ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
2 ಥೆಸಲೊನೀಕದವರಿಗೆ
1. {ಕೆಟ್ಟಕಾರ್ಯಗಳು ಸಂಭವಿಸುವವು} [PS] ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವುದನ್ನು ಕುರಿತು ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನಾವೆಲ್ಲರೂ ಒಟ್ಟಾಗಿ ಸೇರಿ ಆತನನ್ನು ಸಂಧಿಸುವ ಕಾಲವನ್ನು ಕುರಿತು ನಿಮ್ಮೊಡನೆ ಮಾತನಾಡಲು ಇಚ್ಛಿಸುತ್ತೇವೆ.
2. ಪ್ರಭುವಿನ ದಿನವು ಈಗಾಗಲೇ ಬಂದುಬಿಟ್ಟಿತು ಎಂದು ಯಾರಾದರು ನಿಮಗೆ ಹೇಳಿದರೆ ಆ ಕೂಡಲೇ ಕಳವಳಗೊಳ್ಳಬೇಡಿ ಅಥವಾ ಭಯಪಡಬೇಡಿ. ಯಾವನಾದರೂ ತನ್ನ ಪ್ರವಾದನೆಯಲ್ಲಾಗಲಿ ಉಪದೇಶದಲ್ಲಾಗಲಿ ಹಾಗೆ ಹೇಳುವ ಸಾಧ್ಯತೆ ಇದೆ. ಯಾವನಾದರೂ ಸುಳ್ಳುಪತ್ರವನ್ನೇ ನಮ್ಮ ಹೆಸರಿನಲ್ಲಿ ತಾನೇ ಬರೆದು ನಿಮ್ಮ ಮುಂದೆ ಓದಿ ತಿಳಿಸುವ ಸಾಧ್ಯತೆಯೂ ಇದೆ.
3. ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸಲು ಅವಕಾಶ ನೀಡದಿರಿ. ಜನರು ದೇವರಿಗೆ ವಿಮುಖರಾಗದ ಹೊರತು, ಅಧರ್ಮಸ್ವರೂಪನು ಕಾಣಿಸಿಕೊಳ್ಳದ ಹೊರತು ಆ ದಿನವು ಬರುವುದಿಲ್ಲ.
4. ದೇವರೆಂದು ಕರೆಸಿಕೊಳ್ಳುವ ಏನನ್ನೇ ಆಗಲಿ, ಜನರು ಪೂಜಿಸುವ ಯಾವುದನ್ನೇ ಆಗಲಿ ಅಧರ್ಮಸ್ವರೂಪನು ವಿರೋಧಿಸಿ, ಅವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡು ದೇವರ ಆಲಯದೊಳಕ್ಕೆ ಹೋಗಿ ಕುಳಿತುಕೊಂಡು ತಾನೇ ದೇವರೆಂದು ಹೇಳಿಕೊಳ್ಳುತ್ತಾನೆ. [PE][PS]
5. ಈ ಸಂಗತಿಗಳೆಲ್ಲವೂ ಸಂಭವಿಸುತ್ತವೆಯೆಂದು ನಾನು ನಿಮಗೆ ಮೊದಲೇ ತಿಳಿಸಿದ್ದೇನೆ. ಜ್ಞಾಪಕವಿಲ್ಲವೇ?
6. ಈಗ ಅಧರ್ಮಸ್ವರೂಪನನ್ನು ತಡೆಹಿಡಿದಿರುವುದು ಯಾವುದೆಂಬುದು ನಿಮಗೆ ತಿಳಿದಿದೆ. ಅವನು ತಕ್ಕಕಾಲದಲ್ಲಿ ಬರಲೆಂದೇ ಅವನನ್ನು ಈಗ ತಡೆಹಿಡಿಯಲಾಗಿದೆ.
