1. {ಕಟ್ಟಳೆಗಳನ್ನು ಅನುಸರಿಸಿದವರ ಆಶೀರ್ವಾದ} PS “ನಾನು ಹೇಳಿದಂಥ ಎಲ್ಲಾ ಧರ್ಮಶಾಸ್ತ್ರವನ್ನು ಅನುಸರಿಸಿ ಅದಕ್ಕೆ ವಿಧೇಯರಾದರೆ ನಿಮ್ಮ ದೇವರಾದ ಯೆಹೋವನು ಪ್ರಪಂಚದ ಎಲ್ಲಾ ದೇಶಗಳಿಗಿಂತ ನಿಮ್ಮ ದೇಶವನ್ನು ಅತೀ ಉನ್ನತಸ್ಥಾನದಲ್ಲಿರುವ ದೇಶವನ್ನಾಗಿ ಮಾಡುವನು.
|
4. ಯೆಹೋವನು ನಿಮ್ಮನ್ನು ಆಶೀರ್ವದಿಸಿ
ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ಹೊಲಗಳನ್ನು ಆಶೀರ್ವದಿಸಿ ಒಳ್ಳೆಯ ಬೆಳೆಯನ್ನು ಅನುಗ್ರಹಿಸುವನು. ನಿಮ್ಮ ಪಶುಪ್ರಾಣಿಗಳನ್ನು ಆಶೀರ್ವದಿಸಿ ಅವು ಹೆಚ್ಚು ಮರಿಗಳನ್ನು ಈಯುವಂತೆ ಮಾಡುವನು. ಆತನು ನಿಮ್ಮ ಎಲ್ಲಾ ದನಕರು, ಕುರಿಮರಿಗಳನ್ನು ಆಶೀರ್ವದಿಸುವನು. |
5. ಯೆಹೋವನು ನಿಮ್ಮ ಪುಟ್ಟಿಗಳನ್ನೂ ಪಾತ್ರೆಗಳನ್ನೂ ಆಶೀರ್ವದಿಸಿ
ಅವು ಯಾವಾಗಲೂ ಆಹಾರಪದಾರ್ಥಗಳಿಂದ ತುಂಬಿರುವಂತೆ ಮಾಡುವನು. |
7. “ವೈರಿಗಳು ನಿಮ್ಮೆದುರಾಗಿ ಯುದ್ಧಮಾಡಲು ಬಂದಾಗ ನಿಮಗೆ ಆತನು ಸಹಾಯ ಮಾಡುವನು. ವೈರಿಗಳು ಒಂದು ದಿಕ್ಕಿನಿಂದ ಬಂದರೆ ಏಳು ದಾರಿಯಲ್ಲಿ ಪಲಾಯನ ಮಾಡುವರು. PEPS
|
8. “ಯೆಹೋವನು ನಿಮ್ಮನ್ನು ಆಶೀರ್ವದಿಸಿ ನಿಮ್ಮ ಕಣಜಗಳನ್ನು ಆಶೀರ್ವದಿಸುವನು. ನೀವು ಮಾಡುವ ಕಾರ್ಯಗಳನ್ನೆಲ್ಲಾ ಆಶೀರ್ವದಿಸುವನು. ನಿಮಗೆ ಕೊಡುವ ದೇಶದಲ್ಲಿ ನೀವು ವಾಸಿಸುವಾಗ ನಿಮ್ಮನ್ನು ಆಶೀರ್ವದಿಸುವನು.
|
9. ನೀವು ಯೆಹೋವನ ಆಜ್ಞೆಗಳಿಗೆ ವಿಧೇಯರಾದರೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ತನ್ನ ವಾಗ್ದಾನಕ್ಕನುಸಾರವಾಗಿ ವಿಶೇಷವಾದ ಸ್ವಕೀಯ ಪ್ರಜೆಯನ್ನಾಗಿ ಮಾಡುವನು.
|
10. ಆಗ ನಿಮ್ಮ ದೇಶದಲ್ಲಿ ವಾಸಿಸುವವರೆಲ್ಲರೂ ನೀವು ದೇವರ ಹೆಸರಿನಿಂದ ಕರೆಯಲ್ಪಟ್ಟವರೆಂಬುದನ್ನು ನೋಡುವಾಗ ನಿಮಗೆ ಭಯಪಡುವರು. PEPS
|
11. “ನಿಮ್ಮ ದೇವರಾದ ಯೆಹೋವನು ನಿಮಗೆ ಒಳ್ಳೆಯ ವಸ್ತುಗಳನ್ನು ಕೊಡುವನು; ನಿಮಗೆ ಹೆಚ್ಚು ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ಪಶುಗಳು ಹೆಚ್ಚು ಮರಿಗಳನ್ನು ಈಯುವಂತೆ ಮಾಡುವನು. ಯೆಹೋವನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶದಲ್ಲಿ ನಿಮ್ಮ ಹೊಲವು ಒಳ್ಳೆಯ ಬೆಳೆಗಳನ್ನು ಫಲಿಸುತ್ತದೆ.
