ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ದಾನಿಯೇಲನು
1. {ನಾಲ್ಕು ಮೃಗಗಳ ವಿಷಯವಾಗಿ ದಾನಿಯೇಲನ ಕನಸು} [PS] ಬಾಬಿಲೋನಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನಿಗೆ ಒಂದು ದರ್ಶನವಾಯಿತು. ತನ್ನ ಹಾಸಿಗೆಯ ಮೇಲೆ ಮಲಗಿರುವಾಗ ದಾನಿಯೇಲನು ಈ ದರ್ಶನಗಳನ್ನು ಕಂಡನು. ದಾನಿಯೇಲನು ತನ್ನ ಕನಸಿನಲ್ಲಿ ಕಂಡದ್ದನ್ನು ಬರೆದಿಟ್ಟನು.
2. ದಾನಿಯೇಲನು ಹೀಗೆಂದನು: “ನನಗಾದ ರಾತ್ರಿಯ ದರ್ಶನದಲ್ಲಿ, ನಾಲ್ಕು ದಿಕ್ಕಿನಿಂದ ಗಾಳಿಯು ಬೀಸುತ್ತಿತ್ತು. ಆ ಬಿರುಗಾಳಿಯು ಸಮುದ್ರವನ್ನು ಕೆರಳಿಸಿತು.
3. ನಾನು ನಾಲ್ಕು ದೊಡ್ಡ ಮೃಗಗಳನ್ನು ಕಂಡೆ. ಅದರಲ್ಲಿ ಪ್ರತಿಯೊಂದು ಮೃಗವು ಉಳಿದ ಮೃಗಗಳಿಂದ ಭಿನ್ನವಾಗಿತ್ತು. ಆ ನಾಲ್ಕು ಮೃಗಗಳು ಸಮುದ್ರದಿಂದ ಹೊರಬಂದವು. [PE][PS]
4. “ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು. ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು. ನಾನು ಈ ಮೃಗವನ್ನು ನೋಡುತ್ತಲೇ ಇರಲು ಅದರ ರೆಕ್ಕೆಗಳು ಕೀಳಲ್ಪಟ್ಟವು. ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವನ್ನು ಕೊಡಲಾಯಿತು. [PE][PS]
5. “ಆಮೇಲೆ ನಾನು ಎರಡನೆ ಮೃಗವನ್ನು ಕಂಡೆ. ಆ ಮೃಗವು ಕರಡಿಯ ಹಾಗೆ ಕಾಣಿಸಿತು. ಅದು ಒಂದು ಭಾಗವನ್ನು ಮೇಲೆತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು. ‘ಎದ್ದು ನಿನಗೆ ಬೇಕಾದಷ್ಟು ಮಾಂಸವನ್ನು ತಿನ್ನು’ ಎಂದು ಅದಕ್ಕೆ ಹೇಳಲಾಯಿತು. [PE][PS]
6. “ಆಮೇಲೆ ನಾನು ಮತ್ತೊಂದು ಮೃಗವನ್ನು ಕಂಡೆ. ಈ ಮೃಗವು ಚಿರತೆಯ ಹಾಗೆ ಕಾಣಿಸಿತು. ಆ ಚಿರತೆಗೆ ಅದರ ಬೆನ್ನಿನ ಮೇಲೆ ನಾಲ್ಕು ರೆಕ್ಕೆಗಳಿದ್ದವು. ಈ ರೆಕ್ಕೆಗಳು ಪಕ್ಷಿಗಳ ರೆಕ್ಕೆಗಳಂತಿದ್ದವು. ಈ ಮೃಗಕ್ಕೆ ನಾಲ್ಕು ತಲೆಗಳಿದ್ದವು. ಅದಕ್ಕೆ ದೊರೆತನವನ್ನು ಕೊಡಲಾಯಿತು. [PE][PS]
7. “ನನಗಾದ ರಾತ್ರಿಯ ದರ್ಶನದಲ್ಲಿ ನಾಲ್ಕನೆ ಮೃಗವನ್ನು ಕಂಡೆ. ಅದು ಅತ್ಯಂತ ಬಲಿಷ್ಠವಾಗಿತ್ತು ಮತ್ತು ಭಯಂಕರವಾಗಿತ್ತು. ಅದು ಅತಿ ಶಕ್ತಿಶಾಲಿಯಾಗಿತ್ತು. ಅದಕ್ಕೆ ದೊಡ್ಡದೊಡ್ಡ ಕಬ್ಬಿಣದ ಹಲ್ಲುಗಳಿದ್ದವು. ಈ ಪ್ರಾಣಿಯು ತಾನು ಬೇಟೆಯಾಡಿದ ಪಶುವನ್ನು ತಂಡುತುಂಡು ಮಾಡುತ್ತಾ ತಿನ್ನುತ್ತಿತ್ತು; ಮಿಕ್ಕಿದ್ದನ್ನು ಅದು ತುಳಿಯುತ್ತಿತ್ತು. ಈ ನಾಲ್ಕನೆಯ ಪ್ರಾಣಿಯು ನಾನು ಅದಕ್ಕೂ ಮುಂಚೆ ನೋಡಿದ ಮೃಗಗಳಿಗಿಂತ ಭಿನ್ನವಾಗಿತ್ತು. ಈ ಮೃಗಕ್ಕೆ ಹತ್ತು ಕೊಂಬುಗಳಿದ್ದವು. [PE][PS]
8. “ನಾನು ಆ ಕೊಂಬುಗಳನ್ನು ನೋಡುತ್ತಿರಲು, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು. ಅದರ ದೆಸೆಯಿಂದ ಮುಂಚಿನ ಕೊಂಬುಗಳಲ್ಲಿ ಮೂರು, ಬೇರುಸಹಿತ ಕೀಳಲ್ಪಟ್ಟವು. ಈ ಚಿಕ್ಕ ಕೊಂಬಿನ ಮೇಲೆ ಕಣ್ಣುಗಳಿದ್ದವು. ಈ ಕಣ್ಣುಗಳು ಮನುಷ್ಯನ ಕಣ್ಣಿನಂತಿದ್ದವು. ಈ ಚಿಕ್ಕ ಕೊಂಬಿನ ಮೇಲೆ ಒಂದು ಬಾಯಿ ಇತ್ತು; ಆ ಬಾಯಿ ಜಂಬಕೊಚ್ಚಿಕೊಳ್ಳುತ್ತಿತ್ತು.
