2. {ಅಧಿಕಾರಕ್ಕೆ ಅಧೀನರಾಗಿರಿ} PS ನೀವು ಎಲ್ಲಾ ವಿಷಯಗಳಲ್ಲಿ ನನ್ನನ್ನು ಜ್ಞಾಪಿಸಿಕೊಳುವುದರಿಂದ ನಿಮ್ಮನ್ನು ಹೊಗಳುತ್ತೇನೆ. ನಾನು ನಿಮಗೆ ಕೊಟ್ಟ ಉಪದೇಶಗಳನ್ನು ನೀವು ಸೂಕ್ಷ್ಮವಾಗಿ ಅನುಸರಿಸುತ್ತಿದ್ದೀರಿ.
|
3. ಆದರೆ ನೀವು ಈ ವಿಷಯವನ್ನೂ ಅರ್ಥಮಾಡಿಕೊಳ್ಳಬೇಕೆಂಬುದು ನನ್ನ ಆಸೆ. ಪ್ರತಿಯೊಬ್ಬ ಪುರುಷನಿಗೂ ಕ್ರಿಸ್ತನು ಶಿರಸ್ಸಾಗಿದ್ದಾನೆ; ಸ್ತ್ರೀಗೆ ಪುರುಷನು ಶಿರಸ್ಸಾಗಿದ್ದಾನೆ; ಕ್ರಿಸ್ತನಿಗೆ ದೇವರು ಶಿರಸ್ಸಾಗಿದ್ದಾನೆ. PEPS
|
4. ಪುರುಷನು ಪ್ರವಾದಿಸುವಾಗ ಅಥವಾ ಪ್ರಾರ್ಥಿಸುವಾಗ ತನ್ನ ತಲೆಯ ಮೇಲೆ ಮುಸುಕು ಹಾಕಿಕೊಂಡರೆ ಅದು ಅವನ ಶಿರಸ್ಸಾದ ಕ್ರಿಸ್ತನಿಗೆ ಅಪಮಾನಕರವಾಗಿದೆ.
|
5. ಆದರೆ ಸ್ತ್ರೀಯು ಪ್ರಾರ್ಥಿಸುವಾಗ ಅಥವಾ ಪ್ರವಾದಿಸುವಾಗ ತನ್ನ ತಲೆಗೆ ಮುಸುಕನ್ನು ಹಾಕಿಕೊಂಡಿರಬೇಕು. ಆಕೆಯು ತನ್ನ ತಲೆಗೆ ಮುಸುಕು ಹಾಕಿಲ್ಲದಿದ್ದರೆ, ಅದು ಆಕೆಯ ಶಿರಸ್ಸಾದ ಪುರುಷನಿಗೆ ಅಪಮಾನಕರವಾಗಿದೆ. ಅವಳಿಗೂ ತಲೆಯನ್ನು ಬೋಳಿಸಿಕೊಂಡಿರುವ ಸ್ತ್ರೀಗೂ ಯಾವ ವ್ಯತ್ಯಾಸವಿಲ್ಲ.
|
6. ಸ್ತ್ರೀಯು ತನ್ನ ತಲೆಗೆ ಮುಸುಕು ಹಾಕಿಕೊಳ್ಳದಿದ್ದರೆ, ಆಕೆಯು ತನ್ನ ತಲೆಯನ್ನು ಬೋಳಿಸಿಕೊಳ್ಳಲಿ. ತಲೆಕೂದಲನ್ನು ಕತ್ತರಿಸಿಕೊಳ್ಳುವುದಾಗಲಿ ತಲೆಯನ್ನು ಬೋಳಿಸಿಕೊಳ್ಳುವುದಾಗಲಿ ಸ್ತ್ರೀಗೆ ಅಪಮಾನಕರವಾಗಿದೆ. ಆದ್ದರಿಂದ ಆಕೆ ತನ್ನ ತಲೆಗೆ ಮುಸುಕು ಹಾಕಿಕೊಳ್ಳಬೇಕು. PEPS
|
7. ಆದರೆ ಪುರುಷನು ತನ್ನ ತಲೆಗೆ ಮುಸುಕು ಹಾಕಿಕೊಳ್ಳಬಾರದು. ಏಕೆಂದರೆ, ಪುರುಷನು ದೇವರ ಸ್ವರೂಪವಾಗಿದ್ದಾನೆ ಮತ್ತು ದೇವರ ಪ್ರಭಾವವಾಗಿದ್ದಾನೆ. ಆದರೆ ಸ್ತ್ರೀಯು ಪುರುಷನ ಪ್ರಭಾವವಾಗಿದ್ದಾಳೆ.
