ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
2 ಥೆಸಲೊನೀಕದವರಿಗೆ
1. {ನಮಗೋಸ್ಕರ ಪ್ರಾರ್ಥಿಸಿ} [PS] ಸಹೋದರ ಸಹೋದರಿಯರೇ, ನಮಗೋಸ್ಕರ ಪ್ರಾರ್ಥಿಸಿರಿ. ಪ್ರಭುವಿನ ಉಪದೇಶವು ತ್ವರಿತಗತಿಯಲ್ಲಿ ಹಬ್ಬಲೆಂದು ಪ್ರಾರ್ಥಿಸಿ. ನಿಮ್ಮಂತೆಯೇ ಇತರ ಜನರು ಈ ಉಪದೇಶವನ್ನು ಗೌರವಿಸುವಂತೆ ಪ್ರಾರ್ಥಿಸಿ.
2. ಕೆಟ್ಟವರಾದ ಮತ್ತು ದುಷ್ಟರಾದ ಜನರ ಕೈಯಿಂದ ನಮ್ಮನ್ನು ರಕ್ಷಿಸುವಂತೆ ದೇವರಲ್ಲಿ ಪ್ರಾರ್ಥಿಸಿ. (ಪ್ರಭುವಿನಲ್ಲಿ ಜನರೆಲ್ಲರೂ ನಂಬಿಕೆಯಿಟ್ಟಿಲ್ಲ.) [PE][PS]
3. ಆದರೆ ಪ್ರಭುವು ನಂಬಿಗಸ್ತನು. ಆತನು ನಿಮ್ಮನ್ನು ಬಲಗೊಳಿಸುವನು ಮತ್ತು ಕೆಡುಕನಿಂದ (ಸೈತಾನನಿಂದ) ನಿಮ್ಮನ್ನು ರಕ್ಷಿಸುವನು.
4. ನಾವು ನಿಮಗೆ ತಿಳಿಸಿದ ಸಂಗತಿಗಳನ್ನು ನೀವು ಮಾಡುತ್ತಿದ್ದೀರೆಂಬ ಭರವಸೆಯನ್ನು ಪ್ರಭುವೇ ನಮಗೆ ಕೊಟ್ಟಿದ್ದಾನೆ. ನೀವು ಇನ್ನು ಮುಂದೆಯೂ ಇವುಗಳನ್ನು ಮಾಡುವಿರೆಂದು ನಮಗೆ ತಿಳಿದದೆ.
5. ದೇವರ ಪ್ರೀತಿಯ ಕಡೆಗೂ ಮತ್ತು ಕ್ರಿಸ್ತನ ತಾಳ್ಮೆಯ ಕಡೆಗೂ ನಿಮ್ಮ ಹೃದಯಗಳನ್ನು ಪ್ರಭುವೇ ಮುನ್ನಡೆಸಲಿ ಎಂದು ನಾವು ಪ್ರಾರ್ಥಿಸುತ್ತೇವೆ. [PS]
6. {ಪ್ರತಿಯೊಬ್ಬರು ದುಡಿಯಲಿ} [PS] ಸಹೋದರ ಸಹೋದರಿಯರೇ, ಕೆಲಸ ಮಾಡದ ವಿಶ್ವಾಸಿಯಿಂದ ನೀವು ದೂರವಿರಬೇಕೆಂದು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಅಧಿಕಾರದಿಂದ ನಿಮಗೆ ಆಜ್ಞಾಪಿಸುತ್ತಿದ್ದೇವೆ. ನಾವು ನೀಡಿದ ಉಪದೇಶವನ್ನು ಅವರು ಅನುಸರಿಸುವುದಿಲ್ಲ.
7. ನಾವು ಜೀವಿಸುವಂತೆಯೇ ನೀವೂ ಜೀವಿಸಬೇಕೆಂದು ನಿಮಗೆ ಗೊತ್ತಿದೆ. ನಾವು ನಿಮ್ಮ ಜೊತೆಯಲ್ಲಿದ್ದಾಗ ಸೋಮಾರಿಗಳಾಗಿರಲಿಲ್ಲ;
8. ಹಣ ಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ. ನಿಮ್ಮಲ್ಲಿ ಯಾರಿಗೂ ತೊಂದರೆಯಾಗಬಾರದೆಂದು ಹಗಲಿರುಳು ಎಡೆಬಿಡದೆ ಕೆಲಸ ಮಾಡಿದೆವು.
