1. ಯೆಹೋವನು ಮೋಶೆಗೆ, “ಫರೋಹನ ಬಳಿಗೆ ಹೋಗು. ನಾನು ಅದ್ಭುತಕಾರ್ಯಗಳನ್ನು ತೋರಿಸಲು ಅವಕಾಶವಾಗಲೆಂದು ಫರೋಹನ ಮತ್ತು ಅವನ ಅಧಿಕಾರಿಗಳ ಹೃದಯಗಳನ್ನು ಕಠಿಣಪಡಿಸಿದ್ದೇನೆ.
|
2. ನಾನು ಈಜಿಪ್ಟಿನಲ್ಲಿ ಮಾಡಿದ ಸೂಚಕಕಾರ್ಯಗಳನ್ನೂ ಇತರ ಅದ್ಭುತಕಾರ್ಯಗಳನ್ನೂ ನೀವು ನಿಮ್ಮ ಮಕ್ಕಳಿಗೆ ಮತ್ತು ಮೊಮ್ಮಕ್ಕಳಿಗೆ ವಿವರಿಸಿ, ‘ಯೆಹೋವನು ಈಜಿಪ್ಟಿನವರನ್ನು ತನಗೆ ಇಷ್ಟ ಬಂದಂತೆ ಶಿಕ್ಷಿಸಿದನು’ ಎಂಬುದಾಗಿ ತಿಳಿಸಬೇಕೆಂದು ನಾನು ಫರೋಹನ ಮತ್ತು ಅವನ ಅಧಿಕಾರಿಗಳ ಹೃದಯಗಳನ್ನು ಕಠಿಣಪಡಿಸಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳ ಮೂಲಕ ನಾನೇ ಯೆಹೋವನೆಂದು ತಿಳಿದುಕೊಳ್ಳುವಿರಿ” ಎಂದು ಹೇಳಿದನು.
|
3. ಆದ್ದರಿಂದ ಮೋಶೆ ಆರೋನರು ಫರೋಹನ ಬಳಿಗೆ ಹೋಗಿ, “ಇಬ್ರಿಯರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನೀನು ಎಲ್ಲಿಯವರೆಗೆ ನನಗೆ ವಿಧೇಯನಾಗುವುದಿಲ್ಲ? ನನ್ನನ್ನು ಆರಾಧಿಸಲು ನನ್ನ ಜನರನ್ನು ಕಳುಹಿಸಿಕೊಡು!
|
5. ಮಿಡತೆಗಳು ಬಂದು ಭೂಮಿಯನ್ನು ಮುಚ್ಚಿಕೊಳ್ಳುವವು; ನೆಲವೇ ಕಾಣಿಸದೆ ಹೋಗುವುದು. ಆಲಿಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವುದನ್ನು ಮಿಡತೆಗಳು ತಿಂದುಬಿಡುತ್ತವೆ; ಹೊಲದಲ್ಲಿರುವ ಎಲ್ಲಾ ಮರಗಳ ಎಲೆಗಳನ್ನು ತಿಂದುಬಿಡುತ್ತವೆ.
|
6. ಅವು ನಿನ್ನ ಮನೆಗಳಲ್ಲಿಯೂ ನಿನ್ನ ಅಧಿಕಾರಿಗಳ ಮನೆಗಳಲ್ಲಿಯೂ ಈಜಿಪ್ಟಿನ ಎಲ್ಲಾ ಮನೆಗಳಲ್ಲಿಯೂ ತುಂಬಿರುತ್ತವೆ. ನಿನ್ನ ತಂದೆತಾತಂದಿರೂ ನೋಡಿಲ್ಲದಷ್ಟು ಮಿಡತೆಗಳಿರುತ್ತವೆ”‘ ಎಂದು ಹೇಳಿದರು. ಬಳಿಕ ಅವರು ಫರೋಹನ ಬಳಿಯಿಂದ ಹೊರಟುಹೋದರು.
|
7. ಅಧಿಕಾರಿಗಳು ಫರೋಹನಿಗೆ, “ಈ ಜನರಿಂದ ಇನ್ನೆಷ್ಟು ಕಾಲ ನಾವು ಬಳಲಬೇಕು? ಇವರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸಲಿ. ಈಜಿಪ್ಟ್ ನಾಶವಾಗುತ್ತಿದೆ ಎಂಬುದು ನಿನಗಿನ್ನೂ ಮನವರಿಕೆಯಾಗಿಲ್ಲವೇ?” ಅಂದರು.
|
8. ಆದ್ದರಿಂದ ಫರೋಹನು ಮೋಶೆ ಆರೋನರನ್ನು ತನ್ನ ಬಳಿಗೆ ಕರೆಯಿಸಿ, “ಹೋಗಿ ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಿರಿ. ಆದರೆ ಹೋಗುವವರು ಯಾರೆಂಬುದನ್ನು ನನಗೆ ತಿಳಿಸಿ” ಅಂದನು.
