ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
2 ಅರಸುಗಳು
1. {ಅಹಾಜನು ಯೆಹೂದದ ರಾಜನಾದನು} [PS] ರೆಮಲ್ಯನ ಮಗನಾದ ಪೆಕಹನು ಇಸ್ರೇಲಿನ ರಾಜನಾಗಿದ್ದ ಹದಿನೇಳನೆಯ ವರ್ಷದಲ್ಲಿ ಯೋತಾವುನ ಮಗನಾದ ಅಹಾಜನು ಯೆಹೂದದ ರಾಜನಾದನು.
2. ಅಹಾಜನು ರಾಜನಾದಾಗ ಅವನಿಗೆ ಇಪ್ಪತ್ತು ವರ್ಷ ವಯಸ್ಸಾಗಿತ್ತು. ಅಹಾಜನು ಜೆರುಸಲೇಮನ್ನು ಹದಿನಾರು ವರ್ಷ ಆಳಿದನು. ಯೆಹೋವನ ದೃಷ್ಟಿಯಲ್ಲಿ ಒಳ್ಳೆಯದಾಗಿದ್ದ ಕಾರ್ಯಗಳನ್ನು ಅಹಾಜನು ಮಾಡಲಿಲ್ಲ. ಅವನ ಪೂರ್ವಿಕನಾದ ದಾವೀದನು ದೇವರಿಗೆ ವಿಧೇಯನಾಗಿದ್ದನು; ಆದರೆ ಅಹಾಜನು ವಿಧೇಯನಾಗಲಿಲ್ಲ.
3. ಅಹಾಜನು ಇಸ್ರೇಲಿನ ರಾಜರುಗಳಂತೆ ಜೀವಿಸಿದನು. ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಆಹುತಿಕೊಟ್ಟನು. ಇಸ್ರೇಲರು ದೇಶಕ್ಕೆ ಬಂದ ಕಾಲದಲ್ಲಿ ಯೆಹೋವನು ಬಲಾತ್ಕಾರದಿಂದ ಓಡಿಸಿದ ಜನಾಂಗಗಳ ಅಸಹ್ಯ ಪಾಪಗಳನ್ನು ಅವನು ಅನುಸರಿಸಿದನು.
4. ಅಹಾಜನು ಉನ್ನತಸ್ಥಳಗಳಲ್ಲಿ ಮತ್ತು ಬೆಟ್ಟಗಳ ಮೇಲೆ ಮತ್ತು ಹಸಿರು ಮರಗಳ ಕೆಳಗೆ ಯಜ್ಞಗಳನ್ನು ಅರ್ಪಿಸಿದನು ಮತ್ತು ಧೂಪವನ್ನು ಸುಟ್ಟನು. [PE][PS]
5. ಅರಾಮ್ಯರ ರಾಜನಾದ ರೆಚೀನನು ಮತ್ತು ರೆಮಲ್ಯನ ಮಗನೂ ಇಸ್ರೇಲಿನ ರಾಜನೂ ಆದ ಪೆಕಹನು ಜೆರುಸಲೇಮಿನ ವಿರುದ್ಧ ಯುದ್ಧಕ್ಕೆ ಬಂದರು. ರೆಚೀನ ಮತ್ತು ಪೆಕಹ ಅಹಾಜನಿಗೆ ಮುತ್ತಿಗೆ ಹಾಕಿದರು. ಆದರೆ ಅವನನ್ನು ಸೋಲಿಸಲಾಗಲಿಲ್ಲ.
