1. ಇಸ್ರೇಲ್ ಜನರ ಎಲ್ಲಾ ಹೆಸರುಗಳು ಅವರವರ ವಂಶಾವಳಿ ಪಟ್ಟಿಯಲ್ಲಿ ಬರೆಯಲ್ಪಟ್ಟಿದೆ. ಈ ವಂಶಾವಳಿಗಳು ಇಸ್ರೇಲ್ ರಾಜರ ಇತಿಹಾಸದಲ್ಲಿ ಸೇರಿಸಲ್ಪಟ್ಟಿದೆ. ಯೆಹೂದ ಪ್ರಾಂತ್ಯದ ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ಯಲಾಯಿತು. ಅವರು ದೇವರಿಗೆ ಅವಿಧೇಯರಾದ್ದರಿಂದ ಅವರಿಗೆ ಇಂಥ ಸ್ಥಿತಿ ಬಂದೊದಗಿತು.
|
2. ಅಲ್ಲಿಂದ ಹಿಂತಿರುಗಿಬಂದು ತಮ್ಮ ಸ್ವನಾಡಿನಲ್ಲಿ ನೆಲೆಸಿದವರಲ್ಲಿ ಮೊದಲನೆಯವರು ಯಾರೆಂದರೆ: ಕೆಲವು ಇಸ್ರೇಲರು, ಯಾಜಕರು, ಲೇವಿಯರು ಮತ್ತು ದೇವಾಲಯದ ಸೇವಕರು.
|
3. ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್ ಮತ್ತು ಮನಸ್ಸೆ ಗೋತ್ರದವರಾದ ಇವರು ಜೆರುಸಲೇಮಿನಲ್ಲಿ ವಾಸವಾಗಿದ್ದರು. ಇವರು ಯಾರೆಂದರೆ:
|
4. ಊತ್ಯೆ ಅಮ್ಮೀಹೂದನ ಮಗ, ಅಮ್ಮೀಹೂದನು ಒಮ್ರಿಯ ಮಗ, ಒಮ್ರಿಯು ಇಮ್ರಿಯ ಮಗ, ಇಮ್ರಿಯು ಬಾನೀಯ ಮಗ, ಬಾನೀಯು ಪೆರೆಚನ ಸಂತತಿಯವನು, ಪೆರೆಚನು ಯೆಹೂದನ ಮಗ.
|
7. ಜೆರುಸಲೇಮಿನಲ್ಲಿ ವಾಸಿಸಿದ ಬೆನ್ಯಾಮೀನನ ಗೋತ್ರದವರು ಯಾರೆಂದರೆ: ಮೆಷುಲ್ಲಾಮನ ಮಗನಾದ ಸಲ್ಲೂ. ಮೆಷುಲ್ಲಾಮನು ಹೋದವ್ಯನ ಮಗ. ಹೋದವ್ಯನು ಹಸ್ಸೆನುವಾಹನ ಮಗ.
|
8. ಇಬ್ನೆಯಾಹನು ಯೆರೋಹಾಮನ ಮಗ. ಏಲಾನು ಉಜ್ಜೀಯ ಮಗ. ಉಜ್ಜೀಯನು ಮಿಕ್ರೀಯ ಮಗ ಮತ್ತು ಮೆಷುಲ್ಲಾಮನು ಶೆಫಟ್ಯನ ಮಗ. ಶೆಫಟ್ಯನು ರೆಯೂವೇಲನ ಮಗ. ರೆಯೂವೇಲನು ಇಬ್ನಿಯಾಹನ ಮಗ.
|
11. ಅಜರ್ಯ. ಅಜರ್ಯನು ಹಿಲ್ಕೀಯನ ಮಗ; ಹಿಲ್ಕೀಯನು ಮೆಷುಲ್ಲಾಮನ ಮಗ; ಮೆಷುಲ್ಲಾಮನು ಚಾದೋಕನ ಮಗ; ಚಾದೋಕನು ಮೆರಾಯೋತನ ಮಗ; ಮೆರಾಯೋತನು ಅಹೀಟೂಬನ ಮಗ. ಅಹೀಟೂಬನು ದೇವಾಲಯದ ಒಬ್ಬ ವಿಶೇಷ ಅಧಿಕಾರಿಯಾಗಿದ್ದನು.
