1. (1-3) ಸ್ತೆಫನನ ಕೊಲೆಗೆ ಸೌಲನ ಸಮ್ಮತಿಯಿತ್ತು. ಕೆಲವು ಭಕ್ತರು ಸ್ತೆಫನನನ್ನು ಸಮಾಧಿ ಮಾಡಿದರು. ಅವರು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು. PS ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳ ಸಮುದಾಯವನ್ನು ಹಿಂಸಿಸಲು ಯೆಹೂದ್ಯರು ಅಂದೇ ಆರಂಭಿಸಿ ಅವರನ್ನು ಬಹಳವಾಗಿ ಸಂಕಟಪಡಿಸಿದರು. ಆ ಸಭೆಯನ್ನು ನಾಶಮಾಡಲು ಸೌಲನು ಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದೊಯ್ದು ಸೆರೆಮನೆಗೆ ಹಾಕಿದನು. ವಿಶ್ವಾಸಿಗಳೆಲ್ಲಾ ಜೆರುಸಲೇಮನ್ನು ಬಿಟ್ಟುಹೋದರು. ಅಪೊಸ್ತಲರು ಮಾತ್ರ ಅಲ್ಲೇ ಇದ್ದರು. ವಿಶ್ವಾಸಿಗಳು ಜುದೇಯ ಮತ್ತು ಸಮಾರ್ಯದ ಬೇರೆಬೇರೆ ಸ್ಥಳಗಳಿಗೆ ಹೊರಟುಹೋದರು.
|
4. {ವಿಶ್ವಾಸಿಗಳಿಗೆ ಹಿಂಸೆ} PS ವಿಶ್ವಾಸಿಗಳು ಎಲ್ಲೆಲ್ಲಿಯೂ ಚದರಿಹೋದರು. ವಿಶ್ವಾಸಿಗಳು ತಾವು ಹೋದ ಪ್ರತಿಯೊಂದು ಸ್ಥಳದಲ್ಲಿಯೂ ಜನರಿಗೆ ಸುವಾರ್ತೆಯನ್ನು ತಿಳಿಸಿದರು. PS
|
6. ಫಿಲಿಪ್ಪನು ಹೇಳುವುದನ್ನು ಅಲ್ಲಿನ ಜನರು ಕೇಳಿದರು. ಅವನು ಮಾಡುತ್ತಿದ್ದ ಅದ್ಭುತಕಾರ್ಯಗಳನ್ನು ನೋಡಿದರು. ಅವನು ಹೇಳಿದ ಸಂಗತಿಗಳನ್ನು ಗಮನವಿಟ್ಟು ಕೇಳಿದರು.
|
7. ಈ ಜನರಲ್ಲಿ ಅನೇಕರು ದೆವ್ವಗಳಿಂದ ಪೀಡಿತರಾಗಿದ್ದರು. ಫಿಲಿಪ್ಪನು ಆ ದೆವ್ವಗಳನ್ನು ಅವರೊಳಗಿಂದ ಹೊರಡಿಸಿದಾಗ ಅವು ಅಬ್ಬರಿಸುತ್ತಾ ಹೊರಬಂದವು. ಅಲ್ಲಿದ್ದ ಅನೇಕ ಬಲಹೀನರನ್ನು, ಕುಂಟರನ್ನು ಸಹ ಫಿಲಿಪ್ಪನು ಗುಣಪಡಿಸಿದನು.
|
9. ಆದರೆ ಆ ಪಟ್ಟಣದಲ್ಲಿ ಸಿಮೋನ ಎಂಬ ಒಬ್ಬನಿದ್ದನು. ಫಿಲಿಪ್ಪನು ಅಲ್ಲಿಗೆ ಬರುವುದಕ್ಕಿಂತ ಮೊದಲಿನಿಂದಲೂ ಸಿಮೋನನು ಮಂತ್ರತಂತ್ರಗಳನ್ನು ಮಾಡುತ್ತಿದ್ದನು. ಅವನು ತನ್ನ ತಂತ್ರಗಳಿಂದ ಸಮಾರ್ಯದ ಜನರೆಲ್ಲರನ್ನು ವಿಸ್ಮಯಗೊಳಿಸಿದ್ದನು. ಸಿಮೋನನು ತನ್ನನ್ನು ಮಹಾವ್ಯಕ್ತಿಯೆಂದು ಹೇಳಿಕೊಂಡು ಜಂಭಪಡುತ್ತಿದ್ದನು.