|
12. ಯೆಹೋವನು ತನ್ನ ಆಶೀರ್ವಾದಗಳೆಂಬ ಭಂಡಾರವನ್ನೇ ನಿಮಗೆ ತೆರೆಯುವನು. ಕಾಲಕ್ಕೆ ತಕ್ಕಹಾಗೆ ಮಳೆ ಸುರಿಯುವಂತೆ ಮಾಡುವನು; ನಿಮ್ಮ ಕಾರ್ಯವನ್ನೆಲ್ಲಾ ಸಫಲ ಮಾಡುವನು. ಇತರ ದೇಶಗಳಿಗೆ ಸಾಲ ಕೊಡಲು ನಿಮ್ಮಲ್ಲಿ ಹಣವಿರುವುದು; ಬೇರೆಯವರಿಂದ ಸಾಲ ತೆಗೆದುಕೊಳ್ಳುವ ಅವಶ್ಯಕತೆ ನಿಮಗೆ ಬಾರದು.
|
13. ಯೆಹೋವನು ನಿಮ್ಮನ್ನು ತಲೆಯನ್ನಾಗಿ ಮಾಡಲು ಬಯಸುತ್ತಾನೆಯೇ ಹೊರತು ಬಾಲವನ್ನಾಗಿಯಲ್ಲ. ನೀವು ಮೇಲಿನ ಅಂತಸ್ತಿನಲ್ಲಿರುವಿರಿ, ಕೆಳಗಿನದರಲ್ಲಿ ಅಲ್ಲ. ನೀವು ಯೆಹೋವನ ಆಜ್ಞೆಯನ್ನು ಪಾಲಿಸಿದಾಗ ನಿಮಗೆ ಹೀಗೆ ಆಗುವುದು.
|
14. ನಾನು ಈ ಹೊತ್ತು ಬೋಧಿಸುವ ಯಾವುದನ್ನೂ ನೀವು ಉಲ್ಲಂಘಿಸಬಾರದು. ಇತರ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಪೂಜಿಸಬಾರದು. PS
|
15. {ಕಟ್ಟಳೆಗಳನ್ನು ಅನುಸರಿಸದಿದ್ದಲ್ಲಿ ಶಾಪ} PS “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಆಜ್ಞೆ, ಕಟ್ಟಳೆಗಳಿಗೆ ನೀವು ವಿಧೇಯರಾಗದಿದ್ದರೆ ಈ ಕೆಟ್ಟ ಸಂಗತಿಗಳು ನಿಮಗೆ ತಟ್ಟುವವು:
|
18. ನಿಮಗೆ ಹೆಚ್ಚು ಮಕ್ಕಳಿಲ್ಲದಂತೆ ಮಾಡುವನು.
ನಿಮ್ಮ ಹೊಲಗಳನ್ನು ಶಪಿಸಿ ನಿಮಗೆ ಹೆಚ್ಚು ಬೆಳೆಯಾಗದಂತೆ ಮಾಡುವನು. ನಿಮ್ಮ ಪಶುಪ್ರಾಣಿಗಳನ್ನು ಶಪಿಸಿ ಅವುಗಳು ಮರಿಗಳನ್ನು ಈಯದಂತೆ ಮಾಡುವನು. ಆತನು ನಿಮ್ಮ ಎಲ್ಲಾ ಮರಿಗಳನ್ನೂ ಕರುಗಳನ್ನೂ ಶಪಿಸುವನು. |
20. “ನೀವು ಕೆಟ್ಟಕಾರ್ಯಗಳನ್ನು ಮಾಡಿ ಯೆಹೋವನಿಂದ ದೂರವಾಗಿ ಹೋದರೆ ನಿಮಗೆ ಕೆಟ್ಟಸಂಗತಿಗಳು ಉಂಟಾಗುವವು. ನಿಮಗೆ ಉಪದ್ರವಗಳೂ ಮನಸ್ಸಿಗೆ ಅಸಮಾಧಾನವೂ ಉಂಟಾಗುವವು. ನೀವು ಸಂಪೂರ್ಣವಾಗಿ ನಾಶವಾಗುವ ತನಕ ಈ ಸಂಗತಿಗಳು ನಿಮ್ಮನ್ನು ಬಾಧಿಸುವವು. ನೀವು ಆತನನ್ನು ತೊರೆದದ್ದರಿಂದ ನಿಮಗೆ ಹಾಗೆ ಮಾಡುವನು.
|
21. ನೀವು ಸ್ವಾಸ್ತ್ಯವಾಗಿ ಹೊಂದಲಿರುವ ದೇಶದಿಂದ ನೀವು ನಾಶವಾಗುವವರೆಗೆ, ನಿಮ್ಮ ದೇವರಾದ ಯೆಹೋವನು ನಿಮಗೆ ಭಯಂಕರವಾದ ರೋಗಗಳನ್ನು ಬರಮಾಡುವನು.