|
12. ಇವರಲ್ಲದೆ, ಯೆರೋಹಾಮನ ಮಗನಾದ ಅದಾಯನು ಸಹ ಇದ್ದನು. ಯೆರೋಹಾಮನು ಪಶ್ಹೂರನ ಮಗ; ಪಶ್ಹೂರನು ಮಲ್ಕೀಯನ ಮಗ; ಇವರಲ್ಲದೆ, ಅದೀಯೇಲನ ಮಗನಾದ ಮಾಸೈ ಸಹ ಇದ್ದನು. ಅದೀಯೇಲನು ಯಹ್ಜೇರನ ಮಗ. ಯಹ್ಜೇರನು ಮೆಷುಲ್ಲಾಮನ ಮಗ. ಮೆಷುಲ್ಲಾಮನು ಮೆಷಿಲ್ಲೇಮೋತನ ಮಗ. ಮೆಷಿಲ್ಲೇಮೋತನು ಇಮ್ಮೇರನ ಮಗ.
|
13. ಒಟ್ಟು ಒಂದು ಸಾವಿರದ ಏಳುನೂರ ಅರವತ್ತು ಮಂದಿ ಯಾಜಕರಿದ್ದರು. ಇವರೆಲ್ಲರೂ ತಮ್ಮ ಕುಟುಂಬಗಳಿಗೆ ಪ್ರಧಾನರಾಗಿದ್ದರು. ದೇವಾಲಯದ ಕೆಲಸ ಕಾರ್ಯಗಳ ಜವಾಬ್ದಾರಿಕೆಯನ್ನು ಇವರು ಹೊತ್ತು ಕೊಂಡಿದ್ದರು.
|
14. ಜೆರುಸಲೇಮಿನಲ್ಲಿ ವಾಸಿಸಿದ ಲೇವಿ ಕುಲದ ಜನರು ಯಾರೆಂದರೆ: ಹಷ್ಷೂಬನ ಮಗನಾದ ಶೆಮಾಯ. ಹಷ್ಷೂಬನು ಅಜ್ರೀಕಾಮನ ಮಗ. ಅಜ್ರೀಕಾಮನು ಹಷಬ್ಯನ ಮಗ. ಹಷಬ್ಯನು ಮೆರಾರೀಯ ಸಂತತಿಯವನು.
|
15. ಜೆರುಸಲೇಮಿನಲ್ಲಿ ವಾಸಿಸಿದ ಇತರರು ಯಾರೆಂದರೆ: ಬಕ್ಬಕ್ಕರ್, ಹೆರೆಷ್, ಗಾಲಾಲ್ ಮತ್ತು ಮತ್ತನ್ಯ. ಮತ್ತನ್ಯನು ಮೀಕನ ಮಗ. ಮೀಕನು ಜಿಕ್ರೀಯ ಮಗ. ಜಿಕ್ರೀಯು ಆಸಾಫನ ಮಗ.
|
16. ಓಬದ್ಯನು ಶೆಮಾಯನ ಮಗ. ಶೆಮಾಯನು ಗಾಲಾಲನ ಮಗ. ಗಾಲಾಲನು ಯೆದೂತೂನನ ಮಗ. ಆಸನ ಮಗನಾದ ಬೆರೆಕ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಆಸನು ಎಲ್ಕಾನನ ಮಗ. ಎಲ್ಕಾನನು ನೆಟೋಫ ಜನರ ಸಮೀಪದ ಗ್ರಾಮದಲ್ಲಿ ವಾಸಿಸುತ್ತಿದ್ದನು.
|
17. ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ದ್ವಾರಪಾಲಕರು ಯಾರೆಂದರೆ: ಶಲ್ಲೂಮ್, ಅಕ್ಕೂಬ್, ಟಲ್ಮೋನ್, ಅಹೀಮಾನ್ ಮತ್ತು ಅವರ ಕುಟುಂಬದವರು. ಶಲ್ಲೂಮನು ಅವರ ನಾಯಕನಾಗಿದ್ದನು.
|
18. ಇವರೆಲ್ಲರೂ ಪೂರ್ವದಿಕ್ಕಿನಲ್ಲಿರುವ ರಾಜನ ಹೆಬ್ಬಾಗಿಲನ್ನು ಕಾಯುತ್ತಿರುತ್ತಾರೆ. ಇವರೆಲ್ಲಾ ಲೇವಿ ಕುಲಕ್ಕೆ ಸೇರಿದವರು.
