ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ವಿಮೋಚನಕಾಂಡ
1. {ಯಜ್ಞವೇದಿಕೆ} [PS] ಯೆಹೋವನು ಮೋಶೆಗೆ, “ಜಾಲೀಮರದಿಂದ ಯಜ್ಞವೇದಿಕೆಯನ್ನು ಮಾಡಿಸಬೇಕು. ಈ ಯಜ್ಞವೇದಿಕೆಯು ಚೌಕವಾಗಿರಬೇಕು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಮತ್ತು ಮೂರು ಮೊಳ ಎತ್ತರ ಇರಬೇಕು.
2. ಈ ಯಜ್ಞವೇದಿಕೆಯ ನಾಲ್ಕು ಮೂಲೆಗಳಿಗೆ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಪ್ರತಿಯೊಂದು ಕೊಂಬೂ ಯಜ್ಞವೇದಿಕೆಗೆ ಜೋಡಿಸಲ್ಪಟ್ಟಿರಬೇಕು. ಹೀಗೆ ಅವು ಯಜ್ಞವೇದಿಕೆಯ ಅವಿಭಾಜ್ಯ ಭಾಗವಾಗಿರಬೇಕು. ಬಳಿಕ ಯಜ್ಞವೇದಿಕೆಯನ್ನು ತಾಮ್ರದ ತಗಡಿನಿಂದ ಹೊದಿಸಬೇಕು. [PE][PS]
3. “ಯಜ್ಞವೇದಿಕೆಯ ಉಪಕರಣಗಳನ್ನೆಲ್ಲಾ ತಾಮ್ರದಿಂದ ಮಾಡಿಸಬೇಕು. ಬಟ್ಟಲುಗಳನ್ನು, ಸಲಿಕೆಗಳನ್ನು, ಬೋಗುಣಿಗಳನ್ನು, ಮುಳ್ಳುಗಳನ್ನು ಮತ್ತು ಅಗ್ಗಿಷ್ಟಿಕೆಗಳನ್ನು ಮಾಡಿಸಬೇಕು. ಇವುಗಳನ್ನು ಯಜ್ಞವೇದಿಕೆಯಿಂದ ಬೂದಿಯನ್ನು ತೆಗೆದು ಶುಚಿಗೊಳಿಸುವುದಕ್ಕೆ ಉಪಯೋಗಿಸಬೇಕು.
4. ಯಜ್ಞವೇದಿಕೆಗೆ ಹೆಣಿಗೇ ಕೆಲಸದಿಂದ ತಾಮ್ರದ ಜಾಳಿಗೆ ಮಾಡಿಸಬೇಕು. ಈ ಜಾಳಿಗೆಯ ನಾಲ್ಕುಮೂಲೆಗಳಲ್ಲಿ ನಾಲ್ಕು ತಾಮ್ರದ ಬಳೆಗಳನ್ನು ಮಾಡಿಸಬೇಕು.
5. ಆ ಜಾಳಿಗೆಯು ಯಜ್ಞವೇದಿಕೆಯ ಸುತ್ತಲಿರುವ ಕಟ್ಟೆಯ ಕೆಳಗೆ ಇದ್ದು ಯಜ್ಞವೇದಿಕೆಯ ಬುಡದಿಂದ ಅರ್ಧದಷ್ಟು ಮೇಲಕ್ಕೆ ಇರಬೇಕು. [PE][PS]
6. “ಯಜ್ಞವೇದಿಕೆಗೆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ತಾಮ್ರದ ತಗಡನ್ನು ಹೊದಿಸಬೇಕು.
7. ಯಜ್ಞವೇದಿಕೆಯ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಕೋಲುಗಳನ್ನು ಸೇರಿಸಬೇಕು. ಈ ಕೋಲುಗಳಿಂದ ಯಜ್ಞವೇದಿಕೆಯನ್ನು ಹೊತ್ತುಕೊಂಡು ಹೋಗಬೇಕು.