|
10. ಆದಕಾರಣವೇ, ಸ್ತ್ರೀಯು ತಾನು ಅಧಿಕಾರದ ಅಧೀನದಲ್ಲಿರುವುದನ್ನು ಸೂಚಿಸಲು ತನ್ನ ತಲೆಗೆ ಮುಸುಕು ಹಾಕಿಕೊಳ್ಳಬೇಕು. ದೇವದೂತರ ನಿಮಿತ್ತವಾಗಿಯೂ ಸ್ತ್ರೀ ತನ್ನ ತಲೆಗೆ ಮುಸುಕು ಹಾಕಿಕೊಳ್ಳಬೇಕು. PEPS
|
12. ಏಕೆಂದರೆ ಸ್ತ್ರೀಯು ಪುರುಷನಿಂದ ಬಂದದ್ದು ಸತ್ಯ. ಆದರೆ ಪುರುಷನು ಸಹ ಸ್ತ್ರೀಯ ಮೂಲಕವಾಗಿ ಹುಟ್ಟುತ್ತಾನೆ. ನಿಜವಾಗಿ ಸಮಸ್ತವೂ ದೇವರಿಂದಲೇ ಬರುತ್ತದೆ. PEPS
|
13. ಹೀಗಿರಲಾಗಿ, ಸ್ತ್ರೀಯು ತನ್ನ ತಲೆಗೆ ಮುಸುಕು ಹಾಕಿಕೊಳ್ಳದೆ ದೇವರಿಗೆ ಪ್ರಾರ್ಥಿಸುವುದು ಸರಿಯೋ? ನೀವೇ ತೀರ್ಮಾನಿಸಿರಿ.
|
15. ಆದರೆ ಉದ್ದನೆಯ ಕೂದಲನ್ನು ಹೊಂದಿರುವುದು ಸ್ತ್ರೀಗೆ ಗೌರವಯುತವಾಗಿದೆ. ಉದ್ದನೆಯ ಕೂದಲನ್ನು ಸ್ತ್ರೀಯ ತಲೆಗೆ ಮುಸುಕನ್ನಾಗಿ ಕೊಡಲಾಗಿದೆ.
|
16. ಕೆಲವು ಜನರು ಇದರ ಬಗ್ಗೆ ಇನ್ನೂ ವಾದಮಾಡಬಯಸಬಹುದು. ಆದರೆ ಈ ಸಂಪ್ರದಾಯವು ನಮ್ಮಲ್ಲಾಗಲಿ ದೇವರ ಸಭೆಗಳಲ್ಲಾಗಲಿ ಇಲ್ಲ. PS
|
17. {ಪ್ರಭುವಿನ ರಾತ್ರಿಭೋಜನ} PS ಈಗ ನಾನು ನಿಮಗೆ ಹೇಳಲಿರುವ ವಿಷಯದಲ್ಲಿ ನಿಮ್ಮನ್ನು ಹೊಗಳುವುದಿಲ್ಲ. ನಿಮ್ಮ ಸಭಾಕೂಟಗಳು ನಿಮಗೆ ಒಳ್ಳೆಯದನ್ನು ಮಾಡುವುದಕ್ಕಿಂತಲೂ ಹೆಚ್ಚು ಕೇಡುಗಳನ್ನೇ ಮಾಡುತ್ತವೆ.
|
18. ಮೊದಲನೆಯದಾಗಿ, ನೀವು ಸಭೆಯಾಗಿ ಸೇರಿಬರುವಾಗ ನಿಮ್ಮಲ್ಲಿ ಪಂಗಡಗಳಿರುವುದಾಗಿ ಕೇಳಿದ್ದೇನೆ. ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.
