4. “ನೀವು ಯಾವ ವಿಗ್ರಹಗಳನ್ನೂ ಮಾಡಬಾರದು. ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ನೀರಿನಲ್ಲಾಗಲಿ ಇರುವ ಯಾವುದೇ ವಸ್ತುವಿನ ರೂಪವನ್ನು ನೀವು ಮಾಡಿಕೊಳ್ಳಬಾರದು. ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜಿಸಲೂ ಬಾರದು.
|
5. ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.
|
7. “ನಿಮ್ಮ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.
|
10. ಆದರೆ ಏಳನೆ ದಿನವು ನಿಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಲು ಮೀಸಲಾಗಿರುವ ವಿಶ್ರಾಂತಿ ದಿನವಾಗಿದೆ. ಅಂದು ನೀವು ಯಾವ ಕೆಲಸವನ್ನೂ ಮಾಡಬಾರದು. ನೀವಾಗಲಿ ನಿಮ್ಮ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಸೇವಕರಾಗಲಿ ಸೇವಕಿಯರಾಗಲಿ ನಿಮ್ಮ ಪಶುಗಳಾಗಲಿ ನಿಮ್ಮಲ್ಲಿರುವ ವಿದೇಶಿಯರಾಗಲಿ ಕೆಲಸ ಮಾಡಬಾರದು.
|
11. ಯಾಕೆಂದರೆ ಯೆಹೋವನು ಆರು ದಿನಗಳಲ್ಲಿ ಕೆಲಸ ಮಾಡಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಿಸಿ ಏಳನೆಯ ದಿನದಲ್ಲಿ ವಿಶ್ರಮಿಸಿದನು. ಆದ್ದರಿಂದ ಯೆಹೋವನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ತನ್ನ ದಿನವನ್ನಾಗಿ ಮಾಡಿದನು.
|
12. “ನೀವು ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು; ನೀವು ಸನ್ಮಾನಿಸಿದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.
|
17. “ನೀವು ನೆರೆಯವನ ಮನೆಯನ್ನು ಆಶೀಸಬಾರದು. ನೀವು ಮತ್ತೊಬ್ಬನ ಹೆಂಡತಿಯನ್ನಾಗಲಿ ಸೇವಕರನ್ನಾಗಲಿ ದಾಸಿಯರನ್ನಾಗಲಿ ಪಶುಗಳನ್ನಾಗಲಿ ಆಶಿಸಬಾರದು.
|
18. ಆಗ ಅಲ್ಲಿದ್ದ ಜನರು ಗುಡುಗಿನ ಧ್ವನಿಯನ್ನು ಕೇಳಿದರು; ಬೆಟ್ಟದ ಮೇಲೆ ಮಿಂಚುಗಳನ್ನು ನೋಡಿದರು; ಹೊಗೆಯು ಬೆಟ್ಟದಿಂದ ಏರುವುದನ್ನು ಕಂಡರು. ಅವರೆಲ್ಲರೂ ಭಯದಿಂದ ನಡುಗಿದರು; ಬೆಟ್ಟದಿಂದ ದೂರದಲ್ಲಿದ್ದುಕೊಂಡು ಅವುಗಳನ್ನೆಲ್ಲಾ ಗಮನಿಸಿದರು.
|
19. ಆಗ ಜನರು ಮೋಶೆಗೆ, “ನೀನು ನಮ್ಮೊಡನೆ ಮಾತಾಡು; ನಾವು ನಿನಗೆ ಕಿವಿಗೊಡುವೆವು. ಆದರೆ ಯೆಹೋವನು ನಮ್ಮೊಡನೆ ಮಾತಾಡದಿರಲಿ. ಇಲ್ಲವಾದರೆ ನಾವು ಸಾಯುವೆವು” ಅಂದರು.
