1. {ಪೇತ್ರ ಮತ್ತು ಕೊರ್ನೇಲಿಯ} PS ಸೆಜರೇಯ ಪಟ್ಟಣದಲ್ಲಿ ಕೊರ್ನೇಲಿಯ ಎಂಬವನಿದ್ದನು. ರೋಮಿನ ಸೈನ್ಯಕ್ಕೆ ಸೇರಿದ “ಇಟಲಿಯ ದಳ”ದಲ್ಲಿ ಅವನು ಅಧಿಕಾರಿಯಾಗಿದ್ದನು.
|
2. ಕೊರ್ನೇಲಿಯನು ದೈವಭಕ್ತನಾಗಿದ್ದನು. ಅವನು ಮತ್ತು ಅವನ ಕುಟುಂಬದಲ್ಲಿ ವಾಸವಾಗಿದ್ದ ಇತರ ಎಲ್ಲಾ ಜನರು ನಿಜದೇವರನ್ನು ಆರಾಧಿಸುತ್ತಿದ್ದರು. ಅವನು ಬಡವರಿಗೆ ಧಾರಾಳವಾಗಿ ಹಣವನ್ನು ಕೊಡುತ್ತಿದ್ದನು. ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಿದ್ದನು.
|
3. ಒಂದು ಮಧ್ಯಾಹ್ನ ಸುಮಾರು ಮೂರು ಗಂಟೆಯಲ್ಲಿ ಕೊರ್ನೇಲಿಯನಿಗೆ ಒಂದು ದರ್ಶನವಾಯಿತು. ಅವನು ಅದನ್ನು ಸ್ಪಷ್ಟವಾಗಿ ಕಂಡನು. ಆ ದರ್ಶನದಲ್ಲಿ ದೇವದೂತನೊಬ್ಬನು ಅವನ ಬಳಿಗೆ ಬಂದು, “ಕೊರ್ನೇಲಿಯನೇ” ಎಂದು ಕರೆದನು. PEPS
|
4. ಕೊರ್ನೇಲಿಯನು ದೇವದೂತನನ್ನು ಕಂಡು ಭಯದಿಂದ “ಸ್ವಾಮೀ, ನಿಮಗೇನು ಬೇಕು?” ಎಂದು ಕೇಳಿದನು. PEPS ಆ ದೇವದೂತನು ಅವನಿಗೆ, “ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿದ್ದಾನೆ. ನೀನು ಬಡವರಿಗೆ ಕೊಟ್ಟವುಗಳನ್ನು ಆತನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.
|
5. ಈಗ ಸೀಮೋನ ಎಂಬ ವ್ಯಕ್ತಿಯನ್ನು ಕರೆದುಕೊಂಡು ಬರುವುದಕ್ಕಾಗಿ ನೀನು ಜನರನ್ನು ಜೊಪ್ಪ ಪಟ್ಟಣಕ್ಕೆ ಕಳುಹಿಸು. ಸೀಮೋನನನ್ನು ‘ಪೇತ್ರ’ ಎಂತಲೂ ಕರೆಯುತ್ತಾರೆ.
|
7. ಕೊರ್ನೇಲಿಯನೊಂದಿಗೆ ಮಾತಾಡಿದ ದೇವದೂತನು ಹೊರಟುಹೋದನು. ಬಳಿಕ ಕೊರ್ನೇಲಿಯನು ತನ್ನ ಸೇವಕರಲ್ಲಿ ಇಬ್ಬರನ್ನೂ ಒಬ್ಬ ಸೈನಿಕನನ್ನೂ ಕರೆದನು. ಈ ಸೈನಿಕನು ದೈವಭಕ್ತನಾಗಿದ್ದನು. ಕೊರ್ನೇಲಿಯನ ಆಪ್ತಸಹಾಯಕರಲ್ಲಿ ಇವನೂ ಒಬ್ಬನಾಗಿದ್ದನು.
|
9. ಮರುದಿನ ಈ ಜನರು ಜೊಪ್ಪಕ್ಕೆ ಸಮೀಪಿಸಿದಾಗ ಮಧ್ಯಾಹ್ನದ ಸಮಯವಾಗಿತ್ತು. ಆ ಸಮಯದಲ್ಲಿ ಪೇತ್ರನು ಪ್ರಾರ್ಥಿಸುವುದಕ್ಕಾಗಿ ಮಾಳಿಗೆಯ ಮೇಲೆ ಹೋದನು.
