1. ಇಸ್ರೇಲಿನ ಜನರು ಈಜಿಪ್ಟನ್ನು ಬಿಟ್ಟ ನಾನೂರ ಎಂಭತ್ತನೆಯ ವರ್ಷದಲ್ಲಿ ಅಂದರೆ ರಾಜನಾದ ಸೊಲೊಮೋನನು ಇಸ್ರೇಲನ್ನು ಆಳಲಾರಂಭಿಸಿದ ನಾಲ್ಕನೆಯ ವರ್ಷದಲ್ಲಿ ದೇವಾಲಯದ ನಿರ್ಮಾಣವು ಆರಂಭಗೊಂಡಿತು. ಅದು ವರ್ಷದ ಎರಡನೆಯ ತಿಂಗಳಾದ ಜೀವ್ ತಿಂಗಳಲ್ಲಿ ಆರಂಭಗೊಂಡಿತು.
|
3. ದೇವಾಲಯದ ಮುಂದಿನ ಮಂಟಪವು ಮೂವತ್ತು ಅಡಿ ಉದ್ದ ಮತ್ತು ನಲವತ್ತೈದು ಅಡಿ ಅಗಲವಾಗಿತ್ತು. ಮುಂದಿನ ಮಂಟಪವು ದೇವಾಲಯದ ಮುಖ್ಯಸ್ಥಳದುದ್ದಕ್ಕೂ ವ್ಯಾಪಿಸಿತ್ತು. ಮಂಟಪದ ಉದ್ದವು ದೇವಾಲಯದ ಅಗಲಕ್ಕೆ ಸಮನಾಗಿತ್ತು.
|
4. ದೇವಾಲಯದಲ್ಲಿ ಕಿರಿದಾದ ಕಿಟಿಕಿಗಳಿದ್ದವು. ಈ ಕಿಟಕಿಗಳು ಹೊರಗಡೆಯಲ್ಲಿ ಕಿರಿದಾಗಿಯೂ ಮತ್ತು ಒಳಗಡೆ ದೊಡ್ಡದಾಗಿಯೂ ಇದ್ದವು.
|
5. ನಂತರ ಸೊಲೊಮೋನನು ದೇವಾಲಯದ ಗೋಡೆಯ ಸುತ್ತಲೂ ಸಾಲಾಗಿ ಕೊಠಡಿಗಳನ್ನು ನಿರ್ಮಿಸಿದನು. ಈ ಕೊಠಡಿಗಳನ್ನು ಒಂದರ ಮೇಲೆ ಮತ್ತೊಂದನ್ನು ಕಟ್ಟಿಸಿದನು. ಈ ಸಾಲು ಕೊಠಡಿಗಳು ಮೂರು ಅಂತಸ್ತುಗಳನ್ನು ಹೊಂದಿದ್ದವು.
|
6. ಈ ಕೊಠಡಿಗಳು ದೇವಾಲಯದ ಗೋಡೆಯನ್ನು ಸ್ಪರ್ಶಿಸಿದರೂ, ಅವುಗಳ ತೊಲೆಗಳು ಗೋಡೆಯಲ್ಲಿ ಸೇರಿಕೊಂಡಿರಲಿಲ್ಲ. ಆ ದೇವಾಲಯದ ಗೋಡೆಯ ಮೇಲ್ಭಾಗವು ತೆಳುವಾಗಿತ್ತು. ಆ ಕೊಠಡಿಗಳ ಒಂದು ಕಡೆಯ ಗೋಡೆಯು, ಅದರ ಕೆಳಭಾಗದ ಗೋಡೆಗಿಂತ ತೆಳುವಾಗಿತ್ತು. ಕೆಳ ಅಂತಸ್ತಿನ ಕೊಠಡಿಗಳ ಅಗಲ ಏಳುವರೆ ಅಡಿಗಳು. ಮಧ್ಯದ ಅಂತಸ್ತಿನ ಕೊಠಡಿಗಳ ಅಗಲ ಒಂಭತ್ತು ಅಡಿಗಳು. ಅದರ ಮೇಲಿನ ಕೊಠಡಿಗಳ ಅಗಲ ಹತ್ತೂವರೆ ಅಡಿಗಳು.