|
22. ಜ್ವರ, ಬಾಧೆ, ದೇಹ ಊದಿಕೊಳ್ಳುವಿಕೆ ಇವುಗಳಿಂದ ನಿಮ್ಮನ್ನು ಶಿಕ್ಷಿಸುವನು. ನಿಮ್ಮ ದೇಶದೊಳಗೆ ಸಹಿಸಲಾರದ ಉಷ್ಣವನ್ನು ಕಳುಹಿಸಿ ಮಳೆಬೀಳದಂತೆ ಮಾಡುವನು. ನಿಮ್ಮ ಬೆಳೆ ರೋಗದಿಂದಲೂ ಬಿಸಿಲಿನಿಂದಲೂ ನಾಶವಾಗುವುದು. ಇವೆಲ್ಲಾ ನಿಮಗೆ ಉಂಟಾಗಿ ನೀವು ನಾಶವಾಗುವ ತನಕ ಮುಂದುವರಿಯುವವು.
|
24. ಯೆಹೋವನು ನಿಮಗೆ ಮಳೆಯನ್ನು ಬೀಳಮಾಡುವುದಿಲ್ಲ; ಕೇವಲ ಧೂಳು ಮತ್ತು ಮರಳು ಆಕಾಶದಿಂದ ಬೀಳುವುದು. ನೀವು ನಾಶವಾಗುವವರೆಗೆ ಅದು ಮೇಲಿನಿಂದ ಬೀಳುತ್ತಿರುವುದು. PEPS
|
25. “ನಿಮ್ಮ ವೈರಿಗಳು ಬಂದು ನಿಮ್ಮನ್ನು ಸೋಲಿಸಿಬಿಡುವಂತೆ ಮಾಡುವನು. ನೀವು ಒಂದು ದಾರಿಯಿಂದ ನಿಮ್ಮ ವೈರಿಗೆ ಎದುರಾಗಿ ಯುದ್ಧಕ್ಕೆ ಇಳಿದರೆ ಏಳುದಾರಿಗಳಿಂದ ರಣರಂಗದಿಂದ ಪಲಾಯನ ಮಾಡುವಿರಿ. ನಿಮಗೆ ಸಂಭವಿಸುವ ಬಾಧೆಗಳನ್ನು ನೋಡಿ ಇತರ ಜನಾಂಗದವರು ಭಯಪಡುವರು.
|
26. ಕಾಡುಪಕ್ಷಿಗಳಿಗೆ ಮತ್ತು ಕಾಡುಪ್ರಾಣಿಗಳಿಗೆ ನಿಮ್ಮ ಹೆಣಗಳು ಆಹಾರವಾಗುವವು. ಅವುಗಳನ್ನು ಓಡಿಸಲು ಯಾರೂ ಇರುವುದಿಲ್ಲ. PEPS
|
27. “ಈಜಿಪ್ಟಿನವರಿಗೆ ಕಳುಹಿಸಿದಂತೆ ನಿಮಗೂ ಮೈಯಲ್ಲಿ ಬಾಧಿಸುವ ಹುಣ್ಣುಗಳನ್ನು ಕಳುಹಿಸುವನು. ದೇಹದಲ್ಲಿ ಗಡ್ಡೆಗಳುಂಟಾಗುವವು. ಕೀವುಸೋರುವ ಹುಣ್ಣುಗಳು, ಗುಣವಾಗದ ತುರಿಸುವ ಕಜ್ಜಿಗಳು ಉಂಟಾಗುವವು.
|
29. ಹಗಲಿನಲ್ಲೂ ಕುರುಡರಂತೆ ನೀವು ತಡವರಿಸುವಿರಿ. ನೀವು ಮಾಡುವ ಕಾರ್ಯವೆಲ್ಲವೂ ನಿಷ್ಫಲವಾಗುವವು. ಜನರು ನಿಮ್ಮನ್ನು ಬಾಧಿಸಿ ನಿಮ್ಮಲ್ಲಿರುವದನ್ನೆಲ್ಲಾ ದೋಚಿಕೊಂಡು ಹೋಗುವರು. ನಿಮ್ಮನ್ನು ರಕ್ಷಿಸಲು ಯಾರೂ ಬರುವುದಿಲ್ಲ. PEPS
|
30. “ನೀವು ಮದುವೆಯಾಗಲು ಕನ್ನಿಕೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳುವಿರಿ. ಆದರೆ ಬೇರೊಬ್ಬನು ಆಕೆಯನ್ನು ಕೂಡುವನು. ನೀವೊಂದು ಮನೆಯನ್ನು ಕಟ್ಟುವಿರಿ. ಆದರೆ ಬೇರೊಬ್ಬನು ಅದರಲ್ಲಿ ವಾಸಿಸುವನು. ನೀವು ದ್ರಾಕ್ಷಾತೋಟ ಮಾಡಿ ದ್ರಾಕ್ಷಾಲತೆಗಳನ್ನು ನೆಡುವಿರಿ. ಆದರೆ ಅದರ ಫಲಗಳನ್ನು ನೀವು ಕೂಡಿಸುವುದಿಲ್ಲ.
