1. ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದು ಯೆಹೋವನ ಸೇವೆಮಾಡುತ್ತಿದ್ದನು. ಆ ಕಾಲದಲ್ಲಿ ಯೆಹೋವನು ಜನರೊಂದಿಗೆ ಪದೇಪದೇ ಮಾತಾಡುತ್ತಿರಲಿಲ್ಲ; ದರ್ಶನಗಳ ಸಂಖ್ಯೆಯೂ ಕಡಿಮೆಯಾಗಿತ್ತು.
|
2. ಏಲಿಯ ಕಣ್ಣುಗಳು ಮಂಜಾಗಿ ಕುರುಡನೆನ್ನುವಷ್ಟು ಕಾಣುತ್ತಿರಲಿಲ್ಲ. ಒಂದು ರಾತ್ರಿ ಏಲಿಯು ತನ್ನ ಸ್ಥಳದಲ್ಲಿ ಮಲಗಿದ್ದನು.
|
3. ಸಮುವೇಲನು ಯೆಹೋವನ ಪವಿತ್ರ ಆಲಯದಲ್ಲಿ ಹಾಸಿಗೆಯ ಮೇಲೆ ಮಲಗಿದ್ದನು. ಯೆಹೋವನ ಪವಿತ್ರ ಪೆಟ್ಟಿಗೆಯು ಅಲ್ಲಿಯೇ ಇತ್ತು. ಯೆಹೋವನ ದೀಪವು ಇನ್ನೂ ಬೆಳಗುತ್ತಿತ್ತು.
|
5. ಏಲಿಯು ಕರೆದಿರಬಹುದೆಂದು ಸಮುವೇಲನು ನೆನೆಸಿದನು. ಆದ್ದರಿಂದ ಸಮುವೇಲನು ಏಲಿಯ ಬಳಿಗೆ ಓಡಿಹೋಗಿ, “ಇಗೋ, ಇಲ್ಲಿದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ” ಅಂದನು. ಆದರೆ ಏಲಿಯು, “ನಾನು ನಿನ್ನನ್ನು ಕರೆಯಲಿಲ್ಲ. ಹೋಗಿ ಮಲಗಿಕೋ” ಅಂದನು. ಸಮುವೇಲನು ಹೋಗಿ ಮಲಗಿಕೊಂಡನು.
|
6. ನಂತರ ಯೆಹೋವನು, “ಸಮುವೇಲನೇ” ಎಂದು ಮತ್ತೆ ಕರೆದನು. ಸಮುವೇಲನು ಮತ್ತೆ ಏಲಿಯ ಬಳಿಗೆ ಓಡಿಹೋಗಿ, “ಇಗೋ, ಇಲ್ಲಿದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ” ಎಂದು ಹೇಳಿದನು. ಏಲಿಯು, “ನಾನು ನಿನ್ನನ್ನು ಕರೆಯಲಿಲ್ಲ, ಹೋಗಿ ಮಲಗಿಕೋ” ಅಂದನು.
|
8. ಯೆಹೋವನು ಸಮುವೇಲನನ್ನು ಮೂರನೆಯ ಸಲ ಕರೆದನು. ಸಮುವೇಲನು ಮತ್ತೆ ಮೇಲೆದ್ದು ಏಲಿಯನ ಬಳಿಗೆ ಹೋಗಿ, “ಇಗೋ, ಇಲ್ಲಿದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ” ಅಂದನು. ಬಾಲಕನನ್ನು ಕರೆಯುತ್ತಿರುವವನು ಯೆಹೋವನೆಂಬುದು ಏಲಿಗೆ ಆಗ ಅರ್ಥವಾಯಿತು.
|
9. ಏಲಿಯು ಸಮುವೇಲನಿಗೆ, “ಹೋಗಿ ಮಲಗಿಕೋ. ನಿನ್ನನ್ನು ಮತ್ತೆ ಕರೆದರೆ, ‘ಅಪ್ಪಣೆಯಾಗಲಿ, ಯೆಹೋವನೇ ನಾನು ನಿನ್ನ ಸೇವಕ, ಕೇಳಿಸಿಕೊಳ್ಳುತ್ತಿದ್ದೇನೆ’ ಎಂದು ಉತ್ತರಿಸು” ಎಂಬುದಾಗಿ ಹೇಳಿದನು. ಸಮುವೇಲನು ತನ್ನ ಸ್ಥಳದಲ್ಲಿ ಮಲಗಲು ಹೋದನು.
|
10. ಯೆಹೋವನು ಅಲ್ಲಿ ಪ್ರತ್ಯಕ್ಷನಾಗಿ ನಿಂತು ಮೊದಲು ಕರೆದಂತೆಯೇ “ಸಮುವೇಲನೆ, ಸಮುವೇಲನೆ” ಎಂದು ಕರೆದನು. ಸಮುವೇಲನು, “ಅಪ್ಪಣೆಯಾಗಲಿ, ನಾನು ನಿನ್ನ ಸೇವಕ, ಕೇಳಿಸಿಕೊಳ್ಳುತ್ತಿದ್ದೇನೆ” ಎಂದನು.