|
10. ಎಲ್ಲಾ ಜನರು ಅಂದರೆ ಕನಿಷ್ಠರಾದವರು ಮತ್ತು ಅತಿಮುಖ್ಯರಾದವರು ಸಿಮೋನನು ಹೇಳಿದ ಸಂಗತಿಗಳನ್ನು ನಂಬಿದ್ದರು. “ಈ ಮನುಷ್ಯನಲ್ಲಿ ‘ಮಹಾಶಕ್ತಿ’ ಎಂಬ ದೇವರ ಶಕ್ತಿಯಿದೆ!” ಎಂದು ಜನರು ಅವನ ಬಗ್ಗೆ ಹೇಳುತ್ತಿದ್ದರು.
|
11. ಸಿಮೋನನು ತನ್ನ ಮಂತ್ರತಂತ್ರಗಳಿಂದ ಜನರನ್ನು ಬಹುಕಾಲದಿಂದಲೂ ವಿಸ್ಮಯಗೊಳಿಸಿದ್ದರಿಂದ ಜನರು ಅವನ ಹಿಂಬಾಲಕರಾಗಿದ್ದರು.
|
12. ಆದರೆ ಫಿಲಿಪ್ಪನು ದೇವರ ರಾಜ್ಯದ ಬಗ್ಗೆ ಮತ್ತು ಯೇಸುಕ್ರಿಸ್ತನ ಶಕ್ತಿಯ ಬಗ್ಗೆ ಜನರಿಗೆ ಸುವಾರ್ತೆಯನ್ನು ಹೇಳಿದನು. ಗಂಡಸರು ಮತ್ತು ಹೆಂಗಸರು ಫಿಲಿಪ್ಪನು ಹೇಳಿದ್ದನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.
|
13. ಸಿಮೋನನು ಸಹ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡನು. ಸಿಮೋನನು ಫಿಲಿಪ್ಪನ ಸಮೀಪದಲ್ಲೇ ಇದ್ದನು. ಫಿಲಿಪ್ಪನು ಮಾಡಿದ ಅದ್ಭುತಕಾರ್ಯಗಳನ್ನು ಮತ್ತು ಸೂಚಕಕಾರ್ಯಗಳನ್ನು ಸಿಮೋನನು ನೋಡಿ ವಿಸ್ಮಿತನಾದನು. PEPS
|
14. ಅಪೊಸ್ತಲರು ಇನ್ನೂ ಜೆರುಸಲೇಮಿನಲ್ಲಿದ್ದರು. ಸಮಾರ್ಯದ ಜನರು ದೇವರ ವಾಕ್ಯವನ್ನು ಸ್ವೀಕರಿಸಿಕೊಂಡರೆಂಬುದು ಅವರಿಗೆ ತಿಳಿಯಿತು. ಆದ್ದರಿಂದ ಅಪೊಸ್ತಲರು ಪೇತ್ರ ಮತ್ತು ಯೋಹಾನರನ್ನು ಸಮಾರ್ಯದ ಜನರ ಬಳಿಗೆ ಕಳುಹಿಸಿದರು.
|
15. ಪೇತ್ರ ಮತ್ತು ಯೋಹಾನರು ಅಲ್ಲಿಗೆ ಬಂದು ಸಮಾರ್ಯದ ವಿಶ್ವಾಸಿಗಳಿಗೂ ಪವಿತ್ರಾತ್ಮನು ದೊರೆಯಬೇಕೆಂದು ಅವರಿಗಾಗಿ ಪ್ರಾರ್ಥಿಸಿದರು.
|
16. ಈ ಜನರು ಪ್ರಭುವಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರು. ಆದರೆ ಪವಿತ್ರಾತ್ಮನು ಅವರಲ್ಲಿ ಯಾರ ಮೇಲೆಯೂ ಇನ್ನೂ ಇಳಿದು ಬಂದಿರಲಿಲ್ಲ. ಈ ಕಾರಣದಿಂದಲೇ ಪೇತ್ರ ಮತ್ತು ಯೋಹಾನರು ಪ್ರಾರ್ಥಿಸಿದರು.
