ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
1 ಸಮುವೇಲನು
1. {ಫಿಲಿಷ್ಟಿಯರು ಯುದ್ಧಕ್ಕೆ ಸಿದ್ಧರಾದರು} [PS] ತರುವಾಯ, ಫಿಲಿಷ್ಟಿಯರು ಇಸ್ರೇಲರ ವಿರುದ್ಧ ಹೋರಾಡಲು ತಮ್ಮ ಸೈನ್ಯವನ್ನೆಲ್ಲ ಒಟ್ಟುಗೂಡಿಸಿದರು. ಆಕೀಷನು, “ನೀನು ಮತ್ತು ನಿನ್ನ ಜನರು ಇಸ್ರೇಲರ ವಿರುದ್ಧ ಹೋರಾಡುವುದಕ್ಕಾಗಿ ನನ್ನ ಜೊತೆಗೂಡಬೇಕೆಂಬುದನ್ನು ನೀನು ಅರ್ಥಮಾಡಿಕೊಂಡಿರುವೆಯಾ?” ಎಂದು ದಾವೀದನನ್ನು ಕೇಳಿದನು. [PE][PS]
2. ದಾವೀದನು, “ಹೌದು! ಆಗ ನಾನು ಮಾಡುವುದನ್ನು ಸ್ವತಃ ನೀವೇ ನೋಡುವಿರಿ” ಎಂದನು. [PE][PS] ಆಕೀಷನು, “ಸರಿ, ನಾನು ನಿನ್ನನ್ನು ಅಂಗರಕ್ಷಕನನ್ನಾಗಿ ಮಾಡಿಕೊಳ್ಳುತ್ತೇನೆ. ನೀನು ನನ್ನನ್ನು ಯುದ್ಧಕಾಲದಲ್ಲೆಲ್ಲಾ ರಕ್ಷಿಸುವೆ” ಎಂದನು. [PS]
3. {ಸೌಲನು ಮತ್ತು ಏಂದೋರಿನ ಯಕ್ಷಿಣಿ} [PS] ಸಮುವೇಲನು ಮರಣಹೊಂದಿದನು. ಸಮುವೇಲನ ಮರಣಕ್ಕಾಗಿ ಇಸ್ರೇಲರೆಲ್ಲಾ ತಮ್ಮ ಸಂತಾಪವನ್ನು ಸೂಚಿಸಿದರು. ಅವರು ಸಮುವೇಲನನ್ನು ಅವನ ಊರಾದ ರಾಮದಲ್ಲಿ ಸಮಾಧಿಮಾಡಿದರು. [PE][PS] ಸೌಲನು ಈ ಮೊದಲು, ಸತ್ತವರ ಆತ್ಮದೊಂದಿಗೆ ಮಾತನಾಡುವವರನ್ನೂ ಜ್ಯೋತಿಷಿಗಳನ್ನೂ ಬಲಾತ್ಕಾರದಿಂದ ಇಸ್ರೇಲಿನಿಂದ ಓಡಿಸಿದ್ದನು. [PE][PS]
4. ಫಿಲಿಷ್ಟಿಯರು ಯುದ್ಧಕ್ಕೆ ಸಿದ್ಧರಾದರು. ಅವರೆಲ್ಲ ಶೂನೇಮಿಗೆ ಬಂದು ಆ ಸ್ಥಳದಲ್ಲಿಯೇ ಪಾಳೆಯಮಾಡಿಕೊಂಡರು. ಸೌಲನು ಇಸ್ರೇಲರನ್ನೆಲ್ಲ ಒಟ್ಟುಗೂಡಿಸಿಕೊಂಡು ಬಂದು ಗಿಲ್ಬೋವದಲ್ಲಿ ಪಾಳೆಯ ಮಾಡಿಕೊಂಡನು.
5. ಸೌಲನು ಫಿಲಿಷ್ಟಿಯರ ಸೈನ್ಯವನ್ನು ನೋಡಿ ಹೆದರಿದನು. ಅವನ ಹೃದಯವು ಭಯದಿಂದ ಬಡಿದುಕೊಳ್ಳತೊಡಗಿತು.
6. ಸೌಲನು ಯೆಹೋವನಿಗೆ ಪ್ರಾರ್ಥನೆ ಮಾಡಿದನು. ಆದರೆ ಯೆಹೋವನು ಅವನಿಗೆ ಉತ್ತರ ನೀಡಲಿಲ್ಲ. ದೇವರು ಕನಸುಗಳಲ್ಲಿಯೂ ಸೌಲನೊಡನೆ ಮಾತನಾಡಲಿಲ್ಲ. ದೇವರು ಅವನಿಗೆ ಊರೀಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲಿಲ್ಲ.