7. ರಹಸ್ಯವಾದ ದುಷ್ಟಶಕ್ತಿಯು ಈಗಾಗಲೇ ಪ್ರಪಂಚದಲ್ಲಿ ತನ್ನ ಕಾರ್ಯವನ್ನು ಸಾಧಿಸುತ್ತಾ ಇದೆ. ಆದರೆ ಆ ರಹಸ್ಯವಾದ ದುಷ್ಟಶಕ್ತಿಯನ್ನು ತಡೆಹಿಡಿಯುವ ಒಬ್ಬಾತನಿದ್ದಾನೆ. ಆತನು ತೆಗೆದುಬಿಡಲ್ಪಟ್ಟ ಕೂಡಲೇ
8. ಅಧರ್ಮಸ್ವರೂಪನು ಕಾಣಿಸಿಕೊಳ್ಳುತ್ತಾನೆ. ಪ್ರಭುವಾದ ಯೇಸು ಅವನನ್ನು ತನ್ನ ಬಾಯಿಯ ಉಸಿರಿನಿಂದಲೇ ಕೊಲ್ಲುವನು; ತನ್ನ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಪಡಿಸುವನು. [PE][PS]
9. ಆ ಅಧರ್ಮಸ್ವರೂಪನು ಸೈತಾನನ ಮಹಾಶಕ್ತಿಯಿಂದ ಕೂಡಿದವನಾಗಿರುತ್ತಾನೆ. ಅವನು ಅನೇಕ ಮೋಸದ ಪವಾಡಗಳನ್ನು, ಸೂಚಕಕಾರ್ಯಗಳನ್ನು, ಅದ್ಭುತಕಾರ್ಯಗಳನ್ನು ಮಾಡುತ್ತಾನೆ.
10. ಸತ್ಯವನ್ನು ಪ್ರೀತಿಸದೆ ತಪ್ಪಿಹೋಗಿರುವ ಜನರನ್ನು ಮೋಸಗೊಳಿಸಲು, ಅವನು ಎಲ್ಲಾ ವಿಧವಾದ ತಂತ್ರಗಳನ್ನು ಮಾಡುವನು. (ಅವರು ಸತ್ಯವನ್ನು ಪ್ರೀತಿಸಿದ್ದರೆ, ರಕ್ಷಣೆ ಹೊಂದುತ್ತಿದ್ದರು.)
11. ಆದರೆ ಆ ಜನರು ಸತ್ಯವನ್ನು ಪ್ರೀತಿಸಲಿಲ್ಲ. ಆದಕಾರಣ, ಸತ್ಯವನ್ನು ತೊರೆದು, ಸತ್ಯವಲ್ಲದ್ದನ್ನು ನಂಬುವಂತೆ ಮಾಡುವ ಶಕ್ತಿಯೊಂದನ್ನು ದೇವರು ಅವರ ಬಳಿಗೆ ಕಳುಹಿಸುತ್ತಾನೆ.
12. ಸತ್ಯವನ್ನು ನಂಬದೆ, ಕೆಟ್ಟಕಾರ್ಯಗಳನ್ನು ಮಾಡುವುದರಲ್ಲಿ ಸಂತೋಷಪಡುವ ಜನರೆಲ್ಲರೂ ದಂಡನೆಗೆ ಒಳಗಾಗುವರು. [PS]
13. {ರಕ್ಷಣೆಗಾಗಿ ನೀವು ಆರಿಸಲ್ಪಟ್ಟಿರುವಿರಿ} [PS] ಸಹೋದರ ಸಹೋದರಿಯರೇ, ಪ್ರಭುವು ನಿಮ್ಮನ್ನು ಪ್ರೀತಿಸುತ್ತಾನೆ. ನಿಮ್ಮನ್ನು ರಕ್ಷಿಸಬೇಕೆಂದು ದೇವರು ನಿಮ್ಮನ್ನು ಆದಿಯಲ್ಲಿಯೇ ಆರಿಸಿಕೊಂಡನು. ಆದ್ದರಿಂದ ನಿಮ್ಮ ವಿಷಯದಲ್ಲಿ ದೇವರಿಗೆ ಯಾವಾಗಲೂ ಕೃತಜ್ಞತೆ ಸಲ್ಲಿಸಬೇಕು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವ ಪವಿತ್ರಾತ್ಮನಿಂದ ಮತ್ತು ಸತ್ಯದ ಮೇಲೆ ನಿಮಗಿರುವ ನಂಬಿಕೆಯಿಂದ ನೀವು ರಕ್ಷಣೆ ಹೊಂದಿದ್ದೀರಿ.
