1. ಆಸನ ಮಗನಾದ ಯೆಹೋಷಾಫಾಟನು ಪಟ್ಟಕ್ಕೆ ಬಂದನು. ಅವನು ತನ್ನ ರಾಜ್ಯವನ್ನು ಬಲಪಡಿಸಿ ಇಸ್ರೇಲರಿಂದ ತನಗೆ ಅಪಾಯವಾಗದಂತೆ ಸುರಕ್ಷೆಯ ವ್ಯವಸ್ಥೆ ಮಾಡಿಕೊಂಡನು.
|
2. ಯೆಹೂದದ ಎಲ್ಲಾ ಕೋಟೆಗಳುಳ್ಳ ಪಟ್ಟಣಗಳಲ್ಲಿಯೂ ತನ್ನ ತಂದೆಯು ವಶಪಡಿಸಿಕೊಂಡಿದ್ದ ಎಫ್ರಾಯೀಮ್ ಪ್ರಾಂತ್ಯದ ಪಟ್ಟಣಗಳಲ್ಲಿಯೂ ಸೈನ್ಯವನ್ನಿಟ್ಟನು.
|
3. ಯೆಹೋವನು ಯೆಹೋಷಾಫಾಟನೊಂದಿಗೆ ಇದ್ದನು; ಯಾಕಂದರೆ ಯೆಹೋಷಾಫಾಟನು ತನ್ನ ಯೌವನ ಕಾಲದಲ್ಲಿಯೆ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಜೀವಿಸಿದನು. ಅವನು ಬಾಳನ ಪೂಜೆಯನ್ನು ಮಾಡಲಿಲ್ಲ.
|
4. ತನ್ನ ಪೂರ್ವಿಕರು ಅನುಸರಿಸಿದ ದೇವರನ್ನು ನಿರೀಕ್ಷಿಸಿದನು. ಆತನ ಆಜ್ಞೆಗಳನ್ನು ಅನುಸರಿಸಿದನು. ಇಸ್ರೇಲಿ ಅರಸರು ನಡೆದಂತೆ ಇವನು ನಡೆಯಲಿಲ್ಲ.
|
5. ಯೆಹೋವನು ಯೆಹೋಷಾಫಾಟನಿಗಾಗಿ ರಾಜ್ಯದ ಅಧಿಕಾರವನ್ನು ಸ್ಥಿರಪಡಿಸಿದನು. ಯೆಹೂದದ ಜನರೆಲ್ಲರು ಅವನಿಗೆ ಕಾಣಿಕೆಗಳನ್ನು ತಂದುಕೊಟ್ಟರು. ಆದುದರಿಂದ ಅವನಿಗೆ ಐಶ್ವರ್ಯವೂ ಘನತೆಯೂ ದೊರಕಿತು.
|
6. ಅವನ ಹೃದಯವು ಯೆಹೋವನ ಮಾರ್ಗಗಳಲ್ಲಿ ಆನಂದವನ್ನು ಕಂಡುಕೊಂಡಿತು. ಯೆಹೂದ ಪ್ರಾಂತ್ಯದಲ್ಲಿ ವಿಗ್ರಹಗಳ ಪೂಜಾಸ್ಥಳಗಳನ್ನೆಲ್ಲಾ ತೆಗೆದುಹಾಕಿಸಿ ಅಶೇರ ಸ್ತಂಭಗಳನ್ನು ಕಡಿದುಹಾಕಿಸಿ ಅವುಗಳನ್ನು ನಿರ್ಮೂಲ ಮಾಡಿದನು.
|
7. ತನ್ನ ಆಳ್ವಿಕೆಯ ಮೂರನೆಯ ವರುಷದಲ್ಲಿ ಯೆಹೂದದ ಎಲ್ಲಾ ಪಟ್ಟಣಗಳಿಗೆ ನಾಯಕರನ್ನು ಕಳುಹಿಸಿ ಜನರಿಗೆ ದೇವರ ವಿಧಿನಿಯಮಗಳು ಬೋಧಿಸಲ್ಪಡುವಂತೆ ಮಾಡಿದನು. ಆ ನಾಯಕರು ಯಾರೆಂದರೆ: ಬೆನ್ಹೈಲ್, ಓಬದ್ಯ, ಜೆಕರ್ಯನೆತನೇಲ್ ಮತ್ತು ಮೀಕಾಯ.