|
31. ನಿಮ್ಮ ದನಗಳನ್ನು ನಿಮ್ಮೆದುರಿನಲ್ಲಿ ಜನರು ಕೊಯ್ಯುವರು. ಆದರೆ ನೀವು ಅದರ ಮಾಂಸವನ್ನು ತಿನ್ನುವುದಿಲ್ಲ. ನಿಮ್ಮ ಕತ್ತೆಗಳನ್ನು ಜನರು ನಿಮ್ಮಿಂದ ತೆಗೆದುಕೊಂಡು ಹೋಗುವರು. ಆದರೆ ಅವುಗಳನ್ನು ಹಿಂದಕ್ಕೆ ಕೊಡರು. ನಿಮ್ಮ ಕುರಿಗಳನ್ನು ವೈರಿಗಳು ಕೊಂಡೊಯ್ಯುವರು. ನಿಮ್ಮನ್ನು ರಕ್ಷಿಸಲು ಯಾರೂ ಬರಲಾರರು. PEPS
|
32. “ನಿಮ್ಮ ಗಂಡುಹೆಣ್ಣು ಮಕ್ಕಳನ್ನು ಬೇರೆಯವರು ಎತ್ತಿಕೊಂಡು ಹೋಗುವರು. ನೀವು ಹಗಲುರಾತ್ರಿ ನಿಮ್ಮ ಮಕ್ಕಳಿಗಾಗಿ ಹುಡುಕಾಡುವಿರಿ. ಹುಡುಕಾಡುತ್ತಾ ನಿಮ್ಮ ಕಣ್ಣುಗಳು ಕಂಗೆಡುವವು; ಆದರೆ ಅವರು ನಿಮಗೆ ದೊರಕುವುದಿಲ್ಲ. ಯೆಹೋವನು ನಿಮಗೆ ಸಹಾಯ ಮಾಡುವುದಿಲ್ಲ. PEPS
|
33. “ನೀವು ಅರಿಯದಿರುವ ದೇಶದವರು ಬಂದು ನಿಮ್ಮ ಪೈರನ್ನು ಕೊಯ್ದುಕೊಂಡು ಹೋಗುವರು; ನೀವು ದುಡಿದು ಸಂಪಾದಿಸಿದವುಗಳನ್ನು ಎತ್ತಿಕೊಂಡು ಹೋಗುವರು. ಜನರು ನಿಮ್ಮನ್ನು ಕುಗ್ಗಿಸಿ ಬಲಹೀನರನ್ನಾಗಿ ಮಾಡುವರು.
|
35. ಯೆಹೋವನು ನಿಮ್ಮನ್ನು ಉರಿಯುವ ಹುಣ್ಣುಗಳಿಂದ ಬಾಧಿಸುವನು; ಅವುಗಳು ಗುಣವಾಗುವುದಿಲ್ಲ. ಈ ಹುಣ್ಣುಗಳು ನಿಮ್ಮ ದೇಹದ ಎಲ್ಲಾ ಭಾಗಗಳಲ್ಲಿ ಅಂದರೆ ನಿಮ್ಮ ಪಾದದಿಂದ ಹಿಡಿದು ನಡುನೆತ್ತಿಯ ತನಕ ಇರುವವು. PEPS
|
36. “ಯೆಹೋವನು ನಿಮ್ಮನ್ನೂ ನಿಮ್ಮ ಅರಸನನ್ನೂ ನೀವು ಅರಿಯದ ದೇಶಕ್ಕೆ ಅಟ್ಟಿಬಿಡುವನು. ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಆ ದೇಶವನ್ನು ಎಂದೂ ನೋಡಲಿಲ್ಲ. ಅಲ್ಲಿ ಮರ, ಕಲ್ಲುಗಳಿಂದ ಮಾಡಿದ ಸುಳ್ಳುದೇವರನ್ನು ಆರಾಧಿಸುವಿರಿ.
|
37. ನೀವು ಯಾವ ದೇಶಕ್ಕೆ ಕಳುಹಿಸಲ್ಪಡುವಿರೋ ಆ ದೇಶದವರು ನಿಮ್ಮ ದುರವಸ್ಥೆಯನ್ನು ನೋಡಿ ನಗುವರು; ಕೆಟ್ಟಮಾತುಗಳನ್ನಾಡುವರು. PS
|
38. {ಸೋಲು} PS “ಹೊಲದಲ್ಲಿ ಧಾನ್ಯ ಯಥೇಚ್ಛವಾಗಿ ಬೆಳೆದರೂ ನೀವು ಮನೆಯೊಳಗೆ ತರುವುದು ಸ್ವಲ್ಪ ಮಾತ್ರ. ಮಿಡತೆಯು ನಿಮ್ಮ ಬೆಳೆಯನ್ನು ತಿಂದು ಬಿಡುವದು.
