1. {ಯೆಹೋವನನ್ನು ಆರಾಧಿಸುವ ಸ್ಥಳ} PS “ನಿಮಗೆ ಸಿಗುವ ಹೊಸ ದೇಶದಲ್ಲಿ ಈ ಕಟ್ಟಳೆಗಳನ್ನು ನೀವು ಅನುಸರಿಸಬೇಕು. ನೀವು ಭೂಮಿಯ ಮೇಲೆ ಜೀವಿಸುವವರೆಗೆ ಆ ಕಟ್ಟಳೆಗಳನ್ನು ತಪ್ಪದೇ ಅನುಸರಿಸಬೇಕು. ನಮ್ಮ ಯೆಹೋವನು ನಮ್ಮ ಪೂರ್ವಿಕರ ದೇವರಾಗಿದ್ದಾನೆ. ಆತನೇ ಈ ದೇಶವನ್ನು ನಿಮಗೆ ಕೊಡುತ್ತಿದ್ದಾನೆ.
|
2. ಈಗ ಆ ಪ್ರಾಂತ್ಯದಲ್ಲಿ ವಾಸಿಸುತ್ತಿರುವ ಜನರಿಂದ ತೆಗೆದುಕೊಂಡು ನಿಮಗೆ ಅದನ್ನು ಕೊಡುತ್ತಾನೆ. ಅಲ್ಲಿ ನೀವು ಹೋದಾಗ ಆ ಜನರ ವಿಗ್ರಹಾರಾಧನೆಯ ಸ್ಥಳಗಳನ್ನು ಸಂಪೂರ್ಣವಾಗಿ ಹಾಳುಮಾಡಬೇಕು. ಅವರ ಪೂಜಾಸ್ಥಳಗಳು ಎತ್ತರವಾದ ಬೆಟ್ಟಗುಡ್ಡಗಳ ಮೇಲೆಯೂ ಹಸುರಾಗಿರುವ ಮರದ ಕೆಳಗೂ ಇರುತ್ತವೆ.
|
3. ನೀವು ಅವರ ಯಜ್ಞವೇದಿಕೆಗಳನ್ನು ಪುಡಿಪುಡಿಮಾಡಿ, ಅವರ ಸ್ಮಾರಕ ಕಲ್ಲುಗಳನ್ನು ಕೆಡವಬೇಕು. ಅವರ ಅಶೇರ ಕಂಬಗಳನ್ನು ಸುಟ್ಟುಬಿಡಬೇಕು ಮತ್ತು ದೇವರುಗಳ ವಿಗ್ರಹಗಳನ್ನು ಕತ್ತರಿಸಿಹಾಕಬೇಕು. ಹೀಗೆ ನೀವು ಅವುಗಳ ಹೆಸರನ್ನು ಆ ಸ್ಥಳದಿಂದ ನಿರ್ಮೂಲ ಮಾಡಬೇಕು. PEPS
|
5. ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು.
|
6. ಅಲ್ಲಿಗೆ ನೀವು ನಿಮ್ಮ ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ನಿಮ್ಮ ಬೆಳೆಗಳಲ್ಲಿ ಮತ್ತು ಪಶುಗಳಲ್ಲಿ ದಶಾಂಶವನ್ನು, ನಿಮ್ಮ ವಿಶೇಷ ಕಾಣಿಕೆಗಳನ್ನು, ಯೆಹೋವನಿಗೆ ನೀವು ಹರಕೆ ಹೊತ್ತುಕೊಂಡ ಯಾವುದೇ ಕಾಣಿಕೆಗಳನ್ನು, ನೀವು ಕೊಡಲಿಚ್ಛಿಸುವ ಯಾವುದೇ ವಿಶೇಷ ಕಾಣಿಕೆಗಳನ್ನು, ನಿಮ್ಮ ಮಂದೆ ಮತ್ತು ಹಿಂಡುಗಳ ಚೊಚ್ಚಲುಮರಿಗಳನ್ನು ತರಬೇಕು.