9. “ನಾನು ನೋಡುತ್ತಿದ್ದಂತೆಯೇ, ಆಸನಗಳನ್ನು ಅವುಗಳ ಸ್ಥಳದಲ್ಲಿ ಹಾಕಲಾಯಿತು. [QBR2] ಪುರಾತನ ರಾಜನು ತನ್ನ ಆಸನದ ಮೇಲೆ ಕುಳಿತುಕೊಂಡನು. [QBR] ಆತನ ಉಡುಪು ಬಹಳ ಶುಭ್ರವಾಗಿತ್ತು. ಅದು ಹಿಮದಂತೆ ಶುಭ್ರವಾಗಿತ್ತು. [QBR2] ಆತನ ತಲೆಕೂದಲು ಶುಭ್ರವಾಗಿತ್ತು. ಅದು ಬಿಳಿಯ ಉಣ್ಣೆಯಂತೆ ಶುಭ್ರವಾಗಿತ್ತು. [QBR] ಆತನ ಆಸನವು ಬೆಂಕಿಯಿಂದ ಮಾಡಲಾಗಿತ್ತು. [QBR2] ಅದರ ಚಕ್ರಗಳು ಬೆಂಕಿಯ ಜ್ವಾಲೆಗಳಿಂದ ಮಾಡಲಾಗಿದ್ದವು. [QBR]
10. ಆ ಪುರಾತನ ರಾಜನ ಮುಂದೆ [QBR2] ಬೆಂಕಿಯ ನದಿಯೊಂದು ಹರಿಯುತ್ತಿತ್ತು. [QBR] ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು. [QBR2] ಕೋಟ್ಯಾನುಕೋಟಿ ಪರಲೋಕ ಸಮೂಹದವರು ಆತನ ಮುಂದೆ ನಿಂತಿದ್ದರು. [QBR] ನ್ಯಾಯಾಲಯವು ಪ್ರಾರಂಭವಾಗುವುದಕ್ಕೆ ಎಲ್ಲ ಸಿದ್ಧತೆಗಳು ಆಗಿದ್ದವು [QBR2] ಮತ್ತು ಪುಸ್ತಕಗಳು ತೆರೆಯಲ್ಪಟ್ಟವು. [PS]
11. “ನಾನು ನೋಡುತ್ತಲೇ ಇದ್ದುಬಿಟ್ಟೆ. ಏಕೆಂದರೆ ಆ ಚಿಕ್ಕ ಕೊಂಬು ಜಂಬ ಕೊಚ್ಚಿಕೊಳ್ಳುತ್ತಿತ್ತು. ಕೊನೆಗೆ ನಾಲ್ಕನೆ ಮೃಗವು ಕೊಲ್ಲಲ್ಪಟ್ಟಿತು. ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಲಾಯಿತು.
12. ಮಿಕ್ಕ ಮೃಗಗಳ ಅಧಿಕಾರವನ್ನು ಮತ್ತು ಆಡಳಿತವನ್ನು ಅವುಗಳಿಂದ ತೆಗೆದುಕೊಳ್ಳಲಾಯಿತು. ಆದರೆ ತಕ್ಕ ಸಮಯ ಬರುವ ತನಕ ಅವುಗಳಿಗೆ ಜೀವದಿಂದ ಇರಲು ಅವಕಾಶಕೊಡಲಾಯಿತು. [PE][PS]
13. “ನನಗಾದ ರಾತ್ರಿಯ ದರ್ಶನದಲ್ಲಿ, ನನ್ನ ಎದುರಿಗೆ ಮನುಷ್ಯಕುಮಾರನಂತಿರುವವನನ್ನು ಕಂಡೆ. ಆತನು ಆಕಾಶದಲ್ಲಿ ಮೇಘಗಳ ಮೇಲೆ ಬರುತ್ತಿದ್ದನು. ಅವನು ಆ ಪುರಾತನ ರಾಜನ ಸಮೀಪಕ್ಕೆ ಬಂದನು; ಅವನನ್ನು ಆ ಮಹಾವೃದ್ಧನ ಸನ್ನಿಧಿಗೆ ತರಲಾಯಿತು. [PE][PS]
14. “ಮನುಷ್ಯಕುಮಾರನಂತಿರುವ ಆ ವ್ಯಕ್ತಿಗೆ ದೊರೆತನ, ಮಹಿಮೆ ಮತ್ತು ಆಳುವ ಸಂಪೂರ್ಣ ಅಧಿಕಾರವನ್ನು ಕೊಡಲಾಯಿತು. ಸಕಲ ಜನರು, ಜನಾಂಗಗಳು ಮತ್ತು ಎಲ್ಲ ಭಾಷೆಯ ಜನರು ಆತನನ್ನು ಸೇವಿಸುವರು. ಆತನ ಅಧಿಕಾರವು ಶಾಶ್ವತ, ಆತನ ರಾಜ್ಯವು ಎಂದಿಗೂ ಅಳಿಯದು. [PS]
15. {ನಾಲ್ಕನೆಯ ಮೃಗದ ಬಗ್ಗೆ ಬಿದ್ದ ಕನಸಿನ ಅರ್ಥ} [PS] “ದಾನಿಯೇಲನಾದ ನಾನು ಗಲಿಬಿಲಿಗೊಳಗಾದೆ ಮತ್ತು ತೊಂದರೆಪಟ್ಟೆ, ನಾನು ಕಂಡ ದರ್ಶನಗಳು ನನ್ನನ್ನು ಮನೋವ್ಯಥೆಗೆ ಒಳಪಡಿಸಿದವು.
