1. {ದಾವೀದನು ಯೆಹೋವನಿಗಾಗಿ ರಚಿಸಿದ ಸ್ತುತಿಗೀತೆ} [PS] ಯೆಹೋವನು ದಾವೀದನನ್ನು ಸೌಲನಿಂದ ಮತ್ತು ಅವನ ಇತರ ಎಲ್ಲಾ ಶತ್ರುಗಳಿಂದ ರಕ್ಷಿಸಿದನು. ಆ ಸಮಯದಲ್ಲಿ ದಾವೀದನು ಈ ಹಾಡನ್ನು ರಚಿಸಿ ಹಾಡಿದನು:
2. ಯೆಹೋವನು ನನ್ನ ಬಂಡೆ; ನನ್ನ ಕೋಟೆ; ನನ್ನ ವಿಮೋಚಕ. [QBR2]
3. ನಾನು ಸಹಾಯಕ್ಕಾಗಿ ದೇವರ ಬಳಿಗೆ ಓಡಿಹೋಗುತ್ತೇನೆ. [QBR] ಆತನೇ ನನ್ನ ಆಶ್ರಯಗಿರಿ. ಯೆಹೋವನು ನನ್ನ ಗುರಾಣಿ. ಆತನ ಶಕ್ತಿಯು ನನ್ನನ್ನು ರಕ್ಷಿಸುತ್ತದೆ. [QBR2] ಆತನು ನಾನು ಅಡಗಿಕೊಳ್ಳುವ ಸ್ಥಳ; ಬೆಟ್ಟಗಳ ಮೇಲಿರುವ ನನ್ನ ಸುರಕ್ಷಿತ ಸ್ಥಳ; [QBR] ಆತನು ನನ್ನನ್ನು ಕ್ರೂರ ಶತ್ರುಗಳಿಂದ ರಕ್ಷಿಸುವನು! [QBR]
4. ಯೆಹೋವನು ಸ್ತೋತ್ರಕ್ಕೆ ಅರ್ಹನಾಗಿದ್ದಾನೆ. [QBR2] ನಾನು ಸಹಾಯಕ್ಕಾಗಿ ಆತನನ್ನು ಕರೆಯುವೆನು. [QBR2] ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುವನು.
5. ಸಾವಿನ ಅಲೆಗಳು ನನ್ನನ್ನು ಸುತ್ತುವರೆದಿವೆ; [QBR2] ತೊಂದರೆಗಳು ಪ್ರವಾಹದಂತೆ ನುಗ್ಗಿಬಂದಿವೆ. [QBR2] ಅವೆಲ್ಲ ನನ್ನಲ್ಲಿ ಭೀತಿಯನ್ನು ಉಂಟುಮಾಡಿವೆ. [QBR]
6. ಪಾತಾಳದ ಪಾಶಗಳು ನನ್ನನ್ನು ಸುತ್ತುವರೆದಿವೆ; [QBR2] ಮರಣಕರವಾದ ಉರುಲುಗಳು ನನ್ನೆದುರಿನಲ್ಲಿವೆ. [QBR]
7. ನಾನು ಅವುಗಳಲ್ಲಿ ಸಿಲುಕಿಕೊಂಡಿದ್ದಾಗ ಯೆಹೋವನಿಗೆ ಪ್ರಾರ್ಥಿಸಿದೆನು. [QBR2] ಹೌದು, ನನ್ನ ದೇವರಿಗೆ ನಾನು ಮೊರೆಯಿಟ್ಟೆನು; [QBR] ತನ್ನ ಆಲಯದಲ್ಲಿದ್ದ ಆತನಿಗೆ ನನ್ನ ಸ್ವರ ಕೇಳಿಸಿತು; [QBR2] ಸಹಾಯಕ್ಕಾಗಿ ನಾನಿಟ್ಟ ಮೊರೆಗೆ ಆತನು ಕಿವಿಗೊಟ್ಟನು. [QBR]