|
7. ನೀವೂ ಮತ್ತು ನಿಮ್ಮ ಕುಟುಂಬಗಳವರೂ ಅಲ್ಲಿ ಒಟ್ಟಿಗೆ ಊಟ ಮಾಡಬೇಕು. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿರುವನು. ನೀವು ದುಡಿದು ಸಂಪಾದಿಸಿದ ಎಲ್ಲಾ ವಸ್ತುಗಳನ್ನು ಇತರರೊಂದಿಗೆ ಹಂಚಿಕೊಂಡು ಆ ಸ್ಥಳದಲ್ಲಿ ಆನಂದಿಸುವಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸಿ ಆ ಎಲ್ಲಾ ಒಳ್ಳೆಯವುಗಳನ್ನು ನಿಮಗೆ ಕೊಟ್ಟನೆಂದು ನೀವು ಜ್ಞಾಪಿಸಿಕೊಳ್ಳುವಿರಿ. PEPS
|
8. (8-9) “ನೀವು ಇನ್ನೂ ವಾಗ್ದಾನದ ದೇಶವನ್ನು ಪ್ರವೇಶಿಸಲಿಲ್ಲದ ಕಾರಣ ನೀವು ಯೆಹೋವನಿಗೆ ನಿಮ್ಮ ಇಷ್ಟಾನುಸಾರವಾಗಿ ಆರಾಧನೆ ಮಾಡುತ್ತಿದ್ದೀರಿ. ಆದರೆ ಇದನ್ನೇ ಮುಂದುವರಿಸಬೇಡಿ.
|
10. ನೀವು ಜೋರ್ಡನ್ ನದಿಯನ್ನು ದಾಟಿ, ಯೆಹೋವನು ನಿಮಗೆ ಕೊಡುವ ದೇಶದಲ್ಲಿ ವಾಸಿಸುವಿರಿ. ನಿಮ್ಮ ಎಲ್ಲಾ ವೈರಿಗಳಿಂದ ತಪ್ಪಿಸಿ ದೇವರು ನಿಮಗೆ ಸಮಾಧಾನವನ್ನು ಅನುಗ್ರಹಿಸುವನು; ನೀವು ಅಲ್ಲಿ ಸುರಕ್ಷಿತವಾಗಿರುವಿರಿ.
|
11. ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಆ ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು.
|
12. ಅಲ್ಲಿಗೆ ನಿಮ್ಮ ಹೆಂಡತಿ ಮಕ್ಕಳೊಂದಿಗೆ, ನಿಮ್ಮ ಸೇವಕರೊಂದಿಗೆ ಮತ್ತು ನಿಮ್ಮ ಪಟ್ಟಣದಲ್ಲಿ ಸ್ವಾಸ್ತ್ಯವನ್ನು ಹೊಂದದೆ ಇರುವ ಲೇವಿಯರೊಂದಿಗೆ ಹೋಗಿ ಯೆಹೋವನ ಸಮಕ್ಷಮದಲ್ಲಿ ಸಂತೋಷಪಡಬೇಕು.
|
14. ಯೆಹೋವನು ತನ್ನ ವಿಶೇಷವಾದ ಸ್ಥಳವನ್ನು ನಿಮ್ಮ ಕುಲಗಳವರ ಮಧ್ಯದಿಂದ ಆರಿಸಿಕೊಳ್ಳುವನು. ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ನಾನು ನಿಮಗೆ ಹೇಳಿದವುಗಳೆಲ್ಲವನ್ನು ಅದೇ ಸ್ಥಳದಲ್ಲಿ ಮಾಡಿರಿ. PEPS
|
15. “ನೀವು ನಿಮ್ಮ ಸ್ಥಳಗಳಲ್ಲಿ ವಾಸಿಸುವಾಗ ಅಲ್ಲಿರುವ ಜಿಂಕೆ, ಟಗರು ಇತ್ಯಾದಿ ಶುದ್ಧ ಪ್ರಾಣಿಗಳನ್ನು ಕೊಂದು ತಿನ್ನಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವಷ್ಟು ಮಾಂಸದಲ್ಲಿ ಎಷ್ಟುಬೇಕಾದರೂ ತಿನ್ನಿರಿ. ಶುದ್ಧರೂ ಅಶುದ್ಧರೂ ಯಾರು ಬೇಕಾದರೂ ಆ ಮಾಂಸವನ್ನು ತಿನ್ನಬಹುದು.
|
17. “ನೀವು ವಾಸಿಸುವ ಆ ಸ್ಥಳದಲ್ಲಿ ಕೆಲವನ್ನು ತಿನ್ನಕೂಡದು. ಅವು ಯಾವುವೆಂದರೆ: ದೇವರಿಗೆ ಮೀಸಲಿಟ್ಟ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಯ ಪಾಲು; ದೇವರಿಗೆ ಸಮರ್ಪಿಸಲು ಇಟ್ಟಿರುವ ಚೊಚ್ಚಲ ಪಶುಗಳು ಮತ್ತು ಹಿಂಡಿನ ಮರಿಗಳು, ನೀವು ಹರಕೆ ಹೊತ್ತುಕೊಂಡ ಕಾಣಿಕೆಗಳು ಮತ್ತು ದೇವರಿಗಾಗಿ ಮೀಸಲಿಟ್ಟಿದ್ದ ವಸ್ತುಗಳು.
