1. {ಜನರು ಧರ್ಮಶಾಸ್ತ್ರವನ್ನು ಕೇಳುವರು} [PS] ಯೆಹೂದದ ಮತ್ತು ಜೆರುಸಲೇಮಿನ ನಾಯಕರೆಲ್ಲರೂ ಬಂದು ತನ್ನನ್ನು ಭೇಟಿಯಾಗಬೇಕೆಂದು ರಾಜನಾದ ಯೋಷೀಯನು ಹೇಳಿದನು.
2. ನಂತರ ರಾಜನು ದೇವಾಲಯಕ್ಕೆ ಹೋದನು. ಯೆಹೂದದ ಜನರೆಲ್ಲರು ಮತ್ತು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ಜನರೆಲ್ಲರು ಅವನ ಜೊತೆಯಲ್ಲಿ ಹೋದರು. ಯಾಜಕರು, ಪ್ರವಾದಿಗಳು, ಚಿಕ್ಕವರು ಮತ್ತು ದೊಡ್ಡವರು ಅವನೊಡನೆ ಹೋದರು. ಆಗ ಅವನು ನಿಬಂಧನ ಗ್ರಂಥವನ್ನು ಓದಿದನು. ಇದು ದೇವಾಲಯದಲ್ಲಿ ಸಿಕ್ಕಿದ ಗ್ರಂಥವಾಗಿತ್ತು. ಜನರೆಲ್ಲರಿಗೂ ಕೇಳಿಸುವಂತೆ ಯೋಷೀಯನು ಗ್ರಂಥವನ್ನು ಓದಿದನು. [PE][PS]
3. ರಾಜನು ಸ್ತಂಭದ ಬಳಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞೆಗಳಿಗೆ, ಒಡಂಬಡಿಕೆಗೆ ಮತ್ತು ಆತನ ನಿಯಮಗಳಿಗೆ ಪೂರ್ಣಹೃದಯದಿಂದಲೂ ಪೂರ್ಣಆತ್ಮದಿಂದಲೂ ವಿಧೇಯನಾಗಿರುವುದಾಗಿಯೂ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು. ರಾಜನ ಪ್ರಮಾಣಕ್ಕೆ ಬೆಂಬಲ ನೀಡಲು ಜನರೆಲ್ಲರೂ ಎದ್ದುನಿಂತರು. [PE][PS]
4. ನಂತರ ರಾಜನು ಪ್ರಧಾನಯಾಜಕನಾದ ಹಿಲ್ಕೀಯನಿಗೆ, ಇತರ ಯಾಜಕರಿಗೆ, ದ್ವಾರಪಾಲಕರಿಗೆ, ಬಾಳ್ದೇವರಿಗೂ ಅಶೇರ ದೇವತೆಗೂ ಮತ್ತು ಆಕಾಶದ ನಕ್ಷತ್ರಗಳಿಗೂ ಉಪಯೋಗಿಸುತ್ತಿದ್ದ ಎಲ್ಲಾ ಸಲಕರಣೆಗಳನ್ನು ದೇವಾಲಯದಿಂದ ಹೊರತರುವಂತೆ ಆಜ್ಞಾಪಿಸಿದನು. ಯೋಷೀಯನು ಜೆರುಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಅವುಗಳನ್ನು ಸುಟ್ಟುಹಾಕಿದನು. ಅವರು ಬೂದಿಯನ್ನು ಬೇತೇಲಿಗೆ ತೆಗೆದುಕೊಂಡು ಹೋದರು. [PE][PS]