8. ಆಗ ಭೂಮಿಯು ಗಡಗಡನೆ ನಡುಗಿತು. [QBR2] ಆಕಾಶದ ಅಡಿಪಾಯಗಳು ಅಲುಗಾಡಿದವು. [QBR2] ಏಕೆಂದರೆ ಯೆಹೋವನಿಗೆ ಸಿಟ್ಟೇರಿತ್ತು! [QBR]
9. ಆತನ ಮೂಗಿನ ಹೊಳ್ಳೆಗಳಿಂದ ಹೊಗೆಯು ಹೊರಬಂದಿತು. [QBR2] ಬೆಂಕಿಕಿಡಿಯ ಜ್ವಾಲೆಗಳು ಆತನ ಬಾಯಿಂದ ಹೊರಬಂದವು; [QBR2] ದಹಿಸುವ ಬೆಂಕಿಯು ಆತನ ಬಾಯೊಳಗಿಂದ ಬಂದಿತು. [QBR]
10. ಆತನು ಆಕಾಶವನ್ನು ಇಬ್ಭಾಗಮಾಡಿ ಕೆಳಗಿಳಿದು ಬಂದನು! [QBR2] ಆತನ ಕಾಲುಗಳ ಕೆಳಗೆ ಕತ್ತಲೆ ಕವಿದಿತ್ತು. [QBR]
11. ಕೆರೂಬಿಗಳ ಮೇಲೆ ಆಸೀನನಾಗಿ ವಾಯುವೇ [QBR2] ತನ್ನ ರೆಕ್ಕೆಗಳೋ ಎಂಬಂತೆ ಹಾರಿಬಂದನು. [QBR]
12. ಆತನು ಕಾರ್ಮೋಡಗಳನ್ನೇ ತನ್ನ ಸುತ್ತಲೂ ಗುಡಾರದಂತಾಗಿಸಿಕೊಂಡನು. [QBR2] ಆತನು ಆಕಾಶದ ನೀರನ್ನು, ಗುಡುಗುವ ದೊಡ್ಡ ಮೋಡಗಳನ್ನು ತನ್ನ ಸುತ್ತಲೂ ಕವಿಸಿಕೊಂಡನು. [QBR]
13. ಉರಿಯುವ ಕಲ್ಲಿದ್ದಲಿನಂತಿದ್ದ ಕಿಡಿಗಳು [QBR2] ಆತನ ಸುತ್ತಲೂ ಇದ್ದ ಬೆಳಕಿನಿಂದ ಬಂದವು. [QBR]
14. ಯೆಹೋವನು ಆಕಾಶದಿಂದ ಗುಡುಗಿದನು! [QBR2] ಸರ್ವೋನ್ನತನಾದ ದೇವರು ತನ್ನ ಸ್ವರ ಕೇಳುವಂತೆ ಮಾಡಿದನು. [QBR]
15. ಆತನಿಂದ ಹೊರಟ ಬಾಣಗಳು ಶತ್ರುಗಳನ್ನು ಚೆಲ್ಲಾಪಿಲ್ಲಿಯಾಗಿ ಮಾಡಿದವು. [QBR2] ಆತನು ಸಿಡಿಲನ್ನು ಉಂಟುಮಾಡಿದನು, ಜನರು ಭೀತಿಯಿಂದ ಓಡಿಹೋದರು.
16. ಯೆಹೋವನೇ, ನೀನು ಗದರಿಸಿದಾಗ [QBR2] ನಿನ್ನ ಬಾಯಿಂದ ಪ್ರಬಲವಾದ ಗಾಳಿಯು ಬೀಸಿತು; [QBR] ನೀರು ಹಿಂದಕ್ಕೆ ತಳ್ಳಲ್ಪಟ್ಟಿತು. ಸಮುದ್ರದ ತಳವೂ [QBR2] ಭೂಮಿಯ ಅಸ್ತಿವಾರಗಳು ಕಣ್ಣಿಗೆ ಗೋಚರವಾದವು.