9. “ನಮಗೆ ಸಹಾಯ ಮಾಡಿ” ಎಂದು ನಿಮ್ಮನ್ನು ಕೇಳಲು ನಮಗೆ ಹಕ್ಕಿತ್ತು. ಆದರೆ ನಮ್ಮ ಪೋಷಣೆಗೆ ಬೇಕಾದದ್ದನ್ನು ನಾವೇ ದುಡಿದು ಸಂಪಾದಿಸಿದೆವು, ಏಕೆಂದರೆ ನಿಮಗೆ ನಾವು ಮಾದರಿಯಾಗಬೇಕೆಂದಿದ್ದೆವು.
10. ನಾವು ನಿಮ್ಮ ಸಂಗಡವಿದ್ದಾಗ, “ಕೆಲಸ ಮಾಡದವನು ಊಟವನ್ನೂ ಮಾಡಕೂಡದು” ಎಂಬ ನಿಯಮವನ್ನು ವಿಧಿಸಿದೆವು. [PE][PS]
11. ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಜೀವನದಲ್ಲಿ ಆಸಕ್ತರಾಗಿದ್ದಾರೆ ಎಂಬುದನ್ನು ಕೇಳಿದ್ದೇವೆ.
12. ತಮ್ಮ ಕೆಲಸವನ್ನು ತಾವು ನೋಡಿಕೊಳ್ಳುವಂತೆ ಅವರಿಗೆ ಆಜ್ಞಾಪಿಸುತ್ತಿದ್ದೇವೆ. ಅವರೇ ದುಡಿದು ತಮ್ಮ ಆಹಾರವನ್ನು ಸಂಪಾದಿಸಿಕೊಳ್ಳಬೇಕೆಂದು ಆಜ್ಞಾಪಿಸಿ ಪ್ರಭುವಾದ ಯೇಸು ಕ್ರಿಸ್ತನಲ್ಲಿ ಬೇಡಿಕೊಳ್ಳುತ್ತೇವೆ.
13. ಸಹೋದರ ಸಹೋದರಿಯರೇ, ಒಳ್ಳೆಯದನ್ನು ಮಾಡುವುದರಲ್ಲಿ ಎಂದಿಗೂ ಬೇಸರಗೊಳ್ಳಬೇಡಿ. [PE][PS]
14. ಈ ಪತ್ರದ ಮೂಲಕ ನಿಮಗೆ ತಿಳಿಸಿರುವ ಮಾತುಗಳಿಗೆ ಯಾವನಾದರೂ ವಿಧೇಯನಾಗದಿದ್ದರೆ, ಅವನು ಯಾರೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ. ಅವನ ಸಹವಾಸಮಾಡಬೇಡಿ. ಆಗ ಅವನಿಗೆ ನಾಚಿಕೆ ಆಗಬಹುದು.
