1. {ಯೆಹೋವನನ್ನು ಸ್ಮರಿಸಿರಿ} PS “ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿರಿ. ಆತನು ಹೇಳಿದವುಗಳನ್ನೆಲ್ಲ ಮಾಡಿರಿ. ನೀವು ಕಟ್ಟಳೆಗಳಿಗೆ, ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ಯಾವಾಗಲೂ ವಿಧೇಯರಾಗಿರಬೇಕು.
|
2. ನಿಮಗೆ ಉಪದೇಶ ಮಾಡುವುದಕ್ಕಾಗಿ ನಿಮ್ಮ ದೇವರಾದ ಯೆಹೋವನು ಮಾಡಿದ ಮಹತ್ಕಾರ್ಯಗಳನ್ನು ನೆನಪುಮಾಡಿರಿ. ಆತನ ಕಾರ್ಯಗಳನ್ನು ನೋಡಿದವರು ನೀವೇ ಹೊರತು ನಿಮ್ಮ ಮಕ್ಕಳಲ್ಲ. ಆತನು ಎಂಥಾ ಶಕ್ತಿಶಾಲಿ ಎಂದು ನೀವು ತಿಳಿದಿದ್ದೀರಿ.
|
3. ಆ ಮಹತ್ಕಾರ್ಯಗಳನ್ನು ನೋಡಿದವರು ನೀವೇ ಹೊರತು ನಿಮ್ಮ ಮಕ್ಕಳಲ್ಲ. ಈಜಿಪ್ಟಿನಲ್ಲಿ ಫರೋಹನಿಗೂ ಅವನ ಸಮಸ್ತ ಪ್ರಜೆಗಳಿಗೂ ಮಾಡಿದ್ದನ್ನು ನೀವು ನೋಡಿದ್ದೀರಿ.
|
4. ಯೆಹೋವನು ಈಜಿಪ್ಟಿನ ಸೈನಿಕರಿಗೂ ಅವರ ಕುದುರೆ ರಥಗಳಿಗೂ ಮಾಡಿದ್ದನ್ನು ನೋಡಿದವರು ನೀವೇ ಹೊರತು ನಿಮ್ಮ ಮಕ್ಕಳಲ್ಲ. ಅವರು ನಿಮ್ಮನ್ನು ಓಡಿಸಿಕೊಂಡು ಬರುತ್ತಿದ್ದರು. ಆದರೆ ಯೆಹೋವನು ಅವರನ್ನು ಸಮುದ್ರದ ನೀರಿನಲ್ಲಿ ಮುಳುಗಿಹೋಗುವಂತೆ ಮಾಡಿದುದ್ದನ್ನು ನೋಡಿದ್ದೀರಿ ಮತ್ತು ಅವರು ಸಂಪೂರ್ಣವಾಗಿ ನಾಶವಾಗುವುದನ್ನು ನೋಡಿದ್ದೀರಿ.
|
5. ನೀವು ಈ ಸ್ಥಳಕ್ಕೆ ಬರುವತನಕ ನಿಮ್ಮ ದೇವರಾದ ಯೆಹೋವನು ನಿಮಗೋಸ್ಕರ ಮರುಭೂಮಿಯಲ್ಲಿ ಮಾಡಿದ ಎಲ್ಲಾ ಅದ್ಭುತಕಾರ್ಯಗಳನ್ನು ನೋಡಿದವರು, ನೀವೇ ಹೊರತು ನಿಮ್ಮ ಮಕ್ಕಳಲ್ಲ.
|
6. ರೂಬೇನ್ ಕುಲದ ಎಲೀಯಾಬನ ಮಕ್ಕಳಾದ ದಾತಾನನಿಗೆ ಮತ್ತು ಅಬೀರಾಮನಿಗೆ ಯೆಹೋವನು ಮಾಡಿದ್ದನ್ನು ನೀವೇ ನೋಡಿದ್ದೀರಿ. ನಿಮ್ಮ ಕಣ್ಣಮುಂದೆಯೇ ಭೂಮಿಯು ಬಾಯಿ ತೆರೆದು ಅವರನ್ನು, ಅವರ ಹೆಂಡತಿಮಕ್ಕಳನ್ನು, ಅವರ ಗುಡಾರವನ್ನು, ಸೇವಕರನ್ನು, ಅವರ ಪಶುಗಳನ್ನು ನುಂಗಿದ್ದನ್ನು ನೋಡಿದವರು ನೀವೇ ಹೊರತು ನಿಮ್ಮ ಮಕ್ಕಳಲ್ಲ.
