2. “ನೀವು ಇಬ್ರಿಯ ಗುಲಾಮನನ್ನು ಕೊಂಡುಕೊಂಡರೆ, ಆ ಗುಲಾಮನು ಆರು ವರುಷಗಳವರೆಗೆ ಮಾತ್ರ ನಿಮ್ಮ ಸೇವೆಮಾಡುವನು. ಆರು ವರುಷಗಳ ನಂತರ, ಅವನು ಬಿಡುಗಡೆಯಾಗುವನು, ಅವನು ಏನೂ ಕೊಡಬೇಕಾಗಿರುವುದಿಲ್ಲ.
|
3. ಅವನು ನಿಮ್ಮ ಗುಲಾಮನಾಗುವಾಗ ಮದುವೆಯಾಗಿಲ್ಲದಿದ್ದರೆ, ಅವನು ಬಿಡುಗಡೆ ಹೊಂದುವಾಗಲೂ ಹೆಂಡತಿಯಿಲ್ಲದವನಾಗಿ ಹೋಗುವನು. ಆದರೆ ಅವನು ನಿಮ್ಮ ಗುಲಾಮನಾಗುವಾಗ ಮದುವೆಯಾಗಿದ್ದರೆ ಅವನು ಬಿಡುಗಡೆ ಹೊಂದುವಾಗ ತನ್ನ ಹೆಂಡತಿಯನ್ನು ಕರೆದುಕೊಂಡು ಹೋಗುವನು.
|
4. ಗುಲಾಮನು ಮದುವೆಯಾಗಿಲ್ಲದಿದ್ದರೆ, ಅವನ ಯಜಮಾನನು ಅವನಿಗೆ ಮದುವೆ ಮಾಡಿಸಬಹುದು. ಆ ಸ್ತ್ರೀಯು ಮಕ್ಕಳನ್ನು ಹೆತ್ತರೆ, ಆಕೆಯೂ ಆಕೆಯ ಮಕ್ಕಳೂ ಯಜಮಾನನ ಸ್ವತ್ತಾಗುವರು. ಗುಲಾಮನು ತನ್ನ ಸೇವಾ ವರ್ಷಗಳನ್ನು ಮುಗಿಸಿದ ತರುವಾಯ ಬಿಡುಗಡೆ ಹೊಂದುವನು.
|
5. “ಆದರೆ ಒಂದುವೇಳೆ ಆ ಗುಲಾಮನು ತನ್ನ ಯಜಮಾನನ ಸಂಗಡವಿರಲು ದೃಢವಾಗಿ ಬಯಸಿದರೆ ಅವನು, ‘ನಾನು ನನ್ನ ಯಜಮಾನನನ್ನು ಪ್ರೀತಿಸುತ್ತೇನೆ. ನಾನು ನನ್ನ ಹೆಂಡತಿಯನ್ನೂ ಮಕ್ಕಳನ್ನೂ ಪ್ರೀತಿಸುತ್ತೇನೆ. ನಾನು ಬಿಡುಗಡೆ ಹೊಂದರೆ ಇಲ್ಲೇ ಇರುವೆನು’ ಎಂದು ಹೇಳಬೇಕು.
|
6. ಹೀಗಾದರೆ ಯಜಮಾನನು ಆ ಗುಲಾಮನನ್ನು ದೇವರ ಸನ್ನಿಧಿಗೆ ಕರೆದುಕೊಂಡು ಬರುವನು. ಯಜಮಾನನು ಗುಲಾಮನನ್ನು ಬಾಗಿಲ ಬಳಿಗೆ ಅಥವಾ ಬಾಗಿಲಿನ ಮರದ ನಿಲುವುಪಟ್ಟಿಗಳ ಬಳಿಗೆ ಕರೆದುಕೊಂಡು ಬರುವನು. ಯಜಮಾನನು ಗುಲಾಮನ ಕಿವಿಗೆ ಚೂಪಾದ ಸಲಾಕೆಯಿಂದ ತೂತುಮಾಡುವನು. ಆಗ ಗುಲಾಮನು ತನ್ನ ಜೀವಮಾನಪರ್ಯಂತ ಆ ಯಜಮಾನನಿಗೆ ಸೇವೆ ಮಾಡುವನು.