17. ಆತನು ಮೇಲಿನ ಲೋಕದಿಂದ ಕೆಳಗಿಳಿದನು. [QBR2] ಆತನು ನನ್ನನ್ನು ಹಿಡಿದುಕೊಂಡು ನನ್ನನ್ನು ನೀರಿನಡಿಯಿಂದ ಮೇಲಕ್ಕೆತ್ತಿದನು. [QBR]
18. ನನ್ನನ್ನು ದ್ವೇಷಿಸುತ್ತಿದ್ದ ಶತ್ರುಗಳಿಂದ ಆತನೇ ರಕ್ಷಿಸಿದನು. [QBR2] ನನ್ನ ಶತ್ರುಗಳು ನನಗಿಂತಲೂ ಬಹಳ ಬಲಿಷ್ಠರೂ ಸೊಕ್ಕಿದವರೂ ಆಗಿದ್ದರು. ಅವರ ಕೈಯಿಂದ ಆತನೇ ನನ್ನನ್ನು ರಕ್ಷಿಸಿದನು. [QBR]
19. ಶತ್ರುಗಳು ನನಗೆ ಮುತ್ತಿಗೆ ಹಾಕಿದಾಗ ನಾನು ತೊಂದರೆಯಲ್ಲಿದ್ದೆನು. [QBR2] ಆದರೆ ನನಗೆ ಯೆಹೋವನು ಸಹಾಯ ಮಾಡಿದನು. [QBR]
20. ಆತನು ನನ್ನನ್ನು ಸುರಕ್ಷಿತವಾದ ಸ್ಥಳಕ್ಕೆ ತಂದನು. [QBR2] ಆತನು ನನ್ನನ್ನು ಪ್ರೀತಿಸಿ ರಕ್ಷಿಸಿದನು. [QBR]
21. ನಾನು ನೀತಿಗನುಸಾರವಾಗಿ ನಡೆದುಕೊಂಡಿದ್ದರಿಂದ ಯೆಹೋವನು ನನಗೆ ಪ್ರತಿಫಲವನ್ನು ಕೊಟ್ಟನು. [QBR2] ನಾನು ನಿರ್ದೋಷಿಯಾಗಿದ್ದರಿಂದ ಆತನು ನನಗೆ ಒಳ್ಳೆಯದನ್ನೇ ಮಾಡಿದನು. [QBR]
22. ನಾನು ಆತನ ಮಾರ್ಗಗಳನ್ನೇ ಅನುಸರಿಸಿದೆನು. [QBR2] ನನ್ನ ದೇವರ ವಿರುದ್ಧ ನಾನು ಪಾಪವನ್ನು ಮಾಡಲಿಲ್ಲ. [QBR]
23. ನಾನು ಯೆಹೋವನ ಆಜ್ಞೆಗಳನ್ನು ಯಾವಾಗಲೂ ಜ್ಞಾಪಿಸಿಕೊಂಡೆನು. [QBR2] ನಾನು ಯಾವಾಗಲೂ ಆತನ ಕಟ್ಟಳೆಗನುಸಾರವಾಗಿಯೇ ನಡೆದುಕೊಂಡೆನು. [QBR]
24. ನಾನು ದೋಷಿಯಲ್ಲವೆಂಬುದು ಆತನಿಗೆ ತಿಳಿದಿದೆ. [QBR2] ನಾನು ಪಾಪದಲ್ಲಿ ಬೀಳದಂತೆ ಎಚ್ಚರಿಕೆ ವಹಿಸಿದೆನು. [QBR]
25. ನಾನು ಒಳ್ಳೆಯದನ್ನೇ ಮಾಡಿದೆನು. [QBR2] ಯೆಹೋವನ ದೃಷ್ಟಿಯಲ್ಲಿ ನಾನು ತಪ್ಪೇನೂ ಮಾಡಲಿಲ್ಲ, ಆದ್ದರಿಂದ ಆತನು ನನಗೆ ಪ್ರತಿಫಲ ಕೊಡುವನು!