|
39. ನೀವು ದ್ರಾಕ್ಷಾತೋಟ ಮಾಡಿ ಪ್ರಯಾಸಪಟ್ಟು ಅದರಲ್ಲಿ ಕೆಲಸ ಮಾಡುವಿರಿ. ಆದರೆ ಅದರ ಫಲವನ್ನು ಹುಳಗಳು ತಿಂದುಬಿಡುವುದರಿಂದ ನೀವು ದ್ರಾಕ್ಷಿಯನ್ನು ಸಂಗ್ರಹಿಸುವುದಿಲ್ಲ; ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.
|
40. ನಿಮ್ಮ ಭೂಮಿಯಲ್ಲಿ ಆಲಿವ್ ಮರಗಳು ತುಂಬಿದ್ದರೂ ಎಣ್ಣೆಯ ಬರದಲ್ಲಿ ಸಂಕಟಪಡುವಿರಿ. ಯಾಕೆಂದರೆ ಆಲಿವ್ ಕಾಯಿಗಳು ಭೂಮಿಯ ಮೇಲೆ ಉದುರಿಬಿದ್ದು ಹಾಳಾಗುವವು.
|
41. ನಿಮಗೆ ಗಂಡುಹೆಣ್ಣು ಮಕ್ಕಳು ಹುಟ್ಟುವರು. ಆದರೆ ಅವರು ನಿಮ್ಮೊಂದಿಗೆ ಇರುವುದಿಲ್ಲ. ಅವರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು.
|
44. ನಿಮಗೆ ಸಾಲ ಕೊಡಲು ವಿದೇಶಿಯರಿಗೆ ಹಣವಿರುವುದು. ಆದರೆ ಅವರಿಗೆ ಸಾಲ ಕೊಡಲು ನಿಮ್ಮಲ್ಲಿ ಹಣವಿರುವುದಿಲ್ಲ. ತಲೆಯು ದೇಹವನ್ನು ಹೇಗೆ ಹಿಡಿತದಲ್ಲಿಟ್ಟುಕೊಂಡಿರುತ್ತದೋ ಹಾಗೆಯೇ ಅವರು ನಿಮ್ಮನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳುವರು. ನೀವು ಅವರಿಗೆ ಬಾಲದಂತಿರುವಿರಿ. PEPS
|
45. “ನಿಮ್ಮ ದೇವರಾದ ಯೆಹೋವನು ಹೇಳಿದ ಸಂಗತಿಗಳಿಗೆ ನೀವು ಕಿವಿಗೊಡದೆ ಹೋದದ್ದರಿಂದ, ಆತನು ಕೊಟ್ಟ ಆಜ್ಞೆಗಳಿಗೂ ನಿಯಮಗಳಿಗೂ ನೀವು ವಿಧೇಯರಾಗದಿದ್ದ ಕಾರಣ ಈ ಶಾಪಗಳೆಲ್ಲಾ ನಿಮ್ಮ ಮೇಲೆ ಬರುತ್ತವೆ. ನೀವು ನಾಶವಾಗುವವರೆಗೂ ಅವು ನಿಮ್ಮನ್ನು ಅಟ್ಟಿಸಿಕೊಂಡು ಬರುತ್ತವೆ.
|
46. ನೀವೂ ನಿಮ್ಮ ಸಂತತಿಯವರೂ ದೇವರ ಶಾಶ್ವತವಾದ ತೀರ್ಪನ್ನು ಹೊಂದಿದ್ದೀರೆಂಬುದಕ್ಕೆ ಬೇರೆಯವರಿಗೆ ಈ ಶಾಪಗಳೇ ಸೂಚನೆಯಾಗಿಯೂ ರುಜುವಾತಾಗಿಯೂ ಇರುತ್ತವೆ. PEPS
|
47. “ನಿಮ್ಮದೇವರಾದ ಯೆಹೋವನು ನಿಮಗೆ ಹೆಚ್ಚಾದ ಆಶೀರ್ವಾದವನ್ನು ಕೊಟ್ಟನು. ಆದರೆ ನೀವು ಸಂತೋಷ ಮತ್ತು ಉಪಕಾರದ ಹೃದಯದಿಂದ ಆತನ ಸೇವೆಮಾಡಲಿಲ್ಲ.