6. ಆ ಸಮಯಲ್ಲಿ ಅರಾಮ್ಯರ ರಾಜನಾದ ರೆಚೀನನು ಏಲತ್ ಪಟ್ಟಣವನ್ನು ಅರಾಮ್ಯಕ್ಕೆ ಸೇರಿಸಿಕೊಂಡನು. ರೆಚೀನನು ಏಲತ್ ಪಟ್ಟಣದಲ್ಲಿ ವಾಸಿಸುತ್ತಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಅರಾಮ್ಯರು ಬಂದು ಏಲತ್ ಪಟ್ಟಣದಲ್ಲಿ ನೆಲೆಸಿದರು; ಅವರು ಇಂದಿನವರೆಗೂ ಅಲ್ಲಿಯೇ ವಾಸಿಸುತ್ತಿದ್ದಾರೆ. [PE][PS]
7. ಅಹಾಜನು ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಆ ಸಂದೇಶವೇನೆಂದರೆ: “ನಾನು ನಿನ್ನ ಸೇವಕ. ನಾನು ನಿನಗೆ ಮಗನಂತಿದ್ದೇನೆ. ನೀನು ಬಂದು, ಅರಾಮ್ಯರ ರಾಜನಿಂದ ಮತ್ತು ಇಸ್ರೇಲಿನ ರಾಜನಿಂದ ನನ್ನನ್ನು ರಕ್ಷಿಸು. ಅವರು ನನ್ನ ವಿರುದ್ಧ ಯುದ್ಧಕ್ಕೆ ಬಂದಿದ್ದಾರೆ.”
8. ಅಹಾಜನು ಯೆಹೋವನ ಆಲಯದಲ್ಲಿದ್ದ ಮತ್ತು ರಾಜನ ಅರಮನೆಯಲ್ಲಿದ್ದ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಅಶ್ಶೂರದ ರಾಜನಿಗೆ ಕಾಣಿಕೆಯಾಗಿ ಕಳುಹಿಸಿದನು.
9. ಅಶ್ಶೂರದ ರಾಜನು ಅಹಾಜನ ಮಾತುಗಳನ್ನು ಕೇಳಿ ದಮಸ್ಕದ ವಿರುದ್ಧ ಯುದ್ಧಕ್ಕೆ ಹೊರಟು ಆ ನಗರಕ್ಕೆ ಮುತ್ತಿಗೆಹಾಕಿ, ದಮಸ್ಕದ ಜನರನ್ನು ಸೆರೆಹಿಡಿದುಕೊಂಡು ಕೀರ್‌ಗೆ ಒಯ್ದನು. ಅವನು ರೆಚೀನನನ್ನು ಕೊಂದುಹಾಕಿದನು. [PE][PS]
10. ರಾಜನಾದ ಅಹಾಜನು ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನನ್ನು ಭೇಟಿಮಾಡಲು ದಮಸ್ಕಕ್ಕೆ ಹೋದನು. ಅಹಾಜನು ದಮಸ್ಕದಲ್ಲಿದ್ದ ಯಜ್ಞವೇದಿಕೆಯನ್ನು ನೋಡಿದನು. ರಾಜನಾದ ಅಹಾಜನು ಯಜ್ಞವೇದಿಕೆಯ ವಿನ್ಯಾಸವನ್ನು ಮತ್ತು ಮಾದರಿಯನ್ನು ಯಾಜಕನಾದ ಊರೀಯನಿಗೆ ಕಳುಹಿಸಿದನು.
11. ಆಗ ಯಾಜಕನಾದ ಊರೀಯನು, ದಮಸ್ಕದಿಂದ ರಾಜನಾದ ಅಹಾಜನು ತನಗೆ ಕಳುಹಿಸಿದ ಯಜ್ಞವೇದಿಕೆಯ ಮಾದರಿಯಲ್ಲೇ ಮತ್ತೊಂದು ಯಜ್ಞವೇದಿಕೆಯೊಂದನ್ನು ನಿರ್ಮಿಸಿದನು. ಹೀಗೆ ರಾಜನಾದ ಅಹಾಜನು ದಮಸ್ಕದಿಂದ ಹಿಂತಿರುಗುವುದಕ್ಕೆ ಮೊದಲೇ ಊರೀಯನು ಯಜ್ಞವೇದಿಕೊಂದನ್ನು ನಿರ್ಮಿಸಿದ್ದನು. [PE][PS]
12. ರಾಜನು ದಮಸ್ಕದಿಂದ ಹಿಂದಿರುಗಿಬಂದು ಯಜ್ಞವೇದಿಕೆಯನ್ನು ನೋಡಿದನು. ಅವನು ಯಜ್ಞಗಳನ್ನು ಅದರ ಮೇಲೆ ಅರ್ಪಿಸಿದನು.
