ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
2 ಪೂರ್ವಕಾಲವೃತ್ತಾ
1. {ಸೊಲೊಮೋನನು ಕಟ್ಟಿದ ಪಟ್ಟಣಗಳು} [PS] ದೇವಾಲಯವನ್ನೂ ತನ್ನ ಅರಮನೆಯನ್ನೂ ಕಟ್ಟಲು ಸೊಲೊಮೋನನಿಗೆ ಇಪ್ಪತ್ತು ವರ್ಷಗಳು ಬೇಕಾದವು.
2. ಅನಂತರ ಹೂರಾಮನು ಕೊಟ್ಟ ಪಟ್ಟಣಗಳನ್ನು ಭದ್ರಪಡಿಸಿ ಕೆಲವು ಇಸ್ರೇಲರು ಅಲ್ಲಿ ವಾಸಿಸುವಂತೆ ಮಾಡಿದನು.
3. ಇದಾದ ಬಳಿಕ ಸೊಲೊಮೋನನು ಚೋಬದ ಹಮಾತ್ ಎಂಬಲ್ಲಿಗೆ ಹೋಗಿ ಅದನ್ನು ವಶಪಡಿಸಿಕೊಂಡನು.
4. ಅರಣ್ಯದಲ್ಲಿದ್ದ ತದ್ಮೋರ್ ಎಂಬ ಪಟ್ಟಣವನ್ನು ಸೊಲೊಮೋನನು ಕಟ್ಟಿದನು. ಆಮೇಲೆ ಹಮಾತಿನ ಎಲ್ಲಾ ಪಟ್ಟಣಗಳನ್ನು ಉಗ್ರಾಣ ಪಟ್ಟಣಗಳನ್ನಾಗಿ ಮಾಡಿದನು.
5. ಮೇಲಿನ ಬೇತ್ಹೋರೋನ್ ಮತ್ತು ಕೆಳಗಿನ ಬೇತ್ಹೋರೋನ್ ಎಂಬ ನಗರಗಳನ್ನು ಸೊಲೊಮೋನನು ಬಲವಾದ ಕೋಟೆಯ ನಗರಗಳನ್ನಾಗಿ ಮತ್ತೆ ಕಟ್ಟಿದನು. ಆ ನಗರಗಳನ್ನು ಕೋಟೆ, ಕದ ಮತ್ತು ಹೆಬ್ಬಾಗಿಲುಗಳಿಂದ ಬಲಗೊಳಿಸಿದನು.
6. ಅಲ್ಲದೆ, ಬಾಲಾತ್ ಪಟ್ಟಣ ಮತ್ತು ಇನ್ನಿತರ ಪಟ್ಟಣಗಳನ್ನು ಉಗ್ರಾಣ ನಗರಗಳನ್ನಾಗಿ ಮಾಡಿದನು. ಅವನು ರಥಗಳನ್ನು ಇಡುವದಕ್ಕಾಗಿಯೂ ಮತ್ತು ರಾಹುತರ ವಾಸಕ್ಕಾಗಿಯೂ ಪಟ್ಟಣಗಳನ್ನು ಕಟ್ಟಿಸಿದನು. ಜೆರುಸಲೇಮಿನಲ್ಲಿಯೂ ಲೆಬನೋನಿನಲ್ಲಿಯೂ ಮತ್ತು ತನ್ನ ಆಡಳಿತದಲ್ಲಿದ್ದ ದೇಶಗಳಲ್ಲಿಯೂ ಸೊಲೊಮೋನನು ತನ್ನ ಇಷ್ಟದ ಪ್ರಕಾರ ಕಟ್ಟಿಸಿದನು. [PE][PS]
7. (7-8) ಇಸ್ರೇಲರು ಇದ್ದ ದೇಶದಲ್ಲಿ ಅನ್ಯ ಜನರಾದ ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸಿಸುತ್ತಿದ್ದರು. ಇವರನ್ನೆಲ್ಲಾ ಸೊಲೊಮೋನನು ಗುಲಾಮರನ್ನಾಗಿ ಉಪಯೋಗಿಸಿದನು. ಈ ಜನರು ಇಸ್ರೇಲರಾಗಿರಲಿಲ್ಲ. ಇಸ್ರೇಲರು ದೇಶವನ್ನು ವಶಪಡಿಸಿಕೊಂಡಾಗ ಅಲ್ಲಿದ್ದ ನಿವಾಸಿಗಳನ್ನು ಓಡಿಸದೆ ಬಿಟ್ಟವರ ಸಂತತಿಯವರಾಗಿದ್ದರು. ಅವರು ಈಗಲೂ ಅಲ್ಲಿಯೇ ಇದ್ದಾರೆ.
