2. ತೋಲನ ಗಂಡುಮಕ್ಕಳು: ಉಜ್ಜೀ, ರೆಫಾಯ, ಯೆರೀಯೇಲ್, ಯಹ್ಮೈ, ಇಬ್ಸಾಮ್ ಮತ್ತು ಸಮುವೇಲ್. ಇವರೆಲ್ಲಾ ಕುಲಪ್ರಧಾನರಾಗಿದ್ದರು. ಇವರೂ ಇವರ ಸಂತತಿಯವರೂ ರಣವೀರರಾಗಿದ್ದರು. ಅವರ ಸಂತತಿಯು ವೃದ್ಧಿಯಾದ ಕಾರಣ ಅರಸನಾದ ದಾವೀದನ ಸಮಯದಲ್ಲಿ ಅವರಲ್ಲಿ ಇಪ್ಪತ್ತೆರಡು ಸಾವಿರದ ಆರುನೂರು ಮಂದಿ ಕಾಲಾಳುಗಳು ಯುದ್ಧಕ್ಕೆ ತಯಾರಾಗಿದ್ದರು.
|
3. ಉಜ್ಜೀಯ ಮಗನು ಇಜ್ಯಹ್ಯಾಹ. ಇಜ್ಯಹ್ಯಾಹನ ಮಕ್ಕಳು: ಮೀಕಾಯೇಲ್, ಓಬದ್ಯ, ಯೋವೇಲ್ ಮತ್ತು ಇಷ್ಷೀಯ. ಈ ಐದು ಮಂದಿಯೂ ತಮ್ಮ ಗೋತ್ರಗಳ ನಾಯಕರುಗಳಾಗಿದ್ದರು.
|
4. ಇವರ ಚರಿತ್ರೆಯ ಪ್ರಕಾರ ಇವರಲ್ಲಿ ಮೂವತ್ತಾರು ಸಾವಿರ ಮಂದಿ ಯುದ್ಧಕ್ಕೆ ಹೋಗಲು ಸಮರ್ಥರಾಗಿದ್ದರು. ಇವರಿಗೆಲ್ಲಾ ಅನೇಕ ಹೆಂಡತಿಯರು ಮತ್ತು ಮಕ್ಕಳು ಇದ್ದದ್ದರಿಂದ ಇವರ ಕುಲವು ದೊಡ್ಡದಾಗಿತ್ತು.
|
7. ಬೆಳನಿಗೆ ಐದು ಮಂದಿ ಗಂಡುಮಕ್ಕಳು. ಅವರು ಯಾರೆಂದರೆ: ಎಚ್ಬೋನ್, ಉಜ್ಜೀ, ಉಜ್ಜೀಯೇಲ್, ಯೆರೀಮೋತ್ ಮತ್ತು ಈರೀ. ಇವರೆಲ್ಲಾ ತಮ್ಮ ಗೋತ್ರಗಳಿಗೆ ನಾಯಕರಾಗಿದ್ದರು. ಇವರಲ್ಲಿ ಸಿದ್ಧರಾಗಿದ್ದ ಯುದ್ಧವೀರರು ಇಪ್ಪತ್ತೆರಡು ಸಾವಿರದ ಮೂವತ್ನಾಲ್ಕು ಮಂದಿ.
|
8. ಬೆಕೆರನ ಮಕ್ಕಳು ಯಾರೆಂದರೆ: ಜೆಮೀರ, ಯೋವಾಷ್, ಎಲೀಯೆಜೆರ್, ಎಲ್ಯೋವೇನೈ, ಒಮ್ರಿ, ಯೆರೀಮೋತ್, ಅಬೀಯ, ಅನಾತೋತ್ ಮತ್ತು ಅಲೆಮೆತ್. ಇವರೆಲ್ಲಾ ಬೆಕೆರನ ಮಕ್ಕಳು.
|
9. ಅವರ ಕುಲಚರಿತ್ರೆಯಲ್ಲಿ ಅವರ ನಾಯಕರುಗಳು ಯಾರೆಂಬುದನ್ನು ಬರೆಯಲಾಗಿದೆ. ಅವರಲ್ಲಿ ಯುದ್ಧಕ್ಕೆ ಸಿದ್ಧರಾಗಿದ್ದ ಇಪ್ಪತ್ತು ಸಾವಿರದ ಇನ್ನೂರು ಮಂದಿ ಸೈನಿಕರಿದ್ದರು.
