3. ಆದರೆ ಸಮುವೇಲನ ಮಕ್ಕಳು ಅವನಂತೆ ನಡೆದುಕೊಳ್ಳಲಿಲ್ಲ. ಅವರು ಲಂಚವನ್ನು ಪಡೆದು ನ್ಯಾಯಾಲಯದಲ್ಲಿ ಅನ್ಯಾಯದ ತೀರ್ಪುಗಳು ಮಾಡುತ್ತಿದ್ದರು ಮತ್ತು ಜನರನ್ನು ವಂಚಿಸುತ್ತಿದ್ದರು.
|
5. ಹಿರಿಯರು ಸಮುವೇಲನಿಗೆ, “ನೀನು ಮುದುಕನಾಗಿರುವೆ ಮತ್ತು ನಿನ್ನ ಮಕ್ಕಳು ಒಳ್ಳೆಯ ಮಾರ್ಗದಲ್ಲಿ ನಡೆಯುತ್ತಿಲ್ಲ, ಅವರು ನಿನ್ನಂತಲ್ಲ. ಈಗ, ಬೇರೆ ದೇಶಗಳಂತೆ ಒಬ್ಬ ರಾಜನನ್ನು ನಮ್ಮನ್ನಾಳಲು ನೇಮಿಸು” ಎಂದು ಹೇಳಿದರು.
|
6. ಹೀಗೆ ಹಿರಿಯರೆಲ್ಲರು ತಮ್ಮನ್ನು ಮುನ್ನಡೆಸಲು ರಾಜನೊಬ್ಬನು ಬೇಕೆಂದರು. ಸಮುವೇಲನಿಗೆ ಇದು ಸರಿಯೆನಿಸಲಿಲ್ಲ. ಆದ್ದರಿಂದ ಅವನು ಯೆಹೋವನಲ್ಲಿ ಪ್ರಾರ್ಥಿಸಿದನು.
|
7. ಯೆಹೋವನು ಅವನಿಗೆ, “ಜನರು ನಿನಗೆ ಹೇಳಿದಂತೆ ಮಾಡು ಅವರು ನಿನ್ನನ್ನು ತಿರಸ್ಕರಿಸಲಿಲ್ಲ. ಆದರೆ ನನ್ನನ್ನು ತಿರಸ್ಕರಿಸಿದ್ದಾರೆ! ಅವರಿಗೆ ನಾನು ರಾಜನಾಗಿರುವುದು ಬೇಕಿಲ್ಲ!
|
8. ಅವರು ಯಾವಾಗಲೂ ಮಾಡಿದಂತೆ ಈಗಲೂ ಮಾಡುತ್ತಿದ್ದಾರೆ. ಅವರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆನು. ಆದರೆ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳ ಸೇವೆ ಮಾಡಿದರು. ಅವರು ನಿನಗೂ ಹೀಗೆಯೇ ಮಾಡುತ್ತಿದ್ದಾರೆ.
|
9. ಆದ್ದರಿಂದ ಜನರ ಮಾತಿಗೆ ಕಿವಿಗೊಟ್ಟು ಅವರು ಹೇಳಿದಂತೆ ಮಾಡು. ಆದರೆ ಅವರಿಗೆ ಎಚ್ಚರಿಕೆಕೊಡು. ರಾಜನಾದವನು ಜನರಿಗೆ ಏನು ಮಾಡುತ್ತಾನೆ ಎಂಬುದನ್ನು ಅವರಿಗೆ ತಿಳಿಸಿ ಹೇಳು! ರಾಜನಾದವನು ಜನರನ್ನು ಹೇಗೆ ಆಳುತ್ತಾನೆಂಬುದನ್ನೂ ಅವರಿಗೆ ತಿಳಿಸಿಕೊಡು” ಎಂದು ಹೇಳಿದನು.
|
11. ಸಮುವೇಲನು, “ನೀವು ನಿಮ್ಮನ್ನು ಆಳಲು ರಾಜನು ಬೇಕೆಂದರೆ, ಅವನು ಬಲವಂತದಿಂದ ಹೀಗೆಲ್ಲ ಮಾಡುತ್ತಾನೆ: ಅವನು ನಿಮ್ಮ ಗಂಡುಮಕ್ಕಳನ್ನು ತೆಗೆದುಕೊಂಡು ತನ್ನ ಸೇವಕರನ್ನಾಗಿಯೂ ಸೈನಿಕರನ್ನಾಗಿಯೂ ಮಾಡಿಕೊಳ್ಳುವನು. ಅವರು ಅವನ ರಥಸೈನ್ಯದಲ್ಲಿಯೂ ಅಶ್ವಸೈನ್ಯದಲ್ಲಿಯೂ ಸೇರಿ ಹೋರಾಡಬೇಕಾಗುತ್ತದೆ. ನಿನ್ನ ಮಕ್ಕಳು ರಾಜನ ರಥದ ಮುಂದೆ ಓಡುವ ಬೆಂಗಾವಲಿನವರಾಗಬೇಕಾಗುತ್ತದೆ.