7. ಕಡೆಯದಾಗಿ, ಸೌಲನು ತನ್ನ ಸೇನಾಧಿಪತಿಗಳಿಗೆ, “ಸತ್ತವರ ಆತ್ಮಗಳೊಂದಿಗೆ ಮಾತನಾಡಬಲ್ಲ ಒಬ್ಬ ಮಾಂತ್ರಿಕ ಹೆಂಗಸನ್ನು ಕಂಡುಹಿಡಿಯಿರಿ. ಈ ಯುದ್ಧದಲ್ಲಿ ಏನಾಗುವುದೆಂಬುದನ್ನು ನಾನು ಹೋಗಿ ಅವಳನ್ನು ಕೇಳುತ್ತೇನೆ” ಎಂದು ಹೇಳಿದನು. [PE][PS] ಅವನ ಅಧಿಕಾರಿಗಳು, “ಏಂದೋರಿನಲ್ಲಿ ಒಬ್ಬ ಬೇತಾಳಿಕಳಿದ್ದಾಳೆ” ಎಂದು ಉತ್ತರಿಸಿದರು. [PE][PS]
8. ಯಾರಿಗೂ ತನ್ನ ಗುರುತು ಸಿಕ್ಕದಂತೆ ಸೌಲನು ವೇಷವನ್ನು ಬದಲಾಯಿಸಿಕೊಂಡನು. ಸೌಲನು ತನ್ನ ಜನರಿಬ್ಬರೊಡನೆ ಅದೇ ರಾತ್ರಿಯಲ್ಲೇ ಆ ಬೇತಾಳಿಕಳನ್ನು ನೋಡಲು ಹೋದನು. ಸೌಲನು ಅವಳಿಗೆ, “ಬೇತಾಳದ ಮೂಲಕ ನನ್ನ ಭವಿಷ್ಯವನ್ನು ನನಗೆ ತೋರಿಸು, ನಾನು ಹೆಸರಿಸುವ ವ್ಯಕ್ತಿಯನ್ನು ಕರೆ” ಎಂದು ಕೇಳಿದನು. [PE][PS]
9. ಆದರೆ ಆ ಬೇತಾಳಿಕಳು ಸೌಲನಿಗೆ, “ಸೌಲನು ಏನು ಮಾಡಿದನೆಂಬುದು ನಿನಗೆ ನಿಜವಾಗಿಯೂ ತಿಳಿದಿದೆ. ಅವನು ಮಾಂತ್ರಿಕರನ್ನೂ ಜ್ಯೋತಿಷಿಗಳನ್ನೂ ಬಲಾತ್ಕಾರವಾಗಿ ದೇಶದಿಂದ ಹೊರಗಟ್ಟಿದನು. ನೀನು ನನ್ನನ್ನು ಬಲೆಗೆ ಬೀಳಿಸಿ ಕೊಲ್ಲಲು ಪ್ರಯತ್ನಿಸುತ್ತಿರುವೆ” ಎಂದಳು. [PE][PS]
10. ಸೌಲನು ಯೆಹೋವನ ಹೆಸರಿನಲ್ಲಿ ಆ ಬೇತಾಳಿಕಳಿಗೆ ವಾಗ್ದಾನಮಾಡಿ, “ಯೆಹೋವನಾಣೆ, ಈ ಕಾರ್ಯವನ್ನು ಮಾಡಿದ್ದಕ್ಕಾಗಿ ನಿನಗೆ ದಂಡನೆಯಾಗುವುದಿಲ್ಲ” ಎಂದು ಹೇಳಿದನು. [PE][PS]
11. ಅವಳು, “ನಿನಗಾಗಿ ನಾನು ಯಾರನ್ನು ಬರಮಾಡಬೇಕು?” ಎಂದು ಕೇಳಿದಳು. [PE][PS] ಸೌಲನು, “ಸಮುವೇಲನನ್ನು ಬರಮಾಡು” ಎಂದು ಉತ್ತರಿಸಿದನು. [PE][PS]
12. ಅಂತೆಯೇ ಆಯಿತು. ಆ ಹೆಂಗಸು ಸಮುವೇಲನನ್ನು ಕಂಡ ಕೊಡಲೇ ಗಟ್ಟಿಯಾಗಿ ಅರಚಿದಳು. ಅವಳು ಸೌಲನಿಗೆ, “ನೀನು ನನ್ನನ್ನು ವಂಚಿಸಿದೆ! ನೀನೇ ಸೌಲನು” ಎಂದಳು. [PE][PS]
13. ರಾಜನು ಆ ಹೆಂಗಸಿಗೆ, “ಹೆದರದಿರು! ನಿನಗೇನು ಕಾಣಿಸುತ್ತಿದೆ?” ಎಂದು ಕೇಳಿದನು. [PE][PS] ಆ ಹೆಂಗಸು, “ಒಂದು ಆತ್ಮವು ಭೂಮಿಯೊಳಗಿಂದ [*ಭೂಮಿಯೊಳಗಿಂದ ಅಥವಾ “ಶಿಯೋಲ್.”] ಮೇಲಕ್ಕೆ ಬರುತ್ತಿರುವುದು ನನಗೆ ಕಾಣುತ್ತಿದೆ” ಎಂದು ಉತ್ತರಕೊಟ್ಟಳು. [PE][PS]
14. ಸೌಲನು, “ಅವನ ರೂಪ ಹೇಗಿದೆ?” ಎಂದು ಕೇಳಿದನು. [PE][PS] ಆ ಹೆಂಗಸು, “ಅವನು ನಿಲುವಂಗಿಯನ್ನು ಧರಿಸಿಕೊಂಡಿರುವ ಒಬ್ಬ ಮುದುಕನಂತಿದ್ದಾನೆ” ಎಂದು ಹೇಳಿದಳು. [PE][PS] ಅವನೇ ಸಮುವೇಲನೆಂಬುದನ್ನು ಸೌಲನು ತಿಳಿದುಕೊಂಡು ಸಾಷ್ಟಾಂಗನಮಸ್ಕಾರ ಮಾಡಿದನು.