16. ನಾನು ಅಲ್ಲಿ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋದೆ. ಇದೆಲ್ಲದರ ಅರ್ಥವೇನೆಂದು ಅವನನ್ನು ಕೇಳಿದೆ. ಅವನು ಇವುಗಳ ಅರ್ಥವನ್ನು ವಿವರಿಸಿದನು.
17. ಅವನು, ‘ಆ ನಾಲ್ಕು ದೊಡ್ಡ ಮೃಗಗಳು ಅಂದರೆ ನಾಲ್ಕು ರಾಜ್ಯಗಳು. ಆ ರಾಜ್ಯಗಳು ಭೂಮಿಯಿಂದ ಹುಟ್ಟುವವು.
18. ಆದರೆ ದೇವರ ವಿಶೇಷ ಜನರಿಗೆ ಆ ಸಾಮ್ರಾಜ್ಯಗಳು ದೊರೆಯುವವು. ಅವರು ಆ ಸಾಮ್ರಾಜ್ಯವನ್ನು ಶಾಶ್ವತವಾಗಿ ಅನುಭವಿಸುವರು’ ಎಂದು ಹೇಳಿದನು. [PE][PS]
19. “ಆಮೇಲೆ ನಾನು, ‘ನಾಲ್ಕನೆಯ ಮೃಗ ಯಾವುದು? ಅದು ಏನನ್ನು ಸೂಚಿಸುತ್ತದೆ?’ ಎಂಬುದನ್ನು ತಿಳಿದುಕೊಳ್ಳಬಯಸಿದೆ. ನಾಲ್ಕನೆಯ ಮೃಗವು ಉಳಿದೆಲ್ಲ ಮೃಗಗಳಿಂದ ಭಿನ್ನವಾಗಿತ್ತು. ಅದು ಬಹಳ ಭಯಾನಕವಾಗಿತ್ತು. ಅದಕ್ಕೆ ಕಬ್ಬಿಣದ ಹಲ್ಲುಗಳು ಮತ್ತು ಕಂಚಿನ ಉಗುರುಗಳಿದ್ದವು. ಅದು ತಾನು ಬೇಟೆಯಾಡಿದ ಪಶುವನ್ನು ತುಂಡುತುಂಡು ಮಾಡಿ ಸಂಪೂರ್ಣವಾಗಿ ತಿಂದು ಮಿಕ್ಕಿದ್ದನ್ನು ಕಾಲಿನಿಂದ ತುಳಿದುಹಾಕುತ್ತಿತ್ತು.
20. ನಾಲ್ಕನೆಯ ಪ್ರಾಣಿಯ ತಲೆಯ ಮೇಲಿದ್ದ ಹತ್ತು ಕೊಂಬುಗಳ ಬಗ್ಗೆ ನಾನು ತಿಳಿದುಕೊಳ್ಳಬಯಸಿದೆ. ನಾನು ಅಲ್ಲಿ ಮೊಳೆತ ಚಿಕ್ಕ ಕೊಂಬಿನ ಬಗ್ಗೆ ತಿಳಿದುಕೊಳ್ಳಬಯಸಿದೆ. ಆ ಚಿಕ್ಕ ಕೊಂಬು ಅಲ್ಲಿದ್ದ ಹತ್ತು ಕೊಂಬುಗಳಲ್ಲಿ ಮೂರನ್ನು ಬೀಳಿಸಿಬಿಟ್ಟಿತು. ಈ ಚಿಕ್ಕ ಕೊಂಬು ಉಳಿದ ಕೊಂಬುಗಳಿಗಿಂತ ಕೀಳಾಗಿ ಕಂಡುಬಂತು. ಅದಕ್ಕೆ ಮನುಷ್ಯರ ಕಣ್ಣುಗಳಂತೆ ಕಣ್ಣುಗಳಿದ್ದವು. ಆ ಚಿಕ್ಕ ಕೊಂಬು ಜಂಬ ಕೊಚ್ಚಿಕೊಳ್ಳುತ್ತಿತ್ತು.
21. ನಾನು ನೋಡುತ್ತಿದ್ದಂತೆಯೇ ಈ ಚಿಕ್ಕ ಕೊಂಬು ದೇವಭಕ್ತರ ಮೇಲೆ ಬಿದ್ದು ಅವರೊಂದಿಗೆ ಯುದ್ಧಮಾಡುತ್ತಿತ್ತು. ಆ ಕೊಂಬು ಅವರ ಕೊಲೆ ಮಾಡುತ್ತಿತ್ತು.