|
7. “ಒಬ್ಬನು ತನ್ನ ಮಗಳನ್ನು ಗುಲಾಮಳನ್ನಾಗಿ ಮಾರಲು ತೀರ್ಮಾನಿಸಿದರೆ, ಆಕೆಯನ್ನು ಬಿಡುಗಡೆಗೊಳಿಸುವ ನಿಯಮಗಳು ಗುಲಾಮರಾದ ಪುರುಷರನ್ನು ಬಿಡಗಡೆಗೊಳಿಸುವ ನಿಯಮಗಳ ಪ್ರಕಾರ ಇರುವುದಿಲ್ಲ.
|
8. ಯಜಮಾನನು ತನಗಾಗಿ ಆರಿಸಿಕೊಂಡ ಗುಲಾಮಳನ್ನು ಇಷ್ಟಪಡದಿದ್ದರೆ, ಅವಳನ್ನು ಬಿಡುಗಡೆ ಮಾಡಬಹುದು. (ಅವಳ ತಂದೆಗೆ ಅವಳನ್ನು ಮಾರಬಹುದು.) ಅವಳನ್ನು ವಿದೇಶಿಯರಿಗೆ ಮಾರುವ ಹಕ್ಕನ್ನು ಯಜಮಾನನು ಕಳೆದುಕೊಳ್ಳುತ್ತಾನೆ; ಯಾಕೆಂದರೆ ಆಕೆಯಲ್ಲಿ ಅವನಿಗಿದ್ದ ನಂಬಿಕೆಯು ಮುರಿದುಹೋಯಿತು.
|
9. ಯಜಮಾನನು ಗುಲಾಮಳನ್ನು ತನ್ನ ಸ್ವಂತ ಮಗನಿಗೆ ಮದುವೆ ಮಾಡಿಸುವುದಾಗಿ ವಾಗ್ದಾನ ಮಾಡಿದರೆ, ಅವಳನ್ನು ಗುಲಾಮಳನ್ನಾಗಿ ನೋಡಿಕೊಳ್ಳದೆ ಸೊಸೆಯಾಗಿ ನೋಡಿಕೊಳ್ಳಬೇಕು.
|
10. “ಯಜಮಾನನು ಇನ್ನೊಬ್ಬ ಸ್ತ್ರೀಯನ್ನು ಮದುವೆಯಾದರೆ, ಅವನು ತನ್ನ ಮೊದಲನೆಯ ಹೆಂಡತಿಗೆ ಅವನು ಕೊಡುವ ಆಹಾರ ಅಥವಾ ಬಟ್ಟೆಬರೆಗಳಲ್ಲಿ ಏನೂ ಕಡಿಮೆ ಮಾಡಬಾರದು; ಮದುವೆಯ ಮೂಲಕ ಆಕೆಯು ಯಾವ್ಯಾವ ವಸ್ತುಗಳನ್ನು ಹೊಂದಲು ಹಕ್ಕು ಪಡೆದಿರುತ್ತಾಳೊ ಅವೆಲ್ಲವನ್ನು ಅವನು ಆಕೆಗೆ ಕೊಡಬೇಕು.
|
11. ಅವನು ಆಕೆಗಾಗಿ ಈ ಮೂರು ಸಂಗತಿಗಳನ್ನು ಮಾಡಬೇಕು. ಇಲ್ಲವಾದರೆ ಅವಳು ಬಿಡುಗಡೆಯಾಗಿದ್ದಾಳೆ. ಅವಳು ಅವನಿಗೆ ಯಾವ ಸಾಲವನ್ನೂ ತೀರಿಸಬೇಕಾಗಿಲ್ಲ.
|
13. ಆದರೆ ಕೊಲ್ಲಬೇಕೆಂಬ ಉದ್ದೇಶವಿಲ್ಲದೆ ಹೊಡೆದಾಗ ಸತ್ತುಹೋದರೆ ಅದು ದೇವರ ಸಂಕಲ್ಪವೆಂದು ಪರಿಗಣಿಸಬೇಕು. ನಾನು ನೇಮಿಸಲಿರುವ ಆಶ್ರಯಸ್ಥಳಗಳಿಗೆ ಹೊಡೆದವನು ಓಡಿಹೋಗಿ ಸುರಕ್ಷಿತವಾಗಿ ಬದುಕಲಿ.