8. ಯಜ್ಞವೇದಿಕೆಯ ಪಾರ್ಶ್ವಗಳನ್ನು ಹಲಗೆಗಳಿಂದ ಮಾಡಿಸಬೇಕು. ನಾನು ಬೆಟ್ಟದ ಮೇಲೆ ನಿನಗೆ ತೋರಿಸಿದ ಪ್ರಕಾರವೇ ಯಜ್ಞವೇದಿಕೆಯನ್ನು ಮಾಡಿಸಬೇಕು. [PS]
9. {ಪವಿತ್ರಗುಡಾರದ ಅಂಗಳ} [PS] “ಪವಿತ್ರಗುಡಾರಕ್ಕೆ ಅಂಗಳವನ್ನು ಮಾಡಿಸಬೇಕು. ದಕ್ಷಿಣ ದಿಕ್ಕಿನಲ್ಲಿ ನೂರು ಮೊಳ ಉದ್ದದ ಪರದೆಗಳ ಗೋಡೆಯಿರಬೇಕು. ಈ ಪರದೆಗಳನ್ನು ಉತ್ತಮ ನಾರುಬಟ್ಟೆಯಿಂದ ಮಾಡಿಸಬೇಕು.
10. ಇಪ್ಪತ್ತು ಕಂಬಗಳನ್ನು ಮತ್ತು ಆ ಕಂಬಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳನ್ನು ಮಾಡಿಸಬೇಕು. ಕಂಬಗಳಿಗೆ ಬೆಳ್ಳಿಯ ಕೊಂಡಿಗಳನ್ನು ಮತ್ತು ಪರದೆಯ ಕೋಲುಗಳಿಗೆ ಬೆಳ್ಳಿಯ ಕಂಬಿಗಳನ್ನು ಮಾಡಿಸಬೇಕು.
11. ಉತ್ತರ ದಿಕ್ಕಿನಲ್ಲಿ ಸಹ ನೂರು ಮೊಳ ಉದ್ದದ ಪರದೆಗಳ ಗೋಡೆಯಿರಬೇಕು. ಅದಕ್ಕೆ ಇಪ್ಪತ್ತು ಕಂಬಿಗಳು ಮತ್ತು ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳು ಇರಬೇಕು. ಕಂಬಗಳ ಕೊಂಡಿಗಳನ್ನು ಮತ್ತು ಪರದೆಯ ಕಟ್ಟುಗಳನ್ನು ಬೆಳ್ಳಿಯಿಂದ ಮಾಡಿಸಬೇಕು. [PE][PS]
12. “ಪಶ್ಚಿಮದಿಕ್ಕಿನಲ್ಲಿ ಅಂಗಳದ ಅಗಲಕ್ಕೆ ಐವತ್ತು ಮೊಳ ಉದ್ದದ ಪರದೆಗಳೂ ಹತ್ತು ಕಂಬಗಳೂ ಮತ್ತು ಹತ್ತು ಗದ್ದಿಗೇಕಲ್ಲುಗಳೂ ಇರಬೇಕು.
13. ಅಂಗಳದ ಪೂರ್ವದಿಕ್ಕಿನಲ್ಲಿ ಐವತ್ತು ಮೊಳ ಉದ್ದ ಇರಬೇಕು.
14. ಈ ಪೂರ್ವದಿಕ್ಕಿನಲ್ಲಿ ಅಂಗಳದ ಪ್ರವೇಶದ್ವಾರವಿರುತ್ತದೆ. ಪ್ರವೇಶದ್ವಾರದ ಒಂದು ಕಡೆಯಲ್ಲಿ ಹದಿನೈದು ಮೊಳ ಉದ್ದದ ಪರದೆಗಳು, ಮೂರು ಕಂಬಗಳು ಮತ್ತು ಮೂರು ಗದ್ದಿಗೇಕಲ್ಲುಗಳು ಇರಬೇಕು.