8.
9. ಸೊಲೊಮೋನನು ಇಸ್ರೇಲರಲ್ಲಿ ಯಾರನ್ನೂ ಗುಲಾಮರನ್ನಾಗಿ ಮಾಡಲಿಲ್ಲ. ಇಸ್ರೇಲರು ಸೊಲೊಮೋನನ ಯುದ್ಧವೀರರಾಗಿದ್ದರು. ಅವರು ಸೊಲೊಮೋನನ ಸೈನಕ್ಕೂ ರಥಾಶ್ವಗಳಿಗೂ ಸಾರಧಿಗಳಿಗೂ ಮಹಾದಂಡನಾಯಕರಾಗಿದ್ದರು.
10. ಇನ್ನು ಕೆಲವರು ಮುಖ್ಯಾಧಿಕಾರಿಗಳಿಗೆ ಅಧಿಪತಿಗಳಾಗಿದ್ದರು. ಜನಸೇವೆಗಾಗಿ ಈ ರೀತಿಯ 250 ಅಧಿಪತಿಗಳಿದ್ದರು. [PE][PS]
11. ಸೊಲೊಮೋನನು ದಾವೀದ ನಗರದಲ್ಲಿದ್ದ ಫರೋಹನ ಕುಮಾರ್ತೆಯನ್ನು ಆಕೆಗಾಗಿ ಕಟ್ಟಿದ ಅರಮನೆಗೆ ಕರೆಸಿದನು. “ನನ್ನ ಹೆಂಡತಿಯು ದಾವೀದನ ಮನೆಯಲ್ಲಿ ವಾಸಿಸಬಾರದು. ಯಾಕೆಂದರೆ ದೇವರ ಒಡಂಬಡಿಕೆಯ ಪೆಟ್ಟಿಗೆ ಇರುವ ಸ್ಥಳಗಳು ಪರಿಶುದ್ಧವಾಗಿವೆ” ಎಂದು ಸೊಲೊಮೋನನು ಅಂದುಕೊಂಡನು. [PE][PS]
12. ಅನಂತರ ಸೊಲೊಮೋನನು ದೇವಾಲಯದ ಮಂಟಪದ ಮುಂದೆ ತಾನು ಕಟ್ಟಿಸಿದ ಯಜ್ಞವೇದಿಕೆಯ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸಿದನು.
13. ಮೋಶೆಯ ಅಪ್ಪಣೆಯ ಪ್ರಕಾರ ಪ್ರತಿನಿತ್ಯವೂ ಸಬ್ಬತ್‌ದಿನಗಳಲ್ಲಿಯೂ ಅಮಾವಾಸ್ಯೆಯ ದಿನಗಳಲ್ಲಿಯೂ ವರ್ಷದ ಮೂರು ಹಬ್ಬದ ದಿನಗಳಲ್ಲಿಯೂ (ಹುಳಿಯಿಲ್ಲದ ರೊಟ್ಟಿಯ ಹಬ್ಬ, ವಾರಗಳ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬ) ಆಯಾ ದಿನಗಳಲ್ಲಿ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.
