1. {#1ಮೋಶೆಯ ಗೀತೆ } [PS]ಬಳಿಕ ಮೋಶೆ ಮತ್ತು ಇಸ್ರೇಲರು ಯೆಹೋವನಿಗೆ ಈ ಗೀತೆಯನ್ನು ಹಾಡತೊಡಗಿದರು: [PE][PBR] [QS]“ನಾನು ಯೆಹೋವನಿಗೆ ಹಾಡುವೆನು. [QE][QS2]ಆತನು ಮಹಾಕಾರ್ಯಗಳನ್ನು ಮಾಡಿದ್ದಾನೆ. [QE][QS]ಆತನು ಕುದುರೆಯನ್ನೂ ಸವಾರನನ್ನೂ [QE][QS2]ಸಮುದ್ರದೊಳಗೆ ಮುಳುಗಿಸಿದನು. [QE]
2. [QS]ಯೆಹೋವನೇ ನನ್ನ ಬಲ, [QE][QS2]ಆತನು ನನ್ನನ್ನು ರಕ್ಷಿಸುತ್ತಾನೆ. [QE][QS2]ನನ್ನ ಬಲವೂ ಕೀರ್ತನೆಯೂ ಯಾಹುವೇ; ಆತನಿಂದ ನಮಗೆ ರಕ್ಷಣೆ ಉಂಟಾಯಿತು. [QE][QS]ಯೆಹೋವನು ನನ್ನ ದೇವರು. [QE][QS2]ಮತ್ತು ನಾನು ಆತನನ್ನು ಸ್ತುತಿಸುತ್ತೇನೆ. [QE][QS]ಯೆಹೋವನೇ ನಮ್ಮ ಪೂರ್ವಿಕರ ದೇವರು. [QE][QS2]ನಾನು ಆತನನ್ನು ಸನ್ಮಾನಿಸುತ್ತೇನೆ. [QE]
3. [QS]ಯೆಹೋವನೇ ಯುದ್ಧವೀರನು. [QE][QS2]ಆತನ ನಾಮಧೇಯವು ಯೆಹೋವನೇ. [QE]
4. [QS]ಆತನು ಫರೋಹನ ರಥಗಳನ್ನೂ [QE][QS2]ಸೈನಿಕರನ್ನೂ ಸಮುದ್ರದೊಳಗೆ ಕೆಡವಿದನು; [QE][QS]ಫರೋಹನ ಮಹಾವೀರರನ್ನು [QE][QS2]ಕೆಂಪು ಸಮುದ್ರದಲ್ಲಿ ಮುಳುಗಿಸಿಬಿಟ್ಟನು. [QE]
5. [QS]ಸಾಗರವು ಅವರನ್ನು ಮುಚ್ಚಿಕೊಂಡಿತು; [QE][QS2]ಆಳವಾದ ನೀರಿನಲ್ಲಿ ಅವರು ಬಂಡೆಗಳಂತೆ ಮುಳುಗಿದರು. [QE][PBR]
6. [QS]“ನಿನ್ನ ಭುಜಬಲವು ಎಷ್ಟೋ ಶಕ್ತಿಯುಳ್ಳದ್ದಾಗಿದೆ. [QE][QS2]ಯೆಹೋವನೇ, ನಿನ್ನ ಭುಜಬಲವು ವೈರಿಯನ್ನು ನುಚ್ಚುನೂರು ಮಾಡಿತು. [QE]
7. [QS]ನೀನು ಅತ್ಯಧಿಕ ಮಹತ್ವವುಳ್ಳವನಾಗಿ, [QE][QS2]ನನಗೆದುರು ನಿಲ್ಲುವವರನ್ನು ನಾಶಗೊಳಿಸಿದೆ. [QE][QS]ಬೆಂಕಿಯು ಹುಲ್ಲನ್ನು ಸುಡುವಂತೆ [QE][QS2]ನಿನ್ನ ಕೋಪವು ಅವರನ್ನು ನಾಶಮಾಡಿತು. [QE]
8. [QS]ನೀನು ಊದಿದ ಮಹಾಗಾಳಿಯಿಂದ [QE][QS2]ನೀರು ಒತ್ತಟ್ಟಿಗೆ ಸೇರಿತು. [QE][QS]ವೇಗವಾಗಿ ಹರಿಯುವ ನೀರು ಗಟ್ಟಿಯಾದ ಗೋಡೆಯಾಯಿತು. [QE][QS2]ಸಾಗರಗರ್ಭದೊಳಗಿನ ಜಲವು ಗಟ್ಟಿಯಾಯಿತು. [QE][PBR]
9. [QS]“ ‘ನಾವು ಅವರನ್ನು ಬೆನ್ನಟ್ಟಿ ಹಿಡಿಯುವೆವು; [QE][QS2]ನಾವು ಅವರ ಸಂಪತ್ತನ್ನೆಲ್ಲಾ ತೆಗೆದುಕೊಳ್ಳುವೆವು. [QE][QS]ನಾವು ಖಡ್ಗದಿಂದ ಅವರನ್ನು ಸಂಹರಿಸುವೆವು. [QE][QS2]ನಮ್ಮ ಭುಜಬಲದಿಂದ ಅವರ ಸ್ವತ್ತುಗಳನ್ನೆಲ್ಲಾ ವಶಪಡಿಸಿಕೊಳ್ಳುವೆವು’ [QE][QS2]ಎಂದುಕೊಂಡರು ವೈರಿಗಳು. [QE]
