2. ಪ್ರತ್ಯುತ್ತರವಾಗಿ ಅವನು ಹೀಗೆಂದನು: “ನನ್ನ ಯೆಹೂದ್ಯತಂದೆಗಳೇ, ಸಹೋದರರೇ, ನನಗೆ ಕಿವಿಗೊಡಿರಿ. ನಮ್ಮ ಪಿತೃವಾದ ಅಬ್ರಹಾಮನಿಗೆ ನಮ್ಮ ಪ್ರಭಾವಸ್ವರೂಪನಾದ ದೇವರು ಕಾಣಸಿಕೊಂಡನು. ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪೊಟೇಮಿಯದಲ್ಲಿದ್ದನು.
|
3. ದೇವರು ಅಬ್ರಹಾಮನಿಗೆ, ‘ನಿನ್ನ ದೇಶವನ್ನೂ ನಿನ್ನ ಜನರನ್ನೂ ಬಿಟ್ಟು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು’ ✡ಉಲ್ಲೇಖನ: ಆದಿಕಾಂಡ 12:1. ಎಂದು ಹೇಳಿದನು. PEPS
|
4. “ಆದ್ದರಿಂದ ಅಬ್ರಹಾಮನು ಖಾಲ್ದೆಯ *ಖಾಲ್ದೆಯ ಅಥವಾ ಬಾಬಿಲೋನಿಯ. ದೇಶವನ್ನು ಬಿಟ್ಟು ಹಾರಾನಿನಲ್ಲಿ ವಾಸಿಸಲು ಹೋದನು. ಅಬ್ರಹಾಮನ ತಂದೆ ಸತ್ತಮೇಲೆ ದೇವರು ಅವನನ್ನು ಈಗ ನೀವು ವಾಸಿಸುತ್ತಿರುವ ಈ ಸ್ಥಳಕ್ಕೆ ಕಳುಹಿಸಿದನು.
|
5. ಆದರೆ ದೇವರು ಅಬ್ರಹಾಮನಿಗೆ ಇಲ್ಲಿ ಯಾವ ಭೂಮಿಯನ್ನೂ ಕೊಡಲಿಲ್ಲ. ದೇವರು ಅವನಿಗೆ ಒಂದು ಅಡಿ ಸ್ಥಳವನ್ನೂ ಕೊಡಲಿಲ್ಲ. ಆದರೆ ಮುಂದಿನ ಕಾಲದಲ್ಲಿ ಈ ದೇಶವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವುದಾಗಿ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದನು. (ಅಬ್ರಹಾಮನಿಗೆ ಮಕ್ಕಳೇ ಇಲ್ಲದಿದ್ದಾಗ ಇದಾಯಿತು.) PEPS
|
6. “ದೇವರು ಅವನಿಗೆ, ‘ನಿನ್ನ ಸಂತಾನದವರು ಬೇರೊಂದು ದೇಶದಲ್ಲಿ ವಾಸಿಸುವರು. ಅವರು ಪರದೇಶಿಗಳಾಗಿರುವರು. ಅಲ್ಲಿಯ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಂಡು ನಾನೂರು ವರ್ಷಗಳವರೆಗೆ ಅವರಿಗೆ ಕೇಡುಗಳನ್ನು ಮಾಡುವರು.