13. ಅಹಾಜನು ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಅರ್ಪಿಸಿದನು; ಪಾನನೈವೇದ್ಯವನ್ನು ಸುರಿಸಿದನು; ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಯಜ್ಞವೇದಿಕೆಯ ಮೇಲೆ ಚಿಮಿಕಿಸಿದನು. [PE][PS]
14. ಹಾಜನು ದೇವಾಲಯದ ಎದುರಿನಲ್ಲಿ ಯೆಹೋವನ ಸನ್ನಿಧಿಯಲ್ಲಿದ್ದ ತಾಮ್ರದ ಯಜ್ಞವೇದಿಕೆಯನ್ನು ತೆಗೆಸಿದನು. ಈ ತಾಮ್ರದ ಯಜ್ಞವೇದಿಕೆಯು ಅಹಾಜನ ಯಜ್ಞವೇದಿಕೆ ಮತ್ತು ದೇವಾಲಯದ ನಡುವೆ ಇದ್ದಿತು. ಅಹಾಜನು ತಾಮ್ರದ ಯಜ್ಞವೇದಿಕೆಯನ್ನು ತನ್ನ ಸ್ವಂತ ಯಜ್ಞವೇದಿಕೆಯ ಉತ್ತರದಿಕ್ಕಿನಲ್ಲಿಡಿಸಿದನು.
15. ಅಹಾಜನು ಯಾಜಕನಾದ ಊರೀಯನಿಗೆ, “ಈ ದೇಶದ ಜನರೆಲ್ಲರೂ ಪ್ರಾತಃಕಾಲದಲ್ಲಿ ಸರ್ವಾಂಗಹೋಮವನ್ನೂ ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ ಮತ್ತು ಪಾನದ್ರವ್ಯಗಳನ್ನೂ ಸಮರ್ಪಿಸಲು ಮಹಾವೇದಿಕೆಯನ್ನು ಬಳಸಬೇಕು; ಸರ್ವಾಂಗಹೋಮಕ್ಕಾಗಿ ಮತ್ತು ಸಮಾಧಾನಯಜ್ಞಕ್ಕಾಗಿ ವಧಿಸುವ ಪಶುಗಳ ರಕ್ತವನ್ನು ಈ ಮಹಾವೇದಿಕೆಯ ಮೇಲೆ ಚಿಮುಕಿಸಿ. ಆದರೆ ನಾನು ದೇವರಿಂದ ದೈವೋತ್ತರಗಳನ್ನು ಕೇಳಲು ತಾಮ್ರವೇದಿಕೆಯನ್ನು ಉಪಯೋಗಿಸುತ್ತೇನೆ” ಎಂದು ಹೇಳಿದನು.
16. ರಾಜನಾದ ಅಹಾಜನು ಆಜ್ಞಾಪಿಸಿದಂತೆಯೇ ಯಾಜಕನಾದ ಊರೀಯನು ಮಾಡಿದನು. [PE][PS]
17. ನಂತರ ರಾಜನಾದ ಅಹಾಜನು ಪೀಠಗಳ ಪಟ್ಟಿಗಳನ್ನು ಕತ್ತರಿಸಿದನು. ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು; ಸಮುದ್ರವೆಂಬ ತೊಟ್ಟಿಯನ್ನು ತಾಮ್ರದ ಹೋರಿಗಳಿಂದ ಕೆಳಗಿಳಿಸಿ ಕಲ್ಲುಕಟ್ಟೆಯ ಮೇಲಿಟ್ಟನು.