14. ದಾವೀದನು ಹೇಳಿದ ಪ್ರಕಾರ ಸೊಲೊಮೋನನು ಯಾಜಕರನ್ನು ಸರದಿಯ ಪ್ರಕಾರ ಸೇವೆಗೆ ನೇಮಿಸಿದನು. ಲೇವಿಯರನ್ನು ಆಯಾಕೆಲಸಕ್ಕೆ ನೇಮಿಸಿದನು. ಅವರು ಗಾಯನದಲ್ಲಿಯೂ ಯಾಜಕರ ಕೆಲಸಗಳಲ್ಲಿ ಸಹಾಯಕರಾಗಿಯೂ ದೇವಾಲಯದ ಕೆಲಸದಲ್ಲಿ ಪಾಲುತೆಗೆದುಕೊಂಡರು. ದ್ವಾರಪಾಲಕರ ಕೆಲಸಕ್ಕೆ ಸೊಲೊಮೋನನು ಜನರನ್ನು ಆರಿಸಿ ದ್ವಾರಗಳನ್ನು ಕಾಯುವುದಕ್ಕೆ ಅವರನ್ನು ನೇಮಿಸಿದನು. ದೇವಮನುಷ್ಯನಾದ ದಾವೀದನು ಹೀಗೆಯೇ ಮಾಡಬೇಕೆಂದು ತಿಳಿಸಿದ್ದನು.
15. ಸೊಲೊಮೋನನು ಯಾಜಕರಿಗಾಗಲಿ ಲೇವಿಯರಿಗಾಗಲಿ ಕೊಟ್ಟ ಆಜ್ಞೆಗಳನ್ನು ಯಾರೂ ಬದಲಿಸಲಿಲ್ಲ; ಅವುಗಳಿಗೆ ಯಾರೂ ಅವಿಧೇಯರಾಗಲಿಲ್ಲ; ಬೆಲೆಬಾಳುವ ವಸ್ತುಗಳ ಸಂಗ್ರಹಣ ಕಾರ್ಯದಲ್ಲೂ ಅವರು ಜಾಗರೂಕರಾಗಿದ್ದರು. [PE][PS]
16. ದೇವಾಲಯವನ್ನು ಕಟ್ಟುವ ಕಾರ್ಯವು ಪ್ರಾರಂಭದಿಂದ ಹಿಡಿದು ಕೊನೆಯತನಕ ಎಲ್ಲವೂ ಯೋಜನೆಗನುಸಾರವಾಗಿ ನಡೆಯಿತು. ಹೀಗೆ ದೇವಾಲಯದ ಕಾರ್ಯವೆಲ್ಲಾ ಮುಕ್ತಾಯವಾಯಿತು. [PE][PS]
17. ಆ ಬಳಿಕ ಸೊಲೊಮೋನನು ಎದೋಮ್ ದೇಶದ ಕೆಂಪುಸಮುದ್ರದ ತೀರದಲ್ಲಿದ್ದ ಎಚ್ಯೋನ್ಗೆಬೆರ್ ಮತ್ತು ಏಲೋತ್ ಎಂಬ ಪಟ್ಟಣಗಳಿಗೆ ಹೋದನು.
