು, ಸೈನಿಕರು ಮತ್ತು ದಾವೀದನ ಗಂಡುಮಕ್ಕಳು ಸೊಲೊಮೋನನನ್ನು ತಮ್ಮ ಅರಸನನ್ನಾಗಿ ಸ್ವೀಕರಿಸಿ ಅವನಿಗೆ ವಿಧೇಯರಾದರು. 25 ಯೆಹೋವನು ಸೊಲೊಮೋನನನ್ನು ಆಶೀರ್ವದಿಸಿ ಅಭಿವೃದ್ಧಿಪಡಿಸಿದನು. ಇಸ್ರೇಲಿನಲ್ಲಿದ್ದ ಯಾವ ಅರಸನಿಗೂ ಸೊಲೊಮೋನನಿಗಿದ್ದಷ್ಟು ಗೌರವವೂ ವೈಭವವೂ ಇರಲಿಲ್ಲ. ದಾವೀದನ ಮರಣ 26 (26-27) ಇಷಯನ ಮಗನಾದ ದಾವೀದನು ಇಸ್ರೇಲರನ್ನು ನಲವತ್ತು ವರ್ಷ ಆಳಿದನು. ಅವನು ಹೆಬ್ರೋನಿನಲ್ಲಿ ಏಳು ವರ್ಷ ರಾಜ್ಯಪಾಲನೆ ಮಾಡಿದನು ಮತ್ತು ಜೆರುಸಲೇಮಿನಲ್ಲಿ ಮೂವತ್ತುಮೂರು ವರ್ಷ ಆಳಿದನು. 27 28 ಅವನು ಬಹಳ ಮುದುಕನಾಗಿ ಸತ್ತನು. ಅವನ ದೀರ್ಘಾಯುಷ್ಯದಲ್ಲಿ ಹೆಚ್ಚಾದ ಗೌರವ ಸನ್ಮಾನಗಳು ದೊರೆತವು. ಅವನ ನಂತರ ಮಗನಾದ ಸೊಲೊಮೋನನು ಅರಸನಾದನು. 29 ಪ್ರಾರಂಭದಿಂದ ಹಿಡಿದು ಕೊನೆಯತನಕ ದಾವೀದನು ಮಾಡಿದ ಎಲ್ಲಾ ಕಾರ್ಯಗಳನ್ನು ದರ್ಶಿಯಾದ ಸಮುವೇಲ, ಪ್ರವಾದಿಯಾದ ನಾತಾನ ಮತ್ತು ದರ್ಶಿಯಾದ ಗಾದ್ ಇವರ ಚರಿತ್ರೆಗಳಲ್ಲಿ ಬರೆಯಲ್ಪಟ್ಟಿವೆ. 30 ಇಸ್ರೇಲಿನ ರಾಜನಾಗಿದ್ದಾಗ ದಾವೀದನು ಮಾಡಿದ ಎಲ್ಲಾ ಸಾಹಸಕಾರ್ಯಗಳನ್ನೂ ಅವನ ಪರಾಕ್ರಮ ಮತ್ತು ಅವನಿಗೆ ಸಂಭವಿಸಿದೆಲ್ಲದ್ದರ ಕುರಿತಾಗಿ ಅವುಗಳಲ್ಲಿ ಬರೆಯಲಾಗಿದೆ. ಇಸ್ರೇಲಿನ ಮತ್ತು ಅದರ ಸಮೀಪದಲ್ಲಿ ಅನ್ಯಜನಾಂಗಗಳ ಕುರಿತಾದ ಸಂಗತಿಗಳನ್ನು ಅವುಗಳಲ್ಲಿ ಬರೆಯಲಾಗಿದೆ.
ಒಟ್ಟು 29 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 29 / 29
Common Bible Languages
West Indian Languages
×

Alert

×

kannada Letters Keypad References