2. “ಇಸ್ರೇಲರು ನನಗೆ ಕಾಣಿಕೆಗಳನ್ನು ತರಬೇಕೆಂದು ಅವರಿಗೆ ಹೇಳು. ಪ್ರತಿಯೊಬ್ಬನು ನನಗೆ ಕೊಡುವುದರ ಬಗ್ಗೆ ತನ್ನ ಹೃದಯದಲ್ಲಿ ತೀರ್ಮಾನಿಸಿಕೊಳ್ಳಬೇಕು. ಈ ಕಾಣಿಕೆಗಳನ್ನು ನನಗಾಗಿ ಸ್ವೀಕರಿಸು.
|
8. ಇದಲ್ಲದೆ ದೇವರು ಮೋಶೆಗೆ, “ಜನರು ನನಗೋಸ್ಕರವಾಗಿ ಒಂದು ಪವಿತ್ರ ಗುಡಾರವನ್ನು ಕಟ್ಟಬೇಕು. ಆಗ ನಾನು ಅವರ ನಡುವೆ ಅದರಲ್ಲಿ ವಾಸಿಸುವೆನು.
|
9. ಪವಿತ್ರ ಗುಡಾರ ಮತ್ತು ಅದರಲ್ಲಿರುವ ಪ್ರತಿಯೊಂದು ವಸ್ತುವೂ ಹೇಗಿರಬೇಕೆಂದು ನಾನು ನಿನಗೆ ತೋರಿಸುವೆನು. ನಾನು ನಿನಗೆ ತೋರಿಸುವ ಮಾದರಿಯ ಪ್ರಕಾರವೇ ಪ್ರತಿಯೊಂದನ್ನು ಮಾಡು.
|
10. “ಜಾಲೀಮರದಿಂದ ಒಂದು ವಿಶೇಷ ಪೆಟ್ಟಿಗೆಯನ್ನು ಮಾಡಿಸು. ಈ ಪವಿತ್ರ ಪೆಟ್ಟಿಗೆಯು ಎರಡೂವರೆ ಮೊಳ ಉದ್ದ, ಒಂದೂವರೆ ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇರಬೇಕು.
|
11. ಅದರ ಹೊರಮೈಯನ್ನು ಮತ್ತು ಒಳಮೈಯನ್ನು ಅಪ್ಪಟ ಬಂಗಾರದಿಂದ ಹೊದಿಸಬೇಕು. ಪೆಟ್ಟಿಗೆಯ ಅಂಚುಗಳ ಸುತ್ತಲೂ ಚಿನ್ನದ ಗೋಟು ಕಟ್ಟಿಸಬೇಕು.
|
12. ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಅನುಕೂಲವಾಗುವಂತೆ ನಾಲ್ಕು ಚಿನ್ನದ ಬಳೆಗಳನ್ನು ಎರಕಹೊಯ್ಯಬೇಕು. ನಾಲ್ಕು ಮೂಲೆಗಳಲ್ಲಿ ಅಂದರೆ ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇಡಬೇಕು.
|
13. ಬಳಿಕ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಅನುಕೂಲವಾಗುವಂತೆ ಕಂಬಗಳನ್ನು ಮಾಡಬೇಕು. ಈ ಕಂಬಗಳನ್ನು ಜಾಲೀಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು.
|
17. ಇದಲ್ಲದೆ ದೇವರು ಮೋಶೆಗೆ, “ಅಪ್ಪಟ ಬಂಗಾರದಿಂದ ಕೃಪಾಸನವನ್ನು ಮಾಡಿಸಬೇಕು. ಅದು ಎರಡೂವರೆ ಮೊಳ ಉದ್ದವಾಗಿರಬೇಕು. ಒಂದೂವರೆ ಮೊಳ ಅಗಲವಾಗಿರಬೇಕು.
|
20. ಅವುಗಳ ರೆಕ್ಕೆಗಳು ಆಕಾಶದ ಕಡೆಗೆ ಚಾಚಿರಬೇಕು; ಪೆಟ್ಟಿಗೆಯನ್ನು ಮುಚ್ಚಿಕೊಂಡಿರಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿರಬೇಕು.