5. ಯೆಹೂದದ ರಾಜರುಗಳು ಯಾಜಕರಾಗಿ ಸೇವೆಮಾಡಲು ಕೆಲವು ಸಾಮಾನ್ಯ ಜನರನ್ನು ಆರಿಸಿಕೊಂಡರು. ಈ ಜನರು ಆರೋನನ ಕುಲದಿಂದ ಬಂದವರಲ್ಲ! ಈ ಸುಳ್ಳುಯಾಜಕರು ಯೆಹೂದದ ನಗರಗಳಲ್ಲಿನ ಮತ್ತು ಜೆರುಸಲೇಮಿನ ಊರುಗಳಲ್ಲಿನ ಉನ್ನತಸ್ಥಳಗಳಲ್ಲಿ ಧೂಪವನ್ನು ಸುಡುತ್ತಿದ್ದರು. ಅವರು ಬಾಳನನ್ನು, ಸೂರ್ಯನನ್ನು, ಚಂದ್ರನನ್ನು, ಆಕಾಶ ಸೈನ್ಯವಾದ ನಕ್ಷತ್ರಗಳನ್ನು ಗೌರವಿಸಲು ಧೂಪವನ್ನು ಸುಡುತ್ತಿದ್ದರು. ಆದರೆ ಯೋಷೀಯನು ಆ ಸುಳ್ಳು ಯಾಜಕರನ್ನು ನಿಲ್ಲಿಸಿದನು. [PE][PS]
6. ಯೋಷೀಯನು ಅಶೇರಸ್ತಂಭವನ್ನು ದೇವಾಲಯದಿಂದ ತೆಗೆದುಹಾಕಿದನು. ಅವನು ಅಶೇರಸ್ತಂಭವನ್ನು ನಗರದ ಹೊರವಲಯದ ಕಿದ್ರೋನ್ ಕಣಿವೆಗೆ ತೆಗೆದುಕೊಂಡು ಹೋಗಿ ಅದನ್ನು ಅಲ್ಲಿ ಸುಟ್ಟುಹಾಕಿದನು. ನಂತರ ಅವನು ಅದನ್ನು ಪುಡಿಪುಡಿ ಮಾಡಿಸಿ ಧೂಳಿನಲ್ಲಿ ಬೆರಸಿ ಸಾಮಾನ್ಯ ಜನರ ಸ್ಮಶಾನದಲ್ಲಿ ಆ ಧೂಳನ್ನು ಚೆಲ್ಲಿದನು. [PE][PS]
7. ನಂತರ ರಾಜನಾದ ಯೋಷೀಯನು ದೇವಾಲಯದಲ್ಲಿದ್ದ ದೇವದಾಸ ದೇವದಾಸಿಯರ ಮನೆಗಳನ್ನು ಕೆಡವಿಹಾಕಿಸಿದನು. ಆ ಮನೆಗಳಲ್ಲಿ ಸುಳ್ಳುದೇವತೆಯಾದ ಅಶೇರಳಿಗೋಸ್ಕರ ಚಿಕ್ಕ ಗುಡಾರಗಳನ್ನು ನೇಯುತ್ತಿದ್ದರು. [PE][PS]
8. (8-9) ಆ ಸಮಯದಲ್ಲಿ ಯಾಜಕರು ಯಜ್ಞಗಳನ್ನು ಜೆರುಸಲೇಮಿಗೆ ತರಲಿಲ್ಲ ಮತ್ತು ದೇವಾಲಯದಲ್ಲಿನ ಯಜ್ಞವೇದಿಕೆಯ ಮೇಲೆ ಅವುಗಳನ್ನು ಅರ್ಪಿಸಲಿಲ್ಲ. ಯಾಜಕರು ಯೆಹೂದದ ಎಲ್ಲಾ ನಗರಗಳಲ್ಲಿಯೂ ವಾಸಿಸುತ್ತಿದ್ದರು. ಅವರು ಆ ನಗರಗಳಲ್ಲಿನ ಉನ್ನತಸ್ಥಳಗಳಲ್ಲಿ ಧೂಪವನ್ನು