|
7. ಈ ಗೋಡೆಗಳನ್ನು ಕಟ್ಟಲು ಕೆಲಸಗಾರರು ದೊಡ್ಡದೊಡ್ಡ ಕಲ್ಲುಗಳನ್ನು ಬಳಸಿದ್ದರು. ಕಲ್ಲುಗಣಿಯಿಂದ ಕಲ್ಲುಗಳನ್ನು ಹೊರಗೆ ತೆಗೆಯುವಾಗಲೇ ಕೆಲಸಗಾರರು ಈ ಕಲ್ಲುಗಳನ್ನು ಕೆತ್ತಿದ್ದರು. ಆದುದರಿಂದ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಉಪಕರಣಗಳ ಶಬ್ದವು ದೇವಾಲಯದಲ್ಲಿ ಕೇಳಿಸುತ್ತಿರಲಿಲ್ಲ.
|
8. ಕೆಳಅಂತಸ್ತಿನ ಕೊಠಡಿಗಳ ಪ್ರವೇಶವು ದೇವಾಲಯದ ದಕ್ಷಿಣದ ಕಡೆಗಿತ್ತು. ಎರಡನೆಯ ಅಂತಸ್ತಿನ ಕೊಠಡಿಗಳಿಗೆ ಹೋಗುವ ಮೆಟ್ಟಿಲುಗಳು ಒಳಗಡೆಯಿದ್ದು, ಅಲ್ಲಿಂದ ಮೂರನೆಯ ಅಂತಸ್ತಿನ ಕೊಠಡಿಗಳಿಗೂ ಹೋಗಬಹುದಾಗಿತ್ತು.
|
9. ಸೊಲೊಮೋನನು ದೇವಾಲಯದ ನಿರ್ಮಾಣವನ್ನು ಮುಗಿಸಿದನು. ದೇವಾಲಯದೊಳಗಿನ ಪ್ರತಿಯೊಂದು ಭಾಗವನ್ನು ದೇವದಾರು ಮರದ ಹಲಗೆಗಳಿಂದ ಹೊದಿಸಿದನು.
|
10. ಸೊಲೊಮೋನನು ದೇವಾಲಯದ ಸುತ್ತಲಿನ ಕೊಠಡಿಗಳ ನಿರ್ಮಾಣವನ್ನೂ ಮುಗಿಸಿದನು. ಒಂದೊಂದು ಅಂತಸ್ತು ಏಳೂವರೆ ಅಡಿಗಳಷ್ಟು ಎತ್ತರವಾಗಿತ್ತು. ಈ ಕೊಠಡಿಗಳ ದೇವದಾರು ತೊಲೆಗಳು ದೇವಾಲಯವನ್ನು ಸ್ಪರ್ಶಿಸುತ್ತ್ತಿದ್ದವು.
|
13. ನೀನು ನಿರ್ಮಿಸುತ್ತಿರುವ ಈ ದೇವಾಲಯದಲ್ಲಿ ನಾನು ಇಸ್ರೇಲರೊಂದಿಗೆ ವಾಸಿಸುತ್ತೇನೆ. ನಾನು ಅವರನ್ನು ಎಂದೆಂದಿಗೂ ಬಿಟ್ಟುಹೋಗುವುದಿಲ್ಲ” ಎಂದು ಹೇಳಿದನು.
|
15. ದೇವಾಲಯದ ಒಳಗಿನ ಗೋಡೆಗಳಿಗೆ ದೇವದಾರು ಮರದ ಹಲಗೆಗಳನ್ನು ನೆಲದಿಂದ ಮಾಳಿಗೆಯವರೆಗೆ ಹೊದಿಸಿದ್ದರು. ಕಲ್ಲಿನ ನೆಲಕ್ಕೆ ತುರಾಯಿ ಮರದ ಹಲಗೆಗಳನ್ನು ಹಾಸಿದ್ದರು.
|
16. ದೇವಾಲಯದ ಹಿಂಭಾಗದಲ್ಲಿ ಅವರು ಮೂವತ್ತು ಅಡಿ ಉದ್ದವಾಗಿರುವ ಒಂದು ಕೊಠಡಿಯನ್ನು ನಿರ್ಮಿಸಿದ್ದರು. ಈ ಕೊಠಡಿಯ ಗೋಡೆಗಳಿಗೂ ದೇವದಾರು ಮರದ ಹಲಗೆಗಳನ್ನು ನೆಲದಿಂದ ಮಾಳಿಗೆಯವರೆಗೆ ಹೊದಿಸಿದ್ದರು. ಈ ಕೊಠಡಿಯನ್ನು ಮಹಾ ಪವಿತ್ರಸ್ಥಳವೆಂದು ಕರೆದರು.