|
8. “ಆದ್ದರಿಂದ ನಾನು ನಿಮಗೆ ನೀವು ಎಲ್ಲಾ ಕಟ್ಟಳೆಗಳಿಗೆ ವಿಧೇಯರಾಗಿ ನಡೆಯಬೇಕು; ಆಗ ನೀವು ಬಲವನ್ನು ಹೊಂದುವಿರಿ; ಜೋರ್ಡನ್ ನದಿಯನ್ನು ದಾಟಿ ದೇವರು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ.
|
9. ಆ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ. ಆ ದೇಶವು ಎಲ್ಲಾ ಒಳ್ಳೆಯ ವಸ್ತುಗಳಿಂದ ತುಂಬಿದೆ. ಆ ದೇಶವನ್ನು ನಿಮ್ಮ ಪೂರ್ವಿಕರಿಗೆ ಕೊಡುವುದಾಗಿ ದೇವರು ವಾಗ್ದಾನ ಮಾಡಿದ್ದಾನೆ.
|
10. ನಿಮಗೆ ದೊರಕಲಿರುವ ದೇಶವು ನೀವು ಹೊರಟುಬಂದ ಈಜಿಪ್ಟ್ ದೇಶದಂತಿಲ್ಲ. ಈಜಿಪ್ಟಿನಲ್ಲಿ ನೀವು ಬಿತ್ತನೆ ಮಾಡಿದ ಮೇಲೆ ನೀರನ್ನು ಹಾಯಿಸಲು ನಿಮ್ಮ ಕಾಲುಗಳನ್ನು ಬಳಸುತ್ತಿದ್ದಿರಿ. ನಿಮ್ಮ ತರಕಾರಿ ತೋಟಗಳಿಗೆ ನೀರು ಹಾಯಿಸುವಂತೆಯೇ ನಿಮ್ಮ ಗದ್ದೆಗಳಿಗೂ ನೀರನ್ನು ಹಾಯಿಸುತ್ತಿದ್ದಿರಿ.
|
11. ನಿಮಗೆ ಶೀಘ್ರದಲ್ಲಿಯೇ ದೊರಕಲಿರುವ ಭೂಮಿಯಲ್ಲಿ ಹಾಗಲ್ಲ. ಅದು ಬೆಟ್ಟತಗ್ಗುಗಳ ಪ್ರಾಂತ್ಯ; ಮಳೆಯ ನೀರು ಭೂಮಿಯನ್ನು ತೊಯಿಸುತ್ತದೆ.
|
12. ನಿಮ್ಮ ದೇವರಾದ ಯೆಹೋವನು ಆ ಭೂಮಿಯನ್ನು ಕಾಯುತ್ತಾನೆ. ಆ ದೇಶವನ್ನು ವರ್ಷದ ಪ್ರಾರಂಭದಿಂದ ಕೊನೆಯ ತನಕ ಪರಿಪಾಲಿಸುತ್ತಾನೆ. PEPS
|
13. “ಯೆಹೋವನು ಹೀಗೆನ್ನುತ್ತಾನೆ: ‘ಇಂದು ನಾನು ನಿಮಗೆ ಕೊಟ್ಟ ಆಜ್ಞೆಗಳನ್ನೆಲ್ಲ ಗಮನವಿಟ್ಟು ಕೇಳಿರಿ: ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಆತನ ಸೇವೆ ಮಾಡಬೇಕು. ಹೀಗೆ ಮಾಡಿದರೆ
|
14. ಕಾಲಕಾಲಕ್ಕೆ ಸರಿಯಾಗಿ ನಿಮ್ಮ ದೇಶಕ್ಕೆ ನಾನು ಮಳೆಯನ್ನು ಕಳುಹಿಸುತ್ತೇನೆ. ಹಿಂಗಾರು, ಮುಂಗಾರು ಮಳೆ ತಕ್ಕ ಸಮಯದಲ್ಲಿ ಬೀಳುವುದು. ಆಗ ನೀವು ನಿಮ್ಮ ಧಾನ್ಯಗಳನ್ನು, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಶೇಖರಿಸುವಿರಿ.