15. ಸಮುವೇಲನು, “ನನಗೆ ತೊಂದರೆಯನ್ನೇಕೆ ಕೊಡುತ್ತಿರುವೆ? ನೀನು ನನ್ನನ್ನು ನೆಲದ ಮೇಲಕ್ಕೆ ಬರಮಾಡಿದ್ದೇಕೆ?” ಎಂದು ಸೌಲನನ್ನು ಕೇಳಿದನು. [PE][PS] ಸೌಲನು, “ನಾನು ತೊಂದರೆಯಲ್ಲಿದ್ದೇನೆ! ಫಿಲಿಷ್ಟಿಯರು ನನ್ನ ವಿರುದ್ಧ ಹೋರಾಡಲು ಬರುತ್ತಿದ್ದಾರೆ; ದೇವರು ನನ್ನನ್ನು ತ್ಯಜಿಸಿದ್ದಾನೆ. ದೇವರು ನನಗೆ ಉತ್ತರವನ್ನೇ ಕೊಡುತ್ತಿಲ್ಲ; ಆತನು ಪ್ರವಾದಿಗಳಿಂದಾಗಲಿ ಕನಸುಗಳಿಂದಾಗಲೀ ನನಗೆ ಉತ್ತರಿಸುತ್ತಿಲ್ಲ. ಆದ ಕಾರಣವೇ ನಾನು ನಿನ್ನನ್ನು ಕರೆದೆನು. ನಾನು ಮಾಡಬೇಕಾದದ್ದನ್ನು ನನಗೆ ತಿಳಿಸು!” ಎಂದನು. [PE][PS]
16. ಸಮುವೇಲನು, “ಯೆಹೋವನು ನಿನ್ನನ್ನು ತ್ಯಜಿಸಿದ್ದಾನೆ. ಈಗ ಆತನು ನಿನ್ನ ವಿರೋಧಿಯಾಗಿದ್ದಾನೆ. ಆದ್ದರಿಂದ ನನ್ನನ್ನೇಕೆ ಕರೆಯುವೆ?
17. ಯೆಹೋವನು ನಿನಗೆ ಹೇಳಿದ್ದಂತೆಯೇ ಮಾಡಿದನು. ಆತನು ಅವುಗಳ ಬಗ್ಗೆ ನನ್ನ ಮೂಲಕವಾಗಿ ನಿನಗೆ ತಿಳಿಸಿದನು. ಯೆಹೋವನು ರಾಜ್ಯಾಧಿಕಾರವನ್ನು ನಿನ್ನ ಕೈಗಳಿಂದ ಕಿತ್ತುಕೊಂಡು ನಿನ್ನ ನೆರೆಯವರಲ್ಲಿ ಒಬ್ಬನಿಗೆ ಕೊಟ್ಟಿದ್ದಾನೆ. ದಾವೀದನೇ ಆ ನೆರೆಯವನು.
18. ನೀನು ಯೆಹೋವನಿಗೆ ವಿಧೇಯನಾಗಲಿಲ್ಲ. ನೀನು ಅಮಾಲೇಕ್ಯರನ್ನು ನಾಶಗೊಳಿಸಲಿಲ್ಲ; ಯೆಹೋವನು ಅವರ ಬಗ್ಗೆ ಎಷ್ಟು ಕೋಪಗೊಂಡಿದ್ದನೆಂಬುದನ್ನು ಅವರಿಗೆ ತಿಳಿಯಪಡಿಸಿಲ್ಲ. ಆದ್ದರಿಂದಲೇ ಯೆಹೋವನು ಇಂದು ನಿನಗೆ ಹೀಗೆ ಮಾಡಿದ್ದಾನೆ.
