1. {ಪಸ್ಕಹಬ್ಬ} PS “ಅಬೀಬ್ ್ನಬಮೇಲೆ ಚೆಲ್ಲಿ ಬಿಡಬೇಕು. ೆಲ್ನ ತಿನ್ನಬಾರದು. ಅದನ್ನು ನಾದ ಯೆಹೋವನಿಗೆ ಅವುಗಳನ್ನು ಸಮರ್ಪಿಸಕೂಡದು. ಅವುಗಳನ್ನು ನಿಮ್ಮತಿಂಗಳನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಆ ತಿಂಗಳಲ್ಲಿ ನಿಮ್ಮ ದೇವರಾದ ಯೆಹೋವನನ್ನು ಗೌರವಿಸುವುದಕ್ಕಾಗಿ ಪಸ್ಕಹಬ್ಬವನ್ನು ಆಚರಿಸಬೇಕು. ಯಾಕೆಂದರೆ ಆ ತಿಂಗಳಲ್ಲೇ ನಿಮ್ಮ ದೇವರಾದ ಯೆಹೋವನು ರಾತ್ರಿಯಲ್ಲಿ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು.
|
2. ನಿಮ್ಮ ದೇವರು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಪ್ರತ್ಯೇಕ ಸ್ಥಳಕ್ಕೆ ನೀವು ಹೋಗಿ ಅಲ್ಲಿ ಪಸ್ಕದ ಯಜ್ಞಾರ್ಪಣೆ ಮಾಡಿ ನಿಮ್ಮ ಯೆಹೋವನನ್ನು ಮಹಿಮೆಪಡಿಸಬೇಕು. ಅಲ್ಲಿ ದನವನ್ನಾಗಲಿ ಆಡನ್ನಾಗಲಿ ಯಜ್ಞವಾಗಿ ಅರ್ಪಿಸಬೇಕು.
|
3. ಯಜ್ಞ ಪಶುವಿನೊಂದಿಗೆ ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನ ತಿನ್ನಬೇಕು. ಈ ಸಮಯದಲ್ಲಿ ಹುಳಿ ಬೆರೆಸಿದ ರೊಟ್ಟಿಯನ್ನು ತಿನ್ನಲೇಬಾರದು. ಹುಳಿಯಿಲ್ಲದ ರೊಟ್ಟಿಗೆ ‘ಸಂಕಟದ ರೊಟ್ಟಿ’ ಎಂದು ಕರೆಯಬೇಕು. ಯಾಕೆಂದರೆ ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದಾಗ ಅನುಭವಿಸಿದ್ದ ಸಂಕಟವನ್ನು ಅದು ನೆನಪಿಗೆ ತರುತ್ತದೆ. ನೀವು ಅಲ್ಲಿಂದ ತುಂಬಾ ಅವಸರವಾಗಿ ಹೊರಬಂದಿರಿ! ಇದನ್ನು ನಿಮ್ಮ ಜೀವಮಾನ ಪರ್ಯಂತ ಜ್ಞಾಪಿಸಿಕೊಳ್ಳಬೇಕು.
|
4. ಏಳು ದಿನಗಳ ತನಕ ಇಡೀ ದೇಶದಲ್ಲಿ ಯಾರ ಮನೆಯಲ್ಲಿಯಾದರೂ ರೊಟ್ಟಿಗೆ ಬೆರೆಸುವ ಹುಳಿಯು ಇರಬಾರದು. ಮತ್ತು ಮೊದಲನೇ ದಿನದ ಸಾಯಂಕಾಲ ನೀವು ವಧಿಸುವ ಪ್ರಾಣಿಯ ಮಾಂಸವನ್ನು ಮುಂಜಾನೆಯೊಳಗೆ ತಿಂದು ಮುಗಿಸತಕ್ಕದ್ದು. PEPS
|
6. ನಿಮ್ಮ ದೇವರಾದ ಯೆಹೋವನು ತನ್ನ ವಿಶೇಷವಾದ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿಯೇ ಸಾಯಂಕಾಲ ಸೂರ್ಯಾಸ್ತಮಾನ ಕಾಲದಲ್ಲಿ ಪಸ್ಕಹಬ್ಬದ ಪಶುವನ್ನು ಅರ್ಪಿಸಬೇಕು. ದೇವರು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ಕಾಲವನ್ನು ಈ ಪವಿತ್ರ ದಿನವು ನಿಮಗೆ ನೆನಪು ಮಾಡುತ್ತದೆ.