|
7. ಆದರೆ ಅವರನ್ನು ಗಲಾಮರನ್ನಾಗಿ ಮಾಡಿಕೊಂಡ ಜನಾಂಗವನ್ನು ನಾನು ದಂಡಿಸುವೆನು’ ✡ಉಲ್ಲೇಖನ: ಆದಿಕಾಂಡ 15:13-14. ಎಂದು ಹೇಳಿದನು. ಇದಲ್ಲದೆ ದೇವರು ಅವನಿಗೆ, ‘ಆ ಬಳಿಕ ನಿನ್ನ ಜನರು ಆ ದೇಶದಿಂದ ಹೊರಗೆ ಬಂದು ನನ್ನನ್ನು ಈ ಸ್ಥಳದಲ್ಲಿ ಆರಾಧಿಸುವರು’ ✡ಉಲ್ಲೇಖನ: ಆದಿಕಾಂಡ 15:14; ವಿಮೋಚನ. 3:12. ಎಂದು ಹೇಳಿದನು. PEPS
|
8. “ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಆ ಒಡಂಬಡಿಕೆಯ ಗುರುತೇ ಸುನ್ನತಿ. ಹೀಗಿರಲು ಅಬ್ರಹಾಮನು ಒಬ್ಬ ಮಗನನ್ನು ಪಡೆದಾಗ, ಆ ಮಗನಿಗೆ ಎಂಟನೆಯ ದಿನದಲ್ಲಿ ಸುನ್ನತಿ ಮಾಡಿದನು. ಅವನ ಮಗನ ಹೆಸರು ಇಸಾಕ. ಇಸಾಕನು ಸಹ ತನ್ನ ಮಗನಾದ ಯಾಕೋಬನಿಗೆ ಸುನ್ನತಿ ಮಾಡಿದನು. ಮತ್ತು ಯಾಕೋಬನು ತನ್ನ ಗಂಡುಮಕ್ಕಳಿಗೆಲ್ಲಾ ಸುನ್ನತಿ ಮಾಡಿದನು. ಈ ಗಂಡುಮಕ್ಕಳೇ ಮುಂದೆ ಹನ್ನೆರಡು ಮಂದಿ ಪಿತೃಗಳಾದರು. PEPS
|
9. “ಈ ಪಿತೃಗಳು ಯೋಸೇಫನ (ಅವರು ತಮ್ಮ) ಮೇಲೆ ಹೊಟ್ಟೆಕಿಚ್ಚುಪಟ್ಟರು. ಅವರು ಯೋಸೇಫನನ್ನು ಈಜಿಪ್ಟಿನ ಜನರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಯೋಸೇಫನೊಂದಿಗೆ ಇದ್ದನು.
|
10. ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.
|
11. ಆದರೆ ಈಜಿಪ್ಟಿನಲ್ಲಿ ಮತ್ತು ಕಾನಾನಿನಲ್ಲಿ ಬರಗಾಲ ಉಂಟಾಯಿತು. ಆಹಾರವಿಲ್ಲದೆ ನಮ್ಮ ಪಿತೃಗಳಿಗೆ ಬಹಳ ಕಷ್ಟವಾಯಿತು. PEPS
|
12. “ಆದರೆ ಈಜಿಪ್ಟಿನಲ್ಲಿ ಆಹಾರವನ್ನು ಸಂಗ್ರಹಿಸಲಾಗಿದೆ ಎಂಬ ಸುದ್ದಿಯನ್ನು ಯಾಕೋಬನು ಕೇಳಿ, ನಮ್ಮ ಪಿತೃಗಳನ್ನು ಅಲ್ಲಿಗೆ ಕಳುಹಿಸಿದನು. (ಇದು ಈಜಿಪ್ಟಿಗೆ ಅವರ ಮೊದಲ ಪ್ರಯಾಣ.)
|
13. ಬಳಿಕ ಅವರು ಅಲ್ಲಿಗೆ ಎರಡನೆಯ ಸಲ ಹೋದರು. ಈ ಸಲ, ತಾನು ಯಾರೆಂಬುದನ್ನು ಯೋಸೇಫನು ತನ್ನ ಸಹೋದರರಿಗೆ ತಿಳಿಸಿದನು ಮತ್ತು ಯೋಸೇಫನ ಕುಟುಂಬದ ಬಗ್ಗೆ ಫರೋಹನಿಗೆ ತಿಳಿಯಿತು.
|
14. ಬಳಿಕ, ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಮತ್ತು ಸಂಬಂಧಿಕರನ್ನು (ಅವರೆಲ್ಲರು ಒಟ್ಟಿಗೆ ಎಪ್ಪತ್ತೈದು ಮಂದಿ) ಈಜಿಪ್ಟಿಗೆ ಆಹ್ವಾನಿಸಲು ಕೆಲವು ಜನರನ್ನು ಕಳುಹಿಸಿದನು.