18. ಅಹಾಜನು ಸಬ್ಬತ್ ದಿನಕ್ಕಾಗಿ ಕಟ್ಟಿದ ಮಂಟಪವನ್ನು ಬದಲಾಯಿಸಿದನು. ಕೆಲಸಗಾರರು ಆಲಯದ ಒಳಗೆ ಇದನ್ನು ನಿರ್ಮಿಸಿದ್ದರು. ಅಹಾಜನು ರಾಜನಿಗಾಗಿ ಇದ್ದ ಹೊರಭಾಗದ ಬಾಗಿಲನ್ನು ಬದಲಾಯಿಸಿದನು. ಅಹಾಜನು ದೇವಾಲಯದಿಂದ ಇವುಗಳನ್ನೆಲ್ಲಾ ಅಶ್ಶೂರದ ರಾಜನ [*ಅಶ್ಶೂರದ ರಾಜ ಯಾಕೆಂದರೆ ಅಶ್ಶೂರದ ರಾಜನು ಅವುಗಳ ಬಗ್ಗೆ ಕೇಳಿದ್ದರೆ ಅವುಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಿದ್ದನು.] ದೆಸೆಯಿಂದ ಬದಲಾಯಿಸಿದನು. [PE][PS]
19. “ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅಹಾಜನು ಮಾಡಿದ ಇತರ ಮಹಾಕಾರ್ಯಗಳನ್ನು ಬರೆಯಲಾಗಿದೆ.
20. ಅಹಾಜನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಬಳಿ ದಾವೀದನಗರದಲ್ಲಿ ಸಮಾಧಿಮಾಡಿದರು. ಅಹಾಜನ ಮಗನಾದ ಹಿಜ್ಕೀಯನು ಅವನ ನಂತರ ಹೊಸ ರಾಜನಾದನು. [PE]
ಒಟ್ಟು 25 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 16 / 25
ಅಹಾಜನು ಯೆಹೂದದ ರಾಜನಾದನು 1 ರೆಮಲ್ಯನ ಮಗನಾದ ಪೆಕಹನು ಇಸ್ರೇಲಿನ ರಾಜನಾಗಿದ್ದ ಹದಿನೇಳನೆಯ ವರ್ಷದಲ್ಲಿ ಯೋತಾವುನ ಮಗನಾದ ಅಹಾಜನು ಯೆಹೂದದ ರಾಜನಾದನು. 2 ಅಹಾಜನು ರಾಜನಾದಾಗ ಅವನಿಗೆ ಇಪ್ಪತ್ತು ವರ್ಷ ವಯಸ್ಸಾಗಿತ್ತು. ಅಹಾಜನು ಜೆರುಸಲೇಮನ್ನು ಹದಿನಾರು ವರ್ಷ ಆಳಿದನು. ಯೆಹೋವನ ದೃಷ್ಟಿಯಲ್ಲಿ ಒಳ್ಳೆಯದಾಗಿದ್ದ ಕಾರ್ಯಗಳನ್ನು ಅಹಾಜನು ಮಾಡಲಿಲ್ಲ. ಅವನ ಪೂರ್ವಿಕನಾದ ದಾವೀದನು ದೇವರಿಗೆ ವಿಧೇಯನಾಗಿದ್ದನು; ಆದರೆ ಅಹಾಜನು ವಿಧೇಯನಾಗಲಿಲ್ಲ. 3 ಅಹಾಜನು ಇಸ್ರೇಲಿನ ರಾಜರುಗಳಂತೆ ಜೀವಿಸಿದನು. ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಆಹುತಿಕೊಟ್ಟನು. ಇಸ್ರೇಲರು ದೇಶಕ್ಕೆ ಬಂದ ಕಾಲದಲ್ಲಿ ಯೆಹೋವನು ಬಲಾತ್ಕಾರದಿಂದ ಓಡಿಸಿದ ಜನಾಂಗಗಳ ಅಸಹ್ಯ ಪಾಪಗಳನ್ನು ಅವನು ಅನುಸರಿಸಿದನು. 4 ಅಹಾಜನು ಉನ್ನತಸ್ಥಳಗಳಲ್ಲಿ ಮತ್ತು ಬೆಟ್ಟಗಳ ಮೇಲೆ ಮತ್ತು ಹಸಿರು ಮರಗಳ ಕೆಳಗೆ ಯಜ್ಞಗಳನ್ನು ಅರ್ಪಿಸಿದನು ಮತ್ತು ಧೂಪವನ್ನು ಸುಟ್ಟನು. 5 ಅರಾಮ್ಯರ ರಾಜನಾದ ರೆಚೀನನು ಮತ್ತು ರೆಮಲ್ಯನ ಮಗನೂ ಇಸ್ರೇಲಿನ ರಾಜನೂ ಆದ ಪೆಕಹನು ಜೆರುಸಲೇಮಿನ ವಿರುದ್ಧ ಯುದ್ಧಕ್ಕೆ ಬಂದರು. ರೆಚೀನ ಮತ್ತು ಪೆಕಹ ಅಹಾಜನಿಗೆ ಮುತ್ತಿಗೆ ಹಾಕಿದರು. ಆದರೆ ಅವನನ್ನು ಸೋಲಿಸಲಾಗಲಿಲ್ಲ. 6 ಆ ಸಮಯಲ್ಲಿ ಅರಾಮ್ಯರ ರಾಜನಾದ ರೆಚೀನನು ಏಲತ್ ಪಟ್ಟಣವನ್ನು ಅರಾಮ್ಯಕ್ಕೆ ಸೇರಿಸಿಕೊಂಡನು. ರೆಚೀನನು ಏಲತ್ ಪಟ್ಟಣದಲ್ಲಿ ವಾಸಿಸುತ್ತಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಅರಾಮ್ಯರು ಬಂದು ಏಲತ್ ಪಟ್ಟಣದಲ್ಲಿ ನೆಲೆಸಿದರು; ಅವರು ಇಂದಿನವರೆಗೂ ಅಲ್ಲಿಯೇ ವಾಸಿಸುತ್ತಿದ್ದಾರೆ. 7 ಅಹಾಜನು ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಆ ಸಂದೇಶವೇನೆಂದರೆ: “ನಾನು ನಿನ್ನ ಸೇವಕ. ನಾನು ನಿನಗೆ ಮಗನಂತಿದ್ದೇನೆ. ನೀನು ಬಂದು, ಅರಾಮ್ಯರ ರಾಜನಿಂದ ಮತ್ತು ಇಸ್ರೇಲಿನ ರಾಜನಿಂದ ನನ್ನನ್ನು ರಕ್ಷಿಸು. ಅವರು ನನ್ನ ವಿರುದ್ಧ ಯುದ್ಧಕ್ಕೆ ಬಂದಿದ್ದಾರೆ.” 8 ಅಹಾಜನು ಯೆಹೋವನ ಆಲಯದಲ್ಲಿದ್ದ ಮತ್ತು ರಾಜನ ಅರಮನೆಯಲ್ಲಿದ್ದ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಅಶ್ಶೂರದ ರಾಜನಿಗೆ ಕಾಣಿಕೆಯಾಗಿ ಕಳುಹಿಸಿದನು. 9 ಅಶ್ಶೂರದ ರಾಜನು ಅಹಾಜನ ಮಾತುಗಳನ್ನು ಕೇಳಿ ದಮಸ್ಕದ ವಿರುದ್ಧ ಯುದ್ಧಕ್ಕೆ ಹೊರಟು ಆ ನಗರಕ್ಕೆ ಮುತ್ತಿಗೆಹಾಕಿ, ದಮಸ್ಕದ ಜನರನ್ನು ಸೆರೆಹಿಡಿದುಕೊಂಡು ಕೀರ್‌ಗೆ ಒಯ್ದನು. ಅವನು ರೆಚೀನನನ್ನು ಕೊಂದುಹಾಕಿದನು. 