|
18. ಅಪೊಸ್ತಲರು ಜನರ ಮೇಲೆ ತಮ್ಮ ಕೈಗಳನ್ನಿಟ್ಟಾಗ ಜನರಿಗೆ ಪವಿತ್ರಾತ್ಮನು ದೊರೆತ್ತಿದ್ದನ್ನು ಸಿಮೋನನು ಕಂಡನು. ಆದ್ದರಿಂದ ಸಿಮೋನನು ಅಪೊಸ್ತಲರಿಗೆ ಹಣವನ್ನು ನೀಡುತ್ತಾ,
|
19. “ನಾನು ಯಾರ ಮೇಲೆ ಕೈಯಿಟ್ಟರೂ ಅವರಿಗೆ ಪವಿತ್ರಾತ್ಮನು ದೊರೆಯುವಂಥ ಶಕ್ತಿಯನ್ನು ನನಗೆ ಕೊಡಿರಿ” ಎಂದು ಹೇಳಿದನು. PEPS
|
20. ಪೇತ್ರನು ಸಿಮೋನನಿಗೆ, “ನೀನೂ ನಾಶವಾಗು! ನಿನ್ನ ಹಣವೂ ನಾಶವಾಗಲಿ! ದೇವರ ವರವನ್ನು ಹಣದಿಂದ ಕೊಂಡುಕೊಳ್ಳಬಹುದೆಂದು ನೀನು ಭಾವಿಸಿದೆ.
|
22. ನಿನ್ನ ಹೃದಯವನ್ನು ಮಾರ್ಪಡಿಸಿಕೊ! ನೀನು ಮಾಡಿದ ಕೆಟ್ಟಕಾರ್ಯದಿಂದ ತಿರುಗಿಕೊ. ಪ್ರಭುವಿನಲ್ಲಿ ಪ್ರಾರ್ಥಿಸು. ನೀನು ಹೀಗೆ ಆಲೋಚಿಸಿದ್ದನ್ನು ಆತನು ಕ್ಷಮಿಸಬಹುದು.
|
24. ಸಿಮೋನನು, “ನೀವಿಬ್ಬರೂ ನನಗೋಸ್ಕರ ಪ್ರಭುವಿನಲ್ಲಿ ಪ್ರಾರ್ಥಿಸಿ. ನೀವು ಹೇಳಿದ ಸಂಗತಿಗಳು ನನಗಾಗದಂತೆ ಪ್ರಾರ್ಥಿಸಿ!” ಎಂದು ಕೇಳಿಕೊಂಡನು. PEPS
|
25. ಬಳಿಕ ಆ ಇಬ್ಬರು ಅಪೊಸ್ತಲರು ತಾವು ಕಂಡ ಯೇಸುವಿನ ಕಾರ್ಯಗಳನ್ನು ಜನರಿಗೆ ತಿಳಿಸಿದರು. ಅಪೊಸ್ತಲರು ಜನರಿಗೆ ಪ್ರಭುವಿನ ಸಂದೇಶವನ್ನು ತಿಳಿಸಿದರು. ಆಮೇಲೆ ಅವರು ಜೆರುಸಲೇಮಿಗೆ ಹಿಂತಿರುಗಿದರು. ದಾರಿಯಲ್ಲಿ ಅವರು ಸಮಾರ್ಯದ ಅನೇಕ ಊರುಗಳಿಗೆ ಹೋಗಿ ಜನರಿಗೆ ಸುವಾರ್ತೆಯನ್ನು ತಿಳಿಸಿದರು. PS
|
26. {ಫಿಲಿಪ್ಪನು ಇಥಿಯೋಪಿಯದವನಿಗೆ ನೀಡಿದ ಉಪದೇಶ} PS ಪ್ರಭುವಿನ ದೂತನೊಬ್ಬನು ಫಿಲಿಪ್ಪನಿಗೆ, “ನೀನು ಸಿದ್ಧನಾಗಿ ದಕ್ಷಿಣದ ಕಡೆಗೆ ಅಂದರೆ ಜೆರುಸಲೇಮಿನಿಂದ ಗಾಜಾಕ್ಕೆ ಹೋಗುವ ಮರಳುಗಾಡಿನ ಮಾರ್ಗಕ್ಕೆ ಹೋಗು” ಎಂದು ಹೇಳಿದನು. PEPS
|
27. ಆದ್ದರಿಂದ ಫಿಲಿಪ್ಪನು ಸಿದ್ಧನಾಗಿ ಹೊರಟನು. ಇಥಿಯೋಪಿಯಾದ ಒಬ್ಬನನ್ನು ಅವನು ದಾರಿಯಲ್ಲಿ ಕಂಡನು. ಈ ಮನುಷ್ಯನು ನಪುಂಸಕನಾಗಿದ್ದನು. ಇಥಿಯೋಪಿಯದ ರಾಣಿಯಾದ ಕಂದಾಕೆಯ ಆಸ್ಥಾನದಲ್ಲಿ ಇವನು ಮುಖ್ಯಾಧಿಕಾರಿಯಾಗಿದ್ದನು. ಹಣವನ್ನೆಲ್ಲ ನೋಡಿಕೊಳ್ಳುವ ಜವಾಬ್ದಾರಿ ಇವನದೇ ಆಗಿತ್ತು. ಈ ಮನುಷ್ಯನು ಆರಾಧನೆಗಾಗಿ ಜೆರುಸಲೇಮಿಗೆ ಹೋಗಿದ್ದನು.
