1. {ಯೆಹೂದ್ಯರಂತಿರಬೇಡಿ} PS ಸಹೋದರ ಸಹೋದರಿಯರೇ, ಮೋಶೆಯನ್ನು ಅನುಸರಿಸಿದ ನಮ್ಮ ಪಿತೃಗಳಿಗೆ ಏನು ಸಂಭವಿಸಿತೆಂಬುದನ್ನು ನೀವು ತಿಳಿದುಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅವರೆಲ್ಲರೂ ಮೋಡದ ಕೆಳಗಿದ್ದರು; ಸಮುದ್ರದ ಮೂಲಕ ನಡೆದುಕೊಂಡು ಹೋದರು;
|
7. ಅವರಲ್ಲಿ ಕೆಲವರು ಮಾಡಿದಂತೆ ನೀವು ವಿಗ್ರಹಗಳನ್ನು ಪೂಜಿಸಬೇಡಿ. “ಜನರು ತಿನ್ನಲು, ಕುಡಿಯಲು ಕುಳಿತುಕೊಂಡರು; ನೃತ್ಯ ಮಾಡಲು ಎದ್ದುನಿಂತರು” ✡ಉಲ್ಲೇಖನ: ವಿಮೋಚನ. 32:6. ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.
|
8. ಅವರಲ್ಲಿ ಕೆಲವರು ಮಾಡಿದಂತೆ ನಾವು ಲೈಂಗಿಕ ಪಾಪಗಳನ್ನು ಮಾಡಬಾರದು. ಅವರಲ್ಲಿ ಇಪ್ಪತ್ತಮೂರು ಸಾವಿರ ಮಂದಿ ತಮ್ಮ ಆ ಪಾಪದ ಫಲವಾಗಿ ಒಂದೇ ದಿನದಲ್ಲಿ ಸತ್ತುಹೋದರು.
|
11. ಆ ಜನರಿಗೆ ಸಂಭವಿಸಿದ ಸಂಗತಿಗಳು ನಮಗೆ ನಿದರ್ಶನಗಳಾಗಿವೆ. ನಮ್ಮನ್ನು ಎಚ್ಚರಿಸುವುದಕ್ಕಾಗಿ ಆ ಸಂಗತಿಗಳನ್ನು ಬರೆದಿಡಲಾಗಿದೆ. ಈಗ ನಾವು ಯುಗದ ಅಂತಿಮ ಕಾಲದಲ್ಲಿ ಜೀವಿಸುತ್ತಿದ್ದೇವೆ.
|
13. ಎಲ್ಲಾ ಜನರಿಗೆ ಬರುವಂತೆ ನಿಮಗೂ ಶೋಧನೆಗಳು ಬರುತ್ತವೆ. ಆದರೆ ದೇವರು ನಂಬಿಗಸ್ತನಾಗಿದ್ದಾನೆ. ನೀವು ಸಹಿಸಿಕೊಳ್ಳಲಾರದ ಶೋಧನೆಯನ್ನು ಆತನು ನಿಮಗೆ ಬರಗೊಡಿಸುವುದಿಲ್ಲ. ಶೋಧನೆಗಳು ಬಂದಾಗ, ಅವುಗಳಿಂದ ಪಾರಾಗುವ ಮಾರ್ಗವನ್ನು ಸಹ ದೇವರು ನಿಮಗೆ ಒದಗಿಸುತ್ತಾನೆ. ಆಗ ನೀವು ಅದನ್ನು ಸಹಿಸಿಕೊಳ್ಳುವುದಕ್ಕೆ ಶಕ್ತರಾಗುವಿರಿ. PEPS
|
15. ನೀವು ಬುದ್ಧಿವಂತರೆಂದು ನಾನು ನಿಮ್ಮೊಂದಿಗೆ ಮಾತಾಡುತ್ತಿದ್ದೇನೆ. ನಾನು ಹೇಳುವುದನ್ನು ಸ್ವತಃ ನೀವೇ ವಿಚಾರಣೆ ಮಾಡಿ.
|
16. ನಾವು ದ್ರಾಕ್ಷಾರಸದ ಪಾತ್ರೆಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಕುಡಿಯುವಾಗ ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಲಿಲ್ಲವೇ? ನಾವು ರೊಟ್ಟಿಯನ್ನು ಮುರಿದು ತಿನ್ನುವಾಗ ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಲಿಲ್ಲವೇ?