|
10. ಪೇತ್ರನಿಗೆ ಹಸಿವೆಯಾಗಿ ಊಟಮಾಡಬೇಕೆನಿಸಿತು. ಅಲ್ಲಿ ಅವನಿಗಾಗಿ ಅಡಿಗೆ ಮಾಡುತ್ತಿದ್ದರು. ಇತ್ತ, ಪೇತ್ರನಿಗೊಂದು ದರ್ಶನವಾಯಿತು.
|
11. ತೆರೆದ ಆಕಾಶದಿಂದ ಯಾವುದೋ ಒಂದು ವಸ್ತು ಇಳಿದು ಬರುತ್ತಿರುವುದನ್ನು ಅವನು ಕಂಡನು. ಅದು ದೊಡ್ಡ ತಟ್ಟೆಯಂತಿತ್ತು. ಅದರ ನಾಲ್ಕು ಮೂಲೆಗಳಲ್ಲಿ ಹಗ್ಗಗಳನ್ನು ಕಟ್ಟಿ ಭೂಮಿಯ ಮೇಲೆ ಇಳಿಯಬಿಡಲಾಗಿತ್ತು.
|
12. ಅದರಲ್ಲಿ ಎಲ್ಲಾ ಬಗೆಯ ಪ್ರಾಣಿಗಳಿದ್ದವು. ಅಂದರೆ ನಡೆದಾಡುವ ಪ್ರಾಣಿಗಳು, ಹರಿದಾಡುವ ಕ್ರಿಮಿಕೀಟಗಳು ಮತ್ತು ಹಾರಾಡುವ ಪಕ್ಷಿಗಳು ಇದ್ದವು.
|
14. ಆದರೆ ಪೇತ್ರನು, “ಪ್ರಭುವೇ, ನಾನು ಹಾಗೆ ಮಾಡಲಾರೆ! ಅಪವಿತ್ರವಾದದ್ದನ್ನು ಮತ್ತು ಅಶುದ್ಧವಾದದ್ದನ್ನು ನಾನೆಂದೂ ತಿಂದವನಲ್ಲ” ಎಂದು ಹೇಳಿದನು. PEPS
|
15. ಆದರೆ ಆ ವಾಣಿಯು ಅವನಿಗೆ, “ದೇವರು ಇವುಗಳನ್ನು ಶುದ್ಧೀಕರಿಸಿದ್ದಾನೆ. ಇವುಗಳನ್ನು ‘ಅಪವಿತ್ರ’ವೆಂದು ಹೇಳಬೇಡ” ಎಂದು ಮತ್ತೆ ಹೇಳಿತು.
|
17. ಪೇತ್ರನು ತಾನು ಕಂಡ ಈ ದರ್ಶನದ ಅರ್ಥವೇನಿರಬಹುದೆಂದು ಆಶ್ಚರ್ಯಗೊಂಡನು. PEPS ಅಷ್ಟರಲ್ಲಿಯೇ, ಕೊರ್ನೇಲಿಯನು ಕಳುಹಿಸಿದ್ದ ಜನರು ಸೀಮೋನನ ಮನೆಯನ್ನು ಕಂಡುಕೊಂಡಿದ್ದರು. ಅವರು ಬಾಗಿಲ ಬಳಿಯಲ್ಲಿ ನಿಂತುಕೊಂಡು,
|
19. ಈ ದರ್ಶನದ ಬಗ್ಗೆ ಪೇತ್ರನು ಇನ್ನೂ ಆಲೋಚಿಸುತ್ತಿದ್ದನು. ಆದರೆ ಪವಿತ್ರಾತ್ಮನು ಅವನಿಗೆ, “ಇಗೋ, ನಿನ್ನನ್ನು ಮೂರು ಜನರು ಹುಡುಕುತ್ತಾ ಬಂದಿದ್ದಾರೆ.
|
20. ನೀನೆದ್ದು ಕೆಳಗಿಳಿದು ಅವರೊಂದಿಗೆ ಹೋಗು. ಯಾವ ಪ್ರಶ್ನೆಗಳನ್ನೂ ಕೇಳಬೇಡ. ನಾನೇ ಅವರನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ” ಎಂದು ಹೇಳಿದನು.
