ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
1 ಥೆಸಲೊನೀಕದವರಿಗೆ
1. ತಂದೆಯಾದ ದೇವರಲ್ಲಿಯೂ ಮತ್ತು ಪ್ರಭುವಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ ಮತ್ತು ತಿಮೊಥೆ ಬರೆಯುವ ಪತ್ರ. [PE][PS] ದೇವರ ಕೃಪೆಯೂ ಶಾಂತಿಯೂ ನಿಮಗಿರಲಿ. [PS]
2. {ಥೆಸಲೋನಿಕದವರ ಜೀವನ ಮತ್ತು ನಂಬಿಕೆ} [PS] ದೇವರಿಗೆ ಪ್ರಾರ್ಥನೆ ಮಾಡುವಾಗ ನಿಮ್ಮನ್ನು ಯಾವಾಗಲೂ ಜ್ಞಾಪಿಸಿಕೊಂಡು ನಿಮ್ಮೆಲ್ಲರ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ.
3. ನಮ್ಮ ತಂದೆಯಾದ ದೇವರಿಗೆ ಪ್ರಾರ್ಥನೆ ಮಾಡುವಾಗ ನಿಮ್ಮ ನಂಬಿಕೆಯ ಮತ್ತು ಪ್ರೀತಿಯ ಫಲವಾಗಿ ಮಾಡಿದ ಕಾರ್ಯಗಳಿಗಾಗಿಯೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಿಮಗಿರುವ ನಿರೀಕ್ಷೆಯಿಂದ ನೀವು ದೃಢವಾಗಿರುವುದಕ್ಕಾಗಿಯೂ ನಾವು ಆತನಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ. [PE][PS]
4. ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ಪ್ರೀತಿಸುತ್ತಾನೆ. ಆತನು ನಿಮ್ಮನ್ನು ತನ್ನವರನ್ನಾಗಿ ಆರಿಸಿಕೊಂಡಿದ್ದಾನೆಂಬುದೂ ನಮಗೆ ತಿಳಿದಿದೆ.
5. ನಿಮಗೆ ಸುವಾರ್ತೆಯನ್ನು ಶಕ್ತಿಯೊಡನೆ ತಂದಿದ್ದೇವೆ. ಕೇವಲ ನುಡಿಗಳನ್ನು ಬಳಸದೆ ಅದನ್ನು ಪವಿತ್ರಾತ್ಮನೊಡನೆಯೂ ಮತ್ತು ಅದು ಸತ್ಯವೆಂಬ ನಿಶ್ಚಿತ ಜ್ಞಾನದೊಡನೆಯೂ ತಂದಿದ್ದೇವೆ. ಇದಲ್ಲದೆ ನಾವು ನಿಮ್ಮೊಡನೆ ಇದ್ದಾಗ ನಿಮಗೋಸ್ಕರ ಹೇಗೆ ಜೀವಿಸಿದ್ದೆವು ಎಂಬುದು ನಿಮಗೆ ತಿಳಿದಿದೆ. ನಿಮಗೆ ಸಹಾಯ ಮಾಡುವುದಕ್ಕಾಗಿ ಹಾಗೆ ಜೀವಿಸಿದೆವು.
6. ನೀವು ನಮ್ಮನ್ನೂ ಪ್ರಭುವನ್ನೂ ಅನುಸರಿಸಿದಿರಿ; ಬಹಳ ಹಿಂಸೆಯನ್ನು ಅನುಭವಿಸಿದಿರಿ; ನಮ್ಮ ಉಪದೇಶವನ್ನು ನೀವು ಸಂತಸದಿಂದ ಒಪ್ಪಿಕೊಂಡಿರಿ. ಪವಿತ್ರಾತ್ಮನೇ ನಿಮಗೆ ಆ ಸಂತಸವನ್ನು ನೀಡಿದನು. [PE][PS]
7. ಮಕೆದೋನಿಯ ಮತ್ತು ಅಖಾಯದಲ್ಲಿದ್ದ ನಂಬಿಗಸ್ತರಿಗೆಲ್ಲಾ ನೀವು ಮಾದರಿಯಾದಿರಿ.
8. ಪ್ರಭುವಿನ ಉಪದೇಶವು ಮಕೆದೋನಿಯ ಮತ್ತು ಅಖಾಯದಲ್ಲಿ ನಿಮ್ಮಿಂದ ಪ್ರಚಾರವಾಯಿತು. ಇದಲ್ಲದೆ ದೇವರ ಮೇಲಿನ ನಿಮ್ಮ ನಂಬಿಕೆಯು ಎಲ್ಲಾ ಕಡೆಗಳಲ್ಲಿಯೂ ತಿಳಿದುಬಂದಿತು. ಆದುದರಿಂದ ನಿಮ್ಮ ನಂಬಿಕೆಯ ಬಗ್ಗೆ ಏನೂ ಹೇಳಬೇಕಾಗಿಲ್ಲ.
9. ನಾವು ನಿಮ್ಮೊಡನೆ ಇದ್ದಾಗ ನೀವು ನಮ್ಮ ಬೋಧನೆಯನ್ನು ಹೃತ್ಪೂರ್ವಕವಾಗಿ ಸ್ವೀಕರಿಸಿಕೊಂಡದ್ದರ ಕುರಿತಾಗಿಯೂ ವಿಗ್ರಹಾರಾಧನೆಯನ್ನು ನಿಲ್ಲಿಸಿ ಜೀವವುಳ್ಳ ಸತ್ಯದೇವರನ್ನು ಆರಾಧಿಸತೊಡಗಿದ್ದರ ಕುರಿತಾಗಿಯೂ ಅಲ್ಲಿನ ಜನರೆಲ್ಲರೂ ತಿಳಿಸುತ್ತಾರೆ.
10. ದೇವಕುಮಾರನು ಪರಲೋಕದಿಂದ ಬರುವುದನ್ನು ಎದುರುನೋಡುವುದಕ್ಕಾಗಿ ನೀವು ಹಾಗೆ ಮಾಡಿದಿರಿ. ದೇವರೇ ಆ ಕುಮಾರನನ್ನು ಸತ್ತವರೊಳಗಿಂದ ಜೀವಂತವಾಗಿ ಮೇಲಕ್ಕೆಬ್ಬಿಸಿದನು. ಆತನೇ ಯೇಸು. ಮುಂದೆ ಬರುವ ದೇವರ ಕೋಪದ ತೀರ್ಪಿನಿಂದ ನಮ್ಮನ್ನು ರಕ್ಷಿಸುವವನು ಆತನೇ. [PE]