|
16. ಬಳಿಕ ಅವರ ದೇಹಗಳನ್ನು ಶೇಕೆಮಿಗೆ ಸಾಗಿಸಲಾಯಿತು. ಅಲ್ಲಿಯ ಸಮಾಧಿಯೊಂದರಲ್ಲಿ ಅವರನ್ನು ಹೂಳಲಾಯಿತು. (ಅಬ್ರಹಾಮನು ಹಾಮೋರನ ಗಂಡುಮಕ್ಕಳಿಂದ ಕೊಂಡುಕೊಂಡದ್ದು ಈ ಸಮಾಧಿಯನ್ನೇ. ಅವನು ಅವರಿಗೆ ಬೆಳ್ಳಿಯನ್ನು ಕ್ರಯವಾಗಿ ಕೊಟ್ಟಿದ್ದನು.) PEPS
|
17. “ಈಜಿಪ್ಟಿನಲ್ಲಿ ನಮ್ಮ ಜನರಾದ ಯೆಹೂದ್ಯರ ಸಂಖ್ಯೆಯು ಹೆಚ್ಚತೊಡಗಿತು. (ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಕಾಲ ಬಹು ಶೀಘ್ರದಲ್ಲೇ ಬರಲಿತ್ತು.)
|
19. ಈ ರಾಜನು ನಮ್ಮ ಜನರಿಗೆ ಮೋಸ ಮಾಡಿದನು. ಅವನು ನಮ್ಮ ಪಿತೃಗಳಿಗೆ ಕೇಡನ್ನು ಮಾಡಿದನು. ಅವರ ಕೂಸುಗಳನ್ನು ಸಾಯಿಸಬೇಕೆಂದು ಹೊರಗೆ ಹಾಕಿಸಿದನು. PEPS
|
20. “ಮೋಶೆಯು ಜನಿಸಿದ್ದು ಈ ಕಾಲದಲ್ಲೇ. ಅವನು ಬಹು ಸುಂದರನಾಗಿದ್ದನು. ಮೋಶೆಯನ್ನು ಅವನ ತಂದೆಯ ಮನೆಯಲ್ಲಿ ಮೂರು ತಿಂಗಳವರೆಗೆ ನೋಡಿಕೊಳ್ಳಲಾಯಿತು.
|
21. ಅವರು ಮೋಶೆಯನ್ನು ಹೊರಗೆ ಹಾಕಿದಾಗ ಫರೋಹನ ಮಗಳು ಅವನನ್ನು ತೆಗೆದುಕೊಂಡಳು. ಆಕೆಯು ಅವನನ್ನು ತನ್ನ ಸ್ವಂತ ಮಗನಂತೆ ಬೆಳೆಸಿದಳು.
|
22. ಈಜಿಪ್ಟಿನವರು ತಮಗೆ ಗೊತ್ತಿದ್ದ ಸಕಲ ವಿದ್ಯೆಗಳನ್ನು ಮೋಶೆಗೆ ಕಲಿಸಿದರು. ಅವನು ವಿಷಯಗಳನ್ನು ಹೇಳುವುದರಲ್ಲಿಯೂ ಕಾರ್ಯಗಳನ್ನು ಮಾಡುವು ದರಲ್ಲಿಯೂ ಬಹು ಸಮರ್ಥನಾಗಿದ್ದನು. PEPS
|
23. “ಮೋಶೆಗೆ ನಲವತ್ತು ವರ್ಷ ವಯಸ್ಸಾಗಿದ್ದಾಗ, ತನ್ನ ಸಹೋದರರಾದ ಯೆಹೂದ್ಯ ಜನರನ್ನು ಸಂದರ್ಶಿಸುವುದು ಒಳ್ಳೆಯದೆಂದು ಯೋಚಿಸಿಕೊಂಡನು.
|
24. ಈಜಿಪ್ಟಿನವನೊಬ್ಬನು ಯೆಹೂದ್ಯನೊಬ್ಬನಿಗೆ ಅನ್ಯಾಯ ಮಾಡಿ ಹಿಂಸಿಸುತ್ತಿರುವುದನ್ನು ಕಂಡ ಮೋಶೆಯು ಆ ಈಜಿಪ್ಟಿನವನಿಗೆ ಬಲವಾಗಿ ಹೊಡೆದು ಕೊಂದುಹಾಕಿದನು.