18. ಹೂರಾಮನು ಸೊಲೊಮೋನನಿಗೋಸ್ಕರ ಹಡಗುಗಳನ್ನು ಕಳುಹಿಸಿದನು. ಅವನ ಜನರೇ ಅದನ್ನು ನಡೆಸಿದರು. ಅವರು ಒಳ್ಳೆಯ ನುರಿತ ನಾವಿಕರಾಗಿದ್ದರು. ಹೂರಾಮನ ನಾವಿಕರು ಸೊಲೊಮೋನನ ಸೇವಕರೊಂದಿಗೆ ಓಫೀರ್ ದೇಶಕ್ಕೆ ಹೋಗಿ ಅಲ್ಲಿಂದ ಹದಿನೇಳು ಟನ್ ಬಂಗಾರವನ್ನು ಸೊಲೊಮೋನನಿಗೆ ತಂದುಕೊಟ್ಟರು. [PE]
ಒಟ್ಟು 36 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 8 / 36
ಸೊಲೊಮೋನನು ಕಟ್ಟಿದ ಪಟ್ಟಣಗಳು 1 ದೇವಾಲಯವನ್ನೂ ತನ್ನ ಅರಮನೆಯನ್ನೂ ಕಟ್ಟಲು ಸೊಲೊಮೋನನಿಗೆ ಇಪ್ಪತ್ತು ವರ್ಷಗಳು ಬೇಕಾದವು. 2 ಅನಂತರ ಹೂರಾಮನು ಕೊಟ್ಟ ಪಟ್ಟಣಗಳನ್ನು ಭದ್ರಪಡಿಸಿ ಕೆಲವು ಇಸ್ರೇಲರು ಅಲ್ಲಿ ವಾಸಿಸುವಂತೆ ಮಾಡಿದನು. 3 ಇದಾದ ಬಳಿಕ ಸೊಲೊಮೋನನು ಚೋಬದ ಹಮಾತ್ ಎಂಬಲ್ಲಿಗೆ ಹೋಗಿ ಅದನ್ನು ವಶಪಡಿಸಿಕೊಂಡನು. 4 ಅರಣ್ಯದಲ್ಲಿದ್ದ ತದ್ಮೋರ್ ಎಂಬ ಪಟ್ಟಣವನ್ನು ಸೊಲೊಮೋನನು ಕಟ್ಟಿದನು. ಆಮೇಲೆ ಹಮಾತಿನ ಎಲ್ಲಾ ಪಟ್ಟಣಗಳನ್ನು ಉಗ್ರಾಣ ಪಟ್ಟಣಗಳನ್ನಾಗಿ ಮಾಡಿದನು. 5 ಮೇಲಿನ ಬೇತ್ಹೋರೋನ್ ಮತ್ತು ಕೆಳಗಿನ ಬೇತ್ಹೋರೋನ್ ಎಂಬ ನಗರಗಳನ್ನು ಸೊಲೊಮೋನನು ಬಲವಾದ ಕೋಟೆಯ ನಗರಗಳನ್ನಾಗಿ ಮತ್ತೆ ಕಟ್ಟಿದನು. ಆ ನಗರಗಳನ್ನು ಕೋಟೆ, ಕದ ಮತ್ತು ಹೆಬ್ಬಾಗಿಲುಗಳಿಂದ ಬಲಗೊಳಿಸಿದನು. 6 ಅಲ್ಲದೆ, ಬಾಲಾತ್ ಪಟ್ಟಣ ಮತ್ತು ಇನ್ನಿತರ ಪಟ್ಟಣಗಳನ್ನು ಉಗ್ರಾಣ ನಗರಗಳನ್ನಾಗಿ ಮಾಡಿದನು. ಅವನು ರಥಗಳನ್ನು ಇಡುವದಕ್ಕಾಗಿಯೂ ಮತ್ತು ರಾಹುತರ ವಾಸಕ್ಕಾಗಿಯೂ ಪಟ್ಟಣಗಳನ್ನು ಕಟ್ಟಿಸಿದನು. ಜೆರುಸಲೇಮಿನಲ್ಲಿಯೂ ಲೆಬನೋನಿನಲ್ಲಿಯೂ ಮತ್ತು ತನ್ನ ಆಡಳಿತದಲ್ಲಿದ್ದ ದೇಶಗಳಲ್ಲಿಯೂ ಸೊಲೊಮೋನನು ತನ್ನ ಇಷ್ಟದ ಪ್ರಕಾರ ಕಟ್ಟಿಸಿದನು. 