|
19. ಶಲ್ಲೂಮನು ಕೋರೇಯ ಮಗನು. ಕೋರೇಯ ಎಬ್ಯಾಸಾಫನ ಮಗನು. ಎಬ್ಯಾಸಾಫನು ಕೋರಹನ ಮಗನು. ಶಲ್ಲೂಮನೂ ಅವನ ಸಹೋದರರೂ ದ್ವಾರಪಾಲಕರಾಗಿದ್ದರು. ಅವರೆಲ್ಲರೂ ಕೋರಹನ ಸಂತತಿಯವರು. ಪವಿತ್ರಗುಡಾರದ ಬಾಗಿಲುಗಳನ್ನು ಕಾಯುವ ಜವಾಬ್ದಾರಿಕೆ ಇವರದಾಗಿತ್ತು. ತಮ್ಮ ಪೂರ್ವಿಕರು ಮಾಡಿದ್ದಂತೆಯೇ ಅವರು ಈ ಕೆಲಸವನ್ನು ಮಾಡಿದರು. ಯೆಹೋವನ ಪಾಳೆಯದ ಪ್ರವೇಶದ್ವಾರವನ್ನು ಕಾಯುವುದು ಅವರ ಪೂರ್ವಿಕರ ಉದ್ಯೋಗವಾಗಿತ್ತು.
|
22. ಒಟ್ಟು ಇನ್ನೂರ ಹನ್ನೆರಡು ಮಂದಿ ಪವಿತ್ರಗುಡಾರದ ಬಾಗಿಲನ್ನು ಕಾಯುವುದಕ್ಕೆ ಆರಿಸಲ್ಪಟ್ಟಿದ್ದರು. ಅವರ ಹೆಸರುಗಳು ವಂಶದ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತವೆ. ದಾವೀದನೂ ದೇವರ ಮನುಷ್ಯನಾದ ಸಮುವೇಲನೂ ಇವರನ್ನು ಆರಿಸಿಕೊಂಡರು. ಯಾಕೆಂದರೆ ಇವರೆಲ್ಲರೂ ನಂಬಿಗಸ್ತರಾಗಿದ್ದರು.
|
25. ಗ್ರಾಮಗಳಲ್ಲಿ ನೆಲೆಸಿದ ದ್ವಾರಪಾಲಕರ ಕುಟುಂಬದವರು ತಮ್ಮ ಸರದಿಗನುಗುಣವಾಗಿ ಏಳು ದಿವಸದ ಕರ್ತವ್ಯ ಮುಗಿಸಿ ಹೋಗುತ್ತಿದ್ದರು.
|
26. ಲೇವಿಕುಲದ ನಾಲ್ಕು ಮಂದಿ ಎಲ್ಲಾ ದ್ವಾರಪಾಲಕರಿಗೆ ನಾಯಕರಾಗಿದ್ದರು. ದೇವಾಲಯದ ಕೋಣೆಗಳನ್ನೂ ಅಲ್ಲಿಟ್ಟಿರುವ ಹಣದ ಪೆಟ್ಟಿಗೆಗಳನ್ನೂ ಅವರು ಕಾಯುತ್ತಿದ್ದರು.
|
28. ಅವರಲ್ಲಿ ಕೆಲವರು ದೇವಾಲಯದ ಪಾತ್ರೆಗಳಿಗೆ ಮೇಲ್ವಿಚಾರಕರಾಗಿದ್ದು ಅವುಗಳನ್ನು ಒಳಗೆ ತರುವಾಗಲೂ ಹೊರಗೆ ತೆಗೆದುಕೊಂಡು ಹೋಗುವಾಗಲೂ ಲೆಕ್ಕಮಾಡುತ್ತಿದ್ದರು.
|
29. ಇನ್ನು ಕೆಲವರು ಮರದ ಸಾಮಾನುಗಳಿಗೂ ವಿಶೇಷವಾದ ಪಾತ್ರೆಗಳಿಗೂ ಮೇಲ್ವಿಚಾರಕರಾಗಿದ್ದು ಗೋಧಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ ಮತ್ತು ಪರಿಮಳದ್ರವ್ಯ ಇವುಗಳ ಪಾರುಪತ್ಯಗಾರರಾಗಿದ್ದರು.