26. ನಿನ್ನನ್ನು ಪ್ರೀತಿಸುವವರನ್ನು ನೀನು ಪ್ರೀತಿಸುತ್ತಿ. [QBR2] ನಿನ್ನ ಮುಂದೆ ದೋಷವಿಲ್ಲದವನಾಗಿ ನಡೆಯುವವನಿಗೆ ನಿರ್ದೋಷಿಯಾಗಿರುತ್ತಿ. [QBR]
27. ನೀನು ಪರಿಶುದ್ಧರಿಗೆ ಪರಿಶುದ್ಧನಾಗಿರುವೆ; [QBR2] ಮೋಸಗಾರರಿಗೆ ಜಾಣನಾಗಿರುವೆ. [QBR]
28. ನೀನು ದೀನರನ್ನು ಮೇಲಕ್ಕೆತ್ತುವೆ; [QBR2] ಗರ್ವಿಷ್ಠರನ್ನಾದರೋ ತುಳಿದುಬಿಡುವೆ. [QBR]
29. ಯೆಹೋವನೇ, ನನ್ನ ದೀಪವು ನೀನೇ. [QBR2] ಯೆಹೋವನು ನನಗೆ ಬೆಳಕು ಕೊಟ್ಟು ನನ್ನ ಸುತ್ತಲಿನ ಅಂಧಕಾರವನ್ನು ಪ್ರಕಾಶಮಯವಾಗುವಂತೆ ಮಾಡುವನು. [QBR]
30. ನಿನ್ನ ಸಹಾಯದಿಂದಲೇ, ನಾನು ವೈರಿಗಳ ಮೇಲೆ ಬೀಳುವೆನು. [QBR2] ನಿನ್ನ ಸಹಾಯದಿಂದಲೇ ನಾನು ಶತ್ರುಗಳ ಗೋಡೆಗಳನ್ನು ಹತ್ತಬಲ್ಲೆನು.
31. ದೇವರ ಶಕ್ತಿಯು ಪರಿಪೂರ್ಣವಾದದ್ದು. [QBR2] ಯೆಹೋವನ ಮಾತು ಪರೀಕ್ಷಿಸಲ್ಪಟ್ಟದ್ದು; [QBR2] ಆತನು ತನ್ನಲ್ಲಿ ಭರವಸೆಯಿಟ್ಟವರನ್ನು ಸಂರಕ್ಷಿಸುತ್ತಾನೆ. [QBR]
32. ಯೆಹೋವನ ಹೊರತು ಬೇರೆ ದೇವರಿಲ್ಲ. [QBR2] ನಮ್ಮ ದೇವರ ಹೊರತು ಬೇರೆ ಬಂಡೆಯಿಲ್ಲ. [QBR]
33. ದೇವರು ನನ್ನ ಬಲವೂ ಕೋಟೆಯೂ ಆಗಿದ್ದಾನೆ. [QBR2] ಆತನು ನನ್ನ ಮಾರ್ಗವನ್ನು ದೋಷವಿಲ್ಲದ್ದಾಗಿ ಮಾಡುತ್ತಾನೆ. [QBR]
34. ನಾನು ಉನ್ನತ ಪ್ರದೇಶಗಳಲ್ಲಿ ನಿಲ್ಲುವಂತೆ [QBR2] ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳಂತೆ ಮಾಡುತ್ತಾನೆ. [QBR]
35. ಆತನು ಯುದ್ಧಕ್ಕಾಗಿ ನನ್ನನ್ನು ತರಬೇತುಗೊಳಿಸುವನು. [QBR2] ಆದ್ದರಿಂದ ನನ್ನ ತೋಳುಗಳು ಹಿತ್ತಾಳೆಯ ಬಿಲ್ಲನ್ನೂ ಬಗ್ಗಿಸಬಲ್ಲವು.
