ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೊಲೊಸ್ಸೆಯವರಿಗೆ
1. ನಿಮಗೆ ಸಹಾಯ ಮಾಡಲು ನಾನು ಬಹಳವಾಗಿ ಮಾಡುತ್ತಿರುವ ಪ್ರಯತ್ನ ನಿಮಗೆ ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ ಇದಲ್ಲದೆ ಲವೊದಿಕೀಯದಲ್ಲಿರುವವರಿಗೆ ಮತ್ತು ನನ್ನನ್ನು ಎಂದೂ ನೋಡಿಲ್ಲದವರಿಗೆ ಸಹ ಸಹಾಯ ಮಾಡಲು ಪ್ರಯತ್ನಿಸುತ್ತಿದ್ದೇನೆ.
2. ಅವರೆಲ್ಲರೂ ಆಂತರ್ಯದಲ್ಲಿ ಉತ್ತೇಜಿತರಾಗಿ ಪ್ರೀತಿಯಿಂದ ಒಂದಾಗಿರಬೇಕೆಂದು ಮತ್ತು ತಿಳುವಳಿಕೆಯಿಂದ ಬರುವ ದೃಢನಂಬಿಕೆಯಲ್ಲಿ ಶ್ರೀಮಂತರಾಗಿರಬೇಕೆಂದು ಆಶಿಸುತ್ತೇನೆ. ಅಂದರೆ ದೇವರ ನಿಗೂಢ ಸತ್ಯವನ್ನು ಅವರು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ಸ್ವತಃ ಕ್ರಿಸ್ತನೇ ಆ ಸತ್ಯ.
3. ಕ್ರಿಸ್ತನಲ್ಲಿ ಸರ್ವಜ್ಞಾನವು ಮತ್ತು ತಿಳುವಳಿಕೆಯು ಬಚ್ಚಿಟ್ಟಿರುವ ನಿಕ್ಷೇಪಗಳಂತಿವೆ. [PE][PS]
4. ಯಾವನೂ ನಿಮ್ಮನ್ನು ಸರಿಯೆನಿಸುವ ಸುಳ್ಳು ಮಾತುಗಳಿಂದ ಮೋಸಗೊಳಿಸದಂತೆ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ.
5. ಅಲ್ಲಿ ನಾನು ನಿಮ್ಮೊಡನೆ ಇರದಿದ್ದರೂ ನನ್ನ ಮನಸ್ಸು ನಿಮ್ಮೊಡನಿರುತ್ತದೆ. ನಿಮ್ಮ ಕ್ರಮಬದ್ಧವಾದ ನಡತೆಯನ್ನು ನೋಡಲು ಮತ್ತು ಕ್ರಿಸ್ತನಲ್ಲಿ ಇಟ್ಟಿರುವ ದೃಢನಂಬಿಕೆಯನ್ನು ಅರಿಯಲು ಬಹಳ ಸಂತೋಷಪಡುತ್ತೇನೆ. [PS]
6. {ಕ್ರಿಸ್ತನಲ್ಲಿ ನೆಲೆಗೊಂಡಿರಿ} [PS] ಪ್ರಭುವಾದ ಕ್ರಿಸ್ತ ಯೇಸುವನ್ನು ನೀವು ಸ್ವೀಕರಿಸಿಕೊಂಡಿರುವುದರಿಂದ ಆತನಲ್ಲಿ ನೆಲೆಗೊಂಡಿದ್ದು ಜೀವಿಸಿರಿ.