|
10. ಯೆದೀಯಯೇಲನ ಮಗನು ಬಿಲ್ಹಾನ್. ಇವನ ಮಕ್ಕಳು ಯಾರೆಂದರೆ: ಯೆಯೂಷ್, ಬೆನ್ಯಾಮೀನ್, ಏಹೂದ್, ಕೆನಾನ್, ಜೇತಾನ್, ತಾರ್ಷೀಷ್ ಮತ್ತು ಅಹೀಷೆಹರ್.
|
11. ಯೆದೀಯಯೇಲನ ಎಲ್ಲಾ ಗಂಡುಮಕ್ಕಳು ತಮ್ಮ ಗೋತ್ರಗಳಿಗೆ ಪ್ರಧಾನರಾಗಿದ್ದರು. ಅವರಲ್ಲಿ ಯುದ್ಧಕ್ಕೆ ಸಿದ್ಧರಾಗಿದ್ದ ಹದಿನೇಳು ಸಾವಿರದ ಇನ್ನೂರು ಮಂದಿ ಸೈನಿಕರಿದ್ದರು.
|
14. ಮನಸ್ಸೆಯ ಸಂತತಿಯವರು ಯಾರೆಂದರೆ: ಮನಸ್ಸೆ ಮತ್ತು ಅವನ ಅರಾಮ್ಯದ ದಾಸಿಯಲ್ಲಿ ಹುಟ್ಟಿದ ಮಗ ಅಷ್ರೀಯೇಲ್; ಅವರಿಗೆ ಮಾಕೀರ್ ಎಂಬ ಇನ್ನೊಬ್ಬ ಮಗನಿದ್ದನು. ಇವನು ಗಿಲ್ಯಾದನ ತಂದೆ.
|
15. ಮಾಕೀರನು ಹುಪ್ಪೀಮನ ಮತ್ತು ಶುಪ್ಪೀಮನ ಸಹೋದರಿಯನ್ನು ಮದುವೆಯಾದನು. ಆಕೆಯ ಹೆಸರು ಮಾಕ. ಗಿಲ್ಯಾದನ ಮೊಮ್ಮಗನ ಹೆಸರು ಚೆಲೋಫಾದ್. ಇವನಿಗೆ ಹೆಣ್ಣುಮಕ್ಕಳೇ ಹುಟ್ಟಿದವು.
|
16. ಮಾಕೀರನ ಹೆಂಡತಿಯಾದ ಮಾಕಳು ಒಂದು ಗಂಡುಮಗುವನ್ನು ಹೆತ್ತು ಅವನಿಗೆ ಪೆರೆಷ್ ಎಂದು ಹೆಸರಿಟ್ಟಳು. ಇವನ ತಮ್ಮನ ಹೆಸರು ಶೆರೆಷ್. ಇವನ ಗಂಡುಮಕ್ಕಳು ಯಾರೆಂದರೆ: ಊಲಾಮ್ ಮತ್ತು ರೆಕೆಮ್.
|
20. ಎಫ್ರಾಯೀಮನ ಸಂತತಿಯವರು: ಎಫ್ರಾಯೀಮನ ಮಗನು ಶೂತೆಲಹ. ಶೂತೆಲಹನ ಮಗನು ಬೆರೆದ್; ಬೆರೆದನ ಮಗನು ತಹತ್. ತಹತನ ಮಗನು ಎಲ್ಲಾದ. ಎಲ್ಲಾದನ ಮಗನು ತಹತ್.
|
21. ತಹತನ ಮಗನು ಜಾಬಾದ್ ಮತ್ತು ಜಾಬಾದನ ಮಕ್ಕಳು ಶೂತೆಲಹ, ಎಜೆರ್, ಎಲ್ಲಾದ್ ಎಂಬುವರು. ಗತ್ ನಗರದ ಮೂಲನಿವಾಸಿಗಳು ಎಜೆರನನ್ನು ಮತ್ತು ಎಲ್ಲಾದನನ್ನು ಕೊಂದುಹಾಕಿದರು. ಯಾಕೆಂದರೆ ಎಜೆರನು ಮತ್ತು ಎಲ್ಲಾದನು ಗತ್ ಊರಿನವರ ದನಕುರಿಗಳನ್ನು ಕದ್ದುಕೊಳ್ಳಲು ಹೋಗಿದ್ದರು.