ಸುಡುತ್ತಿದ್ದರು ಮತ್ತು ಯಜ್ಞಗಳನ್ನು ಅರ್ಪಿಸುತ್ತಿದ್ದರು. ಆ ಉನ್ನತಸ್ಥಳಗಳು ಗೆಬದಿಂದ ಬೇರ್ಷೆಬದವರೆಗೆ ಎಲ್ಲಾ ಕಡೆಗಳಲ್ಲಿದ್ದವು. ಯಾಜಕರು ತಮ್ಮ ಹುಳಿಯಿಲ್ಲದ ರೊಟ್ಟಿಗಳನ್ನು ಜೆರುಸಲೇಮಿನ ದೇವಾಲಯದಲ್ಲಿ ಯಾಜಕರಾಗಿದ್ದ ವಿಶೇಷ ಸ್ಥಳಗಳಲ್ಲಿ ತಿನ್ನದೆ ಆ ಊರುಗಳಲ್ಲಿ ಸಾಮಾನ್ಯ ಜನರೊಂದಿಗೆ ತಿನ್ನುತ್ತಿದ್ದರು. ಆದರೆ ರಾಜನಾದ ಯೋಷೀಯನು ಆ ಉನ್ನತಸ್ಥಳಗಳನ್ನು ನಾಶಗೊಳಿಸಿ ಆ ಯಾಜಕರನ್ನು ಜೆರುಸಲೇಮಿಗೆ ಕರೆತಂದನು. ನಗರಾಧಿಕಾರಿಯಾದ ಯೆಹೋಶುವನ ದ್ವಾರದ ಎಡಗಡೆಯಲ್ಲಿದ್ದ ಉನ್ನತಸ್ಥಳಗಳನ್ನು ಯೋಷೀಯನು ನಾಶಗೊಳಿಸಿದನು. [PE][PS]
9.
10. ತೋಫೆತ್ ಎನ್ನುವುದು ಬೆನ್ಹಿನ್ನೋಮ್ನ ಮಗನಿಗೆ ಸೇರಿದ ಒಂದು ಕಣಿವೆ. ಅಲ್ಲಿ ಸುಳ್ಳುದೇವರಾದ ಮೋಲೆಕನ ಗೌರವಾರ್ಥವಾಗಿ ಜನರು ತಮ್ಮ ಮಕ್ಕಳನ್ನು ಆಹುತಿ ಕೊಡುತ್ತಿದ್ದರು ಮತ್ತು ಯಜ್ಞವೇದಿಕೆಯ ಮೇಲೆ ಸುಡುತ್ತಿದ್ದರು. ಯೋಷೀಯನು, ಜನರು ಮತ್ತೆ ಆ ಸ್ಥಳವನ್ನು ಉಪಯೋಗಿಸದಂತೆ ನಾಶಗೊಳಿಸಿದನು.
11. ಪೂರ್ವಕಾಲದಲ್ಲಿ ಯೆಹೂದದ ರಾಜರುಗಳು ದೇವಾಲಯದ ಬಾಗಿಲಿನ ಹತ್ತಿರ ಕೆಲವು ಕುದುರೆಗಳನ್ನು ಮತ್ತು ರಥಗಳನ್ನು ನಿಲ್ಲಿಸುತ್ತಿದ್ದರು. ಇದು ನಾತಾನ್ ಮೆಲೆಕನೆಂಬ ಮುಖ್ಯ ಅಧಿಕಾರಿಯ ಕೋಣೆಯ ಹತ್ತಿರದಲ್ಲಿತ್ತು. ಆ ಕುದುರೆಗಳು ಮತ್ತು ರಥಗಳು ಸೂರ್ಯದೇವತೆಯ ಗೌರವಾರ್ಥವಾಗಿದ್ದವು. ಯೋಷೀಯನು ಕುದುರೆಗಳನ್ನು ತೆಗೆಸಿ ರಥಗಳನ್ನು ಸುಡಿಸಿಬಿಟ್ಟನು. [PE][PS]