|
14. ಆದರೆ ಒಬ್ಬನು ಕೋಪದಿಂದಾಗಲಿ ದ್ವೇಷದಿಂದಾಗಲಿ ಇನ್ನೊಬ್ಬನನ್ನು ಕೊಂದರೆ, ಆ ಕೊಲೆಗಾರನಿಗೆ ದಂಡನೆಯಾಗಬೇಕು. ನನ್ನ ಯಜ್ಞವೇದಿಕೆಯಿಂದ ಅವನನ್ನು ದೂರಕ್ಕೆ ತೆಗೆದುಕೊಂಡು ಹೋಗಿ ಕೊಲ್ಲಬೇಕು.
|
16. “ಯಾವನಾದರೂ ಮತ್ತೊಬ್ಬನನ್ನು ಕದ್ದು ಗುಲಾಮನನ್ನಾಗಿ ಮಾರಿದರೆ ಅಥವಾ ತನ್ನ ಗುಲಾಮನನ್ನಾಗಿ ಮಾಡಿಕೊಂಡರೆ ಅವನಿಗೆ ಮರಣಶಿಕ್ಷೆಯಾಗಬೇಕು.
|
18. “ಇಬ್ಬರು ಜಗಳವಾಡುತ್ತಿರುವಾಗ ಒಬ್ಬನನ್ನು ಕಲ್ಲಿನಿಂದಾಗಲಿ ಮುಷ್ಟಿಯಿಂದಾಗಲಿ ಹೊಡೆದಾಗ, ಪೆಟ್ಟಾದ ಮನುಷ್ಯನು ಸಾಯದಿದ್ದರೆ, ಹೊಡೆದವನನ್ನು ಕೊಲ್ಲಬಾರದು.
|
19. ಗಾಯಗೊಂಡವನು ಕೆಲವು ಕಾಲದವರೆಗೆ ಹಾಸಿಗೆಯಲ್ಲಿರಬೇಕಾದರೆ, ಬಳಿಕ ಅವನು ಎದ್ದು ಊರುಗೋಲಿನ ಸಹಾಯದಿಂದ ನಡೆಯಬಲ್ಲವನಾದರೆ, ಹೊಡೆದವನು ಅವನನ್ನು ಆರೈಕೆ ಮಾಡಬೇಕು. ಗಾಯಗೊಂಡವನು ಕೆಲಸಮಾಡಲಾರದೆ ಹೋದ ಸಮಯಕ್ಕೆ ಹೊಡೆದವನು ಹಣ ಕೊಡಬೇಕು; ಅವನು ಸಂಪೂರ್ಣ ವಾಸಿಯಾಗುವವರೆಗೆ ಆರೈಕೆ ಮಾಡಬೇಕು.
|
20. “ಕೆಲವು ಸಲ ಯಜಮಾನರು ಗುಲಾಮನನ್ನಾಗಲಿ ಗುಲಾಮಳನ್ನಾಗಲಿ ಹೊಡೆಯುತ್ತಾರೆ. ಹೊಡೆದಾಗ ಆ ವ್ಯಕ್ತಿಯು ಸತ್ತರೆ, ಯಜಮಾನನಿಗೆ ಶಿಕ್ಷೆಯಾಗಬೇಕು.
|
21. ಆದರೆ ಆ ವ್ಯಕ್ತಿಯು ಸಾಯದೆ ಕೆಲವು ದಿನಗಳ ನಂತರ ಗುಣವಾದರೆ ಯಜಮಾನನಿಗೆ ಶಿಕ್ಷೆಯಾಗಬಾರದು. ಯಾಕೆಂದರೆ ಯಜಮಾನನು ಹಣವನ್ನು ಕೊಟ್ಟು ಆ ವ್ಯಕ್ತಿಯನ್ನು ಕೊಂಡುಕೊಂಡಿದ್ದಾನೆ ಮತ್ತು ಆ ವ್ಯಕ್ತಿಯು ಅವನ ಸ್ವತ್ತಾಗಿದ್ದಾನೆ.
