1. ಬಳಿಕ ಮೋಶೆ ಮತ್ತು ಇಸ್ರೇಲರು ಯೆಹೋವನಿಗೆ ಈ ಗೀತೆಯನ್ನು ಹಾಡತೊಡಗಿದರು: “ನಾನು ಯೆಹೋವನಿಗೆ ಹಾಡುವೆನು. ಆತನು ಮಹಾಕಾರ್ಯಗಳನ್ನು ಮಾಡಿದ್ದಾನೆ. ಆತನು ಕುದುರೆಯನ್ನೂ ಸವಾರನನ್ನೂ ಸಮುದ್ರದೊಳಗೆ ಮುಳುಗಿಸಿದನು.
|
2. ಯೆಹೋವನೇ ನನ್ನ ಬಲ, ಆತನು ನನ್ನನ್ನು ರಕ್ಷಿಸುತ್ತಾನೆ. ನನ್ನ ಬಲವೂ ಕೀರ್ತನೆಯೂ ಯಾಹುವೇ; ಆತನಿಂದ ನಮಗೆ ರಕ್ಷಣೆ ಉಂಟಾಯಿತು. ಯೆಹೋವನು ನನ್ನ ದೇವರು. ಮತ್ತು ನಾನು ಆತನನ್ನು ಸ್ತುತಿಸುತ್ತೇನೆ. ಯೆಹೋವನೇ ನಮ್ಮ ಪೂರ್ವಿಕರ ದೇವರು. ನಾನು ಆತನನ್ನು ಸನ್ಮಾನಿಸುತ್ತೇನೆ.
|
4. ಆತನು ಫರೋಹನ ರಥಗಳನ್ನೂ ಸೈನಿಕರನ್ನೂ ಸಮುದ್ರದೊಳಗೆ ಕೆಡವಿದನು; ಫರೋಹನ ಮಹಾವೀರರನ್ನು ಕೆಂಪು ಸಮುದ್ರದಲ್ಲಿ ಮುಳುಗಿಸಿಬಿಟ್ಟನು.
|
7. ನೀನು ಅತ್ಯಧಿಕ ಮಹತ್ವವುಳ್ಳವನಾಗಿ, ನನಗೆದುರು ನಿಲ್ಲುವವರನ್ನು ನಾಶಗೊಳಿಸಿದೆ. ಬೆಂಕಿಯು ಹುಲ್ಲನ್ನು ಸುಡುವಂತೆ ನಿನ್ನ ಕೋಪವು ಅವರನ್ನು ನಾಶಮಾಡಿತು.
|
8. ನೀನು ಊದಿದ ಮಹಾಗಾಳಿಯಿಂದ ನೀರು ಒತ್ತಟ್ಟಿಗೆ ಸೇರಿತು. ವೇಗವಾಗಿ ಹರಿಯುವ ನೀರು ಗಟ್ಟಿಯಾದ ಗೋಡೆಯಾಯಿತು. ಸಾಗರಗರ್ಭದೊಳಗಿನ ಜಲವು ಗಟ್ಟಿಯಾಯಿತು.
|
9. “ನಾವು ಅವರನ್ನು ಬೆನ್ನಟ್ಟಿ ಹಿಡಿಯುವೆವು; ನಾವು ಅವರ ಸಂಪತ್ತನ್ನೆಲ್ಲಾ ತೆಗೆದುಕೊಳ್ಳುವೆವು. ನಾವು ಖಡ್ಗದಿಂದ ಅವರನ್ನು ಸಂಹರಿಸುವೆವು. ನಮ್ಮ ಭುಜಬಲದಿಂದ ಅವರ ಸ್ವತ್ತುಗಳನ್ನೆಲ್ಲಾ ವಶಪಡಿಸಿಕೊಳ್ಳುವೆವು’ ಎಂದುಕೊಂಡರು ವೈರಿಗಳು.
