ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
2 ತಿಮೊಥೆಯನಿಗೆ
1. {ಕ್ರಿಸ್ತ ಯೇಸುವಿನ ನಿಷ್ಠಾವಂತ ಸೈನಿಕ} [PS] ಕ್ರಿಸ್ತ ಯೇಸುವಿನ ನಿಷ್ಠಾವಂತ ಸೈನಿಕನಾಗಿರುವ ತಿಮೊಥೆಯನೇ, ನೀನು ನನಗೆ ಮಗನಂತಿರುವೆ. ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲ ಹೊಂದಿದವನಾಗು.
2. ನಾನು ಉಪದೇಶಿಸಿದ ಸಂಗತಿಗಳನ್ನು ನೀನು ಕೇಳಿರುವೆ. ಅವುಗಳನ್ನು ಇತರ ಅನೇಕ ಜನರೂ ಕೇಳಿದ್ದಾರೆ. ನೀನು ಆ ಸಂಗತಿಗಳನ್ನು ಉಪದೇಶಿಸಬೇಕು. ನಿನಗೆ ನಂಬಿಗಸ್ತರಾದ ಕೆಲವರ ವಶಕ್ಕೆ ಆ ಉಪದೇಶಗಳನ್ನು ಕೊಡು. ಆಗ ಅವರು ಆ ಸಂಗತಿಗಳನ್ನು ಇತರರಿಗೆ ಉಪದೇಶಿಸಲು ಸಾಧ್ಯವಾಗುತ್ತದೆ.
3. ನಮಗಿರುವ ತೊಂದರೆಗಳಲ್ಲಿ ನೀನೂ ಪಾಲುಗಾರನಾಗು. ಕ್ರಿಸ್ತ ಯೇಸುವಿನ ನಿಜವಾದ ಸೈನಿಕನಂತೆ ಆ ತೊಂದರೆಗಳನ್ನು ಸ್ವೀಕರಿಸು.
4. ಸೈನಿಕನು ತನ್ನ ಸೈನ್ಯಾಧಿಕಾರಿಯನ್ನು ಮೆಚ್ಚಿಸಲು ಇಷ್ಟಪಡುತ್ತಾನೆ. ಆದ್ದರಿಂದ ಆ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದಂತೆ ಎಚ್ಚರಿಕೆಯಿಂದಿರುವನು.
5. ಓಟದ ಸ್ಪರ್ಧೆಯಲ್ಲಿ ಗೆಲ್ಲಬೇಕಾದರೆ, ಓಟಗಾರನು ಎಲ್ಲಾ ನಿಯಮಗಳನ್ನು ಪಾಲಿಸಬೇಕು.
6. ಕಷ್ಟಪಟ್ಟು ಕೆಲಸಮಾಡುವ ರೈತನಿಗೆ ಬೆಳೆಯ ಪ್ರಥಮ ಪಾಲು ದೊರೆಯಬೇಕು.
7. ನಾನು ಹೇಳುತ್ತಿರುವ ಈ ಸಂಗತಿಗಳನ್ನು ಕುರಿತು ಆಲೋಚಿಸು. ಈ ಸಂಗತಿಗಳನ್ನೆಲ್ಲ ಅರ್ಥಮಾಡಿಕೊಳ್ಳುವ ವಿವೇಕವನ್ನು ಪ್ರಭುವು ನಿನಗೆ ದಯಪಾಲಿಸುವನು. [PE][PS]
8. ಯೇಸು ಕ್ರಿಸ್ತನನ್ನು ನೆನಪು ಮಾಡಿಕೊ. ಆತನು ದಾವೀದನ ವಂಶದವನು. ಯೇಸು ಸತ್ತನಂತರ ಜೀವಂತವಾಗಿ ಮೇಲೆದ್ದು ಬಂದನು. ಈ ಸುವಾರ್ತೆಯನ್ನೇ ನಾನು ಜನರಿಗೆ ತಿಳಿಸುತ್ತೇನೆ.