7. ಕ್ರಿಸ್ತನನ್ನು ಮಾತ್ರ ನೀವು ಅವಲಂಬಿಸಬೇಕು. ಜೀವವೂ ಶಕ್ತಿಯೂ ಆತನಿಂದಲೇ ಬರುತ್ತವೆ. ನಿಮಗೆ ಸತ್ಯವನ್ನು ಉಪದೇಶಿಸಲಾಗಿದೆ. ನೀವು ಆ ಸತ್ಯ ಬೋಧನೆಯಲ್ಲಿ ದೃಢವಾಗಿ ನೆಲೆಗೊಂಡಿರಬೇಕು ಮತ್ತು ದೇವರಿಗೆ ಸಲ್ಲತಕ್ಕ ಕೃತಜ್ಞತಾಸ್ತುತಿಯಿಂದ ತುಂಬಿದವರಾಗಿರಬೇಕು. [PE][PS]
8. ಯಾರೂ ನಿಮ್ಮನ್ನು ಮೋಸಕರವಾದ ಮತ್ತು ನಿರರ್ಥಕವಾದ ತತ್ವಜ್ಞಾನ ಬೋಧನೆಯಿಂದ ತಪ್ಪು ದಾರಿಗೆ ನಡೆಸದಂತೆ ಜಾಗ್ರತೆಯಿಂದಿರಿ. ಆ ತತ್ವಜ್ಞಾನಗಳು ಜನರಿಂದ ಬಂದುವೇ ಹೊರತು ಕ್ರಿಸ್ತನಿಂದಲ್ಲ. ಅವು ಈ ಲೋಕದ ಜನರ ನಿರರ್ಥಕ ತತ್ವಗಳು.
9. ದೇವರ ಸರ್ವಸಂಪೂರ್ಣತೆಯು ಕ್ರಿಸ್ತನಲ್ಲಿ ನೆಲೆಗೊಂಡಿದೆ. (ಕ್ರಿಸ್ತನು ಈ ಲೋಕದಲ್ಲಿದ್ದಾಗಲೂ ಸಹ ನೆಲೆಗೊಂಡಿತ್ತು.)
10. ನೀವೆಲ್ಲರೂ ಕ್ರಿಸ್ತನಲ್ಲಿ ಸಂಪೂರ್ಣರಾಗಿದ್ದೀರಿ. ನಿಮಗೆ ಬೇರೇನೂ ಬೇಕಿಲ್ಲ. ಕ್ರಿಸ್ತನು ಎಲ್ಲ ದೊರೆತನಗಳನ್ನು ಮತ್ತು ಅಧಿಕಾರಗಳನ್ನು ಆಳುತ್ತಾನೆ. [PE][PS]
11. ಕ್ರಿಸ್ತನಲ್ಲಿ ನೀವು ಬೇರೊಂದು ಸುನ್ನತಿಯನ್ನು ಪಡೆದಿರುವಿರಿ. ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ. ಅಂದರೆ ನಿಮ್ಮ ಪಾಪಾಧೀನಸ್ವಭಾವದಿಂದ ನಿಮಗೆ ಬಿಡುಗಡೆಯಾಯಿತು. ಇದುವೇ ಕ್ರಿಸ್ತನು ಮಾಡುವ ಸುನ್ನತಿ.
12. ನೀವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಕ್ರಿಸ್ತನೊಂದಿಗೆ ಹೂಳಲ್ಪಟ್ಟಿರಿ. ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸುವುದರ ಮೂಲಕ ತೋರಿದ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ನೀವು ಆ ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಮೇಲಕ್ಕೆ ಎದ್ದುಬಂದಿರಿ. [PE][PS]
13. ನೀವು ನಿಮ್ಮ ಪಾಪಗಳ ದೆಸೆಯಿಂದ ಮತ್ತು ನಿಮ್ಮ ಪಾಪ ಸ್ವಭಾವದ ಹಿಡಿತದಿಂದ ಇನ್ನೂ ಮುಕ್ತರಾಗದೆ ಇದ್ದುದರಿಂದ ಆತ್ಮಿಕವಾಗಿ ಸತ್ತವರಾಗಿದ್ದಿರಿ. ಆದರೆ ದೇವರು ನಿಮಗೆ ಕ್ರಿಸ್ತನೊಂದಿಗೆ ಜೀವವನ್ನು ದಯಪಾಲಿಸಿದನು. ಆತನು ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದನು.