12. ಪೂರ್ವಕಾಲದಲ್ಲಿ, ಯೆಹೂದದ ರಾಜರುಗಳು ಅಹಾಬನ ಕಟ್ಟಡದ ಮಾಳಿಗೆಯ ಮೇಲೆ ಯಜ್ಞವೇದಿಕೆಗಳನ್ನು ನಿರ್ಮಿಸಿದ್ದರು. ರಾಜನಾದ ಮನಸ್ಸೆಯು ದೇವಾಲಯದ ಎರಡು ಪ್ರಾಕಾರಗಳಲ್ಲಿ ಯಜ್ಞವೇದಿಕೆಗಳನ್ನು ನಿರ್ಮಿಸಿದ್ದನು. ಯೋಷೀಯನು ಆ ಯಜ್ಞವೇದಿಕೆಗಳನ್ನೆಲ್ಲ ನಾಶಗೊಳಿಸಿ, ಅವುಗಳ ಚೂರುಗಳನ್ನು ಕಿದ್ರೋನ್ ಕಣಿವೆಗೆ ಎಸೆದನು. [PE][PS]
13. ಪೂರ್ವಕಾಲದಲ್ಲಿ, ರಾಜನಾದ ಸೊಲೊಮೋನನು ಜೆರುಸಲೇಮಿನ ಬಳಿಯಲ್ಲಿದ್ದ ವಿಘ್ನಪರ್ವತದ ಮೇಲೆ ಕೆಲವು ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆ ಉನ್ನತಸ್ಥಳಗಳು ಪರ್ವತದ ದಕ್ಷಿಣದಿಕ್ಕಿನ ಮೇಲಿದ್ದವು. ರಾಜನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಆ ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆದರೆ ರಾಜನಾದ ಯೋಷೀಯನು ಆ ಪೂಜಾಸ್ಥಳಗಳನ್ನೆಲ್ಲಾ ನಾಶಪಡಿಸಿದನು.
14. ರಾಜನಾದ ಯೋಷೀಯನು ಎಲ್ಲಾ ಸ್ಮಾರಕಕಲ್ಲುಗಳನ್ನು ಮತ್ತು ಅಶೇರಸ್ತಂಭಗಳನ್ನು ಒಡೆದು ಹಾಕಿಸಿದನು. ಆಮೇಲೆ ಅವನು ಆ ಸ್ಥಳದ ಮೇಲೆ ಸತ್ತವರ ಎಲುಬುಗಳನ್ನು ಹರಡಿದನು. [PE][PS]
15. ಯೋಷೀಯನು ಬೇತೇಲಿನ ಉನ್ನತಸ್ಥಳವನ್ನು ಮತ್ತು ಯಜ್ಞವೇದಿಕೆಯನ್ನು ಕೆಡವಿಬಿಟ್ಟನು. ನೆಬಾಟನ ಮಗನಾದ ಯಾರೊಬ್ಬಾಮನು ಈ ಯಜ್ಞವೇದಿಕೆಯನ್ನು ನಿರ್ಮಿಸಿದ್ದನು. ಇಸ್ರೇಲರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಯೋಷೀಯನು ಯಜ್ಞವೇದಿಕೆಯನ್ನು ಮತ್ತು ಉನ್ನತಸ್ಥಳವನ್ನು ಕೆಡವಿಬಿಟ್ಟನು. ಯೋಷೀಯನು ಯಜ್ಞವೇದಿಕೆಯ ಕಲ್ಲುಗಳನ್ನು ಪುಡಿಪುಡಿಮಾಡಿ ಧೂಳಿನಲ್ಲಿ ಬೆರಸಿದನು. ಅವನು ಅಶೇರಸ್ತಂಭವನ್ನು ಸುಟ್ಟುಹಾಕಿದನು.