|
12. ರಾಜನು ನಿಮ್ಮ ಮಕ್ಕಳನ್ನು ಯೋಧರನ್ನಾಗಿ ಮಾಡಿಕೊಳ್ಳುವನು. ಅವರಲ್ಲಿ ಕೆಲವರು ಒಂದು ಸಾವಿರ ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. ಇನ್ನು ಕೆಲವರು ಐವತ್ತು ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. ತನ್ನ ಭೂಮಿಯನ್ನು ಉಳಲು ಮತ್ತು ಪೈರನ್ನು ಕೊಯ್ಯಲು ರಾಜನು ನಿಮ್ಮ ಮಕ್ಕಳನ್ನು ತೆಗೆದುಕೊಳ್ಳುವನು; ಯುದ್ಧದ ಆಯುಧಗಳನ್ನು ತಯಾರಿಸಲೂ ತನ್ನ ರಥಕ್ಕೆ ಬೇಕಾದ ಸಾಮಾಗ್ರಿಗಳನ್ನು ತಯಾರಿಸಲೂ ಅವನು ಅವರನ್ನು ಬಳಸಿಕೊಳ್ಳುವನು.
|
13. “ರಾಜನು ನಿಮ್ಮ ಹೆಣ್ಣುಮಕ್ಕಳನ್ನು ತೆಗೆದುಕೊಂಡು ತನಗಾಗಿ ಸುಗಂಧದ್ರವ್ಯಗಳನ್ನು ತಯಾರಿಸಲೂ ಅಡಿಗೆ ಮಾಡಲೂ ರೊಟ್ಟಿಸುಡುವುದಕ್ಕೂ ನೇಮಿಸಿಕೊಳ್ಳುವನು.
|
14. “ನಿಮಗೆ ಸೇರಿದ ಉತ್ತಮ ಹೊಲಗಳನ್ನೂ ದ್ರಾಕ್ಷಿ ತೋಟಗಳನ್ನೂ ಆಲಿವ್ ತೋಪುಗಳನ್ನೂ ರಾಜನು ಕಿತ್ತುಕೊಂಡು ತನ್ನ ಅಧಿಕಾರಿಗಳಿಗೆ ಕೊಡುತ್ತಾನೆ.
|
15. ನೀವು ಬೆಳೆದ ಧಾನ್ಯಗಳಲ್ಲಿ ಮತ್ತು ದ್ರಾಕ್ಷಿಗಳಲ್ಲಿ ಅವನು ಹತ್ತನೆ ಒಂದು ಭಾಗವನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಸೇವಕರಿಗೂ ಕೊಡುತ್ತಾನೆ.
|
16. ರಾಜನು, ನಿಮ್ಮ ಸೇವಕಸೇವಕಿಯರನ್ನು ತೆಗೆದುಕೊಳ್ಳುವನು; ಶ್ರೇಷ್ಠವಾದ ಎತ್ತುಗಳನ್ನೂ ಕತ್ತೆಗಳನ್ನೂ ತೆಗೆದುಕೊಂಡು ತನ್ನ ಕೆಲಸಕ್ಕಾಗಿ ಬಳಸಿಕೊಳ್ಳುವನು.
|
18. ರಾಜನು ಬೇಕೆಂದು ಕೇಳಿಕೊಂಡದ್ದಕ್ಕಾಗಿ ಗೋಳಾಡುವಿರಿ. ಆದರೆ ಆಗ ಯೆಹೋವನು ನಿಮಗೆ ಉತ್ತರಿಸುವುದಿಲ್ಲ” ಎಂದು ಹೇಳಿದನು.
|
20. ಆಗ ನಾವು ಇತರ ಅನ್ಯಜನಾಂಗಗಳಂತೆ ಆಗುವೆವು. ನಮ್ಮ ರಾಜನು ನಮ್ಮನ್ನು ಮುನ್ನಡೆಸುವನು. ಅವನು ನಮ್ಮೊಡನೆ ಬಂದು ನಮಗೋಸ್ಕರ ಹೋರಾಡುವನು” ಎಂದು ಹೇಳಿದರು.
|
22. ಯೆಹೋವನು ಅವನಿಗೆ, “ಅವರ ಇಷ್ಟದಂತೆ ಅವರಿಗೊಬ್ಬ ರಾಜನನ್ನು ನೇಮಿಸು” ಎಂದು ಹೇಳಿದನು. ಆಗ ಸಮುವೇಲನು ಇಸ್ರೇಲರಿಗೆ, “ಹಾಗೆಯೇ ಆಗಲಿ, ನೀವು ಒಬ್ಬ ಹೊಸ ರಾಜನನ್ನು ಪಡೆದುಕೊಳ್ಳುವಿರಿ. ಈಗ ನೀವೆಲ್ಲ ನಿಮ್ಮ ನಿಮ್ಮ ಮನೆಗಳಿಗೆ ಹಿಂದಿರುಗಿರಿ” ಎಂದನು.
|