14. ದೇವರ ನಿಯಮಗಳನ್ನು ಉಲ್ಲಂಘಿಸಿದ್ದರಿಂದ ನಾವು ಅಪರಾಧಿಗಳಾಗಿದ್ದೆವು. ನಮ್ಮ ಮೇಲೆ ಹೊರಿಸಲಾದ ದೋಷಾರೋಪಣೆಯ ಪಟ್ಟಿಯಲ್ಲಿ ನಾವು ಉಲ್ಲಂಘಿಸಿದ ಆಜ್ಞೆಗಳನ್ನೆಲ್ಲ ಲಿಖಿತಗೊಳಿಸಲಾಗಿತ್ತು. ಆದರೆ ದೇವರು ನಮ್ಮ ಅಪರಾಧಗಳನ್ನೆಲ್ಲ ಕ್ಷಮಿಸಿ ಅವುಗಳನ್ನು ಶಿಲುಬೆಗೆ ಜಡಿದನು.
15. ದೇವರು ತನಗೆ ವಿರೋಧವಾಗಿದ್ದ ದೊರೆತನಗಳನ್ನೂ ಅಧಿಕಾರಗಳನ್ನೂ ಸೋಲಿಸಿ, ಅವುಗಳನ್ನು ನಿರಾಯುಧರನ್ನಾಗಿ ಮಾಡಿ ಶಿಲುಬೆಯ ವಿಜಯೋತ್ಸವದಲ್ಲಿ ಅವುಗಳನ್ನು ಇಡೀ ಲೋಕದ ಎದುರಿನಲ್ಲಿ ಸೆರೆಯಾಳುಗಳನ್ನಾಗಿ ಮೆರವಣಿಗೆ ಮಾಡಿದನು. [PS]
16. {ಮಾನವ ನಿರ್ಮಿತ ನಿಯಮಗಳನ್ನು ಅನುಸರಿಸಬೇಡಿ} [PS] ಹೀಗಿರುವುದರಿಂದ ತಿಂದು ಕುಡಿಯುವುದರ ಬಗ್ಗೆ ಇಲ್ಲವೆ ಯೆಹೂದ್ಯರ ಪದ್ಧತಿಗಳ (ಹಬ್ಬಗಳು, ಅಮಾವಾಸ್ಯೆಯ ಆಚರಣೆಗಳು, ಸಬ್ಬತ್‌ ದಿನಗಳು) ಬಗ್ಗೆ ನಿಮಗೆ ನಿಯಮಗಳನ್ನು ರೂಪಿಸಲು ಯಾರಿಗೂ ಅವಕಾಶ ಕೊಡಬೇಡಿ.
17. ಪೂರ್ವಕಾಲದಲ್ಲಿ ಈ ಸಂಗತಿಗಳೆಲ್ಲ ಮುಂದೆ ಬರಬೇಕಾಗಿದ್ದವುಗಳ ಛಾಯೆಗಳಾಗಿದ್ದವು. ಅವುಗಳ ನಿಜರೂಪವು ಕ್ರಿಸ್ತನಲ್ಲಿ ತೋರಿಬಂದಿತು.
18. ಕೆಲವರು ದೇವದೂತರ ಪೂಜೆಯಲ್ಲಿಯೂ ಅತಿವಿನಯವಂತರಂತೆ ನಟಿಸುವುದರಲ್ಲಿಯೂ ಆಸಕ್ತರಾಗಿದ್ದಾರೆ. ಆ ಜನರು ತಾವು ಕಂಡ ದರ್ಶನಗಳ ಬಗ್ಗೆ ಯಾವಾಗಲೂ ಮಾತನಾಡುತ್ತಿರುತ್ತಾರೆ. “ನೀವು ಇಂಥಿಂಥ ಕಾರ್ಯಗಳನ್ನು ಮಾಡದಿರುವುದರಿಂದ ತಪ್ಪಿತಸ್ಥರಾಗಿದ್ದೀರಿ” ಎಂದು ಆ ಜನರು ನಿಮ್ಮ ಬಗ್ಗೆ ಹೇಳಲು ಅವಕಾಶಕೊಡಬೇಡಿ. ಅವರ ಪ್ರಾಪಂಚಿಕ ಆಲೋಚನೆಯು ಅವರನ್ನು ನಿಷ್ಕಾರಣವಾಗಿ ಗರ್ವದಿಂದ ಉಬ್ಬಿಸುತ್ತದೆ.