|
17. ರೊಟ್ಟಿಯು ಒಂದೇ. ಆದ್ದರಿಂದ ನಮ್ಮಲ್ಲಿ ಅನೇಕರಿದ್ದರೂ ನಾವು ಒಂದೇ ದೇಹವಾಗಿದ್ದೇವೆ. ಯಾಕೆಂದರೆ ನಾವೆಲ್ಲಾ ಆ ಒಂದೇ ರೊಟ್ಟಿಯಲ್ಲಿ ಪಾಲು ತೆಗೆದುಕೊಳ್ಳುತ್ತೇವೆ. PEPS
|
18. ಇಸ್ರೇಲ್ ಜನರ ಬಗ್ಗೆ ಯೋಚಿಸಿ. ಯಜ್ಞವಾಗಿ ಅರ್ಪಿತವಾದುದನ್ನು ತಿನ್ನುವ ಆ ಜನರು ಯಜ್ಞವೇದಿಕೆಯಲ್ಲಿ ಪಾಲುಗಾರರಾಗಿಲ್ಲವೇ?
|
19. ವಿಗ್ರಹಕ್ಕೆ ಅರ್ಪಿತವಾದ ಆಹಾರಪದಾರ್ಥವು ಮುಖ್ಯವಾದದ್ದೆಂದು ನಾನು ಹೇಳುತ್ತಿಲ್ಲ. ಅಲ್ಲದೆ ವಿಗ್ರಹವು ಮುಖ್ಯವಾದದ್ದು ಎಂಬ ಅಭಿಪ್ರಾಯವೂ ನನಗಿಲ್ಲ.
|
20. ನಾನು ಹೇಳುತ್ತಿರುವುದೇನೆಂದರೆ, ಜನರು ವಿಗ್ರಹಗಳಿಗೆ ಅರ್ಪಿಸಿದ ಪದಾರ್ಥಗಳು ದೆವ್ವಗಳಿಗೆ ಅರ್ಪಿತವಾದುವುಗಳೇ ಹೊರತು ದೇವರಿಗಲ್ಲ. ನೀವು ದೆವ್ವಗಳೊಂದಿಗೆ ಯಾವ ವಿಷಯದಲ್ಲಿಯೂ ಪಾಲು ಹೊಂದಬಾರದೆಂಬುದು ನನ್ನ ಆಸೆ.
|
21. ನೀವು ಪ್ರಭುವಿನ ಪಾತ್ರೆ ಮತ್ತು ದೆವ್ವಗಳ ಪಾತ್ರೆ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಕುಡಿಯಲಾಗದು. ಪ್ರಭುವಿನ ಪಂಕ್ತಿ ಮತ್ತು ದೆವ್ವಗಳ ಪಂಕ್ತಿ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಊಟ ಮಾಡಲಾರಿರಿ.
|
23. {ನಿಮ್ಮ ಸ್ವತಂತ್ರ ದೇವರ ಮಹಿಮೆಗೋಸ್ಕರ} PS “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಸ್ವಾತಂತ್ರ್ಯವಿದೆ.” ಆದರೆ ನಾವು ಮಾಡುವ ಕಾರ್ಯಗಳೆಲ್ಲಾ ಒಳ್ಳೆಯವೆಂದು ಹೇಳುವುದು ಸರಿಯಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಸ್ವಾತಂತ್ರ್ಯವಿದೆ.” ಆದರೆ ಕೆಲವು ಕಾರ್ಯಗಳು ಬೇರೆಯವರ ಅಭಿವೃದ್ಧಿಗೆ ಸಹಾಯಕವಾಗಿರುವುದಿಲ್ಲ.
|
24. ಪ್ರತಿಯೊಬ್ಬನೂ ತನಗೆ ಮಾತ್ರ ಹಿತಕರವಾದ ಕಾರ್ಯಗಳನ್ನು ಮಾಡದೆ ಬೇರೆಯವರಿಗೂ ಹಿತಕರವಾದ ಕಾರ್ಯಗಳನ್ನು ಮಾಡಲು ಪ್ರಯತ್ನಿಸಬೇಕು. PEPS
|
25. ಮಾಂಸದ ಮಾರುಕಟ್ಟೆಯಲ್ಲಿ ಮಾರುವ ಯಾವ ಮಾಂಸವನ್ನಾದರೂ ತಿನ್ನಿರಿ. ನೀವು ತಿನ್ನಬಾರದೆಂದು ಯೋಚಿಸುವ ಮಾಂಸದಂತೆ ಅದು ತೋರಿದರೂ ಆ ಮಾಂಸದ ಬಗ್ಗೆ ಯಾವ ಪ್ರಶ್ನೆಗಳನ್ನೂ ಕೇಳಬೇಡಿರಿ.