|
48. ಆದ್ದರಿಂದ ಆತನು ನಿಮ್ಮ ವೈರಿಗಳನ್ನು ಕಳುಹಿಸಿ ಅವರ ಸೇವೆ ನೀವು ಮಾಡುವಂತೆ ಮಾಡುವನು. ನೀವು ಹಸಿವು ಬಾಯಾರಿಕೆಗಳಿಂದ ಬಳಲುವಿರಿ; ಬಟ್ಟೆಯಿಲ್ಲದೆ ಬಡವರಾಗಿ ಜೀವಿಸುವಿರಿ. ನಿಮ್ಮ ಯೆಹೋವನು ನಿಮ್ಮ ಮೇಲೆ ಭಾರವನ್ನು ಹೊರಿಸುವನು. ಆ ಭಾರವನ್ನು ನಿಮ್ಮಿಂದ ತೆಗೆಯಲಾಗುವುದಿಲ್ಲ; ನೀವು ನಾಶವಾಗುವಿರಿ. PS
|
49. {ವೈರಿಜನಾಂಗದ ಶಾಪ} PS “ಬಹಳ ದೂರದಿಂದ ಒಂದು ಜನಾಂಗವು ನಿಮ್ಮೊಂದಿಗೆ ಯುದ್ಧಮಾಡಲು ಬರುವಂತೆ ಯೆಹೋವನು ಮಾಡುವನು. ನೀವು ಅವರ ಭಾಷೆಯನ್ನು ಅರಿಯದಿರುವಿರಿ. ಆಕಾಶದಿಂದ ಹದ್ದು ಹಾರಿಬರುವಂತೆ ಅತೀ ವೇಗವಾಗಿ ಅವರು ನಿಮ್ಮ ಮೇಲೆ ಬೀಳುವರು.
|
51. ಅವರು ನಿಮ್ಮ ಪಶುಗಳನ್ನು ಅಟ್ಟಿಸಿಕೊಂಡು ಹೋಗುವರು; ನೀವು ಬೆಳೆದ ಬೆಳೆಯನ್ನು ಕೊಂಡೊಯ್ಯುವರು. ನಿಮ್ಮನ್ನು ನಾಶಪಡಿಸುವ ತನಕ ಅವರು ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು. ಅವರು ನಿಮಗೆ ದವಸಧಾನ್ಯವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಹಸುಗಳನ್ನಾಗಲಿ ಕುರಿಗಳನ್ನಾಗಲಿ ಮೇಕೆಗಳನ್ನಾಗಲಿ ಬಿಟ್ಟುಹೋಗುವುದಿಲ್ಲ. ಅವರು ನಿಮ್ಮನ್ನು ನಾಶಪಡಿಸುವ ತನಕ ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು. PEPS
|
52. “ಆ ವೈರಿಗಳು ನಿಮ್ಮ ಪಟ್ಟಣಗಳನ್ನೆಲ್ಲಾ ಮುತ್ತಿ ವಶಪಡಿಸಿಕೊಳ್ಳುವರು. ಆ ಪಟ್ಟಣಗಳಿಗೆ ಎತ್ತರದ ಪೌಳಿಗೋಡೆಗಳಿವೆ. ಆದ್ದರಿಂದ ನಮಗೆ ಭಯವಿಲ್ಲವೆಂದು ನೀವು ಭರವಸೆಯಿಂದಿರುವಿರಿ. ಆದರೆ ಅವರು ಪೌಳಿಗೋಡೆಗಳನ್ನು ಕೆಡವಿ ನೆಲಸಮ ಮಾಡುವರು. ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೆಲ್ಲಾ ತೊಂದರೆ ಮಾಡುವರು.
|
53. ವೈರಿಗಳು ನಿಮ್ಮ ಪಟ್ಟಣವನ್ನು ಮುತ್ತಿಗೆ ಹಾಕಿದಾಗ ನೀವು ಸಂಕಟ ಅನುಭವಿಸುವಿರಿ. ಆಗ ನೀವು ಊಟಕ್ಕೆ ಇಲ್ಲದೆ ತೊಂದರೆಗೊಳಗಾಗುವಿರಿ; ಹಸಿವು ತಾಳಲಾರದೆ ನಿಮ್ಮ ಮಕ್ಕಳನ್ನೇ ತಿನ್ನುವಿರಿ. PEPS
|
54. “ನಿಮ್ಮಲ್ಲಿರುವ ಮೃದುವಾದ ಮತ್ತು ಕನಿಕರವುಳ್ಳ ಮನುಷ್ಯನೂ ಬೇರೆಯವರಿಗೆ ಕ್ರೂರಿಯಾಗುವನು; ತನ್ನನ್ನು ಬಹಳವಾಗಿ ಪ್ರೀತಿಸುವ ಹೆಂಡತಿಗೂ ಅವನು ಕ್ರೂರಿಯಾಗುವನು; ಇನ್ನೂ ಜೀವಂತವಾಗಿರುವ ತನ್ನ ಮಕ್ಕಳಿಗೂ ಅವನು ಕ್ರೂರಿಯಾಗುವನು.