16. ಯೋಷೀಯನು ಸುತ್ತಲೂ ನೋಡಿದಾಗ ಬೆಟ್ಟದ ಮೇಲಿದ್ದ ಸ್ಮಶಾನಗಳನ್ನು ಕಂಡನು. ಅವನು ಜನರನ್ನು ಕಳುಹಿಸಿ ಆ ಸ್ಮಶಾನಗಳಿಂದ ಎಲುಬುಗಳನ್ನು ತರಿಸಿ ಆ ಎಲುಬುಗಳನ್ನು ಯಜ್ಞವೇದಿಕೆಯ ಮೇಲೆ ಸುಟ್ಟನು. ಈ ರೀತಿಯಲ್ಲಿ, ಯೋಷೀಯನು ಯಜ್ಞವೇದಿಕೆಯನ್ನು ಹೊಲಸು ಮಾಡಿದನು. ಇದು ಪ್ರವಾದಿಯು ಘೋಷಿಸಿದ್ದ [*ಘೋಷಿಸಿದ್ದ ನೋಡಿ 1 ರಾಜರುಗಳು 13:1-3.] ಯೆಹೋವನ ಸಂದೇಶದಂತೆ ಸಂಭವಿಸಿತು. ಯಾರೊಬ್ಬಾಮನು ಯಜ್ಞವೇದಿಕೆಯ ಪಕ್ಕದಲ್ಲಿ ನಿಂತಿದ್ದಾಗ ಪ್ರವಾದಿಯು ಈ ಸಂಗತಿಗಳನ್ನು ಪ್ರಕಟಿಸಿದ್ದನು. [PE][PS] ನಂತರ ಯೋಷೀಯನು ಸುತ್ತಲೂ ನೋಡಿದಾಗ, ದೇವಮನುಷ್ಯನ ಸಮಾಧಿಯನ್ನು ಕಂಡನು. [PE][PS]
17. ಯೋಷೀಯನು, “ನಾನು ನೋಡುತ್ತಿರುವ ಆ ಸ್ಮಾರಕ ಯಾವುದು?” ಎಂದು ಕೇಳಿದನು. [PE][PS] ಆ ನಗರದ ಜನರು ಅವನಿಗೆ, “ಅದು ಯೆಹೂದದಿಂದ ಬಂದ ದೇವಮನುಷ್ಯನ ಸಮಾಧಿ. ನೀನು ಬೇತೇಲಿನ ಯಜ್ಞವೇದಿಕೆಗೆ ಮಾಡಿದ ಕಾರ್ಯಗಳನ್ನು ಕುರಿತು ಈ ಪ್ರವಾದಿಯು ಬಹಳ ಕಾಲದ ಹಿಂದೆಯೇ ಹೇಳಿದ್ದನು” ಎಂದರು. [PE][PS]
18. ಯೋಷೀಯನು, “ಆ ಸಮಾಧಿಗೆ ಏನೂ ಮಾಡಬೇಡಿ. ಅವನ ಎಲುಬುಗಳನ್ನು ತೆಗೆಯಬೇಡಿ” ಎಂದು ಹೇಳಿದನು. [PE][PS]
19. ಯೋಷೀಯನು ಸಮಾರ್ಯದ ನಗರಗಳಲ್ಲಿದ್ದ ಉನ್ನತಸ್ಥಳಗಳ ಆಲಯಗಳನ್ನೆಲ್ಲ ನಾಶಗೊಳಿಸಿದನು. ಇಸ್ರೇಲಿನ ರಾಜರುಗಳು ಈ ಆಲಯಗಳನ್ನು ನಿರ್ಮಿಸಿದ್ದರು. ಇದರಿಂದ ಯೆಹೋವನು ಬಹಳ ಕೋಪಗೊಂಡಿದ್ದನು. ಯೋಷೀಯನು ಬೇತೇಲಿನಲ್ಲಿ ಆರಾಧನೆಯ ಸ್ಥಳಗಳನ್ನು ನಾಶಪಡಿಸಿದಂತೆ ಆ ಆಲಯಗಳನ್ನೂ ನಾಶಗೊಳಿಸಿದನು. [PE][PS]
20. ಯೋಷೀಯನು ಸಮಾರ್ಯದ ಉನ್ನತಸ್ಥಳಗಳಲ್ಲಿದ್ದ ಯಾಜಕರನ್ನೆಲ್ಲ ಕೊಂದುಹಾಕಿದನು. ಅವನು ಯಾಜಕರನ್ನು ಯಜ್ಞವೇದಿಕೆಗಳ ಮೇಲೆಯೇ ಕೊಂದುಹಾಕಿದನು. ಅವನು ಜನರ ಎಲುಬುಗಳನ್ನು ಯಜ್ಞವೇದಿಕೆಯ ಮೇಲೆ ಸುಟ್ಟನು. ಈ ರೀತಿ ಅವನು ಪೂಜೆಯ ಸ್ಥಳಗಳನ್ನು ನಾಶಗೊಳಿಸಿದನು. ನಂತರ ಅವನು ಜೆರುಸಲೇಮಿಗೆ ಹಿಂದಿರುಗಿದನು. [PS]