9. ಈ ಕಾರಣದಿಂದಲೇ ಸಂಕಟವನ್ನು ಅನುಭವಿಸುತ್ತಿದ್ದೇನೆ. ದುಷ್ಕರ್ಮಿಯಂತೆ ಸಂಕೋಲೆಗಳಿಂದ ಬಂಧಿಸಲ್ಪಟ್ಟಿದ್ದೇನೆ. ಆದರೆ ದೇವರ ಉಪದೇಶಕ್ಕೆ ಬಂಧನವಿಲ್ಲ.
10. ಆದ್ದರಿಂದ ನಾನು ತಾಳ್ಮೆಯಿಂದಲೇ ಈ ತೊಂದರೆಗಳನ್ನು ಅಂಗೀಕರಿಸಿದ್ದೇನೆ. ಏಕೆಂದರೆ ದೇವರು ಆರಿಸಿರುವ ಜನರೆಲ್ಲರಿಗೂ ಸಹಾಯ ಮಾಡಬೇಕೆಂಬುದು ನನ್ನ ಅಪೇಕ್ಷೆಯಾಗಿದೆ. ಆ ಜನರು ಕ್ರಿಸ್ತ ಯೇಸುವಿನಲ್ಲಿ ರಕ್ಷಣೆ ಪಡೆಯಲೆಂದು ನಾನು ಈ ತೊಂದರೆಗಳನ್ನೆಲ್ಲ ಸ್ವೀಕರಿಸಿಕೊಂಡಿದ್ದೇನೆ. ಈ ರಕ್ಷಣೆಯೊಂದಿಗೆ ನಿತ್ಯಪ್ರಭಾವವು ದೊರೆಯುತ್ತದೆ. [PE][PS]
11. ಈ ಉಪದೇಶವು ಸತ್ಯವಾದದ್ದು: ನಾವು ಆತನೊಂದಿಗೆ (ಯೇಸು) ಸತ್ತಿದ್ದರೆ, ಆತನೊಡನೆ ಜೀವಿಸುವೆವು. [QBR]
12. ನಾವು ಸಂಕಟವನ್ನು ಸ್ವೀಕರಿಸಿಕೊಂಡರೆ, ಆತನೊಡನೆ ಆಳುವೆವು. [QBR] ನಾವು ಆತನನ್ನು ಸ್ವೀಕರಿಸಿಕೊಳ್ಳದಿದ್ದರೆ, ಆತನೂ ನಮ್ಮನ್ನು ಸ್ವೀಕರಿಸಿಕೊಳ್ಳುವುದಿಲ್ಲ. [QBR]
13. ನಾವು ನಂಬಿಗಸ್ತರಾಗಿಲ್ಲದಿದ್ದರೂ, ಆತನು ಇನ್ನೂ ನಂಬಿಗಸ್ತನಾಗಿರುವನು; [QBR2] ಏಕೆಂದರೆ ಆತನು ತನ್ನ ಸ್ವಭಾವಕ್ಕೆ ವಿರುದ್ಧನಾಗಲಾರನು. [PS]
14. {ಯೋಗ್ಯನಾದ ಕೆಲಸಗಾರನು} [PS] ಜನರಿಗೆ ಈ ಸಂಗತಿಗಳನ್ನು ತಿಳಿಸುತ್ತಲೇ ಇರು. ಪದಗಳ ಬಗ್ಗೆ ವಾಗ್ವಾದ ಮಾಡಬಾರದೆಂದು ಅವರಿಗೆ ದೇವರ ಸನ್ನಿಧಿಯಲ್ಲಿ ಎಚ್ಚರಿಕೆ ನೀಡು. ವಾಗ್ವಾದಗಳಿಂದ ಯಾರಿಗೂ ಪ್ರಯೋಜನವಿಲ್ಲ. ವಾಗ್ವಾದವನ್ನು ಕೇಳುವ ಜನರು ಅದರಿಂದ ನಾಶವಾಗುತ್ತಾರೆ.