ಟಿಪ್ಪಣಿಗಳು

No Verse Added

ಒಟ್ಟು 5 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 5
1 2 3 4 5
1 ಥೆಸಲೊನೀಕದವರಿಗೆ 1:11
1 ತಂದೆಯಾದ ದೇವರಲ್ಲಿಯೂ ಮತ್ತು ಪ್ರಭುವಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ ಮತ್ತು ತಿಮೊಥೆ ಬರೆಯುವ ಪತ್ರ. ದೇವರ ಕೃಪೆಯೂ ಶಾಂತಿಯೂ ನಿಮಗಿರಲಿ. ಥೆಸಲೋನಿಕದವರ ಜೀವನ ಮತ್ತು ನಂಬಿಕೆ 2 ದೇವರಿಗೆ ಪ್ರಾರ್ಥನೆ ಮಾಡುವಾಗ ನಿಮ್ಮನ್ನು ಯಾವಾಗಲೂ ಜ್ಞಾಪಿಸಿಕೊಂಡು ನಿಮ್ಮೆಲ್ಲರ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. 3 ನಮ್ಮ ತಂದೆಯಾದ ದೇವರಿಗೆ ಪ್ರಾರ್ಥನೆ ಮಾಡುವಾಗ ನಿಮ್ಮ ನಂಬಿಕೆಯ ಮತ್ತು ಪ್ರೀತಿಯ ಫಲವಾಗಿ ಮಾಡಿದ ಕಾರ್ಯಗಳಿಗಾಗಿಯೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಿಮಗಿರುವ ನಿರೀಕ್ಷೆಯಿಂದ ನೀವು ದೃಢವಾಗಿರುವುದಕ್ಕಾಗಿಯೂ ನಾವು ಆತನಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ. 4 ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ಪ್ರೀತಿಸುತ್ತಾನೆ. ಆತನು ನಿಮ್ಮನ್ನು ತನ್ನವರನ್ನಾಗಿ ಆರಿಸಿಕೊಂಡಿದ್ದಾನೆಂಬುದೂ ನಮಗೆ ತಿಳಿದಿದೆ. 5 ನಿಮಗೆ ಸುವಾರ್ತೆಯನ್ನು ಶಕ್ತಿಯೊಡನೆ ತಂದಿದ್ದೇವೆ. ಕೇವಲ ನುಡಿಗಳನ್ನು ಬಳಸದೆ ಅದನ್ನು ಪವಿತ್ರಾತ್ಮನೊಡನೆಯೂ ಮತ್ತು ಅದು ಸತ್ಯವೆಂಬ ನಿಶ್ಚಿತ ಜ್ಞಾನದೊಡನೆಯೂ ತಂದಿದ್ದೇವೆ. ಇದಲ್ಲದೆ ನಾವು ನಿಮ್ಮೊಡನೆ ಇದ್ದಾಗ ನಿಮಗೋಸ್ಕರ ಹೇಗೆ ಜೀವಿಸಿದ್ದೆವು ಎಂಬುದು ನಿಮಗೆ ತಿಳಿದಿದೆ. ನಿಮಗೆ ಸಹಾಯ ಮಾಡುವುದಕ್ಕಾಗಿ ಹಾಗೆ ಜೀವಿಸಿದೆವು. 