21. {ಯೆಹೂದದ ಜನರು ಪಸ್ಕಹಬ್ಬವನ್ನು ಆಚರಿಸಿದರು} [PS] ರಾಜನಾದ ಯೋಷೀಯನು ಜನರಿಗೆಲ್ಲ, “ನಿಮ್ಮ ದೇವರಾದ ಯೆಹೋವನಿಗಾಗಿ ಪಸ್ಕಹಬ್ಬವನ್ನು ಆಚರಿಸಿರಿ. ಈ ನಿಬಂಧನ ಗ್ರಂಥದಲ್ಲಿ ಬರೆದಿರುವಂತೆಯೇ ಅದನ್ನು ಮಾಡಿ” ಎಂದು ಆಜ್ಞಾಪಿಸಿದನು. [PE][PS]
22. ನ್ಯಾಯಾಧೀಶರು ಇಸ್ರೇಲನ್ನು ಆಳಿದ ದಿನಗಳಿಂದ ಜನರು ಪಸ್ಕಹಬ್ಬವನ್ನು ಈ ರೀತಿಯಲ್ಲಿ ಆಚರಿಸಿರಲಿಲ್ಲ. ಇಸ್ರೇಲಿನ ರಾಜರುಗಳಾಗಲಿ ಇಲ್ಲವೆ ಯೆಹೂದದ ರಾಜರುಗಳಾಗಲಿ ಈ ರೀತಿ ಪಸ್ಕಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿರಲಿಲ್ಲ.
23. ಯೋಷೀಯನು ರಾಜನಾಗಿದ್ದ ಹದಿನೆಂಟನೆ ವರ್ಷದಲ್ಲಿ ಅವರು ಯೆಹೋವನಿಗಾಗಿ ಈ ಪಸ್ಕಹಬ್ಬವನ್ನು ಜೆರುಸಲೇಮಿನಲ್ಲಿ ಆಚರಿಸಿದರು. [PE][PS]
24. ಯೋಷೀಯನು ಮಾಂತ್ರಿಕರನ್ನು, ತಾಂತ್ರಿಕರನ್ನು, ಮನೆಯ ದೇವರುಗಳನ್ನು, ವಿಗ್ರಹಗಳನ್ನು, ಯೆಹೂದದಲ್ಲಿ ಮತ್ತು ಜೆರುಸಲೇಮಿನಲ್ಲಿ ಜನರು ಪೂಜಿಸುತ್ತಿದ್ದ ತೆರಾಫೀಮ್ ಎಂಬ ಗೊಂಬೆಗಳನ್ನು ನಾಶಪಡಿಸಿದನು. ಯಾಜಕನಾದ ಹಿಲ್ಕೀಯನಿಗೆ ದೇವಾಲಯದಲ್ಲಿ ಸಿಕ್ಕಿದ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳಿಗೆ ವಿಧೇಯನಾಗಿರಲು ಯೋಷೀಯನು ಹೀಗೆ ಮಾಡಿದನು. [PE][PS]
25. ಇದಕ್ಕೆ ಮೊದಲು ಯೋಷೀಯನಂತಹ ರಾಜನು ಇರಲೇ ಇಲ್ಲ. ಯೋಷೀಯನು ತನ್ನ ಪೂರ್ಣಹೃದಯದಿಂದಲೂ ತನ್ನ ಪೂರ್ಣಆತ್ಮದಿಂದಲೂ ತನ್ನ ಪೂರ್ಣ ಶಕ್ತಿಯಿಂದಲೂ ಯೆಹೋವನ ಕಡೆಗೆ ತಿರುಗಿದನು. ಮೋಶೆಯ ಧರ್ಮಶಾಸ್ತ್ರವನ್ನು ಯೋಷೀಯನಂತೆ ಬೇರೆ ಯಾವ ರಾಜನೂ ಅನುಸರಿಸಿರಲಿಲ್ಲ. ಆ ಕಾಲದವರೆಗೆ ಯೋಷೀಯನಂತಹ ಮತ್ತೊಬ್ಬ ರಾಜನು ಇರಲೇ ಇಲ್ಲ. [PE][PS]
26. ಆದರೆ ಯೆಹೋವನು ಯೆಹೂದದ ಜನರ ಮೇಲೆ ಕೋಪಗೊಳ್ಳುವುದನ್ನು ನಿಲ್ಲಿಸಲೇ ಇಲ್ಲ. ಮನಸ್ಸೆಯು ಮಾಡಿದ ಕಾರ್ಯಗಳೆಲ್ಲವುಗಳಿಂದ ಯೆಹೋವನು ಅವರ ಮೇಲೆ ಇನ್ನೂ ಕೋಪಗೊಂಡಿದ್ದನು.