|
15. ನಿಮ್ಮ ಹೊಲಗಳಲ್ಲಿ ಮತ್ತು ನಿಮ್ಮ ಪಶುಗಳಿಗೆ ಹುಲ್ಲು ಹುಲುಸಾಗಿ ಬೆಳೆಯುವಂತೆ ಮಾಡುವೆನು. ನಿಮಗೆ ಆಹಾರವು ಸಮೃದ್ಧಿಕರವಾಗಿರುವುದು.’ PEPS
|
17. ಇಲ್ಲವಾದರೆ, ಯೆಹೋವನು ನಿಮ್ಮ ಮೇಲೆ ಬಹಳ ಕೋಪಗೊಳ್ಳುವನು; ಆಕಾಶವನ್ನು ಮುಚ್ಚಿ ಮಳೆಬೀಳದಂತೆ ಮಾಡುವನು. ಆಗ ಹೊಲದಲ್ಲಿ ಧಾನ್ಯ ಬೆಳೆಯುವುದಿಲ್ಲ. ಆಗ ಆತನು ಕೊಡುವ ಒಳ್ಳೆಯ ದೇಶದಲ್ಲಿಯೇ ಊಟಕ್ಕಿಲ್ಲದೆ ಸಾಯುವಿರಿ. PEPS
|
18. “ನಾನು ಹೇಳಿದ ಆಜ್ಞೆಗಳನ್ನು ಯಾವಾಗಲೂ ಜ್ಞಾಪಕದಲ್ಲಿಡಿರಿ. ಅದನ್ನು ನಿಮ್ಮ ಹೃದಯದಲ್ಲಿಡಿರಿ. ಅವುಗಳನ್ನು ಬರೆದು ಕೈಗಳಲ್ಲಿ ಮತ್ತು ಹಣೆಯ ಮೇಲೆ ಕಟ್ಟಿರಿ. ಇದು ನಿಮಗೆ ಜ್ಞಾಪಕ ಕೊಡುವುದು.
|
19. ಈ ಕಟ್ಟಳೆಗಳನ್ನು ನಿಮ್ಮ ಮಕ್ಕಳಿಗೆ ಬೋಧಿಸಿರಿ. ಅವುಗಳ ವಿಷಯವಾಗಿ ನೀವು ನಿಮ್ಮ ಮನೆಗಳಲ್ಲಿ ಕುಳಿತಿರುವಾಗ, ದಾರಿಯಲ್ಲಿ ನಡೆಯುತ್ತಿರುವಾಗ, ಮಲಗುವಾಗ, ಏಳುವಾಗ ನೀವು ಮಾತನಾಡುತ್ತಾ ಇರಬೇಕು.
|
21. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಲ್ಪಟ್ಟ ದೇಶದಲ್ಲಿ ಆಗ ನೀವು ಮತ್ತು ನಿಮ್ಮ ಮಕ್ಕಳು ಬಹುಕಾಲ ಬಾಳುವಿರಿ. ಆಕಾಶವು ಭೂಮಿಯ ಮೇಲೆ ಎಷ್ಟು ಕಾಲವಿರುವುದೋ ಅಷ್ಟುಕಾಲ ನೀವು ಬದುಕುವಿರಿ. PEPS
|
22. “ಅನುಸರಿಸಬೇಕೆಂದು ಹೇಳುವ ಪ್ರತಿಯೊಂದು ಕಟ್ಟಳೆಗಳಿಗೆ ವಿಧೇಯರಾಗಿರಿ. ನಿಮ್ಮ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲಿ ನಡೆದು ಆತನಿಗೆ ನಂಬಿಗಸ್ತರಾಗಿರಿ.
|
23. ಆಗ ನೀವು ಹೋಗುವ ದೇಶದಲ್ಲಿ ವಾಸಿಸುವ ಜನರನ್ನು ಯೆಹೋವನಾದ ನಾನು ಹೊಡೆದೋಡಿಸುವೆನು. ಆ ಜನಾಂಗ ನಿಮಗಿಂತಲೂ ದೊಡ್ಡದು ಮತ್ತು ಬಲಿಷ್ಠವಾದದ್ದು.
|
24. ನೀವು ಹೆಜ್ಜೆಯಿಡುವ ಭೂಮಿಯೆಲ್ಲಾ ನಿಮ್ಮದಾಗುವುದು. ದಕ್ಷಿಣದ ಮರುಭೂಮಿಯಿಂದ ಹಿಡಿದು ಉತ್ತರದ ಲೆಬನೋನಿನ ತನಕ, ಪೂರ್ವದಲ್ಲಿರುವ ಯೂಫ್ರೇಟೀಸ್ ನದಿಯಿಂದ ಪಶ್ಟಿಮದ ಭೂಮಧ್ಯಸಮುದ್ರ ತೀರದ ತನಕ ವಿಸ್ತಾರವಾಗಿದೆ.