|
22. “ಇಬ್ಬರು ಜಗಳವಾಡುವಾಗ ಗರ್ಭಿಣೆ ಸ್ತ್ರೀಗೆ ಪೆಟ್ಟಾಗಿ ಗರ್ಭಸ್ರಾವವಾದರೆ ಅದಕ್ಕೆ ಕಾರಣನಾದ ವ್ಯಕ್ತಿಯು ಅವಳಿಗೆ ದಂಡ ಕೊಡಬೇಕು. ಅವನು ಎಷ್ಟು ದಂಡ ಕೊಡಬೇಕೆಂಬುದನ್ನು ಅವಳ ಗಂಡನು ನ್ಯಾಯಾಧಿಪತಿಗಳ ಸಹಾಯದಿಂದ ತೀರ್ಮಾನಿಸುವನು.
|
23. ಆದರೆ ಆ ಸ್ತ್ರೀಯು ತೀರಿಕೊಂಡರೆ ಅದಕ್ಕೆ ಕಾರಣನಾದವನಿಗೆ ಮರಣದಂಡನೆಯಾಗಬೇಕು. ನೀವು ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು ಕೊಡಿಸಬೇಕು.
|
26. “ಯಜಮಾನನು ಗುಲಾಮನಿಗೆ ಹೊಡೆದಾಗ ಗುಲಾಮನು ಕುರುಡನಾದರೆ, ಆ ಗುಲಾಮನು ಬಿಡುಗಡೆ ಹೊಂದಿದ್ದಾನೆ. ಅವನು ತನ್ನ ಬಿಡುಗಡೆಗೆ ತನ್ನ ಕಣ್ಣನ್ನೇ ಪ್ರತಿಯಾಗಿ ಕೊಟ್ಟಿದ್ದಾನೆ. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿಯೂ ಇದೇ ನಿಯಮ ಅನ್ವಯಿಸುತ್ತದೆ.
|
27. ಯಜಮಾನನು ಗುಲಾಮನ ಬಾಯಿಗೆ ಹೊಡೆದದ್ದರಿಂದ, ಗುಲಾಮನು ತನ್ನ ಹಲ್ಲನ್ನು ಕಳೆದುಕೊಂಡರೆ, ಆ ಗುಲಾಮನ ಹಲ್ಲು ಅವನ ಬಿಡುಗಡೆಗೆ ಕೊಟ್ಟ ಹಣವಾಗಿದೆ. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿ ಇದೇ ನಿಯಮವು ಅನ್ವಯಿಸುತ್ತದೆ.
|
28. “ಒಬ್ಬನ ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದರೆ, ಆಗ ನೀವು ಕಲ್ಲುಗಳಿಂದ ಆ ಎತ್ತನ್ನು ಕೊಲ್ಲಬೇಕು. ನೀವು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಮಾಲಿಕನು ತಪ್ಪಿಸಸ್ಥನಲ್ಲ.
|
29. ಆದರೆ ಹಿಂದೊಮ್ಮೆ ಆ ಎತ್ತು ಜನರಿಗೆ ತಿವಿದಿದ್ದು, ಅದರ ಮಾಲಿಕನಿಗೆ ಇದರ ವಿಷಯದಲ್ಲಿ ಎಚ್ಚರಿಕೆ ನೀಡಿದ್ದರೆ ಆಗ ಆ ಮಾಲಿಕನು ತಪ್ಪಿತಸ್ಥನಾಗಿದ್ದಾನೆ. ಯಾಕೆಂದರೆ ಅವನು ಆ ಎತ್ತನ್ನು ಕಟ್ಟಿಹಾಕಲಿಲ್ಲ ಅಥವಾ ಅದರ ಸ್ಥಳದಲ್ಲಿ ಬಂಧಿಸಿರಲಿಲ್ಲ. ಆದ್ದರಿಂದ ಎತ್ತನ್ನು ಕಟ್ಟಿಹಾಕದೆ ಇದ್ದುದರಿಂದ, ಅದು ಯಾರನ್ನಾದರೂ ಕೊಂದರೆ, ಆಗ ಆ ಮಾಲಿಕನು ತಪ್ಪಿತಸ್ಥನಾಗಿದ್ದಾನೆ. ನೀವು ಎತ್ತನ್ನು ಕಲ್ಲೆಸೆದು ಕೊಲ್ಲಬೇಕಲ್ಲದೆ ಅದರ ಮಾಲಿಕನನ್ನೂ ಕೊಲ್ಲಬೇಕು.