|
10. ಆದರೆ ನೀನು ಅವರ ಮೇಲೆ ಊದಿದ ಗಾಳಿಯಿಂದ ಸಮುದ್ರವು ಅವರನ್ನು ಮುಚ್ಚಿಕೊಂಡಿತು; ಅವರು ಸೀಸದಂತೆ ಅಗಾಧವಾದ ಸಮುದ್ರದಲ್ಲಿ ಮುಳುಗಿದರು.
|
11. “ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ಪರಿಶುದ್ಧತೆಯಲ್ಲಿ ನೀನೇ ಸರ್ವೋತ್ತಮನು. ಭಯಂಕರ ಕಾರ್ಯಗಳನ್ನು ಮಾಡಿ ಪ್ರಖ್ಯಾತಿಹೊಂದಿದವನೂ ನೀನೇ. ಅದ್ಭುತಕಾರ್ಯಗಳನ್ನು ಮಾಡುವಾತನೂ ನೀನೇ.
|
13. ನೀನು ಬಿಡುಗಡೆ ಮಾಡಿದ ನಿನ್ನ ಜನರನ್ನು ಪ್ರೀತಿಯಿಂದ ನಡೆಸುವೆ. ನಿನ್ನ ಬಲದಿಂದ ನೀನು ಈ ಜನರನ್ನು ನಿನ್ನ ಪವಿತ್ರವಾದ ದೇಶಕ್ಕೆ ನಡಿಸುವೆ.
|
15. ಆಗ ಎದೋಮಿನ ಕುಟುಂಬಗಳು ಭಯಭೀತರಾಗುವರು. ಮೋವಾಬಿನ ನಾಯಕರು ಭಯದಿಂದ ನಡುಗುವರು. ಕಾನಾನಿನ ಜನರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು.
|
16. ನಿನ್ನ ಭುಜಬಲವನ್ನು ಅವರು ಕಂಡು ಭಯಭೀತರಾಗುವರು. ಯೆಹೋವನ ಜನರು ದಾಟಿ ಹೋಗುವವರೆಗೆ, ನೀನು ರೂಪಿಸಿದ ಜನರು ದಾಟಿ ಹೋಗುವವರೆಗೆ, ಅವರು ಬಂಡೆಯಂತೆ ಮೌನವಾಗಿರುವರು. ಮೋಶೆಯ ಗೀತೆ
|
17. ನೀನು ನಿನ್ನ ಜನರನ್ನು ನಿನ್ನ ಬೆಟ್ಟದ ಸೀಮೆಗೂ ನಿನ್ನ ಸಿಂಹಾಸನಕ್ಕಾಗಿ ನೀನು ಸಿದ್ಧಮಾಡಿದ ಸ್ಥಳಕ್ಕೂ ನಡಿಸುವೆ. ಯೆಹೋವನೇ, ಒಡೆಯನೇ, ನಿನ್ನ ಕೈಗಳಿಂದ ನಿನ್ನ ಆಲಯವನ್ನು ಕಟ್ಟು.
|
19. ಫರೋಹನ ಕುದುರೆಗಳು, ಸವಾರರು, ರಥಗಳು ಸಮುದ್ರದೊಳಕ್ಕೆ ಹೋದಾಗ ಸಮುದ್ರದ ನೀರು ಅವರನ್ನು ಆವರಿಸಿಕೊಳ್ಳುವಂತೆ ಯೆಹೋವನು ಮಾಡಿದನು. ಇಸ್ರೇಲರಾದರೊ ಸಮುದ್ರದೊಳಗಿನ ಒಣನೆಲದಲ್ಲಿ ಸಮುದ್ರವನ್ನು ದಾಟಿಹೋದರು.
|
20. ಆರೋನನ ಅಕ್ಕ ಮಿರ್ಯಾಮಳು ಪ್ರವಾದಿನಿಯಾಗಿದ್ದು ದಮ್ಮಡಿಯನ್ನು ಕೈಯಲ್ಲಿ ತೆಗೆದುಕೊಂಡಳು. ಮಿರ್ಯಾಮಳು ಮತ್ತು ಸ್ತ್ರೀಯರು ಹಾಡುವುದಕ್ಕೂ ಕುಣಿಯುವುದಕ್ಕೂ ಪ್ರಾರಂಭಿಸಿದರು.