|
25. ನಿಮ್ಮ ವಿರುದ್ಧವಾಗಿ ಯಾರೂ ನಿಂತುಕೊಳ್ಳಲಾರರು. ನೀವು ಆಕ್ರಮಿಸಿಕೊಳ್ಳುವ ಪ್ರದೇಶದಲ್ಲೆಲ್ಲಾ ಯೆಹೋವನು ಅಲ್ಲಿಯ ಜನರು ನಿಮಗೆ ಭಯಪಡುವಂತೆ ಮಾಡುವನು. ಯೆಹೋವನು ಈ ವಾಗ್ದಾನವನ್ನು ನಿಮಗೆ ಮೊದಲೇ ಕೊಟ್ಟಿದ್ದಾನೆ. ಆಶೀರ್ವಾದ ಅಥವಾ ಶಾಪ: ಇಸ್ರೇಲರ ಆರಿಸುವಿಕೆ PS
|
28. ಆದರೆ ನೀವು ವಿಧೇಯರಾಗದಿದ್ದರೆ ಶಾಪವನ್ನು ಹೊಂದುವಿರಿ. ನಾನು ನಿಮಗೆ ಕೊಡುವ ಯೆಹೋವನ ನಿಯಮಗಳನ್ನು ಅನುಸರಿಸುವುದನ್ನು ನಿಲ್ಲಿಸಬೇಡಿರಿ. ಅನ್ಯದೇವತೆಗಳನ್ನು ಪೂಜಿಸಬೇಡಿರಿ. ನಾನು ನಿಮಗೆ ಬೋಧಿಸುತ್ತಿರುವುದು ಯೆಹೋವನ ಮಾರ್ಗದ ಕುರಿತೇ ಹೊರತು ಬೇರೆ ದೇವರುಗಳ ಕುರಿತಲ್ಲ. PEPS
|
29. “ದೇವರಾದ ಯೆಹೋವನು ನಿಮ್ಮನ್ನು ನಿಮ್ಮ ದೇಶಕ್ಕೆ ನಡೆಸುವನು. ನೀವು ಬೇಗನೆ ಅದನ್ನು ಸ್ವಾಧೀನ ಮಾಡಿಕೊಳ್ಳುವಿರಿ. ಆ ಸಮಯದಲ್ಲಿ ನೀವು ಗೆರಿಜ್ಜೀಮ್ ಬೆಟ್ಟದ ತುದಿಗೇರಿ ಅಲ್ಲಿಂದ ಆಶೀರ್ವಾದ ವಚನಗಳನ್ನು ನುಡಿಯಿರಿ. ಅನಂತರ ನೀವು ಎಬಾಲ್ ಬೆಟ್ಟದ ಮೇಲೇರಿ ಅಲ್ಲಿಂದ ಜನರಿಗೆ ಶಾಪವಚನಗಳನ್ನು ನುಡಿಯಿರಿ.
|
30. ಈ ಬೆಟ್ಟಗಳು ಜೋರ್ಡನ್ ನದಿಯ ಆಚೆ ದಡದಲ್ಲಿವೆ. ಇವು ಜೋರ್ಡನ್ ಕಣಿವೆಯಲ್ಲಿ ವಾಸವಾಗಿರುವ ಕಾನಾನ್ಯರ ಪ್ರದೇಶದಲ್ಲಿವೆ. ಈ ಬೆಟ್ಟಗಳು ಪಶ್ಚಿಮ ದಿಕ್ಕಿನಲ್ಲಿವೆ. ಗಿಲ್ಗಾಲ್ ಊರಿನ ಸಮೀಪದಲ್ಲಿರುವ ಓಕ್ ಮರಗಳಿಗೆ ಇವು ದೂರವೇನೂ ಇಲ್ಲ.
|
31. ನೀವು ಜೋರ್ಡನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ. ಈ ದೇಶವು ನಿಮ್ಮದೇ.
|
32. ಈ ದೇಶದಲ್ಲಿ ನೀವು ವಾಸಿಸುವಾಗ ನಾನು ಈ ಹೊತ್ತು ನಿಮಗೆ ಕೊಡುವ ಕಟ್ಟಳೆಗಳನ್ನೂ ವಿಧಿನಿಯಮಗಳನ್ನೂ ತಪ್ಪದೆ ಪರಿಪಾಲಿಸಬೇಕು. PE
|