6 ನೀವು ನಮ್ಮನ್ನೂ ಪ್ರಭುವನ್ನೂ ಅನುಸರಿಸಿದಿರಿ; ಬಹಳ ಹಿಂಸೆಯನ್ನು ಅನುಭವಿಸಿದಿರಿ; ನಮ್ಮ ಉಪದೇಶವನ್ನು ನೀವು ಸಂತಸದಿಂದ ಒಪ್ಪಿಕೊಂಡಿರಿ. ಪವಿತ್ರಾತ್ಮನೇ ನಿಮಗೆ ಆ ಸಂತಸವನ್ನು ನೀಡಿದನು. 7 ಮಕೆದೋನಿಯ ಮತ್ತು ಅಖಾಯದಲ್ಲಿದ್ದ ನಂಬಿಗಸ್ತರಿಗೆಲ್ಲಾ ನೀವು ಮಾದರಿಯಾದಿರಿ. 8 ಪ್ರಭುವಿನ ಉಪದೇಶವು ಮಕೆದೋನಿಯ ಮತ್ತು ಅಖಾಯದಲ್ಲಿ ನಿಮ್ಮಿಂದ ಪ್ರಚಾರವಾಯಿತು. ಇದಲ್ಲದೆ ದೇವರ ಮೇಲಿನ ನಿಮ್ಮ ನಂಬಿಕೆಯು ಎಲ್ಲಾ ಕಡೆಗಳಲ್ಲಿಯೂ ತಿಳಿದುಬಂದಿತು. ಆದುದರಿಂದ ನಿಮ್ಮ ನಂಬಿಕೆಯ ಬಗ್ಗೆ ಏನೂ ಹೇಳಬೇಕಾಗಿಲ್ಲ. 9 ನಾವು ನಿಮ್ಮೊಡನೆ ಇದ್ದಾಗ ನೀವು ನಮ್ಮ ಬೋಧನೆಯನ್ನು ಹೃತ್ಪೂರ್ವಕವಾಗಿ ಸ್ವೀಕರಿಸಿಕೊಂಡದ್ದರ ಕುರಿತಾಗಿಯೂ ವಿಗ್ರಹಾರಾಧನೆಯನ್ನು ನಿಲ್ಲಿಸಿ ಜೀವವುಳ್ಳ ಸತ್ಯದೇವರನ್ನು ಆರಾಧಿಸತೊಡಗಿದ್ದರ ಕುರಿತಾಗಿಯೂ ಅಲ್ಲಿನ ಜನರೆಲ್ಲರೂ ತಿಳಿಸುತ್ತಾರೆ. 10 ದೇವಕುಮಾರನು ಪರಲೋಕದಿಂದ ಬರುವುದನ್ನು ಎದುರುನೋಡುವುದಕ್ಕಾಗಿ ನೀವು ಹಾಗೆ ಮಾಡಿದಿರಿ. ದೇವರೇ ಆ ಕುಮಾರನನ್ನು ಸತ್ತವರೊಳಗಿಂದ ಜೀವಂತವಾಗಿ ಮೇಲಕ್ಕೆಬ್ಬಿಸಿದನು. ಆತನೇ ಯೇಸು. ಮುಂದೆ ಬರುವ ದೇವರ ಕೋಪದ ತೀರ್ಪಿನಿಂದ ನಮ್ಮನ್ನು ರಕ್ಷಿಸುವವನು ಆತನೇ.
ಒಟ್ಟು 5 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 5
1 2 3 4 5
Common Bible Languages
West Indian Languages
×

Alert

×

kannada Letters Keypad References