15. ಆದರೆ ಅವನನ್ನು ವೈರಿಯೆಂದು ಎಣಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿ ಹೇಳಿರಿ. [PS]
16. {ಕೊನೆಯ ಮಾತುಗಳು} [PS] ಶಾಂತಿದಾಯಕನಾದ ಪ್ರಭುವು ಎಲ್ಲಾ ಕಾಲಗಳಲ್ಲಿಯೂ ಮತ್ತು ಎಲ್ಲಾ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭುವು ನಿಮ್ಮೆಲ್ಲರೊಂದಿಗಿರಲಿ. [PE][PS]
17. ಪೌಲನಾದ ನಾನು ಈಗ ನನ್ನ ಕೈಬರಹದಿಂದ ಈ ಪತ್ರವನ್ನು ಮುಕ್ತಾಯಗೊಳಿಸುತ್ತೇನೆ. ನನ್ನ ಪತ್ರಗಳಿಗೆಲ್ಲಾ ಇದೇ ನನ್ನ ಗುರುತು. ಇದೇ ನನ್ನ ಕೈ ಬರಹ. [PE][PS]
18. ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. [PE]
ಒಟ್ಟು 3 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 3
1 2 3
ನಮಗೋಸ್ಕರ ಪ್ರಾರ್ಥಿಸಿ 1 ಸಹೋದರ ಸಹೋದರಿಯರೇ, ನಮಗೋಸ್ಕರ ಪ್ರಾರ್ಥಿಸಿರಿ. ಪ್ರಭುವಿನ ಉಪದೇಶವು ತ್ವರಿತಗತಿಯಲ್ಲಿ ಹಬ್ಬಲೆಂದು ಪ್ರಾರ್ಥಿಸಿ. ನಿಮ್ಮಂತೆಯೇ ಇತರ ಜನರು ಈ ಉಪದೇಶವನ್ನು ಗೌರವಿಸುವಂತೆ ಪ್ರಾರ್ಥಿಸಿ. 2 ಕೆಟ್ಟವರಾದ ಮತ್ತು ದುಷ್ಟರಾದ ಜನರ ಕೈಯಿಂದ ನಮ್ಮನ್ನು ರಕ್ಷಿಸುವಂತೆ ದೇವರಲ್ಲಿ ಪ್ರಾರ್ಥಿಸಿ. (ಪ್ರಭುವಿನಲ್ಲಿ ಜನರೆಲ್ಲರೂ ನಂಬಿಕೆಯಿಟ್ಟಿಲ್ಲ.) 3 ಆದರೆ ಪ್ರಭುವು ನಂಬಿಗಸ್ತನು. ಆತನು ನಿಮ್ಮನ್ನು ಬಲಗೊಳಿಸುವನು ಮತ್ತು ಕೆಡುಕನಿಂದ (ಸೈತಾನನಿಂದ) ನಿಮ್ಮನ್ನು ರಕ್ಷಿಸುವನು. 4 ನಾವು ನಿಮಗೆ ತಿಳಿಸಿದ ಸಂಗತಿಗಳನ್ನು ನೀವು ಮಾಡುತ್ತಿದ್ದೀರೆಂಬ ಭರವಸೆಯನ್ನು ಪ್ರಭುವೇ ನಮಗೆ ಕೊಟ್ಟಿದ್ದಾನೆ. ನೀವು ಇನ್ನು ಮುಂದೆಯೂ ಇವುಗಳನ್ನು ಮಾಡುವಿರೆಂದು ನಮಗೆ ತಿಳಿದದೆ. 5 ದೇವರ ಪ್ರೀತಿಯ ಕಡೆಗೂ ಮತ್ತು ಕ್ರಿಸ್ತನ ತಾಳ್ಮೆಯ ಕಡೆಗೂ ನಿಮ್ಮ ಹೃದಯಗಳನ್ನು ಪ್ರಭುವೇ ಮುನ್ನಡೆಸಲಿ ಎಂದು ನಾವು ಪ್ರಾರ್ಥಿಸುತ್ತೇವೆ. ಪ್ರತಿಯೊಬ್ಬರು ದುಡಿಯಲಿ 6 ಸಹೋದರ ಸಹೋದರಿಯರೇ, ಕೆಲಸ ಮಾಡದ ವಿಶ್ವಾಸಿಯಿಂದ ನೀವು ದೂರವಿರಬೇಕೆಂದು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಅಧಿಕಾರದಿಂದ ನಿಮಗೆ ಆಜ್ಞಾಪಿಸುತ್ತಿದ್ದೇವೆ. ನಾವು ನೀಡಿದ ಉಪದೇಶವನ್ನು ಅವರು ಅನುಸರಿಸುವುದಿಲ್ಲ. 7 ನಾವು ಜೀವಿಸುವಂತೆಯೇ ನೀವೂ ಜೀವಿಸಬೇಕೆಂದು ನಿಮಗೆ ಗೊತ್ತಿದೆ. ನಾವು ನಿಮ್ಮ ಜೊತೆಯಲ್ಲಿದ್ದಾಗ ಸೋಮಾರಿಗಳಾಗಿರಲಿಲ್ಲ; 8 ಹಣ ಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ. ನಿಮ್ಮಲ್ಲಿ ಯಾರಿಗೂ ತೊಂದರೆಯಾಗಬಾರದೆಂದು ಹಗಲಿರುಳು ಎಡೆಬಿಡದೆ ಕೆಲಸ ಮಾಡಿದೆವು. 