15. ಇನ್ನೊಂದು ಕಡೆಯಲ್ಲಿ ಹದಿನೈದು ಮೊಳ ಉದ್ದದ ಪರದೆಗಳು, ಮೂರು ಕಂಬಗಳು; ಮೂರು ಗದ್ದಿಗೇಕಲ್ಲುಗಳು ಇರಬೇಕು. [PE][PS]
16. “ಅಂಗಳದ ದ್ವಾರವನ್ನು ಮುಚ್ಚುವುದಕ್ಕೆ ಇಪ್ಪತ್ತು ಮೊಳ ಉದ್ದದ ಪರದೆಯನ್ನು ಮಾಡಿಸಬೇಕು. ಪರದೆಯನ್ನು ಉತ್ತಮ ನಾರಿನ ಬಟ್ಟೆಯಿಂದ ಮತ್ತು ನೀಲಿ, ನೇರಳೆ ಮತ್ತು ಕೆಂಪು ದಾರಗಳಿಂದ ಮಾಡಿಸಬೇಕು. ಆ ಪರದೆಯಲ್ಲಿ ಅಲಂಕೃತವಾದ ಚಿತ್ರಗಳನ್ನು ಬುಟೇದಾರೀ ಕೆಲಸದವರಿಂದ ಮಾಡಿಸಬೇಕು. ಆ ಪರದೆಗೆ ನಾಲ್ಕು ಕಂಬಗಳು ಮತ್ತು ನಾಲ್ಕು ಗದ್ದಿಗೇಕಲ್ಲುಗಳು ಇರಬೇಕು.
17. ಅಂಗಳದ ಸುತ್ತಲಿರುವ ಕಂಬಗಳನ್ನೆಲ್ಲ ಬೆಳ್ಳಿಯ ಪರದೆ ಕೋಲುಗಳೊಡನೆ ಜೋಡಿಸಬೇಕು. ಕಂಬಗಳ ಕೊಂಡಿಗಳನ್ನು ಬೆಳ್ಳಿಯಿಂದಲೂ ಕಂಬಗಳ ಗದ್ದಿಗೇಕಲ್ಲುಗಳನ್ನು ತಾಮ್ರದಿಂದಲೂ ಮಾಡಿಸಬೇಕು.
18. ಅಂಗಳವು ನೂರು ಮೊಳ ಉದ್ದ ಮತ್ತು ಐವತ್ತು ಮೊಳ ಅಗಲ ಇರಬೇಕು. ಅಂಗಳದ ಸುತ್ತಲಿರುವ ಪರದೆಗಳ ಗೋಡೆಯು ಐದು ಮೊಳ ಎತ್ತರವಿರಬೇಕು. ಪರದೆಗಳನ್ನು ಉತ್ತಮ ನಾರುಬಟ್ಟೆಯಿಂದ ಮಾಡಿಸಬೇಕು. ಕಂಬಗಳ ಕೆಳಗಿರುವ ಗದ್ದಿಗೇಕಲ್ಲುಗಳನ್ನು ತಾಮ್ರದಿಂದ ಮಾಡಿಸಬೇಕು.
19. ಪವಿತ್ರಗುಡಾರದ ಉಪಕರಣಗಳನ್ನೂ ಗುಡಾರದ ಗೂಟಗಳನ್ನೂ ಗುಡಾರದ ಸುತ್ತಲೂ ಇರುವ ಪರದೆಯ ಗೂಟಗಳನ್ನೂ ತಾಮ್ರದಿಂದ ಮಾಡಿಸಬೇಕು. [PS]
20. {ದೀಪದ ಎಣ್ಣೆ} [PS] “ಉತ್ತಮವಾದ ಆಲಿವ್‌ಎಣ್ಣೆಯನ್ನು ತರಬೇಕೆಂದು ಇಸ್ರೇಲರಿಗೆ ಆಜ್ಞಾಪಿಸು. ಪ್ರತಿ ಸಾಯಂಕಾಲ ಉರಿಸುವ ದೀಪಕ್ಕೆ ಈ ಎಣ್ಣೆಯನ್ನು ಉಪಯೋಗಿಸು.
21. ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು. [PE]

ಟಿಪ್ಪಣಿಗಳು

No Verse Added

ಒಟ್ಟು 40 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 27 / 40
ವಿಮೋಚನಕಾಂಡ 27:31
ಯಜ್ಞವೇದಿಕೆ 1 ಯೆಹೋವನು ಮೋಶೆಗೆ, “ಜಾಲೀಮರದಿಂದ ಯಜ್ಞವೇದಿಕೆಯನ್ನು ಮಾಡಿಸಬೇಕು. ಈ ಯಜ್ಞವೇದಿಕೆಯು ಚೌಕವಾಗಿರಬೇಕು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಮತ್ತು ಮೂರು ಮೊಳ ಎತ್ತರ ಇರಬೇಕು. 2 ಈ ಯಜ್ಞವೇದಿಕೆಯ ನಾಲ್ಕು ಮೂಲೆಗಳಿಗೆ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಪ್ರತಿಯೊಂದು ಕೊಂಬೂ ಯಜ್ಞವೇದಿಕೆಗೆ ಜೋಡಿಸಲ್ಪಟ್ಟಿರಬೇಕು. ಹೀಗೆ ಅವು ಯಜ್ಞವೇದಿಕೆಯ ಅವಿಭಾಜ್ಯ ಭಾಗವಾಗಿರಬೇಕು. ಬಳಿಕ ಯಜ್ಞವೇದಿಕೆಯನ್ನು ತಾಮ್ರದ ತಗಡಿನಿಂದ ಹೊದಿಸಬೇಕು. 3 “ಯಜ್ಞವೇದಿಕೆಯ ಉಪಕರಣಗಳನ್ನೆಲ್ಲಾ ತಾಮ್ರದಿಂದ ಮಾಡಿಸಬೇಕು. ಬಟ್ಟಲುಗಳನ್ನು, ಸಲಿಕೆಗಳನ್ನು, ಬೋಗುಣಿಗಳನ್ನು, ಮುಳ್ಳುಗಳನ್ನು ಮತ್ತು ಅಗ್ಗಿಷ್ಟಿಕೆಗಳನ್ನು ಮಾಡಿಸಬೇಕು. ಇವುಗಳನ್ನು ಯಜ್ಞವೇದಿಕೆಯಿಂದ ಬೂದಿಯನ್ನು ತೆಗೆದು ಶುಚಿಗೊಳಿಸುವುದಕ್ಕೆ ಉಪಯೋಗಿಸಬೇಕು. 4 ಯಜ್ಞವೇದಿಕೆಗೆ ಹೆಣಿಗೇ ಕೆಲಸದಿಂದ ತಾಮ್ರದ ಜಾಳಿಗೆ ಮಾಡಿಸಬೇಕು. ಈ ಜಾಳಿಗೆಯ ನಾಲ್ಕುಮೂಲೆಗಳಲ್ಲಿ ನಾಲ್ಕು ತಾಮ್ರದ ಬಳೆಗಳನ್ನು ಮಾಡಿಸಬೇಕು. 5 ಆ ಜಾಳಿಗೆಯು ಯಜ್ಞವೇದಿಕೆಯ ಸುತ್ತಲಿರುವ ಕಟ್ಟೆಯ ಕೆಳಗೆ ಇದ್ದು ಯಜ್ಞವೇದಿಕೆಯ ಬುಡದಿಂದ ಅರ್ಧದಷ್ಟು ಮೇಲಕ್ಕೆ ಇರಬೇಕು. 6 “ಯಜ್ಞವೇದಿಕೆಗೆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ತಾಮ್ರದ ತಗಡನ್ನು ಹೊದಿಸಬೇಕು. 