|
25. ತಮ್ಮನ್ನು ರಕ್ಷಿಸಲು ದೇವರು ಮೋಶೆಯನ್ನು ಉಪಯೋಗಿಸುತ್ತಿದ್ದಾನೆ ಎಂಬುದಾಗಿ ತನ್ನ ಯೆಹೂದ್ಯ ಸಹೋದರರು ಅರ್ಥಮಾಡಿಕೊಳ್ಳುತ್ತಾರೆ ಎಂದು ಮೋಶೆ ಭಾವಿಸಿಕೊಂಡನು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ. PEPS
|
26. “ಮರುದಿನ, ಇಬ್ಬರು ಯೆಹೂದ್ಯರು ಹೊಡೆದಾಡುವುದನ್ನು ಮೋಶೆಯು ಕಂಡನು. ಅವರನ್ನು ಸಮಾಧಾನಪಡಿಸಲು ಅವನು ಪ್ರಯತ್ನಿಸಿ ‘ಗೆಳೆಯರೇ, ನೀವು ಸಹೋದರರಾಗಿದ್ದೀರಿ! ನೀವು ಒಬ್ಬರಿಗೊಬ್ಬರು ಅನ್ಯಾಯ ಮಾಡುವುದೇಕೆ?’ ಎಂದು ಅವರನ್ನು ಕೇಳಿದನು.
|
27. ಮತ್ತೊಬ್ಬನಿಗೆ ಅನ್ಯಾಯ ಮಾಡುತ್ತಿದ್ದವನು ಮೋಶೆಯನ್ನು ಹಿಂದಕ್ಕೆ ತಳ್ಳಿ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ಯಾರಾದರೂ ಹೇಳಿದರೇ? ಇಲ್ಲ!
|
29. ಇದನ್ನು ಕೇಳಿದ್ದೇ ಮೋಶೆಯು ಈಜಿಪ್ಟನ್ನು ಬಿಟ್ಟು ಮಿದ್ಯಾನ್ಯರ ನಾಡಿಗೆ ಹೋಗಿ ವಿದೇಶಿಯವನಂತೆ ವಾಸಿಸತೊಡಗಿದನು. ಅಲ್ಲಿ ಅವನಿಗೆ ಇಬ್ಬರು ಗಂಡುಮಕ್ಕಳು ಹುಟ್ಟಿದರು. PEPS
|
30. “ನಲವತ್ತು ವರ್ಷಗಳಾದ ಮೇಲೆ ಮೋಶೆಯು ಸಿನಾಯ್ ಬೆಟ್ಟದ ಸಮೀಪದಲ್ಲಿರುವ ಮರಳುಗಾಡಿನಲ್ಲಿದ್ದಾಗ ಉರಿಯುತ್ತಿದ್ದ ಪೊದೆಯ ಜ್ವಾಲೆಯಲ್ಲಿ ದೇವದೂತನೊಬ್ಬನು ಕಾಣಿಸಿಕೊಂಡನು.
|
31. ಮೋಶೆಯು ಆಶ್ಚರ್ಯದಿಂದ ನೋಡಲು ಸಮೀಪಕ್ಕೆ ಹೋದನು. ಆಗ ಮೋಶೆಗೆ ವಾಣಿಯೊಂದು ಕೇಳಿಸಿತು. ಅದು ಪ್ರಭುವಿನ ವಾಣಿಯಾಗಿತ್ತು.