9 “ನಮಗೆ ಸಹಾಯ ಮಾಡಿ” ಎಂದು ನಿಮ್ಮನ್ನು ಕೇಳಲು ನಮಗೆ ಹಕ್ಕಿತ್ತು. ಆದರೆ ನಮ್ಮ ಪೋಷಣೆಗೆ ಬೇಕಾದದ್ದನ್ನು ನಾವೇ ದುಡಿದು ಸಂಪಾದಿಸಿದೆವು, ಏಕೆಂದರೆ ನಿಮಗೆ ನಾವು ಮಾದರಿಯಾಗಬೇಕೆಂದಿದ್ದೆವು. 10 ನಾವು ನಿಮ್ಮ ಸಂಗಡವಿದ್ದಾಗ, “ಕೆಲಸ ಮಾಡದವನು ಊಟವನ್ನೂ ಮಾಡಕೂಡದು” ಎಂಬ ನಿಯಮವನ್ನು ವಿಧಿಸಿದೆವು. 11 ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಜೀವನದಲ್ಲಿ ಆಸಕ್ತರಾಗಿದ್ದಾರೆ ಎಂಬುದನ್ನು ಕೇಳಿದ್ದೇವೆ. 12 ತಮ್ಮ ಕೆಲಸವನ್ನು ತಾವು ನೋಡಿಕೊಳ್ಳುವಂತೆ ಅವರಿಗೆ ಆಜ್ಞಾಪಿಸುತ್ತಿದ್ದೇವೆ. ಅವರೇ ದುಡಿದು ತಮ್ಮ ಆಹಾರವನ್ನು ಸಂಪಾದಿಸಿಕೊಳ್ಳಬೇಕೆಂದು ಆಜ್ಞಾಪಿಸಿ ಪ್ರಭುವಾದ ಯೇಸು ಕ್ರಿಸ್ತನಲ್ಲಿ ಬೇಡಿಕೊಳ್ಳುತ್ತೇವೆ. 13 ಸಹೋದರ ಸಹೋದರಿಯರೇ, ಒಳ್ಳೆಯದನ್ನು ಮಾಡುವುದರಲ್ಲಿ ಎಂದಿಗೂ ಬೇಸರಗೊಳ್ಳಬೇಡಿ. 14 ಈ ಪತ್ರದ ಮೂಲಕ ನಿಮಗೆ ತಿಳಿಸಿರುವ ಮಾತುಗಳಿಗೆ ಯಾವನಾದರೂ ವಿಧೇಯನಾಗದಿದ್ದರೆ, ಅವನು ಯಾರೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ. ಅವನ ಸಹವಾಸಮಾಡಬೇಡಿ. ಆಗ ಅವನಿಗೆ ನಾಚಿಕೆ ಆಗಬಹುದು. 15 ಆದರೆ ಅವನನ್ನು ವೈರಿಯೆಂದು ಎಣಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿ ಹೇಳಿರಿ. ಕೊನೆಯ ಮಾತುಗಳು 16 ಶಾಂತಿದಾಯಕನಾದ ಪ್ರಭುವು ಎಲ್ಲಾ ಕಾಲಗಳಲ್ಲಿಯೂ ಮತ್ತು ಎಲ್ಲಾ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭುವು ನಿಮ್ಮೆಲ್ಲರೊಂದಿಗಿರಲಿ. 17 ಪೌಲನಾದ ನಾನು ಈಗ ನನ್ನ ಕೈಬರಹದಿಂದ ಈ ಪತ್ರವನ್ನು ಮುಕ್ತಾಯಗೊಳಿಸುತ್ತೇನೆ. ನನ್ನ ಪತ್ರಗಳಿಗೆಲ್ಲಾ ಇದೇ ನನ್ನ ಗುರುತು. ಇದೇ ನನ್ನ ಕೈ ಬರಹ. 18 ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ.
ಒಟ್ಟು 3 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 3
1 2 3
×

Alert

×

Kannada Letters Keypad References