|
31. ಮತ್ತಿತ್ಯ ಎಂಬ ಲೇವಿಯು ದೇವರಿಗೆ ಸಮರ್ಪಿಸುವ ರೊಟ್ಟಿಯನ್ನು ತಯಾರು ಮಾಡುತ್ತಿದ್ದನು. ಇವನು ಶಲ್ಲೂಮನ ಚೊಚ್ಚಲಮಗ. ಶಲ್ಲೂಮನು ಕೋರಹನ ಕುಲದವನಾಗಿದ್ದನು.
|
32. ಕೋರಹನ ಕುಲದ ಕೆಲವರಿಗೆ, ಪ್ರತಿ ಸಬ್ಬತ್ದಿವಸ ದೇವರ ಸನ್ನಿಧಾನದಲ್ಲಿ ಇಡುವ ನೈವೇದ್ಯದ ರೊಟ್ಟಿಯನ್ನು ತಯಾರಿಸುವ ಕೆಲಸವಿತ್ತು.
|
33. ಗಾಯಕರು ಮತ್ತು ತಮ್ಮ ಕುಟುಂಬಗಳಿಗೆ ನಾಯಕರಾಗಿದ್ದ ಲೇವಿಯರು ದೇವಾಲಯದ ಕೋಣೆಗಳಲ್ಲಿ ಇರುತ್ತಿದ್ದರು. ಅವರು ಇತರ ಕೆಲಸಗಳನ್ನು ಮಾಡಬೇಕಾಗಿರಲಿಲ್ಲ; ಯಾಕೆಂದರೆ ದೇವಾಲಯದ ಹಗಲಿರುಳಿನ ಕೆಲಸಕಾರ್ಯಗಳ ಜವಾಬ್ದಾರಿಕೆ ಇವರದಾಗಿತ್ತು.
|
34. ಈ ಲೇವಿಯರೆಲ್ಲಾ ತಮ್ಮತಮ್ಮ ಕುಟುಂಬಗಳಿಗೆ ಪ್ರಧಾನರಾಗಿದ್ದರು. ಇವರ ಹೆಸರುಗಳು ಅವರ ಕುಟುಂಬ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತದೆ. ಅವರು ಜೆರುಸಲೇಮಿನಲ್ಲಿ ವಾಸಿಸಿದರು.
|
35. ಯೆಯೂವೇಲನು ಗಿಬ್ಯೋನನ ತಂದೆ. ಯೆಯೂವೇಲನು ಗಿಬ್ಯೋನ್ ಪಟ್ಟಣದಲ್ಲಿ ವಾಸಮಾಡುತ್ತಿದ್ದನು. ಯೆಯೂವೇಲನ ಹೆಂಡತಿಯ ಹೆಸರು ಮಾಕ.
|
38. ಮಿಕ್ಲೋತನು ಶಿಮಾಮನ ತಂದೆ. ಯೆಯೂವೇಲನ ಕುಟುಂಬದವರೆಲ್ಲಾ ತಮ್ಮ ಸಂಬಂಧಿಕರೊಂದಿಗೆ ಜೆರುಸಲೇಮಿನಲ್ಲಿ ವಾಸಿಸುತ್ತಿದ್ದರು.
|
39. ನೇರನು ಕೀಷನ ತಂದೆ. ಕೀಷನು ಸೌಲನ ತಂದೆ. ಸೌಲನ ಗಂಡುಮಕ್ಕಳು ಯಾರೆಂದರೆ: ಯೋನಾತಾನ್, ಮಲ್ಕೀಷೂವ, ಅಬೀನಾದಾಬ್ ಮತ್ತು ಎಷ್ಬಾಳ್.
|
42. ಆಹಾಜನು ಯಗ್ರಾಹನ ತಂದೆ. ಯಗ್ರಾಹನು ಜಾರಹನ ತಂದೆ. ಜಾರಹನು ಆಲೆಮೆತ್, ಅಜ್ಮಾವೆತ್ ಮತ್ತು ಜಿಮ್ರೀ ಇವರ ತಂದೆ. ಜಿಮ್ರೀಯು ಮೋಚನ ತಂದೆ.
|
44. ಆಚೇಲನಿಗೆ ಆರು ಮಂದಿ ಗಂಡುಮಕ್ಕಳಿದ್ದರು. ಅವರು ಯಾರೆಂದರೆ: ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ ಮತ್ತು ಹಾನಾನ್.
|