15. ದೇವರ ದೃಷ್ಟಿಯಲ್ಲಿ ಯೋಗ್ಯ ವ್ಯಕ್ತಿಯಾಗಲು ನಿನ್ನಿಂದಾದಷ್ಟು ಪ್ರಯಾಸಪಡು ಮತ್ತು ನಿನ್ನನ್ನೇ ಒಪ್ಪಿಸಿಕೊಡು. ತನ್ನ ಕೆಲಸದಲ್ಲಿ ನಾಚಿಕೆಪಡದಿರುವ ಕೆಲಸಗಾರನಾಗು, ಅಂದರೆ ಸತ್ಯೋಪದೇಶವನ್ನು ಯೋಗ್ಯವಾದ ರೀತಿಯಲ್ಲಿ ತಿಳಿಸುವವನಾಗು. [PE][PS]
16. ದೇವರಿಂದ ಬಂದಿಲ್ಲದ ನಿರರ್ಥಕ ಸಂಗತಿಗಳನ್ನು ಮಾತನಾಡುವ ಜನರಿಂದ ದೂರವಾಗಿರು. ಆ ರೀತಿಯ ಮಾತುಗಳು ಜನರನ್ನು ದೇವರಿಂದ ಮತ್ತಷ್ಟು ದೂರ ಮಾಡುತ್ತವೆ.
17. ಅವರ ಕೆಟ್ಟ ಉಪದೇಶಗಳು ದೇಹದಲ್ಲಿ ಹರಡಿಕೊಳ್ಳುವ ಕಾಯಿಲೆಯಂತೆ ವ್ಯಾಪಿಸಿಕೊಳ್ಳುತ್ತವೆ. ಹುಮೆನಾಯನು ಮತ್ತು ಪಿಲೇತನು ಅಂತಹ ಜನರಾಗಿದ್ದಾರೆ.
18. ಅವರು ಸತ್ಯೋಪದೇಶವನ್ನು ತಿರಸ್ಕರಿಸಿದರು. ಎಲ್ಲಾ ಜನರಿಗೆ ಉಂಟಾಗುವ ಪುನರುತ್ಥಾನವು ಈಗಾಗಲೇ ಆಗಿ ಹೋಗಿದೆಯೆಂದು ಅವರು ಹೇಳುತ್ತಾರೆ. ಅವರಿಬ್ಬರು ಕೆಲವು ಜನರ ನಂಬಿಕೆಯನ್ನು ಹಾಳುಮಾಡುತ್ತಿದ್ದಾರೆ. [PE][PS]
19. ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” [✡ಉಲ್ಲೇಖನ: ಯಾಜಕ. 16:5.] ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಆ ಬುನಾದಿಯ ಮೇಲೆ ಕೆತ್ತಲಾಗಿದೆ. [PE][PS]
20. ದೊಡ್ಡ ಮನೆಯಲ್ಲಿ ಚಿನ್ನಬೆಳ್ಳಿಗಳಿಂದ ಮಾಡಿದ ವಸ್ತುಗಳಿರುತ್ತವೆ. ಅಲ್ಲದೆ ಮರದಿಂದ, ಮಣ್ಣಿನಿಂದ ಮಾಡಿದ ವಸ್ತುಗಳೂ ಇರುತ್ತವೆ. ಕೆಲವನ್ನು ವಿಶೇಷ ಕಾರ್ಯಕ್ಕಾಗಿ ಬಳಸುತ್ತಾರೆ. ಇತರ ವಸ್ತುಗಳನ್ನು ಹೀನವಾದ ಕೃತ್ಯಗಳಿಗೆ ಬಳಸುತ್ತಾರೆ.