|
21. ಆದ್ದರಿಂದ ಪೇತ್ರನು ಕೆಳಗಿಳಿದು ಆ ಜನರ ಬಳಿಗೆ ಹೋಗಿ, “ನೀವು ಹುಡುಕುತ್ತಿರುವ ವ್ಯಕ್ತಿ ನಾನೇ, ನೀವು ಇಲ್ಲಿಗೇಕೆ ಬಂದಿರಿ?” ಎಂದು ಕೇಳಿದನು. PEPS
|
22. ಆ ಜನರು, “ಕೊರ್ನೇಲಿಯ ಎಂಬ ಒಬ್ಬ ಸೇನಾಧಿಕಾರಿ ಇದ್ದಾನೆ. ಅವನು ಧಾರ್ಮಿಕ ವ್ಯಕ್ತಿ. ಅವನು ದೇವರನ್ನು ಆರಾಧಿಸುತ್ತಾನೆ. ಯೆಹೂದ್ಯ ಜನರೆಲ್ಲರೂ ಅವನನ್ನು ಗೌರವಿಸುತ್ತಾರೆ. ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನೀನು ಹೇಳುವ ಸಂಗತಿಗಳನ್ನು ಕೇಳಬೇಕೆಂದು ದೇವದೂತನೊಬ್ಬನು ಕೊರ್ನೇಲಿಯನಿಗೆ ತಿಳಿಸಿದ್ದಾನೆ” ಎಂದು ಹೇಳಿದರು.
|
23. ಪೇತ್ರನು ಅವರನ್ನು ಒಳಗೆ ಕರೆದು, ಆ ರಾತ್ರಿ ಅಲ್ಲೇ ಇರಬೇಕೆಂದು ಕೇಳಿಕೊಂಡನು. PEPS ಮರುದಿನ ಪೇತ್ರನು ಸಿದ್ಧನಾಗಿ, ಆ ಮೂವರೊಂದಿಗೆ ಹೊರಟನು. ಜೊಪ್ಪದ ವಿಶ್ವಾಸಿಗಳಲ್ಲಿ ಕೆಲವರು ಅವನೊಂದಿಗೆ ಹೋದರು.
|
24. ಮರುದಿನ ಅವರು ಸೆಜರೇಯ ಪಟ್ಟಣವನ್ನು ತಲುಪಿದರು. ಕೊರ್ನೇಲಿಯನು ಅವರಿಗೋಸ್ಕರ ಕಾಯುತ್ತಿದ್ದನು. ಅವನು ತನ್ನ ಸಂಬಂಧಿಕರನ್ನು ಮತ್ತು ಆಪ್ತಸ್ನೇಹಿತರನ್ನು ಆಗಲೇ ತನ್ನ ಮನೆಗೆ ಆಹ್ವಾನಿಸಿದ್ದನು. PEPS
|
25. ಪೇತ್ರನು ಮನೆಯನ್ನು ಪ್ರವೇಶಿಸುತ್ತಿರಲು ಕೊರ್ನೇಲಿಯನು ಅವನನ್ನು ಎದುರುಗೊಂಡನು. ಕೊರ್ನೇಲಿಯನು ಪೇತ್ರನ ಪಾದಕ್ಕೆ ಅಡ್ಡಬಿದ್ದು ನಮಸ್ಕಾರ ಮಾಡಿದನು.
|
26. ಆದರೆ ಪೇತ್ರನು ಅವನನ್ನು ಮೇಲಕ್ಕೆಬ್ಬಿಸಿ, “ಎದ್ದುನಿಲ್ಲು! ನಾನೂ ನಿನ್ನಂತೆಯೇ ಕೇವಲ ಒಬ್ಬ ಮನುಷ್ಯನು” ಎಂದು ಹೇಳಿದನು.
|
27. ಪೇತ್ರನು ಕೊರ್ನೇಲಿಯನೊಂದಿಗೆ ಮಾತನ್ನು ಮುಂದುವರಿಸಿದನು. ಬಳಿಕ ಪೇತ್ರನು ಒಳಗೆ ಹೋದಾಗ, ಅಲ್ಲಿ ನೆರೆದು ಬಂದಿದ್ದ ಜನರ ದೊಡ್ಡ ಗುಂಪನ್ನು ಕಂಡನು. PEPS
|
28. ಪೇತ್ರನು ಅವರಿಗೆ, “ಯೆಹೂದ್ಯನೊಬ್ಬನು ಅನ್ಯಜನರೊಂದಿಗೆ ಸಂಪರ್ಕವಿಟ್ಟುಕೊಳ್ಳುವುದಾಗಲಿ ಅವರನ್ನು ಭೇಟಿಮಾಡುವುದಾಗಲಿ ನಮ್ಮ ಯೆಹೂದ್ಯ ಧರ್ಮಶಾಸ್ತ್ರಕ್ಕೆ ವಿರುದ್ಧವಾದದ್ದು ಎಂಬುದು ನಿಮಗೆ ಗೊತ್ತೇ ಇದೆ. ಆದರೆ ಯಾವ ವ್ಯಕ್ತಿಯನ್ನೂ ಅಪವಿತ್ರನೆಂದಾಗಲಿ ಅಶುದ್ಧನೆಂದಾಗಲಿ ಕರೆಯಕೂಡದೆಂದು ದೇವರು ನನಗೆ ತೋರಿಸಿಕೊಟ್ಟಿದ್ದಾನೆ.