27. ಯೆಹೋವನು, “ನಾನು ಇಸ್ರೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು. ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮ ಮಹತ್ತಿಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು. [PE][PS]
28. “ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೋಷೀಯನು ಮಾಡಿದ ಇತರ ಕಾರ್ಯಗಳೆಲ್ಲವನ್ನು ಕುರಿತು ಬರೆಯಲಾಗಿದೆ. [PS]
29. {ಯೋಷೀಯನ ಮರಣ} [PS] ಯೋಷೀಯನ ಕಾಲದಲ್ಲಿ ಈಜಿಪ್ಟಿನ ರಾಜನಾದ ಫರೋಹ-ನೆಕೋ ಎಂಬವನು ಅಶ್ಶೂರದ ರಾಜನ ವಿರುದ್ಧವಾಗಿ ಹೋರಾಡಲು ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ರಾಜನಾದ ಯೋಷೀಯನು ಫರೋಹ ನೆಕೋವನ ವಿರುದ್ಧ ಹೋರಾಡಲು ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ಆದರೆ ಮೆಗಿದ್ದೋವಿನಲ್ಲಿ ಫರೋಹ ನೆಕೋವನು ಯೋಷೀಯನನ್ನು ನೋಡಿ, ಅವನನ್ನು ಕೊಂದು ಹಾಕಿದನು.
30. ಯೋಷೀಯನ ಸೇವಕರು ಮೆಗಿದ್ದೋವಿನಿಂದ ರಥದಲ್ಲಿ ಯೋಷೀಯನ ದೇಹವನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು. ಅವರು ಯೋಷೀಯನನ್ನು ಅವನ ಸ್ವಂತ ಸ್ಮಶಾನದಲ್ಲಿ ಸಮಾಧಿಮಾಡಿದರು. [PE][PS] ನಂತರ ಸಾಮಾನ್ಯ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಕರೆದು, ಅವನನ್ನು ಅಭಿಷೇಕಿಸಿ ಹೊಸ ರಾಜನನ್ನಾಗಿ ಮಾಡಿದರು. [PS]
31. {ಯೆಹೋವಾಹಾಜನು ಯೆಹೂದದ ರಾಜನಾಗುವನು} [PS] ಯೆಹೋವಾಹಾಜನು ರಾಜನಾದಾಗ ಅವನಿಗೆ ಇಪ್ಪತ್ತಮೂರು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿಯು ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್ ಎಂಬ ಹೆಸರಿನವಳು.