|
32. ಪ್ರಭುವು ಅವನಿಗೆ, ‘ನಾನೇ ನಿನ್ನ ಪಿತೃಗಳ ದೇವರು. ನಾನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ✡ಉಲ್ಲೇಖನ: ವಿಮೋಚನ. 3:6. ಎಂದು ಹೇಳಿದನು. ಮೋಶೆಯು ಭಯದಿಂದ ನಡುಗ ತೊಡಗಿದನು; ಪೊದೆಯನ್ನು ನೋಡಲು ಹೆದರಿದನು. PEPS
|
34. ಜನರು ಈಜಿಪ್ಟಿನಲ್ಲಿ ಬಹಳ ಸಂಕಟಪಡುತ್ತಿರುವುದನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳಾಟವನ್ನು ನಾನು ಕೇಳಿದ್ದೇನೆ. ನಾನು ಅವರನ್ನು ರಕ್ಷಿಸುವುದಕ್ಕಾಗಿ ಇಳಿದುಬಂದಿದ್ದೇನೆ. ಮೋಶೆಯೇ, ಈಗ ನಾನು ನಿನ್ನನ್ನು ಈಜಿಪ್ಟಿಗೆ ಕಳುಹಿಸುತ್ತಿದ್ದೇನೆ’ ✡ಉಲ್ಲೇಖನ: ವಿಮೋಚನ. 3:5-10. ಎಂದು ಹೇಳಿದನು. PEPS
|
35. “ಆ ಯೆಹೂದ್ಯರಿಂದ ತಿರಸ್ಕೃತನಾದವನೇ ಈ ಮೋಶೆ. ಅವರು ಅವನಿಗೆ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ನಿನಗೆ ಯಾರಾದರೂ ಹೇಳಿದರೇ?’ ಎಂದು ಪ್ರಶ್ನಿಸಿದ್ದರು. ಆದರೆ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ಕಳುಹಿಸಿದ್ದು ಆ ಮೋಶೆಯನ್ನೇ. ದೇವರು ತನ್ನ ದೂತನ ಮೂಲಕವಾಗಿ ಮೋಶೆಯನ್ನು ಕಳುಹಿಸಿದನು. ಉರಿಯುವ ಪೊದೆಯಲ್ಲಿ ಮೋಶೆಯು ಕಂಡದ್ದು ಈ ದೇವದೂತನನ್ನೇ.
|
36. ಆದ್ದರಿಂದ ಮೋಶೆಯು ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವನು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಈಜಿಪ್ಟಿನಲ್ಲಿಯೂ ಕೆಂಪುಸಮುದ್ರದಲ್ಲಿಯೂ ಮತ್ತು ನಲವತ್ತು ವರ್ಷಗಳ ಕಾಲ ಅರಣ್ಯದಲ್ಲಿಯೂ ಮಾಡಿದನು. PEPS
|
37. “ಈ ಮೋಶೆಯೇ ಯೆಹೂದ್ಯ ಜನರಿಗೆ, ‘ದೇವರು ನಿಮಗೊಬ್ಬ ಪ್ರವಾದಿಯನ್ನು ಕೊಡುವನು. ಆ ಪ್ರವಾದಿಯು ನಿಮ್ಮ ಸ್ವಜನರ ಮಧ್ಯದಿಂದಲೇ ಬರುವನು. ಅವನು ನನ್ನಂತೆಯೇ ಇರುವನು’ ✡ಉಲ್ಲೇಖನ: ಧರ್ಮೋಪದೇಶ. 18:15. ಎಂದು ಹೇಳಿದನು.
|
38. ಅರಣ್ಯದಲ್ಲಿ ಯೆಹೂದ್ಯರ ಸಮೂಹದೊಂದಿಗೆ ಇದ್ದವನು ಈ ಮೋಶೆಯೇ. ಸಿನಾಯ್ ಬೆಟ್ಟದ ಬಳಿ ತನ್ನೊಂದಿಗೆ ಮಾತಾಡಿದ ದೇವದೂತನೊಂದಿಗೆ ಅವನಿದ್ದನು. ಅಲ್ಲದೆ ಅವನು ನಮ್ಮ ಪಿತೃಗಳೊಂದಿಗೆ ಇದ್ದನು. ಜೀವಕರವಾದ ಆಜ್ಞೆಗಳನ್ನು ಮೋಶೆಯು ದೇವರಿಂದ ಸ್ವೀಕರಿಸಿಕೊಂಡು ಅವುಗಳನ್ನು ನಮಗೆ ಕೊಟ್ಟನು. PEPS
|
39. “ಆದರೆ ಮೋಶೆಗೆ ವಿಧೇಯರಾಗಲು ನಮ್ಮ ಪಿತೃಗಳಿಗೆ ಇಷ್ಟವಿರಲಿಲ್ಲ. ಅವರು ಅವನನ್ನು ತಿರಸ್ಕರಿಸಿ, ಈಜಿಪ್ಟಿಗೆ ಹಿಂತಿರುಗಬೇಕೆಂದಿದ್ದರು.