7 ಯಜ್ಞವೇದಿಕೆಯ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಕೋಲುಗಳನ್ನು ಸೇರಿಸಬೇಕು. ಈ ಕೋಲುಗಳಿಂದ ಯಜ್ಞವೇದಿಕೆಯನ್ನು ಹೊತ್ತುಕೊಂಡು ಹೋಗಬೇಕು. 8 ಯಜ್ಞವೇದಿಕೆಯ ಪಾರ್ಶ್ವಗಳನ್ನು ಹಲಗೆಗಳಿಂದ ಮಾಡಿಸಬೇಕು. ನಾನು ಬೆಟ್ಟದ ಮೇಲೆ ನಿನಗೆ ತೋರಿಸಿದ ಪ್ರಕಾರವೇ ಯಜ್ಞವೇದಿಕೆಯನ್ನು ಮಾಡಿಸಬೇಕು. ಪವಿತ್ರಗುಡಾರದ ಅಂಗಳ 9 “ಪವಿತ್ರಗುಡಾರಕ್ಕೆ ಅಂಗಳವನ್ನು ಮಾಡಿಸಬೇಕು. ದಕ್ಷಿಣ ದಿಕ್ಕಿನಲ್ಲಿ ನೂರು ಮೊಳ ಉದ್ದದ ಪರದೆಗಳ ಗೋಡೆಯಿರಬೇಕು. ಈ ಪರದೆಗಳನ್ನು ಉತ್ತಮ ನಾರುಬಟ್ಟೆಯಿಂದ ಮಾಡಿಸಬೇಕು. 10 ಇಪ್ಪತ್ತು ಕಂಬಗಳನ್ನು ಮತ್ತು ಆ ಕಂಬಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳನ್ನು ಮಾಡಿಸಬೇಕು. ಕಂಬಗಳಿಗೆ ಬೆಳ್ಳಿಯ ಕೊಂಡಿಗಳನ್ನು ಮತ್ತು ಪರದೆಯ ಕೋಲುಗಳಿಗೆ ಬೆಳ್ಳಿಯ ಕಂಬಿಗಳನ್ನು ಮಾಡಿಸಬೇಕು. 11 ಉತ್ತರ ದಿಕ್ಕಿನಲ್ಲಿ ಸಹ ನೂರು ಮೊಳ ಉದ್ದದ ಪರದೆಗಳ ಗೋಡೆಯಿರಬೇಕು. ಅದಕ್ಕೆ ಇಪ್ಪತ್ತು ಕಂಬಿಗಳು ಮತ್ತು ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳು ಇರಬೇಕು. ಕಂಬಗಳ ಕೊಂಡಿಗಳನ್ನು ಮತ್ತು ಪರದೆಯ ಕಟ್ಟುಗಳನ್ನು ಬೆಳ್ಳಿಯಿಂದ ಮಾಡಿಸಬೇಕು. 12 “ಪಶ್ಚಿಮದಿಕ್ಕಿನಲ್ಲಿ ಅಂಗಳದ ಅಗಲಕ್ಕೆ ಐವತ್ತು ಮೊಳ ಉದ್ದದ ಪರದೆಗಳೂ ಹತ್ತು ಕಂಬಗಳೂ ಮತ್ತು ಹತ್ತು ಗದ್ದಿಗೇಕಲ್ಲುಗಳೂ ಇರಬೇಕು. 13 ಅಂಗಳದ ಪೂರ್ವದಿಕ್ಕಿನಲ್ಲಿ ಐವತ್ತು ಮೊಳ ಉದ್ದ ಇರಬೇಕು. 14 ಈ ಪೂರ್ವದಿಕ್ಕಿನಲ್ಲಿ ಅಂಗಳದ ಪ್ರವೇಶದ್ವಾರವಿರುತ್ತದೆ. ಪ್ರವೇಶದ್ವಾರದ ಒಂದು ಕಡೆಯಲ್ಲಿ ಹದಿನೈದು ಮೊಳ ಉದ್ದದ ಪರದೆಗಳು, ಮೂರು ಕಂಬಗಳು ಮತ್ತು ಮೂರು ಗದ್ದಿಗೇಕಲ್ಲುಗಳು ಇರಬೇಕು. 