19. ಯೆಹೋವನು ನಿನ್ನನ್ನು ಮತ್ತು ಇಸ್ರೇಲರನ್ನು ಫಿಲಿಷ್ಟಿಯರ ವಶಕ್ಕೆ ಒಪ್ಪಿಸುತ್ತಾನೆ. ಫಿಲಿಷ್ಟಿಯರು ಇಸ್ರೇಲ್ ಸೈನ್ಯವನ್ನು ಸೋಲಿಸುವಂತೆ ಯೆಹೋವನು ಮಾಡುತ್ತಾನೆ. ಮಾರನೆಯ ದಿನ, ನೀನು ಮತ್ತು ನಿನ್ನ ಮಕ್ಕಳು ನನ್ನೊಡನೆ ಇಲ್ಲಿರುತ್ತೀರಿ!” ಎಂದು ಹೇಳಿದನು. [PE][PS]
20. ಆ ಕೂಡಲೇ ಸೌಲನು ನೆಲದ ಮೇಲೆ ಕುಸಿದು ಬಿದ್ದನು. ಸಮುವೇಲನು ಹೇಳಿದ ಮಾತುಗಳನ್ನು ಕೇಳಿ ಸೌಲನು ಭಯಗೊಂಡನು. ಸೌಲನು ಅಂದು ಹಗಲು ಮತ್ತು ರಾತ್ರಿ ಏನನ್ನೂ ತಿಂದಿರಲಿಲ್ಲ; ಆದ್ದರಿಂದ ಅವನು ಬಹಳ ಬಲಹೀನನಾಗಿದ್ದನು. [PE][PS]
21. ಆ ಹೆಂಗಸು ಸೌಲನ ಬಳಿಗೆ ಬಂದಳು. ಸೌಲನು ನಿಜವಾಗಿಯೂ ಭಯಗೊಂಡಿರುವುದನ್ನು ಅವಳು ನೋಡಿ, “ಇಲ್ಲಿ ನೋಡು, ನಾನು ನಿನ್ನ ಸೇವಕಿ. ನಾನು ನಿನಗೆ ವಿಧೇಯಳಾಗಿದ್ದೇನೆ. ನಾನು ನನ್ನ ಜೀವವನ್ನೇ ಕಡೆಗಣಿಸಿ ನೀನು ಹೇಳಿದ್ದನ್ನು ಮಾಡಿದೆ.
22. ಈಗ ದಯವಿಟ್ಟು ನನ್ನ ಮಾತನ್ನು ಆಲಿಸು. ನಾನು ನಿನಗೆ ಸ್ವಲ್ಪ ಆಹಾರವನ್ನು ಕೊಡುತ್ತೇನೆ. ನೀನು ತಿನ್ನಲೇಬೇಕು. ಆಗ ನಿನ್ನ ಪ್ರಯಾಣವನ್ನು ಮುಂದುವರಿಸಲು ನಿನಗೆ ಸಾಕಷ್ಟು ಶಕ್ತಿಯಿರುವುದು” ಎಂದು ಹೇಳಿದಳು. [PE][PS]
23. ಆದರೆ ಸೌಲನು ನಿರಾಕರಿಸಿ, “ನಾನು ತಿನ್ನುವುದಿಲ್ಲ” ಅಂದನು. [PE][PS] ಊಟಮಾಡುವಂತೆ ಸೌಲನ ಅಧಿಕಾರಿಗಳೂ ಬೇಡಿಕೊಂಡರು. ಕೊನೆಗೆ ಸೌಲನು ಅವರ ಮಾತಿಗೆ ಕಿವಿಗೊಟ್ಟನು. ಅವನು ನೆಲದಿಂದ ಮೇಲಕ್ಕೆದ್ದು ಮಂಚದ ಮೇಲೆ ಕುಳಿತನು.
24. ಆ ಹೆಂಗಸಿನ ಮನೆಯಲ್ಲಿ ಒಂದು ಕೊಬ್ಬಿದ ಕರು ಇತ್ತು. ಅವಳು ಬೇಗನೆ ಅದನ್ನು ಕೊಯ್ದಳು. ಅವಳು ಸ್ವಲ್ಪ ಹಿಟ್ಟನ್ನು ತೆಗೆದುಕೊಂಡು ಅದನ್ನು ತನ್ನ ಕೈಗಳಿಂದಲೇ ನಾದಿದಳು. ನಂತರ ಅವಳು ಕೆಲವು ರೊಟ್ಟಿಗಳನ್ನು ಸುಟ್ಟಳು.