36. ದೇವರೇ, ನೀನು ನನ್ನನ್ನು ಸಂರಕ್ಷಿಸಿ ಜಯಹೊಂದಲು ನನಗೆ ಸಹಾಯಮಾಡಿರುವೆ. [QBR2] ನನ್ನ ಶತ್ರುವನ್ನು ಸೋಲಿಸಲು ನೀನು ನನಗೆ ಸಹಾಯ ಮಾಡಿರುವೆ. [QBR]
37. ನನ್ನ ಕಾಲುಗಳನ್ನೂ ಕೀಲುಗಳನ್ನೂ ಬಲಗೊಳಿಸು; [QBR2] ಆಗ ನಾನು ಎಡವದೆ ವೇಗವಾಗಿ ನಡೆಯಬಲ್ಲೆನು. [QBR]
38. ನಾನು ನನ್ನ ಶತ್ರುಗಳನ್ನು ಅಟ್ಟಿಸಿಕೊಂಡು ಹೋದೆನು. ನಾನು ಅವರನ್ನು ನಾಶಗೊಳಿಸಿದೆನು! [QBR2] ನಾನು ನನ್ನ ಶತ್ರುಗಳನ್ನು ನಾಶಗೊಳಿಸುವ ತನಕ ಹಿಂದಿರುಗುವುದಿಲ್ಲ. [QBR]
39. ನಾನು ನನ್ನ ಶತ್ರುಗಳನ್ನು ನಾಶಗೊಳಿಸಿದೆನು! [QBR2] ನಾನು ಅವರನ್ನು ಸಂಪೂರ್ಣವಾಗಿ ನಾಶಗೊಳಿಸಿದೆನು. [QBR] ಅವರು ಮತ್ತೆ ಮೇಲೇಳುವುದಿಲ್ಲ. [QBR2] ಹೌದು, ನನ್ನ ಶತ್ರುಗಳು ನನ್ನ ಪಾದಗಳ ಕೆಳಗೆ ಬಿದ್ದಿದ್ದಾರೆ.
40. ದೇವರೇ, ನೀನು ನನ್ನನ್ನು ಯುದ್ಧಕ್ಕಾಗಿ ಬಲಪಡಿಸಿರುವೆ. [QBR2] ನನ್ನ ಶತ್ರುಗಳನ್ನು ನನಗೆ ಅಧೀನರಾಗುವಂತೆ ಮಾಡಿರುವೆ. [QBR]
41. ನನ್ನ ಶತ್ರುಗಳು ಓಡಿಹೋಗಲು ನೀನೇ ಕಾರಣ. [QBR2] ಆದ್ದರಿಂದಲೇ ನನ್ನನ್ನು ದ್ವೇಷಿಸಿದ ಜನರನ್ನು ನಾನು ನಾಶ ಮಾಡಿದೆನು. [QBR]
42. ನನ್ನ ಶತ್ರುಗಳು ಸಹಾಯಕ್ಕಾಗಿ ನೋಡಿದರು. [QBR2] ಆದರೆ ಅವರನ್ನು ರಕ್ಷಿಸಲು ಅಲ್ಲಿ ಯಾರೂ ಇರಲಿಲ್ಲ. [QBR] ಅವರು ಯೆಹೋವನ ಕಡೆಗೂ ನೋಡಿದರು; [QBR2] ಆದರೆ ಆತನು ಅವರಿಗೆ ಉತ್ತರ ಕೊಡಲಿಲ್ಲ. [QBR]
43. ನಾನು ನನ್ನ ಶತ್ರುಗಳನ್ನು [QBR2] ತುಂಡುತುಂಡಾಗಿ ಕತ್ತರಿಸಿಹಾಕಿದೆ. [QBR] ಅವರು ನೆಲದ ಮೇಲಿನ ಧೂಳಿನಂತಾದರು. [QBR2] ನನ್ನ ಶತ್ರುಗಳನ್ನು ರಸ್ತೆಯಲ್ಲಿನ ಮಣ್ಣಿನಂತಾಗುವವರೆಗೆ ತುಳಿದುಬಿಟ್ಟೆನು.