15 ಇನ್ನೊಂದು ಕಡೆಯಲ್ಲಿ ಹದಿನೈದು ಮೊಳ ಉದ್ದದ ಪರದೆಗಳು, ಮೂರು ಕಂಬಗಳು; ಮೂರು ಗದ್ದಿಗೇಕಲ್ಲುಗಳು ಇರಬೇಕು. 16 “ಅಂಗಳದ ದ್ವಾರವನ್ನು ಮುಚ್ಚುವುದಕ್ಕೆ ಇಪ್ಪತ್ತು ಮೊಳ ಉದ್ದದ ಪರದೆಯನ್ನು ಮಾಡಿಸಬೇಕು. ಪರದೆಯನ್ನು ಉತ್ತಮ ನಾರಿನ ಬಟ್ಟೆಯಿಂದ ಮತ್ತು ನೀಲಿ, ನೇರಳೆ ಮತ್ತು ಕೆಂಪು ದಾರಗಳಿಂದ ಮಾಡಿಸಬೇಕು. ಆ ಪರದೆಯಲ್ಲಿ ಅಲಂಕೃತವಾದ ಚಿತ್ರಗಳನ್ನು ಬುಟೇದಾರೀ ಕೆಲಸದವರಿಂದ ಮಾಡಿಸಬೇಕು. ಆ ಪರದೆಗೆ ನಾಲ್ಕು ಕಂಬಗಳು ಮತ್ತು ನಾಲ್ಕು ಗದ್ದಿಗೇಕಲ್ಲುಗಳು ಇರಬೇಕು. 17 ಅಂಗಳದ ಸುತ್ತಲಿರುವ ಕಂಬಗಳನ್ನೆಲ್ಲ ಬೆಳ್ಳಿಯ ಪರದೆ ಕೋಲುಗಳೊಡನೆ ಜೋಡಿಸಬೇಕು. ಕಂಬಗಳ ಕೊಂಡಿಗಳನ್ನು ಬೆಳ್ಳಿಯಿಂದಲೂ ಕಂಬಗಳ ಗದ್ದಿಗೇಕಲ್ಲುಗಳನ್ನು ತಾಮ್ರದಿಂದಲೂ ಮಾಡಿಸಬೇಕು. 18 ಅಂಗಳವು ನೂರು ಮೊಳ ಉದ್ದ ಮತ್ತು ಐವತ್ತು ಮೊಳ ಅಗಲ ಇರಬೇಕು. ಅಂಗಳದ ಸುತ್ತಲಿರುವ ಪರದೆಗಳ ಗೋಡೆಯು ಐದು ಮೊಳ ಎತ್ತರವಿರಬೇಕು. ಪರದೆಗಳನ್ನು ಉತ್ತಮ ನಾರುಬಟ್ಟೆಯಿಂದ ಮಾಡಿಸಬೇಕು. ಕಂಬಗಳ ಕೆಳಗಿರುವ ಗದ್ದಿಗೇಕಲ್ಲುಗಳನ್ನು ತಾಮ್ರದಿಂದ ಮಾಡಿಸಬೇಕು. 19 ಪವಿತ್ರಗುಡಾರದ ಉಪಕರಣಗಳನ್ನೂ ಗುಡಾರದ ಗೂಟಗಳನ್ನೂ ಗುಡಾರದ ಸುತ್ತಲೂ ಇರುವ ಪರದೆಯ ಗೂಟಗಳನ್ನೂ ತಾಮ್ರದಿಂದ ಮಾಡಿಸಬೇಕು. ದೀಪದ ಎಣ್ಣೆ 20 “ಉತ್ತಮವಾದ ಆಲಿವ್‌ಎಣ್ಣೆಯನ್ನು ತರಬೇಕೆಂದು ಇಸ್ರೇಲರಿಗೆ ಆಜ್ಞಾಪಿಸು. ಪ್ರತಿ ಸಾಯಂಕಾಲ ಉರಿಸುವ ದೀಪಕ್ಕೆ ಈ ಎಣ್ಣೆಯನ್ನು ಉಪಯೋಗಿಸು. 21 ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.
ಒಟ್ಟು 40 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 27 / 40
Common Bible Languages
West Indian Languages
×

Alert

×

kannada Letters Keypad References