7 (7-8) ಇಸ್ರೇಲರು ಇದ್ದ ದೇಶದಲ್ಲಿ ಅನ್ಯ ಜನರಾದ ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸಿಸುತ್ತಿದ್ದರು. ಇವರನ್ನೆಲ್ಲಾ ಸೊಲೊಮೋನನು ಗುಲಾಮರನ್ನಾಗಿ ಉಪಯೋಗಿಸಿದನು. ಈ ಜನರು ಇಸ್ರೇಲರಾಗಿರಲಿಲ್ಲ. ಇಸ್ರೇಲರು ದೇಶವನ್ನು ವಶಪಡಿಸಿಕೊಂಡಾಗ ಅಲ್ಲಿದ್ದ ನಿವಾಸಿಗಳನ್ನು ಓಡಿಸದೆ ಬಿಟ್ಟವರ ಸಂತತಿಯವರಾಗಿದ್ದರು. ಅವರು ಈಗಲೂ ಅಲ್ಲಿಯೇ ಇದ್ದಾರೆ. 8 9 ಸೊಲೊಮೋನನು ಇಸ್ರೇಲರಲ್ಲಿ ಯಾರನ್ನೂ ಗುಲಾಮರನ್ನಾಗಿ ಮಾಡಲಿಲ್ಲ. ಇಸ್ರೇಲರು ಸೊಲೊಮೋನನ ಯುದ್ಧವೀರರಾಗಿದ್ದರು. ಅವರು ಸೊಲೊಮೋನನ ಸೈನಕ್ಕೂ ರಥಾಶ್ವಗಳಿಗೂ ಸಾರಧಿಗಳಿಗೂ ಮಹಾದಂಡನಾಯಕರಾಗಿದ್ದರು. 10 ಇನ್ನು ಕೆಲವರು ಮುಖ್ಯಾಧಿಕಾರಿಗಳಿಗೆ ಅಧಿಪತಿಗಳಾಗಿದ್ದರು. ಜನಸೇವೆಗಾಗಿ ಈ ರೀತಿಯ 250 ಅಧಿಪತಿಗಳಿದ್ದರು. 11 ಸೊಲೊಮೋನನು ದಾವೀದ ನಗರದಲ್ಲಿದ್ದ ಫರೋಹನ ಕುಮಾರ್ತೆಯನ್ನು ಆಕೆಗಾಗಿ ಕಟ್ಟಿದ ಅರಮನೆಗೆ ಕರೆಸಿದನು. “ನನ್ನ ಹೆಂಡತಿಯು ದಾವೀದನ ಮನೆಯಲ್ಲಿ ವಾಸಿಸಬಾರದು. ಯಾಕೆಂದರೆ ದೇವರ ಒಡಂಬಡಿಕೆಯ ಪೆಟ್ಟಿಗೆ ಇರುವ ಸ್ಥಳಗಳು ಪರಿಶುದ್ಧವಾಗಿವೆ” ಎಂದು ಸೊಲೊಮೋನನು ಅಂದುಕೊಂಡನು. 12 ಅನಂತರ ಸೊಲೊಮೋನನು ದೇವಾಲಯದ ಮಂಟಪದ ಮುಂದೆ ತಾನು ಕಟ್ಟಿಸಿದ ಯಜ್ಞವೇದಿಕೆಯ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸಿದನು. 13 ಮೋಶೆಯ ಅಪ್ಪಣೆಯ ಪ್ರಕಾರ ಪ್ರತಿನಿತ್ಯವೂ ಸಬ್ಬತ್‌ದಿನಗಳಲ್ಲಿಯೂ ಅಮಾವಾಸ್ಯೆಯ ದಿನಗಳಲ್ಲಿಯೂ ವರ್ಷದ ಮೂರು ಹಬ್ಬದ ದಿನಗಳಲ್ಲಿಯೂ (ಹುಳಿಯಿಲ್ಲದ ರೊಟ್ಟಿಯ ಹಬ್ಬ, ವಾರಗಳ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬ) ಆಯಾ ದಿನಗಳಲ್ಲಿ ಯಜ್ಞಗಳನ್ನು ಸಮರ್ಪಿಸುತ್ತಿದ್ದನು. 