10. [QS]ಆದರೆ ನೀನು ಅವರ ಮೇಲೆ ಊದಿದ ಗಾಳಿಯಿಂದ [QE][QS2]ಸಮುದ್ರವು ಅವರನ್ನು ಮುಚ್ಚಿಕೊಂಡಿತು; [QE][QS]ಅವರು ಸೀಸದಂತೆ [QE][QS2]ಅಗಾಧವಾದ ಸಮುದ್ರದಲ್ಲಿ ಮುಳುಗಿದರು. [QE][PBR]
11. [QS]“ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? [QE][QS2]ಪರಿಶುದ್ಧತೆಯಲ್ಲಿ ನೀನೇ ಸರ್ವೋತ್ತಮನು. [QE][QS2]ಭಯಂಕರ ಕಾರ್ಯಗಳನ್ನು ಮಾಡಿ ಪ್ರಖ್ಯಾತಿಹೊಂದಿದವನೂ ನೀನೇ. [QE][QS2]ಅದ್ಭುತಕಾರ್ಯಗಳನ್ನು ಮಾಡುವಾತನೂ ನೀನೇ. [QE]
12. [QS]ನೀನು ನಿನ್ನ ಬಲಗೈಯನ್ನು ಚಾಚಿದಾಗ [QE][QS2]ಭೂಮಿಯು ಶತ್ರುಗಳನ್ನು ನುಂಗಿಬಿಟ್ಟಿತು! [QE]
13. [QS]ನೀನು ಬಿಡುಗಡೆ ಮಾಡಿದ ನಿನ್ನ ಜನರನ್ನು [QE][QS2]ಪ್ರೀತಿಯಿಂದ ನಡೆಸುವೆ. [QE][QS]ನಿನ್ನ ಬಲದಿಂದ ನೀನು ಈ ಜನರನ್ನು [QE][QS2]ನಿನ್ನ ಪವಿತ್ರವಾದ ದೇಶಕ್ಕೆ ನಡಿಸುವೆ. [QE][PBR]
14. [QS]“ಬೇರೆ ಜನಾಂಗಗಳವರು ಇದನ್ನು ಕೇಳಿ ಭಯಭೀತರಾಗುವರು; [QE][QS2]ಫಿಲಿಷ್ಟಿಯರು ಭಯದಿಂದ ತಲ್ಲಣಿಸುವರು. [QE]
15. [QS]ಆಗ ಎದೋಮಿನ ಕುಟುಂಬಗಳು ಭಯಭೀತರಾಗುವರು. [QE][QS2]ಮೋವಾಬಿನ ನಾಯಕರು ಭಯದಿಂದ ನಡುಗುವರು. [QE][QS2]ಕಾನಾನಿನ ಜನರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು. [QE]
16. [QS]ನಿನ್ನ ಭುಜಬಲವನ್ನು ಅವರು ಕಂಡು [QE][QS2]ಭಯಭೀತರಾಗುವರು. [QE][QS]ಯೆಹೋವನ ಜನರು ದಾಟಿ ಹೋಗುವವರೆಗೆ, [QE][QS2]ನೀನು ರೂಪಿಸಿದ ಜನರು ದಾಟಿ ಹೋಗುವವರೆಗೆ, ಅವರು ಬಂಡೆಯಂತೆ ಮೌನವಾಗಿರುವರು. [QE]
17. [QS]ನೀನು ನಿನ್ನ ಜನರನ್ನು [QE][QS2]ನಿನ್ನ ಬೆಟ್ಟದ ಸೀಮೆಗೂ [QE][QS]ನಿನ್ನ ಸಿಂಹಾಸನಕ್ಕಾಗಿ ನೀನು ಸಿದ್ಧಮಾಡಿದ ಸ್ಥಳಕ್ಕೂ ನಡಿಸುವೆ. [QE][QS2]ಯೆಹೋವನೇ, ಒಡೆಯನೇ, ನಿನ್ನ ಕೈಗಳಿಂದ ನಿನ್ನ ಆಲಯವನ್ನು ಕಟ್ಟು. [QE][PBR]
18. [QS]“ಯೆಹೋವನು ಎಂದೆಂದಿಗೂ ಆಳುವನು!” [QE][PBR]
19. [PS]ಫರೋಹನ ಕುದುರೆಗಳು, ಸವಾರರು, ರಥಗಳು ಸಮುದ್ರದೊಳಕ್ಕೆ ಹೋದಾಗ ಸಮುದ್ರದ ನೀರು ಅವರನ್ನು ಆವರಿಸಿಕೊಳ್ಳುವಂತೆ ಯೆಹೋವನು ಮಾಡಿದನು. ಇಸ್ರೇಲರಾದರೊ ಸಮುದ್ರದೊಳಗಿನ ಒಣನೆಲದಲ್ಲಿ ಸಮುದ್ರವನ್ನು ದಾಟಿಹೋದರು. [PE]
20. [PS]ಆರೋನನ ಅಕ್ಕ ಮಿರ್ಯಾಮಳು ಪ್ರವಾದಿನಿಯಾಗಿದ್ದು ದಮ್ಮಡಿಯನ್ನು ಕೈಯಲ್ಲಿ ತೆಗೆದುಕೊಂಡಳು. ಮಿರ್ಯಾಮಳು ಮತ್ತು ಸ್ತ್ರೀಯರು ಹಾಡುವುದಕ್ಕೂ ಕುಣಿಯುವುದಕ್ಕೂ ಪ್ರಾರಂಭಿಸಿದರು.
