1. {ಇತರ ವಿಶ್ವಾಸಿಗಳಿಗಾಗಿ ಹಣ ಸಂಗ್ರಹಣೆ} PS ದೇವಜನರಿಗೋಸ್ಕರ ಹಣ ಸಂಗ್ರಹಿಸುವುದರ ವಿಷಯವಾಗಿ ಈಗ ನಾನು ಬರೆಯುತ್ತೇನೆ. ನಾನು ಗಲಾತ್ಯ ಸಭೆಗಳಿಗೆ ಹೇಳಿಕೊಟ್ಟಂತೆ ನೀವೂ ಮಾಡಿರಿ.
|
2. ನಿಮ್ಮಲ್ಲಿ ಪ್ರತಿಯೊಬ್ಬನು ತನಗಾದ ಅಭಿವೃದ್ಧಿಗೆ ತಕ್ಕಂತೆ ನಿಮ್ಮಿಂದ ಸಾಧ್ಯವಾದಷ್ಟು ಹಣವನ್ನು ಪ್ರತಿವಾರದ ಮೊದಲನೆಯ ದಿನವೇ ಪ್ರತ್ಯೇಕಿಸಿ, ವಿಶೇಷವಾದ ಸ್ಥಳವೊಂದರಲ್ಲಿ ಇಟ್ಟಿರಬೇಕು. ಆಗ ನಾನು ನಿಮ್ಮಲ್ಲಿಗೆ ಬಂದ ನಂತರ ಹಣವನ್ನು ಸಂಗ್ರಹಿಸುವ ಅವಶ್ಯಕತೆಯಿರುವುದಿಲ್ಲ.
|
3. ನಾನು ಬಂದಾಗ, ನಿಮ್ಮ ಕೊಡುಗೆಯನ್ನು ಕೆಲವರ ಮೂಲಕ ಜೆರುಸಲೇಮಿಗೆ ಕಳುಹಿಸುವೆನು. ನೀವೆಲ್ಲರೂ ಯಾರನ್ನು ಇಷ್ಟಪಡುತ್ತೀರೋ ಅವರಿಗೆ ನಾನು ಪರಿಚಯದ ಪತ್ರಗಳನ್ನು ಕೊಟ್ಟು ಕಳುಹಿಸುವೆನು.
|
5. {ಪೌಲನ ಯೋಜನೆಗಳು} PS ನಾನು ಮಕೆದೋನಿಯದ ಮೂಲಕ ಹೋಗಬೇಕೆಂದಿರುವೆ. ಆದ್ದರಿಂದ ಮಕೆದೋನಿಯದ ಪ್ರವಾಸವನ್ನು ಮುಗಿಸಿಕೊಂಡು ನಿಮ್ಮಲ್ಲಿಗೆ ಬರುವೆನು.
|
6. ನಾನು ನಿಮ್ಮೊಂದಿಗೆ ಸ್ವಲ್ಪಕಾಲ ಇಳಿದುಕೊಳ್ಳಬಹುದು. ಒಂದುವೇಳೆ ಚಳಿಗಾಲವನ್ನು ಪೂರ್ತಿಯಾಗಿ ನಿಮ್ಮಲ್ಲಿ ಕಳೆಯಬೇಕಾಗಬಹುದು. ಬಳಿಕ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಕಳುಹಿಸಿಕೊಡಬೇಕು.
|
7. ಈಗ ನಿಮ್ಮ ಬಳಿಗೆ ಬರಲು ನನಗೆ ಇಷ್ಟವಿಲ್ಲ. ಏಕೆಂದರೆ ನಾನು ಬೇರೆ ಸ್ಥಳಗಳಿಗೆ ಹೋಗಬೇಕಾಗಿರುವುದರಿಂದ ನಿಮ್ಮೊಂದಿಗೆ ಬಹಳ ಕಾಲವಿರಲು ಸಾಧ್ಯವಿಲ್ಲ. ಪ್ರಭುವು ಅವಕಾಶಕೊಡುವುದಾದರೆ, ನಾನು ನಿಮ್ಮೊಂದಿಗೆ ದೀರ್ಘಕಾಲ ತಂಗುವ ನಿರೀಕ್ಷೆಯಿಂದಿದ್ದೇನೆ.
|
9. ಯಾಕೆಂದರೆ ಮಹತ್ವವಾದ ಮತ್ತು ಫಲಭರಿತವಾದ ಸೇವೆಯನ್ನು ಮಾಡಲು ಇಲ್ಲಿ ನನಗೆ ಒಳ್ಳೆಯ ಅವಕಾಶಗಳಿವೆ. ಆದರೂ ಇಲ್ಲಿ ನನಗೆ ಅನೇಕ ವಿರೋಧಿಗಳಿದ್ದಾರೆ. PEPS
|
10. ತಿಮೊಥೆಯನು ನಿಮ್ಮ ಬಳಿಗೆ ಬರಬಹುದು. ಅವನು ನಿಮ್ಮೊಂದಿಗಿರುವಾಗ ಅವನಿಗೆ ಚಿಂತೆಯಾಗದಂತೆ ನೋಡಿಕೊಳ್ಳಿರಿ. ನಾನು ಪ್ರಭುವಿಗೋಸ್ಕರ ಕೆಲಸ ಮಾಡುತ್ತಿರುವಂತೆ ಅವನು ಸಹ ಮಾಡುತ್ತಿದ್ದಾನೆ.