25. ಆ ಹೆಂಗಸು ಸೌಲನ ಮತ್ತು ಅವನ ಸೇನಾಧಿಕಾರಿಗಳ ಮುಂದೆ ಆಹಾರವನ್ನಿಟ್ಟಳು. ಸೌಲನು ಮತ್ತು ಅವನ ಅಧಿಕಾರಿಗಳು ಊಟಮಾಡಿದರು. ನಂತರ ಆ ರಾತ್ರಿಯೇ ಅವರು ಅಲ್ಲಿಂದ ಹೊರಟುಹೋದರು. [PE]
ಒಟ್ಟು 31 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 28 / 31
ಫಿಲಿಷ್ಟಿಯರು ಯುದ್ಧಕ್ಕೆ ಸಿದ್ಧರಾದರು 1 ತರುವಾಯ, ಫಿಲಿಷ್ಟಿಯರು ಇಸ್ರೇಲರ ವಿರುದ್ಧ ಹೋರಾಡಲು ತಮ್ಮ ಸೈನ್ಯವನ್ನೆಲ್ಲ ಒಟ್ಟುಗೂಡಿಸಿದರು. ಆಕೀಷನು, “ನೀನು ಮತ್ತು ನಿನ್ನ ಜನರು ಇಸ್ರೇಲರ ವಿರುದ್ಧ ಹೋರಾಡುವುದಕ್ಕಾಗಿ ನನ್ನ ಜೊತೆಗೂಡಬೇಕೆಂಬುದನ್ನು ನೀನು ಅರ್ಥಮಾಡಿಕೊಂಡಿರುವೆಯಾ?” ಎಂದು ದಾವೀದನನ್ನು ಕೇಳಿದನು. 2 ದಾವೀದನು, “ಹೌದು! ಆಗ ನಾನು ಮಾಡುವುದನ್ನು ಸ್ವತಃ ನೀವೇ ನೋಡುವಿರಿ” ಎಂದನು. ಆಕೀಷನು, “ಸರಿ, ನಾನು ನಿನ್ನನ್ನು ಅಂಗರಕ್ಷಕನನ್ನಾಗಿ ಮಾಡಿಕೊಳ್ಳುತ್ತೇನೆ. ನೀನು ನನ್ನನ್ನು ಯುದ್ಧಕಾಲದಲ್ಲೆಲ್ಲಾ ರಕ್ಷಿಸುವೆ” ಎಂದನು. ಸೌಲನು ಮತ್ತು ಏಂದೋರಿನ ಯಕ್ಷಿಣಿ 3 ಸಮುವೇಲನು ಮರಣಹೊಂದಿದನು. ಸಮುವೇಲನ ಮರಣಕ್ಕಾಗಿ ಇಸ್ರೇಲರೆಲ್ಲಾ ತಮ್ಮ ಸಂತಾಪವನ್ನು ಸೂಚಿಸಿದರು. ಅವರು ಸಮುವೇಲನನ್ನು ಅವನ ಊರಾದ ರಾಮದಲ್ಲಿ ಸಮಾಧಿಮಾಡಿದರು. ಸೌಲನು ಈ ಮೊದಲು, ಸತ್ತವರ ಆತ್ಮದೊಂದಿಗೆ ಮಾತನಾಡುವವರನ್ನೂ ಜ್ಯೋತಿಷಿಗಳನ್ನೂ ಬಲಾತ್ಕಾರದಿಂದ ಇಸ್ರೇಲಿನಿಂದ ಓಡಿಸಿದ್ದನು. 4 ಫಿಲಿಷ್ಟಿಯರು ಯುದ್ಧಕ್ಕೆ ಸಿದ್ಧರಾದರು. ಅವರೆಲ್ಲ ಶೂನೇಮಿಗೆ ಬಂದು ಆ ಸ್ಥಳದಲ್ಲಿಯೇ ಪಾಳೆಯಮಾಡಿಕೊಂಡರು. ಸೌಲನು ಇಸ್ರೇಲರನ್ನೆಲ್ಲ ಒಟ್ಟುಗೂಡಿಸಿಕೊಂಡು ಬಂದು ಗಿಲ್ಬೋವದಲ್ಲಿ ಪಾಳೆಯ ಮಾಡಿಕೊಂಡನು. 5 ಸೌಲನು ಫಿಲಿಷ್ಟಿಯರ ಸೈನ್ಯವನ್ನು ನೋಡಿ ಹೆದರಿದನು. ಅವನ ಹೃದಯವು ಭಯದಿಂದ ಬಡಿದುಕೊಳ್ಳತೊಡಗಿತು. 