|
7. ನಿಮ್ಮ ದೇವರಾದ ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಪಸ್ಕದ ಪಶುವನ್ನು ಅಡಿಗೆ ಮಾಡಿ ತಿನ್ನಬೇಕು. ಆಮೇಲೆ ಮುಂಜಾನೆ ನೀವು ನಿಮ್ಮನಿಮ್ಮ ಮನೆಗಳಿಗೆ ಹೋಗಬಹುದು.
|
8. ಆರು ದಿನಗಳ ತನಕ ನೀವು ಹುಳಿ ಇಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿನದಲ್ಲಿ ನೀವು ಏನೂ ಕೆಲಸ ಮಾಡದೆ ಇರಬೇಕು. ಆ ದಿನ ಒಟ್ಟಾಗಿ ಸೇರಿ ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಬೇಕು. PS
|
9. {ಪಂಚಾಶತ್ತಮ ಹಬ್ಬ} PS “ನಿಮ್ಮ ಹೊಲಗಳ ಬೆಳೆಯನ್ನು ಕೊಯ್ಯಲು ಪ್ರಾರಂಭಿಸಿದ ದಿನದಿಂದ ಏಳು ವಾರಗಳನ್ನು ಲೆಕ್ಕ ಮಾಡಿರಿ.
|
10. ಅಲ್ಲಿ ನಿಮ್ಮ ದೇವರಾದ ಯೆಹೋವನಿಗೆ ವಾರಗಳ ಹಬ್ಬವನ್ನು ಆಚರಿಸಿರಿ. ಅಲ್ಲಿ ನಿಮ್ಮ ವಿಶೇಷ ಕಾಣಿಕೆಗಳನ್ನು ತಂದು ಸಮರ್ಪಿಸಿರಿ. ನಿಮ್ಮ ದೇವರು ನಿಮ್ಮನ್ನು ಎಷ್ಟು ಆಶೀರ್ವದಿಸಿರುತ್ತಾನೆಂದು ಯೋಚಿಸಿ ಅದರ ಪ್ರಕಾರ ನಿಮ್ಮ ಕಾಣಿಕೆಗಳನ್ನು ಸಲ್ಲಿಸಿರಿ.
|
11. ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಜನರೂ ಒಟ್ಟಾಗಿ ಸೇರಿ ದೇವರ ಸನ್ನಿಧಾನದಲ್ಲಿ ಸಂತೋಷಪಡಿರಿ. ನಿಮ್ಮ ಹೆಂಡತಿಮಕ್ಕಳನ್ನು ಅಲ್ಲದೆ ನಿಮ್ಮ ಸೇವಕಸೇವಕಿಯರನ್ನು ನಿಮ್ಮ ಪಟ್ಟಣದಲ್ಲಿರುವ ಲೇವಿಯರನ್ನು ಮತ್ತು ವಿಧವೆಯರನ್ನು, ಅನಾಥರನ್ನು, ಪರದೇಶಿಗಳನ್ನು ಕರೆದುಕೊಂಡು ಸಂತೋಷಪಡಿರಿ.
|
13. {ಪರ್ಣಶಾಲೆಗಳ ಹಬ್ಬ} PS “ಕಣಗಳ ಕೆಲಸ ಮತ್ತು ದ್ರಾಕ್ಷಿಯ ಆಲೆಗಳ ಕೆಲಸ ಮುಕ್ತಾಯವಾಗಿ ನಿಮ್ಮ ಮನೆಗಳಲ್ಲಿ ಅವುಗಳನ್ನು ಶೇಖರಿಸಿದ ಬಳಿಕ ಏಳು ದಿನಗಳ ನಂತರ ನೀವು ಪರ್ಣಶಾಲೆಗಳ ಹಬ್ಬವನ್ನು ಆಚರಿಸಬೇಕು.
|
14. ನಿಮ್ಮ ಹೆಂಡತಿಮಕ್ಕಳೊಂದಿಗೆ, ಸೇವಕಸೇವಕಿಯರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿರುವ ಲೇವಿಯರೊಂದಿಗೆ, ಪರದೇಶಿಗಳೊಂದಿಗೆ, ಅನಾಥರೊಂದಿಗೆ ಮತ್ತು ವಿಧವೆಯರೊಂದಿಗೆ ಆನಂದದಿಂದ ಹಬ್ಬ ಮಾಡಿರಿ.