19. ಆ ಜನರು ತಮ್ಮನ್ನು ಕ್ರಿಸ್ತನೆಂಬ ಶಿರಸ್ಸಿನ ಅಧೀನಕ್ಕೆ ಒಳಪಡಿಸುವುದಿಲ್ಲ. ಇಡೀ ದೇಹವು ಆತನನ್ನೇ ಅವಲಂಬಿಸಿಕೊಂಡಿದೆ. ಆತನಿಂದಲೇ ದೇಹದ ಅಂಗಾಂಗಗಳು ಇತರ ಅಂಗಗಳ ಬಗ್ಗೆ ಚಿಂತಿಸುತ್ತವೆ ಮತ್ತು ಪರಸ್ಪರ ಸಹಾಯ ಮಾಡುತ್ತವೆ. ಇದರಿಂದ ದೇಹವು ಬಲಗೊಂಡು ಒಂದಾಗಿ ಕೂಡಿಸಲ್ಪಡುತ್ತದೆ. ಹೀಗೆ, ದೇವರ ಇಚ್ಛೆಯಂತೆ ದೇಹವು ಬೆಳೆಯುತ್ತದೆ. [PE][PS]
20. ನೀವು ಕ್ರಿಸ್ತನೊಂದಿಗೆ ಸತ್ತು ಪ್ರಾಪಂಚಿಕವಾದ ನಿರರ್ಥಕ ನಿಯಮಗಳಿಂದ ಬಿಡುಗಡೆ ಹೊಂದಿದ್ದೀರಿ. ಹೀಗಿದ್ದರೂ ನೀವು ಈ ಲೋಕಕ್ಕೆ ಸೇರಿದವರಂತೆ ವರ್ತಿಸುವುದೇಕೆ? ಈ ನಿಯಮಗಳನ್ನು ಏಕೆ ಅನುಸರಿಸುತ್ತಿರುವಿರಿ ಎಂಬುದೇ ನನ್ನ ಮಾತಿನ ಅರ್ಥ:
21. “ಇದನ್ನು ತಿನ್ನಬೇಡ”, “ಅದರ ರುಚಿ ನೋಡಬೇಡ”, “ಅದನ್ನು ಮುಟ್ಟಬೇಡ” ಎಂದು ಹೇಳುವುದೇಕೆ?
22. ಪ್ರಾಪಂಚಿಕ ವಿಷಯಗಳ ಕುರಿತಾದ ಈ ನಿಯಮಗಳೆಲ್ಲ ಬಳಸಿದ ಮೇಲೆ ನಾಶವಾಗುತ್ತವೆ. ಅವುಗಳು ಜನರ ಆಜ್ಞೆ ಮತ್ತು ಜನರ ಉಪದೇಶಗಳೇ ಹೊರತು ದೇವರವಲ್ಲ.