44. ಜನರು ನನ್ನ ವಿರುದ್ಧ ವಾದಿಸಿದಾಗ ನೀನು ನನ್ನನ್ನು ರಕ್ಷಿಸಿದೆ. [QBR2] ನೀನು ನನ್ನನ್ನು ಜನಾಂಗಗಳಿಗೆ ಅಧಿಪತಿಯನ್ನಾಗಿ ಮಾಡಿದೆ. [QBR2] ನಾನು ತಿಳಿಯದ ಜನರೂ ನನ್ನ ಸೇವೆಮಾಡುತ್ತಾರೆ! [QBR]
45. ಅನ್ಯದೇಶದ ಜನರೂ ನನಗೆ ವಿಧೇಯರಾಗಿರುವರು! [QBR2] ಅವರು ನನ್ನ ಬಗ್ಗೆ ಕೇಳಿದಾಗ, ತಕ್ಷಣವೇ ನನಗೆ ವಿಧೇಯರಾಗುವರು! ಆ ಪರದೇಶಿಯರು ನನಗೆ ಭಯಪಡುವರು. [QBR]
46. ಅನ್ಯದೇಶದ ಜನರು ಭಯಗೊಳ್ಳುವರು; [QBR2] ತಾವು ಅಡಗಿದ್ದ ಸ್ಥಳಗಳಿಂದ ನಡುಗುತ್ತಾ ಹೊರಬರುವರು.
47. ಯೆಹೋವನು ಜೀವಸ್ವರೂಪನಾಗಿದ್ದಾನೆ. [QBR2] ನನ್ನ ಬಂಡೆಗೆ ಸ್ತೋತ್ರವಾಗಲಿ. [QBR2] ಯೆಹೋವನು ಮಹೋನ್ನತನು! ನನ್ನನ್ನು ರಕ್ಷಿಸುವ ಬಂಡೆಯಾದಾತನಿಗೆ ಸ್ತುತಿಯುಂಟಾಗಲಿ. [QBR]
48. ನನ್ನ ಶತ್ರುಗಳನ್ನು ನನಗಾಗಿ ದಂಡಿಸುವ ದೇವರು ಆತನೇ. [QBR2] ಆತನು ಜನರನ್ನು ನನ್ನ ಅಧೀನತೆಗೆ ಒಳಪಡಿಸುವನು. [QBR]
49. ನನ್ನ ಶತ್ರುಗಳಿಂದ ನನ್ನನ್ನು ಸ್ವತಂತ್ರನಾಗಿಸುವವನು ದೇವರೇ. ಹೌದು, ನೀನು ನನ್ನನ್ನು ನನ್ನ ಶತ್ರುಗಳಿಂದ ತಪ್ಪಿಸಿ ಮೇಲಕ್ಕೇರಿಸುವೆ. [QBR2] ನನ್ನನ್ನು ಹಿಂಸಿಸಬೇಕೆನ್ನುವ ಮನುಷ್ಯನಿಂದ ನೀನು ನನಗೆ ರಕ್ಷಣೆ ನೀಡುವೆ. [QBR]
50. ಯೆಹೋವನೇ, ಈ ಕಾರಣದಿಂದಲೇ ನಾನು ಅನ್ಯ ಜನಾಂಗಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. [QBR2] ಈ ಕಾರಣದಿಂದಲೇ ನಿನ್ನ ಹೆಸರಿನ ಮೇಲೆ ಹಾಡುಗಳನ್ನು ಹಾಡುವೆನು.
51. ಆತನು ತಾನು ನೇಮಿಸಿದ ರಾಜನಿಗೆ ಸಹಾಯಮಾಡಿ ಯುದ್ಧಗಳಲ್ಲಿ ಜಯ ದಯಪಾಲಿಸುವನು. [QBR2] ಆತನು ನನ್ನ ರಕ್ಷಣಾದುರ್ಗವಾಗಿದ್ದಾನೆ. [QBR] ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಪ್ರೀತಿಯನ್ನು ಮತ್ತು ದಯೆಯನ್ನು ತೋರುವನು. [QBR2] ದಾವೀದನಿಗೆ ಮತ್ತು ಅವನ ಸಂತತಿಯವರಿಗೆ ಆತನು ಎಂದೆಂದಿಗೂ ಕೃಪೆ ತೋರಿಸುವವನಾಗಿದ್ದಾನೆ. [PE]