10 ರಾಜನಾದ ಅಹಾಜನು ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನನ್ನು ಭೇಟಿಮಾಡಲು ದಮಸ್ಕಕ್ಕೆ ಹೋದನು. ಅಹಾಜನು ದಮಸ್ಕದಲ್ಲಿದ್ದ ಯಜ್ಞವೇದಿಕೆಯನ್ನು ನೋಡಿದನು. ರಾಜನಾದ ಅಹಾಜನು ಯಜ್ಞವೇದಿಕೆಯ ವಿನ್ಯಾಸವನ್ನು ಮತ್ತು ಮಾದರಿಯನ್ನು ಯಾಜಕನಾದ ಊರೀಯನಿಗೆ ಕಳುಹಿಸಿದನು. 11 ಆಗ ಯಾಜಕನಾದ ಊರೀಯನು, ದಮಸ್ಕದಿಂದ ರಾಜನಾದ ಅಹಾಜನು ತನಗೆ ಕಳುಹಿಸಿದ ಯಜ್ಞವೇದಿಕೆಯ ಮಾದರಿಯಲ್ಲೇ ಮತ್ತೊಂದು ಯಜ್ಞವೇದಿಕೆಯೊಂದನ್ನು ನಿರ್ಮಿಸಿದನು. ಹೀಗೆ ರಾಜನಾದ ಅಹಾಜನು ದಮಸ್ಕದಿಂದ ಹಿಂತಿರುಗುವುದಕ್ಕೆ ಮೊದಲೇ ಊರೀಯನು ಯಜ್ಞವೇದಿಕೊಂದನ್ನು ನಿರ್ಮಿಸಿದ್ದನು. 12 ರಾಜನು ದಮಸ್ಕದಿಂದ ಹಿಂದಿರುಗಿಬಂದು ಯಜ್ಞವೇದಿಕೆಯನ್ನು ನೋಡಿದನು. ಅವನು ಯಜ್ಞಗಳನ್ನು ಅದರ ಮೇಲೆ ಅರ್ಪಿಸಿದನು. 13 ಅಹಾಜನು ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಅರ್ಪಿಸಿದನು; ಪಾನನೈವೇದ್ಯವನ್ನು ಸುರಿಸಿದನು; ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಯಜ್ಞವೇದಿಕೆಯ ಮೇಲೆ ಚಿಮಿಕಿಸಿದನು. 14 ಹಾಜನು ದೇವಾಲಯದ ಎದುರಿನಲ್ಲಿ ಯೆಹೋವನ ಸನ್ನಿಧಿಯಲ್ಲಿದ್ದ ತಾಮ್ರದ ಯಜ್ಞವೇದಿಕೆಯನ್ನು ತೆಗೆಸಿದನು. ಈ ತಾಮ್ರದ ಯಜ್ಞವೇದಿಕೆಯು ಅಹಾಜನ ಯಜ್ಞವೇದಿಕೆ ಮತ್ತು ದೇವಾಲಯದ ನಡುವೆ ಇದ್ದಿತು. ಅಹಾಜನು ತಾಮ್ರದ ಯಜ್ಞವೇದಿಕೆಯನ್ನು ತನ್ನ ಸ್ವಂತ ಯಜ್ಞವೇದಿಕೆಯ ಉತ್ತರದಿಕ್ಕಿನಲ್ಲಿಡಿಸಿದನು. 