|
15. ನಿಮ್ಮ ಯೆಹೋವನು ಆರಿಸಿಕೊಂಡಿರುವ ವಿಶೇಷ ಸ್ಥಳದಲ್ಲಿ ಈ ಹಬ್ಬವನ್ನು ಏಳು ದಿನ ಆಚರಿಸಿರಿ. ನಿಮ್ಮ ದೇವರಾದ ಯೆಹೋವನನ್ನು ಘನಪಡಿಸುವುದಕ್ಕಾಗಿ ಸಂತೋಷದಿಂದ ಹಬ್ಬವನ್ನು ಆಚರಿಸಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮ ಸುಗ್ಗಿಯನ್ನು ಮತ್ತು ನಿಮ್ಮ ಎಲ್ಲಾ ಕೆಲಸಕಾರ್ಯಗಳನ್ನು ಆಶೀರ್ವದಿಸಿದನು. ಆದ್ದರಿಂದ ಸಂತೋಷಪಡಿರಿ! PEPS
|
16. “ನಿಮ್ಮ ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸಿಕೊಳ್ಳುವ ಆ ವಿಶೇಷ ಸ್ಥಳಕ್ಕೆ ನೀವೆಲ್ಲಾ ವರ್ಷದಲ್ಲಿ ಮೂರು ಬಾರಿ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ, ಪಂಚಾಶತ್ತಮ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿ ಸೇರಿಬರಬೇಕು. ಯೆಹೋವನ ಬಳಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯೊಂದಿಗೆ ಬರಬೇಕು.
|
18. {ನ್ಯಾಯಾಧಿಪತಿಗಳೂ ಅಧಿಕಾರಿಗಳೂ} PS “ನಿಮ್ಮ ದೇವರು ನಿಮಗೆ ಕೊಡುವ ದೇಶದ ಎಲ್ಲಾ ಪಟ್ಟಣಗಳಲ್ಲಿ ನ್ಯಾಯಾಧೀಶರನ್ನೂ ಅಧಿಕಾರಿಗಳನ್ನೂ ಆರಿಸಿಕೊಳ್ಳಿರಿ. ಪ್ರತಿಯೊಂದು ಕುಲದವರು ಇದನ್ನು ಮಾಡಬೇಕು; ಆರಿಸಲ್ಪಟ್ಟವರು ನ್ಯಾಯವಂತರಾಗಿರಬೇಕು.
|
19. ನೀವು ಯಾವಾಗಲೂ ಪಕ್ಷಪಾತವಿಲ್ಲದವರಾಗಿರಬೇಕು. ಜನರಿಂದ ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಮಾನ ಕೊಡಬಾರದು. ಹಣವು ಜ್ಞಾನಿಗಳನ್ನು ಕುರುಡುಮಾಡಿ ಅವರ ಬುದ್ಧಿಯನ್ನು ಮಂದ ಮಾಡುವುದು.
|
20. ನೀವು ಒಳ್ಳೆಯವರೂ ನ್ಯಾಯವಂತರೂ ಆಗಿದ್ದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ವಾಸಿಸುವಿರಿ ಮತ್ತು ಅದನ್ನು ನಿಮ್ಮ ವಶದಲ್ಲಿಟ್ಟುಕೊಳ್ಳುವಿರಿ. PS
|
21. {ದೇವರು ವಿಗ್ರಹಗಳನ್ನು ದ್ವೇಷಿಸುವನು} PS “ನೀವು ನಿಮ್ಮ ದೇವರಾದ ಯೆಹೋವನಿಗಾಗಿ ಯಜ್ಞವೇದಿಕೆಯನ್ನು ಕಟ್ಟುವಾಗ ಅದರ ಪಕ್ಕದಲ್ಲಿ ಅಶೇರ್ ದೇವತೆಗೆ ಗೌರವವನ್ನು ತರುವಂಥ ಯಾವ ಮರದ ಕಂಬಗಳನ್ನು ನೆಡಬಾರದು;
|
22. ಸುಳ್ಳುದೇವರುಗಳ ಪೂಜೆಗಾಗಿ ವಿಶೇಷವಾದ ಕಲ್ಲುಗಳನ್ನು ನೆಡಬಾರದು; ನಿಮ್ಮ ದೇವರಾದ ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ. PE
|