14. ನೀವು ರಕ್ಷಣೆಯನ್ನು ಹೊಂದಿಕೊಂಡು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮಹಿಮೆಯಲ್ಲಿ ಪಾಲುಗಾರರಾಗಬೇಕೆಂದು, ನಾವು ಸಾರಿದ ಸುವಾರ್ತೆಯ ಮೂಲಕ ದೇವರು ನಿಮ್ಮನ್ನು ಕರೆದನು.
15. ಸಹೋದರ ಸಹೋದರಿಯರೇ, ದೃಢವಾಗಿರಿ. ನಾವು ಮಾತಿನ ಮೂಲಕ ಮತ್ತು ಪತ್ರಗಳ ಮೂಲಕ ನಿಮಗೆ ತಿಳಿಸಿದ ಬೋಧನೆಗಳನ್ನು ನಂಬಿಕೊಂಡೇ ಇರಿ. [PE][PS]
16. (16-17) ನೀವು ಹೇಳುವ ಒಳ್ಳೆಯ ಸಂಗತಿಗಳಲ್ಲಿ ಮತ್ತು ಮಾಡುವ ಒಳ್ಳೆಯ ಕಾರ್ಯಗಳಲ್ಲಿ ನಿಮಗೆ ಬಲವನ್ನೂ ಆದರಣೆಯನ್ನೂ ಪ್ರಭುವಾದ ಯೇಸು ಕ್ರಿಸ್ತನು ಮತ್ತು ತಂದೆಯಾದ ದೇವರು ನಿಮಗೆ ದಯಪಾಲಿಸಲಿ ಎಂದು ನಾವು ಪ್ರಾರ್ಥಿಸುತ್ತೇವೆ. ದೇವರು ನಮ್ಮನ್ನು ಪ್ರೀತಿಸಿದನು. ಆತನು ತನ್ನ ಕೃಪೆಯಿಂದಲೇ ನಮಗೆ ಒಳ್ಳೆಯ ನಿರೀಕ್ಷೆಯನ್ನೂ ಶಾಶ್ವತವಾದ ಆದರಣೆಯನ್ನೂ ದಯಪಾಲಿಸಿದನು. [PE]
17.
ಒಟ್ಟು 3 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 2 / 3
1 2 3
ಕೆಟ್ಟಕಾರ್ಯಗಳು ಸಂಭವಿಸುವವು 1 ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವುದನ್ನು ಕುರಿತು ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನಾವೆಲ್ಲರೂ ಒಟ್ಟಾಗಿ ಸೇರಿ ಆತನನ್ನು ಸಂಧಿಸುವ ಕಾಲವನ್ನು ಕುರಿತು ನಿಮ್ಮೊಡನೆ ಮಾತನಾಡಲು ಇಚ್ಛಿಸುತ್ತೇವೆ. 2 ಪ್ರಭುವಿನ ದಿನವು ಈಗಾಗಲೇ ಬಂದುಬಿಟ್ಟಿತು ಎಂದು ಯಾರಾದರು ನಿಮಗೆ ಹೇಳಿದರೆ ಆ ಕೂಡಲೇ ಕಳವಳಗೊಳ್ಳಬೇಡಿ ಅಥವಾ ಭಯಪಡಬೇಡಿ. ಯಾವನಾದರೂ ತನ್ನ ಪ್ರವಾದನೆಯಲ್ಲಾಗಲಿ ಉಪದೇಶದಲ್ಲಾಗಲಿ ಹಾಗೆ ಹೇಳುವ ಸಾಧ್ಯತೆ ಇದೆ. ಯಾವನಾದರೂ ಸುಳ್ಳುಪತ್ರವನ್ನೇ ನಮ್ಮ ಹೆಸರಿನಲ್ಲಿ ತಾನೇ ಬರೆದು ನಿಮ್ಮ ಮುಂದೆ ಓದಿ ತಿಳಿಸುವ ಸಾಧ್ಯತೆಯೂ ಇದೆ. 