14 ದಾವೀದನು ಹೇಳಿದ ಪ್ರಕಾರ ಸೊಲೊಮೋನನು ಯಾಜಕರನ್ನು ಸರದಿಯ ಪ್ರಕಾರ ಸೇವೆಗೆ ನೇಮಿಸಿದನು. ಲೇವಿಯರನ್ನು ಆಯಾಕೆಲಸಕ್ಕೆ ನೇಮಿಸಿದನು. ಅವರು ಗಾಯನದಲ್ಲಿಯೂ ಯಾಜಕರ ಕೆಲಸಗಳಲ್ಲಿ ಸಹಾಯಕರಾಗಿಯೂ ದೇವಾಲಯದ ಕೆಲಸದಲ್ಲಿ ಪಾಲುತೆಗೆದುಕೊಂಡರು. ದ್ವಾರಪಾಲಕರ ಕೆಲಸಕ್ಕೆ ಸೊಲೊಮೋನನು ಜನರನ್ನು ಆರಿಸಿ ದ್ವಾರಗಳನ್ನು ಕಾಯುವುದಕ್ಕೆ ಅವರನ್ನು ನೇಮಿಸಿದನು. ದೇವಮನುಷ್ಯನಾದ ದಾವೀದನು ಹೀಗೆಯೇ ಮಾಡಬೇಕೆಂದು ತಿಳಿಸಿದ್ದನು. 15 ಸೊಲೊಮೋನನು ಯಾಜಕರಿಗಾಗಲಿ ಲೇವಿಯರಿಗಾಗಲಿ ಕೊಟ್ಟ ಆಜ್ಞೆಗಳನ್ನು ಯಾರೂ ಬದಲಿಸಲಿಲ್ಲ; ಅವುಗಳಿಗೆ ಯಾರೂ ಅವಿಧೇಯರಾಗಲಿಲ್ಲ; ಬೆಲೆಬಾಳುವ ವಸ್ತುಗಳ ಸಂಗ್ರಹಣ ಕಾರ್ಯದಲ್ಲೂ ಅವರು ಜಾಗರೂಕರಾಗಿದ್ದರು. 16 ದೇವಾಲಯವನ್ನು ಕಟ್ಟುವ ಕಾರ್ಯವು ಪ್ರಾರಂಭದಿಂದ ಹಿಡಿದು ಕೊನೆಯತನಕ ಎಲ್ಲವೂ ಯೋಜನೆಗನುಸಾರವಾಗಿ ನಡೆಯಿತು. ಹೀಗೆ ದೇವಾಲಯದ ಕಾರ್ಯವೆಲ್ಲಾ ಮುಕ್ತಾಯವಾಯಿತು. 17 ಆ ಬಳಿಕ ಸೊಲೊಮೋನನು ಎದೋಮ್ ದೇಶದ ಕೆಂಪುಸಮುದ್ರದ ತೀರದಲ್ಲಿದ್ದ ಎಚ್ಯೋನ್ಗೆಬೆರ್ ಮತ್ತು ಏಲೋತ್ ಎಂಬ ಪಟ್ಟಣಗಳಿಗೆ ಹೋದನು. 18 ಹೂರಾಮನು ಸೊಲೊಮೋನನಿಗೋಸ್ಕರ ಹಡಗುಗಳನ್ನು ಕಳುಹಿಸಿದನು. ಅವನ ಜನರೇ ಅದನ್ನು ನಡೆಸಿದರು. ಅವರು ಒಳ್ಳೆಯ ನುರಿತ ನಾವಿಕರಾಗಿದ್ದರು. ಹೂರಾಮನ ನಾವಿಕರು ಸೊಲೊಮೋನನ ಸೇವಕರೊಂದಿಗೆ ಓಫೀರ್ ದೇಶಕ್ಕೆ ಹೋಗಿ ಅಲ್ಲಿಂದ ಹದಿನೇಳು ಟನ್ ಬಂಗಾರವನ್ನು ಸೊಲೊಮೋನನಿಗೆ ತಂದುಕೊಟ್ಟರು.
ಒಟ್ಟು 36 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 8 / 36
×

Alert

×

Kannada Letters Keypad References