|
29. ಆದ್ದರಿಂದ, ನನ್ನನ್ನು ಇಲ್ಲಿಗೆ ಬರಬೇಕೆಂದು ಕರೆದ ಜನರೊಂದಿಗೆ ನಾನು ವಾದಮಾಡಲಿಲ್ಲ. ಆದರೆ ನೀವು ನನ್ನನ್ನು ಯಾಕೆ ಕರೆಸಿದಿರೆಂದು ದಯವಿಟ್ಟು ಈಗ ಹೇಳಿರಿ” ಎಂದನು. PEPS
|
30. ಆಗ ಕೊರ್ನೇಲಿಯನು, “ನಾಲ್ಕು ದಿನಗಳ ಹಿಂದೆ, ನಾನು ನನ್ನ ಮನೆಯಲ್ಲಿ ಪ್ರಾರ್ಥಿಸುತ್ತಿದ್ದೆನು. ಆಗ ಮಧ್ಯಾಹ್ನದ ಸುಮಾರು ಮೂರು ಗಂಟೆ ಸಮಯವಾಗಿತ್ತು. ಇದ್ದಕ್ಕಿದ್ದಂತೆ ಒಬ್ಬ ಮನುಷ್ಯನು ನನ್ನ ಮುಂದೆ ನಿಂತನು. ಅವನು ಧರಿಸಿಕೊಂಡಿದ್ದ ಬಟ್ಟೆಗಳು ಪ್ರಕಾಶಮಾನವಾಗಿ ಹೊಳೆಯುತ್ತಿದ್ದವು.
|
31. ಆ ಮನುಷ್ಯನು, ‘ಕೊರ್ನೇಲಿಯನೇ! ದೇವರು ನಿನ್ನ ಪ್ರಾರ್ಥನೆಯನ್ನು ಕೇಳಿದ್ದಾನೆ. ನೀನು ಬಡಜನರಿಗೆ ಕೊಡುವಂಥವುಗಳನ್ನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.
|
32. ಆದ್ದರಿಂದ ಕೆಲವು ಜನರನ್ನು ಜೊಪ್ಪಪಟ್ಟಣಕ್ಕೆ ಕಳುಹಿಸಿ ಸೀಮೋನ್ ಪೇತ್ರನನ್ನು ಬರಬೇಕೆಂದು ಕೇಳಿಕೊ. ಪೇತ್ರನು ಚರ್ಮಕಾರನಾದ ಸೀಮೋನ ಎಂಬವನ ಮನೆಯಲ್ಲಿ ಇಳಿದುಕೊಂಡಿದ್ದಾನೆ. ಅವನ ಮನೆಯು ಸಮುದ್ರ ತೀರದಲ್ಲಿದೆ’ ಎಂದನು.
|
33. ಆದ್ದರಿಂದ, ನಾನು ತಕ್ಷಣ ನಿನಗೆ ಕರೆಕಳುಹಿಸಿದೆ. ನೀನು ಇಲ್ಲಿಗೆ ಬಂದದ್ದು ಉಪಕಾರವಾಯಿತು. ನಮಗೆ ತಿಳಿಸಬೇಕೆಂದು ಪ್ರಭುವು ನಿನಗೆ ಆಜ್ಞಾಪಿಸಿರುವ ಪ್ರತಿಯೊಂದನ್ನು ಕೇಳಲು ನಾವೆಲ್ಲರು ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ” ಎಂದು ಹೇಳಿದನು. PS
|
34. {ಕೊರ್ನೇಲಿಯನ ಮನೆಯಲ್ಲಿ ಪೇತ್ರನ ಪ್ರಸಂಗ} PS ಪೇತ್ರನು ಮಾತಾಡಲಾರಂಭಿಸಿ ಹೀಗೆಂದನು: “ದೇವರಿಗೆ ಎಲ್ಲರೂ ಒಂದೇ ಎಂಬುದು ನನಗೆ ಈಗ ಅರ್ಥವಾಯಿತು.