|
55. ಅವನಿಗೆ ಊಟಕ್ಕೇನೂ ಇಲ್ಲದಿರುವುದರಿಂದ ಸ್ವಂತ ಮಕ್ಕಳನ್ನೇ ತಿನ್ನುವನು. ಅವರನ್ನು ಇತರರೊಂದಿಗೆ ಹಂಚಿಕೊಳ್ಳದೆ, ತನ್ನ ಸ್ವಂತ ಕುಟುಂಬದವರೊಂದಿಗೆ ಹಂಚಿಕೊಳ್ಳದೆ ತಾನೊಬ್ಬನೇ ತಿನ್ನುವನು. ನಿಮ್ಮ ವೈರಿಗಳು ಬಂದು ನಿಮ್ಮ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ನಿಮಗೆ ಇವೆಲ್ಲಾ ಸಂಭವಿಸುತ್ತವೆ. PEPS
|
56. “ನಿಮ್ಮಲ್ಲಿರುವ ಅತ್ಯಂತ ಮೃದುವಾದ ಮತ್ತು ಕನಿಕರವುಳ್ಳ ಸ್ತ್ರೀಯೂ ಕ್ರೂರಿಯಾಗುವಳು. ನೆಲದ ಮೇಲೆ ಬರಿಗಾಲಿನಲ್ಲಿ ಎಂದೂ ನಡೆಯದಷ್ಟು ಮೃದುವೂ ಕೋಮಲೆಯೂ ಆಗಿದ್ದ ಆಕೆ ತನ್ನನ್ನು ಬಹಳವಾಗಿ ಪ್ರೀತಿಸುವ ಗಂಡನಿಗೇ ಕ್ರೂರಿಯಾಗುವಳು; ಅವಳು ತನ್ನ ಸ್ವಂತ ಮಗನಿಗೂ ಮಗಳಿಗೂ ಕ್ರೂರಿಯಾಗುವಳು.
|
57. ಅವಳು ಅಡಗಿಕೊಂಡು ಮಗುವನ್ನು ಹೆರುವಳು. ಬಳಿಕ ಆ ಮಗುವನ್ನೂ ಅದರೊಡನೆ ಬರುವುದೆಲ್ಲವನ್ನೂ ಭಯಂಕರವಾದ ಹಸಿವೆಯಿಂದಾಗಿ ತಿಂದುಬಿಡುವಳು. ನಿಮ್ಮ ಶತ್ರುವು ಬಂದು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಸಂಕಟಕ್ಕೆ ಗುರಿ ಮಾಡಿದಾಗ ಈ ಕೆಟ್ಟ ಸಂಗತಿಗಳೆಲ್ಲಾ ನಿಮಗೆ ಸಂಭವಿಸುತ್ತವೆ. PEPS
|
58. “ಈ ಪುಸ್ತಕದಲ್ಲಿ ಬರೆದಿರುವ ಎಲ್ಲಾ ಆಜ್ಞೆಗಳಿಗೂ ಉಪದೇಶಗಳಿಗೂ ನೀವು ವಿಧೇಯರಾಗಬೇಕು. ನಿಮ್ಮ ದೇವರಾದ ಯೆಹೋವನು ಅದ್ಭುತನೂ ಭಯಂಕರನೂ ಆಗಿರುವುದರಿಂದ ಆತನ ಹೆಸರನ್ನು ನೀವು ಗೌರವಿಸಬೇಕು.
|
60. ನೀವು ಈಜಿಪ್ಟಿನಲ್ಲಿರುವಾಗ ದೇವರು ಅವರಿಗೆ ಕಳುಹಿಸಿದ ವ್ಯಾಧಿಸಂಕಟಗಳನ್ನು ನೋಡಿ ಭಯಗ್ರಸ್ತರಾದಿರಿ. ಅಂಥ ಸಂಕಟಗಳು ನಿಮಗೆ ಬರುವವು.
|
61. ಈ ಪುಸ್ತಕದಲ್ಲಿ ಬರೆದಿಲ್ಲದ ಸಂಕಟಗಳೂ ರೋಗಗಳೂ ನಿಮಗೆ ಪ್ರಾಪ್ತಿಯಾಗುವವು. ನೀವು ನಾಶವಾಗುವ ತನಕ ಅವೆಲ್ಲಾ ನಿಮಗೆ ಬರುತ್ತವೆ.