|
22. ಎಜೆರನು ಮತ್ತು ಎಲ್ಲಾದನ ತಂದೆ ಎಫ್ರಾಯೀಮನು. ತನ್ನ ಮಕ್ಕಳು ಸತ್ತದ್ದಕ್ಕಾಗಿ ಬಹಳ ದಿನಗಳ ತನಕ ಅವನು ಗೋಳಾಡಿದನು. ಅವನ ಕುಟುಂಬದವರೆಲ್ಲಾ ಬಂದು ಅವನನ್ನು ಸಂತೈಸಿದರು.
|
23. ಅನಂತರ ಎಫ್ರಾಯೀಮನ ಹೆಂಡತಿಯು ಇನ್ನೊಂದು ಗಂಡುಮಗುವನ್ನು ಹೆತ್ತಳು. ತಮ್ಮ ಕುಟುಂಬದಲ್ಲಿ ನಡೆದ ದುರ್ಘಟನೆಯ ನೆನಪಿಗಾಗಿ ಇವನಿಗೆ ‘ಬೆರೀಯ’ ಎಂದು ಹೆಸರಿಟ್ಟರು.
|
24. ಎಫ್ರಾಯೀಮನ ಮಗಳ ಹೆಸರು ಶೇರಾ. ಅವಳು ಕೆಳಗಿನ ಬೇತ್ಹೋರೋನ್ ಮತ್ತು ಮೇಲಿನ ಬೇತ್ಹೋರೋನ್ ಮತ್ತು ಕೆಳಗಿನ ಉಜ್ಜೇನ್ಶೇರ ಮತ್ತು ಮೇಲಿನ ಉಜ್ಜೇನ್ಶೇರ ಪಟ್ಟಣಗಳನ್ನು ಕಟ್ಟಿಸಿದಳು.
|
28. ಎಫ್ರಾಯೀಮನ ಸಂತತಿಯವರು ವಾಸಿಸಿದ ಪಟ್ಟಣಗಳು ಯಾವುವೆಂದರೆ: ಬೇತೇಲ್ ಮತ್ತು ಅದರ ಪಕ್ಕದಲ್ಲಿದ್ದ ಹಳ್ಳಿಗಳು; ಪೂರ್ವದಲ್ಲಿ ನಾರಾನ್; ಪಶ್ಚಿಮದಲ್ಲಿ ಗೆಜೆರ್ ಪಟ್ಟಣ ಮತ್ತು ಅದರ ಪಕ್ಕದಲ್ಲಿದ್ದ ಹಳ್ಳಿಗಳು; ಶೆಕೆಮ್ ಪಟ್ಟಣ ಮತ್ತು ಅದರ ಸಮೀಪದಲ್ಲಿದ್ದ ಹಳ್ಳಿಗಳು, ಅಯ್ಯಾ ಪಟ್ಟಣ ಮತ್ತು ಅದರ ಸಮೀಪದಲ್ಲಿದ್ದ ಹಳ್ಳಿಗಳು;
|
29. ಮನಸ್ಸೆಯ ಗಡಿಗೆ ಸಮೀಪದಲ್ಲಿದ್ದ ಊರುಗಳಾದ ಬೇತ್ಷಾನ್, ತಾನಾಕ್, ಮೆಗಿದ್ದೋ, ದೋರ್ ಮತ್ತು ಅದರ ಹತ್ತಿರದಲ್ಲಿದ್ದ ಸಣ್ಣ ಊರುಗಳು. ಯೋಸೇಫನ ಸಂತತಿಯವರು ಈ ಊರುಗಳಲ್ಲಿ ವಾಸವಾಗಿದ್ದರು. ಯೋಸೇಫನು ಇಸ್ರೇಲನ ಮಗನಾಗಿದ್ದನು.
|
40. ಇವರೆಲ್ಲರೂ ಆಶೇರನ ಸಂತತಿಯವರು. ಇವರೆಲ್ಲರೂ ಕುಲಪ್ರಧಾನರಾಗಿದ್ದರು. ಅವರು ಸೈನಿಕರೂ ನಾಯಕರುಗಳೂ ಆಗಿದ್ದರು. ಅವರ ಕುಲದ ಇತಿಹಾಸದ ಪ್ರಕಾರ, ಒಟ್ಟು ಇಪ್ಪತ್ತಾರು ಸಾವಿರ ಮಂದಿ ಯುದ್ಧಕ್ಕೆ ಸಿದ್ಧರಾಗಿದ್ದ ಸೈನಿಕರಿದ್ದರು.
|