|
40. ನಮ್ಮ ಪಿತೃಗಳು ಆರೋನನಿಗೆ, ‘ಮೋಶೆಯು ನಮ್ಮನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದನು. ಆದರೆ ಅವನಿಗೆ ಏನಾಯಿತೋ ನಮಗೆ ಗೊತ್ತಿಲ್ಲ. ಆದ್ದರಿಂದ ನಮ್ಮ ಮುಂದೆ ಹೋಗಲು ಮತ್ತು ನಮ್ಮನ್ನು ನಡೆಸಲು ಕೆಲವು ದೇವರುಗಳನ್ನು ಮಾಡು’ ✡ಉಲ್ಲೇಖನ: ವಿಮೋಚನ. 32:1. ಎಂದರು.
|
41. ಆದ್ದರಿಂದ ಆ ಜನರು ಕರುವಿನಾಕೃತಿಯಲ್ಲಿ ಒಂದು ವಿಗ್ರಹವನ್ನು ಮಾಡಿ, ಅದಕ್ಕೆ ಯಜ್ಞಗಳನ್ನು ಅರ್ಪಿಸಿದರು. ಆ ಜನರು ತಮ್ಮ ಕೈಯಾರೆ ಮಾಡಿಕೊಂಡ ವಿಗ್ರಹದ ವಿಷಯದಲ್ಲಿ ಬಹು ಸಂತೋಷಪಟ್ಟರು!
|
42. ಆದರೆ ದೇವರು ಅವರಿಗೆ ವಿರೋಧವಾಗಿ, ಆಕಾಶದ ಸುಳ್ಳುದೇವರುಗಳನ್ನು ಪೂಜಿಸುವಂತೆ ಅವರನ್ನು ಬಿಟ್ಟುಬಿಟ್ಟನು. ಇದರ ಬಗ್ಗೆ ಪ್ರವಾದಿಗಳ ಪುಸ್ತಕದಲ್ಲಿ ಹೀಗೆ ಬರೆದಿದೆ: ದೇವರು ಹೀಗೆನ್ನುತ್ತಾನೆ, ‘ಯೆಹೂದ್ಯ ಜನರಾದ ನೀವು ನಲವತ್ತು ವರ್ಷಗಳ ಕಾಲ ಮರಳುಗಾಡಿನಲ್ಲಿದ್ದಾಗ ನನಗೆ ಯಜ್ಞಗಳನ್ನು ಅರ್ಪಿಸಲಿಲ್ಲ; ಕಾಣಿಕೆಗಳನ್ನು ತರಲಿಲ್ಲ.
|
43. ನೀವು ನಿಮ್ಮೊಂದಿಗೆ ಮೊಲೋಖನ (ಸುಳ್ಳುದೇವರ) ಗುಡಾರವನ್ನು
ಮತ್ತು ನಿಮ್ಮ ರೇಫಾ ದೇವತೆಯ ನಕ್ಷತ್ರರೂಪವನ್ನು ಹೊತ್ತುಕೊಂಡು ಹೋದಿರಿ. ಆರಾಧಿಸುವುದಕ್ಕಾಗಿ ನೀವು ಮಾಡಿಕೊಂಡ ವಿಗ್ರಹಗಳೇ ಇವು. ಆದ್ದರಿಂದ ನಾನು ನಿಮ್ಮನ್ನು ಬಾಬಿಲೋನಿನ ಆಚೆಗೆ ಕಳುಹಿಸಿಬಿಡುವೆನು.’ ಆಮೋಸ 5:25-27 PS |
44. “ದೇವರು ನಮ್ಮ ಪಿತೃಗಳೊಂದಿಗೆ ಯಾವ ಗುಡಾರದಲ್ಲಿ ಮತಾಡಿದ್ದನೋ ಆ ಗುಡಾರವು †ಗುಡಾರ ಯಜ್ಞವೇದಿಕೆಯನ್ನು ಹೊಂದಿರುವ ದೇವಾಲಯದಂತೆ ಈ ಗುಡಾರವನ್ನು ಆರಾಧನಾ ಸ್ಥಳವನ್ನಾಗಿ ಉಪಯೋಗಿಸಲಾಗುತ್ತಿತ್ತು. ಇದನ್ನು ಸ್ಥಳದಿಂದ ಸ್ಥಳಕ್ಕೆ ತೆಗೆದುಕೊಂಡು ಹೋಗಬಹುದಾಗಿತ್ತು. ಈ ಯೆಹೂದ್ಯರೊಂದಿಗೆ ಮರಳುಗಾಡಿನಲ್ಲಿತ್ತು. ಈ ಗುಡಾರವನ್ನು ನಿರ್ಮಿಸುವ ಬಗೆಯನ್ನು ದೇವರು ಮೋಶೆಗೆ ತಿಳಿಸಿಕೊಟ್ಟನು. ದೇವರು ತನಗೆ ತೋರಿಸಿದ ಆಕಾರದಂತೆಯೇ ಮೋಶೆಯು ಅದನ್ನು ನಿರ್ಮಿಸಿದನು.