|
21. ಮಿರ್ಯಾಮಳು ಅವರ ಹಾಡಿಗೆ ಹೀಗೆ ಪಲ್ಲವಿ ಹಾಡಿದಳು: “ಯೆಹೋವನಿಗೆ ಗಾನಮಾಡಿರಿ; ಆತನು ಮಹಾಜಯಶಾಲಿಯಾದನು. ಕುದುರೆಗಳನ್ನೂ ರಾಹುತರನ್ನೂ ಸಮುದ್ರದೊಳಗೆ ಮುಳುಗಿಸಿ ನಾಶಮಾಡಿದನು...”
|
22. ಮೋಶೆಯು ಇಸ್ರೇಲರನ್ನು ಕೆಂಪುಸಮುದ್ರದಿಂದ ಮುನ್ನಡೆಸಿದನು. ಅವರು ಶೂರಿನ ಅರಣ್ಯದೊಳಗೆ ಹೋದರು. ಅವರು ಅರಣ್ಯದಲ್ಲಿ ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಜನರಿಗೆ ಎಲ್ಲಿಯೂ ನೀರು ಸಿಕ್ಕಲಿಲ್ಲ.
|
23. ಆ ಬಳಿಕ ಅವರು ಮಾರಾ ಎಂಬ ಸ್ಥಳವನ್ನು ತಲುಪಿದರು. ಅಲ್ಲಿ ನೀರಿತ್ತು. ಆದರೆ ಅವರು ಆ ನೀರನ್ನು ಕುಡಿಯಲಾಗಲಿಲ್ಲ. ಯಾಕೆಂದರೆ ಅದು ಬಹು ಕಹಿಯಾಗಿತ್ತು. (ಆದಕಾರಣವೇ ಆ ಸ್ಥಳಕ್ಕೆ ‘ಮಾರಾ’ ಎಂಬುದಾಗಿ ಹೆಸರು ಕೊಡಲ್ಪಟ್ಟಿತ್ತು.)
|
25. ಮೋಶೆಯು ಯೆಹೋವನಿಗೆ ಪ್ರಾರ್ಥಿಸಲು ಆತನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಮೋಶೆಯು ಆ ಗಿಡವನ್ನು ನೀರಿನಲ್ಲಿ ಹಾಕಿದಾಗ ಕಹಿನೀರು ಸಿಹಿ ನೀರಾಯಿತು. ಆ ಸ್ಥಳದಲ್ಲಿ ಯೆಹೋವನು ಅವರಿಗಾಗಿ ನಿಯಮವನ್ನು ಮಾಡಿದನು. ಯೆಹೋವನು ಅವರ ನಂಬಿಕೆಯನ್ನು ಸಹ ಪರೀಕ್ಷಿಸಿದನು.
|
26. ಆತನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಯೋಗ್ಯವಾದವುಗಳನ್ನು ಮಾಡಬೇಕು; ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಬೇಕು. ಆಗ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ಕಾಯಿಲೆಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನಾಗಿದ್ದೇನೆ” ಎಂದು ಹೇಳಿದನು.
|
27. ಬಳಿಕ ಜನರು ಏಲೀಮಿಗೆ ಪ್ರಯಾಣ ಮಾಡಿದರು. ಏಲೀಮಿನಲ್ಲಿ ನೀರಿನ ಹನ್ನೆರಡು ಬುಗ್ಗೆಗಳಿದ್ದವು; ಅಲ್ಲಿ ಎಪ್ಪತ್ತು ಖರ್ಜೂರದ ಮರಗಳಿದ್ದವು. ಆದ್ದರಿಂದ ಅವರು ನೀರಿನ ಹತ್ತಿರ ತಮ್ಮ ಪಾಳೆಯ ಹಾಕಿದರು.
|