6 ಸೌಲನು ಯೆಹೋವನಿಗೆ ಪ್ರಾರ್ಥನೆ ಮಾಡಿದನು. ಆದರೆ ಯೆಹೋವನು ಅವನಿಗೆ ಉತ್ತರ ನೀಡಲಿಲ್ಲ. ದೇವರು ಕನಸುಗಳಲ್ಲಿಯೂ ಸೌಲನೊಡನೆ ಮಾತನಾಡಲಿಲ್ಲ. ದೇವರು ಅವನಿಗೆ ಊರೀಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲಿಲ್ಲ. 7 ಕಡೆಯದಾಗಿ, ಸೌಲನು ತನ್ನ ಸೇನಾಧಿಪತಿಗಳಿಗೆ, “ಸತ್ತವರ ಆತ್ಮಗಳೊಂದಿಗೆ ಮಾತನಾಡಬಲ್ಲ ಒಬ್ಬ ಮಾಂತ್ರಿಕ ಹೆಂಗಸನ್ನು ಕಂಡುಹಿಡಿಯಿರಿ. ಈ ಯುದ್ಧದಲ್ಲಿ ಏನಾಗುವುದೆಂಬುದನ್ನು ನಾನು ಹೋಗಿ ಅವಳನ್ನು ಕೇಳುತ್ತೇನೆ” ಎಂದು ಹೇಳಿದನು. ಅವನ ಅಧಿಕಾರಿಗಳು, “ಏಂದೋರಿನಲ್ಲಿ ಒಬ್ಬ ಬೇತಾಳಿಕಳಿದ್ದಾಳೆ” ಎಂದು ಉತ್ತರಿಸಿದರು. 8 ಯಾರಿಗೂ ತನ್ನ ಗುರುತು ಸಿಕ್ಕದಂತೆ ಸೌಲನು ವೇಷವನ್ನು ಬದಲಾಯಿಸಿಕೊಂಡನು. ಸೌಲನು ತನ್ನ ಜನರಿಬ್ಬರೊಡನೆ ಅದೇ ರಾತ್ರಿಯಲ್ಲೇ ಆ ಬೇತಾಳಿಕಳನ್ನು ನೋಡಲು ಹೋದನು. ಸೌಲನು ಅವಳಿಗೆ, “ಬೇತಾಳದ ಮೂಲಕ ನನ್ನ ಭವಿಷ್ಯವನ್ನು ನನಗೆ ತೋರಿಸು, ನಾನು ಹೆಸರಿಸುವ ವ್ಯಕ್ತಿಯನ್ನು ಕರೆ” ಎಂದು ಕೇಳಿದನು. 9 ಆದರೆ ಆ ಬೇತಾಳಿಕಳು ಸೌಲನಿಗೆ, “ಸೌಲನು ಏನು ಮಾಡಿದನೆಂಬುದು ನಿನಗೆ ನಿಜವಾಗಿಯೂ ತಿಳಿದಿದೆ. ಅವನು ಮಾಂತ್ರಿಕರನ್ನೂ ಜ್ಯೋತಿಷಿಗಳನ್ನೂ ಬಲಾತ್ಕಾರವಾಗಿ ದೇಶದಿಂದ ಹೊರಗಟ್ಟಿದನು. ನೀನು ನನ್ನನ್ನು ಬಲೆಗೆ ಬೀಳಿಸಿ ಕೊಲ್ಲಲು ಪ್ರಯತ್ನಿಸುತ್ತಿರುವೆ” ಎಂದಳು. 10 ಸೌಲನು ಯೆಹೋವನ ಹೆಸರಿನಲ್ಲಿ ಆ ಬೇತಾಳಿಕಳಿಗೆ ವಾಗ್ದಾನಮಾಡಿ, “ಯೆಹೋವನಾಣೆ, ಈ ಕಾರ್ಯವನ್ನು ಮಾಡಿದ್ದಕ್ಕಾಗಿ ನಿನಗೆ ದಂಡನೆಯಾಗುವುದಿಲ್ಲ” ಎಂದು ಹೇಳಿದನು. 11 ಅವಳು, “ನಿನಗಾಗಿ ನಾನು ಯಾರನ್ನು ಬರಮಾಡಬೇಕು?” ಎಂದು ಕೇಳಿದಳು. ಸೌಲನು, “ಸಮುವೇಲನನ್ನು ಬರಮಾಡು” ಎಂದು ಉತ್ತರಿಸಿದನು. 12 ಅಂತೆಯೇ ಆಯಿತು. ಆ ಹೆಂಗಸು ಸಮುವೇಲನನ್ನು ಕಂಡ ಕೊಡಲೇ ಗಟ್ಟಿಯಾಗಿ ಅರಚಿದಳು. ಅವಳು ಸೌಲನಿಗೆ, “ನೀನು ನನ್ನನ್ನು ವಂಚಿಸಿದೆ! ನೀನೇ ಸೌಲನು” ಎಂದಳು. 13 ರಾಜನು ಆ ಹೆಂಗಸಿಗೆ, “ಹೆದರದಿರು! ನಿನಗೇನು ಕಾಣಿಸುತ್ತಿದೆ?” ಎಂದು ಕೇಳಿದನು. ಆ ಹೆಂಗಸು, “ಒಂದು ಆತ್ಮವು ಭೂಮಿಯೊಳಗಿಂದ *ಭೂಮಿಯೊಳಗಿಂದ ಅಥವಾ “ಶಿಯೋಲ್.” ಮೇಲಕ್ಕೆ ಬರುತ್ತಿರುವುದು ನನಗೆ ಕಾಣುತ್ತಿದೆ” ಎಂದು ಉತ್ತರಕೊಟ್ಟಳು. 