22. ಪುರಾತನ ರಾಜನು ಬಂದು ನ್ಯಾಯತೀರಿಸುವವರೆಗೂ ಆ ಚಿಕ್ಕಕೊಂಬು ದೇವಭಕ್ತರ ಕೊಲೆ ಮಾಡುತ್ತಿತ್ತು. ಪುರಾತನ ರಾಜನು ಈ ಚಿಕ್ಕ ಕೊಂಬಿನ ಬಗ್ಗೆ ತೀರ್ಪನ್ನು ಕೊಟ್ಟನು. ಈ ತೀರ್ಪು ದೇವಭಕ್ತರ ಪರವಾಗಿತ್ತು. ಆದ್ದರಿಂದ ಅವರು ಸಾಮ್ರಾಜ್ಯವನ್ನು ಪಡೆದರು. [PE][PS]
23. “ಅವನು ನನಗೆ ಈ ರೀತಿ ವಿವರಿಸಿದನು: ‘ನಾಲ್ಕನೆಯ ಮೃಗವು ಈ ಲೋಕದಲ್ಲಿ ಉಂಟಾಗುವ ನಾಲ್ಕನೆಯ ರಾಜ್ಯ. ಇದು ಬೇರೆಲ್ಲ ರಾಜ್ಯಗಳಿಂದ ಭಿನ್ನವಾಗಿರುತ್ತದೆ. ಆ ನಾಲ್ಕನೆಯ ರಾಜ್ಯವು ಜಗತ್ತಿನ ಜನರನ್ನೆಲ್ಲ ನಾಶಗೊಳಿಸುವುದು. ಇದು ಜಗತ್ತಿನ ಎಲ್ಲ ರಾಷ್ಟ್ರಗಳನ್ನು ತುಳಿದು ಪುಡಿಪುಡಿ ಮಾಡುವುದು.
24. ಹತ್ತು ಕೊಂಬುಗಳು ಈ ನಾಲ್ಕನೆಯ ರಾಜ್ಯದ ಹತ್ತು ಜನ ಅರಸರನ್ನು ಸೂಚಿಸುತ್ತವೆ. ಆ ಹತ್ತು ಜನ ಅರಸರ ತರುವಾಯ ಮತ್ತೊಬ್ಬ ಅರಸನು ಬರುವನು. ಅವನು ತನಗಿಂತಲೂ ಮುಂಚೆ ರಾಜ್ಯಭಾರ ಮಾಡಿದ ಅರಸರಿಗಿಂತ ಭಿನ್ನನಾಗಿರುವನು. ಅವನು ಬೇರೆ ಅರಸರುಗಳಲ್ಲಿ ಮೂವರನ್ನು ಸೋಲಿಸುವನು.
25. ಈ ಪುರಾತನ ರಾಜನು ಮಹೋನ್ನತನಾದ ದೇವರ ವಿರುದ್ಧ ಮಾತನಾಡುವನು. ಆ ರಾಜನು ದೇವರ ಪರಮ ಭಕ್ತರಿಗೆ ತೊಂದರೆ ಕೊಡುವನು ಮತ್ತು ಕೊಲೆ ಮಾಡುವನು. ಆ ರಾಜನು ರೂಢಿಯಲ್ಲಿದ್ದ ಧರ್ಮವಿಧಿಗಳನ್ನು ಮಾರ್ಪಡಿಸುವ ಪ್ರಯತ್ನ ಮಾಡುವನು. ಆ ಭಕ್ತರು ಒಂದು ಕಾಲ, ಎರಡು ಕಾಲ, ಅರ್ಧಕಾಲ [*ಒಂದು ಕಾಲ … ಅರ್ಧಕಾಲ ಅಂದರೆ ಬಹುಶಃ, “ಮೂರೂವರೆ ವರ್ಷ.”] ಅವನ ಕೈವಶವಾಗಿರುವರು. [PE][PS]
26. “ ‘ಆಮೇಲೆ ಏನಾಗಬೇಕೆಂಬುದನ್ನು ನ್ಯಾಯಸಭೆಯು ನಿರ್ಣಯಿಸುವುದು. ಆ ರಾಜನ ಅಧಿಕಾರವನ್ನು ಕಸಿದುಕೊಳ್ಳಲಾಗುವುದು. ಅವನ ಸಾಮ್ರಾಜ್ಯವು ಸಂಪೂರ್ಣವಾಗಿ ಕೊನೆಗೊಳ್ಳುವುದು.