|
35. ತನ್ನನ್ನು ಆರಾಧಿಸುವ ನೀತಿವಂತರು ಯಾರೇ ಆಗಿದ್ದರೂ ಅವರನ್ನು ದೇವರು ಸ್ವೀಕರಿಸಿಕೊಳ್ಳುವನು. ಅವನು ಯಾವ ದೇಶದವನು ಎಂಬುದು ಮುಖ್ಯವಲ್ಲ.
|
36. ದೇವರು ಯೆಹೂದ್ಯ ಜನರೊಂದಿಗೆ ಮಾತಾಡಿದ್ದಾನೆ. ಯೇಸು ಕ್ರಿಸ್ತನ ಮೂಲಕವಾಗಿ ಶಾಂತಿ ಬಂದಿದೆ ಎಂಬ ಸುವಾರ್ತೆಯನ್ನು ದೇವರು ಅವರಿಗೆ ಕಳುಹಿಸಿದನು. ಯೇಸುವು ಎಲ್ಲಾ ಜನರಿಗೆ ಪ್ರಭುವಾಗಿದ್ದಾನೆ! PEPS
|
37. “ಜುದೇಯದಲ್ಲೆಲ್ಲಾ ಏನಾಯಿತೆಂಬುದು ನಿಮಗೆ ಗೊತ್ತಿದೆ. ಗಲಿಲಾಯದಲ್ಲಿ ಯೋಹಾನನು *ಯೋಹಾನನು ಸ್ನಾನಿಕ ಯೋಹಾನನು. ದೀಕ್ಷಾಸ್ನಾನದ ಬಗ್ಗೆ ಜನರಿಗೆ ಬೋಧಿಸಿದ ಮೇಲೆ ಅದು ಆರಂಭವಾಯಿತು.
|
38. ನಜರೇತಿನ ಯೇಸುವಿನ ಬಗ್ಗೆ ನಿಮಗೆ ಗೊತ್ತಿದೆ. ದೇವರು ಆತನಿಗೆ ಪವಿತ್ರಾತ್ಮನನ್ನೂ ಶಕ್ತಿಯನ್ನೂ ಕೊಡುವುದರ ಮೂಲಕ ಆತನನ್ನು ಅಭಿಷೇಕಿಸಿದನು. ಆತನು ಎಲ್ಲಾ ಕಡೆಗಳಲ್ಲೂ ಜನರಿಗೆ ಒಳ್ಳೆಯದನ್ನು ಮಾಡುತ್ತಾ ಸಂಚರಿಸಿದನು. ದೆವ್ವದಿಂದ ಪೀಡಿತರಾಗಿದ್ದವರನ್ನು ಯೇಸು ಗುಣಪಡಿಸಿದನು. ದೇವರು ಯೇಸುವಿನೊಂದಿಗೆ ಇದ್ದನೆಂಬುದನ್ನು ಇದು ತೋರಿಸಿಕೊಟ್ಟಿತು. PEPS
|
39. “ಜುದೇಯದಲ್ಲಿ ಮತ್ತು ಜೆರುಸಲೇಮಿನಲ್ಲಿ ಯೇಸು ಮಾಡಿದ ಎಲ್ಲಾ ಕಾರ್ಯಗಳನ್ನು ನಾವು ನೋಡಿದೆವು. ಆ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ. ಆದರೆ ಯೇಸು ಕೊಲ್ಲಲ್ಪಟ್ಟನು. ಅವರು ಆತನನ್ನು ಮರದ ಶಿಲುಬೆಗೆ ಏರಿಸಿದರು.
|
40. ಆದರೆ, ದೇವರು ಆತನನ್ನು ಮೂರನೆಯ ದಿನದಲ್ಲಿ ಜೀವಂತವಾಗಿ ಎಬ್ಬಿಸಿದನು! ಯೇಸುವನ್ನು ಸ್ಪಷ್ಟವಾಗಿ ನೋಡುವ ಅವಕಾಶವನ್ನು ದೇವರು ಜನರಿಗೆ ಒದಗಿಸಿಕೊಟ್ಟನು.