|
20. ಆಗ ಮೋಶೆಯು ಜನರಿಗೆ, “ಭಯಪಡಬೇಡಿರಿ, ಯೆಹೋವನು ನಿಮ್ಮನ್ನು ಪರೀಕ್ಷಿಸಲು ಬಂದಿದ್ದಾನೆ. ನೀವು ಆತನಲ್ಲಿ ಭಕ್ತಿಯುಳ್ಳವರಾಗಿರಬೇಕೆಂದು ಆತನು ಬಯಸುತ್ತಾನೆ. ಆಗ ನೀವು ಪಾಪ ಮಾಡುವುದಿಲ್ಲ” ಎಂದು ಹೇಳಿದನು.
|
22. ಆಗ ಯೆಹೋವನು ಈ ಸಂಗತಿಗಳನ್ನು ಇಸ್ರೇಲರಿಗೆ ತಿಳಿಸಲು ಮೋಶೆಗೆ ಆಜ್ಞಾಪಿಸಿದನು: “ನಾನು ಪರಲೋಕದಿಂದ ನಿಮ್ಮ ಸಂಗಡ ಮಾತಾಡಿದ್ದನ್ನು ನೀವು ನೋಡಿದ್ದೀರಿ.
|
23. ಆದ್ದರಿಂದ ನನ್ನೊಡನೆ ಸ್ಪರ್ಧಿಸಲು, ನೀವು ಬೆಳ್ಳಿಬಂಗಾರಗಳಿಂದ ಮೂರ್ತಿಗಳನ್ನು ಮಾಡಿಕೊಳ್ಳಬಾರದು. ಈ ಸುಳ್ಳು ದೇವರುಗಳನ್ನು ನೀವು ಮಾಡಿಕೊಳ್ಳಲೇಬಾರದು.”
|
24. “ಒಂದು ವಿಶೇಷ ಯಜ್ಞವೇದಿಕೆಯನ್ನು ನನಗೋಸ್ಕರ ಮಣ್ಣಿನಿಂದ ಕಟ್ಟಿರಿ. ಈ ಯಜ್ಞವೇದಿಕೆಯ ಮೇಲೆ ಕುರಿದನಗಳನ್ನು ನನಗೆ ಸರ್ವಾಂಗ ಹೋಮಗಳನ್ನಾಗಿಯೂ ಸಮಾಧಾನ ಯಜ್ಞಗಳನ್ನಾಗಿಯೂ ಸಮರ್ಪಿಸಿರಿ. ನಾನು ನಿಮಗೆ ಹೇಳುವ ಪ್ರತಿಯೊಂದು ಸ್ಥಳದಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಳ್ಳಲು ಹೀಗೆಯೇ ಮಾಡಿರಿ. ಆಗ ನಾನು ಬಂದು ನಿಮ್ಮನ್ನು ಆಶೀರ್ವದಿಸುವೆನು.
|
25. ನೀವು ಯಜ್ಞವೇದಿಕೆಯನ್ನು ಕಲ್ಲುಗಳಿಂದ ಕಟ್ಟಬೇಕೆಂದಿದ್ದರೆ, ಉಳಿಯಿಂದ ಕೆತ್ತಿದ ಕಲ್ಲುಗಳನ್ನು ಉಪಯೋಗಿಸಬೇಡಿರಿ. ಅಂಥ ಕಲ್ಲುಗಳನ್ನು ಉಪಯೋಗಿಸಿದರೆ, ಯಜ್ಞವೇದಿಕೆಯು ಅಪವಿತ್ರವಾಗುವುದು.
|
26. ಅಲ್ಲದೆ ಯಜ್ಞವೇದಿಕೆಯನ್ನು ಹತ್ತುವುದಕ್ಕೆ ಮೆಟ್ಟಲುಗಳನ್ನು ಮಾಡಬಾರದು. ಮೆಟ್ಟಲುಗಳಿದ್ದರೆ ಜನರು ತಲೆ ಎತ್ತಿ ಯಜ್ಞವೇದಿಕೆಯನ್ನು ನೋಡುವಾಗ ನಿಮ್ಮ ರಹಸ್ಯಾಂಗವು ಕಾಣಿಸೀತು.”
|