32. ಯೆಹೋವಾಹಾಜನು ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಮಾಡಿದನು. ಯೆಹೋವಾಹಾಜನು ತನ್ನ ಪೂರ್ವಿಕರೆಲ್ಲರೂ ಮಾಡಿದಂತಹ ಕಾರ್ಯಗಳನ್ನು ಮಾಡಿದನು. [PE][PS]
33. ಫರೋಹ ನೆಕೋವನು ಹಮಾತ್ ದೇಶದ ರಿಬ್ಲಾ ಎಂಬಲ್ಲಿ ಯೆಹೋವಾಹಾಜನನ್ನು ಸೆರೆಹಿಡಿದನು. ಆದ್ದರಿಂದ ಯೆಹೋವಾಹಾಜನು ಜೆರುಸಲೇಮಿನಲ್ಲಿ ಆಳಲಿಲ್ಲ. ಫರೋಹ ನೆಕೋವನು ಮೂರುಸಾವಿರದ ನಾನೂರು ಕಿಲೋಗ್ರಾಂ ಬೆಳ್ಳಿಯನ್ನು ಮತ್ತು ಮೂವತ್ನಾಲ್ಕು ಕಿಲೋಗ್ರಾಂ ಚಿನ್ನವನ್ನು ಕೊಡುವಂತೆ ಯೆಹೂದದವರನ್ನು ಬಲವಂತಪಡಿಸಿದನು. [PE][PS]
34. ಫರೋಹ ನೆಕೋವನು ಯೋಷೀಯನ ಮಗನಾದ ಎಲ್ಯಾಕೀಮನನ್ನು ಹೊಸರಾಜನನ್ನಾಗಿ ಮಾಡಿ ಎಲ್ಯಾಕೀಮನ ಹೆಸರನ್ನು ಯೆಹೋಯಾಕೀಮನೆಂದು ಬದಲಾಯಿಸಿದನು. ಯೆಹೋವಾಹಾಜನನ್ನು ಫರೋಹ ನೆಕೋವನು ಈಜಿಪ್ಟಿಗೆ ಕರೆದೊಯ್ದುನು. ಯೆಹೋವಾಹಾಜನು ಈಜಿಪ್ಟಿನಲ್ಲಿ ಸತ್ತುಹೋದನು.
35. ಯೆಹೋಯಾಕೀಮನು ಫರೋಹ ನೆಕೋವನಿಗೆ ಬೆಳ್ಳಿಬಂಗಾರವನ್ನು ಕೊಟ್ಟನು; ಸಾಮಾನ್ಯ ಜನರಿಗೂ ತೆರಿಗೆಗಳನ್ನು ಹಾಕಿ ಬಂದ ಹಣವನ್ನು ಫರೋಹ ನೆಕೋವನಿಗೆ ಕೊಟ್ಟನು. ಆದ್ದರಿಂದ ಪ್ರತಿಯೊಬ್ಬರು ತಮ್ಮ ಪಾಲಿನ ಬೆಳ್ಳಿಬಂಗಾರಗಳನ್ನು ಕೊಟ್ಟರು. ರಾಜನಾದ ಯೆಹೋಯಾಕೀಮನು ಫರೋಹ-ನೆಕೋವನಿಗೆ ಅವುಗಳನ್ನು ಕೊಟ್ಟನು. [PE][PS]
36. ಯೆಹೋಯಾಕೀಮನು ರಾಜನಾದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಜೆಬೂದಾ. ಆಕೆಯು ರೂಮದ ಪೆದಾಯನ ಮಗಳು.
37. ಯೆಹೋಯಾಕೀಮನು ಯೆಹೋವನು ಕೆಟ್ಟದ್ದೆಂದು ಹೇಳಿದವುಗಳನ್ನು ಮಾಡಿದನು. ಯೆಹೋಯಾಕೀಮನು ತನ್ನ ಪೂರ್ವಿಕರು ಮಾಡಿದ ಕಾರ್ಯಗಳನ್ನು ಮಾಡಿದನು. [PE]