|
41. ಆದರೆ ಯೇಸುವು ಎಲ್ಲಾ ಜನರಿಗೆ ಕಾಣಿಸಿಕೊಳ್ಳಲಿಲ್ಲ. ದೇವರಿಂದ ಮೊದಲೇ ಸಾಕ್ಷಿಗಳಾಗಿ ಆಯ್ಕೆಗೊಂಡಿದ್ದವರು ಮಾತ್ರ ಆತನನ್ನು ಕಂಡರು! ನಾವೇ ಆ ಸಾಕ್ಷಿಗಳು! ಯೇಸು ಜೀವಂತವಾಗಿ ಎದ್ದುಬಂದ ಮೇಲೆ ನಾವು ಆತನೊಂದಿಗೆ ಊಟ ಮಾಡಿದೆವು ಮತ್ತು ಪಾನ ಮಾಡಿದೆವು. PEPS
|
42. “ಜನರಿಗೆ ಬೋಧಿಸಬೇಕೆಂದು ಯೇಸು ನಮಗೆ ಹೇಳಿದನು. ಜೀವಂತವಾಗಿರುವ ಜನರಿಗೂ ಮತ್ತು ಸತ್ತುಹೋಗಿರುವ ಜನರಿಗೂ ದೇವರಿಂದ ನ್ಯಾಯಾಧಿಪತಿಯಾಗಿ ಆಯ್ಕೆಯಾಗಿರುವ ವ್ಯಕ್ತಿ ತಾನೇ ಎಂಬುದನ್ನು ಜನರಿಗೆ ತಿಳಿಸಬೇಕೆಂದು ಆತನು ನಮಗೆ ಹೇಳಿದನು.
|
43. ಯೇಸುವಿನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನ ಪಾಪಗಳನ್ನು ದೇವರು ಯೇಸುವಿನ ಮೂಲಕ ಕ್ಷಮಿಸುವನು. ಇದು ಸತ್ಯವೆಂದು ಪ್ರವಾದಿಗಳು ಹೇಳಿದ್ದಾರೆ” ಅಂದನು. PS
|
44. {ಯೆಹೂದ್ಯರಲ್ಲದವರಿಗೆ ಪವಿತ್ರಾತ್ಮಧಾರೆ} PS ಪೇತ್ರನು ಇನ್ನೂ ಹೀಗೆ ಹೇಳುತ್ತಿರುವಾಗಲೇ, ಅವನ ಉಪದೇಶವನ್ನು ಕೇಳುತ್ತಿದ್ದವರ ಮೇಲೆ ಪವಿತ್ರಾತ್ಮನು ಇಳಿದು ಬಂದನು.
|
45. ಪೇತ್ರನೊಂದಿಗೆ ಬಂದಿದ್ದ ಯೆಹೂದ್ಯ ವಿಶ್ವಾಸಿಗಳು ವಿಸ್ಮಿತರಾದರು. ಯೆಹೂದ್ಯರಲ್ಲದ ಜನರಿಗೂ ಸಹ ಪವಿತ್ರಾತ್ಮಧಾರೆಯಾದದ್ದನ್ನು ಕಂಡು ಅವರು ಆಶ್ಚರ್ಯಪಟ್ಟರು.
|
46. ಅವರು ಬೇರಬೇರೆ ಭಾಷೆಗಳನ್ನು ಮಾತಾಡುತ್ತಾ ದೇವರಿಗೆ ಸ್ತೋತ್ರ ಸಲ್ಲಿಸುತ್ತಿರುವುದನ್ನು ಆ ಯೆಹೂದ್ಯ ವಿಶ್ವಾಸಿಗಳು ಕೇಳಿದರು. ಬಳಿಕ ಪೇತ್ರನು,
|
47. “ನೀರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳದಂತೆ ನಾವು ಈ ಜನರಿಗೆ ಅಡ್ಡಿಮಾಡಲು ಸಾಧ್ಯವಿಲ್ಲ. ನಾವು ಹೊಂದಿಕೊಂಡಂತೆ ಇವರೂ ಪವಿತ್ರಾತ್ಮನನ್ನು ಹೊಂದಿಕೊಂಡರು!” ಎಂದು ಹೇಳಿ,
|
48. ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಲು ಅವರಿಗೆ ಅಪ್ಪಣೆಕೊಟ್ಟನು. ಬಳಿಕ ಅವರು ತಮ್ಮೊಂದಿಗೆ ಕೆಲವು ದಿನಗಳವರೆಗೆ ಇರಬೇಕೆಂದು ಪೇತ್ರನನ್ನು ಕೇಳಿಕೊಂಡರು. PE
|