21. ಹೀಗಿರಲಾಗಿ ಒಬ್ಬನು ತನ್ನ ದುಷ್ಕೃತ್ಯಗಳನ್ನು ತೊರೆದು ತನ್ನನ್ನು ಶುದ್ಧೀಕರಿಸಿಕೊಂಡರೆ ಅವನನ್ನು ಬಳಸಲಾಗುವುದು. ಅವನು ದೇವರ ಸೇವೆಗೆ ಮೀಸಲಾಗುತ್ತಾನೆ; ಯಜಮಾನನಿಗೆ ಉಪಯುಕ್ತನಾಗುತ್ತಾನೆ; ಸತ್ಕಾರ್ಯಗಳನ್ನು ಕೈಕೊಳ್ಳಲು ಸಿದ್ಧನಾಗಿರುತ್ತಾನೆ. [PE][PS]
22. ಯುವಕರು ಇಷ್ಟಪಡುವ ಕೆಟ್ಟಕಾರ್ಯಗಳಿಂದ ನೀನು ದೂರವಾಗಿರು. ಪ್ರೀತಿ, ನಂಬಿಕೆ ಮತ್ತು ಶಾಂತಿಯನ್ನು ಹೊಂದಿದವನಾಗಿದ್ದು ಯೋಗ್ಯವಾದ ರೀತಿಯಲ್ಲಿ ಜೀವಿಸಲು ಬಹಳವಾಗಿ ಪ್ರಯತ್ನಪಡು. ಪ್ರಭುವಿನಲ್ಲಿ ಭರವಸವಿಟ್ಟಿರುವ ಮತ್ತು ಪರಿಶುದ್ಧ ಹೃದಯ ಹೊಂದಿರುವ ಜನರೊಂದಿಗೆ ಒಟ್ಟುಗೂಡಿ ಈ ಕಾರ್ಯಗಳನ್ನು ಮಾಡು.
23. ಮೂಢತನದ ಮತ್ತು ಕ್ಷುಲ್ಲಕವಾದ ವಾದವಿವಾದಗಳಿಂದ ದೂರವಾಗಿರು. ಆ ವಾಗ್ವಾದಗಳು ಬೆಳೆದು ದೊಡ್ಡದಾಗುತ್ತವೆ ಎಂಬುದು ನಿನಗೆ ತಿಳಿದಿದೆ.
24. ಪ್ರಭುವಿನ ಸೇವಕನು ವಾಗ್ವಾದ ಮಾಡಲೇಬಾರದು. ಅವನು ಪ್ರತಿಯೊಬ್ಬರಿಗೂ ದಯೆತೋರಬೇಕು; ಒಳ್ಳೆಯ ಉಪದೇಶಕನಾಗಿರಬೇಕು; ತಾಳ್ಮೆಯಿಂದಿರಬೇಕು.
25. ಅವನು ತನ್ನೊಂದಿಗೆ ಸಮ್ಮತಿಸದಿರುವ ಜನರಿಗೆ ಸಾತ್ವಿಕ ರೀತಿಯಲ್ಲಿ ಉಪದೇಶ ಮಾಡಬೇಕು. ಅವರು ಸತ್ಯವನ್ನು ಅಂಗೀಕರಿಸಿಕೊಳ್ಳುವಂತೆ ದೇವರು ಅವರ ಹೃದಯಗಳನ್ನು ಪರಿವರ್ತಿಸಬಲ್ಲನು.