23. ಈ ನಿಯಮಗಳು ನೋಡುವುದಕ್ಕೆ ಬದ್ಧಿಯುಳ್ಳವಾಗಿವೆ. ಆದರೆ ಅತಿವಿನಯವಂತರಂತೆ ನಟಿಸಲು ಮತ್ತು ತಮ್ಮ ದೇಹಗಳನ್ನು ದಂಡಿಸಲು ಜನರನ್ನು ಪ್ರೆರೇಪಿಸುವ ಅವುಗಳು ಕೇವಲ ಮಾನವ ನಿರ್ಮಿತವಾದ ಧರ್ಮದ ಒಂದು ಭಾಗವಾಗಿವೆ. ಆದರೆ ಪಾಪಸ್ವಭಾವವು ಇಚ್ಛಿಸುವ ದುಷ್ಕೃತ್ಯಗಳನ್ನು ಮಾಡದಂತೆ ಅವು ಜನರಿಗೆ ಯಾವ ಸಹಾಯವನ್ನೂ ಮಾಡುವುದಿಲ್ಲ. [PE]
ಒಟ್ಟು 4 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 2 / 4
1 2 3 4
1 ನಿಮಗೆ ಸಹಾಯ ಮಾಡಲು ನಾನು ಬಹಳವಾಗಿ ಮಾಡುತ್ತಿರುವ ಪ್ರಯತ್ನ ನಿಮಗೆ ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ ಇದಲ್ಲದೆ ಲವೊದಿಕೀಯದಲ್ಲಿರುವವರಿಗೆ ಮತ್ತು ನನ್ನನ್ನು ಎಂದೂ ನೋಡಿಲ್ಲದವರಿಗೆ ಸಹ ಸಹಾಯ ಮಾಡಲು ಪ್ರಯತ್ನಿಸುತ್ತಿದ್ದೇನೆ. 2 ಅವರೆಲ್ಲರೂ ಆಂತರ್ಯದಲ್ಲಿ ಉತ್ತೇಜಿತರಾಗಿ ಪ್ರೀತಿಯಿಂದ ಒಂದಾಗಿರಬೇಕೆಂದು ಮತ್ತು ತಿಳುವಳಿಕೆಯಿಂದ ಬರುವ ದೃಢನಂಬಿಕೆಯಲ್ಲಿ ಶ್ರೀಮಂತರಾಗಿರಬೇಕೆಂದು ಆಶಿಸುತ್ತೇನೆ. ಅಂದರೆ ದೇವರ ನಿಗೂಢ ಸತ್ಯವನ್ನು ಅವರು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ಸ್ವತಃ ಕ್ರಿಸ್ತನೇ ಆ ಸತ್ಯ. 3 ಕ್ರಿಸ್ತನಲ್ಲಿ ಸರ್ವಜ್ಞಾನವು ಮತ್ತು ತಿಳುವಳಿಕೆಯು ಬಚ್ಚಿಟ್ಟಿರುವ ನಿಕ್ಷೇಪಗಳಂತಿವೆ. 4 ಯಾವನೂ ನಿಮ್ಮನ್ನು ಸರಿಯೆನಿಸುವ ಸುಳ್ಳು ಮಾತುಗಳಿಂದ ಮೋಸಗೊಳಿಸದಂತೆ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ. 5 ಅಲ್ಲಿ ನಾನು ನಿಮ್ಮೊಡನೆ ಇರದಿದ್ದರೂ ನನ್ನ ಮನಸ್ಸು ನಿಮ್ಮೊಡನಿರುತ್ತದೆ. ನಿಮ್ಮ ಕ್ರಮಬದ್ಧವಾದ ನಡತೆಯನ್ನು ನೋಡಲು ಮತ್ತು ಕ್ರಿಸ್ತನಲ್ಲಿ ಇಟ್ಟಿರುವ ದೃಢನಂಬಿಕೆಯನ್ನು ಅರಿಯಲು ಬಹಳ ಸಂತೋಷಪಡುತ್ತೇನೆ. ಕ್ರಿಸ್ತನಲ್ಲಿ ನೆಲೆಗೊಂಡಿರಿ 6 ಪ್ರಭುವಾದ ಕ್ರಿಸ್ತ ಯೇಸುವನ್ನು ನೀವು ಸ್ವೀಕರಿಸಿಕೊಂಡಿರುವುದರಿಂದ ಆತನಲ್ಲಿ ನೆಲೆಗೊಂಡಿದ್ದು ಜೀವಿಸಿರಿ. 