15 ಅಹಾಜನು ಯಾಜಕನಾದ ಊರೀಯನಿಗೆ, “ಈ ದೇಶದ ಜನರೆಲ್ಲರೂ ಪ್ರಾತಃಕಾಲದಲ್ಲಿ ಸರ್ವಾಂಗಹೋಮವನ್ನೂ ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ ಮತ್ತು ಪಾನದ್ರವ್ಯಗಳನ್ನೂ ಸಮರ್ಪಿಸಲು ಮಹಾವೇದಿಕೆಯನ್ನು ಬಳಸಬೇಕು; ಸರ್ವಾಂಗಹೋಮಕ್ಕಾಗಿ ಮತ್ತು ಸಮಾಧಾನಯಜ್ಞಕ್ಕಾಗಿ ವಧಿಸುವ ಪಶುಗಳ ರಕ್ತವನ್ನು ಈ ಮಹಾವೇದಿಕೆಯ ಮೇಲೆ ಚಿಮುಕಿಸಿ. ಆದರೆ ನಾನು ದೇವರಿಂದ ದೈವೋತ್ತರಗಳನ್ನು ಕೇಳಲು ತಾಮ್ರವೇದಿಕೆಯನ್ನು ಉಪಯೋಗಿಸುತ್ತೇನೆ” ಎಂದು ಹೇಳಿದನು. 16 ರಾಜನಾದ ಅಹಾಜನು ಆಜ್ಞಾಪಿಸಿದಂತೆಯೇ ಯಾಜಕನಾದ ಊರೀಯನು ಮಾಡಿದನು. 17 ನಂತರ ರಾಜನಾದ ಅಹಾಜನು ಪೀಠಗಳ ಪಟ್ಟಿಗಳನ್ನು ಕತ್ತರಿಸಿದನು. ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು; ಸಮುದ್ರವೆಂಬ ತೊಟ್ಟಿಯನ್ನು ತಾಮ್ರದ ಹೋರಿಗಳಿಂದ ಕೆಳಗಿಳಿಸಿ ಕಲ್ಲುಕಟ್ಟೆಯ ಮೇಲಿಟ್ಟನು. 18 ಅಹಾಜನು ಸಬ್ಬತ್ ದಿನಕ್ಕಾಗಿ ಕಟ್ಟಿದ ಮಂಟಪವನ್ನು ಬದಲಾಯಿಸಿದನು. ಕೆಲಸಗಾರರು ಆಲಯದ ಒಳಗೆ ಇದನ್ನು ನಿರ್ಮಿಸಿದ್ದರು. ಅಹಾಜನು ರಾಜನಿಗಾಗಿ ಇದ್ದ ಹೊರಭಾಗದ ಬಾಗಿಲನ್ನು ಬದಲಾಯಿಸಿದನು. ಅಹಾಜನು ದೇವಾಲಯದಿಂದ ಇವುಗಳನ್ನೆಲ್ಲಾ ಅಶ್ಶೂರದ ರಾಜನ *ಅಶ್ಶೂರದ ರಾಜ ಯಾಕೆಂದರೆ ಅಶ್ಶೂರದ ರಾಜನು ಅವುಗಳ ಬಗ್ಗೆ ಕೇಳಿದ್ದರೆ ಅವುಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಿದ್ದನು. ದೆಸೆಯಿಂದ ಬದಲಾಯಿಸಿದನು. 19 “ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅಹಾಜನು ಮಾಡಿದ ಇತರ ಮಹಾಕಾರ್ಯಗಳನ್ನು ಬರೆಯಲಾಗಿದೆ. 20 ಅಹಾಜನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಬಳಿ ದಾವೀದನಗರದಲ್ಲಿ ಸಮಾಧಿಮಾಡಿದರು. ಅಹಾಜನ ಮಗನಾದ ಹಿಜ್ಕೀಯನು ಅವನ ನಂತರ ಹೊಸ ರಾಜನಾದನು.
ಒಟ್ಟು 25 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 16 / 25
×

Alert

×

Kannada Letters Keypad References