|
9. ಮೋಶೆಯು, “ಯೌವನಸ್ಥರು, ಮುದುಕರು, ಎಲ್ಲರೂ ಹೋಗುತ್ತೇವೆ. ನಮ್ಮ ಗಂಡು ಹೆಣ್ಣುಮಕ್ಕಳನ್ನೂ ನಮ್ಮ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ. ಯಾಕೆಂದರೆ ಇದು ಯೆಹೋವನ ಜಾತ್ರೆ” ಎಂದು ಉತ್ತರಕೊಟ್ಟನು.
|
10. ಫರೋಹನು ಅವರಿಗೆ, “ಯೆಹೋವನಾಣೆ, ನೀವು ನಿಮ್ಮ ಸ್ತ್ರೀಯರನ್ನೂ ಮಕ್ಕಳನ್ನೂ ಕರೆದುಕೊಂಡು ಹೋಗಲು ನಾನು ಅನುಮತಿ ಕೊಡುವುದೇ ಇಲ್ಲ.
|
11. ನೀವು ನನಗೆ ವಿರೋಧವಾಗಿ ಸಂಚುಮಾಡುತ್ತಿರುವುದು ಈಗ ಸ್ಪಷ್ಟವಾಯಿತು” ಎಂದು ಹೇಳಿದನು. ಬಳಿಕ ಫರೋಹನು ಮೋಶೆ ಆರೋನರನ್ನು ಕಳುಹಿಸಿಬಿಟ್ಟನು.
|
12. ಯೆಹೋವನು ಮೋಶೆಗೆ, “ಈಜಿಪ್ಟ್ ದೇಶದ ಮೇಲೆ ನಿನ್ನ ಕೈಯನ್ನೆತ್ತು. ಆಗ ಮಿಡತೆಗಳು ಬರುವವು! ಮಿಡತೆಗಳು ಈಜಿಪ್ಟ್ ದೇಶದಲ್ಲೆಲ್ಲಾ ಹರಡಿಕೊಳ್ಳುವವು. ಆಲಿಕಲ್ಲಿನ ಮಳೆಯಿಂದ ನಾಶವಾಗದೆ ಉಳಿದುಕೊಂಡ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡುವವು” ಎಂದು ಹೇಳಿದನು.
|
13. ಅಂತೆಯೇ ಮೋಶೆ ಈಜಿಪ್ಟ್ ದೇಶದ ಮೇಲೆ ಕೈ ಚಾಚಿದನು. ಆಗ ಯೆಹೋವನು ಪೂರ್ವದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು. ಗಾಳಿಯು ಹಗಲಿರುಳು ಬೀಸಿತು. ಮುಂಜಾನೆಯಾದಾಗ ಆ ಗಾಳಿಯಿಂದ ಈಜಿಪ್ಟ್ ದೇಶಕ್ಕೆ ಮಿಡತೆಗಳು ಬಂದವು.
|
14. ಮಿಡತೆಗಳು ಈಜಿಪ್ಟ್ ದೇಶದೊಳಗೆ ಹಾರಿಬಂದು ನೆಲದ ಮೇಲೆ ಇಳಿದವು. ಈಜಿಪ್ಟಿನಲ್ಲಿ ಹಿಂದೆಂದೂ ಇಷ್ಟು ಮಿಡತೆಗಳು ಇರಲಿಲ್ಲ; ಇನ್ನು ಮುಂದೆಯೂ ಇರುವುದಿಲ್ಲ.
|
15. ಮಿಡತೆಗಳು ನೆಲವನ್ನು ಮುಚ್ಚಿಕೊಂಡವು; ಇದರಿಂದಾಗಿ ನೆಲವು ಕಾಣದಂತಾಯಿತು. ಆಲಿಕಲ್ಲಿನ ಮಳೆಗೆ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ ಮರಗಳಲ್ಲಿದ್ದ ಕಾಯಿಗಳನ್ನೂ ಅವು ತಿಂದುಬಿಟ್ಟವು. ಈಜಿಪ್ಟಿನಲ್ಲೆಲ್ಲಾ ಮರಗಳಲ್ಲಾಗಲಿ ಗಿಡಗಳಲ್ಲಾಗಲಿ ಹಸುರಾಗಿದ್ದ ಒಂದಾದರೂ ಉಳಿಯಲಿಲ್ಲ.
|
16. ಫರೋಹನು ಕೂಡಲೇ ಮೋಶೆ ಆರೋನರನ್ನು ಕರೆಸಿ, “ನಾನು ನಿಮ್ಮ ದೇವರಾದ ಯೆಹೋವನಿಗೂ ನಿಮಗೂ ವಿರುದ್ಧವಾಗಿ ಪಾಪ ಮಾಡಿದ್ದೇನೆ.
|
17. ಇದೊಂದು ಸಲ ನನ್ನ ಪಾಪಗಳನ್ನು ಕ್ಷಮಿಸಿ ಈ ‘ವಿಪತ್ತನ್ನು’ ನನ್ನಿಂದ ತೊಲಗಿಸಬೇಕೆಂದು ಯೆಹೋವನಿಗೆ ಪ್ರಾರ್ಥಿಸಿರಿ” ಎಂದು ಹೇಳಿದನು.