|
18. ಈ ಕೊಠಡಿಯ ಗೋಡೆಗಳಿಗೆ ದೇವದಾರು ಮರದ ಹೊದಿಕೆಗಳನ್ನು ಹೊದಿಸಲಾಗಿದ್ದು ಈ ಗೋಡೆಗಳಲ್ಲಿದ್ದ ಯಾವುದೇ ಕಲ್ಲುಗಳು ಕಂಡು ಬರುತ್ತಿರಲಿಲ್ಲ. ಈ ದೇವದಾರು ಮರದ ಹಲಗೆಗಳ ಮೇಲೆ ಹೂಗಳ ಮತ್ತು ಬಳ್ಳಿಗಳ ಚಿತ್ರಗಳನ್ನು ಕೆತ್ತಲಾಗಿತ್ತು.
|
19. ಸೊಲೊಮೋನನು ದೇವಾಲಯದ ಹಿಂದಿನ ಭಾಗದಲ್ಲಿ ಒಳಗಡೆ ಒಂದು ಕೋಣೆಯನ್ನು ಸಿದ್ಧಪಡಿಸಿದನು. ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಇಡುವುದಕ್ಕಾಗಿಯೇ ಈ ಕೊಠಡಿಯನ್ನು ಸಿದ್ಧಪಡಿಸಲಾಗಿತ್ತು.
|
21. ಸೊಲೊಮೋನನು ಶುದ್ಧ ಚಿನ್ನದ ತಗಡನ್ನು ಈ ಕೊಠಡಿಗೆ ಹೊದಿಸಿದನು. ಈ ಕೊಠಡಿಯ ಮುಂದೆ ಧೂಪವೇದಿಕೆಯನ್ನು ಅವನು ನಿರ್ಮಿಸಿದನು. ಅವನು ಆ ವೇದಿಕೆಗೆ ಚಿನ್ನದ ಹೊದಿಕೆಯನ್ನೂ ಅದರ ಸುತ್ತಲೂ ಚಿನ್ನದ ಸರಪಣಿಗಳನ್ನೂ ಜೋಡಿಸಿದನು. ಆ ಕೊಠಡಿಯಲ್ಲಿ ಎರಡು ಕೆರೂಬಿಗಳ ಪ್ರತಿಮೆಗಳಿದ್ದವು. ಆ ಪ್ರತಿಮೆಗಳಿಗೆ ಚಿನ್ನದ ಹೊದಿಕೆಯನ್ನು ಹೊದಿಸಿದ್ದರು.
|
22. ದೇವಾಲಯಕ್ಕೆಲ್ಲ ಚಿನ್ನದ ಹೊದಿಕೆಯನ್ನು ಹೊದಿಸಿದ್ದರು. ಅಲ್ಲದೆ, ಮಹಾ ಪವಿತ್ರಸ್ಥಳದ ಮುಂದಿನ ಯಜ್ಞವೇದಿಕೆಗೂ ಚಿನ್ನದ ಹೊದಿಕೆಯನ್ನು ಹೊದಿಸಿದ್ದರು.
|
23. ಕೆಲಸಗಾರರು ರೆಕ್ಕೆಗಳಿರುವ ಎರಡು ಕೆರೂಬಿಗಳ ಪ್ರತಿಮೆಗಳನ್ನು ಆಲೀವ್ ಮರದಿಂದ ಮಾಡಿ ಅವುಗಳನ್ನು ಮಹಾಪವಿತ್ರ ಸ್ಥಳದಲ್ಲಿಟ್ಟರು. ಒಂದೊಂದು ಪ್ರತಿಮೆಯು ಹದಿನೈದು ಅಡಿ ಎತ್ತರವಾಗಿತ್ತು.
|
27. ಈ ಕೆರೂಬಿಗಳನ್ನು ಮಹಾಪವಿತ್ರ ಸ್ಥಳದಲ್ಲಿಟ್ಟರು. ಅವುಗಳು ಒಂದಕ್ಕೊಂದು ಸಮೀಪದಲ್ಲಿದ್ದವು. ಅವುಗಳ ರೆಕ್ಕೆಗಳು ಕೊಠಡಿಯ ಮಧ್ಯಭಾಗದಲ್ಲಿ ಒಂದನ್ನೊಂದು ತಾಕುತ್ತಿದ್ದುವು. ಉಳಿದೆರಡು ರೆಕ್ಕೆಗಳು ಎರಡು ಕಡೆಗಳಲ್ಲಿದ್ದ ಗೋಡೆಗಳನ್ನು ತಾಕುತ್ತಿದ್ದುವು.
|
29. ಮುಖ್ಯಕೊಠಡಿಯ ಮತ್ತು ಒಳಕೋಣೆಯ ಗೋಡೆಗಳ ಮೇಲೆ ಕೆರೂಬಿಗಳ, ಖರ್ಜೂರ ವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಕೆತ್ತಿದ್ದರು.