7 ಕ್ರಿಸ್ತನನ್ನು ಮಾತ್ರ ನೀವು ಅವಲಂಬಿಸಬೇಕು. ಜೀವವೂ ಶಕ್ತಿಯೂ ಆತನಿಂದಲೇ ಬರುತ್ತವೆ. ನಿಮಗೆ ಸತ್ಯವನ್ನು ಉಪದೇಶಿಸಲಾಗಿದೆ. ನೀವು ಆ ಸತ್ಯ ಬೋಧನೆಯಲ್ಲಿ ದೃಢವಾಗಿ ನೆಲೆಗೊಂಡಿರಬೇಕು ಮತ್ತು ದೇವರಿಗೆ ಸಲ್ಲತಕ್ಕ ಕೃತಜ್ಞತಾಸ್ತುತಿಯಿಂದ ತುಂಬಿದವರಾಗಿರಬೇಕು. 8 ಯಾರೂ ನಿಮ್ಮನ್ನು ಮೋಸಕರವಾದ ಮತ್ತು ನಿರರ್ಥಕವಾದ ತತ್ವಜ್ಞಾನ ಬೋಧನೆಯಿಂದ ತಪ್ಪು ದಾರಿಗೆ ನಡೆಸದಂತೆ ಜಾಗ್ರತೆಯಿಂದಿರಿ. ಆ ತತ್ವಜ್ಞಾನಗಳು ಜನರಿಂದ ಬಂದುವೇ ಹೊರತು ಕ್ರಿಸ್ತನಿಂದಲ್ಲ. ಅವು ಈ ಲೋಕದ ಜನರ ನಿರರ್ಥಕ ತತ್ವಗಳು. 9 ದೇವರ ಸರ್ವಸಂಪೂರ್ಣತೆಯು ಕ್ರಿಸ್ತನಲ್ಲಿ ನೆಲೆಗೊಂಡಿದೆ. (ಕ್ರಿಸ್ತನು ಈ ಲೋಕದಲ್ಲಿದ್ದಾಗಲೂ ಸಹ ನೆಲೆಗೊಂಡಿತ್ತು.) 10 ನೀವೆಲ್ಲರೂ ಕ್ರಿಸ್ತನಲ್ಲಿ ಸಂಪೂರ್ಣರಾಗಿದ್ದೀರಿ. ನಿಮಗೆ ಬೇರೇನೂ ಬೇಕಿಲ್ಲ. ಕ್ರಿಸ್ತನು ಎಲ್ಲ ದೊರೆತನಗಳನ್ನು ಮತ್ತು ಅಧಿಕಾರಗಳನ್ನು ಆಳುತ್ತಾನೆ. 11 ಕ್ರಿಸ್ತನಲ್ಲಿ ನೀವು ಬೇರೊಂದು ಸುನ್ನತಿಯನ್ನು ಪಡೆದಿರುವಿರಿ. ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ. ಅಂದರೆ ನಿಮ್ಮ ಪಾಪಾಧೀನಸ್ವಭಾವದಿಂದ ನಿಮಗೆ ಬಿಡುಗಡೆಯಾಯಿತು. ಇದುವೇ ಕ್ರಿಸ್ತನು ಮಾಡುವ ಸುನ್ನತಿ. 12 ನೀವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಕ್ರಿಸ್ತನೊಂದಿಗೆ ಹೂಳಲ್ಪಟ್ಟಿರಿ. ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸುವುದರ ಮೂಲಕ ತೋರಿದ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ನೀವು ಆ ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಮೇಲಕ್ಕೆ ಎದ್ದುಬಂದಿರಿ. 