|
11. ಆದ್ದರಿಂದ ನಿಮ್ಮಲ್ಲಿ ಯಾರೂ ಅವನನ್ನು ತಿರಸ್ಕರಿಸಬಾರದು. ಅವನನ್ನು ನನ್ನ ಬಳಿಗೆ ಸಮಾಧಾನದಿಂದ ಕಳುಹಿಸಿಕೊಡಿರಿ. ಅವನು ಸಹೋದರರೊಂದಿಗೆ ಬರುವುದನ್ನು ನಾನು ಎದುರು ನೋಡುತ್ತಿದ್ದೇನೆ. PEPS
|
12. ನಮ್ಮ ಸಹೋದರನಾದ ಅಪೊಲ್ಲೋಸನ ಬಗ್ಗೆ ನಾನು ಹೇಳುವುದೇನೆಂದರೆ, ಇತರ ಸಹೋದರರೊಂದಿಗೆ ನಿಮ್ಮನ್ನು ಸಂದರ್ಶಿಸಲು ನಾನು ಅವನನ್ನು ಬಹಳವಾಗಿ ಪ್ರೋತ್ಸಾಹಿಸಿದ್ದೇನೆ. ಆದರೆ ಈಗ ಬರುವುದಕ್ಕೆ ಅವನಿಗೆ ನಿಶ್ಚಯವಾಗಿ ಇಷ್ಟವಿರಲಿಲ್ಲ. ಆದರೆ ಅವಕಾಶ ಸಿಕ್ಕಿದಾಗ ಅವನು ನಿಮ್ಮ ಬಳಿಗೆ ಬರುವನು. PS
|
15. ಅಖಾಯದಲ್ಲಿ ಪ್ರಥಮ ವಿಶ್ವಾಸಿಗಳಾದ ಸ್ತೆಫನನನ್ನು ಮತ್ತು ಅವನ ಕುಟುಂಬದವರನ್ನು ನೀವು ಬಲ್ಲಿರಿ. ಅವರು ದೇವರ ಸೇವೆಗಾಗಿ ತಮ್ಮನ್ನು ಒಪ್ಪಿಸಿಕೊಂಡಿದ್ದಾರೆ. ಸಹೋದರ ಸಹೋದರಿಯರೇ, ನಾನು ನಿಮ್ಮನ್ನು ಕೇಳಿಕೊಳ್ಳುವುದೇನೆಂದರೆ,
|
17. ಸ್ತೆಫನನು, ಪೊರ್ತುನಾತನು ಮತ್ತು ಅಖಾಯಿಕನು ಬಂದುದರಿಂದ ನನಗೆ ಸಂತೋಷವಾಯಿತು. ನೀವು ಇಲ್ಲದ್ದರಿಂದ ನನಗುಂಟಾದ ಕೊರತೆಯನ್ನು ಅವರು ನೀಗಿಸಿದ್ದಾರೆ.
|
18. ಅವರು ನನ್ನ ಆತ್ಮಕ್ಕೂ ನಿಮ್ಮ ಆತ್ಮಗಳಿಗೂ ವಿಶ್ರಾಂತಿಯನ್ನು ಕೊಟ್ಟಿದ್ದಾರೆ. ಇಂಥ ಜನರ ಮೌಲ್ಯವನ್ನು ನೀವು ಗುರುತಿಸಬೇಕು. PEPS
|
19. ಏಷ್ಯಾದ ಸಭೆಗಳವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ. ಅಕ್ವಿಲನು ಮತ್ತು ಪ್ರಿಸ್ಕಿಲ್ಲಳು ಪ್ರಭುವಿನ ಹೆಸರಿನಲ್ಲಿ ನಿಮಗೆ ಬಹಳ ವಂದನೆಗಳನ್ನು ತಿಳಿಸಿದ್ದಾರೆ. ಅವರ ಮನೆಯಲ್ಲಿ ಸೇರಿಬರುವ ಸಭೆಯವರು ಸಹ ನಿಮಗೆ ವಂದನೆ ತಿಳಿಸಿದ್ದಾರೆ.
|
20. ಇಲ್ಲಿರುವ ಎಲ್ಲಾ ಸಹೋದರ ಸಹೋದರಿಯರು ನಿಮಗೆ ವಂದನೆ ತಿಳಿಸಿದ್ದಾರೆ. ನೀವು ಒಬ್ಬರನ್ನೊಬ್ಬರು ಭೇಟಿಯಾಗುವಾಗ ಪವಿತ್ರವಾದ ಮುದ್ದಿಟ್ಟು ವಂದಿಸಿರಿ. PEPS
|
22. ಯಾವನಾದರೂ ಪ್ರಭುವನ್ನು ಪ್ರೀತಿಸದಿದ್ದರೆ, ಅವನು ಜೀವದಿಂದ ಬೇರ್ಪಟ್ಟು ನಿತ್ಯನಾಶನ ಹೊಂದಲಿ! PEPS ಪ್ರಭುವೇ ಬಾ! PEPS
|