|
22. ನಾನು ನಿನಗೆ ದರ್ಶನ ಕೊಡುವಾಗ ಒಡಂಬಡಿಕೆ ಪೆಟ್ಟಿಗೆಯ ಮೇಲಿರುವ ಕೆರೂಬಿಗಳ ಮಧ್ಯದಿಂದ ನಿನ್ನ ಸಂಗಡ ಮಾತಾಡುವೆನು; ಇಸ್ರೇಲರಿಗೆ ಆಜ್ಞಾಪಿಸಬೇಕಾದವುಗಳನ್ನು ನಿನಗೆ ತಿಳಿಸುವೆನು. ಮೇಜು
|
23. “ನೀನು ಜಾಲೀಮರದಿಂದ ಮೇಜನ್ನು ಮಾಡಬೇಕು. ಮೇಜು ಎರಡು ಮೊಳ ಉದ್ದ, ಒಂದು ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇರಬೇಕು.
|
27. ಆ ಬಳೆಗಳು ಅಡ್ಡಪಟ್ಟಿಗೆ ಜೋಡಿಸಿಕೊಂಡಿರಬೇಕು. ಮೇಜನ್ನು ಹೊತ್ತುಕೊಂಡು ಹೋಗುವುದಕ್ಕೆ ಉಪಯೋಗಿಸುವ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು.
|
29. ತಟ್ಟೆಗಳನ್ನು, ಚಮಚಗಳನ್ನು, ಹೂಜಿಗಳನ್ನು ಮತ್ತು ಬೋಗುಣಿಗಳನ್ನು ಶುದ್ಧಬಂಗಾರದಿಂದ ಮಾಡಬೇಕು. ಹೂಜಿಗಳನ್ನು ಮತ್ತು ಬೋಗುಣಿಗಳನ್ನು ಪಾನದ್ರವ್ಯಗಳನ್ನು ಅರ್ಪಿಸಲು ಉಪಯೋಗಿಸಬೇಕು.
|
31. “ಬಳಿಕ ಒಂದು ದೀಪಸ್ತಂಭವನ್ನು ಶುದ್ಧಬಂಗಾರದಿಂದ ಮಾಡಿಸಬೇಕು. ಅದರ ಬುಡವನ್ನೂ ಕಂಬವನ್ನೂ ಕಸೂತಿ ಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭವೆಲ್ಲಾ ಅಖಂಡವಾಗಿದ್ದು ಪುಷ್ಪಪಾತ್ರೆಗಳಂತೆಯೂ ಅಲಂಕಾರವಾಗಿ ಕೆತ್ತಲ್ಪಡಬೇಕು.
|
33. ಪ್ರತಿಯೊಂದು ಕೊಂಬೆಯಲ್ಲಿ ಬಾದಾಮಿ ಹೂವುಗಳಂತಿರುವ ಮೂರುಮೂರು ಪುಷ್ಪಾಲಂಕಾರಗಳಿರಬೇಕು. ಒಂದೊಂದು ಅಲಂಕಾರಕ್ಕೆ ಒಂದು ಪುಷ್ಪಪಾತ್ರೆಯೂ ಒಂದು ಪುಷ್ಪವೂ ಇರಬೇಕು. ಆರು ಕೊಂಬೆಗಳನ್ನೂ ಹಾಗೇ ಮಾಡಿಸಬೇಕು.
|
36. ಪುಷ್ಪಪಾತ್ರೆಗಳನ್ನೂ ಕೊಂಬೆಗಳನ್ನೂ ಒಳಗೊಂಡಿರುವ ದೀಪಸ್ತಂಭವು ಅಖಂಡವಾಗಿದ್ದು ಅಪ್ಪಟ ಬಂಗಾರದಿಂದಲೂ ನಕಾಸಿ ಕೆಲಸದಿಂದಲೂ ಮಾಡಿದ್ದಾಗಿರಬೇಕು.
|