13 ನೀವು ನಿಮ್ಮ ಪಾಪಗಳ ದೆಸೆಯಿಂದ ಮತ್ತು ನಿಮ್ಮ ಪಾಪ ಸ್ವಭಾವದ ಹಿಡಿತದಿಂದ ಇನ್ನೂ ಮುಕ್ತರಾಗದೆ ಇದ್ದುದರಿಂದ ಆತ್ಮಿಕವಾಗಿ ಸತ್ತವರಾಗಿದ್ದಿರಿ. ಆದರೆ ದೇವರು ನಿಮಗೆ ಕ್ರಿಸ್ತನೊಂದಿಗೆ ಜೀವವನ್ನು ದಯಪಾಲಿಸಿದನು. ಆತನು ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದನು. 14 ದೇವರ ನಿಯಮಗಳನ್ನು ಉಲ್ಲಂಘಿಸಿದ್ದರಿಂದ ನಾವು ಅಪರಾಧಿಗಳಾಗಿದ್ದೆವು. ನಮ್ಮ ಮೇಲೆ ಹೊರಿಸಲಾದ ದೋಷಾರೋಪಣೆಯ ಪಟ್ಟಿಯಲ್ಲಿ ನಾವು ಉಲ್ಲಂಘಿಸಿದ ಆಜ್ಞೆಗಳನ್ನೆಲ್ಲ ಲಿಖಿತಗೊಳಿಸಲಾಗಿತ್ತು. ಆದರೆ ದೇವರು ನಮ್ಮ ಅಪರಾಧಗಳನ್ನೆಲ್ಲ ಕ್ಷಮಿಸಿ ಅವುಗಳನ್ನು ಶಿಲುಬೆಗೆ ಜಡಿದನು. 15 ದೇವರು ತನಗೆ ವಿರೋಧವಾಗಿದ್ದ ದೊರೆತನಗಳನ್ನೂ ಅಧಿಕಾರಗಳನ್ನೂ ಸೋಲಿಸಿ, ಅವುಗಳನ್ನು ನಿರಾಯುಧರನ್ನಾಗಿ ಮಾಡಿ ಶಿಲುಬೆಯ ವಿಜಯೋತ್ಸವದಲ್ಲಿ ಅವುಗಳನ್ನು ಇಡೀ ಲೋಕದ ಎದುರಿನಲ್ಲಿ ಸೆರೆಯಾಳುಗಳನ್ನಾಗಿ ಮೆರವಣಿಗೆ ಮಾಡಿದನು. ಮಾನವ ನಿರ್ಮಿತ ನಿಯಮಗಳನ್ನು ಅನುಸರಿಸಬೇಡಿ 16 ಹೀಗಿರುವುದರಿಂದ ತಿಂದು ಕುಡಿಯುವುದರ ಬಗ್ಗೆ ಇಲ್ಲವೆ ಯೆಹೂದ್ಯರ ಪದ್ಧತಿಗಳ (ಹಬ್ಬಗಳು, ಅಮಾವಾಸ್ಯೆಯ ಆಚರಣೆಗಳು, ಸಬ್ಬತ್‌ ದಿನಗಳು) ಬಗ್ಗೆ ನಿಮಗೆ ನಿಯಮಗಳನ್ನು ರೂಪಿಸಲು ಯಾರಿಗೂ ಅವಕಾಶ ಕೊಡಬೇಡಿ. 17 ಪೂರ್ವಕಾಲದಲ್ಲಿ ಈ ಸಂಗತಿಗಳೆಲ್ಲ ಮುಂದೆ ಬರಬೇಕಾಗಿದ್ದವುಗಳ ಛಾಯೆಗಳಾಗಿದ್ದವು. ಅವುಗಳ ನಿಜರೂಪವು ಕ್ರಿಸ್ತನಲ್ಲಿ ತೋರಿಬಂದಿತು. 18 ಕೆಲವರು ದೇವದೂತರ ಪೂಜೆಯಲ್ಲಿಯೂ ಅತಿವಿನಯವಂತರಂತೆ ನಟಿಸುವುದರಲ್ಲಿಯೂ ಆಸಕ್ತರಾಗಿದ್ದಾರೆ. ಆ ಜನರು ತಾವು ಕಂಡ ದರ್ಶನಗಳ ಬಗ್ಗೆ ಯಾವಾಗಲೂ ಮಾತನಾಡುತ್ತಿರುತ್ತಾರೆ. “ನೀವು ಇಂಥಿಂಥ ಕಾರ್ಯಗಳನ್ನು ಮಾಡದಿರುವುದರಿಂದ ತಪ್ಪಿತಸ್ಥರಾಗಿದ್ದೀರಿ” ಎಂದು ಆ ಜನರು ನಿಮ್ಮ ಬಗ್ಗೆ ಹೇಳಲು ಅವಕಾಶಕೊಡಬೇಡಿ. ಅವರ ಪ್ರಾಪಂಚಿಕ ಆಲೋಚನೆಯು ಅವರನ್ನು ನಿಷ್ಕಾರಣವಾಗಿ ಗರ್ವದಿಂದ ಉಬ್ಬಿಸುತ್ತದೆ. 