14 ಸೌಲನು, “ಅವನ ರೂಪ ಹೇಗಿದೆ?” ಎಂದು ಕೇಳಿದನು. ಆ ಹೆಂಗಸು, “ಅವನು ನಿಲುವಂಗಿಯನ್ನು ಧರಿಸಿಕೊಂಡಿರುವ ಒಬ್ಬ ಮುದುಕನಂತಿದ್ದಾನೆ” ಎಂದು ಹೇಳಿದಳು. ಅವನೇ ಸಮುವೇಲನೆಂಬುದನ್ನು ಸೌಲನು ತಿಳಿದುಕೊಂಡು ಸಾಷ್ಟಾಂಗನಮಸ್ಕಾರ ಮಾಡಿದನು. 15 ಸಮುವೇಲನು, “ನನಗೆ ತೊಂದರೆಯನ್ನೇಕೆ ಕೊಡುತ್ತಿರುವೆ? ನೀನು ನನ್ನನ್ನು ನೆಲದ ಮೇಲಕ್ಕೆ ಬರಮಾಡಿದ್ದೇಕೆ?” ಎಂದು ಸೌಲನನ್ನು ಕೇಳಿದನು. ಸೌಲನು, “ನಾನು ತೊಂದರೆಯಲ್ಲಿದ್ದೇನೆ! ಫಿಲಿಷ್ಟಿಯರು ನನ್ನ ವಿರುದ್ಧ ಹೋರಾಡಲು ಬರುತ್ತಿದ್ದಾರೆ; ದೇವರು ನನ್ನನ್ನು ತ್ಯಜಿಸಿದ್ದಾನೆ. ದೇವರು ನನಗೆ ಉತ್ತರವನ್ನೇ ಕೊಡುತ್ತಿಲ್ಲ; ಆತನು ಪ್ರವಾದಿಗಳಿಂದಾಗಲಿ ಕನಸುಗಳಿಂದಾಗಲೀ ನನಗೆ ಉತ್ತರಿಸುತ್ತಿಲ್ಲ. ಆದ ಕಾರಣವೇ ನಾನು ನಿನ್ನನ್ನು ಕರೆದೆನು. ನಾನು ಮಾಡಬೇಕಾದದ್ದನ್ನು ನನಗೆ ತಿಳಿಸು!” ಎಂದನು. 16 ಸಮುವೇಲನು, “ಯೆಹೋವನು ನಿನ್ನನ್ನು ತ್ಯಜಿಸಿದ್ದಾನೆ. ಈಗ ಆತನು ನಿನ್ನ ವಿರೋಧಿಯಾಗಿದ್ದಾನೆ. ಆದ್ದರಿಂದ ನನ್ನನ್ನೇಕೆ ಕರೆಯುವೆ? 17 ಯೆಹೋವನು ನಿನಗೆ ಹೇಳಿದ್ದಂತೆಯೇ ಮಾಡಿದನು. ಆತನು ಅವುಗಳ ಬಗ್ಗೆ ನನ್ನ ಮೂಲಕವಾಗಿ ನಿನಗೆ ತಿಳಿಸಿದನು. ಯೆಹೋವನು ರಾಜ್ಯಾಧಿಕಾರವನ್ನು ನಿನ್ನ ಕೈಗಳಿಂದ ಕಿತ್ತುಕೊಂಡು ನಿನ್ನ ನೆರೆಯವರಲ್ಲಿ ಒಬ್ಬನಿಗೆ ಕೊಟ್ಟಿದ್ದಾನೆ. ದಾವೀದನೇ ಆ ನೆರೆಯವನು. 18 ನೀನು ಯೆಹೋವನಿಗೆ ವಿಧೇಯನಾಗಲಿಲ್ಲ. ನೀನು ಅಮಾಲೇಕ್ಯರನ್ನು ನಾಶಗೊಳಿಸಲಿಲ್ಲ; ಯೆಹೋವನು ಅವರ ಬಗ್ಗೆ ಎಷ್ಟು ಕೋಪಗೊಂಡಿದ್ದನೆಂಬುದನ್ನು ಅವರಿಗೆ ತಿಳಿಯಪಡಿಸಿಲ್ಲ. ಆದ್ದರಿಂದಲೇ ಯೆಹೋವನು ಇಂದು ನಿನಗೆ ಹೀಗೆ ಮಾಡಿದ್ದಾನೆ. 