3 ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸಲು ಅವಕಾಶ ನೀಡದಿರಿ. ಜನರು ದೇವರಿಗೆ ವಿಮುಖರಾಗದ ಹೊರತು, ಅಧರ್ಮಸ್ವರೂಪನು ಕಾಣಿಸಿಕೊಳ್ಳದ ಹೊರತು ಆ ದಿನವು ಬರುವುದಿಲ್ಲ. 4 ದೇವರೆಂದು ಕರೆಸಿಕೊಳ್ಳುವ ಏನನ್ನೇ ಆಗಲಿ, ಜನರು ಪೂಜಿಸುವ ಯಾವುದನ್ನೇ ಆಗಲಿ ಅಧರ್ಮಸ್ವರೂಪನು ವಿರೋಧಿಸಿ, ಅವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡು ದೇವರ ಆಲಯದೊಳಕ್ಕೆ ಹೋಗಿ ಕುಳಿತುಕೊಂಡು ತಾನೇ ದೇವರೆಂದು ಹೇಳಿಕೊಳ್ಳುತ್ತಾನೆ. 5 ಈ ಸಂಗತಿಗಳೆಲ್ಲವೂ ಸಂಭವಿಸುತ್ತವೆಯೆಂದು ನಾನು ನಿಮಗೆ ಮೊದಲೇ ತಿಳಿಸಿದ್ದೇನೆ. ಜ್ಞಾಪಕವಿಲ್ಲವೇ? 6 ಈಗ ಅಧರ್ಮಸ್ವರೂಪನನ್ನು ತಡೆಹಿಡಿದಿರುವುದು ಯಾವುದೆಂಬುದು ನಿಮಗೆ ತಿಳಿದಿದೆ. ಅವನು ತಕ್ಕಕಾಲದಲ್ಲಿ ಬರಲೆಂದೇ ಅವನನ್ನು ಈಗ ತಡೆಹಿಡಿಯಲಾಗಿದೆ. 7 ರಹಸ್ಯವಾದ ದುಷ್ಟಶಕ್ತಿಯು ಈಗಾಗಲೇ ಪ್ರಪಂಚದಲ್ಲಿ ತನ್ನ ಕಾರ್ಯವನ್ನು ಸಾಧಿಸುತ್ತಾ ಇದೆ. ಆದರೆ ಆ ರಹಸ್ಯವಾದ ದುಷ್ಟಶಕ್ತಿಯನ್ನು ತಡೆಹಿಡಿಯುವ ಒಬ್ಬಾತನಿದ್ದಾನೆ. ಆತನು ತೆಗೆದುಬಿಡಲ್ಪಟ್ಟ ಕೂಡಲೇ 8 ಅಧರ್ಮಸ್ವರೂಪನು ಕಾಣಿಸಿಕೊಳ್ಳುತ್ತಾನೆ. ಪ್ರಭುವಾದ ಯೇಸು ಅವನನ್ನು ತನ್ನ ಬಾಯಿಯ ಉಸಿರಿನಿಂದಲೇ ಕೊಲ್ಲುವನು; ತನ್ನ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಪಡಿಸುವನು. 9 ಆ ಅಧರ್ಮಸ್ವರೂಪನು ಸೈತಾನನ ಮಹಾಶಕ್ತಿಯಿಂದ ಕೂಡಿದವನಾಗಿರುತ್ತಾನೆ. ಅವನು ಅನೇಕ ಮೋಸದ ಪವಾಡಗಳನ್ನು, ಸೂಚಕಕಾರ್ಯಗಳನ್ನು, ಅದ್ಭುತಕಾರ್ಯಗಳನ್ನು ಮಾಡುತ್ತಾನೆ. 10 ಸತ್ಯವನ್ನು ಪ್ರೀತಿಸದೆ ತಪ್ಪಿಹೋಗಿರುವ ಜನರನ್ನು ಮೋಸಗೊಳಿಸಲು, ಅವನು ಎಲ್ಲಾ ವಿಧವಾದ ತಂತ್ರಗಳನ್ನು ಮಾಡುವನು. (ಅವರು ಸತ್ಯವನ್ನು ಪ್ರೀತಿಸಿದ್ದರೆ, ರಕ್ಷಣೆ ಹೊಂದುತ್ತಿದ್ದರು.) 