27. ಆಗ ದೇವಭಕ್ತರು ರಾಜ್ಯವನ್ನು ಆಳುವರು. ಅವರು ಸಮಸ್ತ ಭೂಮಂಡಲದ ರಾಜ್ಯಗಳ ಮೇಲೆ ಆಳ್ವಿಕೆ ಮಾಡುವರು. ಈ ಸಾಮ್ರಾಜ್ಯವು ಕೊನೆಯವರೆಗೂ ಉಳಿಯುವುದು. ಮಿಕ್ಕ ಎಲ್ಲ ರಾಜ್ಯಗಳ ಜನರು ಅವರನ್ನು ಗೌರವಿಸುವರು ಮತ್ತು ಸೇವಿಸುವರು.’ [PE][PS]
28. “ಇಲ್ಲಿಗೆ ಕನಸು ಮುಕ್ತಾಯವಾಯಿತು. ದಾನಿಯೇಲನೆಂಬ ಹೆಸರಿನ ನಾನು ಬಹಳ ಹೆದರಿದ್ದೆ. ಭಯದಿಂದ ನನ್ನ ಮುಖ ಬಿಳುಚಿ ಹೋಗಿತ್ತು. ಆದರೆ ನಾನು ನೋಡಿದ ಮತ್ತು ಕೇಳಿದ ವಿಷಯಗಳ ಬಗ್ಗೆ ಬೇರೆಯವರಿಗೆ ಹೇಳಲಿಲ್ಲ.” [PE]
ಒಟ್ಟು 12 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 7 / 12
1 2 3 4 5 6 7 8 9 10 11 12
ನಾಲ್ಕು ಮೃಗಗಳ ವಿಷಯವಾಗಿ ದಾನಿಯೇಲನ ಕನಸು 1 ಬಾಬಿಲೋನಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನಿಗೆ ಒಂದು ದರ್ಶನವಾಯಿತು. ತನ್ನ ಹಾಸಿಗೆಯ ಮೇಲೆ ಮಲಗಿರುವಾಗ ದಾನಿಯೇಲನು ಈ ದರ್ಶನಗಳನ್ನು ಕಂಡನು. ದಾನಿಯೇಲನು ತನ್ನ ಕನಸಿನಲ್ಲಿ ಕಂಡದ್ದನ್ನು ಬರೆದಿಟ್ಟನು. 2 ದಾನಿಯೇಲನು ಹೀಗೆಂದನು: “ನನಗಾದ ರಾತ್ರಿಯ ದರ್ಶನದಲ್ಲಿ, ನಾಲ್ಕು ದಿಕ್ಕಿನಿಂದ ಗಾಳಿಯು ಬೀಸುತ್ತಿತ್ತು. ಆ ಬಿರುಗಾಳಿಯು ಸಮುದ್ರವನ್ನು ಕೆರಳಿಸಿತು. 3 ನಾನು ನಾಲ್ಕು ದೊಡ್ಡ ಮೃಗಗಳನ್ನು ಕಂಡೆ. ಅದರಲ್ಲಿ ಪ್ರತಿಯೊಂದು ಮೃಗವು ಉಳಿದ ಮೃಗಗಳಿಂದ ಭಿನ್ನವಾಗಿತ್ತು. ಆ ನಾಲ್ಕು ಮೃಗಗಳು ಸಮುದ್ರದಿಂದ ಹೊರಬಂದವು. 4 “ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು. ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು. ನಾನು ಈ ಮೃಗವನ್ನು ನೋಡುತ್ತಲೇ ಇರಲು ಅದರ ರೆಕ್ಕೆಗಳು ಕೀಳಲ್ಪಟ್ಟವು. ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವನ್ನು ಕೊಡಲಾಯಿತು. 5 “ಆಮೇಲೆ ನಾನು ಎರಡನೆ ಮೃಗವನ್ನು ಕಂಡೆ. ಆ ಮೃಗವು ಕರಡಿಯ ಹಾಗೆ ಕಾಣಿಸಿತು. ಅದು ಒಂದು ಭಾಗವನ್ನು ಮೇಲೆತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು. ‘ಎದ್ದು ನಿನಗೆ ಬೇಕಾದಷ್ಟು ಮಾಂಸವನ್ನು ತಿನ್ನು’ ಎಂದು ಅದಕ್ಕೆ ಹೇಳಲಾಯಿತು. 6 “ಆಮೇಲೆ ನಾನು ಮತ್ತೊಂದು ಮೃಗವನ್ನು ಕಂಡೆ. ಈ ಮೃಗವು ಚಿರತೆಯ ಹಾಗೆ ಕಾಣಿಸಿತು. ಆ ಚಿರತೆಗೆ ಅದರ ಬೆನ್ನಿನ ಮೇಲೆ ನಾಲ್ಕು ರೆಕ್ಕೆಗಳಿದ್ದವು. ಈ ರೆಕ್ಕೆಗಳು ಪಕ್ಷಿಗಳ ರೆಕ್ಕೆಗಳಂತಿದ್ದವು. ಈ ಮೃಗಕ್ಕೆ ನಾಲ್ಕು ತಲೆಗಳಿದ್ದವು. ಅದಕ್ಕೆ ದೊರೆತನವನ್ನು ಕೊಡಲಾಯಿತು. 7 “ನನಗಾದ ರಾತ್ರಿಯ ದರ್ಶನದಲ್ಲಿ ನಾಲ್ಕನೆ ಮೃಗವನ್ನು ಕಂಡೆ. ಅದು ಅತ್ಯಂತ ಬಲಿಷ್ಠವಾಗಿತ್ತು ಮತ್ತು ಭಯಂಕರವಾಗಿತ್ತು. ಅದು ಅತಿ ಶಕ್ತಿಶಾಲಿಯಾಗಿತ್ತು. ಅದಕ್ಕೆ ದೊಡ್ಡದೊಡ್ಡ ಕಬ್ಬಿಣದ ಹಲ್ಲುಗಳಿದ್ದವು. ಈ ಪ್ರಾಣಿಯು ತಾನು ಬೇಟೆಯಾಡಿದ ಪಶುವನ್ನು ತಂಡುತುಂಡು ಮಾಡುತ್ತಾ ತಿನ್ನುತ್ತಿತ್ತು; ಮಿಕ್ಕಿದ್ದನ್ನು ಅದು ತುಳಿಯುತ್ತಿತ್ತು. ಈ ನಾಲ್ಕನೆಯ ಪ್ರಾಣಿಯು ನಾನು ಅದಕ್ಕೂ ಮುಂಚೆ ನೋಡಿದ ಮೃಗಗಳಿಗಿಂತ ಭಿನ್ನವಾಗಿತ್ತು. ಈ ಮೃಗಕ್ಕೆ ಹತ್ತು ಕೊಂಬುಗಳಿದ್ದವು. 8 “ನಾನು ಆ ಕೊಂಬುಗಳನ್ನು ನೋಡುತ್ತಿರಲು, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು. ಅದರ ದೆಸೆಯಿಂದ ಮುಂಚಿನ ಕೊಂಬುಗಳಲ್ಲಿ ಮೂರು, ಬೇರುಸಹಿತ ಕೀಳಲ್ಪಟ್ಟವು. ಈ ಚಿಕ್ಕ ಕೊಂಬಿನ ಮೇಲೆ ಕಣ್ಣುಗಳಿದ್ದವು. ಈ ಕಣ್ಣುಗಳು ಮನುಷ್ಯನ ಕಣ್ಣಿನಂತಿದ್ದವು. ಈ ಚಿಕ್ಕ ಕೊಂಬಿನ ಮೇಲೆ ಒಂದು ಬಾಯಿ ಇತ್ತು; ಆ ಬಾಯಿ ಜಂಬಕೊಚ್ಚಿಕೊಳ್ಳುತ್ತಿತ್ತು. 9 “ನಾನು ನೋಡುತ್ತಿದ್ದಂತೆಯೇ, ಆಸನಗಳನ್ನು ಅವುಗಳ ಸ್ಥಳದಲ್ಲಿ ಹಾಕಲಾಯಿತು. ಪುರಾತನ ರಾಜನು ತನ್ನ ಆಸನದ ಮೇಲೆ ಕುಳಿತುಕೊಂಡನು.