|
11. ಯೆಹೋವನು ಸಮುವೇಲನಿಗೆ, “ನಾನು ಇಸ್ರೇಲಿನಲ್ಲಿ ಒಂದು ಕಾರ್ಯವನ್ನು ಶೀಘ್ರದಲ್ಲೇ ಮಾಡುವೆನು. ಈ ಕಾರ್ಯದ ಬಗ್ಗೆ ಕೇಳಿದ ಜನರು ಗಾಬರಿಗೊಳ್ಳುವರು.
|
13. ಏಲಿಯ ಕುಟುಂಬವನ್ನು ನಿತ್ಯದಂಡನೆಗೆ ಗುರಿಪಡಿಸುತ್ತೇನೆಂದು ನಾನು ಏಲಿಗೆ ಹೇಳಿರುವೆನು. ಏಲಿಯ ಮಕ್ಕಳು ನನಗೆ ವಿರೋಧವಾಗಿ ಮಾತಾಡಿದ್ದರಿಂದ ಮತ್ತು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ನಾನು ಇದನ್ನು ಮಾಡುತ್ತೇನೆ. ಅಲ್ಲದೆ ಅವರನ್ನು ಹತೋಟಿಯಲ್ಲಿಡಲು ಏಲಿಗೆ ಸಾಧ್ಯವಾಗಲಿಲ್ಲ.
|
14. ಆದಕಾರಣವೇ, ಏಲಿಯ ಕುಟುಂಬವು ಅರ್ಪಿಸುವ ಯಜ್ಞವಾಗಲೀ ಧಾನ್ಯನೈವೇದ್ಯವಾಗಲೀ ಅವರ ಪಾಪಗಳಿಗೆ ಪ್ರಾಯಶ್ಚಿತ್ತವಾಗುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.
|
15. ಸಮುವೇಲನು ನಿದ್ರಿಸಿದನು. ಅವನು ಮುಂಜಾನೆ ಮೇಲೆದ್ದು ಯೆಹೋವನ ಆಲಯದ ಬಾಗಿಲುಗಳನ್ನು ತೆರೆದನು. ಸಮುವೇಲನು ತಾನು ಕಂಡ ದರ್ಶನದ ಬಗ್ಗೆ ಏಲಿಗೆ ತಿಳಿಸಲು ಭಯಪಟ್ಟನು.
|
17. ಏಲಿಯು, “ಯೆಹೋವನು ನಿನಗೆ ಹೇಳಿದ್ದೇನು? ನನ್ನೊಂದಿಗೆ ಅದನ್ನು ಮುಚ್ಚಿಡಬೇಡ. ಆತನು ನಿನ್ನೊಂದಿಗೆ ಆಡಿದ ಮಾತುಗಳಲ್ಲಿ ಏನನ್ನಾದರೂ ಮುಚ್ಚಿಟ್ಟರೆ ಆತನು ನಿನ್ನನ್ನು ಶಿಕ್ಷಿಸುತ್ತಾನೆ” ಎಂದು ತಿಳಿಸಿದನು.
|
18. ಸಮುವೇಲನು ಏನನ್ನೂ ಮುಚ್ಚಿಡದೆ, ಎಲ್ಲವನ್ನೂ ಏಲಿಗೆ ತಿಳಿಸಿದನು. ಏಲಿಯು, “ಆತನು ಯೆಹೋವ. ಆತನು ತನಗೆ ಸರಿಕಾಣುವದನ್ನೇ ಮಾಡಲಿ” ಎಂದು ಹೇಳಿದನು.
|
19. ಯೆಹೋವನು ಸಮುವೇಲನ ಸಂಗಡವಿದ್ದನು; ಸಮುವೇಲನು ಬೆಳೆದು ದೊಡ್ಡವನಾದನು; ಸಮುವೇಲನ ಯಾವ ಸಂದೇಶವೂ ಸುಳ್ಳಾಗದಂತೆ ಯೆಹೋವನು ನೋಡಿಕೊಂಡನು.
|
21. ಯೆಹೋವನು ಶೀಲೋವಿನಲ್ಲಿ ಸಮುವೇಲನಿಗೆ ದರ್ಶನ ಕೊಡುವುದನ್ನು ಮುಂದುವರಿಸಿದನು. ಯೆಹೋವನು ಸಮುವೇಲನಿಗೆ ತನ್ನ ವಾಕ್ಯದ ಮೂಲಕ ತನ್ನನ್ನು ಪ್ರಕಟಿಸಿಕೊಂಡನು.
|