26. ಸೈತಾನನು ಆ ಜನರನ್ನು ತನ್ನ ಬಲೆಗೆ ಬೀಳಿಸಿ, ತನ್ನ ಅಪೇಕ್ಷೆಗೆ ತಕ್ಕಂತೆ ಅವರಿಂದ ಕಾರ್ಯಗಳನ್ನು ಮಾಡಿಸುತ್ತಿದ್ದಾನೆ. ಆದರೆ ಅವರು ಎಚ್ಚರಗೊಂಡು, ಸೈತಾನನು ತಮ್ಮನ್ನು ವಶಪಡಿಸಿ ಕೊಂಡಿರುವುದನ್ನು ಗುರುತಿಸಬಹುದು ಹಾಗೂ ಸೈತಾನನ ಬಲೆಯಿಂದ ತಪ್ಪಿಸಿಕೊಂಡು ಬಿಡುಗಡೆ ಹೊಂದಬಹುದು. [PE]
ಒಟ್ಟು 4 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 2 / 4
1 2 3 4
ಕ್ರಿಸ್ತ ಯೇಸುವಿನ ನಿಷ್ಠಾವಂತ ಸೈನಿಕ 1 ಕ್ರಿಸ್ತ ಯೇಸುವಿನ ನಿಷ್ಠಾವಂತ ಸೈನಿಕನಾಗಿರುವ ತಿಮೊಥೆಯನೇ, ನೀನು ನನಗೆ ಮಗನಂತಿರುವೆ. ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲ ಹೊಂದಿದವನಾಗು. 2 ನಾನು ಉಪದೇಶಿಸಿದ ಸಂಗತಿಗಳನ್ನು ನೀನು ಕೇಳಿರುವೆ. ಅವುಗಳನ್ನು ಇತರ ಅನೇಕ ಜನರೂ ಕೇಳಿದ್ದಾರೆ. ನೀನು ಆ ಸಂಗತಿಗಳನ್ನು ಉಪದೇಶಿಸಬೇಕು. ನಿನಗೆ ನಂಬಿಗಸ್ತರಾದ ಕೆಲವರ ವಶಕ್ಕೆ ಆ ಉಪದೇಶಗಳನ್ನು ಕೊಡು. ಆಗ ಅವರು ಆ ಸಂಗತಿಗಳನ್ನು ಇತರರಿಗೆ ಉಪದೇಶಿಸಲು ಸಾಧ್ಯವಾಗುತ್ತದೆ. 3 ನಮಗಿರುವ ತೊಂದರೆಗಳಲ್ಲಿ ನೀನೂ ಪಾಲುಗಾರನಾಗು. ಕ್ರಿಸ್ತ ಯೇಸುವಿನ ನಿಜವಾದ ಸೈನಿಕನಂತೆ ಆ ತೊಂದರೆಗಳನ್ನು ಸ್ವೀಕರಿಸು. 4 ಸೈನಿಕನು ತನ್ನ ಸೈನ್ಯಾಧಿಕಾರಿಯನ್ನು ಮೆಚ್ಚಿಸಲು ಇಷ್ಟಪಡುತ್ತಾನೆ. ಆದ್ದರಿಂದ ಆ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದಂತೆ ಎಚ್ಚರಿಕೆಯಿಂದಿರುವನು. 5 ಓಟದ ಸ್ಪರ್ಧೆಯಲ್ಲಿ ಗೆಲ್ಲಬೇಕಾದರೆ, ಓಟಗಾರನು ಎಲ್ಲಾ ನಿಯಮಗಳನ್ನು ಪಾಲಿಸಬೇಕು. 6 ಕಷ್ಟಪಟ್ಟು ಕೆಲಸಮಾಡುವ ರೈತನಿಗೆ ಬೆಳೆಯ ಪ್ರಥಮ ಪಾಲು ದೊರೆಯಬೇಕು. 