ಆತನ ಉಡುಪು ಬಹಳ ಶುಭ್ರವಾಗಿತ್ತು. ಅದು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಕೂದಲು ಶುಭ್ರವಾಗಿತ್ತು. ಅದು ಬಿಳಿಯ ಉಣ್ಣೆಯಂತೆ ಶುಭ್ರವಾಗಿತ್ತು.
ಆತನ ಆಸನವು ಬೆಂಕಿಯಿಂದ ಮಾಡಲಾಗಿತ್ತು. ಅದರ ಚಕ್ರಗಳು ಬೆಂಕಿಯ ಜ್ವಾಲೆಗಳಿಂದ ಮಾಡಲಾಗಿದ್ದವು.
10 ಆ ಪುರಾತನ ರಾಜನ ಮುಂದೆ ಬೆಂಕಿಯ ನದಿಯೊಂದು ಹರಿಯುತ್ತಿತ್ತು.
ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು. ಕೋಟ್ಯಾನುಕೋಟಿ ಪರಲೋಕ ಸಮೂಹದವರು ಆತನ ಮುಂದೆ ನಿಂತಿದ್ದರು.
ನ್ಯಾಯಾಲಯವು ಪ್ರಾರಂಭವಾಗುವುದಕ್ಕೆ ಎಲ್ಲ ಸಿದ್ಧತೆಗಳು ಆಗಿದ್ದವು ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.
11 “ನಾನು ನೋಡುತ್ತಲೇ ಇದ್ದುಬಿಟ್ಟೆ. ಏಕೆಂದರೆ ಆ ಚಿಕ್ಕ ಕೊಂಬು ಜಂಬ ಕೊಚ್ಚಿಕೊಳ್ಳುತ್ತಿತ್ತು. ಕೊನೆಗೆ ನಾಲ್ಕನೆ ಮೃಗವು ಕೊಲ್ಲಲ್ಪಟ್ಟಿತು. ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಲಾಯಿತು. 12 ಮಿಕ್ಕ ಮೃಗಗಳ ಅಧಿಕಾರವನ್ನು ಮತ್ತು ಆಡಳಿತವನ್ನು ಅವುಗಳಿಂದ ತೆಗೆದುಕೊಳ್ಳಲಾಯಿತು. ಆದರೆ ತಕ್ಕ ಸಮಯ ಬರುವ ತನಕ ಅವುಗಳಿಗೆ ಜೀವದಿಂದ ಇರಲು ಅವಕಾಶಕೊಡಲಾಯಿತು.