|
8. ಯೆಹೋಷಾಫಾಟನು ಅವರೊಂದಿಗೆ ಲೇವಿಯರನ್ನೂ ಕಳುಹಿಸಿದನು. ಅವರು ಯಾರೆಂದರೆ: ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ ಮತ್ತು ಟೋಬೀಯ. ಅವರೊಂದಿಗೆ ಕಳುಹಿಸಲ್ಪಟ್ಟ ಯಾಜಕರು ಯಾರೆಂದರೆ: ಎಲೀಷಾಮಾ ಮತ್ತು ಯೆಹೋರಾಮ.
|
9. ಇವರೆಲ್ಲಾ ಯೆಹೂದದ ಜನರಿಗೆ ಯೆಹೋವನ ಧರ್ಮೋಪದೇಶ ಪುಸ್ತಕದಿಂದ ಆತನ ಕಟ್ಟಳೆ ವಿಧಿನಿಯಮಗಳನ್ನು ಯೆಹೂದದ ಪಟ್ಟಣಗಳಲ್ಲೆಲ್ಲಾ ಸಂಚರಿಸಿ ಕಲಿಸಿದರು.
|
10. ಯೆಹೂದದ ಸುತ್ತಮುತ್ತಲಿನ ದೇಶಗಳ ಜನಾಂಗಗಳು ಯೆಹೋವನಿಗೆ ಭಯಪಟ್ಟರು. ಆದುದರಿಂದ ಅವರು ಯೆಹೋಷಾಫಾಟನ ಮೇಲೆ ಯುದ್ಧಕ್ಕೆ ಹೋಗಲಿಲ್ಲ.
|
11. ಫಿಲಿಷ್ಟಿಯರಲ್ಲಿ ಕೆಲವರು ಅವನಿಗೆ ಬೆಳ್ಳಿಬಂಗಾರಗಳ ಕಾಣಿಕೆಗಳನ್ನು ತಂದುಕೊಟ್ಟರು; ಅವನೊಬ್ಬ ಬಲಿಷ್ಠನಾದ ರಾಜನೆಂದು ಅವರು ತಿಳಿದುಕೊಂಡಿದ್ದರು. ಅರಬಿಯದ ಜನರು ಯೆಹೋಷಾಫಾಟನಿಗೆ ಪಶುಗಳ ಹಿಂಡುಗಳನ್ನು ತಂದುಕೊಟ್ಟರು. ಅವುಗಳಲ್ಲಿ ಏಳು ಸಾವಿರದ ಏಳುನೂರು ಟಗರುಗಳು ಮತ್ತು ಏಳು ಸಾವಿರದ ಏಳುನೂರು ಹೋತಗಳು ಇದ್ದವು.
|
12. ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ದೊಡ್ಡ ಅರಸನಾದನು. ಅವನು ಯೆಹೂದ ದೇಶದಲ್ಲೆಲ್ಲಾ ಕೋಟೆಗಳನ್ನು ಕಟ್ಟಿಸಿದನು. ಉಗ್ರಾಣ ನಗರಗಳನ್ನು ಕಟ್ಟಿಸಿದನು.
|
16. ಅಮಸ್ಯನು ಎರಡು ಲಕ್ಷ ಸೈನಿಕರಿಗೆ ಸೇನಾಪತಿಯಾಗಿದ್ದನು. ಅಮಸ್ಯನು ಜಿಕ್ರಿಯ ಮಗ. ಯೆಹೋವನ ಸೇವೆಮಾಡುವದಕ್ಕೆ ಅವನು ತನ್ನನ್ನು ಒಪ್ಪಿಸಿಕೊಟ್ಟಿದ್ದನು.
|
17. ಬೆನ್ಯಾಮೀನನ ಕುಲದ ಎಲ್ಯಾದನು ಎರಡು ಲಕ್ಷ ಸೈನಿಕರಿಗೆ ಸೇನಾಪತಿಯಾಗಿದ್ದನು. ಇವರು ಬಿಲ್ಲು, ಬಾಣ, ಗುರಾಣಿಗಳನ್ನು ಬಳಸಬಲ್ಲವರಾಗಿದ್ದರು. ಎಲ್ಯಾದನು ಶೂರನಾದ ಸೇನಾಪತಿ.
|
19. ಈ ಸೈನಿಕರೆಲ್ಲಾ ಯೆಹೋಷಾಫಾಟನ ಸೇವೆಮಾಡಿದರು. ಇವರಲ್ಲದೆ ಯೆಹೂದ ದೇಶದಲ್ಲೆಲ್ಲಾ ಇದ್ದ ಕೋಟೆಗಳಲ್ಲಿಯೂ ಸೈನಿಕರಿದ್ದರು.
|