11 ಆದರೆ ಆ ಜನರು ಸತ್ಯವನ್ನು ಪ್ರೀತಿಸಲಿಲ್ಲ. ಆದಕಾರಣ, ಸತ್ಯವನ್ನು ತೊರೆದು, ಸತ್ಯವಲ್ಲದ್ದನ್ನು ನಂಬುವಂತೆ ಮಾಡುವ ಶಕ್ತಿಯೊಂದನ್ನು ದೇವರು ಅವರ ಬಳಿಗೆ ಕಳುಹಿಸುತ್ತಾನೆ. 12 ಸತ್ಯವನ್ನು ನಂಬದೆ, ಕೆಟ್ಟಕಾರ್ಯಗಳನ್ನು ಮಾಡುವುದರಲ್ಲಿ ಸಂತೋಷಪಡುವ ಜನರೆಲ್ಲರೂ ದಂಡನೆಗೆ ಒಳಗಾಗುವರು. ರಕ್ಷಣೆಗಾಗಿ ನೀವು ಆರಿಸಲ್ಪಟ್ಟಿರುವಿರಿ 13 ಸಹೋದರ ಸಹೋದರಿಯರೇ, ಪ್ರಭುವು ನಿಮ್ಮನ್ನು ಪ್ರೀತಿಸುತ್ತಾನೆ. ನಿಮ್ಮನ್ನು ರಕ್ಷಿಸಬೇಕೆಂದು ದೇವರು ನಿಮ್ಮನ್ನು ಆದಿಯಲ್ಲಿಯೇ ಆರಿಸಿಕೊಂಡನು. ಆದ್ದರಿಂದ ನಿಮ್ಮ ವಿಷಯದಲ್ಲಿ ದೇವರಿಗೆ ಯಾವಾಗಲೂ ಕೃತಜ್ಞತೆ ಸಲ್ಲಿಸಬೇಕು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವ ಪವಿತ್ರಾತ್ಮನಿಂದ ಮತ್ತು ಸತ್ಯದ ಮೇಲೆ ನಿಮಗಿರುವ ನಂಬಿಕೆಯಿಂದ ನೀವು ರಕ್ಷಣೆ ಹೊಂದಿದ್ದೀರಿ. 14 ನೀವು ರಕ್ಷಣೆಯನ್ನು ಹೊಂದಿಕೊಂಡು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮಹಿಮೆಯಲ್ಲಿ ಪಾಲುಗಾರರಾಗಬೇಕೆಂದು, ನಾವು ಸಾರಿದ ಸುವಾರ್ತೆಯ ಮೂಲಕ ದೇವರು ನಿಮ್ಮನ್ನು ಕರೆದನು. 15 ಸಹೋದರ ಸಹೋದರಿಯರೇ, ದೃಢವಾಗಿರಿ. ನಾವು ಮಾತಿನ ಮೂಲಕ ಮತ್ತು ಪತ್ರಗಳ ಮೂಲಕ ನಿಮಗೆ ತಿಳಿಸಿದ ಬೋಧನೆಗಳನ್ನು ನಂಬಿಕೊಂಡೇ ಇರಿ. 16 (16-17) ನೀವು ಹೇಳುವ ಒಳ್ಳೆಯ ಸಂಗತಿಗಳಲ್ಲಿ ಮತ್ತು ಮಾಡುವ ಒಳ್ಳೆಯ ಕಾರ್ಯಗಳಲ್ಲಿ ನಿಮಗೆ ಬಲವನ್ನೂ ಆದರಣೆಯನ್ನೂ ಪ್ರಭುವಾದ ಯೇಸು ಕ್ರಿಸ್ತನು ಮತ್ತು ತಂದೆಯಾದ ದೇವರು ನಿಮಗೆ ದಯಪಾಲಿಸಲಿ ಎಂದು ನಾವು ಪ್ರಾರ್ಥಿಸುತ್ತೇವೆ. ದೇವರು ನಮ್ಮನ್ನು ಪ್ರೀತಿಸಿದನು. ಆತನು ತನ್ನ ಕೃಪೆಯಿಂದಲೇ ನಮಗೆ ಒಳ್ಳೆಯ ನಿರೀಕ್ಷೆಯನ್ನೂ ಶಾಶ್ವತವಾದ ಆದರಣೆಯನ್ನೂ ದಯಪಾಲಿಸಿದನು. 17
ಒಟ್ಟು 3 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 2 / 3
1 2 3
×

Alert

×

Kannada Letters Keypad References