|
19. (ನಿಮ್ಮಲ್ಲಿ ಭಿನ್ನಾಭಿಪ್ರಾಯಗಳಿರುವುದು ಸಹಜ. ನಿಮ್ಮಲ್ಲಿ ಯಾರು ನಿಜವಾಗಿಯೂ ಒಳ್ಳೆಯದನ್ನು ಮಾಡುತ್ತಿದ್ದಾರೆ ಎಂಬುದನ್ನು ಇದು ಸ್ಪಷ್ಟಪಡಿಸುತ್ತದೆ.) PEPS
|
21. ಏಕೆಂದರೆ, ನೀವು ಊಟ ಮಾಡುವಾಗ, ಇತರರಿಗೋಸ್ಕರ ಕಾಯದೆ ಪ್ರತಿಯೊಬ್ಬರು ತಮ್ಮಷ್ಟಕ್ಕೆ ತಾವೇ ಊಟ ಮಾಡುತ್ತಾರೆ. ಕೆಲವು ಜನರಲ್ಲಿ ಊಟಮಾಡಲು ಸಾಕಷ್ಟು ಆಹಾರ ಇರುವುದಿಲ್ಲ. ಇನ್ನು ಕೆಲವರಲ್ಲಿ ತಿಂದು, ಕುಡಿದು ಮತ್ತರಾಗುವಷ್ಟು ಆಹಾರವಿರುತ್ತದೆ.
|
22. ನೀವು ನಿಮ್ಮ ಸ್ವಂತ ಮನೆಗಳಲ್ಲಿ ತಿನ್ನಬಹುದು, ಕುಡಿಯಬಹುದು. ದೇವರ ಸಭೆಯು ಮುಖ್ಯವಾದದ್ದಲ್ಲವೆಂದು ನೀವು ಯೋಚಿಸುವಂತೆ ತೋರುತ್ತದೆ. ನೀವು ಬಡವರನ್ನು ನಾಚಿಕೆಗೆ ಗುರಿಮಾಡುತ್ತೀರಿ. ನಾನು ನಿಮಗೆ ಏನು ಹೇಳಲಿ? ನೀವು ಮಾಡುತ್ತಿರುವ ಈ ಕಾರ್ಯಕ್ಕೋಸ್ಕರ ನಾನು ನಿಮ್ಮನ್ನು ಹೊಗಳಬೇಕೇ? ನಾನು ನಿಮ್ಮನ್ನು ಹೊಗಳುವುದಿಲ್ಲ. PEPS
|
23. ನಾನು ಪ್ರಭುವಿನಿಂದ ಹೊಂದಿಕೊಂಡದ್ದನ್ನೇ ನಿಮಗೆ ಉಪದೇಶಿಸಿದೆನು. ಅದೇನೆಂದರೆ: ಯೇಸುವನ್ನು ಕೊಲ್ಲುವುದಕ್ಕಾಗಿ ಒಪ್ಪಿಸಿಕೊಟ್ಟ ರಾತ್ರಿಯಲ್ಲಿ, ಆತನು ರೊಟ್ಟಿಯನ್ನು ತೆಗೆದುಕೊಂಡು,
|
24. ಅದಕ್ಕಾಗಿ ಸ್ತೋತ್ರ ಸಲ್ಲಿಸಿ, ಅದನ್ನು ಮುರಿದು, “ಇದು ನನ್ನ ದೇಹ; ಇದನ್ನು ನಿಮಗೋಸ್ಕರ ಕೊಡಲಾಗಿದೆ. ನನ್ನನ್ನು ನೆನಸಿಕೊಳ್ಳುವುದಕ್ಕಾಗಿ ಹೀಗೆ ಮಾಡಿರಿ” ಎಂದು ಹೇಳಿದನು.
|
25. ಅದೇ ರೀತಿಯಲ್ಲಿ ಅವರು ಊಟಮಾಡಿದ ಮೇಲೆ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, “ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಈ ದ್ರಾಕ್ಷಾರಸ ಸೂಚಿಸುತ್ತದೆ. ಈ ಹೊಸ ಒಡಂಬಡಿಕೆ ನನ್ನ ರಕ್ತದಿಂದ ಆರಂಭವಾಗುತ್ತದೆ. ನೀವು ಇದನ್ನು ಕುಡಿಯುವಾಗಲೆಲ್ಲಾ ನನ್ನನ್ನು ನೆನಸಿಕೊಳ್ಳವವರಾಗಿದ್ದೀರಿ” ಎಂದು ಹೇಳಿದನು.