|
30. ಆದರೆ ಸತ್ತವನ ಕುಟುಂಬದವರು ಅವನಿಂದ ಹಣವನ್ನು ಕೇಳಿದರೆ ಮತ್ತು ಅವನು ಹಣವನ್ನು ಕೊಟ್ಟರೆ, ಅವನು ತನ್ನ ಜೀವವನ್ನು ಬಿಡಿಸಿಕೊಂಡಂತಾಗುವುದು. ಆಗ ಆ ಎತ್ತಿನ ಮಾಲಿಕನನ್ನು ಕೊಲ್ಲಬಾರದು. ಆದರೆ ನ್ಯಾಯಾಧಿಪತಿಗಳು ತೀರ್ಮಾನಿಸುವಷ್ಟು ಹಣವನ್ನು ಅವನು ಕೊಡಬೇಕು.
|
32. ಆದರೆ ಎತ್ತು ಗುಲಾಮನನ್ನು ಕೊಂದರೆ, ಆಗ ಆ ಪಶುವಿನ ಮಾಲಿಕನು ಗುಲಾಮನ ಯಜಮಾನನಿಗೆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಕೊಡಬೇಕು ಮತ್ತು ಎತ್ತನ್ನು ಕಲ್ಲುಗಳಿಂದ ಹೊಡೆದು ಕೊಲ್ಲಬೇಕು. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿ ಇದೇ ನಿಯಮವನ್ನು ಪಾಲಿಸಬೇಕು.
|
33. ಒಬ್ಬ ಮನುಷ್ಯನು ಕುಣಿಯೊಂದನ್ನು ತೋಡಿ ಅದನ್ನು ಮುಚ್ಚಿಲ್ಲದಿದ್ದರೆ ಮತ್ತು ಆ ಕುಣಿಯಲ್ಲಿ ಬೇರೊಬ್ಬನ ಪಶುವು ಬಿದ್ದು ಸತ್ತುಹೋದರೆ,
|
34. ಕುಣಿಯನ್ನು ತೋಡಿದವನು ಆ ಪಶುವಿಗೆ ಪ್ರತಿಯಾಗಿ ಈಡುಕೊಡಬೇಕು. ಅವನು ಈಡುಕೊಟ್ಟ ನಂತರ ಆ ಸತ್ತ ಪಶುವು ಅವನದಾಗುತ್ತದೆ.
|
35. “ಒಬ್ಬನ ಎತ್ತು ಇನ್ನೊಬ್ಬನ ಎತ್ತನ್ನು ಹಾದು ಕೊಂದರೆ ಆಗ ಜೀವಂತವಾಗಿರುವ ಎತ್ತನ್ನು ಮಾರಬೇಕು. ಆ ಎತ್ತನ್ನು ಮಾರಿದ್ದರಿಂದ ಬಂದ ಹಣವನ್ನು ಸಮವಾಗಿ ಹಂಚಿಕೊಳ್ಳಬೇಕು. ಕೊಲ್ಲಲ್ಪಟ್ಟ ಎತ್ತನ್ನು ಸಮವಾಗಿ ಹಂಚಿಕೊಳ್ಳಬೇಕು.
|
36. ಆದರೆ ಒಬ್ಬನ ಎತ್ತು ಮೊದಲೊಮ್ಮೆ ಇತರ ಪಶುಗಳಿಗೆ ಗಾಯಮಾಡಿದ್ದರೆ, ಅದರ ಮಾಲಿಕನು ಅದನ್ನು ಕಟ್ಟಿಹಾಕದೆ ಇದ್ದುದರ ನಿಮಿತ್ತ ತಪ್ಪಿತಸ್ಥನಾಗಿದ್ದಾನೆ. ಅವನು ಸತ್ತ ಎತ್ತಿಗೆ ಪ್ರತಿಯಾಗಿ ಸ್ವಂತ ಎತ್ತನ್ನು ಕೊಡಬೇಕು. ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬೇಕು.
|