7 ನಾನು ಹೇಳುತ್ತಿರುವ ಈ ಸಂಗತಿಗಳನ್ನು ಕುರಿತು ಆಲೋಚಿಸು. ಈ ಸಂಗತಿಗಳನ್ನೆಲ್ಲ ಅರ್ಥಮಾಡಿಕೊಳ್ಳುವ ವಿವೇಕವನ್ನು ಪ್ರಭುವು ನಿನಗೆ ದಯಪಾಲಿಸುವನು. 8 ಯೇಸು ಕ್ರಿಸ್ತನನ್ನು ನೆನಪು ಮಾಡಿಕೊ. ಆತನು ದಾವೀದನ ವಂಶದವನು. ಯೇಸು ಸತ್ತನಂತರ ಜೀವಂತವಾಗಿ ಮೇಲೆದ್ದು ಬಂದನು. ಈ ಸುವಾರ್ತೆಯನ್ನೇ ನಾನು ಜನರಿಗೆ ತಿಳಿಸುತ್ತೇನೆ. 9 ಈ ಕಾರಣದಿಂದಲೇ ಸಂಕಟವನ್ನು ಅನುಭವಿಸುತ್ತಿದ್ದೇನೆ. ದುಷ್ಕರ್ಮಿಯಂತೆ ಸಂಕೋಲೆಗಳಿಂದ ಬಂಧಿಸಲ್ಪಟ್ಟಿದ್ದೇನೆ. ಆದರೆ ದೇವರ ಉಪದೇಶಕ್ಕೆ ಬಂಧನವಿಲ್ಲ. 10 ಆದ್ದರಿಂದ ನಾನು ತಾಳ್ಮೆಯಿಂದಲೇ ಈ ತೊಂದರೆಗಳನ್ನು ಅಂಗೀಕರಿಸಿದ್ದೇನೆ. ಏಕೆಂದರೆ ದೇವರು ಆರಿಸಿರುವ ಜನರೆಲ್ಲರಿಗೂ ಸಹಾಯ ಮಾಡಬೇಕೆಂಬುದು ನನ್ನ ಅಪೇಕ್ಷೆಯಾಗಿದೆ. ಆ ಜನರು ಕ್ರಿಸ್ತ ಯೇಸುವಿನಲ್ಲಿ ರಕ್ಷಣೆ ಪಡೆಯಲೆಂದು ನಾನು ಈ ತೊಂದರೆಗಳನ್ನೆಲ್ಲ ಸ್ವೀಕರಿಸಿಕೊಂಡಿದ್ದೇನೆ. ಈ ರಕ್ಷಣೆಯೊಂದಿಗೆ ನಿತ್ಯಪ್ರಭಾವವು ದೊರೆಯುತ್ತದೆ. 11 ಈ ಉಪದೇಶವು ಸತ್ಯವಾದದ್ದು: ನಾವು ಆತನೊಂದಿಗೆ (ಯೇಸು) ಸತ್ತಿದ್ದರೆ, ಆತನೊಡನೆ ಜೀವಿಸುವೆವು.
12 ನಾವು ಸಂಕಟವನ್ನು ಸ್ವೀಕರಿಸಿಕೊಂಡರೆ, ಆತನೊಡನೆ ಆಳುವೆವು.
ನಾವು ಆತನನ್ನು ಸ್ವೀಕರಿಸಿಕೊಳ್ಳದಿದ್ದರೆ, ಆತನೂ ನಮ್ಮನ್ನು ಸ್ವೀಕರಿಸಿಕೊಳ್ಳುವುದಿಲ್ಲ.
13 ನಾವು ನಂಬಿಗಸ್ತರಾಗಿಲ್ಲದಿದ್ದರೂ, ಆತನು ಇನ್ನೂ ನಂಬಿಗಸ್ತನಾಗಿರುವನು; ಏಕೆಂದರೆ ಆತನು ತನ್ನ ಸ್ವಭಾವಕ್ಕೆ ವಿರುದ್ಧನಾಗಲಾರನು. ಯೋಗ್ಯನಾದ ಕೆಲಸಗಾರನು 14 ಜನರಿಗೆ ಈ ಸಂಗತಿಗಳನ್ನು ತಿಳಿಸುತ್ತಲೇ ಇರು. ಪದಗಳ ಬಗ್ಗೆ ವಾಗ್ವಾದ ಮಾಡಬಾರದೆಂದು ಅವರಿಗೆ ದೇವರ ಸನ್ನಿಧಿಯಲ್ಲಿ ಎಚ್ಚರಿಕೆ ನೀಡು. ವಾಗ್ವಾದಗಳಿಂದ ಯಾರಿಗೂ ಪ್ರಯೋಜನವಿಲ್ಲ. ವಾಗ್ವಾದವನ್ನು ಕೇಳುವ ಜನರು ಅದರಿಂದ ನಾಶವಾಗುತ್ತಾರೆ. 