19 ಆ ಜನರು ತಮ್ಮನ್ನು ಕ್ರಿಸ್ತನೆಂಬ ಶಿರಸ್ಸಿನ ಅಧೀನಕ್ಕೆ ಒಳಪಡಿಸುವುದಿಲ್ಲ. ಇಡೀ ದೇಹವು ಆತನನ್ನೇ ಅವಲಂಬಿಸಿಕೊಂಡಿದೆ. ಆತನಿಂದಲೇ ದೇಹದ ಅಂಗಾಂಗಗಳು ಇತರ ಅಂಗಗಳ ಬಗ್ಗೆ ಚಿಂತಿಸುತ್ತವೆ ಮತ್ತು ಪರಸ್ಪರ ಸಹಾಯ ಮಾಡುತ್ತವೆ. ಇದರಿಂದ ದೇಹವು ಬಲಗೊಂಡು ಒಂದಾಗಿ ಕೂಡಿಸಲ್ಪಡುತ್ತದೆ. ಹೀಗೆ, ದೇವರ ಇಚ್ಛೆಯಂತೆ ದೇಹವು ಬೆಳೆಯುತ್ತದೆ. 20 ನೀವು ಕ್ರಿಸ್ತನೊಂದಿಗೆ ಸತ್ತು ಪ್ರಾಪಂಚಿಕವಾದ ನಿರರ್ಥಕ ನಿಯಮಗಳಿಂದ ಬಿಡುಗಡೆ ಹೊಂದಿದ್ದೀರಿ. ಹೀಗಿದ್ದರೂ ನೀವು ಈ ಲೋಕಕ್ಕೆ ಸೇರಿದವರಂತೆ ವರ್ತಿಸುವುದೇಕೆ? ಈ ನಿಯಮಗಳನ್ನು ಏಕೆ ಅನುಸರಿಸುತ್ತಿರುವಿರಿ ಎಂಬುದೇ ನನ್ನ ಮಾತಿನ ಅರ್ಥ: 21 “ಇದನ್ನು ತಿನ್ನಬೇಡ”, “ಅದರ ರುಚಿ ನೋಡಬೇಡ”, “ಅದನ್ನು ಮುಟ್ಟಬೇಡ” ಎಂದು ಹೇಳುವುದೇಕೆ? 22 ಪ್ರಾಪಂಚಿಕ ವಿಷಯಗಳ ಕುರಿತಾದ ಈ ನಿಯಮಗಳೆಲ್ಲ ಬಳಸಿದ ಮೇಲೆ ನಾಶವಾಗುತ್ತವೆ. ಅವುಗಳು ಜನರ ಆಜ್ಞೆ ಮತ್ತು ಜನರ ಉಪದೇಶಗಳೇ ಹೊರತು ದೇವರವಲ್ಲ. 23 ಈ ನಿಯಮಗಳು ನೋಡುವುದಕ್ಕೆ ಬದ್ಧಿಯುಳ್ಳವಾಗಿವೆ. ಆದರೆ ಅತಿವಿನಯವಂತರಂತೆ ನಟಿಸಲು ಮತ್ತು ತಮ್ಮ ದೇಹಗಳನ್ನು ದಂಡಿಸಲು ಜನರನ್ನು ಪ್ರೆರೇಪಿಸುವ ಅವುಗಳು ಕೇವಲ ಮಾನವ ನಿರ್ಮಿತವಾದ ಧರ್ಮದ ಒಂದು ಭಾಗವಾಗಿವೆ. ಆದರೆ ಪಾಪಸ್ವಭಾವವು ಇಚ್ಛಿಸುವ ದುಷ್ಕೃತ್ಯಗಳನ್ನು ಮಾಡದಂತೆ ಅವು ಜನರಿಗೆ ಯಾವ ಸಹಾಯವನ್ನೂ ಮಾಡುವುದಿಲ್ಲ.
ಒಟ್ಟು 4 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 2 / 4
1 2 3 4
×

Alert

×

Kannada Letters Keypad References