|
19. ಆದ್ದರಿಂದ ಯೆಹೋವನು ಗಾಳಿಯ ದಿಕ್ಕನ್ನು ಬದಲಾಯಿಸಿ, ಪಶ್ಚಿಮದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು; ಅದು ಮಿಡತೆಗಳನ್ನು ಕೆಂಪು ಸಮುದ್ರಕ್ಕೆ ಹಾರಿಸಿತು. ಈಜಿಪ್ಟಿನಲ್ಲಿ ಒಂದು ಮಿಡತೆಯೂ ಉಳಿಯಲಿಲ್ಲ.
|
21. ಬಳಿಕ ಯೆಹೋವನು ಮೋಶೆಗೆ, “ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು. ಆಗ ಕಾರ್ಗತ್ತಲೆಯು ಈಜಿಪ್ಟನ್ನು ಆವರಿಸುವುದು. ಆ ಕಾರ್ಗತ್ತಲೆಯಿಂದ ಜನರು ತಡವರಿಸುತ್ತಾ ನಡೆಯುವರು” ಎಂದು ಹೇಳಿದನು.
|
22. ಮೋಶೆ ತನ್ನ ಕೈಯನ್ನು ಆಕಾಶದ ಕಡೆಗೆ ಚಾಚಿದಾಗ ಕಾರ್ಗತ್ತಲು ಈಜಿಪ್ಟನ್ನು ಆವರಿಸಿತು. ಕಾರ್ಗತ್ತಲು ಈಜಿಪ್ಟಿನಲ್ಲಿ ಮೂರು ದಿನಗಳವರೆಗೆ ಇತ್ತು.
|
23. ಈ ಮೂರು ದಿನಗಳಲ್ಲಿ ಯಾರೂ ಒಬ್ಬರನ್ನೊಬ್ಬರು ನೋಡಲಾಗಲಿಲ್ಲ. ಯಾವ ಸ್ಥಳಕ್ಕೂ ಹೋಗಲಿಲ್ಲ. ಆದರೆ ಇಸ್ರೇಲರು ವಾಸಿಸುತ್ತಿದ್ದ ಸ್ಥಳಗಳಲ್ಲಿ ಬೆಳಕಿತ್ತು.
|
24. ಫರೋಹನು ಮತ್ತೆ ಮೋಶೆಯನ್ನು ಕರೆಸಿ, “ಹೋಗಿ, ಯೆಹೋವನನ್ನು ಆರಾಧಿಸಿರಿ! ನೀವು ನಿಮ್ಮ ಮಕ್ಕಳನ್ನು ಕರೆದುಕೊಂಡು ಹೋಗಬಹುದು. ಆದರೆ ನೀವು ನಿಮ್ಮ ಕುರಿಗಳನ್ನು ದನಕರುಗಳನ್ನು ಇಲ್ಲಿಯೇ ಬಿಟ್ಟುಹೋಗಬೇಕು” ಎಂದು ಹೇಳಿದನು.
|
25. ಮೋಶೆಯು, “ನಾವು ನಮ್ಮ ಕುರಿಗಳನ್ನೂ ದನಕರುಗಳನ್ನೂ ಕಾಣಿಕೆಗಳಿಗಾಗಿ ಮತ್ತು ಯಜ್ಞಗಳಿಗಾಗಿ ತೆಗೆದುಕೊಂಡು ಹೋಗಬೇಕು; ಮಾತ್ರವಲ್ಲದೆ
|
26. ನಮ್ಮ ಪ್ರಾಣಿಗಳನ್ನೆಲ್ಲಾ ತೆಗೆದುಕೊಂಡು ಹೋಗುವೆವು. ಒಂದನ್ನಾದರೂ ಬಿಟ್ಟುಹೋಗುವುದಿಲ್ಲ; ಯಾವ ಪಶುಗಳನ್ನು ಅರ್ಪಿಸಬೇಕೆಂಬುದು ಅಲ್ಲಿಗೆ ಹೋದಾಗಲೇ ನಮಗೆ ತಿಳಿಯುವುದು. ಆದ್ದರಿಂದ, ನಾವು ಇವುಗಳನ್ನೆಲ್ಲಾ ನಮ್ಮ ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕು” ಎಂದು ಹೇಳಿದನು.
|
28. ಫರೋಹನು ಮೋಶೆಗೆ, “ಇಲ್ಲಿಂದ ತೊಲಗಿ ಹೋಗು! ನೀನು ನನ್ನ ಸನ್ನಿಧಿಗೆ ಇನ್ನು ಮೇಲೆ ಬರಕೂಡದು. ನೀನು ಮತ್ತೆ ಬಂದರೆ ನಿನಗೆ ಮರಣದಂಡನೆ ವಿಧಿಸುವೆನು” ಎಂದನು.
|