15 ದೇವರ ದೃಷ್ಟಿಯಲ್ಲಿ ಯೋಗ್ಯ ವ್ಯಕ್ತಿಯಾಗಲು ನಿನ್ನಿಂದಾದಷ್ಟು ಪ್ರಯಾಸಪಡು ಮತ್ತು ನಿನ್ನನ್ನೇ ಒಪ್ಪಿಸಿಕೊಡು. ತನ್ನ ಕೆಲಸದಲ್ಲಿ ನಾಚಿಕೆಪಡದಿರುವ ಕೆಲಸಗಾರನಾಗು, ಅಂದರೆ ಸತ್ಯೋಪದೇಶವನ್ನು ಯೋಗ್ಯವಾದ ರೀತಿಯಲ್ಲಿ ತಿಳಿಸುವವನಾಗು. 16 ದೇವರಿಂದ ಬಂದಿಲ್ಲದ ನಿರರ್ಥಕ ಸಂಗತಿಗಳನ್ನು ಮಾತನಾಡುವ ಜನರಿಂದ ದೂರವಾಗಿರು. ಆ ರೀತಿಯ ಮಾತುಗಳು ಜನರನ್ನು ದೇವರಿಂದ ಮತ್ತಷ್ಟು ದೂರ ಮಾಡುತ್ತವೆ. 17 ಅವರ ಕೆಟ್ಟ ಉಪದೇಶಗಳು ದೇಹದಲ್ಲಿ ಹರಡಿಕೊಳ್ಳುವ ಕಾಯಿಲೆಯಂತೆ ವ್ಯಾಪಿಸಿಕೊಳ್ಳುತ್ತವೆ. ಹುಮೆನಾಯನು ಮತ್ತು ಪಿಲೇತನು ಅಂತಹ ಜನರಾಗಿದ್ದಾರೆ. 18 ಅವರು ಸತ್ಯೋಪದೇಶವನ್ನು ತಿರಸ್ಕರಿಸಿದರು. ಎಲ್ಲಾ ಜನರಿಗೆ ಉಂಟಾಗುವ ಪುನರುತ್ಥಾನವು ಈಗಾಗಲೇ ಆಗಿ ಹೋಗಿದೆಯೆಂದು ಅವರು ಹೇಳುತ್ತಾರೆ. ಅವರಿಬ್ಬರು ಕೆಲವು ಜನರ ನಂಬಿಕೆಯನ್ನು ಹಾಳುಮಾಡುತ್ತಿದ್ದಾರೆ. 19 ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” ಉಲ್ಲೇಖನ: ಯಾಜಕ. 16:5. ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಆ ಬುನಾದಿಯ ಮೇಲೆ ಕೆತ್ತಲಾಗಿದೆ. 20 ದೊಡ್ಡ ಮನೆಯಲ್ಲಿ ಚಿನ್ನಬೆಳ್ಳಿಗಳಿಂದ ಮಾಡಿದ ವಸ್ತುಗಳಿರುತ್ತವೆ. ಅಲ್ಲದೆ ಮರದಿಂದ, ಮಣ್ಣಿನಿಂದ ಮಾಡಿದ ವಸ್ತುಗಳೂ ಇರುತ್ತವೆ. ಕೆಲವನ್ನು ವಿಶೇಷ ಕಾರ್ಯಕ್ಕಾಗಿ ಬಳಸುತ್ತಾರೆ. ಇತರ ವಸ್ತುಗಳನ್ನು ಹೀನವಾದ ಕೃತ್ಯಗಳಿಗೆ ಬಳಸುತ್ತಾರೆ. 