|
18. ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡಿರುವ ಮತ್ತು ಆತನು ನಿಮ್ಮೊಂದಿಗಿರುವ ಆ ವಿಶೇಷ ಸ್ಥಳದಲ್ಲಿಯೇ ನೀವು ಆ ಕಾಣಿಕೆಗಳನ್ನು ತಿನ್ನಬೇಕು. ನೀವು ಅಲ್ಲಿಗೆ ನಿಮ್ಮ ಗಂಡುಹೆಣ್ಣು ಮಕ್ಕಳೊಂದಿಗೆ, ನಿಮ್ಮ ಎಲ್ಲಾ ಸೇವಕರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿ ವಾಸವಾಗಿರುವ ಲೇವಿಯರೊಂದಿಗೆ ಹೋಗಿ ನಿಮ್ಮ ದೇವರಾದ ಯೆಹೋವನೊಂದಿಗೆ ಆನಂದಿಸಿರಿ; ನೀವು ದುಡಿದು ಸಂಪಾದಿಸಿದವುಗಳನ್ನು ಅನುಭವಿಸಿರಿ.
|
19. ಆದರೆ ಯಾವಾಗಲೂ ಈ ಊಟವನ್ನು ಲೇವಿಯರೊಂದಿಗೆ ಹಂಚಿಕೊಂಡು ತಿನ್ನಬೇಕೆಂಬುದನ್ನು ಜ್ಞಾಪಕದಲ್ಲಿಡಿರಿ. ನೀವು ನಿಮ್ಮ ದೇಶದಲ್ಲಿ ವಾಸಿಸುವಷ್ಟು ಕಾಲ ಹೀಗೆ ಮಾಡಿರಿ. PEPS
|
20. (20-21) “ನಿಮ್ಮ ದೇವರಾದ ಯೆಹೋವನು ನಿಮ್ಮ ದೇಶವನ್ನು ವಿಸ್ತಾರ ಮಾಡುವನು. ಆ ಸಮಯದಲ್ಲಿ ನೀವು ಇರುವ ಸ್ಥಳಗಳು ಆತನು ತನ್ನ ಹೆಸರಿಗಾಗಿ ಆರಿಸಿದ ಸ್ಥಳದಿಂದ ತುಂಬಾ ದೂರವಿರಬಹುದು. ಆಗ ನಿಮಗೆ ಮಾಂಸ ಊಟಮಾಡಲು ಆಸೆಯಾದರೆ ನಿಮ್ಮ ಹಿಂಡಿನಿಂದಾಗಲಿ ಹಟ್ಟಿಯಿಂದಾಗಲಿ ಪ್ರಾಣಿಯನ್ನು ಕೊಂದು ತಿನ್ನಬಹುದು. ನಾನು ತಿಳಿಸುವ ರೀತಿಯಲ್ಲಿ ತಿನ್ನಿರಿ. ನಿಮಗೆ ಬೇಕಾದಾಗಲೆಲ್ಲಾ ಹೀಗೆ ಮಾಡಿರಿ.
|
22. ಜಿಂಕೆಯನ್ನಾಗಲಿ ಸಾರಂಗವನ್ನಾಗಲಿ ತಿನ್ನುವಂತೆ ನೀವು ಈ ಮಾಂಸವನ್ನು ತಿನ್ನಬಹುದು. ಶುದ್ಧರಾಗಿರುವವರೂ ಅಶುದ್ಧರಾಗಿರುವವರೂ ಈ ಮಾಂಸವನ್ನು ತಿನ್ನಬಹುದು.
|
23. ಆದರೆ ರಕ್ತವನ್ನು ಮಾತ್ರ ತಿನ್ನಬಾರದು. ಯಾಕೆಂದರೆ ರಕ್ತವು ಪ್ರಾಣಕ್ಕೆ ಆಧಾರ. ಮಾಂಸದಲ್ಲಿ ಇನ್ನೂ ಜೀವಕಣಗಳು ಇರುವುದರಿಂದ ರಕ್ತದೊಂದಿಗೆ ಮಾಂಸವನ್ನು ತಿನ್ನಬೇಡಿರಿ.