13 “ನನಗಾದ ರಾತ್ರಿಯ ದರ್ಶನದಲ್ಲಿ, ನನ್ನ ಎದುರಿಗೆ ಮನುಷ್ಯಕುಮಾರನಂತಿರುವವನನ್ನು ಕಂಡೆ. ಆತನು ಆಕಾಶದಲ್ಲಿ ಮೇಘಗಳ ಮೇಲೆ ಬರುತ್ತಿದ್ದನು. ಅವನು ಆ ಪುರಾತನ ರಾಜನ ಸಮೀಪಕ್ಕೆ ಬಂದನು; ಅವನನ್ನು ಆ ಮಹಾವೃದ್ಧನ ಸನ್ನಿಧಿಗೆ ತರಲಾಯಿತು. 14 “ಮನುಷ್ಯಕುಮಾರನಂತಿರುವ ಆ ವ್ಯಕ್ತಿಗೆ ದೊರೆತನ, ಮಹಿಮೆ ಮತ್ತು ಆಳುವ ಸಂಪೂರ್ಣ ಅಧಿಕಾರವನ್ನು ಕೊಡಲಾಯಿತು. ಸಕಲ ಜನರು, ಜನಾಂಗಗಳು ಮತ್ತು ಎಲ್ಲ ಭಾಷೆಯ ಜನರು ಆತನನ್ನು ಸೇವಿಸುವರು. ಆತನ ಅಧಿಕಾರವು ಶಾಶ್ವತ, ಆತನ ರಾಜ್ಯವು ಎಂದಿಗೂ ಅಳಿಯದು. ನಾಲ್ಕನೆಯ ಮೃಗದ ಬಗ್ಗೆ ಬಿದ್ದ ಕನಸಿನ ಅರ್ಥ 15 “ದಾನಿಯೇಲನಾದ ನಾನು ಗಲಿಬಿಲಿಗೊಳಗಾದೆ ಮತ್ತು ತೊಂದರೆಪಟ್ಟೆ, ನಾನು ಕಂಡ ದರ್ಶನಗಳು ನನ್ನನ್ನು ಮನೋವ್ಯಥೆಗೆ ಒಳಪಡಿಸಿದವು. 16 ನಾನು ಅಲ್ಲಿ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋದೆ. ಇದೆಲ್ಲದರ ಅರ್ಥವೇನೆಂದು ಅವನನ್ನು ಕೇಳಿದೆ. ಅವನು ಇವುಗಳ ಅರ್ಥವನ್ನು ವಿವರಿಸಿದನು. 17 ಅವನು, ‘ಆ ನಾಲ್ಕು ದೊಡ್ಡ ಮೃಗಗಳು ಅಂದರೆ ನಾಲ್ಕು ರಾಜ್ಯಗಳು. ಆ ರಾಜ್ಯಗಳು ಭೂಮಿಯಿಂದ ಹುಟ್ಟುವವು. 18 ಆದರೆ ದೇವರ ವಿಶೇಷ ಜನರಿಗೆ ಆ ಸಾಮ್ರಾಜ್ಯಗಳು ದೊರೆಯುವವು. ಅವರು ಆ ಸಾಮ್ರಾಜ್ಯವನ್ನು ಶಾಶ್ವತವಾಗಿ ಅನುಭವಿಸುವರು’ ಎಂದು ಹೇಳಿದನು. 19 “ಆಮೇಲೆ ನಾನು, ‘ನಾಲ್ಕನೆಯ ಮೃಗ ಯಾವುದು? ಅದು ಏನನ್ನು ಸೂಚಿಸುತ್ತದೆ?’ ಎಂಬುದನ್ನು ತಿಳಿದುಕೊಳ್ಳಬಯಸಿದೆ. ನಾಲ್ಕನೆಯ ಮೃಗವು ಉಳಿದೆಲ್ಲ ಮೃಗಗಳಿಂದ ಭಿನ್ನವಾಗಿತ್ತು. ಅದು ಬಹಳ ಭಯಾನಕವಾಗಿತ್ತು. ಅದಕ್ಕೆ ಕಬ್ಬಿಣದ ಹಲ್ಲುಗಳು ಮತ್ತು ಕಂಚಿನ ಉಗುರುಗಳಿದ್ದವು. ಅದು ತಾನು ಬೇಟೆಯಾಡಿದ ಪಶುವನ್ನು ತುಂಡುತುಂಡು ಮಾಡಿ ಸಂಪೂರ್ಣವಾಗಿ ತಿಂದು ಮಿಕ್ಕಿದ್ದನ್ನು ಕಾಲಿನಿಂದ ತುಳಿದುಹಾಕುತ್ತಿತ್ತು. 20 ನಾಲ್ಕನೆಯ ಪ್ರಾಣಿಯ ತಲೆಯ ಮೇಲಿದ್ದ ಹತ್ತು ಕೊಂಬುಗಳ ಬಗ್ಗೆ ನಾನು ತಿಳಿದುಕೊಳ್ಳಬಯಸಿದೆ. ನಾನು ಅಲ್ಲಿ ಮೊಳೆತ ಚಿಕ್ಕ ಕೊಂಬಿನ ಬಗ್ಗೆ ತಿಳಿದುಕೊಳ್ಳಬಯಸಿದೆ. ಆ ಚಿಕ್ಕ ಕೊಂಬು ಅಲ್ಲಿದ್ದ ಹತ್ತು ಕೊಂಬುಗಳಲ್ಲಿ ಮೂರನ್ನು ಬೀಳಿಸಿಬಿಟ್ಟಿತು. ಈ ಚಿಕ್ಕ ಕೊಂಬು ಉಳಿದ ಕೊಂಬುಗಳಿಗಿಂತ ಕೀಳಾಗಿ ಕಂಡುಬಂತು. ಅದಕ್ಕೆ ಮನುಷ್ಯರ ಕಣ್ಣುಗಳಂತೆ ಕಣ್ಣುಗಳಿದ್ದವು. ಆ ಚಿಕ್ಕ ಕೊಂಬು ಜಂಬ ಕೊಚ್ಚಿಕೊಳ್ಳುತ್ತಿತ್ತು. 21 ನಾನು ನೋಡುತ್ತಿದ್ದಂತೆಯೇ ಈ ಚಿಕ್ಕ ಕೊಂಬು ದೇವಭಕ್ತರ ಮೇಲೆ ಬಿದ್ದು ಅವರೊಂದಿಗೆ ಯುದ್ಧಮಾಡುತ್ತಿತ್ತು. ಆ ಕೊಂಬು ಅವರ ಕೊಲೆ ಮಾಡುತ್ತಿತ್ತು. 