21 ಹೀಗಿರಲಾಗಿ ಒಬ್ಬನು ತನ್ನ ದುಷ್ಕೃತ್ಯಗಳನ್ನು ತೊರೆದು ತನ್ನನ್ನು ಶುದ್ಧೀಕರಿಸಿಕೊಂಡರೆ ಅವನನ್ನು ಬಳಸಲಾಗುವುದು. ಅವನು ದೇವರ ಸೇವೆಗೆ ಮೀಸಲಾಗುತ್ತಾನೆ; ಯಜಮಾನನಿಗೆ ಉಪಯುಕ್ತನಾಗುತ್ತಾನೆ; ಸತ್ಕಾರ್ಯಗಳನ್ನು ಕೈಕೊಳ್ಳಲು ಸಿದ್ಧನಾಗಿರುತ್ತಾನೆ. 22 ಯುವಕರು ಇಷ್ಟಪಡುವ ಕೆಟ್ಟಕಾರ್ಯಗಳಿಂದ ನೀನು ದೂರವಾಗಿರು. ಪ್ರೀತಿ, ನಂಬಿಕೆ ಮತ್ತು ಶಾಂತಿಯನ್ನು ಹೊಂದಿದವನಾಗಿದ್ದು ಯೋಗ್ಯವಾದ ರೀತಿಯಲ್ಲಿ ಜೀವಿಸಲು ಬಹಳವಾಗಿ ಪ್ರಯತ್ನಪಡು. ಪ್ರಭುವಿನಲ್ಲಿ ಭರವಸವಿಟ್ಟಿರುವ ಮತ್ತು ಪರಿಶುದ್ಧ ಹೃದಯ ಹೊಂದಿರುವ ಜನರೊಂದಿಗೆ ಒಟ್ಟುಗೂಡಿ ಈ ಕಾರ್ಯಗಳನ್ನು ಮಾಡು. 23 ಮೂಢತನದ ಮತ್ತು ಕ್ಷುಲ್ಲಕವಾದ ವಾದವಿವಾದಗಳಿಂದ ದೂರವಾಗಿರು. ಆ ವಾಗ್ವಾದಗಳು ಬೆಳೆದು ದೊಡ್ಡದಾಗುತ್ತವೆ ಎಂಬುದು ನಿನಗೆ ತಿಳಿದಿದೆ. 24 ಪ್ರಭುವಿನ ಸೇವಕನು ವಾಗ್ವಾದ ಮಾಡಲೇಬಾರದು. ಅವನು ಪ್ರತಿಯೊಬ್ಬರಿಗೂ ದಯೆತೋರಬೇಕು; ಒಳ್ಳೆಯ ಉಪದೇಶಕನಾಗಿರಬೇಕು; ತಾಳ್ಮೆಯಿಂದಿರಬೇಕು. 25 ಅವನು ತನ್ನೊಂದಿಗೆ ಸಮ್ಮತಿಸದಿರುವ ಜನರಿಗೆ ಸಾತ್ವಿಕ ರೀತಿಯಲ್ಲಿ ಉಪದೇಶ ಮಾಡಬೇಕು. ಅವರು ಸತ್ಯವನ್ನು ಅಂಗೀಕರಿಸಿಕೊಳ್ಳುವಂತೆ ದೇವರು ಅವರ ಹೃದಯಗಳನ್ನು ಪರಿವರ್ತಿಸಬಲ್ಲನು. 26 ಸೈತಾನನು ಆ ಜನರನ್ನು ತನ್ನ ಬಲೆಗೆ ಬೀಳಿಸಿ, ತನ್ನ ಅಪೇಕ್ಷೆಗೆ ತಕ್ಕಂತೆ ಅವರಿಂದ ಕಾರ್ಯಗಳನ್ನು ಮಾಡಿಸುತ್ತಿದ್ದಾನೆ. ಆದರೆ ಅವರು ಎಚ್ಚರಗೊಂಡು, ಸೈತಾನನು ತಮ್ಮನ್ನು ವಶಪಡಿಸಿ ಕೊಂಡಿರುವುದನ್ನು ಗುರುತಿಸಬಹುದು ಹಾಗೂ ಸೈತಾನನ ಬಲೆಯಿಂದ ತಪ್ಪಿಸಿಕೊಂಡು ಬಿಡುಗಡೆ ಹೊಂದಬಹುದು.
ಒಟ್ಟು 4 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 2 / 4
1 2 3 4
×

Alert

×

Kannada Letters Keypad References