19 ಯೆಹೋವನು ನಿನ್ನನ್ನು ಮತ್ತು ಇಸ್ರೇಲರನ್ನು ಫಿಲಿಷ್ಟಿಯರ ವಶಕ್ಕೆ ಒಪ್ಪಿಸುತ್ತಾನೆ. ಫಿಲಿಷ್ಟಿಯರು ಇಸ್ರೇಲ್ ಸೈನ್ಯವನ್ನು ಸೋಲಿಸುವಂತೆ ಯೆಹೋವನು ಮಾಡುತ್ತಾನೆ. ಮಾರನೆಯ ದಿನ, ನೀನು ಮತ್ತು ನಿನ್ನ ಮಕ್ಕಳು ನನ್ನೊಡನೆ ಇಲ್ಲಿರುತ್ತೀರಿ!” ಎಂದು ಹೇಳಿದನು. 20 ಆ ಕೂಡಲೇ ಸೌಲನು ನೆಲದ ಮೇಲೆ ಕುಸಿದು ಬಿದ್ದನು. ಸಮುವೇಲನು ಹೇಳಿದ ಮಾತುಗಳನ್ನು ಕೇಳಿ ಸೌಲನು ಭಯಗೊಂಡನು. ಸೌಲನು ಅಂದು ಹಗಲು ಮತ್ತು ರಾತ್ರಿ ಏನನ್ನೂ ತಿಂದಿರಲಿಲ್ಲ; ಆದ್ದರಿಂದ ಅವನು ಬಹಳ ಬಲಹೀನನಾಗಿದ್ದನು. 21 ಆ ಹೆಂಗಸು ಸೌಲನ ಬಳಿಗೆ ಬಂದಳು. ಸೌಲನು ನಿಜವಾಗಿಯೂ ಭಯಗೊಂಡಿರುವುದನ್ನು ಅವಳು ನೋಡಿ, “ಇಲ್ಲಿ ನೋಡು, ನಾನು ನಿನ್ನ ಸೇವಕಿ. ನಾನು ನಿನಗೆ ವಿಧೇಯಳಾಗಿದ್ದೇನೆ. ನಾನು ನನ್ನ ಜೀವವನ್ನೇ ಕಡೆಗಣಿಸಿ ನೀನು ಹೇಳಿದ್ದನ್ನು ಮಾಡಿದೆ. 22 ಈಗ ದಯವಿಟ್ಟು ನನ್ನ ಮಾತನ್ನು ಆಲಿಸು. ನಾನು ನಿನಗೆ ಸ್ವಲ್ಪ ಆಹಾರವನ್ನು ಕೊಡುತ್ತೇನೆ. ನೀನು ತಿನ್ನಲೇಬೇಕು. ಆಗ ನಿನ್ನ ಪ್ರಯಾಣವನ್ನು ಮುಂದುವರಿಸಲು ನಿನಗೆ ಸಾಕಷ್ಟು ಶಕ್ತಿಯಿರುವುದು” ಎಂದು ಹೇಳಿದಳು. 23 ಆದರೆ ಸೌಲನು ನಿರಾಕರಿಸಿ, “ನಾನು ತಿನ್ನುವುದಿಲ್ಲ” ಅಂದನು. ಊಟಮಾಡುವಂತೆ ಸೌಲನ ಅಧಿಕಾರಿಗಳೂ ಬೇಡಿಕೊಂಡರು. ಕೊನೆಗೆ ಸೌಲನು ಅವರ ಮಾತಿಗೆ ಕಿವಿಗೊಟ್ಟನು. ಅವನು ನೆಲದಿಂದ ಮೇಲಕ್ಕೆದ್ದು ಮಂಚದ ಮೇಲೆ ಕುಳಿತನು. 24 ಆ ಹೆಂಗಸಿನ ಮನೆಯಲ್ಲಿ ಒಂದು ಕೊಬ್ಬಿದ ಕರು ಇತ್ತು. ಅವಳು ಬೇಗನೆ ಅದನ್ನು ಕೊಯ್ದಳು. ಅವಳು ಸ್ವಲ್ಪ ಹಿಟ್ಟನ್ನು ತೆಗೆದುಕೊಂಡು ಅದನ್ನು ತನ್ನ ಕೈಗಳಿಂದಲೇ ನಾದಿದಳು. ನಂತರ ಅವಳು ಕೆಲವು ರೊಟ್ಟಿಗಳನ್ನು ಸುಟ್ಟಳು. 25 ಆ ಹೆಂಗಸು ಸೌಲನ ಮತ್ತು ಅವನ ಸೇನಾಧಿಕಾರಿಗಳ ಮುಂದೆ ಆಹಾರವನ್ನಿಟ್ಟಳು. ಸೌಲನು ಮತ್ತು ಅವನ ಅಧಿಕಾರಿಗಳು ಊಟಮಾಡಿದರು. ನಂತರ ಆ ರಾತ್ರಿಯೇ ಅವರು ಅಲ್ಲಿಂದ ಹೊರಟುಹೋದರು.
ಒಟ್ಟು 31 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 28 / 31
×

Alert

×

Kannada Letters Keypad References