|
26. ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಕುಡಿಯುವಾಗಲೆಲ್ಲಾ ಪ್ರಭುವಿನ ಮರಣವನ್ನು ಆತನು ಬರುವ ತನಕ ಪ್ರಚುರಪಡಿಸುತ್ತೀರಿ. PEPS
|
27. ಹೀಗಿರಲಾಗಿ ಒಬ್ಬನು ಪ್ರಭುವಿನ ರೊಟ್ಟಿಯನ್ನು ತಿನ್ನುವಾಗ, ಪಾತ್ರೆಯಲ್ಲಿ ಕುಡಿಯುವಾಗ ಇವುಗಳ ನಿಜವಾದ ಅರ್ಥವನ್ನು ಕಾರ್ಯಗಳ ಮೂಲಕ ತೋರ್ಪಡಿಸಬೇಕು, ಇಲ್ಲವಾದರೆ ಅವನು ಪ್ರಭುವಿನ ದೇಹಕ್ಕೂ ರಕ್ತಕ್ಕೂ ದೋಷಿಯಾಗುತ್ತಾನೆ.
|
28. ಪ್ರತಿಯೊಬ್ಬ ವ್ಯಕ್ತಿಯು ರೊಟ್ಟಿಯನ್ನು ತಿನ್ನುವುದಕ್ಕಿಂತಲೂ ಪಾತ್ರೆಯಲ್ಲಿ ಕುಡಿಯುವುದಕ್ಕಿಂತಲೂ ಮುಂಚಿತವಾಗಿ ತನ್ನ ಹೃದಯವನ್ನು ಪರಿಶೀಲಿಸಿಕೊಳ್ಳಬೇಕು.
|
29. ಯಾವನಾದರೂ ಪ್ರಭುವಿನ ದೇಹವೆಂದು ಗುರುತಿಸದೆ ರೊಟ್ಟಿಯನ್ನು ತಿಂದರೆ ಮತ್ತು ದ್ರಾಕ್ಷಾರಸವನ್ನು ಕುಡಿದರೆ ಅವನು ತಿಂದದ್ದಕ್ಕೂ ಕುಡಿದದ್ದಕ್ಕೂ ದೋಷಿಯೆಂಬ ತೀರ್ಪಿಗೆ ಒಳಗಾಗುತ್ತಾನೆ.
|
32. ಆದರೆ ಪ್ರಭುವು ನಮಗೆ ತೀರ್ಪು ಮಾಡುವಾಗ, ನಮಗೆ ಸರಿಯಾದ ಮಾರ್ಗವನ್ನು ತೋರಿಸುವುದಕ್ಕಾಗಿಯೂ ಈ ಲೋಕದ ಇತರ ಜನರೊಂದಿಗೆ ನಮಗೆ ಅಪರಾಧಿಗಳೆಂಬ ತೀರ್ಪಾಗದಂತೆಯೂ ಆತನು ನಮ್ಮನ್ನು ಶಿಕ್ಷಿಸುತ್ತಾನೆ. PEPS
|
33. ಆದ್ದರಿಂದ ನನ್ನ ಪ್ರಿಯ ಸಹೋದರ ಸಹೋದರಿಯರೇ, ನೀವು ಊಟ ಮಾಡುವುದಕ್ಕಾಗಿ ಒಟ್ಟಾಗಿ ಸೇರುವಾಗ ಒಬ್ಬರಿಗೊಬ್ಬರು ಕಾದುಕೊಂಡಿರಿ.
|
34. ಒಬ್ಬ ವ್ಯಕ್ತಿಯು ಹಸಿವೆಗೊಂಡಿದ್ದರೆ, ಅವನು ಮನೆಯಲ್ಲಿ ಊಟಮಾಡಲಿ. ನೀವು ಹೀಗೆ ಮಾಡಿದರೆ, ನಿಮ್ಮ ಸಭಾಕೂಟವು ನಿಮ್ಮ ಮೇಲೆ ನ್ಯಾಯತೀರ್ಪನ್ನು ಬರಮಾಡುವುದಿಲ್ಲ. ಉಳಿದ ವಿಷಯಗಳ ಬಗ್ಗೆ ನೀವು ಏನು ಮಾಡಬೇಕೆಂಬುದನ್ನು ನಾನು ನಿಮ್ಮಲ್ಲಿಗೆ ಬಂದಾಗ ತಿಳಿಸಿಕೊಡುತ್ತೇನೆ. PE
|