|
25. ಆದ್ದರಿಂದ ನೀವು ಅದನ್ನು ತಿನ್ನದೆ ಯೆಹೋವನು ನಿಮಗೆ ತಿಳಿಸಿದಂತೆ ಮಾಡಿರಿ. ಆಗ ನಿಮಗೂ ನಿಮ್ಮ ಸಂತತಿಯವರಿಗೂ ಶುಭ ಉಂಟಾಗುವುದು. PEPS
|
26. “ನೀವು ನಿಮ್ಮ ದೇವರಿಗೆ ವಿಶೇಷ ಕಾಣಿಕೆಗಳನ್ನು ಸಮರ್ಪಿಸಲು ಇಷ್ಟಪಟ್ಟರೆ ಆಗ ನೀವು ದೇವರು ಆರಿಸಿರುವ ಸ್ಥಳಕ್ಕೆ ಹೋಗಿ ಅಲ್ಲಿ ಅದನ್ನು ಸಮರ್ಪಿಸಿರಿ. ನಿಮ್ಮ ಸರ್ವಾಂಗಹೋಮವನ್ನೂ ಆ ಸ್ಥಳದಲ್ಲಿಯೇ ಸಮರ್ಪಿಸಬೇಕು.
|
27. ನಿಮ್ಮ ದೇವರಾದ ಯೆಹೋವನ ಯಜ್ಞವೇದಿಕೆಯ ಮೇಲೆ ನಿಮ್ಮ ಸರ್ವಾಂಗಹೋಮದ ಪಶುವಿನ ಮಾಂಸವನ್ನು ಮತ್ತು ರಕ್ತವನ್ನು ಸಮರ್ಪಿಸಬೇಕು. ನಿಮ್ಮ ಯಜ್ಞಗಳಲ್ಲಿ ರಕ್ತವನ್ನು ಬಲಿಪೀಠದಲ್ಲಿ ಸುರಿದು ಮಾಂಸವನ್ನು ನೀವು ತಿನ್ನಬಹುದು.
|
28. ಯೆಹೋವನು ಕೊಡುವ ಕಟ್ಟಳೆಗಳನ್ನು ನೀವು ಅನುಸರಿಸಿರಿ. ನಿಮ್ಮ ದೇವರಾದ ಯೆಹೋವನು ಮೆಚ್ಚುವ ಕಾರ್ಯಗಳನ್ನು ನೀವು ಮಾಡುವಾಗ ನಿಮಗೂ ನಿಮ್ಮ ಸಂತತಿಯವರಿಗೂ ಶುಭ ಉಂಟಾಗುವುದು. PEPS
|
29. “ನೀವು ಬೇರೆಯವರ ದೇಶವನ್ನು ವಶಪಡಿಸಿಕೊಳ್ಳಲು ಹೋಗುತ್ತಿದ್ದೀರಿ. ನಿಮ್ಮ ದೇವರಾದ ಯೆಹೋವನು ಆ ಜನರನ್ನು ನಿಮಗಾಗಿ ನಾಶಮಾಡುವನು. ಆ ಜನರನ್ನು ಅಲ್ಲಿಂದ ಹೊಡೆದೋಡಿಸಿ ಅವರ ಸ್ಥಳದಲ್ಲಿ ನೀವು ವಾಸಿಸುವಿರಿ.
|
30. ಅಲ್ಲಿ ವಾಸಿಸುವ ಅನ್ಯಜನರನ್ನು ನೀವು ನಾಶಮಾಡಬೇಕು. ಇಲ್ಲದಿದ್ದಲ್ಲಿ ಅವರು ನಿಮಗೆ ಉರುಲಾಗುವರು; ಅವರ ವಿಗ್ರಹಗಳನ್ನು ಪೂಜಿಸದಂತೆ ಎಚ್ಚರಿಕೆಯಿಂದಿರಿ. ಆ ಸುಳ್ಳುದೇವರುಗಳಿಗೆ ಪ್ರಾರ್ಥಿಸಬೇಡಿ. ‘ಆ ಜನರು ಆ ಸುಳ್ಳುದೇವರುಗಳನ್ನು ಪೂಜಿಸಿದ ಹಾಗೆ ನಾನೂ ಪೂಜಿಸುವೆನು’ ಎಂದು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳಬೇಡಿ!
|
31. ನಿಮ್ಮ ದೇವರಾದ ಯೆಹೋವನಿಗೆ ನೀವು ಆ ರೀತಿ ಮಾಡಬಾರದು. ಆ ರೀತಿಯಾಗಿ ಆತನನ್ನು ಆರಾಧಿಸಬಾರದು. ಯಾಕೆಂದರೆ ಅವರು ತಮ್ಮ ದೇವರೆದುರಿನಲ್ಲಿ ಅಸಹ್ಯವಾದ ಕಾರ್ಯಗಳನ್ನು ಮಾಡುತ್ತಾರೆ. ಅದನ್ನು ನಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ. ಅವರು ತಮ್ಮ ಮಕ್ಕಳನ್ನೇ ದೇವರಿಗೆ ಬಲಿ ಅರ್ಪಿಸುತ್ತಾರೆ. PEPS
|