|
45. ತರುವಾಯ ಇತರ ಜನಾಂಗಗಳ ನಾಡುಗಳನ್ನು ವಶಪಡಿಸಿಕೊಳ್ಳುವುದಕ್ಕಾಗಿ ಯೆಹೋಶುವನು ನಮ್ಮ ಪಿತೃಗಳನ್ನು ಮುನ್ನಡೆಸಿದನು. ನಮ್ಮ ಜನರು ಆ ದೇಶದೊಳಗೆ ಹೋದಾಗ, ದೇವರು ಇತರ ಜನರನ್ನು ಅಲ್ಲಿಂದ ಹೊರಡಿಸಿಬಿಟ್ಟನು. ನಮ್ಮ ಜನರು ಆ ಹೊಸ ದೇಶದೊಳಗೆ ಹೋದಾಗ ಈ ಗುಡಾರವನ್ನು ತಮ್ಮೊಂದಿಗೆ ತೆಗೆದುಕೊಂಡು ಹೋದರು. ನಮ್ಮ ಜನರು ಈ ಗುಡಾರವನ್ನು ತಮ್ಮ ಪಿತೃಗಳಿಂದ ಸ್ವೀಕರಿಸಿಕೊಂಡು ದಾವೀದನ ಕಾಲದವರೆಗೂ ಅದನ್ನು ಇಟ್ಟುಕೊಂಡಿದ್ದರು.
|
46. ದೇವರು ದಾವೀದನನ್ನು ಬಹಳವಾಗಿ ಮೆಚ್ಚಿಕೊಂಡನು. ‘ಯಾಕೋಬನ ದೇವರಾದ ನಿನಗಾಗಿ ಒಂದು ಆಲಯವನ್ನು ಕಟ್ಟಲು ನನಗೆ ಅವಕಾಶಕೊಡು’ ಎಂದು ದಾವೀದನು ದೇವರನ್ನು ಕೇಳಿಕೊಂಡನು.
|
48. “ಆದರೆ ಮನುಷ್ಯರು ತಮ್ಮ ಕೈಯಾರೆ ನಿರ್ಮಿಸಿದ ಮನೆಗಳಲ್ಲಿ ಮಹೋನ್ನತನು (ದೇವರು) ವಾಸಿಸುವುದಿಲ್ಲ. ಪ್ರವಾದಿಯು ಹೀಗೆ ಬರೆದಿದ್ದಾನೆ:
|
49. ‘ಪ್ರಭುವು ಹೀಗೆನ್ನುತ್ತಾನೆ,
ಪರಲೋಕವು ನನ್ನ ಸಿಂಹಾಸನ. ಭೂಮಿಯು ನನ್ನ ಪಾದಪೀಠ. ನೀವು ನನಗೋಸ್ಕರ ಯಾವ ಬಗೆಯ ಮನೆಯನ್ನು ಕಟ್ಟಬಲ್ಲಿರಿ? ನಾನು ವಿಶ್ರಮಿಸಿಕೊಳ್ಳತಕ್ಕ ಸ್ಥಳವೇ ಇಲ್ಲ! |
51. ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ!