|
28. ಈಗ ಅವನು ತನ್ನ ಮನೆಗೆ ಮರಳಿ ಹೋಗುತ್ತಿದ್ದನು. ಅವನು ತನ್ನ ರಥದಲ್ಲಿ ಕುಳಿತುಕೊಂಡು ಯೆಶಾಯನ ಗ್ರಂಥವನ್ನು ಓದುತ್ತಿದ್ದನು. PEPS
|
30. ಅಂತೆಯೇ ಫಿಲಿಪ್ಪನು ರಥದ ಬಳಿಗೆ ಹೋದನು. ಆ ಮನುಷ್ಯನು ಓದುತ್ತಿರುವುದು ಅವನಿಗೆ ಕೇಳಿಸಿತು. ಅವನು ಯೆಶಾಯನ ಪ್ರವಾದನಾ ಗ್ರಂಥವನ್ನು ಓದುತ್ತಿದ್ದನು. ಫಿಲಿಪ್ಪನು ಅವನಿಗೆ, “ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು. PEPS
|
31. ಆ ಅಧಿಕಾರಿಯು “ನಾನು ಹೇಗೆ ಅರ್ಥಮಾಡಿಕೊಳ್ಳಲಿ? ಬೇರೆ ಯಾರಾದರೂ ನನಗೆ ಅದನ್ನು ವಿವರಿಸಬೇಕು!” ಎಂದು ಉತ್ತರಕೊಟ್ಟನು. ಬಳಿಕ, ರಥವನ್ನು ಹತ್ತಿ ತನ್ನೊಂದಿಗೆ ಕುಳಿತುಕೊಳ್ಳುವಂತೆ ಅವನು ಫಿಲಿಪ್ಪನನ್ನು ಆಹ್ವಾನಿಸಿದನು.
|
32. ಅವನು ಓದುತ್ತಿದ್ದ ಪವಿತ್ರ ಗ್ರಂಥದ ಭಾಗವು ಇಂತಿದೆ: “ವಧ್ಯಸ್ಥಾನಕ್ಕೆ ಒಯ್ದ ಕುರಿಯಂತೆ ಆತನಿದ್ದನು.
ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವ ಕುರಿಯಂತೆ ಆತನಿದ್ದನು. ಆತನು ಬಾಯಿ ತೆರೆಯಲಿಲ್ಲ. |
33. ಆತನಿಗೆ ಅವಮಾನ ಮಾಡಿದರು. ಆತನಿಗೆ ನ್ಯಾಯವು ದೊರೆಯಲಿಲ್ಲ.
ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದುಬಿಟ್ಟರಲ್ಲಾ! ಆತನ ಸಂತತಿಯವರ ಬಗ್ಗೆ ಯಾರು ಮಾತಾಡಬಲ್ಲರು?” ಯೆಶಾಯ 53:7-8 PS |
34. ಅವನು ಫಿಲಿಪ್ಪನಿಗೆ, “ದಯವಿಟ್ಟು ನನಗೆ ಹೇಳು, ಯಾವ ಪ್ರವಾದಿಯ ಬಗ್ಗೆ ಇಲ್ಲಿ ಹೇಳುತ್ತಿದ್ದಾನೆ? ಅವನು ತನ್ನ ಬಗ್ಗೆ ಹೇಳುತ್ತಿದ್ದಾನೋ ಅಥವಾ ಬೇರೊಬ್ಬನ ಬಗ್ಗೆ ಹೇಳುತ್ತಿದ್ದಾನೋ?” ಎಂದು ಕೇಳಿದನು.
|
35. ಫಿಲಿಪ್ಪನು ಪವಿತ್ರ ಗ್ರಂಥದ ಈ ಭಾಗದಿಂದಲೇ ಆರಂಭಿಸಿ ಯೇಸುವಿನ ವಿಷಯವಾದ ಸುವಾರ್ತೆಯನ್ನು ಅವನಿಗೆ ತಿಳಿಸಿದನು. PEPS
|
36. ಅವರು ಪ್ರಯಾಣ ಮಾಡುತ್ತಾ ನೀರಿದ್ದ ಒಂದು ಸ್ಥಳಕ್ಕೆ ಬಂದಾಗ ಅಧಿಕಾರಿಯು, “ಇಗೋ! ಇಲ್ಲಿ ನೀರಿದೆ! ನಾನು ದೀಕ್ಷಾಸ್ನಾನ ತೆಗೆದುಕೊಳ್ಳಲು ಏನಾದರೂ ಅಡ್ಡಿಯಿದೆಯೇ?” ಎಂದು ಫಿಲಿಪ್ಪನನ್ನು ಕೇಳಿದನು.
|
37. *ಅಪೊಸ್ತಲರ ಕಾರ್ಯಗಳ ಕೆಲವು ಪ್ರತಿಗಳಲ್ಲಿ 37 ನೇ ವಚನವನ್ನು ಸೇರಿಸಲಾಗಿದೆ: “ಫಿಲಿಪ್ಪನು, ‘ನೀನು ಪೂರ್ಣಹೃದಯದಿಂದ ನಂಬುವುದಾದರೆ ಅಡ್ಡಿಯಿಲ್ಲ’ ಎಂದು ಉತ್ತರಿಸಿದನು. ಅದಕ್ಕೆ ಅಧಿಕಾರಿಯು, “ಯೇಸುಕ್ರಿಸ್ತನೇ ದೇವರ ಮಗನೆಂದು ನಾನು ನಂಬುತ್ತೇನೆ” ಎಂದನು.
|
38. ಬಳಿಕ ಅವನು ರಥವನ್ನು ನಿಲ್ಲಿಸಬೇಕೆಂದು ಆಜ್ಞಾಪಿಸಿದನು. ಅವರಿಬ್ಬರೂ ನೀರಿನೊಳಗೆ ಇಳಿದುಹೋದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.
|
39. ಅವರು ನೀರಿನಿಂದ ಮೇಲಕ್ಕೆ ಬಂದಾಗ ಪ್ರಭುವಿನ ಆತ್ಮನಿಂದ ಫಿಲಿಪ್ಪನು ಎತ್ತಲ್ಪಟ್ಟನು. ಅವನು ಫಿಲಿಪ್ಪನನ್ನು ಮತ್ತೆಂದೂ ನೋಡಲಿಲ್ಲ. ಅವನು ಬಹಳ ಸಂತೋಷದಿಂದ ತನ್ನ ಪ್ರಯಾಣವನ್ನು ಮುಂದುವರಿಸಿದನು.
|
40. ಆದರೆ ಫಿಲಿಪ್ಪನು ಅಜೋತ್ ಎಂಬ ಪಟ್ಟಣದಲ್ಲಿ ಕಾಣಿಸಿಕೊಂಡು ಸೆಜರೇಯ ಎಂಬ ಪಟ್ಟಣಕ್ಕೆ ಹೋದನು. ಅಲ್ಲಿಗೆ ಹೋಗುವಾಗ ದಾರಿಯಲ್ಲಿ ಸಿಕ್ಕಿದ ಎಲ್ಲಾ ಊರುಗಳಲ್ಲಿಯೂ ಸುವಾರ್ತೆಯನ್ನು ಸಾರಿದನು. PE
|