|
31. ಕೆಲಸಗಾರರು ಆಲೀವ್ ಮರದ ಎರಡು ಬಾಗಿಲುಗಳನ್ನು ಮಾಡಿದರು. ಅವರು ಮಹಾಪವಿತ್ರ ಸ್ಥಳದ ಪ್ರವೇಶದ್ವಾರದಲ್ಲಿ ಈ ಎರಡು ಬಾಗಿಲುಗಳನ್ನು ಇಟ್ಟರು. ಬಾಗಿಲಿನ ಚೌಕಟ್ಟನ್ನು ಪಂಚಕೋಣಾಕೃತಿಯಲ್ಲಿ ಮಾಡಿದ್ದರು.
|
32. ಅವರು ಆಲೀವ್ ಮರದಿಂದ ಎರಡು ಬಾಗಿಲುಗಳನ್ನು ಮಾಡಿದರು. ಕೆಲಸಗಾರರು ಕೆರೂಬಿಗಳ, ಖರ್ಜೂರ ವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಬಾಗಿಲುಗಳ ಮೇಲೆ ಕೆತ್ತಿದರು. ನಂತರ ಬಾಗಿಲುಗಳಿಗೆ ಚಿನ್ನವನ್ನು ಹೊದಿಸಿದರು.
|
33. ಅವರು ಮುಖ್ಯ ಕೊಠಡಿಯ ಪ್ರವೇಶಕ್ಕೂ ಬಾಗಿಲುಗಳನ್ನು ಮಾಡಿದರು. ಅವರು ಚೌಕಾಕಾರದ ಬಾಗಿಲಿನ ಚೌಕಟ್ಟನ್ನು ಆಲೀವ್ ಮರದಿಂದ ಮಾಡಿದರು.
|
34. ನಂತರ ಅವರು ತುರಾಯಿ ಮರದ ಬಾಗಿಲುಗಳನ್ನು ಮಾಡಿದರು. ಅಲ್ಲಿ ಎರಡು ಬಾಗಿಲುಗಳಿದ್ದು, ಪ್ರತಿಯೊಂದೂ ಮಡಿಸುವಂತಹ ಎರಡು ಭಾಗಗಳನ್ನು ಹೊಂದಿದ್ದವು.
|
35. ಅವರು ಕೆರೂಬಿಗಳ, ಖರ್ಜೂರವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಬಾಗಿಲುಗಳ ಮೇಲೆ ಕೆತ್ತಿದ್ದರು. ಅವರು ಅವುಗಳಿಗೆ ಚಿನ್ನವನ್ನು ಹೊದಿಸಿದರು.
|
36. ನಂತರ ಅವರು ಒಳಾಂಗಣವನ್ನು ನಿರ್ಮಿಸಿದರು. ಅವರು ಒಳಾಂಗಣದ ಸುತ್ತಲೂ ಗೋಡೆಗಳನ್ನು ನಿರ್ಮಿಸಿದರು. ಪ್ರತಿಯೊಂದು ಗೋಡೆಯು ಕತ್ತರಿಸಿದ ಕಲ್ಲುಗಳ ಮೂರು ಸಾಲುಗಳನ್ನೂ ದೇವದಾರುಮರದ ತೊಲೆಗಳ ಒಂದು ಸಾಲನ್ನೂ ಹೊಂದಿತ್ತು.
|
37. ಅವರು ವರ್ಷದ ಎರಡನೆಯ ತಿಂಗಳಿನ ವೈಶಾಖ ಮಾಸದಲ್ಲಿ ದೇವಾಲಯವನ್ನು ಕಟ್ಟಲಾರಂಭಿಸಿದರು. ಇಸ್ರೇಲನ್ನು ಸೊಲೊಮೋನನು ಆಳಲು ಆರಂಭಿಸಿದ ನಾಲ್ಕನೆಯ ವರ್ಷದಲ್ಲಿ ಇದು ನಡೆಯಿತು.
|
38. ಈ ದೇವಾಲಯದ ನಿರ್ಮಾಣವು ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ಮುಗಿಯಿತು. ಅದು ಸೊಲೊಮೋನನ ಆಳ್ವಿಕೆಯ ಹನ್ನೊಂದನೆಯ ವರ್ಷವಾಗಿತ್ತು. ದೇವಾಲಯವನ್ನು ಕಟ್ಟಲು ಏಳು ವರ್ಷ ಹಿಡಿಯಿತು. ದೇವಾಲಯವನ್ನು ಅದರ ನಿಯಮಾನುಸಾರವಾಗಿ ಕಟ್ಟಿದರು.
|