|
26. ನೀವು ಅದನ್ನು ತಿನ್ನಿರಿ. ಏಕೆಂದರೆ, “ಭೂಮಿಯೂ ಅದರಲ್ಲಿರುವ ಸಮಸ್ತವೂ ಪ್ರಭುವಿನದಾಗಿದೆ.” ✡ಉಲ್ಲೇಖನ: ಕೀರ್ತನೆ. 24:1; 50:12; 89:11. PEPS
|
27. ಕ್ರಿಸ್ತ ವಿಶ್ವಾಸಿಯಲ್ಲದ ಒಬ್ಬನು ನಿಮ್ಮನ್ನು ಊಟಕ್ಕೆ ಆಹ್ವಾನಿಸಿದರೆ, ಹೋಗುವುದಕ್ಕೆ ನಿಮಗೆ ಇಷ್ಟವಿದ್ದರೆ, ಅವನು ನಿಮಗೆ ಏನು ಬಡಿಸಿದರೂ ತಿನ್ನಿರಿ. ನೀವು ಆ ಪದಾರ್ಥವನ್ನು ತಿನ್ನಬೇಕೇ ಅಥವಾ ತಿನ್ನಬಾರದೇ ಎಂದು ನಿರ್ಧರಿಸಲು ಪ್ರಶ್ನೆಗಳನ್ನು ಕೇಳಬೇಡಿ.
|
28. ಆದರೆ ಒಬ್ಬನು ನಿಮಗೆ, “ಆ ಪದಾರ್ಥವು ವಿಗ್ರಹಗಳಿಗೆ ಅರ್ಪಿತವಾದದ್ದು” ಎಂದು ಹೇಳಿದರೆ, ನೀವು ಅದನ್ನು ತಿನ್ನಬೇಡಿ. ನಿಮಗೆ ಹೇಳಿದ ವ್ಯಕ್ತಿಯ ನಂಬಿಕೆಯನ್ನು ಹಾಳುಮಾಡಲು ನಿಮಗೆ ಇಷ್ಟವಿಲ್ಲದ್ದರಿಂದ ಮತ್ತು ಆ ಮಾಂಸವನ್ನು ತಿನ್ನುವುದು ತಪ್ಪೆಂದು ಜನರು ಭಾವಿಸಿಕೊಂಡಿರುವುದರಿಂದ ನೀವು ಅದನ್ನು ತಿನ್ನಬಾರದು.
|
29. ಆದರೆ ನೀವೇ ಆ ರೀತಿ ಭಾವಿಸಿಕೊಂಡಿದ್ದೀರಿ ಎಂದು ನಾನು ಹೇಳುತ್ತಿಲ್ಲ. ಆದರೆ ಮತ್ತೊಬ್ಬ ವ್ಯಕ್ತಿಯು ಅದನ್ನು ತಿನ್ನುವುದು ತಪ್ಪೆಂದು ಭಾವಿಸಿಕೊಂಡಿರುವುದರಿಂದ ಅವನ ಮನಸ್ಸಾಕ್ಷಿಯ ದೆಸೆಯಿಂದ ನಮ್ಮ ಸ್ವಾತಂತ್ರ್ಯವು ವಿಚಾರಣೆಗೆ ಗುರಿಯಾಗಬಾರದು.
|
32. ಇತರ ಜನರು ಅಂದರೆ ಯೆಹೂದ್ಯರಾಗಲಿ ಗ್ರೀಕರಾಗಲಿ ಅಥವಾ ದೇವರ ಸಭೆಯವರಾಗಲಿ ತಪ್ಪುಮಾಡಲು ಕಾರಣವಾಗುವಂಥದ್ದನ್ನು ನೀವೆಂದಿಗೂ ಮಾಡಬೇಡಿರಿ.
|
33. ನಾನು ಸಹ ಹಾಗೆಯೇ ಮಾಡುತ್ತೇನೆ. ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸಲು ನಾನು ಪ್ರಯತ್ನಿಸುತ್ತೇನೆ. ನನಗೆ ಹಿತಕರವಾದದ್ದನ್ನು ಮಾಡಲು ಇಷ್ಟಪಡದೆ ಬಹು ಜನರಿಗೆ ಹಿತಕರವಾದದ್ದನ್ನೇ ಮಾಡಲು ಪ್ರಯತ್ನಿಸುತ್ತೇನೆ. ಅವರು ರಕ್ಷಣೆ ಹೊಂದಬೇಕೆಂಬುದೇ ನನ್ನ ಅಪೇಕ್ಷೆ. PE
|