|
52. ಜೀವಸಿದ್ದ ಪ್ರವಾದಿಗಳಲ್ಲಿ ಪ್ರತಿಯೊಬ್ಬರನ್ನೂ ನಿಮ್ಮ ಪಿತೃಗಳು ಹಿಂಸಿಸಿದರು. ನೀತಿವಂತನೊಬ್ಬನು (ಕ್ರಿಸ್ತನು) ಬರುತ್ತಾನೆಂದು ಬಹುಕಾಲದ ಹಿಂದೆಯೇ ಆ ಪ್ರವಾದಿಗಳು ತಿಳಿಸಿದ್ದರು. ಆದರೆ ನಿಮ್ಮ ಪಿತೃಗಳು ಆ ಪ್ರವಾದಿಗಳನ್ನು ಕೊಂದುಹಾಕಿದರು. ಈಗ ನೀವು ನೀತಿವಂತನಿಗೆ ವಿರುದ್ಧವಾಗಿ ತಿರುಗಿ ಆತನನ್ನು ಕೊಂದುಹಾಕಿದಿರಿ.
|
54. {ಸ್ತೆಫನನು ಕೊಲ್ಲಲ್ಪಟ್ಟನು} PS ಸ್ತೆಫನನ ಈ ಮಾತುಗಳನ್ನು ಕೇಳಿದ ಆ ಯೆಹೂದ್ಯನಾಯಕರು ಬಹಳ ಕೋಪಗೊಂಡರು. ಅವರು ರೋಷದಿಂದ ಸ್ತೆಫನನ ಮೇಲೆ ಹಲ್ಲು ಕಡಿದರು.
|
55. ಆದರೆ ಸ್ತೆಫನನು ಪವಿತ್ರಾತ್ಮಭರಿತನಾಗಿದ್ದನು. ಅವನು ಆಕಾಶದತ್ತ ಕಣ್ಣೆತ್ತಿ ನೋಡಿ, ದೇವರ ಮಹಿಮೆಯನ್ನೂ ಯೇಸುವು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ಕಂಡು,
|
56. “ಇಗೋ, ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನು (ಯೇಸು) ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ನೋಡುತ್ತಿದ್ದೇನೆ!” ಎಂದು ಹೇಳಿದನು. PEPS
|
57. ಆಗ ಯೆಹೂದ್ಯನಾಯಕರೆಲ್ಲ ಗಟ್ಟಿಯಾಗಿ ಕೂಗಿ, ತಮ್ಮ ಕಿವಿಗಳನ್ನು ಕೈಗಳಿಂದ ಮುಚ್ಚಿಕೊಂಡರು. ಅವರೆಲ್ಲರು ಸ್ತೆಫನನ ಬಳಿಗೆ ಒಟ್ಟಾಗಿ ಓಡಿಬಂದು,
|
58. ಅವನನ್ನು ಪಟ್ಟಣದಿಂದ ಹೊರಗೆ ಎಳೆದೊಯ್ದು, ಅವನು ಸಾಯುವವರೆಗೂ ಅವನ ಮೇಲೆ ಕಲ್ಲುಗಳನ್ನು ಎಸೆದರು. ಸ್ತೆಫನನ ವಿರುದ್ಧವಾಗಿ ಸುಳ್ಳು ಹೇಳಿದ ಜನರು ತಮ್ಮ ಮೇಲಂಗಿಗಳನ್ನು ಬಿಚ್ಚಿ ಸೌಲನೆಂಬ ಯುವಕನಿಗೆ ಕೊಟ್ಟು,
|
59. ಸ್ತೆಫನನಿಗೆ ಕಲ್ಲುಗಳನ್ನು ಎಸೆದರು. ಆದರೆ ಸ್ತೆಫನನು ಪ್ರಾರ್ಥಿಸುತ್ತಾ, “ಪ್ರಭುವಾದ ಯೇಸುವೇ, ನನ್ನ ಆತ್ಮವನ್ನು ಸ್ವೀಕರಿಸಿಕೊ!” ಎಂದನು.
|
60. ಅವನು ಮೊಣಕಾಲೂರಿ, “ಪ್ರಭುವೇ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡ!” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು. PE
|