|
62. ನೀವು ಆಕಾಶದ ನಕ್ಷತ್ರದಷ್ಟು ಅಸಂಖ್ಯಾತರಾಗಿದ್ದರೂ ನಿಮ್ಮಲ್ಲಿ ಕೆಲವರೇ ಉಳಿದುಕೊಳ್ಳುವರು. ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಕಿವಿಗೊಡಲಿಲ್ಲ. PEPS
|
63. “ಯೆಹೋವನು ನಿಮ್ಮ ಅಭಿವೃದ್ದಿಯಲ್ಲಿ ಸಂತೋಷಪಡುವಂತೆ ನಿಮ್ಮ ಅವನತಿಯಲ್ಲಿಯೂ ನಿಮ್ಮ ನಾಶನದಲ್ಲಿಯೂ ಸಂತೋಷಪಡುವನು. ನೀವು ಆ ದೇಶವನ್ನು ನಿಮ್ಮದನ್ನಾಗಿಸಿಕೊಳ್ಳಲು ಹೋಗುವಿರಿ. ಆದರೆ ಜನರು ನಿಮ್ಮನ್ನು ದೇಶದಿಂದ ಹೊರಡಿಸಿ ಅಟ್ಟಿಬಿಡುವರು.
|
64. ಯೆಹೋವನು ನಿಮ್ಮನ್ನು ಲೋಕದ ಎಲ್ಲಾ ದೇಶಗಳಿಗೆ ಚದರಿಸಿಬಿಡುವನು. ಆತನು ಪ್ರಪಂಚದ ಒಂದು ಕಡೆಯಿಂದ ಇನ್ನೊಂದು ಕಡೆಯ ತನಕ ನಿಮ್ಮನ್ನು ಚದರಿಸುವನು. ಅಲ್ಲಿ ನೀವು ಕಲ್ಲುಮರಗಳಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಆ ಸುಳ್ಳುದೇವರುಗಳನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಎಂದೂ ಪೂಜಿಸಿರಲಿಲ್ಲ. PEPS
|
65. “ಆ ಜನಾಂಗದವರೊಂದಿಗೆ ಜೀವಿಸುವಾಗ ನಿಮಗೆ ಸಮಾಧಾನವಿರುವುದಿಲ್ಲ; ನಿಮಗೆ ವಿಶ್ರಾಂತಿ ಇರುವುದಿಲ್ಲ. ನಿಮ್ಮ ಯೆಹೋವನು ನಿಮಗೆ ಚಿಂತೆಬೇಸರಗಳನ್ನು ತಂದು ತುಂಬಿಸುವನು. ನಿಮ್ಮ ಕಣ್ಣುಗಳು ಆಯಾಸದಿಂದ ತುಂಬಿರುವವು; ನೀವು ಕಳವಳದಿಂದಿರುವಿರಿ.
|
66. ನೀವು ಹಗಲಿರುಳು ಭಯದಿಂದಿರುವಿರಿ ಮತ್ತು ಅಪಾಯದಲ್ಲಿ ಜೀವಿಸುವಿರಿ. ನಿಮ್ಮ ಜೀವಿತದ ಬಗ್ಗೆ ನಿಮಗೆಂದಿಗೂ ನಿಶ್ಚಯತ್ವವಿರುವುದಿಲ್ಲ.
|
67. ಮುಂಜಾನೆಯಲ್ಲಿ ನೀವು, ‘ಇದು ಸಾಯಂಕಾಲವಾಗಿದ್ದರೆ ಉತ್ತಮವಾಗಿರುತ್ತಿತ್ತು’ ಎಂದು ಅನ್ನುವಿರಿ. ಸಾಯಂಕಾಲದಲ್ಲಿ, ‘ಇದು ಮುಂಜಾನೆಯಾಗಿದ್ದರೆ ಉತ್ತಮವಾಗಿರುತ್ತಿತ್ತು’ ಎಂದು ಅನ್ನುವಿರಿ. ನಿಮ್ಮ ಹೃದಯದಲ್ಲಿರುವ ಭಯ ಮತ್ತು ನೀವು ಕಣ್ಣಾರೆ ಕಾಣುವ ಭಯಂಕರ ಸಂಗತಿಗಳೇ ಇದಕ್ಕೆ ಕಾರಣ.
|
68. ಯೆಹೋವನು ನಿಮ್ಮನ್ನು ಹಡಗುಗಳ ಮುಖಾಂತರ ಈಜಿಪ್ಟಿಗೆ ಕೊಂಡೊಯ್ಯುವನು. ನೀವು ಅಲ್ಲಿಗೆ ಹೋಗುವುದೇ ಇಲ್ಲವೆಂದು ನಾನು ಹೇಳಿದ್ದೆನು. ಆದರೆ ದೇವರು ನಿಮ್ಮನ್ನು ಅಲ್ಲಿಗೆ ಕಳುಹಿಸುವನು. ಈಜಿಪ್ಟಿನಲ್ಲಿ ನಿಮ್ಮನ್ನು ನೀವೇ ಗುಲಾಮರನ್ನಾಗಿ ನಿಮ್ಮ ವೈರಿಗಳಿಗೆ ಮಾರಿಕೊಳ್ಳುವಿರಿ; ಆದರೆ ಯಾರೂ ನಿಮ್ಮನ್ನು ಕೊಂಡುಕೊಳ್ಳುವವರಿರುವುದಿಲ್ಲ.” PE
|