21. ಮಿರ್ಯಾಮಳು ಅವರ ಹಾಡಿಗೆ ಹೀಗೆ ಪಲ್ಲವಿ ಹಾಡಿದಳು: [PE][PBR] [QS]“ಯೆಹೋವನಿಗೆ ಗಾನಮಾಡಿರಿ; [QE][QS2]ಆತನು ಮಹಾಜಯಶಾಲಿಯಾದನು. [QE][QS]ಕುದುರೆಗಳನ್ನೂ ರಾಹುತರನ್ನೂ [QE][QS2]ಸಮುದ್ರದೊಳಗೆ ಮುಳುಗಿಸಿ ನಾಶಮಾಡಿದನು…” [QE]
22. {#1ಅರಣ್ಯದಲ್ಲಿ ಕಹಿನೀರು ಸಿಹಿಯಾದದ್ದು } [PS]ಮೋಶೆಯು ಇಸ್ರೇಲರನ್ನು ಕೆಂಪುಸಮುದ್ರದಿಂದ ಮುನ್ನಡೆಸಿದನು. ಅವರು ಶೂರಿನ ಅರಣ್ಯದೊಳಗೆ ಹೋದರು. ಅವರು ಅರಣ್ಯದಲ್ಲಿ ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಜನರಿಗೆ ಎಲ್ಲಿಯೂ ನೀರು ಸಿಕ್ಕಲಿಲ್ಲ.
23. ಆ ಬಳಿಕ ಅವರು ಮಾರಾ ಎಂಬ ಸ್ಥಳವನ್ನು ತಲುಪಿದರು. ಅಲ್ಲಿ ನೀರಿತ್ತು. ಆದರೆ ಅವರು ಆ ನೀರನ್ನು ಕುಡಿಯಲಾಗಲಿಲ್ಲ. ಯಾಕೆಂದರೆ ಅದು ಬಹು ಕಹಿಯಾಗಿತ್ತು. (ಆದಕಾರಣವೇ ಆ ಸ್ಥಳಕ್ಕೆ “ಮಾರಾ” ಎಂಬುದಾಗಿ ಹೆಸರು ಕೊಡಲ್ಪಟ್ಟಿತ್ತು.) [PE]
24. [PS]ಅವರು ಮೋಶೆಗೆ ದೂರು ಹೇಳತೊಡಗಿದರು. “ಈಗ, ನಾವೇನು ಕುಡಿಯೋಣ?” ಎಂದು ಅವರು ಕೇಳಿದರು. [PE]
25. [PS]ಮೋಶೆಯು ಯೆಹೋವನಿಗೆ ಪ್ರಾರ್ಥಿಸಲು ಆತನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಮೋಶೆಯು ಆ ಗಿಡವನ್ನು ನೀರಿನಲ್ಲಿ ಹಾಕಿದಾಗ ಕಹಿನೀರು ಸಿಹಿ ನೀರಾಯಿತು. [PE][PS]ಆ ಸ್ಥಳದಲ್ಲಿ ಯೆಹೋವನು ಅವರಿಗಾಗಿ ನಿಯಮವನ್ನು ಮಾಡಿದನು. ಯೆಹೋವನು ಅವರ ನಂಬಿಕೆಯನ್ನು ಸಹ ಪರೀಕ್ಷಿಸಿದನು.
26. ಆತನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಯೋಗ್ಯವಾದವುಗಳನ್ನು ಮಾಡಬೇಕು; ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಬೇಕು. ಆಗ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ಕಾಯಿಲೆಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನಾಗಿದ್ದೇನೆ” ಎಂದು ಹೇಳಿದನು. [PE]
27. [PS]ಬಳಿಕ ಜನರು ಏಲೀಮಿಗೆ ಪ್ರಯಾಣ ಮಾಡಿದರು. ಏಲೀಮಿನಲ್ಲಿ ನೀರಿನ ಹನ್ನೆರಡು ಬುಗ್ಗೆಗಳಿದ್ದವು; ಅಲ್ಲಿ ಎಪ್ಪತ್ತು ಖರ್ಜೂರದ ಮರಗಳಿದ್ದವು. ಆದ್ದರಿಂದ ಅವರು ನೀರಿನ ಹತ್ತಿರ ತಮ್ಮ ಪಾಳೆಯ ಹಾಕಿದರು. [PE]