22 ಪುರಾತನ ರಾಜನು ಬಂದು ನ್ಯಾಯತೀರಿಸುವವರೆಗೂ ಆ ಚಿಕ್ಕಕೊಂಬು ದೇವಭಕ್ತರ ಕೊಲೆ ಮಾಡುತ್ತಿತ್ತು. ಪುರಾತನ ರಾಜನು ಈ ಚಿಕ್ಕ ಕೊಂಬಿನ ಬಗ್ಗೆ ತೀರ್ಪನ್ನು ಕೊಟ್ಟನು. ಈ ತೀರ್ಪು ದೇವಭಕ್ತರ ಪರವಾಗಿತ್ತು. ಆದ್ದರಿಂದ ಅವರು ಸಾಮ್ರಾಜ್ಯವನ್ನು ಪಡೆದರು. 23 “ಅವನು ನನಗೆ ಈ ರೀತಿ ವಿವರಿಸಿದನು: ‘ನಾಲ್ಕನೆಯ ಮೃಗವು ಈ ಲೋಕದಲ್ಲಿ ಉಂಟಾಗುವ ನಾಲ್ಕನೆಯ ರಾಜ್ಯ. ಇದು ಬೇರೆಲ್ಲ ರಾಜ್ಯಗಳಿಂದ ಭಿನ್ನವಾಗಿರುತ್ತದೆ. ಆ ನಾಲ್ಕನೆಯ ರಾಜ್ಯವು ಜಗತ್ತಿನ ಜನರನ್ನೆಲ್ಲ ನಾಶಗೊಳಿಸುವುದು. ಇದು ಜಗತ್ತಿನ ಎಲ್ಲ ರಾಷ್ಟ್ರಗಳನ್ನು ತುಳಿದು ಪುಡಿಪುಡಿ ಮಾಡುವುದು. 24 ಹತ್ತು ಕೊಂಬುಗಳು ಈ ನಾಲ್ಕನೆಯ ರಾಜ್ಯದ ಹತ್ತು ಜನ ಅರಸರನ್ನು ಸೂಚಿಸುತ್ತವೆ. ಆ ಹತ್ತು ಜನ ಅರಸರ ತರುವಾಯ ಮತ್ತೊಬ್ಬ ಅರಸನು ಬರುವನು. ಅವನು ತನಗಿಂತಲೂ ಮುಂಚೆ ರಾಜ್ಯಭಾರ ಮಾಡಿದ ಅರಸರಿಗಿಂತ ಭಿನ್ನನಾಗಿರುವನು. ಅವನು ಬೇರೆ ಅರಸರುಗಳಲ್ಲಿ ಮೂವರನ್ನು ಸೋಲಿಸುವನು. 25 ಈ ಪುರಾತನ ರಾಜನು ಮಹೋನ್ನತನಾದ ದೇವರ ವಿರುದ್ಧ ಮಾತನಾಡುವನು. ಆ ರಾಜನು ದೇವರ ಪರಮ ಭಕ್ತರಿಗೆ ತೊಂದರೆ ಕೊಡುವನು ಮತ್ತು ಕೊಲೆ ಮಾಡುವನು. ಆ ರಾಜನು ರೂಢಿಯಲ್ಲಿದ್ದ ಧರ್ಮವಿಧಿಗಳನ್ನು ಮಾರ್ಪಡಿಸುವ ಪ್ರಯತ್ನ ಮಾಡುವನು. ಆ ಭಕ್ತರು ಒಂದು ಕಾಲ, ಎರಡು ಕಾಲ, ಅರ್ಧಕಾಲ *ಒಂದು ಕಾಲ … ಅರ್ಧಕಾಲ ಅಂದರೆ ಬಹುಶಃ, “ಮೂರೂವರೆ ವರ್ಷ.” ಅವನ ಕೈವಶವಾಗಿರುವರು. 26 “ ‘ಆಮೇಲೆ ಏನಾಗಬೇಕೆಂಬುದನ್ನು ನ್ಯಾಯಸಭೆಯು ನಿರ್ಣಯಿಸುವುದು. ಆ ರಾಜನ ಅಧಿಕಾರವನ್ನು ಕಸಿದುಕೊಳ್ಳಲಾಗುವುದು. ಅವನ ಸಾಮ್ರಾಜ್ಯವು ಸಂಪೂರ್ಣವಾಗಿ ಕೊನೆಗೊಳ್ಳುವುದು. 27 ಆಗ ದೇವಭಕ್ತರು ರಾಜ್ಯವನ್ನು ಆಳುವರು. ಅವರು ಸಮಸ್ತ ಭೂಮಂಡಲದ ರಾಜ್ಯಗಳ ಮೇಲೆ ಆಳ್ವಿಕೆ ಮಾಡುವರು. ಈ ಸಾಮ್ರಾಜ್ಯವು ಕೊನೆಯವರೆಗೂ ಉಳಿಯುವುದು. ಮಿಕ್ಕ ಎಲ್ಲ ರಾಜ್ಯಗಳ ಜನರು ಅವರನ್ನು ಗೌರವಿಸುವರು ಮತ್ತು ಸೇವಿಸುವರು.’ 28 “ಇಲ್ಲಿಗೆ ಕನಸು ಮುಕ್ತಾಯವಾಯಿತು. ದಾನಿಯೇಲನೆಂಬ ಹೆಸರಿನ ನಾನು ಬಹಳ ಹೆದರಿದ್ದೆ. ಭಯದಿಂದ ನನ್ನ ಮುಖ ಬಿಳುಚಿ ಹೋಗಿತ್ತು. ಆದರೆ ನಾನು ನೋಡಿದ ಮತ್ತು ಕೇಳಿದ ವಿಷಯಗಳ ಬಗ್ಗೆ ಬೇರೆಯವರಿಗೆ ಹೇಳಲಿಲ್ಲ.”
ಒಟ್ಟು 12 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 7 / 12
1 2 3 4 5 6 7 8 9 10 11 12
×

Alert

×

Kannada Letters Keypad References